Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ  ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಕೇಂದ್ರ ಸರ್ಕಾರದಿಂದ ಹಣ ಕೊಟ್ಟಿದ್ದಾರೆ. ನಮ್ಮ ರಾಜ್ಯದ ತೆರಿಗೆ ಹಣ ಕೊಟ್ಟಿದ್ದಾರೆಯೆ ವಿನಃ ಬಿ.ವೈ.ರಾಘವೇಂದ್ರ, ವಿಜಯೇಂದ್ರ ಮನೆಯಿಂದ ಹಣ ಕೊಟ್ಟು ಸೇತುವೆ ಮಾಡಿಲ್ಲ. ಆದರೆ ವಾರಕ್ಕೊಮ್ಮೆ ಬಂದು ನಾನೇ ಸೇತುವೆ ಮಾಡಿದ್ದು ಎಂದು ಬಿಂಬಿಸಿಕೊಳ್ಳುತ್ತಿರುವ ಸಂಸದ ರಾಘವೇಂದ್ರ ವರ್ತನೆ ಹಾಸ್ಯಾಸ್ಪದ ಎಂಬುದಾಗಿ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಗೋಪಾಲಕೃಷ್ಣ ಬೇಳೂರು ವಾಗ್ಧಾಳಿ ನಡೆಸಿದ್ದಾರೆ. ಇಂದು ಶಿವಮೊಗ್ಗದ ಸಾಗರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತುಮರಿ ಸೇತುವೆ ಪಕ್ಕ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ವೈ.ವಿಜಯೇಂದ್ರ ಟೆಂಟ್ ಹಾಕಿಕೊಂಡು ಕುಳಿತುಕೊಂಡು, ಸೇತುವೆ ಮಾಡಿದ್ದು ನಾವು ಎಂದು ಬಂದವರಿಗೆಲ್ಲಾ ಪ್ರಚಾರ ಮಾಡುವುದು ಒಳ್ಳೆಯದು ಎಂಬುದಾಗಿ ವ್ಯಂಗ್ಯವಾಡಿದರು. ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ಮೊದಲು ನಾನು ಮನವಿ ಮಾಡಿದ್ದೇ. ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾಗಿದ್ದಾಗ ಸಿಗಂದೂರು ಕ್ಷೇತ್ರದಲ್ಲಿ ಸೇತುವೆ ಮಾಡಿಸಿಕೊಡುವುದಾಗಿ ಮಾತು ಕೊಟ್ಟಿದ್ದರು. ನಂತರ ಸಂಸದರಾದ ಮೇಲೆ ನಿತಿನ್ ಗಡ್ಕರಿ ಮೇಲೆ ಒತ್ತಡ ತಂದು ಸೇತುವೆ…

Read More

ಶಿವಮೊಗ್ಗ: ಸಾಗರ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಯಲ್ಲಿ ಸಂಸದರ ಹಸ್ತಕ್ಷೇಪ ಸಹಿಸುವುದಿಲ್ಲ. ನಿಯಮದಂತೆ ನಗರವ್ಯಾಪ್ತಿಯಲ್ಲಿ ರಸ್ತೆ, ಚರಂಡಿ ಕಾಮಗಾರಿಯನ್ನು ಅತಿಶೀಘ್ರವಾಗಿ ಮುಗಿಸಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಂಬುದಾಗಿ ಒತ್ತಾಯಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 206 ಅಗಲೀಕರಣಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದಂತ ಅವರು, ಕೆಲವರು ಸಂಸದರ ಬಳಿ ಹೋಗಿ ತಮ್ಮ ಜಾಗ ಉಳಿಸಿಕೊಳ್ಳಲು ಮನವಿ ಮಾಡಿದ್ದು ನನ್ನ ಗಮನಕ್ಕೆ ಬಂದಿದೆ. ಇಂತಹ ಶಾಶ್ವತವಾದ ಯೋಜನೆ ಮಾಡುವಾಗ ಯಾರನ್ನೋ ಉಳಿಸಲು ಹೋಗಿ ಊರಿನ ಅಂದ ಹಾಳಾಗುವುದನ್ನು ನಾನು ಸಹಿಸುವುದಿಲ್ಲ ಎಂದರು. ಕಾಮಗಾರಿ ಪ್ರಾರಂಭವಾಗಿ ಮರ‍್ನಾಲ್ಕು ವರ್ಷ ಕಳೆದಿದೆ. ಜುಲೈ 10ರೊಳಗೆ ಕಾಮಗಾರಿ ಮುಗಿಸುವ ಆದೇಶವಿದ್ದರೂ ನೀವು ವಿಳಂಬ ಮಾಡುತ್ತಿದ್ದೀರಿ. ಅಗಲೀಕರಣ ಕಾಮಗಾರಿಯಲ್ಲಿ ರಸ್ತೆ, ಡ್ರೈನೇಜ್ ಬಗ್ಗೆ ಸಾಕಷ್ಟು ದೂರುಗಳಿವೆ. ನಿಮ್ಮ ಲೋಪದಿಂದ ನಾನು ಕೆಟ್ಟ ಹೆಸರು ತೆಗೆದುಕೊಳ್ಳಬೇಕಾ ಎಂದು ಪ್ರಶ್ನಿಸಿದ…

Read More

ಬೆಂಗಳೂರು: ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲ ಶಾಸಕರು ಮುಖ್ಯಮಂತ್ರಿಯಾಗಲು ಹೊರಟಿದ್ದಾರೆ. ಸಿದ್ದರಾಮಯ್ಯನವರು ಸಿಎಂ ಆಗಿಯೇ ಇರುತ್ತಾರೆಂದು ಪಕ್ಷದ ವರಿಷ್ಠರು ಹೇಳಬೇಕು. ಆದರೆ ಭಯದಿಂದ ಸ್ವತಃ ಸಿದ್ದರಾಮಯ್ಯನವರೇ ಅದನ್ನು ಪದೇ ಪದೆ ಹೇಳುತ್ತಿದ್ದಾರೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎನ್ನುವ ಡಿ.ಕೆ.ಶಿವಕುಮಾರ್‌ ಅವರೇ ಈ ರೀತಿಯ ಸಂದೇಶ ನೀಡುತ್ತಿದ್ದಾರೆ. ಸರ್ಕಾರದಲ್ಲಿ ಹಣವಿಲ್ಲದೆ, ಅಭಿವೃದ್ಧಿ ಶೂನ್ಯವಾಗಿ ಶಾಸಕರು ಬೇಸರಗೊಂಡಿದ್ದಾರೆ. ಜನರಿಗೆ ವಿಶ್ವಾಸ ಹೊರಟುಹೋಗಿದೆ ಎಂದರು. 2028 ರವರೆಗೆ ಸಿದ್ದರಾಮಯ್ಯನವರೇ ಸಿಎಂ ಎಂದು ಡಿ.ಕೆ.ಶಿವಕುಮಾರ್‌ ಹೇಳಲಿ. ಅದನ್ನು ಆರನೇ ಗ್ಯಾರಂಟಿ ಎಂದು ಅಂದುಕೊಂಡು ಸುಮ್ಮನಾಗುತ್ತೇವೆ ಎಂದರು. ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು…

Read More

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಬಗ್ಗೆ ಅಸಂಸದೀಯ ಪದವನ್ನು ಬಿಜೆಪಿ ಎನ್.ರವಿಕುಮಾರ್ ಬಳಕೆ ಮಾಡಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಪೊಲೀಸರಿಗೆ ದೂರು ನೀಡಿದೆ. ಇಂದು ವಿಧಾನಸೌಧ ಪೊಲೀಸ್ ಠಾಣೆಗೆ ತೆರಳಿದಂತ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಅವರು ಬಿಜೆಪಿಯ ಎನ್ ರವಿಕುಮಾರ್ ವಿರುದ್ಧ ದೂರು ನೀಡಿದ್ದಾರೆ. ಎನ್ ರವಿಕುಮಾರ್ ಅವರು ಸಿಎಸ್ ಬಗ್ಗೆ ಅಸಂಸದೀಯ ಪದಗಳನ್ನು ಬಳಕೆ ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. https://kannadanewsnow.com/kannada/the-state-cabinet-approved-the-name-of-manmohan-singh-for-the-bengaluru-city-university/ https://kannadanewsnow.com/kannada/breaking-explosion-in-telangana-chemical-factory-death-toll-rises-to-40-telangana-factory-blast/

Read More

ಬೆಂಗಳೂರು: ಡಿಪ್ಲೊಮಾ ಅಭ್ಯರ್ಥಿಗಳಿಗೆ ಎಂಜಿನಿಯರಿಂಗ್‌ನ 2ನೇ ವರ್ಷ ಅಥವಾ 3ನೇ ಸೆಮಿಸ್ಟರ್‌ಗೆ ನೇರ ಪ್ರವೇಶ ಕಲ್ಪಿಸುವ ಸಂಬಂಧ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 3ರಿಂದ ಆರಂಭಿಸಲಿದ್ದು, ಫಲಿತಾಂಶವನ್ನು ಜುಲೈ 9ರಂದು ಪ್ರಕಟಿಸಲಿದೆ. ಅಭ್ಯರ್ಥಿಗಳು ತಮಗೆ ಬೇಕಾದ ಕೋರ್ಸ್‌ ಹಾಗೂ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು, ಆದ್ಯತಾ ಕ್ರಮದಲ್ಲಿ ದಾಖಲಿಸಲು ಜುಲೈ 5ರಂದು ಬೆಳಿಗ್ಗೆ 11ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ. ಜುಲೈ 7ರಂದು ಅಣಕು ಸೀಟು ಹಂಚಿಕೆ ಫಲಿತಂಶವನ್ನು ಪ್ರಕಟಿಸಲಾಗುತ್ತದೆ. ಬಳಿಕ ಅಭ್ಯರ್ಥಿಗಳು ತಮ್ಮ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಲು ಜುಲೈ 8ರಂದು ಸಂಜೆ 4ಗಂಟೆವರೆಗೆ ಅವಕಾಶ ಇರುತ್ತದೆ. ಅಂತಿಮವಾಗಿ ಜುಲೈ 9ರಂದು ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದರು. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಛಾಯ್ಸ್‌ ಅನ್ನು ಆಯ್ಕೆ ಮಾಡಲು ಜು.10ರಿಂದ 13ರವರೆಗೆ ಅವಕಾಶ ಇರುತ್ತದೆ. ಛಾಯ್ಸ್-1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಚಲನ್‌ ಡೌನ್‌ ಲೋಡ್‌ ಮಾಡಿಕೊಳ್ಳಬಹುದು.…

Read More

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಗಳ ಪ್ರಕರಣಗಳು ಮುಂದುವರೆದಿವೆ. ಇಂದು ಮತ್ತೊಬ್ಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ತಾಲ್ಲೂಕಿನ ಮುಟ್ನಳ್ಳಿ ಗ್ರಾಮ ಸಣ್ಣಪ್ಪಶೆಟ್ಟಿ(52) ಎಂಬುವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎದೆ ನೋವಿನಿಂದ ಕುಸಿದು ಬಿದ್ದು ಸಣ್ಣಪ್ಪ ಶೆಟ್ಟಿ ಮನೆ ಮುಂದೆಯೇ ಸಾವನ್ನಪ್ಪಿದ್ದಾರೆ. ರೈತ ಸಣ್ಣಪ್ಪಶೆಟ್ಟಿ ಎದೆ ನೋವು ಅಂತ ಮನೆಯವರಿಗೆ ತಿಳಿಸಿದ್ದಾರೆ. ಕೂಡಲೇ 108ಗೆ ಕರೆ ಮಾಡಿ ಸಹೋದರ ತಿಳಿಸಿದ್ದಾರೆ. ಆಂಬುಲೆನ್ಸ್ ಮನೆ ಬಳಿ ಬರುತ್ತಿದ್ದಂತೆ ಸಣ್ಣಪ್ಪ ಶೆಟ್ಟಿ ಮೃತಪಟ್ಟಿದ್ದಾರೆ. ಹೀಗಾಗಿ ಹಾಸನ ಜಿಲ್ಲೆಯಲ್ಲಿ ಒಂದೂವರೆ ತಿಂಗಳಿನಲ್ಲಿ 27 ಮಂದಿ ಸಾವನ್ನಪ್ಪಿದಂತೆ ಆಗಿದೆ. https://kannadanewsnow.com/kannada/attention-railway-passengers-this-special-express-train-service-has-been-extended/ https://kannadanewsnow.com/kannada/the-clarity-in-the-conditions-and-instructions-for-kptcl-is-not-in-the-order-je-transfer-confusion-this-year-too/

Read More

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೇಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್, ನಾರಂಗಿ ಹಾಗೂ ಮಾಲ್ಡಾ ಟೌನ್ ನಡುವೆ ಈ ಹಿಂದೆ ಚಲಿಸುತ್ತಿದ್ದ ವಿಶೇಷ ರೈಲು ಸೇವೆಗಳನ್ನು ಈಗಿರುವ ಸಮಯ, ನಿಲುಗಡೆಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಸಲು ನಿರ್ಧರಿಸಿದೆ. ವಿವರಗಳು ಕೆಳಕಂಡಂತಿವೆ: • ಎಸ್ಎಂವಿಟಿ ಬೆಂಗಳೂರು – ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ: 1. ರೈಲು ಸಂಖ್ಯೆ 06539 ಎಸ್ಎಂವಿಟಿ ಬೆಂಗಳೂರು – ಬೀದರ್ ಎಕ್ಸ್ ಪ್ರೆಸ್ ವಿಶೇಷ ರೈಲು ಶುಕ್ರವಾರ ಮತ್ತು ಭಾನುವಾರಗಳಂದು ಮುಂದುವರಿಯಲಿದೆ. ಈ ಹಿಂದೆ 29.06.2025 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು, ಈಗ ಈ ಸೇವೆಯನ್ನು 04.07.2025 ರಿಂದ 31.08.2025 ರವರೆಗೆ ವಿಸ್ತರಿಸಲಾಗಿದೆ. 2. ರೈಲು ಸಂಖ್ಯೆ 06540 ಬೀದರ್ – ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು ಶನಿವಾರ ಮತ್ತು ಸೋಮವಾರಗಳಂದು ಮುಂದುವರಿಯಲಿದೆ. ಈ ಹಿಂದೆ 30.06.2025 ರವರೆಗೆ ಕಾರ್ಯನಿರ್ವಹಿಸಲು ತಿಳಿಸಲಾಗಿತ್ತು, ಈಗ ಈ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅತೀವ ಬ್ರಷ್ಟಾಚಾರದ ಮುಳುಗಿದ್ದು, ವಿಧಾನಸಭೆ ಕ್ಷೇತ್ರಗಳ ಅಭಿವೃದ್ಧಿಗೆ ಬಿಡಿಗಾಸು ಕೊಡಲು ಹಣವಿಲ್ಲದ ದುಸ್ಥಿತಿಯಲ್ಲಿ ಇದೆ ಎಂದು ಜೆಡಿಎಸ್ ಆರೋಪಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಂಗಳವಾರ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ನೇತೃತ್ವದಲ್ಲಿ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರದ ಆಡಳಿತದಲ್ಲಿನ ಭ್ರಷ್ಟಾಚಾರ, ಲಂಚಗುಳಿತನ ಹಾಗೂ ಆಡಳಿತ ವೈಫಲ್ಯದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ದಿವಾಳಿಯಾಗಿದೆ ಎಂದು ಬೇಸರಗೊಂಡು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರುಗಳೇ ಟೀಕಾ ಪ್ರಹಾರ ಮಾಡುತ್ತಿದ್ದು, ಇದೇ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರ ಗಮನ ಸೆಳೆಯಲಾಗುವುದು ಎಂದು ಅವರು ಹೇಳಿದರು. ರಾಜ್ಯದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಯಾಗಿದೆ…

Read More

ಚಿಕ್ಕಬಳ್ಳಾಪುರ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಂದಿ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಹೆಸರು ಮರುನಾಮಕರಣಕ್ಕೆ ಅಸ್ತು ಎಂದಿದೆ. ಇದಲ್ಲದೇ ಇತರೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, 2023ರಲ್ಲಿ ಅಧಿಕಾರಕ್ಕೆ ಬಂದಮೇಲೆ ಒಂದು ತೀರ್ಮಾನ ಮಾಡಿದ್ವು. ರೆವಿನ್ಯೂ ವಲಯಗಳಲ್ಲಿ ಕ್ಯಾಬಿನೆಟ್ ಮಾಡಬೇಕಂತ ತೀರ್ಮಾನ ಮಾಡಿದ್ವು. ಗುಲ್ಬರ್ಗ ವಿಭಾಗದಲ್ಲಿ ಮಾಡಿದ್ದೇವೆ. ಮೈಸೂರಿನ ಚಾಮರಾಜನಗರ ಜಿಲ್ಲೆಯಲ್ಲಿ ಮಾಡಲಾಗಿದೆ. ಬೆಳಗಾವಿ ಡಿವಿಜನ್ ಕ್ಯಾಬಿನೆಟ್ ನ ಬಿಜಾಪುರದಲ್ಲಿ ಮಾಡಬೇಕಂತ ತೀರ್ಮಾನ‌ ಮಾಡಲಾಗಿದೆ. ನಾಳೆ ಚಿಕ್ಕಬಳ್ಳಾಪುರದ ಮಂತ್ರಿಗಳು ವಿದೇಶಕ್ಕೆ ಹೋಗ್ತಿದ್ದಾರೆ. ಅದಕ್ಕೆ ಇವತ್ತೆ ಕ್ಯಾಬಿನೆಟ್ ಮಾಡ್ತಿದ್ದೇವೆ. ನಾನು ಹೋಗೊದಕ್ಕೆ ಅನುಮತಿ ಕೊಟ್ಟಿದ್ದೇನೆ ಎಂದರು. ಇಂದು ನಂದಿಬೆಟ್ಟದಲ್ಲಿ ಬೆಂಗಳೂರು ರವೆನ್ಯೂ ಡಿವಿಜನ್ ಸಭೆ ನಡೆಸಲಾಯಿತು. ಬೆಂಗಳೂರು ಡಿವಿಜನ್ ವಿಚಾರಗಳನ್ನ ಚರ್ಚೆ ಮಾಡಿದ್ದೇವೆ. ಬೇರೆ ಜಿಲ್ಲೆಗಳದ್ದು ತುರ್ತು ಇದ್ರೆ ಚರ್ಚೆ ಮಾಡಲಾಗುತ್ತೆದೆ. 48 ವಿಷಯಗಳನ್ನ ಚರ್ಚೆ ಮಾಡಿದ್ದೇವೆ. ಸುಮಾರು…

Read More

ಕಷ್ಟಪಟ್ಟು ಮಾಡಿದ ಸಾಲವನ್ನೆಲ್ಲಾ ತೀರಿಸಲಾಗದೆ ಪರದಾಡುತ್ತಿರುವವರಿಗೆ ಇಂದಿನ ಅದ್ಭುತ ದಿನ ಬಂದಿದೆ. ಇಂದು ಮಂಗಳವಾರ, ಗುರುವಾರ ಸಾಲ ಮರುಪಾವತಿಗೆ ಉತ್ತಮ ದಿನ. ಈ ದಿನದ ಜೊತೆಗೆ ಅಷ್ಟಮಿ ತಿಥಿ ಕೂಡ ಇಂದು ಸಂಜೆ ಹುಟ್ಟಲಿದೆ. ಕಾಲದ ದೃಷ್ಟಿಯಿಂದ ಇಂದು 2.07.25 ಸಂಜೆ 6:50ಕ್ಕೆ ಅಷ್ಟಮಿ ತಿಥಿ ಹುಟ್ಟಿದೆ. ನಾಳೆ 3.07.25 ಗುರುವಾರ ಸಂಜೆ 6:55 ರವರೆಗೆ ಅಷ್ಟಮಿ ತಿಥಿ ಮಾನ್ಯವಾಗಿದೆ. ನಾಳೆ ಎಲ್ಲ ದೇವಸ್ಥಾನಗಳಲ್ಲಿ ಅಷ್ಟಮಿ ತಿಥಿ ಪೂಜೆ ನಡೆಯಲಿದೆ. ನಾಳೆ ಸಂಜೆ ದೇವಸ್ಥಾನಕ್ಕೆ ಹೋಗಿ ದೀಪ ಹಚ್ಚಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ.…

Read More