Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮೇಲೆ ನಿಗಾ ಇಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -24 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಳೆದ 3 ವರ್ಷಗಳಲ್ಲಿ 6 ಸಾವಿರಕ್ಕೂ ಹೆಚ್ಚು ಡ್ರೈವಿಂಗ್ ಲೈಸೆನ್ಸ್ಗಳನ್ನು ಅಮಾನತು ಮಾಡಲಾಗಿದೆ. ಎನ್ಸಿಆರ್ಬಿ ಅಂಕಿಅಂಶಗಳ ಪ್ರಕಾರ ಬೈಕ್ ಅಪಘಾತಗಳಿಂದ ಅತ್ಯಂತ ಹೆಚ್ಚು ಮರಣಗಳಾಗಿವೆ. ಆದ ಕಾರಣ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು ಎಂದರು. ಜೀವನದಲ್ಲಿ ಧೈರ್ಯ ಇರಬೇಕು ಆದರೆ ಭಂಡತನ ಇರಬಾರದು. ಜೀವ ಅಮೂಲ್ಯವಾದುದು, ಒಮ್ಮೆ ಹೋದ ಜೀವ ಮತ್ತೆ ಬರುವುದಿಲ್ಲ. ಸಂಚಾರಿ ನಿಯಮ ಪಾಲನೆಯ ಬಗ್ಗೆ ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕಾಗಿದೆ. ಕಾನೂನು ಪಾಲನೆ, ಶಿಸ್ತು, ಸಂಯಮ ಸೇರಿದಂತೆ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಬಾರದು ಎಂದು ಮಕ್ಕಳಲ್ಲಿ ಅರಿವು ಮೂಡಿಸಲು ‘ಮೊಳಕೆಯಲ್ಲೇ ತಿದ್ದಿರಿ’ ಎನ್ನುವ ಕೈಪಿಡಿಯನ್ನು ಬಿಡುಗಡೆ ಮಾಡಿಲಾಗಿದೆ ಎಂದು ಹೇಳಿದರು. ಈ ಹಿಂದೆ ನಮ್ಮ ಕಾಂಗ್ರೆಸ್…
ರಾಯಚೂರು : ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ , ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ. ನಾವು ಎಲ್ಲಾ ಧರ್ಮ, ಎಲ್ಲಾ ಜಾತಿಯವರ ಪರವಾಗಿ ಇರುವವರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೇವದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಮಾಜ ವಿಭಜನಾ ಹೇಳಿಕೆಗೆ ಉತ್ತರಿಸಿ, ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ ಪಕ್ಷ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ನಮ್ಮದು ಎಂದರು. ಮೈಸೂರು ಲೋಕಸಭಾ ಕ್ಷೇತ್ರ ದಿಂದ ಯತೀಂದ್ರ ಸ್ಪರ್ಧೆ: ಊಹಾಪೋಹ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸಿದರೆ ಸ್ವಾಗತಿಸುವುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ…
ಬೆಂಗಳೂರು: ನಗರದ ರೇಸ್ ಕೋರ್ಸ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಬರೋಬ್ಬರಿ 3.45 ಕೋಟಿ ಕಂತೆ ಕಂತೆ ಹಣವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ರೇಸ್ ಕೋರ್ಸ್ ನಲ್ಲಿ ಅನಧಿಕೃತ ಹಾಗೂ ಅಧಿಕೃತವಾಗಿ ಬೆಟ್ಟಿಂಗ್ ನಡೆಸಲಾಗುತ್ತಿರೋ ಬಗ್ಗೆ ದೂರು ಬಂದಿತ್ತು. ಈ ದೂರು ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಯಾವುದೇ ದಾಖಲೆ ಇಲ್ಲದೇ ಹಣ ವ್ಯವಹಾರ ನಡೆಸುತ್ತಿದ್ದ ಬಗ್ಗೆ ದಾಳಿ ಮಾಡಲಾಗಿತ್ತು. ಈ ದಾಳಿ ವೇಳೆಯಲ್ಲಿ 3.45 ಕೋಟಿ ನಗದು ಜಪ್ತಿ ಮಾಡಲಾಗಿದೆ ಎಂದರು. ರೇಸ್ ಕೋರ್ಸ್ ದಾಳಿಯ ಸಂದರ್ಭದಲ್ಲಿನ ಹಣ ಜಪ್ತಿಯ ಬಳಿಕ 66 ಜನರಿಂದ ಮಾಹಿತಿ ಪಡೆದು ನೋಟಿಸ್ ನೀಡಿದ್ದೇವೆ. ಸಿಆರ್ ಪಿಸಿ ಸೆಕ್ಷನ್ 41ರಡಿ ನೋಟಿಸ್ ನೀಡಲಾಗಿದೆ. ಸದ್ಯ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದಂತ ಬಿ.ದಯಾನಂದ್ ತಿಳಿಸಿದ್ದಾರೆ. https://kannadanewsnow.com/kannada/ram-mandir-will-not-stop-son-anant-kumar-hegde/ https://kannadanewsnow.com/kannada/congress-leader-mallikarjun-kharge-appointed-india-bloc-chief/
ಉತ್ತರ ಕನ್ನಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಯೋಧ್ಯೆ ರಾಮಮಂದಿರ ಓಪನ್ ಗೆ ಹೋಗೋದಿಲ್ಲ ಎಂಬುದಾಗಿ ಹೇಳಿದ್ದರು. ನೀನು ಬಾ ಇಲ್ಲ ಬಿಡು ರಾಮಮಂದಿರ ನಿಲ್ಲಲ್ಲ ಮಗನೇ ಅಂತ ನೇರ ನೇರವಾಗೇ ಸಂಸದ ಅನಂತ್ ಕುಮಾರ್ ಹೆಗ್ಡೆ ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದೀಗಾರರೊಂದಿಗೆ ಮಾತನಾಡಿದಂತ ಅವರು, ಮಂಗಳೂರಿನ ಭಟ್ಕಳದಲ್ಲಿ ಇರುವಂತ ಚಿನ್ನದಪಲ್ಲಿ ಮಸೀದಿ ಕೂಡ ಬಾಬ್ರಿ ಮಸೀದಿಯಂತೆ ನಿರ್ನಾಮವಾಗಲಿದೆ. ಅದರಲ್ಲಿ ಎರಡು ಮಾತಿಲ್ಲ. ಇದನ್ನ ಬೇಕಾದ್ರೆ ಬೆದರಿಕೆ ಅಂತ ಬೇಕಾದ್ರೂ ತಿಳಿಯಿರಿ ಎಂಬುದಾಗಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೊಸ ಬಾಂಬ್ ಸಿಡಿಸಿದ್ದಾರೆ. ಅಂದಹಾಗೇ ಭಟ್ಕಳದ ಚಿನ್ನಪಲ್ಲಿಯಲ್ಲಿರುವಂತ ಮಸೀದಿಯ ಗೋಪುರ ಚಿನ್ನದ ಲೇಪಿತದಂತೆ ಇದೆ. ಇದು ಹಿಂದೂ ದೇವಾಲಯದ ಮಾದರಿಯಲ್ಲಿ ಇದೆ ಎನ್ನಲಾಗುತ್ತಿದೆ. ಇಂತಹ ಮಸೀದಿ ಕೂಡ ಬಾಬ್ರಿ ಮಸೀದಿ ಥರ ನಿರ್ನಾಮ ಆಗಲಿದೆ ಅಂತ ಈಗ ಸಂಸದ ಅನಂತ್ ಕುಮಾರ್ ಹೆಗ್ಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇದಲ್ಲದೇ ಸಿಎಂ ಸಿದ್ಧರಾಮಯ್ಯ ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂಬುದಾಗಿ ಹೇಳಿದಂತ ಮಾತಿಗೆ…
ಅಡಿಗೆ ಮನೆಯಲ್ಲಿರುವ ಲವಂಗಕ್ಕೆ ಮನೆಯಲ್ಲಿರುವ ಸಮಸ್ಯೆಯನ್ನು ಸರಿ ಮಾಡುವ ಶಕ್ತಿಯಿದೆ, ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಕಾರ ಲವಂಗದಿಂದ ಉಪಾಯವನ್ನು ಮಾಡಿದರೆ ಕೆಲವೇ ದಿನಗಳಲ್ಲಿ ನಿಮ್ಮನ್ನು ಶ್ರೀಮಂತರನ್ನಾಗಿ ಮಾಡುತ್ತದೆ. ಹಾಗಾದರೆ ಲವಂಗದಿಂದ ಏನು ಮಾಡಬೇಕು ಹಾಗೂ ಏನನ್ನು ಮಾಡುವುದರಿಂದ ಸಿರಿ ಸಂಪತ್ತು ಲಭಿಸುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564. …
ಬೆಂಗಳೂರು: ಬಾಬ್ರಿ ಮಸೀದಿಯಂತೆ ಚಿನ್ನದಪಲ್ಲಿ ಮಸೀದಿ ನಿರ್ನಾಮ ಆಗೋದು ಗ್ಯಾರಂಟಿ. ಇದು ಬೆದರಿಕೆ ಬೇಕಾದ್ರೂ ಅಂತ ಅಂದುಕೊಂಡ್ರೂ ಪರವಾಗಿಲ್ಲ ಅಂತ ಸಂಸದ ಅನಂತ್ ಕುಮಾರ್ ಹೆಗ್ಡೆ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಭಟ್ಕಳದಲ್ಲಿ ಇರುವಂತ ಚಿನ್ನದಪಲ್ಲಿ ಮಸೀದಿ ಕೂಡ ಬಾಬ್ರಿ ಮಸೀದಿಯಂತೆ ನಿರ್ನಾಮವಾಗಲಿದೆ. ಅದರಲ್ಲಿ ಎರಡು ಮಾತಿಲ್ಲ. ಇದನ್ನ ಬೇಕಾದ್ರೆ ಬೆದರಿಕೆ ಅಂತ ಬೇಕಾದ್ರೂ ತಿಳಿಯಿರಿ ಎಂಬುದಾಗಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೊಸ ಬಾಂಬ್ ಸಿಡಿಸಿದ್ದಾರೆ. ಅಂದಹಾಗೇ ಭಟ್ಕಳದ ಚಿನ್ನಪಲ್ಲಿಯಲ್ಲಿರುವಂತ ಮಸೀದಿಯ ಗೋಪುರ ಚಿನ್ನದ ಲೇಪಿತದಂತೆ ಇದೆ. ಇದು ಹಿಂದೂ ದೇವಾಲಯದ ಮಾದರಿಯಲ್ಲಿ ಇದೆ ಎನ್ನಲಾಗುತ್ತಿದೆ. ಇಂತಹ ಮಸೀದಿ ಕೂಡ ಬಾಬ್ರಿ ಮಸೀದಿ ಥರ ನಿರ್ನಾಮ ಆಗಲಿದೆ ಅಂತ ಈಗ ಸಂಸದ ಅನಂತ್ ಕುಮಾರ್ ಹೆಗ್ಡೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/lok-sabha-elections-2019-it-would-be-good-if-yathindra-siddaramaiah-is-my-opponent-says-pratap-simha/ https://kannadanewsnow.com/kannada/congress-leader-mallikarjun-kharge-appointed-india-bloc-chief/
ಬೆಂಗಳೂರು: ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕು ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ; ನಿಗದಿತ ಕಾಲಾವಧಿಯಲ್ಲಿ ತನಿಖೆ ಮಾಡಿ ಚಾರ್ಜ್ ಶೀಟ್ ಹಾಕಿ ಉಗ್ರವಾದ ಶಿಕ್ಷೆ ಆಗುವಂತೆ ನೋಡಿಕೊಳ್ಳಿ ಎಂದು ಒತ್ತಾಯಿಸಿದರು. 3 ಜನರ ಬಂಧನವಷ್ಟೇ ಆಗಿದೆ. ಎಲ್ಲರನ್ನೂ ಬಂಧಿಸಿಲ್ಲವೇಕೆ ಎಂದು ಕೇಳಿದರು. ನಾಳೆ ನಮ್ಮ ಮಹಿಳಾ ನಿಯೋಗ ಹಾವೇರಿಗೆ ಭೇಟಿ ಕೊಡಲಿದೆ. ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗದ ಮೊರೆ ಹೋಗಲಿದ್ದೇವೆ ಎಂದು ಪ್ರಕಟಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಾಮಾನ್ಯ ಜನರು ಅದರಲ್ಲೂ ಹೆಣ್ಮಕ್ಕಳು ನಿರ್ಭೀತಿಯಿಂದ ಓಡಾಡಲು…
ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ. ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಕೆ ಎಸ್ ಡಿ ಎಲ್ ಅಧ್ಯಕ್ಷರೂ ಆದ ಸಚಿವ ಎಂ.ಬಿ ಪಾಟೀಲ ಅವರಿಗೆ ಅನಾಮಧೇಯ ಕರೆ ಬಂದಿತ್ತು. ಬಳಿಕೆ ಸಚಿವರು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್ ಅವರಿಗೆ ನಿಗಾ ವಹಿಸಲು ಸೂಚಿಸಿದ್ದರು. ಅದರಂತೆ, ಸಿಕಂದರಾಬಾದಿನಲ್ಲಿರುವ ಸಂಸ್ಥೆಯ ಅಧಿಕೃತ ಮಾರಾಟ ಕಚೇರಿಯ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಜಾಡು ಹಿಡಿದು ಕಾರ್ಯಪ್ರವೃತ್ತರಾಗಿದ್ದರು. ಹೈದರಾಬಾದಿನ ಕೆಲವು ಪ್ರದೇಶಗಳಲ್ಲಿ ನಕಲಿ…
ನವದೆಹಲಿ: ಖ್ಯಾತ ಶಾಸ್ತ್ರೀಯ ಗಾಯಕಿ ಮತ್ತು ಪದ್ಮ ವಿಭೂಷಣ ಪುರಸ್ಕೃತ ಡಾ.ಪ್ರಭಾ ಅತ್ರೆ ಅವರು ಜನವರಿ 13 ರಂದು ಪುಣೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾಣಾ ಘರಾನಾದ ಜ್ಯೋತಿಯನ್ನು ಹೊತ್ತ ಅತ್ರೆ ಅವರಿಗೆ ಭಾರತ ಸರ್ಕಾರವು ಎಲ್ಲಾ ಮೂರು ಪದ್ಮ ಪ್ರಶಸ್ತಿಗಳನ್ನು ನೀಡಿ ಗೌರವಿಸಿತ್ತು. ಅತ್ರೆ ತನ್ನ ನಿವಾಸದಲ್ಲಿ ನಿದ್ರೆಯಲ್ಲಿದ್ದಾಗ ಹೃದಯ ಸ್ತಂಭನಕ್ಕೆ ಒಳಗಾದರು. ಅವರನ್ನು ದೀನನಾಥ್ ಮಂಗೇಶ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಬೆಳಿಗ್ಗೆ 5: 30ಕ್ಕೆ ನಿಧನರಾದರು ಎಂದು ಘೋಷಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಅತ್ರೆ ಅವರ ಕೆಲವು ಆಪ್ತ ಕುಟುಂಬ ಸದಸ್ಯರು ವಿದೇಶದಲ್ಲಿ ವಾಸಿಸುತ್ತಿರುವುದರಿಂದ, ಅವರು ಬಂದ ನಂತರ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ‘ಸ್ವರಪ್ರಭಾ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಜನವರಿ 13ರ ಇಂದು ಮುಂಬೈಗೆ ತೆರಳಬೇಕಿತ್ತು. ಸೆಪ್ಟೆಂಬರ್ 13, 1932 ರಂದು ಜನಿಸಿದ ಅತ್ರೆ ಅವರು ಬಹುಮುಖಿ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದರು.…
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( Bihar Chief Minister Nitish Kumar ) ಅವರು ಈ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಕಾಂಗ್ರೆಸ್ ಹಾಲಿ ಮಲ್ಲಿಕಾರ್ಜುನ ಖರ್ಗೆ ( Congress present Mallikarjun Kharge ) ಅವರನ್ನು ಶನಿವಾರ ಐಎನ್ಡಿಐಎ ಬ್ಲಾಕ್ ಮುಖ್ಯಸ್ಥರನ್ನಾಗಿ ( I.N.D.I.A bloc chief ) ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. https://twitter.com/ANI/status/1746086212258152826 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮತ್ತು ಸೋಲಿಸಲು 28 ವಿರೋಧ ಪಕ್ಷಗಳು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ) ಬ್ಯಾನರ್ ಅಡಿಯಲ್ಲಿ ಒಗ್ಗೂಡಿವೆ. ಆದಾಗ್ಯೂ, ಸಂಚಾಲಕರನ್ನು ನೇಮಿಸುವುದು ಸೇರಿದಂತೆ ಮೈತ್ರಿಯೊಳಗೆ ಇನ್ನೂ ಪರಿಹರಿಸಬೇಕಾದ ಅನೇಕ ಸಮಸ್ಯೆಗಳಿವೆ. ಪಶ್ಚಿಮ ಬಂಗಾಳ ಮತ್ತು ಪಂಜಾಬ್ನಲ್ಲಿ ಎಎಪಿ ರಾಜ್ಯದ ಎಲ್ಲಾ 13 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಭಗವಂತ್ ಮಾನ್ ಇತ್ತೀಚೆಗೆ ಹೇಳಿಕೊಂಡಿದ್ದರಿಂದ ವಿರೋಧ ಬಣದ ಸದಸ್ಯರೊಂದಿಗಿನ ಸೀಟು ಹಂಚಿಕೆ ಮಾತುಕತೆಗಳು ಇಲ್ಲಿಯವರೆಗೆ ಫಲಪ್ರದವಾಗಿಲ್ಲ. ಸಭೆಯಲ್ಲಿ ಉಪಸ್ಥಿತರಿಲ್ಲದ ಸಮಾಜವಾದಿ ಪಕ್ಷದ ಮುಖ್ಯಸ್ಥ…