Subscribe to Updates
Get the latest creative news from FooBar about art, design and business.
Author: kannadanewsnow09
ದಾವಣಗೆರೆ : ಹತ್ತತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು. ದಾವಣಗೆರೆ ಲೋಕಸಭಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ನಡೆದ ಪ್ರಜಾಧ್ವನಿ-2 ಜನಸಮಾವೇಶ ಉದ್ಘಾಟಿಸಿ ಮಾತನಾಡಿದರು. ಎರಡು ಬಾರಿ ಮುಖ್ಯಮಂತ್ರಿಯಾಗಿ ತಾವು ರಾಜ್ಯದಲ್ಲಿ ಜಾರಿಮಾಡಿದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು, ಭಾಗ್ಯಗಳ ಪಟ್ಟಿ ಮಾಡಿದ ಸಿ.ಎಂ ಸಿದ್ದರಾಮಯ್ಯ ಅವರು ನೀವು ಪ್ರಧಾನಿಯಾಗಿ ಮಾಡಿದ ಸಾಧನೆಗಳನ್ನು ತಾಕತ್ತಿದ್ದರೆ ಭಾರತೀಯರ ಮುಂದೆ ಹೇಳಿ ನೋಡೋಣ ಎಂದು ಸವಾಲು ಹಾಕಿದರು. ಮೋದಿಯವರ ಸಾಧನೆಗಳ ಪಟ್ಟಿ ಹಾಕಬೇಕು ಎಂದರೆ ಅವರು ಹೇಳಿದ ಸುಳ್ಳುಗಳ ಪಟ್ಟಿ ಮಾಡಬಹುದು, ಭಾರತೀಯರಿಗೆ ಹಾಕಿದ ಮೂರು ನಾಮಗಳ ಪಟ್ಟಿ ಮಾಡಬಹುದು, ಕನ್ನಡಿಗರ ಕೈಗೆ ಕೊಟ್ಟ ಚೊಂಬಿನ ಪಟ್ಟಿ ಮಾಡಬಹುದು ಎಂದು ವ್ಯಂಗ್ಯವಾಡಿದರು. ಶೋಕಿ ಮಾಡೋಕೆ, ಟಿಎ-ಡಿಎ ತಗೊಳೋಕೆ ಸಿದ್ದೇಶ್ವರ್ ಅವರನ್ನು ಪಾರ್ಲಿಮೆಂಟಿಗೆ ಕಳಿಸಿದ್ರಾ: ಸಿ.ಎಂ ಪ್ರಶ್ನೆ ರಾಜ್ಯದ ಪರವಾಗಿ, ದಾವಣಗೆರೆ ಜಿಲ್ಲೆಯ ಪರವಾಗಿ,…
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆ ಕರ್ನಾಟಕದಿಂದ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದರು. ನಿನ್ನೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಬೆನ್ನಲ್ಲೇ, ಇಂದು ದುಬೈನಿಂದ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದೇ ಎಸ್ಐಟಿ ಅಧಿಕಾರಿಗಳಿಂದ ಬಂಧಿಸೋ ಸಾಧ್ಯತೆ ಇದೆ. ನಿನ್ನೆಯಷ್ಟೇ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಯಲವು ನಿರೀಕ್ಷಣಾ ಜಾಮೀನನ್ನು ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ನೀಡೋದಕ್ಕೆ ನಿರಾಕರಿಸಿತ್ತು. ಈ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಮನೆಯಲ್ಲಿದ್ದಂತ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಲೈಂಗಿಕ ದೌರ್ಜನ್ಯ, ಅಪಹರಣ, ಅತ್ಯಾಚಾರ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿನ್ನಲೆಯಲ್ಲಿ ಅವರಿಗೆ ಜಾಮೀನು ಸಿಗೋದು ಡೌಟ್ ಎನ್ನಲಾಗುತ್ತಿದೆ. ಹೀಗಾಗಿ ಕುಟುಂಬದವರು ಜಾಮೀನು ಸಿಗೋದು ಇರಲಿ, ಬಿಡಲಿ, ಮೊದಲು ಎಸ್ಐಟಿ ಅಧಿಕಾರಿಗಳ…
ಗದಗ/ಬೆಳಗಾವಿ: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದೆ. ಅವರಿಗೆ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಅವರನ್ನು ವಶಕ್ಕೆ ಪಡೆದಿತ್ತು. ಹಾಗಾದ್ರೇ ಈ ಬಗ್ಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಏನು ಹೇಳಿದ್ರು ಅಂತ ಮುಂದೆ ಓದಿ. ಬೆಳಗಾವಿಯ ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಹೆಚ್.ಡಿ ರೇವಣ್ಣ ಬಂಧನ ಪ್ರಕರಣದಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಈ ಪ್ರಕರಣದಲ್ಲಿ ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದರು. ಇದೇ ವೇಳೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ನೇರವಾಗಿ ಕೋರ್ಟ್ ಗೆ ಹಾಜರಾಗುತ್ತಾರೆ ಎಂಬ ಸಿಎಸ್ ಪುಟ್ಟರಾಜು ಮಾತಿಗೆ ಪ್ರತಿಕ್ರಿಯಿಸಿದಂತ ಅವರು, ಸಿಎಸ್ ಪುಟ್ಟರಾಜು ಏನು ಲಾಯಾರಾ ಎಂದು ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದರು. ಇನ್ನೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗದಗದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನ್ಯಾಯಾಲಯ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ…
ಗದಗ: ಬಸವರಾಜ ಬೊಮ್ಮಾಯಿ ಅವರೇ ನೀವು ರಿಜೆಕ್ಟ್ ಪೀಸ್. ಲೋಕಸಭಾ ಚುನಾವಣೆಗೆ ನಿಂತಿರುವ ನಿಮಗೆ ಮೂರು ಪ್ರಶ್ನೆಗಳನ್ನು ಕೇಳುತ್ತೇನೆ. ನಿಮ್ಮ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಾಯಿತು. ನಿಮ್ಮ ಅಕ್ಕಪಕ್ಕದ ಕ್ಷೇತ್ರದ ಅಭ್ಯರ್ಥಿಗಳೇ ಗೆಲ್ಲಲಿಲ್ಲ. ರೈತರ ಆದಾಯ ಜಾಸ್ತಿ ಮಾಡುತ್ತೇವೆ, 15 ಲಕ್ಷ ತರುತ್ತೇವೆ ಎಂದರು. ಕೊಟ್ಟ ಮಾತು ಉಳಿಸಿಕೊಂಡಿದ್ದಾರೆಯೇ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಗದಗದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದಂತ ಅವರು, ಶಿವಕುಮಾರ್ ಉದಾಸಿ ಅವರ ಮೇಲೆ ಒಂದೇ ಒಂದು ಆರೋಪವಿಲ್ಲ. ಆದರೂ ಅವರಿಗೆ ಏಕೆ ಬಿಜೆಪಿ ಟಿಕೆಟ್ ನೀಡಲಿಲ್ಲ. ಏಕೆಂದರೆ ಬಿಜೆಪಿ ಒಂದೇ ಒಂದು ಕೆಲಸ ಮಾಡಿಲ್ಲ. ನುಡಿದಂತೆ ನಡೆದಿಲ್ಲ ಅದಕ್ಕೆ ಉದಾಸಿ ಅವರೇ ಕೈ ಮುಗಿದು ನನಗೆ ಟಿಕೆಟ್ ಬೇಡ ಎಂದರು. ಬೊಮ್ಮಾಯಿ ಅವರೇ ಹಾವೇರಿ ಜಿಲ್ಲೆಯಲ್ಲಿ ಐದು ಸ್ಥಾನಗಳನ್ನು ಗೆದ್ದಿದ್ದೇವೆ. ರಾಜ್ಯದಲ್ಲಿ 136 ಸ್ಥಾನಗಳನ್ನು ಗೆದ್ದಿದ್ದೇವೆ. ಈ ದಾನ ಧರ್ಮ ಮಾಡುವ ಕೈ ಅಧಿಕಾರಕ್ಕೆ ಬಂದ ಒಂದೇ ಗಂಟೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.…
ಚಿಕ್ಕೋಡಿ: ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ಪ್ರಕರಣದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಎಸ್ಐಟಿ ಅಧಿಕಾರಿಗಳಿಂದ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಹೆಚ್.ಡಿ ರೇವಣ್ಣ ಬಂಧನದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಈ ಸಂಬಂಧ ನಾನು ಪೊಲೀಸರ ಜೊತೆ ಮಾತನಾಡುತ್ತೇನೆ. ನಾವು ಇದರಲ್ಲಿ ಮದ್ಯಪ್ರವೇಶ ಮಾಡಲ್ಲ ಎಂದರು. ಹೆಚ್.ಡಿ ರೇವಣ್ಣ ಅಪಹರಣ ಪ್ರಕರಣವೊಂದರಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ಆದ್ರೇ ಅವರ ಅರ್ಜಿಯನ್ನು ವಜಾ ಮಾಡಲಾಗಿದೆ. ಅವರಿಗೆ ಜಾಮೀನು ಸಿಕ್ಕಿಲ್ಲ. ಹೀಗಾಗಿ ಅವರನ್ನು ಕಸ್ಟಡಿಗೆ ತೆಗೆದುಕೊಂಡಿರಬೇಕು ಅನಿಸುತ್ತೆ ಎಂದರು. https://kannadanewsnow.com/kannada/former-minister-hd-revanna-suspended-from-jds/ https://kannadanewsnow.com/kannada/bigg-news-%e0%b2%a8%e0%b2%be%e0%b2%b3%e0%b3%86-%e0%b2%aa%e0%b3%8d%e0%b2%b0%e0%b2%9c%e0%b3%8d%e0%b2%b5%e0%b2%b2%e0%b3%8d-%e0%b2%b0%e0%b3%87%e0%b2%b5%e0%b2%a3%e0%b3%8d%e0%b2%a3-%e0%b2%ac/
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೆಡಿಎಸ್ ಪಕ್ಷದಿಂದ ಅಮಾತನತುಗೊಳಿಸಲಾಗಿತ್ತು. ಈಗ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಕಿಡ್ನಾಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂದಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತ್ರ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಈ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಸಿಎಸ್ ಪುಟ್ಟರಾಜು, ಟಿ.ಎ ಶರವಣ ಸೇರಿದಂತೆ ವಿವಿಧ ಜೆಡಿಎಸ್ ಮುಖಂಡರು ಭಾಗಿಯಾಗಿದ್ದಾರೆ. ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರ ಬಂಧನದ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಮುಂದಿನ ನಡೆಯ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದ್ದು, ಈ ಜೆಡಿಎಸ್ ಕೋರ್…
ಬೆಂಗಳೂರು: ಪ್ರಜ್ವಲ್ ರೇವಣ್ಣ ಇಷ್ಟೆಲ್ಲಾ ಅತ್ಯಾಚಾರಗಳನ್ನು ನಡೆಸುತ್ತಿದ್ದರೂ ತಂದೆ ಎಚ್.ಡಿ. ರೇವಣ್ಣ ಅವರೇನು ಮಾಡುತ್ತಿದ್ದರು? ಇಷ್ಟೆಲ್ಲಾ ಆಗುತ್ತಿದ್ದರೂ ನೋಡಿಕೊಂಡು ಸುಮ್ಮನಿದ್ದರೇ? ಅಥವಾ ಅಪ್ಪ ಮಗ ಇಬ್ಬರೂ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರೇ? ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಎಲ್ಲಾ ಗೊತ್ತಿದ್ದರೂ ಸುಮ್ಮನಿದ್ದರೇ? ಪ್ರಜ್ವಲ್ ಕೃತ್ಯಗಳು ಬಿಜೆಪಿಗೆ ಗೊತ್ತಿದ್ದೂ ಮೈತ್ರಿ ಅಭ್ಯರ್ಥಿಯಾಗಿ ಹಾಸನದಿಂದ ಕಣಕ್ಕಿಳಿಸಿತೆ? ಬೇಲಿ ಎದ್ದು ಹೊಲ ಮೆಯ್ದರೆ ರಾಷ್ಟ್ರದ ಹೆಣ್ಣುಮಕ್ಕಳ ಪರಿಸ್ಥಿತಿಯೇನು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಸೆರಾವು ಆಕ್ರೋಶ ವ್ಯಕ್ತಪಡಿಸಿದರು. ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟ ಹಾಗೂ ಆಮ್ ಆದ್ಮಿ ಪಾರ್ಟಿ ಸಹಯೋಗದೊಂದಿಗೆ ಮೇಣದ ಬತ್ತಿ ಹಚ್ಚುವ ಮೂಲಕ ಹಾಸನದ ಸಂಸದ ಪ್ರಜ್ವಲ್ ಪ್ರಕರಣದಲ್ಲಿ ನೊಂದಿರುವ ಸಾವಿರಾರು ಹೆಣ್ಣುಮಕ್ಕಳಿಗೆ ರಕ್ಷಣೆ, ಧೈರ್ಯ ಹಾಗೂ ಸಾಂತ್ವನ ನೀಡಲಾಯಿತು. ಈ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದ ವೀಣಾ ಸೆರಾವು, ನಾವಿಲ್ಲಿ ಹೆಣ್ಣು ಮಕ್ಕಳಿಗೆ ಬೆಂಬಲ ಕೊಡಲು ಕ್ಯಾಂಡಲ್ ಹಚ್ಚಿದ್ದೇವೆ, ನೀವೇನು ಮಾಡಿದ್ದೀರಾ? ಎಂದು…
ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಎಸ್ಐಟಿ ಕಚೇರಿಯ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬೆಂಗಳೂರಿನ ಕಾರ್ಲಟನ್ ಭವದಲ್ಲಿರುವಂತ ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಂಧನದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಲಟನ್ ಭವನದ ಬಳಿಯಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬ್ಯಾರಿಕೇಡ್ ಅನ್ನು ಪೊಲೀಸರು ಹಾಕಿದ್ದಾರೆ. ಓರ್ವ ಎಸಿಪಿ, ಇಬ್ಬರು ಇನ್ಸ್ ಪೆಕ್ಟರ್, ಐವರು ಪಿಎಸ್ಐ ಸೇರಿದಂತೆ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೆ ಎಸ್ ಆರ್ ಪಿ ತುಕಡಿಯನ್ನು ಕರೆಸಿಕೊಳ್ಳಲಾಗಿದೆ. https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟೆ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಎರಡು ವಾಹನಗಳು ಭಾರಿ ಗುಂಡಿನ ದಾಳಿಗೆ ಒಳಗಾಗಿದ್ದು, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಸೇನೆಯ ಮೇಲೆ ಸರಣಿ ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾದ ಈ ಪ್ರದೇಶದಲ್ಲಿ ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ. ಈ ದಾಳಿಯಲ್ಲಿ ಯಾವುದೇ ಹಾನಿ ಅಥವಾ ಸಾವುನೋವು ವರದಿಯಾಗಿಲ್ಲ. ಗಾಯಗೊಂಡ ಸೈನಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಪ್ರದೇಶಕ್ಕೆ ಬಲವರ್ಧನೆಯನ್ನು ರವಾನಿಸಲಾಗಿದ್ದು, ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳು ನಡೆಯುತ್ತಿವೆ. https://twitter.com/ANI/status/1786758948084752456 https://kannadanewsnow.com/kannada/good-news-for-job-seekers-application-deadline-for-1000-va-recruitment-extended-till-may-15/ https://kannadanewsnow.com/kannada/sit-officials-arrive-at-former-pm-hd-deve-gowdas-residence-after-son/
ಹುಟ್ಟಿನಿಂದ ಸಾಯುವವರೆಗೂ ನಾವೆಲ್ಲರೂ ದಿನವೂ ಹೊಸದನ್ನು ಕಲಿಯಲೇಬೇಕಾದ ಪರಿಸ್ಥಿತಿಯಲ್ಲಿದ್ದೇವೆ. ಆದರೆ, “ಕಲಿಯುವುದು ಕೈಯಷ್ಟು ದೊಡ್ಡದು, ಆದರೆ ಕಲ್ಲಿನಷ್ಟು ದೊಡ್ಡದು” ಎಂಬ ಅವೈ ಪಟ್ಟಿಯ ಮಾತಿನಂತೆ, ನಾವು ಎಷ್ಟೇ ಅಧ್ಯಯನ ಮಾಡಿದರೂ, ಈ ಜಗತ್ತಿನಲ್ಲಿ ನಾವು ತಿಳಿದುಕೊಳ್ಳಬೇಕಾದ ಹಲವಾರು ವಿಷಯಗಳಿವೆ. ಈ ಮಂತ್ರದ ಬಗ್ಗೆ ನಾವು ಈ ಪೋಸ್ಟ್‌ನಲ್ಲಿ ನೋಡಲಿದ್ದೇವೆ ನಾವು ತಿಳಿದುಕೊಳ್ಳಲು ಬಯಸುವ ಜ್ಞಾನ ಮತ್ತು ಅದನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಯಾವ ಮಂತ್ರವನ್ನು ಬಳಸಬೇಕು ಎಂಬುದನ್ನು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ…