Author: kannadanewsnow09

ವಿಜಯಪುರ: ಜಿಲ್ಲೆಯಲ್ಲಿ ಇಂದು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಂತ ಇಬ್ಬರು ಬಾಲಕರು ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ದ್ಯಾಬೇರಿಯಲ್ಲಿ ಕೆರೆಯೊಂದಕ್ಕೆ ಮೀನು ಹಿಡಿಯೋದಕ್ಕೆ ಇಬ್ಬರು ಬಾಲಕರು ತೆರಳಿದ್ದರು. ಈ ವೇಳೆ ವಿದ್ಯುತ್ ವೈಯರ್ ಕೆರೆಗೆ ತುಂಡಾಗಿ ಬಿದ್ದಿತ್ತು. ಇದನ್ನು ಕಾಣದಂತ ಬಾಲಕರು ಕೆರೆಯಲ್ಲಿ ಮೀನು ಹಿಡಿಯೋದಕ್ಕೆ ಇಳಿದಂತ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ರೋಹಿತ್ ಅನಿಲ್ ಚೌವಾಹ್ (8) ಹಾಗೂ ವಿಜಯ್ ಪಿಂಟು ಚೌವಾಹ್(16) ಎಂಬುವರು ಧಾರುಣವಾಗಿ ಸಾವನ್ನಪ್ಪಿದ್ದಾರೆ. ಬಾಲಕರ ಸಾವಿನ ಸುದ್ದಿ ಕೇಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಕೆರೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಂತ ಇಬ್ಬರು ಬಾಲಕರ ಶವವನ್ನು ಹೊರ ತೆಗೆದಿದ್ದಾರೆ. https://kannadanewsnow.com/kannada/prajwal-revannas-bail-plea-adjourned-to-june-24/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/

Read More

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣ ಸಂಬಂಧ ಇಂದು ಕೂಡ ಕೋರ್ಟ್ ನಿಂದ ರಿಲೀಫ್ ಸಿಕ್ಕಿಲ್ಲ. ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೂನ್.24ಕ್ಕೆ ಮುಂದೂಡಿಕೆ ಮಾಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಎರನೇಡ ಕೇಸ್ ನಲ್ಲಿ ಎಸ್ಐಟಿ ಅಧಿಕಾರಿಗಳು ಬಾಡಿ ವಾರೆಂಟ್ ಪಡೆದು, ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಜೂನ್.24ಕ್ಕೆ ಮುಂದೂಡಿಕೆ ಮಾಡಿದೆ. ಇದೇ ವೇಳೆ ನ್ಯಾಯಮೂರ್ತಿಗಳು, ನಿಮಗೆ ಆರೋಗ್ಯ ಸಮಸ್ಯೆ ಇದೆಯೇ ಎಂದು ವಿಚಾರಿಸಿದ್ದಾರೆ. ಈ ವೇಳೆ ಪ್ರಜ್ವಲ್ ಉಸಿರಾಟದ ಸಮಸ್ಯೆ ಇದೆ. ಎಂಆರ್‍ಐ ಮಾಡಿಸಬೇಕಿದೆ ಎಂದು ಹೇಳಿದ್ದಾರೆ. ನಾನು ಎರಡು ಕೇಸ್‍ನಲ್ಲಿ ಪುರುಷತ್ವ ಪರೀಕ್ಷೆ ಒಪ್ಪಿ ಮಾಡಿಸಿಕೊಂಡಿದ್ದೇನೆ. ಇದರಿಂದ ತುಂಬಾ ಮುಜುಗರ ಆಗತ್ತೆ. ಮತ್ತೆ…

Read More

ಬೆಂಗಳೂರು : 2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ. ಹೊಸದಿಲ್ಲಿಯಲ್ಲಿ ಶನಿವಾರ ನಡೆದ ‘ಗ್ಲೋಬಲ್ ವಿಂಡ್ ಡೇ’ 2024 “ಪವನ್-ಉರ್ಜಾ: ಪವರ್ನಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಅವರಿಂದ ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಪ್ರಶಸ್ತಿ ಸ್ವೀಕರಿಸಿದರು. ಪವನ ವಿದ್ಯುತ್‌ ವಲಯದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯಕ್ಕೆ ಪ್ರಶಸ್ತಿ ನೀಡಲಾಗಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್‌ ಸಂತಸ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, “ಈ ಪ್ರಶಸ್ತಿಯು ನವೀಕರಿಸಬಹುದಾದದ ಇಂಧನ ವಲಯದಲ್ಲಿನ ನಮ್ಮ ಬದ್ಧತೆಯನ್ನು ಹೆಚ್ಚಿಸಿದೆ. ಈ ಸಾಧನೆ ಹಿಂದೆ ಕ್ರೆಡಲ್‌ ಅಧಿಕಾರಗಳ ಶ್ರಮವಿದ್ದು, ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,” ಎಂದಿದ್ದಾರೆ. “ವಿದ್ಯುತ್‌ ಉತ್ಪಾದನಾ…

Read More

ಪಾಟ್ನಾ: ಪಾಟ್ನಾ ವಿಮಾನ ನಿಲ್ದಾಣಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಇದು ತಾತ್ಕಾಲಿಕ ಭೀತಿಗೆ ಕಾರಣವಾಗಿದೆ. ಘಟನೆಯ ನಂತರ, ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ. ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ನಿರ್ದೇಶನಾಲಯ ತಿಳಿಸಿದ ನಂತರ ಮಂಗಳವಾರ ಮಧ್ಯಾಹ್ನ ಬಿಹಾರದ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. https://twitter.com/ANI/status/1803010781359054850 https://kannadanewsnow.com/kannada/bjp-state-president-b-y-vijayendra-visits-renukaswamys-family-distributes-rs-2-lakh-financial-assistance/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/

Read More

ಬೆಂಗಳೂರು: ಕೊಲೆಯಾದ ರೇಣುಕಸ್ವಾಮಿಯವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ಚಿತ್ರದುರ್ಗದಲ್ಲಿ ಇಂದು ರೇಣುಕಸ್ವಾಮಿಯವರ ಕುಟುಂಬದವರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೇಣುಕಸ್ವಾಮಿಯವರ ಧರ್ಮಪತ್ನಿ 4 ತಿಂಗಳ ಗರ್ಭಿಣಿ. ಮುಂದಿನ ದಿನಗಳಲ್ಲಿ ಆ ಹೆಣ್ಮಗಳಿಗೆ ಒಂದು ಸರಕಾರಿ ಉದ್ಯೋಗ ಕೊಡಬೇಕು; ಸರಕಾರವು ಪರಿಹಾರವನ್ನೂ ಕೊಡಬೇಕು ಎಂದು ಆಗ್ರಹಿಸಿದರು. ರೇಣುಕಸ್ವಾಮಿಯವರ ಹತ್ಯೆ ಒಂದು ಅಮಾನವೀಯ ಕೃತ್ಯ. ನಾಗರಿಕ ಸಮಾಜದ ಯಾರೂ ಕೂಡ ಇದನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬರು ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸಬೇಕು. ಈ ವಿಚಾರ ಕೇವಲ ರಾಜ್ಯದಲ್ಲಷ್ಟೇ ಅಲ್ಲ; ದೇಶದಲ್ಲೂ ಚರ್ಚೆ ಆಗುತ್ತಿದೆ. ತಂದೆ, ತಾಯಿ, ಅವರ ಧರ್ಮಪತ್ನಿಯನ್ನು ನೋಡಿದರೆ ನಿಜವಾಗಲೂ ಕೂಡ ದುಃಖ ಆಗುತ್ತದೆ ಎಂದು ನುಡಿದರು. ಈ ಘಟನೆಯಲ್ಲಿ ದೊಡ್ಡ ವ್ಯಕ್ತಿಗಳಿರುವ ವಿಚಾರ ಜಗಜ್ಜಾಹೀರಾಗಿದೆ. ಆದರೆ, ತನಿಖೆ ಸರಿಯಾದ ರೀತಿಯಲ್ಲಿ ಆಗಬೇಕು. ತನಿಖೆ ಸಡಿಲ…

Read More

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದಂತ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಸಿಟಿ ರವಿ ವಿರುದ್ಧ ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣೆ ಮಾಡಿದ್ದಾರೆ. ಬಿಜೆಪಿಯ ಸಿ.ಟಿ ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹುಬ್ಬಳ್ಳಿ ಉಪನಗರದ ಪೊಲೀಸರಿಗೆ ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಜಲಗಿ ದೂರು ನೀಡಿದ್ದಾರೆ. ತೈಲ ದರ ಏರಿಕೆ ಖಂಡಿಸಿ ಬಿಜೆಪಿ ನಾಯಕರು ಧರಣಿ ನಡೆಸಿದ್ದರು.ಈ ಸಂದರ್ಭದಲ್ಲಿ ಸಿಟಿ ರವಿ ಸಿದ್ಧರಾಮಯ್ಯ ಅವರನ್ನು ಟೀಕಿಸಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಅಗೌರವ ತೋರಿದಂತೆ ಆಗಿದೆ. ಅವರ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. https://kannadanewsnow.com/kannada/hotel-owner-brutally-assaulted-in-bengaluru/ https://kannadanewsnow.com/kannada/market-cap-crosses-5-trillion-mark-after-modi-becomes-pm-pm-modi/

Read More

ಬೆಂಗಳೂರು: ಹೋಟೆಲ್ ಮಾಲೀಕರೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೋಮಾಗೆ ಜಾರುವಂತೆ ಹೊಡೆದಿರುವಂತ ಘಟನೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಜಯೇಂದ್ರ ಶೆಟ್ಟಿ ಎಂಬುವರು ಮಂಜುನಾಥ್ ಟಿಫನ್ ಸೆಂಟರ್ ಎಂಬಂತ ಹೋಟೆಲ್ ಒಂದನ್ನು ನಡೆಸುತ್ತಿದ್ದರು. ರಾತ್ರಿ ಮಲಗುವಾಗ ಕಿಟಕಿಯಲ್ಲಿ ಕೀ ಇಟ್ಟು, ಹೋಟೆಲ್ ಒಳಗೆ ಮಲಗುತ್ತಿದ್ದಂತ ಅವರು, ನಿನ್ನೆ ರಾತ್ರಿ ಕೂಡ ಎಂದಿನಂತೇ ಕಿಟಕಿಯಲ್ಲಿ ಕೀ ಇಟ್ಟು ಮಲಗಿದ್ದಾರೆ. ಈ ವಿಷಯ ತಿಳಿದಿದ್ದಂತ ಪರಿಚಯಸ್ಥರೇ, ಕೀ ತೆಗೆದು ಒಳಗೆ ನುಗ್ಗಿ, ವಿಜಯೇಂದ್ರ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದಾರೆ. ತೀವ್ರವಾಗಿ ಹಲ್ಲೆಯಿಂದಾಗಿ ವಿಯಜೇಂದ್ರ ಶೆಟ್ಟಿ ಕೋಮಾಗೆ ಹೋಗಿದ್ದಾರೆ. ಅವರನ್ನು ಹೋಟೆಲ್ ಕೆಲಸಕ್ಕೆ ಬೆಳಿಗ್ಗೆ ಬಂದಂತ ಸಿಬ್ಬಂದಿ, ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲಕ ವಿಜಯೇಂದ್ರ ಶೆಟ್ಟಿ ಅವರು ಕಳೆದ ಕೆಲ ವರ್ಷಗಳಿಂದ ಮಂಜುನಾಥ ಟಿಫನ್ ಸೆಂಟರ್ ನಡೆಸುತ್ತಿದ್ದರು. ಬೆಳಿಗ್ಗೆ ಹೋಟೆಲ್ ಕೆಲಸಕ್ಕೆ ಬರುವಂತ ಸಿಬ್ಬಂದಿಗಾಗಿ ಕಿಟಕಿಯಲ್ಲಿ ಕೀ ಇಟ್ಟು ಹೋಟೆಲ್…

Read More

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಆಶ್ರಯ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ ಅಂತ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಎಚ್ಚರಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಮಾತನಾಡಿದಂತ ಅವರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಗರಂ ಆಗಿ ಅಧಿಕಾರಿಗಳನ್ನು ತೀವ್ರವಾಗಿ ಸಿಎಂ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದ್ದಕ್ಕೆ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದು ಕೊಂಡರು. ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ, ಹಾಸ್ಟೆಲ್ ಗಳಿಗೆ ಇಷ್ಟೆಲ್ಲಾ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ? ಈ ಬಗ್ಗೆ ನಿರಂತರ ನಿಗಾ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಆ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. • ಹೊಸಪೇಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾಗೂ 120 ತಾಲ್ಲೂಕುಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳಿಲ್ಲ. ಕಳೆದ ಐದು ವರ್ಷಗಳಲ್ಲಿ ಶೇ. 95 ರಷ್ಟು ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಮೂಲಕ ಮಾಡುತ್ತಿದ್ದಾರೆ. ಟೆಂಡರ್‌ ಕರೆಯದೆ ಮಾಡುತ್ತಿದ್ದಾರೆ. ಎರಡು ಕೋಟಿ ಮಿತಿಯಲ್ಲಿ ಕಾಮಗಾರಿಗಳನ್ನು ಸೀಮಿತಗೊಳಿಸಿ, ಅಪೂರ್ಣವಾಗಿರುವಂತಹ ಸ್ಥಿತಿ ಒದಗಿಸದೆ ಎಂದು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು. ಇಲಾಖೆಯ ಕಾಮಗಾರಿಗಳ ಯೋಜನೆ ರೂಪಿಸಲು, ಮೇಲ್ವಿಚಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಇಬ್ಬರು ಎಂಜಿನಿಯರುಗಳ ಸೇವೆ ಪಡೆಯುವಂತೆ ಸೂಚಿಸಿದರು. ಎಲ್ಲ ಕಾಮಗಾರಿಗಳನ್ನು ಟೆಂಡರ್‌ ಆಹ್ವಾನಿಸಿಯೇ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. • 174 ಕೋಚ್‌ಗಳ ನೇಮಕಕ್ಕೆ ಸರ್ಕಾರ ಅನುಮೋದನೆ ನೀಡಿದ್ದು, ವೃಂದ ಮತ್ತು ನೇಮಕಾತಿ ನಿಯಮ ಅಂತಿಮಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು. 1486 ಕ್ರೀಡಾಪಟುಗಳಿಗೆ ಕ್ರೀಡಾ ಪ್ರೋತ್ಸಾಹಧನ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದರು.…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು. ಆ ಸಭೆಯ ಮುಖ್ಯಾಂಶಗಳ ಬಗ್ಗೆ ಮುಂದೆ ಓದಿ. • ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ. ನಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ. • ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು – 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ. ಒದಗಿಸಲಾಗಿದೆ. ಎಸ್‌.ಎಸ್‌.ಎಲ್‌.ಸಿ. ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಿದರು. • 2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. • ಹಾಸ್ಟೆಲ್‌ಗಳಿಗೆ ಸಂಜೆ…

Read More