Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ರಾಜ್ಯದ 108 ಆಂಬುಲೆನ್ಸ್ ಡ್ರೈವರ್ ಹಾಗೂ ಟೆಕ್ನೀಷಿಯನ್ ಗಳಿಗೆ ವೇತನ ಪಾವತಿ ಮಾಡಿರಲಿಲ್ಲ. ಹೀಗಾಗಿ ಪ್ರತಿಭಟನೆಗೆ ಇಳಿಯುವುದಾಗಿ ಘೋಷಿಸಲಾಗಿತ್ತು. ಈ ಬೆನ್ನಲ್ಲೇ ಮೂರು ತಿಂಗಳ ವೇತನವನ್ನು ಬಿಡುಗಡೆಗೊಳಿಸಿ ಇಎಂಆರ್ ಐ ಕಂಪನಿ ಆದೇಶಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ವಿಭಾಗದ ಇ ಎಂ ಆರ್ ಐ ಮ್ಯಾನೇಜರ್ ಮಾಹಿತಿ ನೀಡಿದ್ದು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಅಡಿಯಲ್ಲಿ ಇಎಂಆರ್ಐ ಜಿಎಚ್ಎಸ್, ದೇಶಾದ್ಯಂತ ತುರ್ತು ಪ್ರತಿಕ್ರಿಯೆ ಸೇವೆಗಳನ್ನು ಒದಗಿಸುವಲ್ಲಿ ಕಳೆದ 15+ ವರ್ಷಗಳಲ್ಲಿ ಗಣನೀಯ ಪ್ರಗತಿ ಸಾಧಿಸಿದೆ. ಪ್ರಸ್ತುತ, ನಾವು ಶ್ರೀಲಂಕಾದ 16 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳು ಮತ್ತು 2 ಪ್ರಾಂತ್ಯಗಳಲ್ಲಿ 15,000 ಕ್ಕೂ ಹೆಚ್ಚು ಅತ್ಯಾಧುನಿಕ ಆಂಬ್ಯುಲೆನ್ಸ್ಗಳನ್ನು ನಿರ್ವಹಿಸುತ್ತಿದ್ದೇವೆ ಎಂದಿದ್ದಾರೆ. ಈ ಸೇವೆಯು 15,400+ ಆಂಬ್ಯುಲೆನ್ಸ್ಗಳ ನೌಕಾಪಡೆಯೊಂದಿಗೆ ಪ್ರತಿದಿನ ಸರಿಸುಮಾರು 50,000 ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸುತ್ತದೆ, 42 ತುರ್ತು ಕಾಲ್ ಸೆಂಟರ್ಗಳು ಮತ್ತು 60,000 ಕ್ಕೂ ಹೆಚ್ಚು ಸಹವರ್ತಿಗಳ ಬೆಂಬಲವನ್ನು ಹೊಂದಿದೆ. ಹೆಚ್ಚುವರಿಯಾಗಿ, ನಾವು 181…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್ ಭ್ರಷ್ಟಾಚಾರದ” ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ ಕಾರ್ಯ ಅವಧಿಯಲ್ಲಿ ತನಖೆ ನಡೆಸಿ 2 ಮಧ್ಯಂತರ ವರದಿಗಳನ್ನು ನೀಡಿ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು, ಎಳೆ ಎಳೆಯಾಗಿ ಬಿಡಿಸಿಟ್ಟಿದೆ. ಈ ಬ್ರಹ್ಮಾಂಡ ಭ್ರಷ್ಟಾಚಾರ, ಜನರ ಜೀವಗಳ ಜೊತೆ ಚೆಲ್ಲಾಟವಾಡಿದ ಅಮಾನವೀಯ ಘಟನೆಗಳ ಬಗ್ಗೆ ಸತ್ಯ ಸಂಶೋಧನೆ ನಡೆಸಿರುವ ಆಯೋಗದ ವರದಿಯ ಆಧಾರದ ಮೇಲೆ ಮುಂದುವರೆದ ಕ್ರಮಗಳನ್ನು ತೆಗೆದುಕೊಳ್ಳಲು ವಿಶೇಷ ತನಿಖಾ ತಂಡವೊಂದನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ ಎಂದು ಕಾನೂನು, ನ್ಯಾಯ,…
ಬೆಂಗಳೂರು: ರಾಜ್ಯದಲ್ಲಿರುವಂತ ಶಿಕ್ಷಣ ಕಲ್ಯಾಣ ನಿಧಿಯ ವಸತಿ ಕೊಠಡಿಗಳ ಬಾಡಿಗೆ ದರವನ್ನು ಪರಿಷ್ಕರಿಸಿ ಆದೇಶಿಸಲಾಗಿದೆ. ಈ ಮೂಲಕ ಶಿಕ್ಷಣ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ, ಇತರೆ ಇಲಾಖೆಯವರಿಗೆ ಬಿಗ್ ಶಾಕ್ ಅನ್ನು ನೀಡಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಶಿಕ್ಷಣ ಕಲ್ಯಾಣ ನಿಧಿಯ ಕಾರ್ಯದರ್ಶಿ, ಖಜಾಂಚಿಗಳು ಜ್ಞಾಪನ ಪತ್ರ ಹೊರಡಿಸಿದ್ದಾರೆ. ಅದರಲ್ಲಿ ಶಿಕ್ಷಕರ ಕಲ್ಯಾಣ ನಿಧಿಯ ಸಭಾಂಗಣ, ವಸತಿ ಕೊಠಡಿಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಿದ್ದು, ದಿನಾಂಕ 10-10-2024ರಂದು ನಡೆದ ರಾಜ್ಯ ಸಮಿತಿ ಸಭೆಯ ತೀರ್ಮಾನದಂತೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಲಿ ಇರುವ ಬಾಡಿಗೆ ದರಗಳನ್ನು ಪರಿಷ್ಕರಿಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ. ಹೀಗಿದೆ ಪರಿಷ್ಕೃತ ದರಪಟ್ಟಿ ಸಭಾಂಗಣ – ವಿದ್ಯಾರ್ಥಿಗಳ, ಶಿಕ್ಷಕರ ನೋಂದಾಯಿತ ಸಂಘಗಳಿಗೆ, ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳಿಗೆ ರೂ.15000 ಇದ್ದಂತ ದರವನ್ನು ರೂ.20000 ಹಾಗೂ ಜಿಎಸ್ಟಿಗೆ ಹೆಚ್ಚಿಸಲಾಗಿದೆ. ಇನ್ನೂ ಸಭಾಂಗಣವನ್ನು ಇತರೆ ಇಲಾಖೆಯ ಕಾರ್ಯಕ್ರಮಗಳಿಗೆ, ಖಾಸಗಿ ಸಭೆ ಸಮಾರಂಭಗಳಿಗೆ ನಿಗದಿ ಪಡಿಸಿದ್ದಂತ ರೂ.62000 ದರವನ್ನು ಹಾಗೆಯೇ ಮುಂದುವರೆಸಲಾಗಿದೆ. ವಸತಿ ಕೊಠಡಿ…
ಬೆಂಗಳೂರು : “ಪ್ರಜಾಪ್ರಭುತ್ವದಲ್ಲಿ ಯಾರು ಏನು ಬೇಕಾದರು ಆಗಬಹುದು. ನಮ್ಮ ತಂದೆ ರೈತರಾಗಿದ್ದರು, ನಿಮ್ಮ ವೃತ್ತಿ ಆಯ್ಕೆ ಮಾಡಿಕೊಳ್ಳಬೇಕಾದರೆ ಗುಣಮಟ್ಟದ ಶಿಕ್ಷಣ, ಆರ್ಥಿಕ ಸ್ಥಿತಿ ಹಾಗೂ ನಾಯಕತ್ವದ ಗುಣ ಬೆಳಸಿಕೊಳ್ಳಬೇಕು ಎಂಬುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಸಲಹೆ ನೀಡಿದರು. ಇದು ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಂಚಶೀಲನಗರದ ಪಾಲಿಕೆ ಹಿರಿಯ ಪ್ರಾಥಮಿಕ ಶಾಲೆ 7ನೇ ತರಗತಿ ವಿದ್ಯಾರ್ಥಿ ವಿದ್ಯಾಸಾಗರ್, ನಾನು ಈ ರಾಜ್ಯದ ಸಿಎಂ ಆಗಬೇಕು, ಇದಕ್ಕಾಗಿ ಏನು ಓದಬೇಕು ಎಂದು ಕೇಳಿದ ಪ್ರಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೊಟ್ಟ ಸಲಹೆಯುಕ್ತ ಉತ್ತರ. “ಮಕ್ಕಳಲ್ಲಿ ಜ್ಞಾನ ಹೆಚ್ಚಾಗಬೇಕೆಂಬ ಉದ್ದೇಶದಿಂದಲೇ ಕಾರ್ಯಕ್ರಮಗಳಲ್ಲಿ ನಿರೂಪಣೆ ಹಾಗೂ ಮಾತನಾಡಲು ಅವಕಾಶ ನೀಡಲಾಗುತ್ತಿದೆ. ನೀವೆಲ್ಲರೂ ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳ ಜೊತೆ ನೇರವಾಗಿ ಹಾಗೂ ಧೈರ್ಯವಾಗಿ ಮಾತನಾಡುತ್ತಿದ್ದೀರಾ, ವಿಧಾನಸೌಧನ ಸಮ್ಮೇಳನಾ ಸಭಾಂಗಣವು ದೇಶಕ್ಕೆ ಸಂವಿಧಾನ ತರುವಂತಹ ಜಾಗ, ಶಾಸಕಾಂಗ ಸಭೆ ನಡೆಸುವಂತಹ ಜಾಗ, ನೀವೇ ಇಲ್ಲಿ ಕೂತು, ಸಿಎಂ, ಡಿಸಿಎಂ, ಐಎಎಸ್ ಅಧಿಕಾರಿಗಳು ಆಗಬೇಕು”…
ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧೀನದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿಸ್ತರಣಾ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 7 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ : 21.11.2024 ರಂದು ಬೆಳಗ್ಗೆ 11.00 ರಿಂದ ಮಾಧ್ಯಾಹ್ನ 1.00 ರ ವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿಹೆಚ್‌ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಹಾಗೂ ನಕಲು ಪ್ರತಿಗಳು ಮತ್ತು ಇತ್ತೀಚಿನ 2 ಭಾವಚಿತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ: 08182-222382 ನ್ನು ಸಂಪರ್ಕಿಸುವುದು. https://kannadanewsnow.com/kannada/lokayukta-sit-team-formed-to-probe-irregularities-against-10-mining-lease-companies-in-the-state/ https://kannadanewsnow.com/kannada/i-used-to-slap-lafanga-siddaramaiah-husu-son-swamiji/
ಬೆಂಗಳೂರು: ರಾಜ್ಯದ 10 ಗಣಿ ಗುತ್ತಿಗೆ ಕಂಪನಿಗಳ ವಿರುದ್ಧ ತನಿಖೆಗೆ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಲೋಕಾಯುಕ್ತ ಎಸ್ಐಟಿ ತಂಡದಿಂದ ತನಿಖೆ ನಡೆಸಲು ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಸಚಿವ ಹೆಚ್.ಕೆ ಪಾಟೀಲ್ ಅವರು, 10 ಗಣಿ ಕಂಪನಿಗಳವಿರುದ್ಧ ತನಿಖೆಗೆ ನಿರ್ಣಯ ಕೈಗೊಳ್ಳಲಾಗಿದೆ. ಲೋಕಾಯುಕ್ತ ಎಸ್ ಐಟಿ ತನಿಖೆಗೆ ವಹಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು. 10 ಗಣಿ ಕಂಪನಿಗಳು ಯಾವುವು.? ಮೈಸೂರು ಮ್ಯಾಂಗನೀಸ್ ಕಂಪನಿ( ಚಿತ್ರದುರ್ಗ) ದಶರಥ್ ರಾಮೀರೆಡ್ಡಿ ಕಂಪನಿ( ಚಿತ್ರದುರ್ಗ) ಅಲ್ಲಂ ವೀರಭದ್ರಪ್ಪ ಗಣಿ ಕಂಪನಿ( ಚಿತ್ರದುರ್ಗ) ಕರ್ನಾಟಕ ಲಿಂಪೋ ಕಂಪನಿ( ತುಮಕೂರು) ಅಂಜನಾ ಮಿನರಲ್ಸ್ ಕಂಪನಿ( ಚಿತ್ರದುರ್ಗ) ರಾಜಯ್ಯ ಕಾನುಮ್ ಕಂಪನಿ( ಚಿತ್ರದುರ್ಗ) ಮಹಾಲಕ್ಷ್ಮಿ ಆಂಡ್ ಕೋಂ ( ತುಮಕೂರು) ಎಂ.ಶ್ರೀನಿವಾಸುಲು ಕಂಪನಿ( ಚಿತ್ರದುರ್ಗ) ಲಕ್ಷ್ಮಿ ನರಸಿಂಹ ಮೈನಿಂಗ್ ಕಂಪನಿ( ಚಿತ್ರದುರ್ಗ) ಜಿ ರಾಜಶೇಖರ್ ಮಾಲಿಕತ್ವದ ಕಂಪನಿ( ತುಮಕೂರು) ಈ ಮೇಲ್ಕಂಡ ಕಂಪನಿಗಳ…
ವಿಜಯಪುರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಲಫಂಗ. ಹು*ಸೂ* ಮಗನಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂಬುದಾಗಿ ಸ್ವಾಮೀಜಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿದ್ದು, ವ್ಯಾಪಕ ಆಕ್ರೋಶ, ಟೀಕೆಗೂ ಕಾರಣವಾಗಿದೆ. ವಿಜಯಪುರದಲ್ಲಿ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಶ್ರೀಗಳು ಈ ಬಗ್ಗೆ ಮಾತನಾಡಿದ್ದು, ಸಿಎಂ ಸಿದ್ಧರಾಮಯ್ಯ ಅವರಿಗೆ ಕಪಾಳಕ್ಕೆ ಹೊಡೆಯುತ್ತಿದ್ದೆ. ಜಯಮೃತ್ಯಂಜಯ ಸ್ವಾಮಿ ಅವರ ಹೆಗಲ ಮೇಲೆ ಕೈ ಹಾಕಿದ್ದರು. ನನ್ನ ಹೆಗಲಮೇಲೆ ಕೈ ಹಾಕಿದ್ದರೇ ಕಪಾಳಕ್ಕೆ ಹೊಡೆಯುತ್ತಿದ್ದೆ ಎಂದು ಏಕವಚನದಲ್ಲೇ ಸಿಎಂ ಸಿದ್ಧರಾಮಯ್ಯ ಅವರನ್ನು ವಾಗ್ಧಾಳಿ ನಡೆಸಿ, ನಾಲಿಗೆಯನ್ನು ಪಂಚಮಸಾಲಿ ಮೀಸಲಾತಿ ಸಂಬಂಧ ಹರಿಬಿಟ್ಟಿದ್ದಾರೆ. ಅವರು ಬಹಳ ಲಫಂಗ ಇದ್ದಾರೆ. ಯಾವಾಗ ಯಾವಾಗ ಮುಖ್ಯಮಂತ್ರಿ ಆಗುತ್ತಾರೋ ಆಗ ಎಲ್ಲಾ ಗದ್ದಲ ಏಳಿಸುತ್ತಾರೆ. 2ಎ ಹೋರಾಟಕ್ಕೆ ಕಿಚ್ಚು ಎಬ್ಬಿಸಿದ್ದೆ ಸಿದ್ಧರಾಮಯ್ಯ. ಸ್ವಾಮೀಜಿಗಳ ಹೆಗಲಮೇಲೆ ಯಾರಾದರೂ ಕೈ ಹಾಕ್ತಾರಾ.? ಅವರು ಕೈಹಾಕಿದ್ರೆ ಓಕೆ. ಆದರೇ ಈ ಸಿದ್ಧರಾಮಯ್ಯ ಸ್ವಾಮೀಜಿಗಳ ಹೆಗಲ ಮೇಲೆ ಕೈ ಹಾಕ್ತಾರೆ. ನಾನು ಆಗಿದ್ದರೇ ಅವರ ಕಪಾಳಕ್ಕೆ ಭಾರಿಸುತ್ತಿದ್ದೆ.…
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸಾಗುವಳಿ ಪತ್ರವನ್ನು ನೀಡುವ ಸಂಬಂಧ ಡೇಟ್ ಫಿಕ್ಸ್ ಆಗಿದೆ. ಬಗರ್ ಹುಕುಂ ಸಾಗುವಳಿದಾರರ ಅರ್ಜಿಯನ್ನು ನವೆಂಬರ್.26ರೊಳಗೆ ಕ್ಲಿಯರ್ ಮಾಡಿ, ಡಿಸೆಂಬರ್ ಮೊದಲ ವಾರದಲ್ಲಿ ಡಿಜಿಟಲ್ ಸಾಗುವಳಿ ಭೂ ಮಂಜೂರಾತಿ ಪತ್ರ ವಿತರಣೆಗೆ ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯ ಬಳಿಕ ಮಾತನಾಡಿದಂತ ಅವರು, ನವೆಂಬರ್ ತಿಂಗಳ 25 ರ ಒಳಗೆ ತಹಶೀಲ್ದಾರರು ಅರ್ಹ-ಅನರ್ಹ ಅರ್ಜಿಗಳನ್ನು ವಿಂಗಡಿಸಿ ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲಾ ಜಿಲ್ಲಾಧಿಕಾರಿಗಳು ನವೆಂಬರ್.26 ರ ಬೆಳಗ್ಗೆಯೇ ಇಡೀ ಜಿಲ್ಲೆಯ ಪಟ್ಟಿಯನ್ನು ಒಂದುಗೂಡಿಸಿ ನನಗೆ ಸಲ್ಲಿಸಬೇಕು. ಡಿಸೆಂಬರ್ ಮೊದಲ ವಾರದಲ್ಲಿ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಡಿಜಿಟಲ್ ಭೂ ಸಾಗುವಳಿ ಚೀಟಿ ನೀಡಬೇಕು” ಎಂದು ಅವರು ತಾಕೀತು ಮಾಡಿದರು. ರಾಜ್ಯಾದ್ಯಂತ ಬಗರ್ ಹುಕುಂ ಅಡಿ ಭೂ ಮಂಜೂರಾತಿ ಕೋರಿ 14ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಅನರ್ಹ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಕರ್ನಾಟಕರತ್ನ ದಿವಂಗತ ಎಸ್. ನಿಜಲಿಂಗಪ್ಪ ಅವರ ಚಿತ್ರದುರ್ಗದ ಮನೆಯನ್ನು ಸರ್ಕಾರದಿಂದ ಖರೀದಿಸಿ ಸ್ಮಾರಕವಾಗಿ ಸಂರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಈ ಸಂಬಂಧ ಇಂದು ಸಿಎಂ ಜೊತೆ ಮಾತುಕತೆ ನಡೆಸಿದ್ದು, ನಿಜಲಿಂಗಪ್ಪನವರ ಮನೆಯನ್ನು ಖರೀದಿಸಿ, ನವೀಕರಿಸಿ ಅದನ್ನು ಸ್ಮಾರಕವಾಗಿ ಕಾಪಾಡಲು 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಇದಕ್ಕಾಗಿ ಅವರಿಗೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು. ನಿಜಲಿಂಗಪ್ಪ ಅವರು ಏಕೀಕರಣದ ಬಳಿಕ ಮೈಸೂರು ರಾಜ್ಯದ (ಕರ್ನಾಟಕ) ಪ್ರಥಮ ಮುಖ್ಯಮಂತ್ರಿಗಳಾಗಿದ್ದು, ತಮ್ಮ ಸರಳ, ಸಜ್ಜನಿಕೆಯಿಂದ ಇಡೀ ರಾಜ್ಯದ ಜನಮನ ಗೆದ್ದಿದ್ದರು. ಅವರ ಮನೆಯನ್ನು ಸ್ಮಾರಕ ಮಾಡುವುದಾಗಿ ಈ ಹಿಂದೆಯೇ ಸರ್ಕಾರ ಘೋಷಿಸಿತ್ತು. ಈಗ ಆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು. https://kannadanewsnow.com/kannada/good-news-for-bagar-hukum-cultivators-in-the-state-land-allotted-in-first-week-of-december/ https://kannadanewsnow.com/kannada/dont-you-feel-ashamed-minister-krishna-byre-gowda-reprimands-all-tahsildars-of-mysuru/
ಬೆಂಗಳೂರು: ಕೆಲಸ ಮಾಡದ ಮೈಸೂರಿನ ತಹಶೀಲ್ದಾರರೇ ನಿಮಗೆ ನಾಚಿಕೆ ಆಗಲ್ವ? ನಿಮಗೆ ಮನುಷ್ಯತ್ವ ಇಲ್ವ? ಎಂದು ಅಧಿಕಾರಿಗಳನ್ನು ಇಂದಿನ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬಗರ್ ಹುಕುಂ ಅರ್ಜಿ ವಿಲೇ, ನಮೂನೆ 1-5 ಹಾಗೂ ನಮೂನೆ 6-10 ದುರಸ್ಥಿ ಕೆಲಸ ಹಾಗೂ ತಹಶೀಲ್ದಾರ್ ತಕರಾರು ಅರ್ಜಿ ವಿಲೇ ಕೆಲಸದಲ್ಲೂ ಮೈಸೂರು ಸಾಕಷ್ಟು ಹಿಂದೆ ಬಿದ್ದಿದೆ. ಹೀಗಾಗಿ ಮೈಸೂರು ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರ್ ಗಳನ್ನೂ ತರಾಟೆಗೆ ತೆಗೆದುಕೊಂಡ ಸಚಿವರು, “ಮೈಸೂರು ಜಿಲ್ಲೆ ಕಳಪೆಯಲ್ಲಿ ಕಳಪೆ ಜಿಲ್ಲೆಯಾಗುತ್ತಿದೆ. ಕೆಲಸ ಮಾಡದ ಅಧಿಕಾರಿಗಳಿಗೆ ಮನುಷ್ಯತ್ವ ಇದೆಯಾ? ನಿಮಗೆ ಯಾವ ಭಾಷೆಯಲ್ಲಿ ಹೇಳಬೇಕು, ನಾಚಿಕೆ ಆಗಲ್ವ? ಎಂದು ಕಿಡಿಕಾರಿದರು. ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್, ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು. https://kannadanewsnow.com/kannada/good-news-for-bagar-hukum-cultivators-in-the-state-land-allotted-in-first-week-of-december/ https://kannadanewsnow.com/kannada/are-they-horses-donkeys-or-donkeys-to-buy-mlas-mlc-ct-ravi/














