Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸೊರಬದ ಹಳೇಸೊರಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 49 ವಸಂತಗಳನ್ನು ಪೂರೈಸಿದ್ದು, ಮುಂದಿನ ವರ್ಷದಲ್ಲಿ 50 ನೇ ವರ್ಷದ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ನಡೆಸಲು ಸಹಕಾರಿ ಬಂಧುಗಳು ಸಹಕಾರ ನೀಡಬೇಕು ಎಂದು ಹಳೇಸೊರಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜೆ. ಪ್ರಕಾಶ್ ಹೇಳಿದರು. ಸೋಮವಾರ ಪಟ್ಟಣದ ಗಿರಿಜಾ ಶಂಕರ ಭವನದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕಿನ ಹಳೇಸೊರಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಸುದೀರ್ಘ ಅವಧಿಗೆ ಸಹಕಾರ ಸಂಘವು ರೈತ ಪರವಾಗಿ ಕಾರ್ಯ ನಿರ್ವಹಿಸಲು ಮಾಜಿ ಅಧ್ಯಕ್ಷರು,ನಿರ್ದೇಶಕರು ಹಾಗೂ ರೈತರು ಸಹಕಾರ ನೀಡಿದ್ದಾರೆ. ಪ್ರಸ್ತುತ ವರ್ಷದಲ್ಲಿ ಸಂಘವು ಒಟ್ಟು 7.26 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದರು. ಸರ್ಕಾರದಿಂದ ಸಹಕಾರಿ ಸಂಘಕ್ಕೆ ಹಣಕಾಸಿನ ನೆರವು ಸಿಕ್ಕಿಲ್ಲ. ಅದರಿಂದ ಸಾಲವನ್ನು ಹೆಚ್ಚುವರಿಯಾಗಿ ನೀಡಲು ಅವಕಾಶವಿಲ್ಲ. ನೀಡಿರುವ ಸಾಲವನ್ನು ರೈತರು ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿದರೆ ಅದು ಸಂಘದಲ್ಲಿ ಬಂಡವಾಳವಾಗಿ ಪರಿವರ್ತನೆಯಾಗಲಿದೆ.…

Read More

ನವದೆಹಲಿ: ಜಾಗತಿಕ ಸುಂಕದ ಅನಿಶ್ಚಿತತೆಯ ನಡುವೆ ಆರ್ಥಿಕತೆಗೆ ಉತ್ತೇಜನ ನೀಡಲು ಸರಕು ಮತ್ತು ಸೇವಾ ತೆರಿಗೆ (Goods and Services Tax -GST) ಮಂಡಳಿಯು ಕನಿಷ್ಠ 375 ವಸ್ತುಗಳ ಮೇಲೆ ಕಡಿಮೆ ದರಗಳನ್ನು ಜಾರಿಗೆ ತಂದಿದ್ದರಿಂದ, ಭಾರತದ ಪರೋಕ್ಷ ತೆರಿಗೆ ವ್ಯವಸ್ಥೆಯು ಇಂದು ಸೆಪ್ಟೆಂಬರ್ 22 ರಿಂದ ಪ್ರಮುಖ ಪರಿಷ್ಕರಣೆಗೆ ಒಳಗಾಯಿತು. ಗ್ರಾಹಕರಿಗೆ ಹಬ್ಬದ ಸಂಭ್ರಮದಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆದ 56 ನೇ ಜಿಎಸ್‌ಟಿ ಮಂಡಳಿಯ ಸಭೆಯು ವರ್ಗಗಳಾದ್ಯಂತ ತೆರಿಗೆ ದರಗಳನ್ನು ಕಡಿತಗೊಳಿಸಲು ನಿರ್ಧರಿಸಿತು. ಇಂದಿನಿಂದ ಜಾರಿಗೆ ಬರುವಂತೆ, ಹಿಂದಿನ ನಾಲ್ಕು-ಸ್ಲ್ಯಾಬ್ ರಚನೆಯನ್ನು ಬದಲಾಯಿಸುವ ಮೂಲಕ ಕೇವಲ ಎರಡು ಪ್ರಾಥಮಿಕ ಜಿಎಸ್‌ಟಿ ಸ್ಲ್ಯಾಬ್‌ಗಳು – 5% ಮತ್ತು 18% – ಉಳಿದಿವೆ. ಈ ಪರಿಷ್ಕರಣೆಯ ನಂತರ, ಈ ಹಿಂದೆ 12% ತೆರಿಗೆ ವಿಧಿಸಲಾಗಿದ್ದ ಸುಮಾರು 99% ಸರಕುಗಳು 5% ಸ್ಲ್ಯಾಬ್‌ಗೆ ಬದಲಾಗಿವೆ, ಆದರೆ 28% ಸ್ಲ್ಯಾಬ್‌ನಲ್ಲಿರುವ 90% ವಸ್ತುಗಳು ಈಗ 18% ಬ್ರಾಕೆಟ್‌ಗೆ ಬರುತ್ತವೆ. ಆದಾಗ್ಯೂ, ತಂಬಾಕು,…

Read More

ಬೆಂಗಳೂರು: ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದೆ. ಈ ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ಜಾತಿಗಣತಿ ಕುರಿತಂತೆ ತಡೆಯಾಜ್ಞೆ ನೀಡುವ ಸಂಬಂಧದ ಅರ್ಜಿಯ ವಿಚಾರಣೆ ಮುಂದೂಡಿದೆ. ಈ ಮೂಲಕ ನಾಳೆ ಮಧ್ಯಾಹ್ನ 2.30ಕ್ಕೆ ಜಾತಿ ಗಣತಿ ಭವಿಷ್ಯವನ್ನು ನಿರ್ಧರಿಸಲಿದೆ. ಇಂದು ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ್ ನಾದವಗಿ ವಾದ ಮಂಡಿಸಿದರು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿ, ಜನಗಣತಿಗಿಂತ ಈ ಸರ್ವೆ ಯಾವ ರೀತಿಯಲ್ಲೂ ಕಡಿಮೆಯಲ್ಲ. ಜನಗಣತಿಯನ್ನು ಕೇಂದ್ರ ಸರ್ಕಾರವಷ್ಟೇ ಮಾಡಬೇಕೆಂದು ವಾದಿಸಿದರು. ರಾಜ್ಯದೆಲ್ಲೆಡೆ ಸರ್ಕಾರ ಜಾತಿ ಗಣತಿಗೆ ಆದೇಶಿಸಿದೆ. ಸಂವಿಧಾನದ ಆರ್ಟಿಕಲ್ 342ಎ(3)ಗೆ ವಿರುದ್ಧವಾಗಿದೆ. ಹಿಂದುಳಿದ ವರ್ಗಗಳ ಆಯೋಗದ…

Read More

ಬೆಂಗಳೂರು: ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದೆ. ಈ ಜಾತಿಗಣತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಾಳೆ ಮಧ್ಯಾಹ್ನ 2.30ಕ್ಕೆ ಜಾತಿಗಣತಿ ಕುರಿತಂತೆ ತಡೆಯಾಜ್ಞೆ ನೀಡುವ ಸಂಬಂಧದ ಅರ್ಜಿಯ ವಿಚಾರಣೆ ಮುಂದೂಡಿದೆ. ಇಂದು ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ಪೀಠದಲ್ಲಿ ವಿಚಾರಣೆ ನಡೆಯಿತು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ್ ನಾದವಗಿ ವಾದ ಮಂಡಿಸಿದರು. ಅರ್ಜಿದಾರರ ಪರ ಹಿರಿಯ ವಕೀಲ ಜಯಕುಮಾರ್ ಎಸ್ ಪಾಟೀಲ್ ವಾದ ಮಂಡಿಸಿ, ಜನಗಣತಿಗಿಂತ ಈ ಸರ್ವೆ ಯಾವ ರೀತಿಯಲ್ಲೂ ಕಡಿಮೆಯಲ್ಲ. ಜನಗಣತಿಯನ್ನು ಕೇಂದ್ರ ಸರ್ಕಾರವಷ್ಟೇ ಮಾಡಬೇಕೆಂದು ವಾದಿಸಿದರು. ರಾಜ್ಯದೆಲ್ಲೆಡೆ ಸರ್ಕಾರ ಜಾತಿ ಗಣತಿಗೆ ಆದೇಶಿಸಿದೆ. ಸಂವಿಧಾನದ ಆರ್ಟಿಕಲ್ 342ಎ(3)ಗೆ ವಿರುದ್ಧವಾಗಿದೆ. ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ವರದಿ ಪರಿಗಣಿಸದೇ ಹೊಸ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು. ಜಾತಿಗಣತಿಯ ಅಂಕಿ…

Read More

ಬೆಂಗಳೂರು: ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ವಿರೋಧವಿತ್ತು. ಆದರೇ ಅವರು ಹಿಂದೂ ಸಂಸ್ಕೃತಿಗೆ ಗೌರವ ಬರುವಂತೆ ನಡೆದುಕೊಂಡಿದ್ದಾರೆ. ಅವರನ್ನು ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ವಿರೋಧ ಇತ್ತು. ಆದರೇ ಇಂದು ಖುಷಿಯಾಗಿದೆ. ಹಿಂದೂ ಹೆಣ್ಣುಮಗಳ ರೀತಿ ದೇವಸ್ಥಾನಕ್ಕೆ ಬಂದು ಕೈಮುಗಿದಿದ್ದಾರೆ. ಆರತಿ ಬೆಳಗಿ ದೇವರ ಮುಂದೆ ನಿಂತು ಕೈಮುಗಿದಿದ್ದಾರೆ ಎಂದರು. ಚಾಮುಂಡಿ ಆಶೀರ್ವಾದದಿಂದ ಬಾನು ಮುಷ್ತಾಕ್ ಉದ್ಘಾಟನೆ ಮಾಡಿದ್ದೇನೆ ಎಂದಿದ್ದಾರೆ. ಅವತ್ತೇ ಬಾನು ಮುಷ್ತಾಕ್ ಈ ಮಾತು ಹೇಳಿದ್ದರೇ ವಿರೋಧವೇ ಇರುತ್ತಿರಲಿಲ್ಲ. ಹಿಂದೂ ಸಂಸ್ಕೃತಿಗೆ ಗೌರವ ಬರುವ ರೀತಿ ನಡೆದುಕೊಂಡಿದ್ದಾರೆ. ಇನ್ನೂ ಬಾನು ಮುಷ್ತಾಕ್ ವಿರೋಧಿಸುವ ಪ್ರಶ್ನೆಯೇ ಇಲ್ಲ ಎಂಬುದಾಗಿ ತಿಳಿಸಿದರು. ಸಿದ್ಧರಾಮಯ್ಯ ಅವರು ರಾಜಕೀಯ ಮಾಡಲು ಇದರಲ್ಲಿ ಹೊರಟಿದ್ದರು. ಹಿಂದೂಗಳ ಅನಿಸಿಕೆ ಪರವಾಗಿ ಬಾನು ಮುಷ್ತಾಕ್ ನಡೆದುಕೊಂಡಿದ್ದಾರೆ. ಬಾನು ಮುಷ್ತಾಕ್ ಬಗ್ಗೆ ಅಭಿಮಾನ ಹೆಚ್ಚಾಗಿದೆ ಎಂಬುದಾಗಿ ಹೇಳಿದರು. https://kannadanewsnow.com/kannada/%e2%82%b91-lakh-crore-spent-on-guarantee-schemes-cm-siddaramaiah-clarifies-on-dussehra-stage/

Read More

ಮೈಸೂರು: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 1 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಸರಾ ವೇದಿಕೆಯಲ್ಲೇ ಸ್ಪಷ್ಟ ಪಡಿಸಿದ್ದಾರೆ. ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಮಾತನಾಡಿದಂತ ಅವರು, ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಪ್ರಶ್ನಿಸಿದರು. ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ GDP ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು.

Read More

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಎನ್.ಡಿ.ಎ. ಸರ್ಕಾರ ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆ ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಶಿವಮೊಗ್ಗದ ಅಂಗಡಿ- ಮಳಿಗೆಗಳಿಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಎರಡು ಸ್ಲ್ಯಾಬ್ ಜಿಎಸ್‍ಟಿ ಜಾರಿಗೊಳಿಸಿದ್ದಾರೆ. ಈ ಮೂಲಕ ಜನರಿಗೆ ದೀಪಾವಳಿ ಉಡುಗೊರೆ ನೀಡಿದ್ದಾರೆ. ಅದಕ್ಕಾಗಿ ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಮತ್ತು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಬಿಜೆಪಿ ಅಭಿನಂದಿಸುತ್ತದೆ. ಜನತೆಯ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದ ಸಮರ್ಪಿಸಲು ಈ ಸಂಭ್ರಮಾಚರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಜಗತ್ತಿನ ದೊಡ್ಡಣ್ಣ ಅಮೇರಿಕದ ಅಧ್ಯಕ್ಷ ಟ್ರಂಪ್ ಅವರು ಬೇರೆ ಬೇರೆ ದೇಶಗಳಿಗೆ ತೆರಿಗೆಯನ್ನು ಹೆಚ್ಚಿಸಿರುವುದನ್ನು ನಾವು ನೋಡಿದ್ದೇವೆ. ಇಂದು ಭಾರತಕ್ಕೆ ದೊಡ್ಡ ಸವಾಲನ್ನು ಹಾಕಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರು ಭಾರತ ಯಾವುದಕ್ಕೂ ಜಗ್ಗುವುದಿಲ್ಲ ಮತ್ತು…

Read More

ಚನ್ನರಾಯಪಟ್ಟಣ : ನಲವತ್ತು ವರ್ಷಗಳ ಕಾಲ ಆ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳೆಲ್ಲರೂ ಒಂದೆಡೆ ಸೇರಿ, ತಮಗೆ ಪಾಠ ಕಲಿಸಿದ ಶಿಕ್ಷಕರನ್ನು ಪುಷ್ಪವೃಷ್ಠಿ ಮಾಡಿ ವೇದಿಕೆಗೆ ಸ್ವಾಗತಿಸಿ ಆತ್ಮೀಯವಾಗಿ ಸನ್ಮಾನಿಸುವ ಮೂಲಕ ಗುರುವಂದನಾ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿಸಿದರು. ತಾಲೂಕಿನ ನುಗ್ಗೇಹಳ್ಳಿ ಹೋಬಳಿಯ ತಗಡೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಬಳಗದ ವತಿಯಿಂದ ಆಯೋಜಿಸಿದ್ದ ಗುರುವಂದನೆ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ವಿಭಿನ್ನವಾಗಿ ಮೂಡಿ ಬಂದಿದ್ದಲ್ಲದೆ, ಜನಮನ ಸೆಳೆಯಿತು. ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಧೀಶರಾದ ಕೆ.ಎಚ್.ಅಶ್ವತ್ಥ ನಾರಾಯಣಗೌಡ ಅವರು, ನಾನೂ ಒಬ್ಬ ಉಪಾಧ್ಯಾಯನ ಮಗನಾಗಿ ಈ ಎತ್ತರಕ್ಕೆ ಬೆಳೆಯಲು ಸಾಧ್ಯವಾಗಿದೆ. ನೀವು ಕೂಡ ನಿಮ್ಮ ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಲು ಗುರುವಿನ ಕೃಪೆ ಮುಖ್ಯವಾಗಿದೆ ಎಂದರು. ಪ್ರಸ್ತುತ ಸಮಾಜದಲ್ಲಿ ಎಲ್ಲ ವರ್ಗಗಳಲ್ಲೂ ಬದಲಾವಣೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಹೀಗಾಗಿ ಪಾಲಕರು ಮಕ್ಕಳನ್ನು ಶಿಕ್ಷಣವಂತರಾಗಿ ಮಾಡಬೇಕೆಂದು ಸಲಹೆ ನೀಡಿದರು. ಹಳೆಯ ವಿದ್ಯಾರ್ಥಿಗಳು ಒಂದೆಡೆ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.09.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎಲಿಟ ಪ್ರೋಮೆನೇಡ್ ಅಪಾರ್ಟ್ಮೆಂಟ್, ಕೆ.ಆರ್.ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11ಕೆ.ವಿ ಯೆಲ್ಲಾರ್ ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.09.2025 (ಮಂಗಳವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಎ.ಕೆ.ಅಶ್ರಮ್ ರಸ್ತೆ, ದೇವಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗರ‍್ಡನ್, ಮೋದಿ ಗರ‍್ಡನ್, ಸೈನಿಕ ಪ್ರದೇಶ (ಮಿಲಿಟರಿ ಏರಿಯಾ), ವೀರಣ್ಣಪಾಳ್ಯ, ಲುಂಬಿನಿ ಗರ‍್ಡನ್, ಬಿಡಬ್ಲ್ಯೂಎಸ್ಎಸ್ಬಿ ಮಲಮೂತ್ರ ಶುದ್ಧೀಕರಣ ಘಟಕ (ಸೆವೇಜ್ ಪ್ಲಾಂಟ್), ಮರಿಯಣ್ಣಪಾಳ್ಯ, ಕಾಫಿ ಬರ‍್ಡ್ ಲೇಔಟ್, ಕೆಂಪಾಪುರ, ದಸರಹಳ್ಳಿ, ಮಾರುತಿ ಲೇಔಟ್, ಭುವನೇಶ್ವರಿ ನಗರ, ಬಿಇಎಲ್ ಕರ‍್ಪೊರೇಟ್ ಕಚೇರಿ, ಚಾಣಕ್ಯ ಲೇಔಟ್, ನಾಗವಾರಾ, ಎಂ.ಎಸ್.ರಾಮಯ್ಯ ನರ‍್ತ್ ಸಿಟಿ, ತಾಣಿಸಂದ್ರ…

Read More

ಬೆಂಗಳೂರು: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯ ಸರ್ಕಾರ ಜನರ ಮೇಲೆ ಹಾಕಿರುವ ತೆರಿಗೆ ಇಳಿಸುವುದೇ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು 2017 ರಲ್ಲಿ ಪ್ರಾರಂಭವಾಗಿರುವ ಜಿಎಸ್ ಟಿ ದಿಟ್ಟ ನಿರ್ಧಾರ. ಕೊವಿಡ್ ಸಂದರ್ಭದಲ್ಲಿಯೂ ಯಾವ ರಾಜ್ಯಕ್ಕೂ ತೊಂದರೆ ಆದಗಂತೆ ನೋಡಿಕೊಂಡಿರುವ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಈಗ ಆರ್ಥಿಕ ಸುಭದ್ರತೆಯ ಹಿನ್ನೆಲೆಯಲ್ಲಿ ಬಹಳಷ್ಟು ವಸ್ತುಗಳಿಗೆ ತೆರಿಗೆ ವಿನಾಯತಿ ಮಾಡಿದ್ದಾರೆ. ಶೇ. 90 ರಷ್ಟು ವಸ್ತುಗಳ ಮೇಲಿನ ತೆರಿಗೆಯನ್ನು ಶೇ ೫% ಕ್ಕೆ ಇಳಿಸಿದ್ದಾರೆ. ಕೆಲವು ವಸ್ತುಗಳಿಗೆ ಶೇ 18% ರಷ್ಟು ತೆರಿಗೆ ಮಾಡಿ ಕೇವಲ ಎರಡೇ ಸ್ಲ್ಯಾಬ್ ಮಾಡಿ ತೆರಿಗೆ ಸರಳೀಕರಣ ಮಾಡಿರುವ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ…

Read More