Author: kannadanewsnow09

ಹಾವೇರಿ: ಉತ್ತರ ಕರ್ನಾಟಕದಲ್ಲಿ ರೈತರು ಬಿತ್ತನೆ ಪ್ರಾರಂಭ ಮಾಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರದ ಕೊರತೆ ಆಗಿದೆ. ಬೀಜದ ದರ ಹೆಚ್ಚಾಗಿದೆ, ಮಳೆ ಬಿದ್ದರೂ ರೈತರು ಬಿತ್ತನೆ ಮಾಡಲು ಸಾಧ್ಯವಾಗಿಲ್ಲ. ರಾಜ್ಯ ಸರ್ಕಾರ ಮುಂಗಾರು ಸಿದ್ದತೆಯಲ್ಲಿ ವಿಫಲವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಹಾವೇರಿಯಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲ ಇದ್ದರೂ ಕೃಷಿ ಇಲಾಖೆಯ ಫಾರ್ಮ್ ಗಳು, ಕೃಷಿ ಹಾಗೂ ತೋಟಗಾರಿಕೆ ವಿವಿಗಳ ಮೂಲಕ ಬೀಜೊತ್ಪಾದನೆಗೆ ಕ್ರಮ ಕೈಗೊಳ್ಳಬೇಕಿತ್ತು. ಉತ್ಪಾದನೆ ಮಾಡದಿದ್ದರೂ ಅಗತ್ಯ ಬಿತ್ತನೆ ಬೀಜಗಳನ್ನು ಆಮದು ಮಾಡಿಕೊಳ್ಳಬಹುದಿತ್ತು, ಆ ಕೆಲಸವನ್ನೂ ಸರ್ಕಾರ ಮಾಡಿಲ್ಲ. ಹೀಗಾಗಿ ಬಿತ್ತನೆ ಬೀಜದ ದರ ಹೆಚ್ಚಾಗಿದೆ. ದರ ಹೆಚ್ಚಾಗಿದೆ ಎಂದು ರೈತರು ಬಿತ್ತನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದರಿಂದ ಆಹಾರ ಉತ್ಪಾದನೆ ಕುಂಠಿತವಾಗುತ್ತದೆ. ಇವರು ಅನ್ನಭಾಗ್ಯ ಅಂತ ಹೇಳುತ್ತಾರೆ. ಅನ್ನಕ್ಕೆ ಮೊದಲು ಬೇಕಾಗಿರುವುದು ಬಿತ್ತನೆ ಬೀಜ ಎಂದು ಹೇಳಿದರು. ನಾವು ರೈತರಿಗೆ ಬಿತ್ತನೆ ಬೀಜ ಖರೀದಿಸಲು ಭೂಸಿರಿ ಅಂತ ಯೋಜನೆ ಮೂಲಕ…

Read More

ಬೆಂಗಳೂರು: ನಿಮ್ಮ ಕನ್ನಡ ನ್ಯೂಸ್ ನೌ ನಿನ್ನೆಯಂದು ಪ್ರಯಾಣಿಕರ ಊಟದ ಹೆಸರಿನಲ್ಲಿ ಭ್ರಷ್ಟಾಚಾರ: ಶಕ್ತಿಯಿಂದ KSRTCಗೆ ಭಿಕ್ಷಾಟನೆಯ ಸ್ಥಿತಿಯೇ ಎಂದು ಸಾರಿಗೆ ಮಂತ್ರಿಗೆ ನೆಟ್ಟಿಗರ ತರಾಟೆ ಅಂತ ಸುದ್ದಿ ಪ್ರಕಟಿಸಿತ್ತು. ಈ ಬಗ್ಗೆ ಕೆ ಎಸ್ ಆರ್ ಟಿಸಿ ಸ್ಪಷ್ಟನೆ ನೀಡಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಇಂದು ಕೆ ಎಸ್ ಆರ್ ಟಿಸಿಯಿಂದ ಸ್ಪಷ್ಟನಾ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ನಿಗಮದ ಸಾರಿಗೆಗಳನ್ನು ತಿಂಡಿ, ಊಟೋಪಚಾರ, ಪ್ರಯಾಣಿಕರ ನೈಸರ್ಗಿಕ ಕರೆ ಮತ್ತು ಲಘು ವಿಶ್ರಾಂತಿಗಾಗಿ ಮಾರ್ಗಬದಿಯ ಫಲಹಾರ ಮಂದಿರಗಳ ಬಳಿಯಲ್ಲಿ ನಿಲುಗಡೆ ನೀಡುವ ಪದ್ಧತಿ ಕಳೆದ‌ 20 ವರ್ಷಗಳಿಂದ ಚಾಲ್ತಿಯಲ್ಲಿರುತ್ತದೆ ಎಂಬುದಾಗಿ ತಿಳಿಸಿದೆ. ಸಾರಿಗೆಗಳನ್ನು ಮಾರ್ಗಬದಿಯ ಫಲಹಾರ ಮಂದಿರಗಳ ಬಳಿಯಲ್ಲಿ ನಿಲುಗಡೆ ನೀಡುವುದಕ್ಕೂ, ಶಕ್ತಿ ಯೋಜನೆಗೂ ಯಾವುದೇ ಸಂಬಂಧವಿರುವುದಿಲ್ಲ. ನಿಗಮದ ನಿಯಮಾವಳಿ ಪ್ರಕಾರ ಮಾರ್ಗಬದಿಯ ಫಲಹಾರ ಮಂದಿರಗಳನ್ನು ಪರಿವೀಕ್ಷಣೆ ನಡೆಸಿ, ಗುರುತಿಸಲು ಹಾಗೂ ಬಸ್ಸುಗಳ ನಿಲುಗಡೆಗಾಗಿ ಕರಾರು ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದೆ. ನಿಗಮವು ರಾಜ್ಯ / ಅಂತರರಾಜ್ಯ ಮಾರ್ಗಗಳಲ್ಲಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಿ ಆದೇಶಿಸಿದೆ. ಇಂದು ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ರಾಜ್ಯ ಸರ್ಕಾರದ ಅಧೀನ ಕಾರ್ಯದಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 31.05.2024 ರಲ್ಲಿ ಜಲ (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಅಧಿನಿಯಮ, 1974ರ ಪ್ರಕರಣ 6 (1) (ಜಿ) ರಡಿ ಪುದತ್ತವಾದ ಅಧಿಕಾರ ಚಲಾಯಿಸಿ ಡಾ.ಶಾಂತ್ ಎ. ತಿಮ್ಮಯ್ಯ, ಅಧ್ಯಕ್ಷರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರನ್ನು ಮಂಡಳಿಯ ಸದಸ್ಯ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅನರ್ಹಗೊಳಿಸಿ, ತತ್ಪರಿಣಾಮವಾಗಿ ಅವರನ್ನು ಮಂಡಳಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜಲ (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ, 1974ರ ಅನುಚ್ಛೇದ 4(2)ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಶ್ರೀ. ಬಿ.ಪಿ.ರವಿ, ಭಾ.ಅ.ಸೇ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ಜೀವಿಪರಿಸ್ಥಿತಿ…

Read More

ನವದೆಹಲಿ: ಟೆಲಿವಿಷನ್ ಚಾನೆಲ್ ಗಳಲ್ಲಿ ಯಾವುದೇ ಲೋಕಸಭಾ ಎಕ್ಸಿಟ್ ಪೋಲ್ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧರಿಸಿದೆ. ಟಿಆರ್ ಪಿಗಾಗಿ ಊಹಾಪೋಹಗಳು ಮತ್ತು ಕೆಸರೆರಚಾಟದಲ್ಲಿ ತೊಡಗಲು ಬಯಸುವುದಿಲ್ಲ ಎಂದು ಹೇಳಿದೆ. ಮತದಾರರು ತಮ್ಮ ಮತಗಳನ್ನು ಚಲಾಯಿಸಿದ್ದಾರೆ ಮತ್ತು ಅವರ ತೀರ್ಪು ಸುರಕ್ಷಿತವಾಗಿದೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಮಾಧ್ಯಮ ವಿಭಾಗದ ಅಧ್ಯಕ್ಷ ಪವನ್ ಖೇರಾ ಹೇಳಿದರು. ಜೂನ್ 4ರಂದು ಫಲಿತಾಂಶ ಹೊರಬೀಳಲಿದೆ. ಅದಕ್ಕೂ ಮೊದಲು, ಟಿಆರ್ಪಿಗಾಗಿ ಊಹಾಪೋಹಗಳು ಮತ್ತು ಕೆಸರೆರಚಾಟದಲ್ಲಿ ತೊಡಗಲು ನಮಗೆ ಯಾವುದೇ ಕಾರಣ ಕಾಣುತ್ತಿಲ್ಲ” ಎಂದು ಅವರು ಎಕ್ಸ್ನಲ್ಲಿ ಹಂಚಿಕೊಂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ. https://twitter.com/ANI/status/1796542256280994163 ಚುನಾವಣೋತ್ತರ ಸಮೀಕ್ಷೆಗಳ ಚರ್ಚೆಗಳಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಯಾವುದೇ ಚರ್ಚೆಯ ಉದ್ದೇಶವು ಜನರಿಗೆ ತಿಳಿಸುವುದಾಗಿರಬೇಕು. ಜೂನ್ 4 ರಿಂದ ನಾವು ಸಂತೋಷದಿಂದ ಚರ್ಚೆಗಳಲ್ಲಿ ಭಾಗವಹಿಸುತ್ತೇವೆ” ಎಂದು ಖೇರಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಕ್ಷದೊಳಗಿನ ಸಮಾಲೋಚನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. https://kannadanewsnow.com/kannada/minister-ramalinga-reddy-hits-back-at-pralhad-joshi-for-saying-that-kannadigas-are-rearing-keralites-in-taxes/ https://kannadanewsnow.com/kannada/breaking-court-orders-sit-custody-of-mp-prajwal-revanna-2/

Read More

ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಿದ್ದರಾಮಯ್ಯ ಸಾಕುತ್ತಿದ್ದಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟನೆ ನೀಡಿರುವಂತ ಅವರು, ಕೇಂದ್ರ ಸರ್ಕಾರದಲ್ಲಿಯೇ ಇದ್ದು, ಪ್ರಧಾನ‌ ಮಂತ್ರಿ ಮೋದಿಯವರ ನೀತಿ‌ ನಿಯಮಗಳ ಬಗ್ಗೆಯೇ ಅರಿವಿಲ್ಲದೆ ಮಾತನಾಡುತ್ತಿರುವ ಪ್ರಹ್ಲಾದ್ ಜೋಷಿ ಅವರೇ, ರಾಜ್ಯದ ವಿರೋಧ ಪಕ್ಷದ ನಾಯಕರಾದ ಅಶೋಕ್,‌ಬಿ.ಜೆ.ಪಿ ಯ ರಾಜ್ಯಧ್ಯಕ್ಷಾದ ವಿಜಯೇಂದ್ರ ಅವರುಗಳೇ ನಿಜಕ್ಕೂ ನೀವುಗಳು ತಮ್ಮ ಬುದ್ಧಿವಂತಿಕೆಯನ್ನು ಅಡವಿಟ್ಟಿರುವ ಹಾಗೆ ಕಾಣಿಸುತ್ತಿರುವುದು ಸಾಬೀತಾಗಿದೆ‌. ಯಾವುದೇ ಒಂದು ವಿಷಯದ ಬಗ್ಗೆ ಸಮಗ್ರ ಮಾಹಿತಿಯನ್ನೇ ಪಡೆಯದೆ, ಟ್ವೀಟ್ ಮಾಡುತ್ತೀರೋ ನೀವುಗಳು ಜನರ ಮುಂದೆ ತಮಗೆ ಅರಿವಿಲ್ಲ ಎಂಬುದನ್ನು ಪದೇ ಪದೇ ತೋರಿಸಿಕೊಳ್ಳುವ ಖಯಾಲಿಗೆ ಬಿದ್ದಂತಿದೆ ಎಂದಿದ್ದಾರೆ. ನಾವು ಸಾರ್ವಜನಿಕರಿಗೆ ಸರಿಯಾದ ಮತ್ತು ಸತ್ಯವನ್ನು ತಿಳಿಸುವ ಬದ್ಧತೆ ಮತ್ತು‌ ಜವಾಬ್ದಾರಿಯನ್ನು ಹೊಂದಿದ್ದೇವೆ . ಆದ್ದರಿಂದ ತಮ್ಮ ಸಾವಿರ ಸುಳ್ಳಿನ ಟ್ಟೀಟ್ ಗಳಿಗೂ ಕೂಡ…

Read More

ಶಿವಮೊಗ್ಗ: ಅಪಘಾತವಾಗಿದ್ರೇ ನಾಮುಂದು, ತಾಮುಂದು ಅಂತ ನೋಡಿ, ಅಯ್ಯೋ ಅಂತ ಮರುಗೋರೋ ಹೆಚ್ಚು. ಇನ್ನೂ ಕೆಲವರು ಮೊಬೈಲ್ ಕ್ಯಾಮರಾ ಆನ್ ಮಾಡಿ, ವೀಡಿಯೋ ಮಾಡಿಕೊಳ್ಳುದು ಹುಚ್ಚು. ಇದರ ನಡುವೆ ಅಪಘಾತದಂತ ಸಂದರ್ಭದಲ್ಲಿ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿದ್ರೆ ಅಮೂಲ್ಯ ಜೀವ ಉಳಿಸಬಹುದು ಎಂಬ ಧ್ಯೇಯ ಹೊಂದಿರೋ, ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಮಾತ್ರ, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಸಿಗಂದೂರು ದೇವಸ್ಥಾನಕ್ಕೆ ತೆರಳುತ್ತಿದ್ದ ದಂಪತಿಗಳಿಗೆ ಅಪಘಾತದಲ್ಲಿ ಗಾಯ ಸಿಗಂದೂರು ದೇವಸ್ಥಾನಕ್ಕೆ ಬೈಕ್ ನಲ್ಲಿ ದಂಪತಿಗಳಿಬ್ಬರು ತೆರಳುತ್ತಿದ್ದರು. ಈ ವೇಳೆ ಸಾಗರ-ಆನಂದಪುರ ಮಾರ್ಗ ಮಧ್ಯದ ಹೊಸಗುಂದ ರಸ್ತೆಯ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ದಂಪತಿಗಳಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರ್ ನಿಲ್ಲಿಸಿ ಅಪಘಾತದಲ್ಲಿ ಗಾಯಗೊಂಡವರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ನೆರವು ಇದೇ ಮಾರ್ಗದಲ್ಲಿ ಸಾಗುತ್ತಿದ್ದಂತ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಪಘಾತದ ಘಟನಾ ಸ್ಥಳಕ್ಕೆ ತೆರಳಿ, ದಂಪತಿಗಳನ್ನು ತುರ್ತು ಚಿಕಿತ್ಸೆಗಾಗಿ ತಮ್ಮ ಬೆಂಗಾವಲು ವಾಹದಲ್ಲಿ…

Read More

ಶಿವಮೊಗ್ಗ: ಜೂನ್.1ರ ನಾಳೆ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಗಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸೊರಬ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಭು ಸಾಹುಕಾರ್ ಅವರು, ದಿನಾಂಕ 01-06-2024ರ ನಾಳೆ ಬೆಳಿಗ್ಗೆ 9 ಗಂಟೆಯಿಂದ 3 ಗಂಟೆಯವರೆಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸೊರಬ ಇಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದಿದ್ದಾರೆ. ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು ಶಿವಮೊಗ್ಗ, ರಕ್ತನಿಧಿ ಘಟ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಶಿವಮೊಗ್ಗ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸೊರಬ, ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ, ಸೊರಬ ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಸೊರಬ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಯಾರು ರಕ್ತದಾನ ಮಾಡಬಹುದು? ಕನಿಷ್ಠ 45 ಕೆಜಿ ದೇಹ ತೂಕ ಇರುವಂತ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದಾಗಿದೆ. 18 ರಿಂದ 60 ವರ್ಷದ ಒಳಗಿನ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರವು ಮತ್ತೊಂದು ಹಗರಣವನ್ನು ವಿಶೇಷ ತನಿಖಾ ದಳದ ಅಧಿಕಾರಿಗಳಿಗೆ ವಹಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಕೇಸ್ ಆಗಿದೆ. ಇಂದು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕರಾದ ಚಂದ್ರಶೇಖರ್ ಪಿ ರವರು ಅವರಾಹ್ನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅನುದಾನ ಹಣವು ದುರುಪಯೋಗವಾಗಿರುವುದಾಗಿ ಆರೋಪಿಸಿ ಡೆತ್ ನೋಟ್ ಬರೆದು, ದಿನಾಂಕ: 26.05.2024 ರಂದು ಆತ್ಮಹತ್ಯೆಗೆ ಶರಣಾಗಿರುವುದಾಗಿ ಮೃತರ ಪತ್ನಿಯು ನೀಡಿದ ದೂರಿನ ಮೇರೆಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪುಕರಣ ದಾಖಲಾಗಿರುತ್ತದೆ ಎಂದಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಮುಖ್ಯ ನಿಬಂಧಕರಾದ ಎ. ರಾಜಶೇಖರ್ ರವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ…

Read More

ಶಿವಮೊಗ್ಗ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ.ಚಂದ್ರಶೇಖರನ್‌ ಅವರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬಿಜೆಪಿಯಿಂದ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ. ಸಚಿವರು ರಾಜೀನಾಮೆ ನೀಡಿ ನ್ಯಾಯ ಸಿಗುವವರೆಗೂ ಹೋರಾಟ ಮಾಡಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಮೃತ ಪಿ.ಚಂದ್ರಶೇಖರನ್‌ ಅವರ ಕುಟುಂಬದವರನ್ನು ಆರ್‌.ಅಶೋಕ ಭೇಟಿಯಾಗಿ ಸಾಂತ್ವನ ಹೇಳಿದ ಅವರು, ಸರಕಾರದ ಮೊದಲ ವಿಕೆಟ್ ಪತನ ಖಚಿತ ಎಂದು ಭವಿಷ್ಯ ನುಡಿದರು. ಕಾಂಗ್ರೆಸ್‌ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರನ್‌ ಅವರ ಕುಟುಂಬ ಬೀದಿಗೆ ಬಂದಿದೆ. ಇಲ್ಲಿಗೆ ಬಂದ ಸಚಿವರು ಯಾವುದೇ ವ್ಯವಸ್ಥೆ ಮಾಡಿಲ್ಲ. ಯಾವುದೇ ಹಿರಿಯ ಅಧಿಕಾರಿಗಳು, ಗೃಹ ಸಚಿವರು ನೆರವು ನೀಡಿಲ್ಲ. 1 ಕೋಟಿ ರೂ. ಗೂ ಅಧಿಕ ಅಕ್ರಮ ನಡೆದಾಗ ಅದು ಸಿಬಿಐ ತನಿಖೆಗೆ ಒಳಪಡುತ್ತದೆ. ಬ್ಯಾಂಕ್‌ನವರು ಸಿಬಿಐಗೆ ವಹಿಸಿ ಎಂದು ಮನವಿ ಮಾಡಿದ್ದಾರೆ. ಇದು ಸಿಬಿಐಗೆ ಹೋಗುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಯದಿಂದಾಗಿ ನಿರಂತರ ಸಭೆಗಳನ್ನು ನಡೆಸುತ್ತಿದ್ದಾರೆ.…

Read More

ನವದೆಹಲಿ: ಮಾರ್ಚ್ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 7.8 ರಷ್ಟು ಏರಿಕೆಯಾಗಿದ್ದು, ವಾರ್ಷಿಕ ಬೆಳವಣಿಗೆಯ ದರವನ್ನು ಶೇಕಡಾ 8.2 ಕ್ಕೆ ಏರಿಸಿದೆ ಎಂದು ಇಂದು ಬಿಡುಗಡೆಯಾದ ಅಧಿಕೃತ ಅಂಕಿ ಅಂಶಗಳು ತಿಳಿಸಿವೆ. ಜನವರಿ-ಮಾರ್ಚ್ ಅವಧಿಯಲ್ಲಿನ ಬೆಳವಣಿಗೆಯು ಡಿಸೆಂಬರ್ ತ್ರೈಮಾಸಿಕದಲ್ಲಿ ಶೇಕಡಾ 8.6 ರ ವಿಸ್ತರಣೆಗಿಂತ ಕಡಿಮೆಯಾಗಿದೆ. 2022-23ರ ಹಣಕಾಸು ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇಕಡಾ 6.2 ರಷ್ಟು ವಿಸ್ತರಿಸಿದೆ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್ಎಸ್ಒ) ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ. ಅಂಕಿಅಂಶಗಳ ಪ್ರಕಾರ, ಆರ್ಥಿಕತೆಯು 2022-23ರಲ್ಲಿ ಶೇಕಡಾ 7 ರಷ್ಟು ಬೆಳವಣಿಗೆಗೆ ಹೋಲಿಸಿದರೆ 2023-24 ರಲ್ಲಿ ಶೇಕಡಾ 8.2 ರಷ್ಟು ವಿಸ್ತರಿಸಿದೆ. ಎನ್ಎಸ್ಒ ತನ್ನ ರಾಷ್ಟ್ರೀಯ ಖಾತೆಗಳ ಎರಡನೇ ಮುಂಗಡ ಅಂದಾಜಿನಲ್ಲಿ 2023-24ರಲ್ಲಿ ದೇಶದ ಬೆಳವಣಿಗೆಯನ್ನು ಶೇಕಡಾ 7.7 ಕ್ಕೆ ನಿಗದಿಪಡಿಸಿತ್ತು. 2024 ರ ಮೊದಲ ಮೂರು ತಿಂಗಳಲ್ಲಿ ಚೀನಾ ಶೇಕಡಾ 5.3 ರಷ್ಟು ಆರ್ಥಿಕ ಬೆಳವಣಿಗೆಯನ್ನು ದಾಖಲಿಸಿದೆ. https://kannadanewsnow.com/kannada/google-news-google-discover-down-for-millions-of-users-in-india-world/ https://kannadanewsnow.com/kannada/breaking-court-orders-sit-custody-of-mp-prajwal-revanna-2/

Read More