Author: kannadanewsnow09

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೂ ಮುನ್ನಾ 11 ದಿನ ಉಪವಾಸ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಪ್ರಧಾನಿ ಮೋದಿ ಅಷ್ಟು ದಿನ ಉಪವಾಸ ಮಾಡಿರೋದೇ ಡೌಟ್. ಅಷ್ಟು ದಿನ ಉಪವಾಸ ಮಾಡಿದ್ದೇ ಆದ್ರೇ ಅವರು ಬರುಕಿರೋದು ಆಶ್ಚರ್ಯ ಅಂತ ಮಾಜಿ ಸಿಎಂ ವೀರಪ್ಪ ಮೊಯಿಲಿ ವ್ಯಂಗ್ಯವಾಡಿದ್ದಾರೆ. ಅವರು ಪಾಪ ಉಪವಾಸ ಮಾಡಿದ್ದಾರೆ ಅಂತ ಹೇಳ್ತಾರೆ. ಆದ್ರೇ ಪಾಪ ಇವತ್ತು ನನ್ನ ಜೊತೆಗೆ ಬೆಳಿಗ್ಗೆ ವಾಕಿಂಗ್ ಬರ್ತಾರೆ ಒಬ್ಬರು ಡಾಕ್ಟರ್. ಅವರು ಹೇಳಿದ್ರು ಮನುಷ್ಯ ಬದುಕಲಿಕ್ಕೇ ಸಾಧ್ಯವಿಲ್ಲ. ಆದ್ದರಿಂದ ಮೋದಿ ಉಪವಾಸ ಮಾಡಿರೋದೇ ಡೌಟ್ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಉಪವಾಸ ವ್ರತ ಮಾಡದೇ ಶ್ರೀರಾಮ ಮಂದಿರದ ಗರ್ಭ ಗುಡಿಗೆ ಹೋಗಿದ್ದೇ ಆದ್ರೇ ಅದು ಅಪವಿತ್ರವೇ ಸರಿ. ಆ ಸ್ಥಳ ಅಪವಿತ್ರವೇ ಹೊರತು, ಅದರಲ್ಲಿ ಶಕ್ತಿ ಉತ್ಪಾದನೆ ಆ ಸ್ಥಳದಲ್ಲಿ ಆಗೋದಿಲ್ಲ ಎಂದರು. ಇಲ್ಲಿಯವರೆಗೆ ಅಯೋಧ್ಯೆಯಲ್ಲಿ ರಾಮ ಮಂದಿರ ಸ್ಥಾಪನೆ ಮಾಡ್ತೇವೆ ಅಂತ ಹೇಳಿದ್ರು. ಹಾಗೆ…

Read More

ಮೀನ ರಾಶಿ ಗಾಯಗೊಳ್ಳುವುದನ್ನು ತಪ್ಪಿಸಲು ಕುಳಿತುಕೊಳ್ಳುವಾಗ ವಿಶೇಷ ಕಾಳಜಿ ವಹಿಸಿ. ಅಲ್ಲದೇ ಒಳ್ಳೆಯ ನಿಲುವು ಕೇವಲ ನಿಮ್ಮ ವ್ಯಕ್ತಿತ್ವವನ್ನು ವ್ರುದ್ಧಿಸುವುದಷ್ಟೇ ಅಲ್ಲದೇ ಆರೋಗ್ಯ ಮತ್ತು ವಿಶ್ವಾಸಾರ್ಹತೆಯನ್ನು ಅಭಿವೃದ್ಧಿಪಡಿಸುವಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ.ಇಂದು ನಿಮ್ಮ ಯಾವುದೇ ಚಲಿಸಬಲ್ಲ ಅಸ್ತಿಯನ್ನು ಕದಿಯಬಹುದು ಆದ್ದರಿಂದ ಸಾಧ್ಯವಾದಷ್ಟುಅದರ ಬಗ್ಗೆ ಗಮನ ಹರಿಸಿ. ಅಧ್ಯಯನಗಳನ್ನು ತಪ್ಪಿಸಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ ಯೋಜನೆ ಆಟಗಳಷ್ಟೇ ಮುಖ್ಯ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ,…

Read More

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಇರುವ ಕಾರಣ ಈ ಕೆಳಕಂಡ ಪ್ರದೇಶಗಳಲ್ಲಿ ಜ.25 ರ ಬೆಳಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಪ್ರದೇಶಗಳಲ್ಲಿ ಜ.25ರಂದು ಪವರ್ ಕಟ್ ಪೀಯರ್ ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಲೈ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆ.ಹೆಚ್.ಬಿ ಕಾಲೋನಿ, ಮೇಲಿನ ತುಂಗಾನಗರ ಕೆಳಗಿನ ತುಂಗಾನಗರ, ಪದ್ಮ ಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ, ಮಲ್ಲಿಕಾರ್ಜುನ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಎನ್.ಟಿ ರಸ್ತೆ, ಬಿ.ಹೆಚ್ ರಸ್ತೆ, ಓಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಸುತ್ತಮುತ್ತಲಿನ ಪ್ರದೇಶ, ಜೆ.ಸಿ ನಗರ, ಬುದ್ಧ ನಗರ, ಅಮೀರ್ ಅಹ್ಮದ್ ಸರ್ಕಲ್, ಆರ್.ಎಂ.ಎಲ್…

Read More

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿಯವರು ಜ.22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದಾರೆ. ರಾಮ ಮಂದಿರ ಕೂಡ ಉದ್ಘಾಟನೆ ಮಾಡಲಾಗಿದೆ. ಹಾಗಾದ್ರೇ ಅಯೋಧ್ಯೆಯಲ್ಲಿ ಇತ್ತೀಚೆಗೆ ನಿರ್ಮಿಸಲಾದ ಶ್ರೀರಾಮ ಮಂದಿರದ ಆಸಕ್ತಿದಾಯಕ ವಿವರಗಳನ್ನು ಮುಂದೆ ಓದಿ. ಅಯೋಧ್ಯೆ ರಾಮಮಂದಿರವು ಯಾವುದೇ ತೆರಿಗೆದಾರರ ಹಣ ಒಳಗೊಂಡಿಲ್ಲ. ಇದು ಸುಮಾರು 5000 ಕೋಟಿ ರೂ.ಗಳ ಸಾರ್ವಜನಿಕ ದೇಣಿಗೆಗಳ ಮೂಲಕ ಮತ್ತು ಎಣಿಕೆಯ ಮೂಲಕ ಸಂಪೂರ್ಣವಾಗಿ ಹಣಕಾಸು ಒದಗಿಸುತ್ತದೆ. ರಾಮ ಮಂದಿರ ನಿರ್ಮಾಣದ ಪ್ರಮುಖ ಲಕ್ಷಣಗಳು ಮುಖ್ಯ ವಾಸ್ತುಶಿಲ್ಪಿಗಳು – ಚಂದ್ರಕಾಂತ್ ಸೋಂಪುರ, ನಿಖಿಲ್ ಸೋಂಪುರ ಮತ್ತು ಆಶಿಶ್ ಸೋಂಪುರ. ವಿನ್ಯಾಸ ಸಲಹೆಗಾರರು – ಐಐಟಿ ಗುವಾಹಟಿ, ಐಐಟಿ ಚೆನ್ನೈ, ಐಐಟಿ ಬಾಂಬೆ, ಎನ್ಐಟಿ ಸೂರತ್, ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ ರೂರ್ಕಿ, ನ್ಯಾಷನಲ್ ಜಿಯೋ ರಿಸರ್ಚ್ ಇನ್ಸ್ಟಿಟ್ಯೂಟ್ ಹೈದರಾಬಾದ್ ಮತ್ತು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರಾಕ್ ಮೆಕ್ಯಾನಿಕ್ಸ್. ನಿರ್ಮಾಣ ಕಂಪನಿ – ಲಾರ್ಸೆನ್ ಮತ್ತು ಟೌಬ್ರೊ (ಎಲ್ &ಟಿ) ಯೋಜನೆ. ಮ್ಯಾನೇಜ್ಮೆಂಟ್…

Read More

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ಇದೇ 27ರಂದು ಅರಮನೆ ಮೈದಾನದಲ್ಲಿ (ಗೇಟ್ ನಂಬರ್ 4) ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು. ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ಸಭೆ ಇರಲಿದೆ ಎಂದರು. ಕಲಬುರ್ಗಿ ಜಿಲ್ಲೆಯ ಗ್ರಾಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರರ ಪುತ್ಥಳಿಗೆ ಕಿಡಿಗೇಡಿಗಳು ಅವಮಾನ ಮಾಡಿದ್ದಾರೆ. ಬಿಜೆಪಿ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಹೋಗಿದೆ ಎಂಬುದಕ್ಕೆ ಇದು ಉದಾಹರಣೆ. ಯಾವುದೇ ರೀತಿಯ ರಕ್ಷಣೆ ಕೊಡುವ ಕೆಲಸವನ್ನು ಈ ಸರಕಾರ ಮಾಡಿಲ್ಲ ಎಂದು ಟೀಕಿಸಿದರು. ಅಂಬೇಡ್ಕರರ ಪುತ್ಥಳಿಗೆ ಅವಮಾನ ಮಾಡಿದರೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಅರ್ಚಕರಿಗೆ ತಸ್ತೀಕ್ ಹಣವನ್ನು ಪಾವತಿ ಮಾಡಲಾಗುತ್ತಿದೆ. ಆದ್ರೇ ರಾಜ್ಯ ಸರ್ಕಾರ ನಿಗದಿ ಪಡಿಸಿದ್ದಂತ ತಸ್ತೀಕ್ ಹಣ ಪಾವತಿಸೋದು ಬಿಟ್ಟು, ಹೆಚ್ಚುವರಿಯಾಗಿ ಬರೋಬ್ಬರಿ 4.74 ಲಕ್ಷವನ್ನು ಚಿಕ್ಕಮಗಳೂರಲ್ಲಿ ಪಾವತಿಸಲಾಗಿದೆ. ಹೀಗಾಗಿ ತಹಶೀಲ್ದಾರ್ ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೋಟಿಸ್ ನೀಡಿದ್ದಾರೆ. ಈ ಕುರಿತಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿರುವಂತ ಅವರು, ಚಿಕ್ಕಮಗಳೂರು ಜಿಲ್ಲೆ, ಚಿಕ್ಕಮಗಳೂರು ತಾಲೂಕು, ಹಿರೇಮಗಳೂರು ಕೋದಂಡರಾಮಸ್ವಾಮಿ ದೇವಾಲಯದ ಅರ್ಚಕರಿಗೆ ಹೆಚ್ಚುವರಿಯಾಗಿ ಪಾವತಿಸಿರುವ ತಸ್ತಿಕ್ ಮೊತ್ತವನ್ನು ದೇವಾಲಯದ ಖಾತೆಗೆ ಹಿಂದಿರುಗಿಸುವ ಸಂಬಂಧ ತಹಶೀಲ್ದಾ‌ ಚಿಕ್ಕಮಗಳೂರು ಇವರು ಅರ್ಚಕರಿಗೆ ನೀಡಿರುವ ನೋಟೀಸಿಗೆ ಸಂಬಂಧ ಪಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಲಾಗಿದೆ ಎಂದಿದ್ದಾರೆ. ಇದರಂತೆ ಸದರಿ ದೇವಾಲಯಕ್ಕೆ 2013-14 ರಿಂದ 2016-17ರವರೆಗೆ ವಾರ್ಷಿಕ ರೂ. 24,000/-(ಇಪ್ಪತ್ತಾರು ಸಾವಿರಗಳನ್ನು ಆಸೀಕ್ ಮೊತ್ತವಾಗಿ ಅರ್ಚಕರಿಗೆ ಪಾವತಿಸಬೇಕಿದ್ದು ತಪ್ಪಾಗಿ ವಾರ್ಷಿಕ ಪಾವತಿಸಿದ್ದು ಹೆಚ್ಚುವರಿಯಾಗಿ ವಾರ್ಷಿಕವಾಗಿ ರೂ.55,000/-ಗಳನ್ನು ಪಾವತಿಸಲಾಗಿದ್ದು, ಹಾಗೂ 2017-18ನೇ ಸಾಲಿನ 2021-22ನೇ ಸಾಲಿನವರೆಗೆ ವಾರ್ಷಿಕ ರೂ 48,000/-ಗಳ ತಸ್ತೀಕ್ ಮೊತ್ರ ಅರ್ಚಕರಿಗೆ…

Read More

ಹುಬ್ಬಳ್ಳಿ: ಜಿಲ್ಲೆಯಲ್ಲಿ ಇಂದು ಪೊಲೀಸರ ಮುಂದೆಯೇ ಎರಡು ಕುಟುಂಬಗಳು ಮಾರಾಮಾರಿ ಮಾಡಿಕೊಂಡಿರೋ ಘಟನೆ ಶಿವಶಂಕರ ಕಾಲೋನಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. ಹುಬ್ಬಳ್ಳಿಯ ಶಿವಶಂಕರ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಅಂಚಟಗೇರಿ ಹಾಗೂ ಕೌದಿ ಕುಟುಂಬಸ್ಥರು ಹೊಡೆದಾಡಿಕೊಂಡಿದ್ದಾರೆ. ಇಟ್ಟಿಗೆ, ಕೋಲು ಹಿಡಿದು ನಡು ರಸ್ತೆಯಲ್ಲೇ ಬಡಿದಾಡಿಕೊಂಡಿದ್ದಾರೆ. ಹೊಯ್ಸಳ ಪೊಲೀಸರು ಸ್ಥಳದಲ್ಲೇ ಇದ್ದರೂ ಕೌದಿ ಮತ್ತು ಅಂಚಟಗೇರಿ ಕುಟುಂಬಸ್ಥರು ಗಲಾಟೆ ಮಾಡಿಕೊಂಡು ಬಡಿದಾಡಿಕೊಂಡಿದ್ದಾರೆ. ಈ ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-7-1-magnitude-earthquake-hits-kyrgyzstan-china-border-several-injured-earthquake/ https://kannadanewsnow.com/kannada/breaking-sensex-plunges-over-1300-points-investors-lose-rs-5-9-lakh-crore-loss-of-wealth/

Read More

ಬೆಂಗಳೂರು: ಜನವರಿ.19ರಂದು ನಡೆಯಬೇಕಿದ್ದಂತ ರಾಜ್ಯ ಬಿಜೆಪು ಕಾರ್ಯಕಾರಿಣಿ ಸಭೆಯನ್ನು, ಜನವರಿ.27ಕ್ಕೆ ಮರು ನಿಗದಿ ಮಾಡಲಾಗಿದೆ. ಅಂದು ಕೇಂದ್ರ ಸಚಿವರು ಸೇರಿದಂತೆ ವಿವಿಧ ಬಿಜೆಪಿ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜನವರಿ.19ಕ್ಕೆ ನಿಗದಿಯಾಗಿದ್ದಂತ ಕರ್ನಾಟಕ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ವಿವಿಧ ಕಾರಣಗಳಿಂದ ಮುಂದೂಡಿಕೆ ಮಾಡಲಾಗಿತ್ತು. ಈ ಸಭೆಯನ್ನು ಜನವರಿ.27ಕ್ಕೆ ಮರು ನಿಗದಿ ಮಾಡಲಾಗಿದೆ. ಜನವರಿ.27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಸೇರಿದಂತೆ ವಿವಿಧ ನಾಯಕರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. https://kannadanewsnow.com/kannada/breaking-7-1-magnitude-earthquake-hits-kyrgyzstan-china-border-several-injured-earthquake/ https://kannadanewsnow.com/kannada/breaking-sensex-plunges-over-1300-points-investors-lose-rs-5-9-lakh-crore-loss-of-wealth/

Read More

ಹುಬ್ಬಳ್ಳಿ: ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧಿಗಳಾಗಿ ಬೇರೆಯವರು ಕಣಕ್ಕೆ ಇಳಿಯಲಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ದೊಡ್ಡಗೌಡರ ಕುಟುಂಬದ ಹೊರತಾಗಿ ಮತ್ತೊಬ್ಬರು ನಿಲ್ಲಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ನಾನೇ ಸ್ಪರ್ಧೆ ಮಾಡೋದಾಗಿ ಸಂಸದ ಪ್ರಜ್ಪಲ್ ರೇವಣ್ಣ ಘೋಷಣೆ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧೆ ಮಾಡುತ್ತೇನೆ. ಬೇರೆ ಯಾರೂ ಸ್ಪರ್ಧೆ ಮಾಡೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದರು. ದೊಡ್ಡವರು ಹೇಳಿದ್ದಾರೆ. ಹೀಗಾಗಿ ಹಾಸನ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ನಾನೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಟಿಕೆಟ್ ವಿಚಾರವಾಗಿ ಕುಮಾರಣ್ಣನೇ ಉತ್ತರ ಕೊಡ್ತಾರೆ ಎಂದರು. https://kannadanewsnow.com/kannada/breaking-7-1-magnitude-earthquake-hits-kyrgyzstan-china-border-several-injured-earthquake/ https://kannadanewsnow.com/kannada/breaking-sensex-plunges-over-1300-points-investors-lose-rs-5-9-lakh-crore-loss-of-wealth/

Read More

ಬೆಂಗಳೂರು : “ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಸಿಕ್ಕಿಸಿಕೊಂಡಿದ್ದಾರೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು. ರಾಹುಲ್ ಗಾಂಧಿ ಅವರು ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ…

Read More