Author: kannadanewsnow09

ಬೆಂಗಳೂರು: ನಾನು ದೇಶದ ಬದಲಾವಣೆಗಾಗಿ ಮತದಾನ ಮಾಡಿದ್ದೇನೆ. ದ್ವೇಷದ ವಿರುದ್ಧ ತ ಹಾಕಿರುವೆ. ನೀವು ತಪ್ಪದೇ ಮತದಾನ ಮಾಡಿ ಎಂಬುದಾಗಿ ನಟ ಪ್ರಕಾಶ್ ರಾಜ್ ಅವರು ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದೆ. ಈ ವೇಳೆಯಲ್ಲಿ ನಟ ಪ್ರಕಾಶ್ ರಾಜ್ ಕೂಡ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಳಿಕ ವೀಡಿಯೋ ಶೇರ್ ಮಾಡಿರುವಂತ ಅವರು, ದೇಶದ ಬದಲಾವಣೆಗಾಗಿ ಮತದಾನ ಮಾಡಿರುವೆ, ದ್ವೇಷದ ವಿರುದ್ಧ ಮತ ಹಾಕಿರುವೆ. ಸಂಸತ್ ನಲ್ಲಿ ನನ್ನ ಪರವಾಗಿ ಧ್ವನಿ ಕೇಳಲಿ ಎಂದು ವೋಟು ಮಾಡಿದ್ದೇನೆ. ದಯಮಾಡಿ ವೋಡು ಮಾಡಿ, ಬದಲಾವಣೆಗೆ ಮತ ಹಾಕಿ ಎಂದಿದ್ದಾರೆ. https://twitter.com/prakashraaj/status/1783681379848327529? ನಟ ಪ್ರಕಾಶ್ ರಾಜ್ ಅವರ ಈ ವೀಡಿಯೋ ಈಗ ವೈರಲ್ ಆಗಿದೆ. ಇಂದು ಬೆಳಿಗ್ಗೆ 7.45ಕ್ಕೆ ಮತಚಲಾಯಿಸಿದ ನಂತ್ರ ವೀಡಿಯೋ ಪೋಸ್ಟ್ ಮಾಡಿದ್ದಾರೆ. ಆ ಬಳಿಕ ಈವರೆಗೆ 536ಕೆ ವೀಕ್ಷಕರು ನಟ ಪ್ರಕಾಶ್ ರಾಜ್ ಪೋಸ್ಟ್ ಮಾಡಿರುವಂತ ವೀಡಿಯೋ ವೀಕ್ಷಿಸಿದ್ದಾರೆ. ಅಲ್ಲದೇ 1.8ಕೆ ನೋಡುಗರು ಕಾಮೆಂಟ್…

Read More

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಇಂದು ಮತದಾನ ನಡೆಯಿತು. ಬೆಳಿಗ್ಗೆ 7 ಗಂಟೆಯಿಂದ ಆರಂಭಗೊಂಡಿದ್ದಂತ ಮತದಾನವು ಸಂಜೆ 6 ಗಂಟೆಯವರೆಗೆ ಯಶಸ್ವಿಯಾಗಿ ನಡೆದು ಬಹುತೇಕ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಆದ್ರೇ ಮತದಾನ ಕೇಂದ್ರದ ಒಳಗಡೆ ಇರುವವರಿಗೆ ಎಲ್ಲಾ ಮತದಾರರು ಮುಗಿಯೋವರೆಗೆ ಮತದಾನಕ್ಕೆ ಅವಕಾಶ ನೀಡಲಾಗುತ್ತದೆ. ಇಂದು ನಡೆದಂತ ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನದಲ್ಲಿ ಮಂಡ್ಯದಲ್ಲಿ ಅತೀಹೆಚ್ಚು ಮತದಾನವಾಗಿದ್ದರೇ, ಬೆಂಗಳೂರಲ್ಲಿ ಅತೀ ಕಡಿಮೆ ಮತದಾನವಾಗಿದೆ ಎಂಬುದಾಗಿ ತಿಳಿದು ಬಂದಿದೆ. ಬಹುತೇಕ ಶಾಂತಿಯುತವಾಗಿ ಎಲ್ಲಾ ಕಡೆಯಲ್ಲಿ ಮತದಾನ ನಡೆದಿದೆ. ಸಂಜೆ 5 ಗಂಟೆಯವರೆಗೆ ಕೇಂದ್ರ ಚುನಾವಣಾ ಆಯೋಗ ನೀಡಿದಂತ ಮಾಹಿತಿಯ ಅನುಸಾರವಾಗಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮಾತ್ರ ಮತದಾನವಾಗಿದೆ. ಇಲ್ಲಿದೆ 14 ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಉಡುಪಿ-ಚಿಕ್ಕಮಗಳೂರು – ಶೇ.72.13 ಹಾಸನ- ಶೇ.72.13 ದಕ್ಷಿಣ ಕನ್ನಡ- ಶೇ.71.83 ಚಿತ್ರದುರ್ಗ- ಶೇ.67 ತುಮಕೂರು – ಶೇ.72.10 ಮಂಡ್ಯ- ಶೇ.74.87 ಮೈಸೂರು- ಶೇ.65.85 ಚಾಮರಾಜನಗರ- ಶೇ.69.60…

Read More

ಪತಿ ಉದ್ಧಾರವಾದಾಗ ಮಾತ್ರ, ಪತ್ನಿ ಮತ್ತು ಮಕ್ಕಳನ್ನು ಚೆನ್ನಾಗಿ ಸಾಕಲು ಸಾಧ್ಯವಾಗುತ್ತದೆ. ಅವರಿಗೆ ಬೇಕಾದ್ದನ್ನು ತೆಗೆದುಕೊಡಲು, ಒಳ್ಳೆಯ ಬಟ್ಟೆ, ಹೊಟ್ಟೆ ತುಂಬ ಊಟ ಹಾಕಲು ಸಾಧ್ಯವಾಗುತ್ತದೆ. ಇನ್ನು ಹಿಂದೂ ಧರ್ಮದ ಪ್ರಕಾರ, ಪತಿ ಉದ್ಧಾರವಾಗಬೇಕು, ಶ್ರೀಮಂತನಾಗಬೇಕು ಅಂದ್ರೆ, ಪತ್ನಿ ಕೆಲ ಕೆಲಸಗಳನ್ನು ಮಾಡಬೇಕಾಗುತ್ತದೆ. ಹಾಗಾದ್ರೆ ಏನು ಆ ಕೆಲಸ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುತ್ತಿದೆ. ಇನ್ನೇನು 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಒಂದು ಗಂಟೆ ಮಾತ್ರವೇ ಬಾಕಿ ಇದೇ. ಇದರ ನಡುವೆ 5 ಗಂಟೆಯವರೆಗೆ ಶೇ.63.90ರಷ್ಟು ಮತದಾನವಾಗಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಶೇ.63.90ರಷ್ಟು ಮತದಾನವಾಗಿದೆ ಎಂದು ತಿಳಿಸಿದೆ. ಇಲ್ಲಿದೆ 14 ಲೋಕಸಭಾ ಕ್ಷೇತ್ರಗಳ ಮತದಾನ ಪ್ರಮಾಣ ಉಡುಪಿ-ಚಿಕ್ಕಮಗಳೂರು – ಶೇ.72.13 ಹಾಸನ- ಶೇ.72.13 ದಕ್ಷಿಣ ಕನ್ನಡ- ಶೇ.71.83 ಚಿತ್ರದುರ್ಗ- ಶೇ.67 ತುಮಕೂರು – ಶೇ.72.10 ಮಂಡ್ಯ- ಶೇ.74.87 ಮೈಸೂರು- ಶೇ.65.85 ಚಾಮರಾಜನಗರ- ಶೇ.69.60 ಬೆಂಗಳೂರು ಗ್ರಾಮಾಂತರ – ಶೇ.61.78 ಬೆಂಗಳೂರು ಉತ್ತರ- ಶೇ.50.84 ಬೆಂಗಳೂರು ಕೇಂದ್ರ – ಶೇ.48.61 ಬೆಂಗಳೂರು ದಕ್ಷಿಣ- ಶೇ.49.37 ಚಿಕ್ಕಬಳ್ಳಾಪುರ – ಶೇ.70.97 ಕೋಲಾರ- ಶೇ.71.26 https://kannadanewsnow.com/kannada/breaking-x-down-across-the-country-including-karnataka/ https://kannadanewsnow.com/kannada/congress-conspiring-to-take-away-sc-st-obc-rights-pm-modi/

Read More

ಚಿತ್ರದುರ್ಗ/ತುಮಕೂರು/ಮಂಡ್ಯ: ಲೋಕಸಭಾ ಚುನಾವಣೆಗೆ ಇಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಇಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ವೋಟ್ ಮಾಡಿ ಬಂದಂತ ಮೂವರು ದಾರುಣವಾಗಿ ಸಾವನ್ನಪ್ಪಿದಂತ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿಯಲ್ಲಿ 55 ವರ್ಷದ ಶಾಲಾ ಶಿಕ್ಷಕಿ ಯಶೋಧಮ್ಮ ಎಂಬುವರನ್ನು ಎಆರ್ ಓ ಆಗಿ ನೇಮಕ ಮಾಡಲಾಗಿತ್ತು. ಚುನಾವಣಾ ಕರ್ತವ್ಯ ನಿರತರಾಗಿದ್ದಂತ ಸಂದರ್ಭದಲ್ಲೇ ಲೋ ಬಿಪಿಯಾಗಿ ಹೃದಯಾಘಾತವಾಗಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸೋ ಮಾರ್ಗ ಮದ್ಯದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ತುಮಕೂರು ನಗರದ ಎಸ್ ಎಸ್ ಪುರಂನಲ್ಲಿ ಮತ ಚಲಾಯಿಸಿ ಮನೆಗೆ ಬಂದಂತ ರಮೇಶ್ ಎಂಬುವರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.  ರಮೇಶ್ ಅವರು ಬಟ್ಟೆ ಅಂಗಡಿ ವ್ಯಾಪಾರಿಯಾಗಿದ್ದರು. ಇಂದು ಬೆಳಿಗ್ಗೆ ಎಸ್ ಎಸ್ ಪುರಂ ಮತಗಟ್ಟೆಗೆ ತೆರಳಿ, ಪತ್ನಿಯೊಂದಿಗೆ ಮತಚಲಾಯಿಸಿ ಮನೆಗೆ ಬಂದಿದ್ದರು. ಈ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಇನ್ನೂ ಮಂಡ್ಯದಲ್ಲಿ ಮತದಾನ ಮಾಡಿ ಬಂದು ವೃದ್ದ ಸಾವನ್ನಪ್ಪಿದ್ದಾರೆ. ಮದ್ದೂರು ತಾಲೂಕಿನ ಚನ್ನೇಗೌಡನ ದೊಡ್ಡಿ…

Read More

ನವದೆಹಲಿ: ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಕೋರಿ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದೆ. ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಪ್ರಿಯಾಂಕಾ ರಜಪೂತ್ ಅವರು ಮೇ 7 ರಂದು ಪ್ರಕರಣದಲ್ಲಿ ಆರೋಪಗಳನ್ನು ರೂಪಿಸುವ ಆದೇಶವನ್ನು ಪ್ರಕಟಿಸಲಿದ್ದಾರೆ. ಡಬ್ಲ್ಯುಎಫ್ಐ ಕಚೇರಿಯಲ್ಲಿ ತನಗೆ ಕಿರುಕುಳ ನೀಡಲಾಗಿದೆ ಎಂದು ದೂರುದಾರರೊಬ್ಬರು ಆರೋಪಿಸಿರುವ ಘಟನೆ ನಡೆದ ದಿನಾಂಕದಂದು ತಾನು ಭಾರತದಲ್ಲಿರಲಿಲ್ಲ ಎಂದು ಸಿಂಗ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ದೂರುದಾರರೊಂದಿಗೆ ಬಂದಿದ್ದ ತರಬೇತುದಾರನ ಕರೆ ವಿವರ ದಾಖಲೆಗಳನ್ನು (ಸಿಡಿಆರ್) ದೆಹಲಿ ಪೊಲೀಸರು ಅವಲಂಬಿಸಿದ್ದಾರೆ ಮತ್ತು ಅವರು ಸೆಪ್ಟೆಂಬರ್ 7, 2022 ರಂದು ಡಬ್ಲ್ಯೂಎಫ್ಐಗೆ ಹೋಗಿದ್ದರು. ಅಲ್ಲಿ ಅವರು ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಸಿಂಗ್ ಅವರ ವಕೀಲರು ಹೇಳಿದ್ದಾರೆ. https://kannadanewsnow.com/kannada/pm-wont-discuss-price-rise-unemployment-farmers-organisations-siddaramaiah/ https://kannadanewsnow.com/kannada/breaking-x-down-across-the-country-including-karnataka/

Read More

ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು,ದಲಿತರು ಅಲ್ಪಸಂಖ್ಯಾತ ಪರವಾಗಿ ಕೆಲಸ ಮಾಡಿಲ್ಲ. ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ. ಅವರು ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ. ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಅವರು ಹತಾಶರಾಗಿದ್ದಾರೆ. ಸಂಬಂಧಪಡದ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದರು ಧೃವೀಕರಣ ಮಾಡುವ ಪ್ರಯತ್ನ ಸಂವಿಧಾನದ 15…

Read More

ಚಾಮರಾಜನಗರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ. ಯಾವುದೇ ಮೂಲ ಸೌಕರ್ಯವಿಲ್ಲವೆಂದು ರೊಚ್ಚಿಗೆದ್ದ ಇಂಡಿಗನತ್ತ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮತಯಂತ್ರಗಳನ್ನು ಪೀಸ್ ಪೀಸ್ ಮಾಡಿದ್ದಾರೆ. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದಾರೆ. ಬಳಿಕ ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಇನ್ನೂ ಮತಗಟ್ಟೆಯ ಮೇಲೆ ಗ್ರಾಮಸ್ಥರ ದಾಳಿಯಿಂದಾಗಿ ಮತಗಟ್ಟೆಯ ಕೆಲ ಅಧಿಕಾರಿಗಳು ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹನೂರು ತಹಶೀಲ್ದಾರ್ ಆಗಮಿಸಿ, ಪರಿಸ್ಥಿತಿ ನಿಯಂತ್ರಿಸೋಕ್ಕೆ ಕ್ರಮವಹಿಸಿದ್ದಾರೆ. https://kannadanewsnow.com/kannada/breaking-x-down-across-the-country-including-karnataka/ https://kannadanewsnow.com/kannada/congress-conspiring-to-take-away-sc-st-obc-rights-pm-modi/

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆಯಲ್ಲಿ ಬೆಂಗಳೂರಲ್ಲಿ ಮತದಾನಕ್ಕೆ ತೆರಳಿದಂತ ಮಹಿಳೆಯೊಬ್ಬರಿಗೆ ಹೃದಯಾಘಾತ ಉಂಟಾಗಿದೆ. ಈ ವೇಳೆಯಲ್ಲಿ ಸ್ಥಳದಲ್ಲೇ ಇದ್ದಂತ ವೈದ್ಯರೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡಿ, ಪ್ರಾಣ ಉಳಿಸಿದಂತ ಘಟನೆ ನಡೆದಿದೆ. ಬೆಂಗಳೂರಿನ ಜೆಪಿ ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿತ್ತು. ಮತದಾರರು ಸರದಿ ಸಾಲಿನಲ್ಲಿ ನಿಂತು, ತಮ್ಮ ಹಕ್ಕನ್ನು ಚಲಾಯಿಸಿದರು. ಹೀಗೆ ಜಂಬೂ ಸವಾರಿ ದಿನ್ನೆಯ ಮತಗಟ್ಟೆಯಲ್ಲಿ ಮತ ಚಲಾಯಿಸೋದಕ್ಕೆ ಬಂದಂತ 50 ವರ್ಷದ ಮಹಿಳೆಯೊಬ್ಬರು ದಿಢೀರ್ ಹೃದಯಾಘಾತಕ್ಕೆ ಒಳಗಾದರು. ಕೂಡಲೇ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ತಜ್ಞ ವೈದ್ಯ ಡಾ.ಗಣೇಶ್ ಶ್ರೀನಿವಾಸ್ ಪ್ರಸಾದ್ ಅವರು, ಮಹಿಳೆಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ, ಪ್ರಾಣ ಉಳಿಸಿದ್ದಾರೆ. ಈ ಮೂಲಕ ವೃತ್ತಿ ಪ್ರಾವೀಣ್ಯತೆಯನ್ನು ಮೆರೆದಿದ್ದಾರೆ. https://twitter.com/thisis_drgsp/status/1783705404926788059 https://kannadanewsnow.com/kannada/breaking-x-down-across-the-country-including-karnataka/ https://kannadanewsnow.com/kannada/congress-conspiring-to-take-away-sc-st-obc-rights-pm-modi/

Read More

ಚಾಮರಾಜನಗರ: ಜಿಲ್ಲೆಯಲ್ಲಿ ಮತಗಟ್ಟೆಯ ಬಳಿಯಲ್ಲಿ ಜನರನ್ನು ಚದುರಿಸಲು ಪೊಲೀಸರು ನಡೆಸಿದಂತ ಲಾಠಿ ಚಾರ್ಜ್ ನಿಂದ ರೊಚ್ಚಿಗೆದ್ದಂತ ಗ್ರಾಮಸ್ಥರು, ಪೊಲೀಸರ ಮೇಲೆ ಪ್ರತಿದಾಳಿ ನಡೆಸಿ, ಮತಗಟ್ಟೆಯಲ್ಲಿನ ಮೇಜು, ಕುರ್ಚಿ, ಇವಿಎಂ ಮಿಷಿನ್ ಧ್ವಂಸಗೊಳಿಸಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ಬಳಿಯ ಇಂಡಿಗನತ್ತ ಗ್ರಾಮದಲ್ಲಿ ಇಂದು ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ಮತಕೇಂದ್ರದ ಬಳಿಯಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಧರಣಿ, ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳಕ್ಕೆ ಬಂದಂತ ಅಧಿಕಾರಿಗಳು ಗ್ರಾಮಸ್ಥರನ್ನು ಮನವೊಲಿಕೆಗೆ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಜೊತೆಗೆ ಚುನಾವಣಾಧಿಕಾರಿಗಳು, ಗ್ರಾಮಸ್ಥರ ನಡುವೆ ವಾಗ್ವಾದಕ್ಕೂ ಕಾರಣವಾಗಿತ್ತು. ಈ ವೇಳೆಯಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸೋದಕ್ಕೆ ಪೊಲೀಸರು ಲಾಠಿ ಚಾರ್ಜ್ ನಡೆಸಿದರು. ಪೊಲೀಸರ ಲಾಠಿ ಚಾರ್ಜ್ ನಿಂದ ರೊಚ್ಚಿಗೆದ್ದಂತ ಗ್ರಾಮಸ್ಥರು ಇಂಡಿಗನತ್ತ ಮತಗಟ್ಟೆಯ ಮೇಲೆ ದಾಳಿ ನಡೆಸಿದರು. ಮತಕೇಂದ್ರದಲ್ಲಿನ ಮೇಜು, ಕುರ್ಚಿ, ಇವಿಎಂ ಯಂತ್ರವನ್ನು ಪುಡಿಪುಡಿ ಮಾಡಿದ್ದಾರೆ. ಈಗ ಸ್ಥಳದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಬಿಗಿ ಪೊಲೀಸ್ ಬಂಧೋಬಸ್ತ್ ಕೈಗೊಳ್ಳಲಾಗಿದೆ. ಇನ್ನೂ ಮತಗಟ್ಟೆಯ ಮೇಲೆ…

Read More