Subscribe to Updates
Get the latest creative news from FooBar about art, design and business.
Author: kannadanewsnow09
ರಾಜ್ಯದ 4.30 ಕೋಟಿ ಜನರು ‘ಗ್ಯಾರಂಟಿ ಯೋಜನೆ’ಯ ಪ್ರತಿಫಲ ಪ್ರತಿ ದಿನ, ತಿಂಗಳು ಪಡೆಯುತ್ತಿದ್ದಾರೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯದ 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಮಧ್ಯಾಹ್ನದ ಸಭೆಯಲ್ಲಿ ಮಾತನಾಡಿ, ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ ಎಂದರು. ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ, ಸಣ್ಣನೀರಾವರಿ ಇಲಾಖೆಯಲ್ಲಿ 2000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6000 ಕೋಟಿ ರೂಪಾಯಿ ಬಿಲ್ ಬಾಕಿ ಉಳಿಸಿದ್ದಾರೆ, ಬೆಂಗಳೂರು ನಗರ 5000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು ಹಾಳುಮಾಡಿ,…
ಬೆಂಗಳೂರು: ಈಗಾಗಲೇ ಕೇಂದ್ರೀಕೃತ ದಾಖಲಾತಿ ಘಟಕದಿಂದ ಮೊದಲ ಸುತ್ತಿನ ಬಿ.ಎಡ್ ದಾಖಲಾತಿಗೆ ಸೀಟು ಹಂಚಿಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ 2ನೇ ಹಂತದ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ 12-01-2024ರಂದು ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೇಂದ್ರೀಕೃತ ದಾಖಲಾತಿ ಘಟಕದಿಂದ ನೀಡಿದ್ದು, 2023-24ನೇ ಸಾಲಿನ ಬಿ.ಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಣೆ ದಿನಾಂಕ 12-01-2024ರಂದು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದಿದೆ. ಸೀಟು ಹಂಚಿಕಾಯದ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಚಲನ್ ಡೌನ್ ಲೋಡ್ ಮಾಡಿಕೊಂಡು ದಾಖಲಾತಿ ಶುಲ್ಕವನ್ನು ಎಸ್ ಬಿಐ ಬ್ಯಾಂಕಿನಲ್ಲಿ ಪಾವತಿಸಿ ದಿನಾಂಕ 16-01-2024 ರಿಂದ 18-01-2024ರ ಒಳಗಾಗಿ ಚಲನ್ ಪ್ರತಿಯನ್ನು ಸಂಬಂಧಿಸಿದ ನೋಡಲ್ ಸೆಂಟರ್ ನಲ್ಲಿ ಸಲ್ಲಿಸಿ, ಪ್ರವೇಶಾತಿ ಪತ್ರವನ್ನು ಪಡೆಯುವಂತೆ ಸೂಚಿಸಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.schooleducation.karnataka.gov.in ಅಥವಾ ಸಿಟಿಇ, ಡಯೆಟ್ ನೋಡಲ್ ಕೇಂದ್ರಗಳನ್ನು ಸಂಪರ್ಕಿಸುವಂತೆ ತಿಳಿಸಿದೆ. https://kannadanewsnow.com/kannada/breaking-it-is-clear-that-it-is-rss-bjp-programme-congress-skips-ram-mandir-prana-pratishtha/ https://kannadanewsnow.com/kannada/virat-kohli-opts-out-of-1st-t20i-vs-afghanistan-due-to-personal-reasons-confirms-rahul-dravid/
ನವದೆಹಲಿ: ಜನವರಿ 11 ರಂದು ಮೊಹಾಲಿಯಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ 20 ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿಯಲಿದ್ದಾರೆ ಎಂದು ಕೋಚ್ ರಾಹುಲ್ ದ್ರಾವಿಡ್ ಖಚಿತಪಡಿಸಿದ್ದಾರೆ. ರೋಹಿತ್ ಶರ್ಮಾ ಅವರೊಂದಿಗೆ ವಿರಾಟ್ ಕೊಹ್ಲಿ ಅವರನ್ನು ಟಿ 20 ಐ ಸರಣಿಗೆ ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕೊಹ್ಲಿ ಅನುಪಸ್ಥಿತಿಯಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಕೊಹ್ಲಿ ಟೀಮ್ ಇಂಡಿಯಾದೊಂದಿಗೆ ಮೊಹಾಲಿಗೆ ಪ್ರಯಾಣಿಸಿಲ್ಲ. ಆದಾಗ್ಯೂ, ವಿರಾಟ್ ಕೊಹ್ಲಿ ಎರಡನೇ ಮತ್ತು ಮೂರನೇ ಟಿ 20 ಪಂದ್ಯಕ್ಕೆ ಆಯ್ಕೆಗೆ ಲಭ್ಯವಿರುತ್ತಾರೆ ಎಂದು ದ್ರಾವಿಡ್ ಖಚಿತಪಡಿಸಿದ್ದಾರೆ. https://kannadanewsnow.com/kannada/karve-president-narayana-gowda-granted-bail-in-halasuru-gate-police-station-case/ https://kannadanewsnow.com/kannada/breaking-it-is-clear-that-it-is-rss-bjp-programme-congress-skips-ram-mandir-prana-pratishtha/
ಬೆಂಗಳೂರು: ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ 2017ರ ಪ್ರಕರಣದಲ್ಲಿ ಕೋರ್ಟ್ ಜಾಮೀನು ನೀಡಿತ್ತು. ಇನ್ನೇನು ಇಂದು ಸಂಜೆಯೊಳಗೆ ಬಿಡುಗಡೆಯಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಕೋರ್ಟ್ ಜಾಮೀನಿನ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ಧರು. ಈ ಪ್ರಕರಣದಲ್ಲೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. 2017ರಲ್ಲಿ ನಡೆದಿದ್ದಂತ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ಅವರಿಗೆ ಇಂದು ಜಾಮೀನು ನೀಡಿತ್ತು. ಈ ಬಳಿಕ ಅವರು ಬಿಡುಗಡೆ ಆಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿ ಎಂ ಎ ಕಾಯ್ದೆಯಡಿಯ ಪ್ರಕರಣದಲ್ಲಿ ಮತ್ತೆ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಲಾಗಿದೆ. ಇದೀಗ ಅವರನ್ನು ವಶಕ್ಕೆ ಪಡೆದಿರುವಂತ ಪೊಲೀಸರು ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸೋದಕ್ಕೆ ಕರೆದೊಯ್ದಿದ್ದರು. ಆ ಬಳಿಕ ಅವರನ್ನು ಸೆಂಟ್ ಮಾರ್ಥಾಸ್…
ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ನೈರುತ್ಯ ರೈಲ್ವೆ ಇಲಾಖೆಯಿಂದ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಹುಬ್ಬಳ್ಳಿಯ ನೈರುತ್ಯ ರೈಲ್ವೆ ವಿಭಾಗವು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ತಿರುಚ್ಚಿರಾಪಳ್ಳಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ. ವಿಶೇಷ ರೈಲಿನ ವಿವರಗಳು ಈ ಕೆಳಗಿನಂತಿವೆ ಎಂದಿದೆ. ರೈಲು ಸಂಖ್ಯೆ 06577/06578 ಎಸ್ಎಂವಿಟಿ ಬೆಂಗಳೂರು-ತಿರುಚ್ಚಿರಾಪಳ್ಳಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ (ಟಿಒಡಿ) ಒಂದು ಟ್ರಿಪ್ ಸಂಚರಿಸಲಿದೆ: ರೈಲು ಸಂಖ್ಯೆ 06577 ಎಸ್ಎಂವಿಟಿ ಬೆಂಗಳೂರು-ತಿರುಚಿರಾಪಳ್ಳಿ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 12, 2024 ರಂದು ಮಧ್ಯಾಹ್ನ02:30 ಗಂಟೆಗೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು ಅದೇ ದಿನ ರಾತ್ರಿ 11.30 ಗಂಟೆಗೆ ತಿರುಚ್ಚಿರಾಪಳ್ಳಿ ನಿಲ್ದಾಣವನ್ನು ತಲುಪಲಿದೆ. ಈ ರೈಲು ಬಂಗಾರಪೇಟೆ (04:03/04:05pm), ಸೇಲಂ (06:50/06:55pm),…
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಮಾರ್ಗ ನಕ್ಷೆ ಮತ್ತು ಕರಪತ್ರವನ್ನು ಬಿಡುಗಡೆ ಮಾಡಿದರು. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಇಬ್ಬರೂ ಹಿರಿಯ ನಾಯಕರು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಕರಪತ್ರಗಳನ್ನು ತೋರಿಸಿದರು, ಅಲ್ಲಿ ಮಾರ್ಗ ನಕ್ಷೆ ಮತ್ತು ಯಾತ್ರೆಯ ಉದ್ದೇಶಗಳನ್ನು ತೋರಿಸಿದರು. https://twitter.com/ANI/status/1744993395599393190 ಈಶಾನ್ಯ ರಾಜ್ಯದಿಂದ ಮೆರವಣಿಗೆಯನ್ನು ಪ್ರಾರಂಭಿಸಲು ಪಕ್ಷ ನಿರ್ಧರಿಸಿದೆ ಮತ್ತು ನಗರದ ಮತ್ತೊಂದು ಸ್ಥಳಕ್ಕೆ ಅನುಮತಿ ಕೋರಿದೆ ಎಂದು ಕಾಂಗ್ರೆಸ್ ಹೇಳಿದೆ. ಆದರೆ, ಇಂಫಾಲ್ ಪೂರ್ವ ಜಿಲ್ಲೆಯಿಂದ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಪ್ರಾರಂಭಿಸಲು ಮಣಿಪುರ ಸರ್ಕಾರ ಅನುಮತಿ ನಿರಾಕರಿಸಿದೆ ಎಂದು ಮಣಿಪುರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೀಶಮ್ ಮೆಗಾಚಂದ್ರ ಹೇಳಿದ್ದಾರೆ. “ನಾವು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಭೇಟಿಯಾಗಿ ಇಂಫಾಲ್ ಪೂರ್ವ ಜಿಲ್ಲೆಯ ಹಟ್ಟಾ ಕಾಂಗ್ಜೆಬಂಗ್ನಲ್ಲಿ ‘ಭಾರತ್ ಜೋರೋ ನ್ಯಾಯ್ ಯಾತ್ರಾ’ ಸ್ಥಳಕ್ಕೆ ಅನುಮತಿ ಕೋರಿದ್ದೇವೆ.…
BIG NEWS: ‘ರಾಮ ಮಂದಿರ ಉದ್ಘಾಟನೆ’ಗೆ ಹೋಗುವುದಿಲ್ಲ: ‘ಕಾಂಗ್ರೆಸ್’ ಅಧಿಕೃತವಾಗಿ ಘೋಷಣೆ | Ram Mandir inauguration
ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಯನ್ನು ತಪ್ಪಿಸುವುದಾಗಿ ಕಾಂಗ್ರೆಸ್ ಪಕ್ಷ ಬುಧವಾರ ಹೇಳಿದೆ. “ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರು ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ತರಲಾಗಿದೆ” ಎಂದು ಪಕ್ಷ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. 2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿರುವಾಗ ಮತ್ತು ಭಗವಾನ್ ರಾಮನನ್ನು ಪೂಜಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುವಾಗ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರ್ಎಸ್ಎಸ್ / ಬಿಜೆಪಿ ಕಾರ್ಯಕ್ರಮಕ್ಕೆ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ. ಪ್ರತಿಷ್ಠಾಪನಾ ಸಮಾರಂಭಕ್ಕೆ ಹಲವಾರು ಉನ್ನತ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿತ್ತು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಲಾಲು ಪ್ರಸಾದ್ ಯಾದವ್ ಮತ್ತು ಸೀತಾರಾಮ್ ಯೆಚೂರಿ ಸೇರಿದಂತೆ…
ಹಾವೇರಿ: ಜಿಲ್ಲೆಯಲ್ಲೂ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. ಹೋಟೆಲ್ ರೂಂನಲ್ಲಿದ್ದಂತ ಹಿಂದೂ ವ್ಯಕ್ತಿ ಹಾಗೂ ಮುಸ್ಲೀಂ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿದೆ. ಹಾವೇರಿಯಲ್ಲಿ ಜನವರಿ.8ರಂದು ಲಾಡ್ಜ್ ಒಂದಕ್ಕೆ ನುಗ್ಗಿರುವಂತ ಗುಂಪೊಂದು, ಹಿಂದೂ ವ್ಯಕ್ತಿ ಹಾಗೂ ಮುಸ್ಲೀಂ ಮಹಿಳೆಯ ಮೇಲೆ ಹಲ್ಲೆ ನಡೆಸಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದೆ. ಈ ಬಳಿಕ ಮಹಿಳೆ ಹಾನಗಲ್ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಪೊಲೀಸರು ಓರ್ವ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳೆ ನೀಡಿದಂತ ದೂರಿನಲ್ಲಿ ನನ್ನ ಖಾಸಗಿ ಅಂಗಾಗ ಮುಟ್ಟಿ ಹಲ್ಲೆ ನಡೆಸಲಾಗಿದೆ. ಮನಸೋ ಇಚ್ಛೆ ಹೋಟೆಲ್ ನಲ್ಲಿ ಥಳಿಸಿದ್ದಾರೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಅಂದಾಹೇ ಹಾವೇರಿ ಜಿಲ್ಲೆಯಲ್ಲಿ ನಡೆದಂತ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಹೋಟೆಲ್ ರೂನಲ್ಲಿ ತಂಗಿದ್ದಂತ ಹಿಂದೂ-ಮುಸ್ಲೀಂ ಜೋಡಿಯ ಮೇಲೆ ಹಲ್ಲೆ ನಡೆಸಲಾಗಿದೆ.…
ಬೆಂಗಳೂರು: ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರಿಗೆ 2017ರ ಪ್ರಕರಣದಲ್ಲಿ ಕೋರ್ಟ್ ಜಾಮೀನು ನೀಡಿತ್ತು. ಇನ್ನೇನು ಇಂದು ಸಂಜೆಯೊಳಗೆ ಬಿಡುಗಡೆಯಾಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಕೋರ್ಟ್ ಜಾಮೀನಿನ ಬೆನ್ನಲ್ಲೇ ಮತ್ತೊಂದು ಪ್ರಕರಣದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಹಲಸೂರುಗೇಟ್ ಪೊಲೀಸರು ಬಂಧಿಸಿದ್ದಾರೆ. ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ತಪ್ಪಿಲ್ಲ. 2017ರಲ್ಲಿ ನಡೆದಿದ್ದಂತ ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಬೆಂಗಳೂರಿನ 30ನೇ ಎಸಿಎಂಎಂ ಕೋರ್ಟ್ ಅವರಿಗೆ ಇಂದು ಜಾಮೀನು ನೀಡಿತ್ತು. ಈ ಬಳಿಕ ಅವರು ಬಿಡುಗಡೆ ಆಗಲಿದ್ದಾರೆ ಎನ್ನಲಾಗುತ್ತಿತ್ತು. ಆದ್ರೇ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎನ್ ಡಿ ಎಂ ಎ ಕಾಯ್ದೆಯಡಿಯ ಪ್ರಕರಣದಲ್ಲಿ ಮತ್ತೆ ಕರವೇ ಅಧ್ಯಕ್ಷ ನಾರಾಯಣಗೌಡ ಅವರನ್ನು ಬಂಧಿಸಲಾಗಿದೆ. ಇದೀಗ ಅವರನ್ನು ವಶಕ್ಕೆ ಪಡೆದಿರುವಂತ ಪೊಲೀಸರು ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸೋದಕ್ಕೆ ಕರೆದೊಯ್ಯುತ್ತಿದ್ದಾರೆ. https://kannadanewsnow.com/kannada/karve-state-president-ta-narayana-gowda-granted-bail-2/
ಬೆಂಗಳೂರು : ನಾವು ಸತ್ಯ ಹೇಳಿ ರಾಜಕೀಯ ಲಾಭವನ್ನು ಪಡೆಯುವ ಪ್ರಯತ್ನ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರ ಸಭೆಯಲ್ಲಿ ಅವರು ಮಾತನಾಡಿ, ಗ್ಯಾರಂಟಿಗಳನ್ನು ಅಪಹಾಸ್ಯ, ಅವಹೇಳನ ಮಾಡಿದವರೇ ಈಗ ಮೋದಿ ಗ್ಯಾರಂಟಿ ಎಂದು ಶುರುಮಾಡಿದ್ದಾರೆ. ನಾವು ಜನರಿಗೆ ಸತ್ಯವನ್ನು ಹೇಳಬೇಕು. ಭಾರತದ ಇತಿಹಾಸದಲ್ಲಿ ಯಾವ ಸರ್ಕಾರವೂ ಈ ರೀತಿಯ ಗ್ಯಾರಂಟಿಗಳನ್ನು ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಇದರಿಂದ ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು , ಹಿಂದುಳಿದವರು , ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿದೆ ಎಂದರು. ನಮ್ಮವರೇ ಅಪಪ್ರಚಾರ ಮಾಡುವುದನ್ನು ಬಿಡಬೇಕು ಸರ್ಕಾರದಲ್ಲಿ ಹಣವಿಲ್ಲ ಎನ್ನುವ ಅಪಪ್ರಚಾರವನ್ನು ಸೋಲಿಸಿ. ಇಷ್ಟು ದೊಡ್ಡ ದೊಡ್ಡ ಕಾರ್ಯಕ್ರಮಗಳು ಹಣವಿಲ್ಲದೆ ನಡೆಯುತ್ತಿದೆಯೇ ಎಂದು ಪ್ರಶ್ನಿಸಿದ ಸಿಎಂ, ನಮ್ಮವರೇ ಬಿಜೆಪಿಯವರ ಅಪಪ್ರಚಾರವನ್ನು ಸೋಲಿಸಲು ಮುಂದಾಗಬೇಕು.…