Subscribe to Updates
Get the latest creative news from FooBar about art, design and business.
Author: kannadanewsnow09
ಸಿಕ್ಕಿಂ: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್ಕೆಎಂ) ನಾಯಕ ಪ್ರೇಮ್ ಸಿಂಗ್ ತಮಾಂಗ್ ಸೋಮವಾರ ಎರಡನೇ ಅವಧಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗ್ಯಾಂಗ್ಟಾಕ್ನ ಪಾಲ್ಜೋರ್ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಆಚಾರ್ಯ ಅವರು ತಮಾಂಗ್ ಮತ್ತು ಅವರ ಮಂತ್ರಿಮಂಡಲಕ್ಕೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. https://twitter.com/PTI_News/status/1800124818089775325 ತಮಾಂಗ್ ಹಿಮಾಲಯನ್ ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 2 ರಂದು ನಡೆದ ಎಸ್ಕೆಎಂ ಸಭೆಯಲ್ಲಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ ಎಸ್ಕೆಎಂ 32 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಗೆದ್ದಿದೆ ಇತ್ತೀಚೆಗೆ ಮುಕ್ತಾಯಗೊಂಡ ಸಿಕ್ಕಿಂ ವಿಧಾನಸಭಾ ಚುನಾವಣೆಯಲ್ಲಿ, ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಸ್ಕೆಎಂ 32 ಸ್ಥಾನಗಳಲ್ಲಿ 31 ಸ್ಥಾನಗಳನ್ನು ಗೆದ್ದಿತ್ತು. ಪ್ರತಿಪಕ್ಷ ಎಸ್ಡಿಎಫ್ ಒಂದು ಸ್ಥಾನವನ್ನು ಗೆದ್ದಿತ್ತು. ಇಂದು ಸಿಕ್ಕೀಂ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರೇಮ್ ಸಿಂಗ್ ತಮಾಂಗ್ ಪ್ರಮಾಣವಚನ…
ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ಸರಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು. ಲೋಕಸಭೆ ಫಲಿತಾಂಶದ ಕುರಿತ ಪರಾಮರ್ಶೆ ಬಗ್ಗೆ ಪ್ರಶ್ನಿಸಿದಾಗ, “ಲೋಕಸಭಾ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲಾ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದರು. ಬೇರೆ ಬೇರೆ ಜಿಲ್ಲೆಗಳ ಪರಾಮರ್ಶೆಗೆ ಶೀಘ್ರವೇ ದಿನಾಂಕ ನಿಗದಿ ಇಂದು (ಸೋಮವಾರ, ಜೂ.10) ಬೆಂಗಳೂರಿನ ಫಲಿತಾಂಶಗಳ ಬಗ್ಗೆ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳ ಸಭೆ ನಡೆಸಲಾಗುವುದು. ಶೀಘ್ರವೇ ಇದಕ್ಕೆ ದಿನಾಂಕ ನಿಗದಿ ಮಾಡುತ್ತೇವೆ. ಎಲ್ಲೆಲ್ಲಿ ಏನಾಗಿದೆ ಎನ್ನುವ ಸತ್ಯಶೋಧನೆ ಹಾಗೂ ಪರಿಹಾರ ಹುಡುಕುವ ಕೆಲಸ ಆಗಬೇಕು” ಎಂದು ತಿಳಿಸಿದರು. ಕರ್ನಾಟಕ, ಹಿಮಾಚಲ ಪ್ರದೇಶದ ಚುನಾವಣೆಯ…
ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ (Animal Care and Management)ಯ 10 ತಿಂಗಳುಗಳ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಾತ್ವಿಕ ಅನುಮೋದನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ನಡೆದ ಮೃಗಾಲಯ ಪ್ರಾಧಿಕಾರದ 156ರ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಬೆಂಗಳೂರು ವಿಶ್ವವಿದ್ಯಾಲಯದ ಮಾನ್ಯತೆಯೊಂದಿಗೆ ಬೆಂಗಳೂರಿನ ಲೈಫ್ ಸೈನ್ಸ್ ಎಡ್ಯುಕೇಷನ್ ಟ್ರಸ್ಟ್ ಸಹಯೋಗದಲ್ಲಿ ಈ ಕೋರ್ಸ್ ಆರಂಭಿಸಲು ತಾತ್ವಿಕ ಅನುಮೋದನೆ ನೀಡಿದ್ದಾರೆ. ಈ ಡಿಪ್ಲೊಮಾ ಪದವಿ ಪಡೆದವರಿಗೆ ಉದ್ಯೋಗಾವಕಾಶಗಳು ಲಭಿಸುವಂತಿರಬೇಕು. ದೀರ್ಘಕಾಲ ಈ ಕೋರ್ಸ್ ಪ್ರಾಮುಖ್ಯತೆ ಪಡೆಯುವಂತಿರಬೇಕು, ಈ ನಿಟ್ಟಿನಲ್ಲಿ ಪಠ್ಯಕ್ರಮ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಕ್ರಮ ರೂಪಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಾಧಕ ಬಾಧಕ ಚರ್ಚಿಸಿ ಮುಂದಿನ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲು ಸೂಚಿಸಿದರು. ಪ್ರಾಣಿಗಳ ಆರೈಕೆ ಹಾಗೂ ನಿರ್ವಹಣೆ ಮಾಡಲು ಆಸಕ್ತ ವಿದ್ಯಾರ್ಥಿಗಳಿಗೆ ವೈಜ್ಞಾನಿಕವಾಗಿ ವನ್ಯಜೀವಿ ಮತ್ತು…
ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ಮಳೆಗಾಲದಲ್ಲಿ ಯಾವುದೇ ರಸ್ತೆ ಕಾಮಗಾರಿ ನಡೆಸಬಾರದು. ಇದು ಅವೈಜ್ಞಾನಿಕವಾದಂತ ಕಾಮಗಾರಿಯಾಗಲಿದೆ. ರಸ್ತೆ ಮಾಡಿದ್ರೂ ಹಾಳಾಗಿ ಹೋಗುತ್ತದೆ. ಯಾವುದೇ ರಸ್ತೆ ಕಾಮಗಾರಿ ಮಳೆಗಾಲ ಮುಗಿಯೋವರೆಗೆ ಮಾಡಬಾರದು. ಮಳೆಗಾಲದಲ್ಲಿ ನೈಸರ್ಗಿಕ ಅವಘಡಗಳನ್ನು ತುರ್ತಾಗಿ ಕೈಗೊಳ್ಳೋ ನಿಟ್ಟಿನಲ್ಲಿ ಯಾವುದೇ ಅಧಿಕಾರಿ ರಜೆ ಹಾಕುವಂತಿಲ್ಲ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದಂತ ಅವರು, ಇಲಾಖಾ ವಾರು ಅಧಿಕಾರಿಗಳಿಂದ ತಾಲೂಕಿನ ಪ್ರಗತಿಯ ಕುರಿತಂತೆ ಮಾಹಿತಿಯನ್ನು ಪಡೆದರು. ಮಳೆಗಾಲದಲ್ಲಿ ರಸ್ತೆ ಕಾಮಗಾರಿ ಮಾಡುವಂತಿಲ್ಲ. ಯಾವುದೇ ಕಾಮಗಾರಿ ನಡೆಸದಂತೆ ಖಡಕ್ ಸೂಚನೆ ನೀಡಿದರು. ಅಲ್ಲದೇ ಮಳೆಗಾಲದಲ್ಲಿ ಅಲ್ಲಲ್ಲಿ ಅವಘಡಗಳು ಉಂಟಾಗುತ್ತವೆ. ಇವುಗಳನ್ನು ಸಕಾಲದಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕಿದೆ. ಈ ಹಿನ್ನಲೆಯಲ್ಲಿ ಯಾವುದೇ ಅಧಿಕಾರಿಗಳು ಮೂರು ತಿಂಗಳು ರಜೆ ಹಾಕುವಂತಿಲ್ಲ. ನಿಮ್ಮ ಕೆಲಸಗಳು ಏನೇ ಇದ್ರೂ ರಜಾ ದಿನಗಳಲ್ಲಿ ಮುಗಿಸಿಕೊಳ್ಳುವಂತೆ ತಿಳಿಸಿದರು. ಮಳೆಗಾಲದಲ್ಲಿ ಸಮಸ್ಯೆ ಪರಿಹರಿಸೋ ನಿಟ್ಟಿನಲ್ಲಿ ಪಿಡಿಓ, ವಿಎ ಕೆಲಸ ಮುಖ್ಯವಾಗಿದೆ.…
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿನ ಸಾರ್ವಜನಿಕರ ಅನುಕೂಲಕ್ಕಾಗಿ ಈಶ್ವರ ಡೆಕೋರೇಟರ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ, ಲೋಕಾರ್ಪಣೆಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಮಾರ್ಕೆಟ್ ರಸ್ತೆಯ ಈಶ್ವರ ಡೆಕೋರೇಟರ್ಸ್ ಬಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟ ಸ್ಥಾಪನೆ ಮಾಡಲಾಗಿತ್ತು. ಈ ಘಟಕವನ್ನು ಇಂದು ನಗರದ ಸಭಾ ಸದಸ್ಯರಾದ ಸೈಯದ್ ಜಾಕೀರ್ ಅವರು ಉದ್ಘಾಟಿಸಿದರು. ಈ ಮೂಲಕ ಸಾರ್ಜಜನಿಕರ ಉಪಯೋಗಕ್ಕಾಗಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಸಾಗರ ನಗರಸಭೆಯ ಮಾಜಿ ಸದಸ್ಯರಾದ ಕವಿತಾ ಜಯಣ್ಣ, ಕೆ.ವಿ. ಗಂಗಾಧರ, ಕೆ.ವಿ. ಲಕ್ಷ್ಮಣ, ಕೆ.ವಿ. ಜಯರಾಮ, ರಾಮಚಂದ್ರ ಪಿ ನಾಯಕ್, ವಿ. ರಾಘವೇಂದ್ರ ಮೊದಲಾದವರು ಹಾಜರಿದ್ದರು. https://kannadanewsnow.com/kannada/prajwal-rape-case-sit-mahazar-at-basavanagudi-residence-crucial-evidence-found/ https://kannadanewsnow.com/kannada/breaking-actor-yuvaraj-kumar-files-for-divorce-in-court/
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಬೆಂಗಳೂರಿನ ಬಸವನಗುಡಿಯಲ್ಲಿರುವಂತ ನಿವಾಸದಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ಮಹತ್ವದ ಸಾಕ್ಷ್ಯ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಬಸವನಗುಡಿಯ ನಿವಾಸಕ್ಕೆ ಅವರನ್ನು ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದಾರೆ. ಈ ವೇಳೆಯಲ್ಲಿ ತಾಯಿ ಭವಾನಿ ರೇವಣ್ಣ ಮನೆಯ ಮೊದಲ ಮಹಡಿಯಲ್ಲಿರುವ ತುಳಸಿಕಟ್ಟೆಗೆ ಪೂಜೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಬಸನಗುಡಿಯ ಹೆಚ್.ಡಿ ರೇವಣ್ಣ ಅವರ ಮನೆಯಲ್ಲಿದ್ದಂತ ಕಂಪ್ಯೂಟರ್ ಅನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳ ಮಹಜರು ಮಾಡಿದ ಬಳಿಕ ಆರೋಪಿಯ ಹೇಳಿಕೆಯನ್ನು ಅದೇ ಸಿಸ್ಟಂನಲ್ಲಿ ಟೈಪಿಂಗ್ ಮಾಡಿಕೊಂಡು, ಹೇಳಿಕೆ ದಾಖಲಿಸಿಕೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮನೆಯ ಕೆಲ ಜಾಗಗಳನ್ನು ಎವಿಡೆನ್ಸ್ ಗಾಗಿ ಅಧಿಕಾರಿಗಳು ಪರಿಗಣಿಸಿದ್ದು, ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿರುವಂತ ಜಾಗ, ಅಶ್ಲೀಲ ವೀಡಿಯೋದಲ್ಲಿರುವ ಜಾಗಗಳ ಬಗ್ಗೆಯೂ ಎಸ್ಐಟಿ…
ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ಮತ್ತೊಂದು ತೆರಿಗೆ ಶಾಕ್ ನೀಡೋದಕ್ಕೆ ಬಿಬಿಎಂಪಿ ಮುಂದಾಗಿದೆ.ಅದೇ ಆಸ್ತಿ ತೆರಿಗೆ ಜೊತೆಗೆ ಘನತ್ಯಾಜ್ಯ ಸಂಗ್ರಹಣ ಶುಲ್ಕ ಸಂಗ್ರಹಕ್ಕೂ ಬಿಬಿಎಂಪಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹೌದು ಬೆಂಗಳೂರಿನ ಜನತೆಗೆ ಶೀಘ್ರವೇ ಪ್ರತಿ ಮನೆಗೂ ಘನತ್ಯಾಜ್ಯ ಶುಲ್ಕ ಕಟ್ಟೋದು ಖಚಿತವಾಗಿದೆ. ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಸಲ್ಲಿಸಿದಂತ ಪ್ರಸ್ತಾವನೆಯಲ್ಲಿ ವಸತಿ ಕಟ್ಟಡಗಳಿಗೆ ಮಾಸಿಕ 100 ರೂ, ವಾಣಿಜ್ಯ ಕಟ್ಟಡಗಳಿಗೆ 200ರೂ ದರ ನಿಗದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದು ಕಟ್ಟಡದಲ್ಲಿ 10 ಮನೆ ಇದ್ರೆ, ಪ್ರತಿ ಮನೆಗೂ ಆಸ್ತಿ ತೆರಿಗೆ ಮೂಲಕ ಮಾಸಿಕ 100 ರೂ. ಸಂಗ್ರಹ ಮಾಡಲು ಅನುಮತಿ ನೀಡುವಂತೆ ಕೋರಿದೆ. ಇದಲ್ಲದೇ ಆಸ್ತಿ ತೆರಿಗೆ ಮೂಲಕ ಸಂಗ್ರಹವಾದ ಹಣವನ್ನ ಬಿಬಿಎಂಪಿ ಕಂಪನಿಗೆ ವರ್ಗಾವಣೆ ಮಾಡಲು ತಯಾರಿ ನಡೆಯುತ್ತಿದೆ. ದರ ನಿಗದಿಯಾದ್ರೆ ವಾರ್ಷಿಕ 800 ಕೋಟಿ ಘನತ್ಯಾಜ್ಯ ಕಂಪನಿಗೆ ಆದಾಯ ಬರಲಿದೆ. ಅಂದುಕೊಂಡಂತೆ ಆದ್ರೆ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ಸೇವಾ ಶುಲ್ಕ…
ಬೆಂಗಳೂರು: ಸ್ಯಾಂಡಲ್ ವುಡ್ ಯುವ ನಟ, ರಾಘವೇಂದ್ರ ರಾಜ್ ಕುಮಾರ್ ಅವರ 2ನೇ ಪುತ್ರ ಯುವ ರಾಜ್ ಕುಮಾರ್ ಅವರ ದಾಂಪತ್ಯದಲ್ಲಿ ಬಿರುಕು ಕಂಡಿದೆ. ಈ ಮೂಲಕ ದೊಡ್ಮನೆ ಮಗ ಗುರು ರಾಜ್ ಕುಮಾರ್ ಡಿವೋರ್ಸ್ ಗೆ ಮುಂದಾಗಿದ್ದು, ಪತ್ನಿ ಶ್ರೀ ದೇವಿ ಭೈರಪ್ಪ ಅವರಿಂದ ದೂರವಾಗೋದಕ್ಕೆ ಫ್ಯಾಮಿಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಕಳೆದ ನಾಲ್ಕು ದಿನಗಳ ಹಿಂದೆಯೇ ಯುವ ರಾಜ್ ಕುಮಾರ್ ಅವರು ಕೌಟುಂಬಿಕ ನ್ಯಾಯಾಲಯಕ್ಕೆ ವಿವಾಹ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿರೋದಾಗಿ ತಿಳಿದು ಬಂದಿದೆ. ಜೂನ್.6ರಂದು ಫ್ಯಾಮಿಲಿ ಕೋರ್ಟ್ ಗೆ ಎಂಸಿ ಆಕ್ಟ್ ನ ಸೆಕ್ಷನ್ 13 (1) (ia) ಅಡಿಯಲ್ಲಿ ಯುವ ರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಭೈರಪ್ಪ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಜುಲೈ.4ಕ್ಕೆ ಕೋರ್ಟ್ ನಿಗದಿ ಪಡಿಸಿದೆ. ಯುವ ರಾಜ್ ಕುಮಾರ್-ಶ್ರೀ ದೇವಿ ಭೈರಪ್ಪ ಡಿವೋರ್ಸ್ ಗೆ ಕಾರಣವೇನು? ಯುವ ರಾಜ್ ಕುಮಾರ್-ಶ್ರೀ ದೇವಿ ಭೈರಪ್ಪ ಡಿವೋರ್ಸ್…
ಮೈಸೂರು: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೈಸೂರಿನ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ(90) ಅವರನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹತ್ಯೆಗೈದಂತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಿದ್ಧಾರ್ಥನಗರ ಸಮೀಪದ ಬನ್ನೂರು ರಸ್ತೆಯಲ್ಲಿರುವಂತ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ ಅವರನ್ನು ಇಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿಯನ್ನು ಬರ್ಬರವಾಗಿ ಹತ್ಯೆಗೈದಂತ ಆರೋಪಿ ರವಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಸ್ವಾಮೀಜಿಯ ಬಳಿಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದನಂತೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಿಂದಿನ ಕಾರಣ ಸದ್ಯಕ್ಕೆ ತಿಳಿದು ಬಂದಿದಲ್ಲ. ಈ ಸಂಬಂಧ ಮೈಸೂರಿನ ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. https://kannadanewsnow.com/kannada/breaking-actor-yuvaraj-kumar-files-for-divorce-in-court/ https://kannadanewsnow.com/kannada/farmers-should-note-if-you-dont-link-aadhaar-with-bank-account-you-wont-get-crop-insurance-compensation/
ನವದೆಹಲಿ: ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ವಾಹನದ ಮೇಲೆ ಶಂಕಿತ ಉಗ್ರರು ಸೋಮವಾರ ದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಾವಲು ಪಡೆ ಹಿಂಸಾಚಾರ ಪೀಡಿತ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿತ್ತು. ಈ ವೇಳೆಯಲ್ಲಿ ಶಂಕಿತ ಉಗ್ರರು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಭದ್ರತಾ ಪಡೆಗಳ ವಾಹನಗಳ ಮೇಲೆ ಅನೇಕ ಗುಂಡುಗಳನ್ನು ಹಾರಿಸಲಾಗಿದೆ. ಅವರು ಪ್ರತೀಕಾರ ತೀರಿಸಿಕೊಂಡರು. ರಾಷ್ಟ್ರೀಯ ಹೆದ್ದಾರಿ -53 ರ ಕೋಟ್ಲೆನ್ ಗ್ರಾಮದ ಬಳಿ ಗುಂಡಿನ ಚಕಮಕಿ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದರು. ದಾಳಿಯ ಸಮಯದಲ್ಲಿ ಕನಿಷ್ಠ ಒಬ್ಬ ಸಿಬ್ಬಂದಿಗೆ ಗುಂಡು ತಗುಲಿದೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ದೆಹಲಿಯಿಂದ ಇನ್ನೂ ಇಂಫಾಲ್ ತಲುಪದ ಸಿಎಂ ಬಿರೇನ್ ಸಿಂಗ್ ಅವರು ಜಿಲ್ಲೆಯ ಪರಿಸ್ಥಿತಿಯನ್ನು ಪರಿಶೀಲಿಸಲು ಜಿರಿಬಾಮ್ಗೆ ಭೇಟಿ ನೀಡಲು ಯೋಜಿಸುತ್ತಿದ್ದರು” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಜಿರಿಬಾಮ್ನಲ್ಲಿ ಶನಿವಾರ ಶಂಕಿತ ಉಗ್ರರು ಎರಡು ಪೊಲೀಸ್ ಹೊರಠಾಣೆಗಳು, ಅರಣ್ಯ…














