Subscribe to Updates
Get the latest creative news from FooBar about art, design and business.
Author: kannadanewsnow09
ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಬಳಿಕ, ವಾರಣಾಸಿ ಜಿಲ್ಲಾ ನ್ಯಾಯಾಲಯವು ಎಎಸ್ಐ ಸರ್ವೆಗೆ ಆದೇಶಿಸಿತ್ತು. ಭಾರತೀಯ ಪುರಾತತ್ವ ಇಲಾಖೆಯಿಂದ ನಡೆಸಲಾಗಿರುವಂತ ಸಮೀಕ್ಷೆಯವ ವರದಿಯನ್ನು ಈಗ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ. ಜ್ಞಾನವಾಪಿ ಮಸೀದಿಯ ಬಗ್ಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ವರದಿಯನ್ನು ಸಾರ್ವಜನಿಕಗೊಳಿಸಲಾಗುವುದು ಮತ್ತು ಅದರ ಪ್ರವೇಶವನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರಿಗೆ ಒದಗಿಸಲಾಗುವುದು. ಈ ಕುರಿತು ಮಾತನಾಡಿದ ಹಿಂದೂ ಕಡೆಯ ವಕೀಲ ಹರಿಶಂಕರ್ ಜೈನ್, “ಎಎಸ್ಐ ಸಮೀಕ್ಷೆಯ ಪ್ರತಿಯನ್ನು ಪಡೆಯಲು ನಾವು ತುಂಬಾ ಅದೃಷ್ಟಶಾಲಿಗಳು” ಎಂದು ಹೇಳಿದರು. “ಎಎಸ್ಐ ಸಮೀಕ್ಷೆಯಲ್ಲಿ ಏನಿದೆ ಎಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು” ಎಂದು ಜೈನ್ ಹೇಳಿದರು. ನ್ಯಾಯಾಲಯದ ನಿರ್ದೇಶನದಂತೆ ಎರಡೂ ಪಕ್ಷಗಳಿಗೆ ವರದಿಯ ಹಾರ್ಡ್ ಕಾಪಿ ನೀಡಲಾಗುವುದು ಎಂದು ಜೈನ್ ಗಮನಿಸಿದರು. https://kannadanewsnow.com/kannada/breaking-big-shock-to-india-alliance-aap-announces-no-alliance-with-congress-in-punjab/ https://kannadanewsnow.com/kannada/breaking-young-rajat-patidar-replaces-virat-kohli-for-first-2-tests-against-england/
ಬೆಂಗಳೂರು: ನಗರದಲ್ಲಿನ ಪ್ರೀ ಸ್ಕೂಲ್ ಒಂದರಲ್ಲಿ ನಡೆದಂತ ನಿರ್ಲಕ್ಷ್ಯ ಘಟನೆಯಿಂದಾಗಿ 4 ವರ್ಷದ ಪುಟ್ಟ ಕಂದಮ್ಮ ಜೀವನ್ಮರಣ ಹೋರಾಟ ನಡೆಸುತ್ತಿರುವಂತೆ ಆಗಿದೆ. ಈಗ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಬೆಂಗಳೂರಿನ ಹೆಣ್ಣೂರಿನ ಚೆಲ್ಲಕೆರೆಯಲ್ಲಿನ ಡೆಲ್ಲಿ ಪ್ರೀ ಸ್ಕೂಲ್ ನಲ್ಲಿ 4 ವರ್ಷದ ಜಿನಾ ಓದುತ್ತಿದ್ದಳು. ಜನವರಿ.22ರಂದು 3ನೇ ಮಹಡಿಯಿಂದ ಬಿದ್ದಿದ್ದಂತ ಜಿನಾಗೆ ತಲೆಗೆ ತೀವ್ರವಾಗಿ ಪೆಟ್ಟಾಗಿ ಗಾಯ ಕೂಡ ಆಗಿತ್ತು. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದೀಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ 4 ವರ್ಷದ ಜಿನಾ ಸ್ಥಿತಿ ಚಿಂತಾಜನಕವಾಗಿರೋದಾಗಿ ತಿಳಿದು ಬಂದಿದೆ. ಜಿನಾ ಇಷ್ಟು ತೀವ್ರವಾಗಿ ಗಾಯಗೊಂಡರೂ ಹೆಣ್ಣೂರು ಠಾಣೆಯ ಪೊಲೀಸರು ಮಾತ್ರ ಎಫ್ಐಆರ್ ದಾಖಲಿಸಿ, ಪ್ರೀ ಸ್ಕೂಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋ ಬದಲಾಗಿ, ಎನ್ ಸಿಆರ್ ಹಾಕಿ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ. https://kannadanewsnow.com/kannada/good-news-for-farmers-in-the-state-first-instalment-of-drought-relief-to-be-released-within-a-week-cm-siddaramaiah/ https://kannadanewsnow.com/kannada/breaking-big-shock-to-india-alliance-aap-announces-no-alliance-with-congress-in-punjab/
ಬೆಂಗಳೂರು : ಉದ್ಯಾನ ನಗರಿ ಬೆಂಗಳೂರಿನ ವಿಜಯನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಚಂದ್ರಾ ಬಡಾವಣೆಯಲ್ಲಿ ಇದೇ ಜನವರಿ 26 ರ ಗಣರಾಜ್ಯೋತ್ಸವ ದಿನದಿಂದ ಅತೀ ಎತ್ತರದ ರಾಷ್ಟ್ರಧ್ವಜ ಸ್ಥಂಭದಲ್ಲಿ ತ್ರಿವರ್ಣ ಧ್ವಜ ಹಾರಾಡಲಿದೆ. ಕರ್ನಾಟಕ ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಅಂದು ಬೆಳಿಗ್ಗೆ 8-30 ಗಂಟೆಗೆ ಚಂದ್ರಾ ಬಡಾವಣೆಯ ಉದ್ಯಾನದಲ್ಲಿ ಈ ಬಾನೆತ್ತರದ ರಾಷ್ಟ್ರಧ್ವಜ ಸ್ಥಂಭವನ್ನು ಲೋಕಾರ್ಪಣೆ ಮಾಡಿ, ಪ್ರಪ್ರಥಮ ಬಾರಿಗೆ ರಾಷ್ಟ್ರದ ತ್ರಿವರ್ಣ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಸಂವಿಧಾನದ ಆಶಯಗಳಾದ ದೇಶ ಪ್ರೇಮ, ದೇಶ ಭಕ್ತಿ, ಸೋದರತೆ ಮತ್ತು ಸಾಮರಸ್ಯವನ್ನು ಉಳಿಸಿ ಬೆಳೆಸಲು ಪ್ರೇರಣೆ ಮತ್ತು ಸ್ಫೂರ್ತಿ ನೀಡುವ ಈ ಸಮಾರಂಭದಲ್ಲಿ ವಿಜಯನಗರ ಶಾಸಕ ಎಂ ಕೃಷ್ಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭದ ಪ್ರಾರಂಭಕ್ಕೆ ಮುನ್ನ, ಬೆಳಿಗ್ಗೆ 7-30 ಗಂಟೆಗೆ, ವಿವಿಧ ಕಲಾ ತಂಡಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ವಾದ್ಯಗೋಷ್ಠಿ-ಸಹಿತವಾಗಿ ಶಾಲಾ-ಕಾಲೇಜು…
ಬೆಂಗಳೂರು: ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ರಾಜಸ್ವ ತರುವ ಅಬಕಾರಿ ಇಲಾಖೆಯಲ್ಲಿ ( Excise department ) ಕೇಳಿದ್ದಷ್ಟೂ ಹಣ ಕೊಟ್ಟರೆ ಬೇಕಾದ ಹುದ್ದೆಗಳಿಗೆ ವರ್ಗಾವಣೆ ಮಾಡಲಾಗುತ್ತಿದೆ. ಜತೆಗೆ, ಬೇಡಿಕೆ ಇರುವ ಸ್ಥಳಗಳ ನಿಯುಕ್ತಿಗಾಗಿ ಇನ್ನಷ್ಟು ಕುದುರಿಸಿ ಹಣ ಪಡೆದು ವರ್ಗಾಯಿಸಲಾಗುತ್ತಿದೆ. ಹಣ ನೀಡದಿರುವರಿಗೆ ಡಿಸ್ಟಿಲರಿ, ಬ್ರಿವರಿ ವೈನರಿ ಹಾಗೂ ಮೈಕ್ರೋಬ್ರಿವರಿಯಲ್ಲಿರುವ ಹುದ್ದೆ ತೋರಿಸಲಾಗುತ್ತಿದೆ. ಲೋಕಸಭೆ ಚುನಾವಣೆಗೆ ( Lok Sabha Election ) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವೃಂದದ ಅಧಿಕಾರಿಗಳನ್ನು ತರಾತುರಿ ವರ್ಗಾವಣೆಗೆ ಅಬಕಾರಿ ಸಚಿವರು ಕೈ ಹಾಕಿದ್ದಾರೆ. ಪ್ರತಿ ವರ್ಷ ಮೇ ಅಥವಾ ಜೂನ್‌ನಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ನಡೆಯತ್ತದೆ. ಆದರೆ,ಅಬಕಾರಿ ಇಲಾಖೆಯಲ್ಲಿ ವರ್ಷಕ್ಕೆ ಎರಡೆರಡು ಬಾರಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳು ನಡೆದಿರುವುದುಂಟು.ಆಡಳಿತಾತ್ಮಕವಾಗಿ ಅಗತ್ಯವಿರುವ ಖಾಲಿ ಸ್ಥಾನಗಳಿಗೆ ವರ್ಗಾವಣೆ ಮಾಡಬಾರದು ಎಂದು ಸರ್ಕಾರದ ನಿಯಮವಿದೆ. ಆದರೂ ಈ ನಿಯಮವನ್ನು ಉಲ್ಲಂಸಿ ಇಲಾಖೆಯಲ್ಲಿ ಗ್ರೂಪ್ ‘ಬಿ’ ಮತ್ತು ‘ಸಿ’ವೃಂದದ ಅಧಿಕಾರಿಗಳನ್ನು ಖಾಲಿ ಸ್ಥಾನಕ್ಕೆ ವರ್ಗಾಯಿಸಲಾಗುತ್ತಿದೆ. ಹಿರಿತನ ಆಧಾರದಲ್ಲಿ ಮುಂಬಡ್ತಿ ಪಡೆದಿರುವ…
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷವನ್ನು ಸೇರ್ಪಡೆಯಾದರು. ಈ ವೇಳೆ ಮಾತನಾಡಿದಂತ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ತಿಳಿಸಿದರು. ಎಸ್‍ಸಿ, ಎಸ್‍ಟಿ ಸೇರಿದಂತೆ ಕಾಂಗ್ರೆಸ್ ಮತಬ್ಯಾಂಕಿನಂತಿದ್ದ ಎಲ್ಲ ಸಮುದಾಯಗಳು ಭ್ರಮನಿರಸನಗೊಂಡಿವೆ. ದಲಿತರ ಅಭಿವೃದ್ಧಿಗಾಗಿ ಕೊಟ್ಟಿದ್ದ ಸುಮಾರು 11,300 ಕೋಟಿ ಹಣವನ್ನು ಗ್ಯಾರಂಟಿ ಸ್ಕೀಮಿಗೆ ಕೊಟ್ಟರಲ್ಲವೇ? ಆ ಮೂಲಕ ದಲಿತರನ್ನು ವಂಚಿತರನ್ನಾಗಿ ಮಾಡಿದ್ದೀರಲ್ಲವೇ ಎಂದು ಕೇಳಿದರು. ರುದ್ರಯ್ಯ ದಕ್ಷ ಅಧಿಕಾರಿಯಾಗಿ ಸೇವೆ ಮಾಡಿದವರು. ಜನಪ್ರೀತಿ ಪಡೆದವರು ಎಂದು ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮಾತನಾಡಿ, ಬಿಜೆಪಿ ಮಾಡಿದ ಸಾಧನೆ, ಅಭಿವೃದ್ಧಿ ಕಾರ್ಯವನ್ನು ಜನರಿಗೆ ತಿಳಿಸಬೇಕು. ಆಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದು ತಿಳಿಸಿದರು. ಡಾ.ಅಂಬೇಡ್ಕರರನ್ನು ಕಾಂಗ್ರೆಸ್ ಸೋಲಿಸಿದ್ದು, ಅವರ…
ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ದೇಶ ಇವತ್ತು ಅತ್ಯಂತ ಭರವಸೆಯಿಂದ ನರೇಂದ್ರ ಮೋದಿಜೀ ಅವರ ನಾಯಕತ್ವದ ಬಿಜೆಪಿ ಕಡೆ ನೋಡುತ್ತಿದೆ. ಈ ಬಾರಿ ದಕ್ಷಿಣ ಭಾರತದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ 25 ಲೋಕಸಭಾ ಸೀಟು ಬಂದಿತ್ತು. ಅದನ್ನು ಮೀರಿ ಅದಕ್ಕಿಂತ ಹೆಚ್ಚು ಸೀಟುಗಳನ್ನು ಪಕ್ಷ ಗೆಲ್ಲಲಿದೆ ಎಂದರು. ತೆಲಂಗಾಣ, ಆಂಧ್ರ, ತಮಿಳುನಾಡಿನಲ್ಲೂ ಅತಿ ಹೆಚ್ಚು ಸೀಟು ಸಿಗಲಿದ್ದು, ಅಚ್ಚರಿಯ ಫಲಿತಾಂಶ ಲಭಿಸಲಿದೆ ಎಂದು ತಿಳಿಸಿದರು. ಇದರ ಪ್ರಭಾವ ಕರ್ನಾಟಕದಲ್ಲೂ ಆಗಿದೆ. ಎಸ್‍ಸಿ, ಎಸ್‍ಟಿ ಸೇರಿದಂತೆ ಕಾಂಗ್ರೆಸ್ ಮತಬ್ಯಾಂಕಿನಂತಿದ್ದ ಎಲ್ಲ ಸಮುದಾಯಗಳು ಭ್ರಮನಿರಸನಗೊಂಡಿವೆ.…
ಮೈಸೂರು: ರಾಜ್ಯದ ರೈತರು ಬರ ಪರಿಹಾರ ಯಾವಾಗ ಸರ್ಕಾರ ಬಿಡುಗಡೆ ಮಾಡಲಿದೆ ಎಂಬುದಾಗಿ ಕಾಯುತ್ತಿದ್ದಾರೆ. ಇಂತಹ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ವಾರದೊಳಗೆ ರೈತರಿಗೆ ಮೊದಲ ಕಂತು ಬಿಡುಗಡೆ ಮಾಡೋದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಅವರು ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಜಗದೀಶ್ ಶೆಟ್ಟರ್ ಅವರು ಪುನ: ಬಿಎಪಿಗೆ ಹಿಂತಿರುಗುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಅವರೇ ನಾನು ಪುನ: ಬಿಜೆಪಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಪದೇ ಪದೇ ಉದ್ದೇಶಪೂರ್ವಕವಾಗಿ ಬಿಜೆಪಿ ಈ ಮಾತನ್ನು ಹರಿಯಬಿಡುತ್ತಿದೆ. ಯಾವುದ ಕಾರಣಕ್ಕೂ ಕಾಂಗ್ರೆಸ್ ಪಕ್ಷವನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ ಎಂದರು. ಪರಿಹಾರ: ಪ್ರಧಾನಿಗಳ ಗಮನಕ್ಕೆ ತರಲಾಗಿದೆ ಕೇಂದ್ರಕ್ಕೆ ಭೇಟಿ ನೀಡಿ ಅಮಿತ್ ಷಾ ಅವರನ್ನು ಭೇಟಿ ನೀಡಿದಾಗ ಡಿಸೆಂಬರ್ 23 ರಂದು ಸಭೆ ಕರೆದು ¥ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ ಇಂದಿನವರೆಗೂ ಬಿಡುಗಡೆಯಾಗಲ್ಲ. ಸಭೆ ಕರೆದು ಕಾರಣಾಂತರದಿಂದ ಮುಂದೂಡಿದರು. ಇತ್ತೀಚೆಗೆ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಿದಾಗ ಈ ವಿಷಯವನ್ನು…
ಮೈಸೂರು : ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಪ್ರತಿ ನಾಗರಿಕನಿಗೂ ಪಾದಯಾತ್ರೆ ಕೈಗೊಳ್ಳಲು ಅಥವಾ ಯಾವುದೇ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ವಾತಂತ್ರ್ಯವನ್ನು ಸಂವಿಧಾನ ಕೊಟ್ಟಿದೆ. ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು. ಪ್ರಚೋದನೆ ನೀಡುವುದು ಸಂವಿಧಾನಬಾಹಿರ ನೆಹರೂ ಕುಟುಂಬಕ್ಕೆ ಬೆದರಿಕೆಯಿದ್ದು, ಭಾರತ ಸರ್ಕಾರ ಹಾಗೂ ಅಸ್ಸಾಂ ರಾಜ್ಯ ಸರ್ಕಾರಗಳು ರಾಹುಲ್ ಗಾಂಧಿಯವರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕಾಗಿರುವುದು ಅವರ ಕರ್ತವ್ಯ. ಇದು ಅವರ ಕರ್ತವ್ಯಲೋಪ ಎಸೆಗಿದಂತಾಗುತ್ತದೆ…
ಬೆಂಗಳೂರು: ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಹದಿನಾರು ಚಾಲಕರು ಮಂಗಳವಾರ ಬೆಳಿಗ್ಗೆ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುತ್ತಿರುವುದು ಕಂಡುಬಂದಿದೆ. ಈ ಮೂಲಕ ಬೆಂಗಳೂರಿನ ಶಾಲಾ ಮಕ್ಕಳ ವಾಹನಗಳು ಎಷ್ಟು ಸೇಫ್ ಅನ್ನೋದನ್ನ ಎತ್ತಿ ತೋರಿಸಿ, ಪೋಷಕರ ಶಾಕ್ ಗೆ ಕಾರಣವಾಗಿದೆ. ಈ 16 ಪುರುಷರು ಹೆಚ್ಚಾಗಿ ಮಿನಿ ಬಸ್ಸುಗಳು ಅಥವಾ ಟೆಂಪೊ ಟ್ರಾವೆಲರ್ ಗಳನ್ನು ಚಾಲನೆ ಮಾಡುತ್ತಿದ್ದರು. ಮಕ್ಕಳನ್ನು ಹೊಂದಿರುವ 3,414 ವಾಹನಗಳನ್ನು ತಪಾಸಣೆ ಮಾಡುವಾಗ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಿದು ವಾಹನ ಚಲಾಯಿಸುವವರು ತಮ್ಮ ಉಲ್ಲಂಘನೆಗೆ ಅನೇಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ. “ನಾನು ನನ್ನ ಆಪ್ತ ಸ್ನೇಹಿತನ ನಾಮಕರಣ ಸಮಾರಂಭದ ಆಚರಣೆಗೆ ಹೋಗಿದ್ದೆ ಮತ್ತು ಅಲ್ಲಿ ನಾವು ತಡರಾತ್ರಿಯವರೆಗೆ ಪಾರ್ಟಿ ಮಾಡಿದ್ದೇವೆ, ಆಗ ನಾನು ವಿಸ್ಕಿ ಸೇವಿಸಿದ್ದೆ. ಶಾಲಾ ಸಮಯದ ನಂತರ, ನಾನು ಜೀವನೋಪಾಯಕ್ಕಾಗಿ ಆಟೋರಿಕ್ಷಾವನ್ನು ಓಡಿಸುತ್ತೇನೆ ಮತ್ತು ರಾತ್ರಿಯಲ್ಲಿ ದಣಿದಿದ್ದೇನೆ. ಆದ್ದರಿಂದ, ಮಲಗುವ ಮೊದಲು, ನಾನು ಕೆಲವು ಪೆಗ್ಗಳನ್ನು ಹಾಕಿದ್ದೇನೆ. ಆದ್ದರಿಂದ ನನಗೆ ಉತ್ತಮ ನಿದ್ರೆ ಸಿಗುತ್ತದೆ” ಎಂದು…
ಕಲಬುರಗಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಗೆ ಡಿ.ಸಿ. ಕಚೇರಿ ಆಗಮಿಸಿದಾಗ ಮಿನಿ ವಿಧಾನಸೌಧದಲ್ಲಿರುವ ಸಬ್ ರಿಜಿಸ್ಟರ್ ಕಚೇರಿಗೆ ಭೇಟಿ ನೀಡಿದರು. ಕಚೇರಿ ಹೊರಗಡೆ ಜನಜಂಗುಳಿ ಕಂಡ ಸಚಿವರು, ಸಾರ್ವಜನಿಕರನ್ನು ನೊಂದಣಿಗೆ ಸಮಯ ನೀಡಿಲ್ವಾ ಎಂದು ಪ್ರಶ್ನಿಸಿದರು. ಎಲ್ಲರು ಒಂದೆ ಸಮಯಕ್ಕೆ ಬಂದಿರುವುದನ್ನು ಗಮನಿಸಿದ ಸಚಿವರು, ಇಲ್ಲಿ ಟೋಕನ್ ಸಿಸ್ಟಮ್ ಪಾಲಿಸುತ್ತಿಲ್ವಾ ಎಂದು ಸಬ್ ರಿಜಿಸ್ಟಾರ್ ಪಿ.ಶ್ರಿಕಾಂತ ಅವರನ್ನು ಪ್ರಶ್ನಿಸಿದರು. ಪಿ.ಶ್ರೀಕಾಂತ ಉತ್ತರಿಸಿ ಸಾರ್ವಜನಿಕರಿಗೆ ಪೋರ್ಟಲ್ ನಲ್ಲಿ ಸಮಯ ನೀಡಿದ್ದಂತೆ ಮೊದಲು ಬಂದವರಿಗೆ ಅದ್ಯತೆ ನೀಡಲಾಗುತ್ತಿದೆ ಎಂದರು. ಕಾವೇರಿ ತಂತ್ರಾಂಶದಲ್ಲಿ ಸಾರ್ವಜನಿಕರ ಆಸ್ತಿ ನೊಂದಣಿಗೆ ಸ್ವಯಂ ಸಮಯ ದಿನಾಂಕ ನಿಗದಿಪಡಿಸಲು ಅವಕಾಶ ನೀಡಲಾಗಿದೆ. ಅದರಂತೆ ಸಮಯ ನಿಗದಿ ಮಾಡಿಕೊಂಡು ನಿಗದಿತ ಸಮಯಕ್ಕೆ ಬರುವವರನ್ನು ಮೊದಲು ಆದ್ಯತೆ ನೀಡಬೇಕುಮ ಉದಾಹರಣೆಗೆ 10 ಗಂಟೆಗೆ ನೊಂದಣಿ ಸಮಯ ನೀಡಿದಾಗ ವ್ಯಕ್ತಿ 11 ಗಂಟೆಗೆ ಬಂದಲ್ಲಿ ಅಂತಹವರನ್ನು ಕೂಡಿಸಿ 11 ಗಂಟೆಗೆ ಸರಿಯಾದ ಸಮಯಕ್ಕೆ ಬಂದವರನ್ನು ಮೊದಲು…