Author: kannadanewsnow09

ನವದೆಹಲಿ: ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.8 ರಷ್ಟು ಏರಿಕೆಯಾಗಿದ್ದು, ವಾರ್ಷಿಕ ಬೆಳವಣಿಗೆಯ ದರವನ್ನು ಶೇಕಡಾ 8.2 ಕ್ಕೆ ಏರಿಸಿದೆ ಎಂದು ಇಂದು ಬಿಡುಗಡೆಯಾದ ಅಧಿಕೃತ ಅಂಕಿ ಅಂಶಗಳು ತಿಳಿಸಿವೆ. ಜನವರಿ-ಮಾರ್ಚ್ ಅವಧಿಯಲ್ಲಿನ ಬೆಳವಣಿಗೆಯು ಡಿಸೆಂಬರ್ ತ್ರೈಮಾಸಿಕದಲ್ಲಿ ಶೇಕಡಾ 8.6 ರ ವಿಸ್ತರಣೆಗಿಂತ ಕಡಿಮೆಯಾಗಿದೆ. 2022-23ರ ಹಣಕಾಸು ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇಕಡಾ 6.2 ರಷ್ಟು ವಿಸ್ತರಿಸಿದೆ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್ಎಸ್ಒ) ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ. ಆದಾಗ್ಯೂ, ಎಲ್ಲಾ ತ್ರೈಮಾಸಿಕಗಳಲ್ಲಿ ಸ್ಥಿರವಾದ ಬಲವಾದ ಬೆಳವಣಿಗೆ, ನಾಲ್ಕು ತ್ರೈಮಾಸಿಕಗಳಲ್ಲಿ ಮೂರು 8% ಕ್ಕಿಂತ ಹೆಚ್ಚಿನ ಬೆಳವಣಿಗೆಯ ದರವನ್ನು ಸಾಧಿಸುವುದರೊಂದಿಗೆ, 2024 ರ ಹಣಕಾಸು ವರ್ಷದಲ್ಲಿ ಬೆಳವಣಿಗೆಯನ್ನು 7.9% ಕ್ಕೆ ಏರಿಸುವ ನಿರೀಕ್ಷೆಯಿದೆ, ಇದು ಹಿಂದಿನ ವರ್ಷದ 7.0% ರಿಂದ ಹೆಚ್ಚಾಗಿದೆ ಎಂದು 19 ಅರ್ಥಶಾಸ್ತ್ರಜ್ಞರ ಅಂದಾಜಿಸಲಾಗಿದೆ. ಆರ್ಥಿಕತೆಯಲ್ಲಿ ಉತ್ಪಾದಿಸಲಾದ ಸರಕು ಮತ್ತು ಸೇವೆಗಳ ಮೌಲ್ಯವನ್ನು ಅಳೆಯುವ ಒಟ್ಟು ಮೌಲ್ಯವರ್ಧಿತ (ಜಿವಿಎ) 2024…

Read More

ಬೆಂಗಳೂರು: ಇಂದಿನಿಂದ ಶಾಲಾ-ಕಾಲೇಜುಗಳು ಅಧಿಕೃತವಾಗಿ ಆರಂಭಗೊಂಡಿದ್ದಾವೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಒದಗಿಸೋ ಸಂಬಂಧ ಕೆ ಎಸ್ ಆರ್ ಟಿಸಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳುಪ್ರಾರಂಭವಾಗಿರುತ್ತವೆ. ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕಿರುತ್ತದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‌ಗಳನ್ನು ವಿತರಿಸಲಾಗುವುದು ಎಂದಿದೆ. ವಿದ್ಯಾರ್ಥಿ ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಹಂತಗಳನ್ನು ಅನುಸರಿಸಿ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಸೇವಾಸಿಂಧು ಪೋರ್ಟಲ್ ಐಡಿ URL-https://sevasindhuservices.karnataka.gov.in/buspassservices/ ವಿದ್ಯಾರ್ಥಿಗಳು ದಿನಾಂಕ:31.05.2024 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಯಾವುಧೇ…

Read More

ಬೆಂಗಳೂರು: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭವಾನಿ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು. ಈ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಗಜಾನನ ಭಟ್ ಅವರು, ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಹೀಗಾಗಿ ಭವಾನಿ ರೇವಣ್ಣಗೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಾದಂತೆ ಆಗಿದೆ. https://kannadanewsnow.com/kannada/breaking-court-orders-sit-custody-of-mp-prajwal-revanna-2/

Read More

ಬೆಂಗಳೂರು: ಸಂತೇಬೆನ್ನೂರಿನ ಗುತ್ತಿಗೆದಾರ ಪಿಎಸ್ ಗೌಡರ್ ಆತ್ಮಹತ್ಯೆ ಪ್ರಕರಣವನ್ನು ಇಲಾಖಾ ತನಿಖೆಗೆ ವಹಿಸಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ. ಈ ಮೂಲಕ ಪ್ರಕರಣಕ್ಕೆ ಬಿಗ್ ಟ್ಟಿಸ್ಟ್ ಸಿಕ್ಕಂತೆ ಆಗಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೆಆರ್ ಐಡಿಎಲ್ ಕುರಿತ ಈ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ಹಿರಿಯ ಅಧಿಕಾರಿಗಳ ಸಮಿತಿ ರಚಿಸುವಂತೆ ಎಸಿಎಸ್ ಆರ್ ಡಿಪಿಆರ್ ಗೆ ಸೂಚಿಸಿದ್ದೇನೆ ಎಂದಿದ್ದಾರೆ. ಇನ್ನೂ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ ಆತ್ಮಹತ್ಯೆ ಪ್ರಕರಣದ ಸಂಬಂಧ ಕೆಆರ್ ಐಡಿಎಲ್ ಎಂಜಿನಿಯರಿಂಗ್ ನಿಗಮವಾಗಿದ್ದು, ಉಪ ಗುತ್ತಿಗೆಯನ್ನು ಪ್ರೋತ್ಸಾಹಿಸುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. https://twitter.com/PriyankKharge/status/1796457994311680430

Read More

ಬೆಂಗಳೂರು: ನಿನ್ನೆ ಎಸ್ ಐಟಿ ಬಂಧಿಸಿದ್ದಂತ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇಂದು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರ ತೀರ್ಪು 4.15ಕ್ಕೆ ಕಾಯ್ದಿರಿಸಿದೆ. ಈ ನಡುವೆ ತನಿಖೆಗೆ ಸಹಕರಿಸಲು ಪ್ರಜ್ವಲ್ ಸಿದ್ಧರಿದ್ದಾರೆ ಅಂತ ನ್ಯಾಯಾಲಯಕ್ಕೆ ಪ್ರಜ್ವಲ್ ಪರ ವಕೀಲ ಅರುಣ್ ಮಾಹಿತಿ ನೀಡಿದ್ದಾರೆ. ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದಂತ ಪ್ರಕರಣದ ವಿಚಾರಣೆ ನಡೆಸಿತು. ಕೋರ್ಟ್ ಮುಂದೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಹಾಜರುಪಡಿಸಿದರು. ಪ್ರಜ್ವಲ್ನ್ನ ಬಂಧಿಸಿ 24 ಗಂಟೆಯೊಳಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ನಂತ್ರ, ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಮುಂದೆ ಎಸ್ಐಟಿ ಪರ ವಕೀಲರು ವಾದ ಮಂಡಿಸಿದರು. ನ್ಯಾಯಾಧೀಶರ ಮುಂದೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಬಗ್ಗೆ ವಾದ ಮಂಡನೆ ಮಾಡಿದಂತ ಎಸ್ಐಟಿ ಪರ ವಕೀಲರು, ಇವನು ಒಬ್ಬ ವಿಕೃತ ಕಾಮಿ ಎನ್ನಿಸುತ್ತಿದೆ. ಇವರು ತುಂಬಾ ಡೇಂಜರ್ ಇದ್ದಾನೆ. ಸಂತ್ರಸ್ತ ಮಹಿಳೆ ಹೇಳಿಕೆ ಪ್ರಕಾರ ಅತ್ಯಾಚಾರ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ನಾಲ್ವರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಮಾಡಿ ಆದೇಶ ಹೊರಡಿಸಿದೆ. ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ಶಾಲಿನಿ ರಜನೀಶ್, ಐಎಎಸ್ (ಕೆಎನ್: 1989) ಬೆಂಗಳೂರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರನ್ನು 31.05.2024 ರಂದು ಐಎಎಸ್ ರಾಕೇಶ್ ಸಿಂಗ್ ಅವರ ನಿವೃತ್ತಿಯಿಂದ ತೆರವಾದ ಬೆಂಗಳೂರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಸಮವರ್ತಿ ಉಸ್ತುವಾರಿಯಾಗಿ ಇರಿಸಲಾಗಿದೆ ಎಂದಿದೆ. ಉಮಾಶಂಕರ್ ಎಸ್.ಆರ್., ಐಎಎಸ್ (ಕೆ.ಎನ್: 1993) ಬೆಂಗಳೂರು ಗೃಹ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ದಿನಾಂಕ 31.05.2024 ರಂದು ನಿವೃತ್ತರಾದ ನಂತರ ತೆರವಾದ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಸಮವರ್ತಿ ಉಸ್ತುವಾರಿಯನ್ನು ವಹಿಸಲಾಗಿದೆ ಎಂದು ತಿಳಿಸಿದೆ. ಗೌರವ್ ಗುಪ್ತಾ, ಐಎಎಸ್ (ಕೆಎನ್: 1990) ಬೆಂಗಳೂರು ಇಂಧನ ಇಲಾಖೆಯ ಸರ್ಕಾರದ…

Read More

ನವದೆಹಲಿ: 177 ಪ್ರಯಾಣಿಕರು ಮತ್ತು ಒಂದು ಮಗುವನ್ನು ಹೊತ್ತ ದೆಹಲಿಯಿಂದ ಶ್ರೀನಗರಕ್ಕೆ ವಿಸ್ತಾರಾ ವಿಮಾನಕ್ಕೆ ಶುಕ್ರವಾರ ಬಾಂಬ್ ಬೆದರಿಕೆ ಬಂದಿದ್ದು, ವಿಮಾನಯಾನ ಮತ್ತು ಭದ್ರತಾ ಪಡೆಗಳು ತ್ವರಿತ ಕ್ರಮ ಕೈಗೊಂಡಿವೆ. ವಿಮಾನ ಸಂಖ್ಯೆ ಯುಕೆ -611 ಸುಮಾರು 12: 10 ಕ್ಕೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ಅಂತಹ ಬೆದರಿಕೆಗಳಿಗೆ ಪ್ರಮಾಣಿತ ಪ್ರೋಟೋಕಾಲ್ ಅನ್ನು ಅನುಸರಿಸಿ, ವಿಮಾನವನ್ನು ಲ್ಯಾಂಡಿಂಗ್ ಮಾಡಿದ ತಕ್ಷಣ ಪ್ರತ್ಯೇಕ ಬೇಗೆ ನಿರ್ದೇಶಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ. ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ಅತ್ಯಂತ ಆದ್ಯತೆಯಿಂದ ನಿರ್ವಹಿಸಲಾಗುತ್ತಿದೆ. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಪ್ರತ್ಯೇಕ ಬೇಯಲ್ಲಿ ಇಳಿಸಲಾಯಿತು. ಪ್ರಸ್ತುತ, ಸಂಬಂಧಪಟ್ಟ ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿಮಾನವನ್ನು ಸಂಬಂಧಿತ ಅಧಿಕಾರಿಗಳು ಸಂಪೂರ್ಣ ಭದ್ರತಾ ತಪಾಸಣೆಗೆ ಒಳಪಡಿಸುತ್ತಿದ್ದಾರೆ” ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ. ಬಾಂಬ್ ಬೆದರಿಕೆಯ ಮೂಲದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಮತ್ತು ವಿಮಾನ ಪ್ರಯಾಣದ ನಿರಂತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ…

Read More

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ನಿನ್ನೆ ಮಧ್ಯರಾತ್ರಿ ಬಂಧಿಸಿದ್ದರು. ಇಂತಹ ಅವರನ್ನು ಇಂದು ಕೋರ್ಟ್ ಗೆ ಎಸ್ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಎರ್ ಪೋರ್ಟ್ ಗೆ 1.40ರ ಸುಮಾರಿಗೆ ಸಂಸದ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಚ್ ನಿಂದ ಆಗಮಿಸಿದ್ದರು. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ತಡರಾತ್ರಿಯೇ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ವೈದ್ಯಕೀಯ ಪರೀಕ್ಷೆ ಪ್ರಕ್ರಿಯೆ ನಂತ್ರ, ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಈ ಕೇಸ್ ಸಂಬಂಧ ವಿಚಾರಣೆ ನಡೆಸಲಿರುವಂತ ನ್ಯಾಯಾಲಯದ ಮುಂದೆ 15 ದಿನಗಳ ಕಾಲ ವಿಚಾರಣೆ ನಡೆಸೋದಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ತಮ್ಮ ವಶಕ್ಕೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಕೋರಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/dgca-issues-show-cause-notice-to-air-india-after-delhi-san-francisco-flight-delayed-by-20-hours/ https://kannadanewsnow.com/kannada/breaking-court-orders-sit-custody-of-mp-prajwal-revanna-2/

Read More

ನವದೆಹಲಿ: ಇತ್ತೀಚಿನ ವಿಮಾನಗಳಲ್ಲಿ ಗಮನಾರ್ಹ ವಿಳಂಬವಾದ ನಂತರ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಏರ್ ಇಂಡಿಯಾಕ್ಕೆ ಶೋಕಾಸ್ ನೋಟಿಸ್ ನೀಡಿದೆ. ವಿಮಾನಯಾನ ನಿಯಮಗಳ ಉಲ್ಲಂಘನೆಯನ್ನು ನೋಟಿಸ್ ಉಲ್ಲೇಖಿಸಿದೆ. ವಿಶೇಷವಾಗಿ ವಿಳಂಬದ ಸಮಯದಲ್ಲಿ ಪ್ರಯಾಣಿಕರ ಆರೈಕೆಗೆ ಸಂಬಂಧಿಸಿದಂತೆ ಆಗಿದೆ. ಏರ್ ಇಂಡಿಯಾಗೆ ಮೂರು ದಿನಗಳಲ್ಲಿ ಪ್ರತಿಕ್ರಿಯಿಸಲು ನಿರ್ದೇಶಿಸಲಾಗಿದೆ. ಇಲ್ಲದಿದ್ದರೆ ಸಂಭಾವ್ಯ ಜಾರಿ ಕ್ರಮವನ್ನು ಎದುರಿಸಬೇಕಾಗುತ್ತದೆ. ದೆಹಲಿ-ಸ್ಯಾನ್ ಫ್ರಾನ್ಸಿಸ್ಕೋ ವಿಮಾನದಲ್ಲಿ ಕ್ಯಾಬಿನ್ನಲ್ಲಿ ಅಸಮರ್ಪಕ ತಂಪಾಗಿಸುವಿಕೆಯಿಂದಾಗಿ ಏರ್ ಇಂಡಿಯಾ ಪ್ರಯಾಣಿಕರು ಅನಾನುಕೂಲತೆಯನ್ನು ಅನುಭವಿಸಿದ ಕೆಲವೇ ಗಂಟೆಗಳ ನಂತರ ಈ ನೋಟಿಸ್ ಬಂದಿದೆ. ದಿನಾಂಕ 24.05.2024 ರ ವಿಮಾನ ಎಎಲ್ -179 ಮತ್ತು ದಿನಾಂಕ 30.05.2024 ರ ವಿಮಾನ ಎಎಲ್ -183 ಮಿತಿಮೀರಿದ ವಿಳಂಬವಾಗಿದೆ. ಕ್ಯಾಬಿನ್ ನಲ್ಲಿ ಸಾಕಷ್ಟು ತಂಪಾಗಿಸದ ಕಾರಣ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಡಿಜಿಸಿಎ ಗಮನಕ್ಕೆ ಬಂದಿದೆ. ಇದಲ್ಲದೆ, ವಿವಿಧ ಡಿಜಿಸಿಎ ಸಿಎಆರ್ ನಿಬಂಧನೆಗಳನ್ನು ಉಲ್ಲಂಘಿಸಿ ಮೆಸರ್ಸ್ ಏರ್ ಇಂಡಿಯಾದಿಂದ ಪ್ರಯಾಣಿಕರಿಗೆ ಪದೇ ಪದೇ ಅನಾನುಕೂಲತೆ ಉಂಟಾಗುವ ಘಟನೆಗಳು ಗಮನಕ್ಕೆ ಬಂದಿವೆ”…

Read More

ಬೆಂಗಳೂರು: ಕೆಇಎ ಸಿಇಟಿ ಪರೀಕ್ಷೆಯನ್ನು ಏಪ್ರಿಲ್.18 ಮತ್ತು 18, 2024ರಂದು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಕೆಇಎಯಿಂದ ಮುಂದಿನವಾರ ಪ್ರಕಟಿಸುವುದಾಗಿ ಅಧಿಕೃತ ಮಾಹಿತಿ ನೀಡಿದೆ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಏಪ್ರಿಲ್ ನಲ್ಲಿ ನಡೆದಿದ್ದಂತ ಕೆ-ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಮುಂದಿನವಾರ ಪ್ರಕಟಿಸಲಾಗುತ್ತದೆ. ಪರೀಕ್ಷೆ ಬರೆದಿದ್ದಂತ ವಿದ್ಯಾರ್ಥಿಗಳು ಫಲಿತಾಂಶವನ್ನು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ ಎಂದಿದೆ. ಅಂದಹಾಗೇ 2024ರ ಕೆ-ಸಿಇಟಿ ಪರೀಕ್ಷೆಗೆ 3.27 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈಗ ದ್ವಿತೀಯ ಪಿಯುಸಿ ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶದ ನಂತ್ರ, ಕೆಇಎಯಿಂದ ಕೆ-ಸಿಇಟಿ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. https://kannadanewsnow.com/kannada/hc-asks-bjp-mla-harish-poonja-if-he-enters-police-station-even-when-terrorists-are-caught/ https://kannadanewsnow.com/kannada/breaking-court-orders-sit-custody-of-mp-prajwal-revanna-2/

Read More