Author: kannadanewsnow09

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮಾರ್ಗಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುರಿಂದ ಈ ಮಾರ್ಗಗಗಳಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜ.29 ರಿಂದ ಫೆ.03 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರುಳಿಹಳ್ಳಿ, ಗಣಿದಾಳು ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/breaking-french-president-arrives-in-india-for-republic-day-celebrations-holds-roadshow-with-modi-in-jaipur-today/ https://kannadanewsnow.com/kannada/dk-shivakumar-meets-laxman-savadi-after-laxman-savadi-joins-bjp/

Read More

ರಾಯಚೂರು: ತರಗತಿ ನಡೆಯುತ್ತಿದ್ದಾಲೇ ಬಿರುಕು ಬಿಟ್ಟಿದ್ದಂತ ಶಾಲೆಯ ಮೇಲ್ಛಾವಣಿಯ ಸಿಲಿಂಗ್ ಕುಸಿದು ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿನಿಯ ಕಾಲಿನ ಬೆರಳು ಕಟ್ ಆಗಿರೋ ಘಟನೆ ರಾಯಚೂರಿನ ದೇವದುರ್ಗದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ದೇವದುರ್ಗದ ಸರ್ಕಾರಿ ಶಾಲೆಯಲ್ಲಿ ಇಂದು ಘೋರ ಅವಘಡ ಸಂಭವಿಸಿದೆ. 7ನೇ ತರಗತಿಯ ಶಾಲೆ ನಡೆಯುತ್ತಿದಾಗಲೇ ಸಿಲಿಂಗ್ ಕುಸಿದು ಬಿದ್ದಿದೆ. ಈ ಪರಿಣಾಮ 7ನೇ ತರಗತಿಯ ಶ್ರೀದೇವಿ ಕಾಲಿನ ಬೆರಳು ಕಟ್ ಆಗಿರೋದಾಗಿ ತಿಳಿದು ಬಂದಿದೆ. ಸಿಲಿಂಗ್ ಕುಸಿತದಿಂದ ಕಾಲಿನ ಬೆರಳು ಕಟ್ ಆಗಿರುವಂತ ವಿದ್ಯಾರ್ಥಿನಿ ಶ್ರೀದೇವಿಯನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಶಾಲೆಯ ಮೇಲ್ಛಾವಣಿ ಕುಸಿಯೋ ಹಂತದಲ್ಲಿದ್ದರೂ ಅದರಲ್ಲೇ ದೇವದುರ್ಗದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿ ದಿನ ಜೀವ ಭಯದಲ್ಲಿ ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-french-president-arrives-in-india-for-republic-day-celebrations-holds-roadshow-with-modi-in-jaipur-today/ https://kannadanewsnow.com/kannada/dk-shivakumar-meets-laxman-savadi-after-laxman-savadi-joins-bjp/

Read More

ನವದೆಹಲಿ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ ಸೇರಿದ್ದಂತ ಜಗದೀಶ್ ಶೆಟ್ಟರ್ ಮತ್ತೆ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಬಳಿಕ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಜಗದೀಶ್ ಶೆಟ್ಟರ್ ಅವರು,  ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ನಾನು ಮತ್ತೆ ಬಿಜೆಪಿ ಸೇರಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ನಾಯಕರೂ ಅದೇ ಆಶಯ ವ್ಯಕ್ತಪಡಿಸಿದರು. ಬಿಜೆಪಿ ಪುನರ್ ಸೇರ್ಪಡೆ ಸಂತೋಷದ ಸಂಗತಿ ಎಂದರು. ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯತ್ವಕ್ಕೆ ಆಯ್ಕೆಯಾಗಿದ್ದು, ಆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಇ ಮೇಲ್ ಮೂಲಕ ಅದನ್ನು ತಿಳಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದನ್ನು ಇ ಮೇಲ್ ಮೂಲಕ ಕಳಿಸಿದ್ದೇನೆ. ರಾಜೀನಾಮೆ ಪತ್ರ ಕಳಿಸುವ ವ್ಯವಸ್ಥೆ ಮಾಡಿದ್ದೇನೆ ಎಂದು ವಿವರಿಸಿದರು. ದೇಶದ ಹಿತರಕ್ಷಣೆಗೆ ಮೋದಿಜೀ ಅವರು ಶ್ರಮಿಸುತ್ತಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕಿದೆ. ಬಿಜೆಪಿ ಬೆಳವಣಿಗೆಗೆ…

Read More

ಬೆಂಗಳೂರು: ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ದೆಹಲಿಯಲ್ಲಿ ಇಂದು ನಡೆದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಬಿಜೆಪಿ ಮರುಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಗದೀಶ್ ಶೆಟ್ಟರ್ ಅವರು ಪಕ್ಷದ ಅನೇಕ ಜವಾಬ್ದಾರಿ ವಹಿಸಿದವರು. ಮುಖ್ಯಮಂತ್ರಿಯಾಗಿ ಅವರು ದುಡಿದಿದ್ದಾರೆ. ಅವರು ಬಿಜೆಪಿಗೆ ಬರಬೇಕೆಂದು ನಮ್ಮೆಲ್ಲ ಕಾರ್ಯಕರ್ತರ ಅಪೇಕ್ಷೆ ಇತ್ತು. ಅದಕ್ಕಾಗಿ ಇವತ್ತು ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರನ್ನು ನಾನು, ಜಗದೀಶ್ ಶೆಟ್ಟರ್, ವಿಜಯೇಂದ್ರ ಸೇರಿ ಎಲ್ಲರೂ ಭೇಟಿ ಮಾಡಿ, ಅವರು ಸಹ ಸಂತೋಷದಿಂದ ಬಿಜೆಪಿ ಸೇರಲು ಕೋರಿದರು. ಅದರಂತೆ ಇವತ್ತು ಬಿಜೆಪಿ ಸೇರಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನೂ ಭೇಟಿ ಮಾಡುತ್ತೇವೆ ಎಂದು ವಿವರಿಸಿದರು. ಶೆಟ್ಟರ್ ಸೇರ್ಪಡೆಯಿಂದ ಬಿಜೆಪಿಗೆ ಹೆಚ್ಚು ಶಕ್ತಿ…

Read More

ಕಲಬುರಗಿ : ಶಕ್ತಿ ಯೋಜನೆ ಪರಿಣಾಮ ರಾಜ್ಯದಲ್ಲಿ ಬಸ್ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಸಾರಿಗೆ ಬಸ್ ಒದಗಿಸುವ ದೃಷ್ಠಿಯಿಂದ ಬರುವ ಮಾರ್ಚ್ ಅಂತ್ಯಕ್ಕೆ ರಾಜ್ಯದ ನಾಲ್ಕು ನಿಗಮಗಳಿಗೆ 5,800 ಬಸ್ ಖರೀದಿಸಲಾಗುತ್ತಿದೆ ರಾಜ್ಯದ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿರವರು ತಿಳಿಸಿದರು. ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ 20 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಕಲಬುರಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಹೊರವಲಯದ ನಾಲ್ಕು ದಿಕ್ಕಿನಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕೆಂಬ ಮಾನ್ಯ ಶಾಸಕರಾದ ಅಲ್ಲಮಪ್ರಭು ಪಾಟೀಲ ಅವರ ಪ್ರಸ್ತಾವನೆಗೆ ಸಮಾರಂಭದಲ್ಲಿ ಮಾತನಾಡಿದ ಅವರು, ನಿವೇಶನ ನೀಡಿದಲ್ಲಿ ಸ್ಯಾಟ್ಲೈಟ್ ಬಸ್ ನಿಲ್ದಾಣ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು. ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ…

Read More

ಬೆಂಗಳೂರು: ಮುಂದಿನ ದಿನಗಳಲ್ಲಿ ಕೇವಲ ಬಿಜೆಪಿ ನಾಯಕರಷ್ಟೇ ಘರ್ ವಾಪಸಿ ಆಗುವುದಿಲ್ಲ. ಕಾಂಗ್ರೆಸ್ ನ ಪ್ರಮುಖ ನಾಯಕರೂ ಕೂಡ ಪಕ್ಷಕ್ಕೆ ಬರಲಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಗದೀಶ್ ಶೆಟ್ಟರ್ ಅವರು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ಕಾಂಗ್ರೆಸ್ ಮೇಲಿನ ಪ್ರೀತಿಯಿಂದ ಹೋಗಿರಲಿಲ್ಲ. ಬಿಜೆಪಿಯಲ್ಲಿ ಆಗಿರುವ ಬೇಸರದಿಂದ ಕಾಂಗ್ರೆಸ್ ಗೆ ಹೋಗಿದ್ದರು ಎಂದು ಹೇಳಿದರು. ಅವರನ್ನು ನಾನು ಜನಸಂಘದಿಂದ ಬಹಳ ಹತ್ತಿರದಿಂದ ನೋಡಿದ್ದೇನೆ. ಅವರಿಗೆ ಕಾಂಗ್ರೆಸ್ ಡಿಎನ್ ಎ ಒಗ್ಗುವುದಿಲ್ಲ. ಶೆಟ್ಟರ್ ಅವರ ದೇಹ ಮಾತ್ರ ಕಾಂಗ್ರೆಸ್ ಗೆ ಹೋಗಿತ್ತು. ಅವರ ಮನಸ್ಸು ಬಿಜೆಪಿಯಲ್ಲಿಯೇ ಇತ್ತು. ಅವರಿಗೆ ಕಾಂಗ್ರೆಸ್ ಸೇರಿದ ಮೇಲೆ ಅಲ್ಲಿನ ಮನಸ್ಥಿತಿ ಅರ್ಥವಾಗಿದೆ‌. ಇದು ಬಿಜೆಪಿ ಮತ್ತು ಜಗದೀಶ್ ಶೆಟ್ಟರ್ ಅವರಿಗೂ ಅನಕೂಲವಾಗಲಿದೆ ಎಂದು ಹೇಳಿದರು. ಜಗದೀಶ್ ಶೆಟ್ಟರನ್ನು ಯಾರೂ ಬ್ಲ್ಯಾಕ್ ಮೇಲ್ ಮಾಡಲು ಸಾಧ್ಯವಿಲ್ಲ.…

Read More

ಬೆಂಗಳೂರು: ಲೋಕಸಭೆ ಚುನಾವಣೆ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ಕಾಂಗ್ರೆಸ್ ಮೇಲಿನ ಪ್ರೀತಿಯಿಂದ ಹೋಗಿರಲಿಲ್ಲ. ಬಿಜೆಪಿಯಲ್ಲಿ ಆಗಿರುವ ಬೇಸರದಿಂದ ಕಾಂಗ್ರೆಸ್ ಗೆ ಹೋಗಿದ್ದರು. ಅವರನ್ನು ನಾನು ಜನಸಂಘದಿಂದ ಬಹಳ ಹತ್ತಿರದಿಂದ ನೋಡಿದ್ದೇನೆ. ಅವರಿಗೆ ಕಾಂಗ್ರೆಸ್ ಡಿಎನ್ ಎ ಒಗ್ಗುವುದಿಲ್ಲ. ಶೆಟ್ಟರ್ ಅವರ ದೇಹ ಮಾತ್ರ ಕಾಂಗ್ರೆಸ್ ಗೆ ಹೋಗಿತ್ತು. ಅವರ ಮನಸ್ಸು ಬಿಜೆಪಿಯಲ್ಲಿಯೇ ಇತ್ತು. ಅವರಿಗೆ ಕಾಂಗ್ರೆಸ್ ಸೇರಿದ ಮೇಲೆ ಅಲ್ಲಿನ ಮನಸ್ಥಿತಿ ಅರ್ಥವಾಗಿದೆ‌. ಇದು ಬಿಜೆಪಿ ಮತ್ತು ಜಗದೀಶ್ ಶೆಟ್ಟರ್ ಅವರಿಗೂ ಅನಕೂಲವಾಗಲಿದೆ ಎಂದು ಹೇಳಿದರು. ಇದು ಕೇವಲ ಆರಂಭ. ಮುಂದಿನ ದಿನಗಳಲ್ಲಿ ಕೇವಲ ಬಿಜೆಪಿ ನಾಯಕರಷ್ಟೇ ಘರ್ ವಾಪಸಿ ಆಗುವುದಿಲ್ಲ. ಕಾಂಗ್ರೆಸ್ ನ ಪ್ರಮುಖ…

Read More

ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೈ ತೊರೆದು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕೂಡ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬುದಾಗಿ ಚರ್ಚೆ ನಡೆಯುತ್ತಿತ್ತು. ಇದಕ್ಕೆ ವ್ಯತಿರಿಕ್ತ ಎನ್ನುವಂತೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸವದಿ ಭೇಟಿಯಾಗಿದ್ದಾರೆ. ಈ ಕುರಿತಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪೋಟೋ ಹಂಚಿಕೊಂಡಿದ್ದು, ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ್ ಸವದಿ ಅವರು ಬೆಂಗಳೂರಿನಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು ಎಂದು ತಿಳಿಸಿದ್ದಾರೆ. ಈ ಮೂಲಕ ಮತ್ತೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ. ನಾನು ಯಾವುದೇ ಕಾಣಕ್ಕೂ ‘ಮತ್ತೆ ಬಿಜೆಪಿ ಸೇರಲ್ಲ’ – ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಸ್ಪಷ್ಟನೆ ಬೆಂಗಳೂರು; ವಿಧಾನಸಭಾ ಚುನಾವಣೆ ( Karnataka Assembly Election ) ಸಂದರ್ಭದಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ (Congress Party ) ಸೇರಿದ್ದಂತ ಜಗದೀಶ್ ಶೆಟ್ಟರ್ ಮತ್ತೆ ಘರ್…

Read More

ಬೆಂಗಳೂರು: ರಾಜ್ಯದಲ್ಲಿ ತಲ್ಲಣವನ್ನೇ ಸೃಷ್ಠಿಸಿದ್ದಂತ ಬಿಟ್ ಕಾಯಿನ್ ಪ್ರಕರಣದ ಆರೋಪಿಗಳಿಗೆ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ನೀಡಿ, ಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯವು ಇಂದು ವಿಚಾರಣೆ ನಡೆಸಿತು. ನ್ಯಾಯಾಲಯದ ಮುಂದೆ ಸಿಐಡಿ ಪೊಲೀಸರು ತಮ್ಮ ವಶಕ್ಕೆ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ನೀಡುವಂತೆ ಕೋರಿಕೊಂಡಿದ್ದರು. ಈ ಹಿನ್ನಲೆಯಲ್ಲಿ ಸಿಐಡಿ ಪೊಲೀಸರ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಬಂಧಿತ ಆರೋಪಿಗಳಾದಂತ ಪೊಲೀಸ್ ಇನ್ಸ್ ಪೆಕ್ಟರ್ ಪ್ರಶಾಂತ್ ಬಾಬು ಹಾಗೂ ಸೈಬರ್ ಎಕ್ಸ್ ಪರ್ಟ್ ಸಂತೋಷ್ ಅವರನ್ನು ಜನವರಿ.31ರವರೆಗೆ ಸಿಐಡಿ ಪೊಲೀಸರ ವಶಕ್ಕೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯವು ಆದೇಶಿಸಿದೆ. https://kannadanewsnow.com/kannada/shettars-re-joining-bjp-i-welcome-high-commands-decision-mla-mahesh-tenginakai/ https://kannadanewsnow.com/kannada/breaking-french-president-arrives-in-india-for-republic-day-celebrations-holds-roadshow-with-modi-in-jaipur-today/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲಾ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರಕಾರದ ಘನಂದಾರಿ ಸಾಧನೆ ಏನೂ ಇಲ್ಲ ಎಂದಿದ್ದಾರೆ. ಮೇ ತಿಂಗಳಲ್ಲಿಯೇ OPS ಜಾರಿ ಮಾಡುವ ಭರವಸೆ ನೀಡಿದ್ದರು ಸಿದ್ದರಾಮಯ್ಯ. 2023 ಮೇ 20ರಂದು ಪ್ರಮಾಣ ಸ್ವೀಕರಿಸಿದ ಅವರು, ಸರಕಾರ ಬಂದ ಎರಡೇ ದಿನಕ್ಕೆ ಈ…

Read More