Author: kannadanewsnow09

ಬೆಂಗಳೂರು: ವನ್ಯಜೀವಿ ಪದಾರ್ಥಗಳನ್ನು ಇಟ್ಟುಕೊಳ್ಳೋದು ಅಪರಾಧ. ಹೀಗಿದ್ದೂ ಗೊತ್ತಿಲ್ಲದೇ ಮನೆಯಲ್ಲಿ ಇಟ್ಟಿಕೊಂಡಿರೋರು ವಾಪಾಸ್ ಮಾಡೋದಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ. ನೀವು ಮನೆಯಲ್ಲಿ ವನ್ಯಜೀವಿ ಪದಾರ್ಥ ಇಟ್ಟುಕೊಂಡಿದ್ರೇ ಸರ್ಕಾರ ನೀಡಿರುವಂತ ವಿಧಾನದಂತೆ ವಾಪಾಸ್ ನೀಡಿದ್ರೆ ನಿಮ್ಮ ವಿರುದ್ಧ ಕೇಸ್ ಆಗೋದಿಲ್ಲ. ಅದು ಹೇಗೆ ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಅರಣ್ಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಿದೆ ಎಂದು ತಿಳಿಸಿದೆ. ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು ರೂ.100/-ಗಳ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಯಾವುದೇ ಅರಣ್ಯ ಇಲಾಖೆಯ ಕಚೇರಿಗೆ…

Read More

ಬೆಂಗಳೂರು: ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದೆ ಸುಮಲತಾ ಅಂಬರೀಶ್ ಗೆಲುವು ಸಾಧಿಸಿದ್ದರು. ಆದ್ರೇ ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸೋ ಸುಳಿವನ್ನು ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಈಗಾಗಲೇ ಸಂಸದೆ ಸುಮಲತಾ ಅಂಬರೀಶ್ ಜೊತೆಗೆ ಬಿಜೆಪಿ ರಾಜ್ಯ, ರಾಷ್ಟ್ರೀಯ ನಾಯಕರು ಚರ್ಚಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ವರಿಷ್ಠರ ಮಾತಿಗೆ ಸುಮಲತಾ ಒಪ್ಪಿಗೆ ಕೂಡ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಬಿಜೆಪಿಯಿಂದ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಘೋಷಣೆಯಾಗಲಿದೆ ಎಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಈ ನಡುವೆ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಸಂಸದೆ ಸುಮಲತಾ ಅಂಬರೀಶ್ ಅವರು, ಈವರೆಗೆ ಎಲ್ಲಿಯೂ ನನ್ನ ಬಗ್ಗೆ ಕಳಂಕವಾಗಲೀ, ಕಪ್ಪು ಚುಕ್ಕೆಯಾಗಲೀ ಇಲ್ಲ. ಪಾರ್ಲಿಮೆಂಟ್ ನಲ್ಲಿ ಮಾತನಾಡಿರುವುದು ಎಲ್ಲಿರೂ ಗೊತ್ತಿದೆ. ಮಂಡ್ಯ ಸೀಟು ಬಿಜೆಪಿನೇ ಉಳಿಸಿಕೊಳ್ಳುತ್ತಿದೆ ಅನ್ನಿಸುತ್ತೆ ಎಂದು ಹೇಳುವ ಮೂಲಕ, ಬಿಜೆಪಿಯಿಂದ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಇದೇ…

Read More

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಪ್ರಕರಣಗಳನ್ನು ತಡೆಯೋದಕ್ಕೆ ಪೊಲೀಸ್ ಇಲಾಖೆ ಈಗ ಮಹತ್ವದ ಕ್ರಮ ವಹಿಸಿದೆ. ಅದಕ್ಕಾಗಿ ರಾಜ್ಯದ ಎಲ್ಲಾ ಪೊಲೀಸರಿಗೂ ತರಬೇತಿಯನ್ನು ನೀಡಲಾಗುತ್ತಿದೆ. ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಸಭೆ ಬಳಿಕ ಮಾತನಾಡಿದಂತ ಡಿಜಿಐಜಿಪಿ ಅಲೋಕ್ ಮೋಹನ್ ಅವರು, ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ರಿವ್ಯೂ ಮಾಡ್ತಾ ಇದ್ದಿನಿ. ಸೈಬರ್ ಕ್ರೈಮ್, ಬೀಟ್ ಸಿಸ್ಟಮ್, ಕೆಲ ಪ್ರಕರಣಗಳ ತನಿಖೆ ಮಾಹಿತಿ ಪಡೆಯಲಾಗಿದೆ ಎಂದರು. ಸೈಬರ್ ಕ್ರೈಮ್ ಪ್ರಕರಣಗಳ ಬಗ್ಗೆ ಹೆಚ್ಚು ಮಾಹಿತಿ ಪಡೆದಿದ್ದೇನೆ. ಸೈಬರ್ ಕ್ರೈಮ್ ತನಿಖಾ ವಿಧಾನ ಬಗ್ಗೆ ಎಲ್ಲಾರಿಗೂ ತರಬೇರಿ ನೀಡಬೇಕು‌. ಜಿಲ್ಲೆಗಳಲ್ಲಿ, ಮತ್ತು ಸಿಐಡಿ ಕಚೇರಿಯಲ್ಲಿ ಸೈಬರ್ ಕ್ರೈಮ್ ತನಿಖೆ ತರಬೇತಿ ನೀಡುತ್ತಿದ್ದೇವೆ. ಡ್ರಗ್ಸ್ ಮುಕ್ತ ಮಾಡಬೇಕು ಅಂತ ಹೇಳಿದ್ದಿನಿ. ಬೆಂಗಳೂರು‌ ನಗರದಲ್ಲಿ 100 ಕೋಟಿಗೂ ಹೆಚ್ಚು ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು. ನಾನು ಎಲ್ಲಾ ಕಡೆ ಸಭೆ ಮಾಡ್ತಾ ಇದ್ದಿನಿ. ಜಿಲ್ಲೆಗಳಲ್ಲಿ, ನಗರ ಪೊಲೀಸ್ ಆಯುಕ್ತರ ಜೊತೆ ಸಭೆ ಮಾಡ್ತಾ ಇದ್ದಿನಿ. ಬೆಂಗಳೂರಿನಲ್ಲಿ ಕುಳಿತುಕೊಂಡು ಕೆಲಸ…

Read More

ಬೆಂಗಳೂರು: ಜಗದೀಶ ಶೆಟ್ಟರ್ ಬಿಜೆಪಿಗೆ ಬಂದಿರುವುದೇನೂ ಆಪರೇಷನ್ ಕಮಲ ಅಲ್ಲ. ಕಾಂಗ್ರೆಸ್ ಪಕ್ಷದೊಳಗಿನ ಉಸಿರುಗಟ್ಟುವ ವಾತಾವರಣವನ್ನು ತಡೆದುಕೊಳ್ಳಲಾರದೆ ಶೆಟ್ಟರ್ ಮರಳಿ ತಮ್ಮ ಗೂಡು ಸೇರಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇನೂ ಆಪರೇಷನ್ ಕಮಲ ಅಲ್ಲ. ಜಗದೀಶ ಶೆಟ್ಟರ್ ಅವರು ಸಂಘ ಪರಿವಾರದ ಹಿನ್ನೆಲೆಯಿಂದ ಬೆಳೆದು ಬಂದಿದ್ದಾರೆ. ಅವರು ಮುಸ್ಲಿಮರನ್ನು ಓಲೈಸುವ ಪಕ್ಷಕ್ಕೆ ಏಕಾಏಕಿ ಸೇರಿಬಿಟ್ಟಿದ್ದರು‌. ರಾಮನವಮಿಗೂ ಇಮಾಮ್ ಸಾಬಿಗೂ ಏನು ಸಂಬಂಧ ಎನ್ನುವಂತೆ ಆಗಿತ್ತು. ಮುಸ್ಲಿಮರ ಓಲೈಕೆ ಹಾಗೂ ಹಿಂದೂಗಳ ಕಡೆಗಣನೆಯನ್ನು ನೋಡಿ ಅವರಿಗೆ ಉಸಿರುಗಟ್ಟುವ ವಾತಾವರಣ ಉಂಟಾಗಿತ್ತು. ಶೆಟ್ಟರ್ ಅವರು ಮರಳಿ ಗೂಡಿಗೆ ಬಂದಿರುವುದನ್ನು ತುಂಬು ಹೃದಯದಿಂದ ಸ್ವಾಗತ ಮಾಡಿದ್ದೇವೆ ಎಂದರು. ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ, ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮೊದಲಾದ ಕಾರಣಗಳಿಂದ ಇನ್ನಷ್ಟು ನಾಯಕರು ಬಿಜೆಪಿ ಕಡೆ ಬರಲಿದ್ದಾರೆ. ಇನ್ನೇನಿದ್ದರೂ ‘ಕಾಂಗ್ರೆಸ್ ಚೋಡೊ’ ಎಂಬ ಘೋಷಣೆ ಕೇಳಿಬರಲಿದೆ. ಆಮ್ ಆದ್ಮಿ ಪಕ್ಷ, ಮಮತಾ ಬ್ಯಾನರ್ಜಿಯವರ ಪಕ್ಷ ಕಾಂಗ್ರೆಸ್…

Read More

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (Cricket Council -ICC) 2023ನೇ ಸಾಲಿನ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ವಿರಾಟ್ ಕೊಹ್ಲಿ ( Virat Kohli ) ಭಾಜನರಾಗಿದ್ದಾರೆ. ಈ ಕುರಿತಂತೆ ವಿಶ್ವ ಕ್ರಿಕೆಟ್ ಆಡಳಿತ ಮಂಡಳಿ ಗುರುವಾರ (ಜನವರಿ 25) ಇದನ್ನು ಘೋಷಿಸಿದೆ. 2023 ರ ಏಕದಿನ ವಿಶ್ವಕಪ್ನಲ್ಲಿ ಅತಿ ಹೆಚ್ಚು ಏಕದಿನ ಶತಕಗಳನ್ನು ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಕೊಹ್ಲಿ ಮುರಿದರು. ಈ ಪಂದ್ಯಾವಳಿಯಲ್ಲಿ ಅವರು 95.62 ಸರಾಸರಿಯಲ್ಲಿ 765 ರನ್ ಗಳಿಸಿ ಪಂದ್ಯಾವಳಿಯ ಆಟಗಾರನಾಗಿ ಹೊರಹೊಮ್ಮಿದರು. https://twitter.com/ICC/status/1750486631247650993 https://kannadanewsnow.com/kannada/breaking-french-president-arrives-in-india-for-republic-day-celebrations-holds-roadshow-with-modi-in-jaipur-today/ https://kannadanewsnow.com/kannada/dk-shivakumar-meets-laxman-savadi-after-laxman-savadi-joins-bjp/

Read More

ರಾಯಚೂರು: ತರಗತಿ ನಡೆಯುತ್ತಿದ್ದಾಲೇ ಬಿರುಕು ಬಿಟ್ಟಿದ್ದಂತ ಶಾಲೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿನಿಯ ಕಾಲಿನ ಬೆರಳು ಕಟ್ ಆಗಿರೋ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಇಂದು ಘೋರ ಅವಘಡ ಸಂಭವಿಸಿದೆ. 7ನೇ ತರಗತಿಯ ಶಾಲೆ ನಡೆಯುತ್ತಿದಾಗಲೇ ಶಾಲಾ ಕೊಠಡಿಯ ಮೇಲ್ಛಾವಣಿಯ ಸಿಲಿಂಗ್ ಕುಸಿದು ಬಿದ್ದಿದೆ. ಈ ಪರಿಣಾಮ 7ನೇ ತರಗತಿಯ ಶ್ರೀದೇವಿಯ ಬಲಗಾಲಿನ ಬೆರಳು ಕಟ್ ಆಗಿರೋದಾಗಿ ತಿಳಿದು ಬಂದಿದೆ. ಸಿಲಿಂಗ್ ಕುಸಿತದಿಂದ ಕಾಲಿನ ಬೆರಳು ಕಟ್ ಆಗಿರುವಂತ ವಿದ್ಯಾರ್ಥಿನಿ ಶ್ರೀದೇವಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕಿತ್ಸೆಯ ಬಳಿಕ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಾಲೆಯ ಮೇಲ್ಛಾವಣಿ ಕುಸಿಯೋ ಹಂತದಲ್ಲಿದ್ದರೂ ಅದರಲ್ಲೇ ದೇವದುರ್ಗದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಜೀವ ಭಯದಲ್ಲಿ ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/jee-mains-2024-be-b-tech-paper-1-admit-card-released-download-here/…

Read More

ನವದೆಹಲಿ:  ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜನವರಿ 27 ರಂದು ನಡೆಯಲಿರುವ ಪೇಪರ್ 1 ಪರೀಕ್ಷೆಗೆ ಜೆಇಇ ಮೇನ್ಸ್ 2024 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಆ ದಿನ ಜಂಟಿ ಪ್ರವೇಶ ಪರೀಕ್ಷೆ B.Tech/B.E ಪತ್ರಿಕೆಗೆ ಹಾಜರಾಗುವ ಅಭ್ಯರ್ಥಿಗಳು ಜೆಇಇ main.nta.ac.in ನಲ್ಲಿ ಎನ್ಟಿಎ ಜೆಇಇಯ ಅಧಿಕೃತ ವೆಬ್ಸೈಟ್ ಮೂಲಕ ಪ್ರವೇಶ ಪತ್ರ ಅಥವಾ ಹಾಲ್ ಟಿಕೆಟ್ ಡೌನ್ಲೋಡ್ ಮಾಡಬಹುದು. ಜನವರಿ 27, 29, 30, 31 ಮತ್ತು ಫೆಬ್ರವರಿ 1 ರಂದು ದೇಶಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಬಿಇ ಅಥವಾ ಪೇಪರ್ 1 B.Tech/ ಪರೀಕ್ಷೆ ನಡೆಯಲಿದೆ. ಪರೀಕ್ಷೆಯು ಎರಡು ಪಾಳಿಗಳಲ್ಲಿ ನಡೆಯಲಿದೆ – ಮೊದಲನೆಯದು ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಎರಡನೆಯದು ಮಧ್ಯಾಹ್ನ 3 ರಿಂದ ಸಂಜೆ 6 ರವರೆಗೆ ನಡೆಯಲಿದೆ. ಪೇಪರ್ 1 ರ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು, ಅಭ್ಯರ್ಥಿಗಳಿಗೆ ಅಪ್ಲಿಕೇಶನ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕದ ಅಗತ್ಯವಿದೆ.…

Read More

ನವದೆಹಲಿ: ಆನ್ಲೈನ್ ಆಹಾರ ವಿತರಣಾ ಪ್ಲಾಟ್ಫಾರ್ಮ್ ಜೊಮಾಟೊ ಗುರುವಾರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ‘ಆನ್ಲೈನ್ ಪಾವತಿ ಅಗ್ರಿಗೇಟರ್’ ಆಗಿ ಅನುಮೋದನೆ ಪಡೆದಿದೆ ಎಂದು ಘೋಷಿಸಿದೆ. “ವ್ಯವಹಾರವನ್ನು ನಿರ್ವಹಿಸಲು ಜೊಮಾಟೊ ಲಿಮಿಟೆಡ್ (“ಕಂಪನಿ”) ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಜೊಮಾಟೊ ಪೇಮೆಂಟ್ಸ್ ಪ್ರೈವೇಟ್ ಲಿಮಿಟೆಡ್ (“ಝಡ್ಪಿಪಿಎಲ್”) ಅನ್ನು ಪಾವತಿ ಅಗ್ರಿಗೇಟರ್ ಮತ್ತು ಪ್ರಿಪೇಯ್ಡ್ ಪಾವತಿ ಸಾಧನಗಳ ವಿತರಕರಾಗಿ ಸಂಯೋಜಿಸುವ ಬಗ್ಗೆ ಆಗಸ್ಟ್ 4, 2021 ರ ನಮ್ಮ ಹಿಂದಿನ ಬಹಿರಂಗಪಡಿಸುವಿಕೆಗೆ ಅನುಸಾರವಾಗಿ, ಜನವರಿ 24 ರಂದು ಝಡ್ಪಿಪಿಎಲ್ಗೆ ಅಧಿಕಾರ ಪ್ರಮಾಣಪತ್ರವನ್ನು ನೀಡಲಾಗಿದೆ ಎಂದು ತಿಳಿಸಲು ನಾವು ಬಯಸುತ್ತೇವೆ. ಆರ್ಬಿಐ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಜನವರಿ 24, 2024 ರಿಂದ ಜಾರಿಗೆ ಬರುವಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (“ಆರ್ಬಿಐ”) ನಿಂದ ಭಾರತದಲ್ಲಿ ‘ಆನ್ಲೈನ್ ಪಾವತಿ ಅಗ್ರಿಗೇಟರ್’ ಆಗಿ ಕಾರ್ಯನಿರ್ವಹಿಸಲಿದೆ” ಎಂದು ಜೊಮಾಟೊ ಎಕ್ಸ್ಚೇಂಜ್ ಫೈಲಿಂಗ್ನಲ್ಲಿ ತಿಳಿಸಿದೆ. ಮಾರುಕಟ್ಟೆಗಳು ಮುಚ್ಚಿದಾಗ ಜೊಮಾಟೊ ಷೇರುಗಳು ₹ 136.00 ಕ್ಕೆ ಕೆಂಪು ಬಣ್ಣದಲ್ಲಿ ವಹಿವಾಟು ನಡೆಸುತ್ತಿದ್ದವು.…

Read More

ತುಮಕೂರು: ಜಿಲ್ಲೆಯ ಬಾಲ ಮಂದಿರದಲ್ಲಿ ಆಶ್ರಯದಲ್ಲಿದ್ದಂತ ಸಂತ್ರಸ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ತುಮಕೂರು ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಾಲ ಮಂದಿರದಲ್ಲಿ ಮೈಸೂರು ಮೂಲದ ಅಪ್ರಾಪ್ತ ಬಾಲಕಿಯೊಬ್ಬಳು ಆಶ್ರಯ ನೀಡಲಾಗಿತ್ತು. ಇಂತಹ ಬಾಲಕಿ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಲಮಂದಿರದಲ್ಲಿ ಸಂತ್ರಸ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರೋ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಜಯನಗರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/breaking-french-president-arrives-in-india-for-republic-day-celebrations-holds-roadshow-with-modi-in-jaipur-today/ https://kannadanewsnow.com/kannada/dk-shivakumar-meets-laxman-savadi-after-laxman-savadi-joins-bjp/

Read More

ಕಲಬುರ್ಗಿ: ರಾಜ್ಯದಲ್ಲಿ 2016ರ ನಂತರ 13,888 ಜನ ನಿವೃತ್ತಿಯಾಗಿದ್ದು, ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆದಿರಲಿಲ್ಲ. ನಮ್ಮ ಸರ್ಕಾರ ಬಂದ ಕೂಡಲೆ ನೇಮಕಾತಿಗೆ ಚಾಲನೆ ನೀಡಿದ್ದೇವೆ. 9 ಸಾವಿರ ಸಿಬ್ಬಂದಿ ನೇಮಕಕ್ಕೆ ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಇದರಲ್ಲಿ ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ 1,680 ನೇಮಕಾತಿ ಸೇರಿವೆ. 500 ಜನರಿಗೆ ಅನುಕಂಪ ಮೇಲೆ ಉದ್ಯೋಗ ನೀಡಲಾಗಿದೆ ಎಂಬುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ 20 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಮಾತನಾಡಿದಂತ ಅವರು, ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಶಕ್ತಿ ಯೋಜನೆ ಕುರಿತು ವಿರೋಧ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದರು. ಈಗ ಯೋಜನೆ ಜಾರಿಯಾಗಿದೆ. ಕಳೆದ…

Read More