Author: kannadanewsnow09

ದಕ್ಷಿಣ ಕನ್ನಡ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್‌ ಮಂಜೂರಾತಿ ಹಾಗೂ ಈ ಕೆಳಕಂಡ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಅಧಿಕೃತ ಮುದ್ರೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಒತ್ತಿದ್ದಾರೆ. ದೇವಸ್ಥಾನದ ಕಾಮಗಾರಿ ಕೆಲಸಗಳನ್ನು ದೇವರಿಗೆ ಮಾಡುತ್ತಿರುವ ಸೇವೆ ಎಂದು ಪರಿಗಣಿಸಿ ಪ್ರಾಮಾಣಿಕವಾಗಿ‌ ಮಾಡಲು ಕಾಮಗಾರಿ ನಡೆಸುವ ಕಾಂಟ್ರಾಕ್ಟರುಗಳು ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರಿಗೆ ಮುಜರಾಯಿ ಸಚಿವರು ಹಿತನುಡಿಯನ್ನು ನುಡಿದರು. ಶ್ರೀ ಕುಕ್ಕೆ ದೇವಸ್ಥಾನದ ಮಾಸ್ಟರ್ ಪ್ಲಾನ್ ಮೇಲ್ವಿಚಾರಣೆ ಮತ್ತು ವ್ಯವಸ್ಥಾಪನಾ ಸಮಿತಿ ಸಭೆ ನಡೆಸಿದರು. ಶ್ರೀ ಕುಕ್ಕೆ ದೇವಳದ ಮಾಸ್ಟರ್ ಪ್ಲಾನ್ ಯೋಜನೆಯ ಮೂರನೇ ಹಂತದಲ್ಲಿ ಪ್ರಥಮ ಆದ್ಯತೆಯಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳ ಯೋಜನೆಯ ನಕ್ಷೆ ಹಾಗೂ ಪರಿಗಣಿಸಿರುವ ಸೌಲಭ್ಯಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಸಚಿವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೆಲವೊಂದು ಸಲಹೆಗಳನ್ನು ಸಚಿವರು ಸದಸ್ಯರುಗಳು ನೀಡಿದ್ದು, ಅವುಗಳನ್ನು ಅಳವಡಿಸಿಕೊಂಡು ಅನುಷ್ಠಾನ ಮಾಡಲು ಸೂಚನೆ ನೀಡಿದರು. ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ನಿಗದಿ 1. ಶ್ರೀ ದೇವಳದ…

Read More

ಬೆಂಗಳೂರು: ಇತ್ತಿಚೆಗೆ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೃದಯಾಘಾತಗಳನ್ನು ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸುವ ಕುರಿತಂತೆ ಹಾಸನ ಪ್ರಕರಣಗಳ ವರದಿ ಬಂದ ಬಳಿಕ ಚರ್ಚೆ ನಡೆಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ತಜ್ಞರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು.‌ ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿವೆ. ಈ ಬಗ್ಗೆ ಹಾಸನ ಆರೋಗ್ಯ ಅಧಿಕಾರಿಗಳ ಜೊತೆ ಸಂಪರ್ಕಿಸಿ, ಹೃದಯಾಘಾತಗಳ ಬಗ್ಗೆ ವರದಿ ನೀಡುವಂತೆ ತಜ್ಞರ ಸಮಿತಿಗೆ ತಿಳಿಸಲಾಗಿದೆ. ಜಯದೇವ ಎದೆರೋಗ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈಗಾಗಲೇ ಕೋವಿಡ್ ಅಡ್ಡ ಪರಿಣಾಮದಿಂದ ಆಗಿರುವ ಸಾವುಗಳು, ಹೃದಯಾಘಾತಗಳ ಕುರಿತಂತೆ ಸಂಶೋಧನೆ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಗಿತ್ತು. ಇದೀಗ ಹಾಸನ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ಇದೇ ಸಮಿತಿಗೆ ಜವಾವ್ದಾರಿ ವಹಿಸಲಾಗಿದೆ. 10 ದಿನಗಳ ಒಳಗಾಗಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಆರೋಗ್ಯ ಸಚಿವ…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) 2025 ರ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ (Common University Entrance Test Undergraduate -CUET UG) ಅಂತಿಮ ಉತ್ತರ ಕೀಗಳನ್ನು ಬಿಡುಗಡೆ ಮಾಡಿದೆ. ಅಂತಿಮ ಉತ್ತರ ಕೀಗಳು ಈಗ ಅಧಿಕೃತ CUET ವೆಬ್‌ಸೈಟ್ – cuet.nta.nic.in ನಲ್ಲಿ ಲಭ್ಯವಿದೆ. ಅಧಿಕೃತ ಅಂತಿಮ ಉತ್ತರ ಕೀಲಿಯ ಪ್ರಕಾರ, ಈ ಬಾರಿ ಒಟ್ಟು 27 ಪ್ರಶ್ನೆಗಳನ್ನು ಕೈಬಿಡಲಾಗಿದೆ. ಅಂತಿಮ ಕೀ ಉತ್ತರವನ್ನು ಈ ಕೆಳಗಿನ ಹಂತಗಳನ್ನು ಅನುಸರಿಸಿ ಡೌನ್ ಲೋಡ್ ಮಾಡಿಕೊಳ್ಳುವಂತೆ ತಿಳಿಸಿದೆ. CUET UG ಅಂತಿಮ ಉತ್ತರ ಕೀ: ಪರಿಶೀಲಿಸಲು ಮತ್ತು ಡೌನ್‌ಲೋಡ್ ಮಾಡಲು ಹಂತಗಳು ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: cuet.nta.nic.in ಹಂತ 2: ಮುಖಪುಟದಲ್ಲಿ, CUET UG 2025 ಸ್ಕೋರ್‌ಕಾರ್ಡ್ ಲಿಂಕ್‌ಗಾಗಿ ನೋಡಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ ಹಂತ 3: ಅರ್ಜಿ ಸಂಖ್ಯೆ ಮತ್ತು ಪಾಸ್‌ವರ್ಡ್ ಸಲ್ಲಿಸಿ ಹಂತ 4:…

Read More

ಬೆಂಗಳೂರು: ನೆಲಮಂಗಲ- ಅಂಚೆಪಾಳ್ಯ ಕೆಪಿಟಿಸಿಎಲ್‌ 220 ಕೆವಿ ಟವರ್‌ನ ತುರ್ತು ದುರಸ್ಥಿ ಕಾರ್ಯ ಸಲುವಾಗಿ ಬುಧವಾರದ ನಾಳೆ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ತುರ್ತು ದುರಸ್ಥಿ ಸಲುವಾಗಿ ಮೂರು 220 ಕೆವಿ ಸ್ಟೇಷನ್‌ ಗಳಾದ ಅಂಚೆಪಾಳ್ಯ, ಮಾಗಡಿ ಹಾಗೂ ನಾಗಮಂಗಲ ಸ್ಟೇಷನ್‌ ಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ನಾಗಮಂಗಲ ಸ್ಟೇಷನ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳು, ಕುಣಿಗಲ್‌ ತಾಲೂಕಿನ ಬಹುತೇಕ ಪ್ರದೇಶಗಳು, ಕುಣಿಗಲ್‌, ಹುಲಿಯೂರು ದುರ್ಗ, ಯಡವಾಣಿ, ನಿಸ್ಸಾಲೆ, ಚೌಡನಕುಪ್ಪೆ, ಕುದೂರು, ತಿಪ್ಪಸಂದ್ರ, ಉಲ್ಲೇನಹಳ್ಳಿ, ಶ್ರೀಗಿರಿಪುರ, ನೇರಳೆಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/bengaluru-flood-disaster-state-government-releases-sop-to-control-population-density/ https://kannadanewsnow.com/kannada/in-karnataka-82-tigers-have-died-in-five-and-a-half-years/

Read More

ನಮ್ಮಲ್ಲಿ ಪ್ರತಿಯೊಬ್ಬರೂ ಕಷ್ಟಪಟ್ಟು ದುಡಿಯುವ ಮತ್ತು ಹಣ ಸಂಪಾದಿಸುವ ಏಕೈಕ ಕಾರಣವೆಂದರೆ ನಮ್ಮ ಭವಿಷ್ಯದ ಪಾಲುದಾರರನ್ನು ಉತ್ತಮಗೊಳಿಸುವುದು. ಮುಂದಿನ ಪೀಳಿಗೆಯಾಗುವವರು ನಮ್ಮ ವಂಶಸ್ಥರು. ಅವರ ಬದುಕು ಹಸನಾಗಬೇಕಾದರೆ ಉತ್ತಮ ಶಿಕ್ಷಣ ಪಡೆಯಬೇಕು. ನಾವು ಯಾವ ಒಳ್ಳೆಯ ಶಾಲೆಗೆ ಸೇರಿಸಿದರೂ ಓದುವ ಹಂಬಲವಿದ್ದರೆ ಮಾತ್ರ ಅವರು ಓದಬಲ್ಲರು. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ಆದಿ ಪೌರ್ಣಮಿಯ ದಿನದಂದು ಮಾಡಬೇಕಾದ ಹಯಗ್ರೀವರ ಪೂಜೆಯ ಬಗ್ಗೆ ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ…

Read More

ಬೆಂಗಳೂರು: ಜೂನ್ 4 ರಂದು ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿಯನ್ನು ಗೆದ್ದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ ವಾರಗಳ ನಂತರ, ಕರ್ನಾಟಕ ಸರ್ಕಾರವು ದೊಡ್ಡ ಜನಸಂದಣಿಯನ್ನು ನಿರ್ವಹಿಸಲು ಮತ್ತು ಸಾಮೂಹಿಕ ಸಭೆಗಳಲ್ಲಿ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿವರವಾದ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOPs) ಬಿಡುಗಡೆ ಮಾಡಿದೆ. ಸಾರ್ವಜನಿಕ ಕಾರ್ಯಕ್ರಮಗಳು ಹೆಚ್ಚುತ್ತಿರುವ ಕಾರಣ ಪ್ರತಿಕ್ರಿಯೆಯಾಗಿ SOP ಗಳನ್ನು ರೂಪಿಸಲಾಗಿದೆ. ಅವುಗಳಲ್ಲಿ ಕೆಲವು ಕಾಲ್ತುಳಿತ ಅಥವಾ ಕಳಪೆ ಸಮನ್ವಯದಿಂದಾಗಿ ದುರಂತವಾಗಿ ಮಾರ್ಪಟ್ಟಿವೆ. ಸುರಕ್ಷತೆ ಮತ್ತು ಯೋಜನೆ ಅತ್ಯಂತ ಆದ್ಯತೆ ಜೀವಗಳನ್ನು ರಕ್ಷಿಸುವುದು. ಆಸ್ತಿಗೆ ಹಾನಿಯಾಗದಂತೆ ತಡೆಯುವುದು ಮತ್ತು ಯಾವುದೇ ಅನಗತ್ಯ ಘರ್ಷಣೆಯನ್ನು ತಪ್ಪಿಸುವುದು SOPಯ ಮುಖ್ಯ ಗುರಿಯಾಗಿದೆ. ಸರ್ಕಾರವು ಮುಂಚಿತವಾಗಿ ಯೋಜಿಸುವ ಮತ್ತು ಒಳಗೊಂಡಿರುವ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವನ್ನು ಎತ್ತಿ ತೋರಿಸಿದೆ. ಸಾಮಾಜಿಕ ಮಾಧ್ಯಮ ಪ್ರಭಾವ ಮತ್ತು ಕ್ಷಿಪ್ರ ಕ್ರೋಢೀಕರಣ ಇಂದಿನ ಸಭೆಗಳು ಹೆಚ್ಚಾಗಿ ಸ್ವಯಂಪ್ರೇರಿತವಾಗಿರುತ್ತವೆ ಮತ್ತು ಸಾಮಾಜಿಕ ಮಾಧ್ಯಮದಿಂದ ನಡೆಸಲ್ಪಡುತ್ತವೆ ಎಂದು SOPಗಳು ಉಲ್ಲೇಖಿಸುತ್ತವೆ. ಇದಕ್ಕೆ…

Read More

ಕೋಲಾರ: ಜಿಲ್ಲೆಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಘಟನೆ ಕೋಲಾರದ ಬಾವನಹಳ್ಳಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಬಾವನಹಳ್ಳಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಕಾರಿನಲ್ಲಿದ್ದ ಮತ್ತೊಬ್ಬರಿಗೆ ಗಾಯವಾಗಿದೆ. ಅವರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಗರ್ಭಿಣಿ ಮಹಿಳೆಯನ್ನು ಬಾವನಹಳ್ಳಿ ಬಳಿಯ ಕೊರಚನೂರು ಗ್ರಾಮದ ಅರ್ಚನಾ ಎಂಬುದಾಗಿ ತಿಳಿದು ಬಂದಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/393-permanent-asha-kiran-vision-centers-are-ready-for-eye-health-services-in-the-state-minister-dinesh-gundurao/ https://kannadanewsnow.com/kannada/in-karnataka-82-tigers-have-died-in-five-and-a-half-years/

Read More

ಬೆಂಗಳೂರು: ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ನೂತನವಾಗಿ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ನೂತನ ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಇದೇ ತಿಂಗಳ 3 ರಂದು ಬುಧವಾರ ಕೇಂದ್ರಗಳಿಗೆ ಚಾಲನೆ ನೀಡಲಿದ್ದಾರೆ ಎಂದರು. ಈ ಮೊದಲು ಆಶಾಲಿರಣ ಯೋಜನೆಯಡಿ ಆಶಾ ಕಾರ್ಯಕರ್ತೆಯರು ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಕಣ್ಣಿನ ತಪಾಸಣೆ ನಡೆಸಿ ಚಿಕಿತ್ಸೆಗೆ ಅನುವಾಗುತ್ತಿದ್ದರು. ನಿಗದಿತ ಸಮಯದಲ್ಲಿ ಅಭಿಯಾನದ ರೀತಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿತ್ತು. ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ಕೇಂದ್ರಗಳನ್ನೇ ಪ್ರಾರಂಭಿಸಲಾಗುತ್ತಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ ಸೇವೆ ಈ ಕೇಂದ್ರಗಳಲ್ಲಿ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಎಲ್ಲ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು…

Read More

ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಎ, ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ. ಆದರೆ ಸಿ ಗ್ರೇಡ್ ದೇವಸ್ಥಾನಗಳಲ್ಲಿ ಅನುದಾನ ಇಲ್ಲದೇ ಇರುವುದರಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಯನ್ನು ಶ್ರೀಮಂತ ದೇವಸ್ಥಾನಗಳ ವತಿಯಿಂದ ನಡೆಸಲು ಆದ್ಯತೆ ನೀಡಲಾಗುವುದು ಎಂದರು. ಕುಕ್ಕೆ ದೇವಸ್ಥಾನದ ವತಿಯಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು, ಅಭಿವೃದ್ಧಿಯೂ ನಡೆಯುತ್ತಿದೆ ಎಂದರು. ಮೂರು ವರ್ಷದವರೆಗೆ ಪ್ರಾಧಿಕಾರ ಇಲ್ಲ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಅಭಿವೃದ್ಧಿ ಕೆಲಸ ಮಾಡಲಾಗುವುದು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ರಾಧಿಕಾರ ಆಗಬೇಕೆಂಬ ಬೇಡಿಕೆ ಇದೆ. ಈಗ ಸಮಿತಿ ಇರುವುದರಿಂದ ಮುಂದಿನ ಮೂರು ವರ್ಷದವರೆಗೆ ಪ್ರಾಧಿಕಾರ ಮಾಡುವುದಿಲ್ಲ, ಆ ಬಳಿಕ ಯೋಚನೆ ಮಾಡೋಣ ಎಂದರು. ಜಿಲ್ಲೆಯ…

Read More

ದಕ್ಷಿಣ ಕನ್ನಡ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಚೇರಿ ಮೇಲ್ಮಹಡಿ ಸಭಾಂಗಣದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅಧ್ಯಕ್ಷತೆಯಲ್ಲಿ ಕುಕ್ಕೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ 30ನೇ ಮಾಸ್ಟರ್ ಪ್ಲಾನ್ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಸುಮಾರು ರೂ.26 ಕೋಟಿ ವೆಚ್ಚದ ಸುತ್ತು ಪೌಳಿ ನಿರ್ಮಾಣ ಕೆಲಸ, ರಥ ಬೀದಿಯ ಬಲಭಾಗದಲ್ಲಿ ಸುಮಾರು 5000 ಜನ ಏಕಕಾಲದಲ್ಲಿ ಕುಳಿತುಕೊಳ್ಳುವ ಭೋಜನ ಶಾಲೆ, ಅಂದಾಜು 80 ರಿಂದ 100 ಕೋಟಿ ವೆಚ್ಚದಲ್ಲಿ ಇಂಜಾಡಿ ಬಳಿ ಯಾತ್ರಿಕರಿಗೆ 820 ಕೊಠಡಿಗಳ ವಸತಿ ಯೋಜನೆ, ರಥಬೀದಿಯ ಇಕ್ಕೆಲದಲ್ಲಿ ಪಾರಂಪರಿಕ ಕಟ್ಟಡ ನಿರ್ಮಾಣ, ಆಧುನಿಕ ಶೌಚಾಲಯ, ಡಾರ್ಮೆಟರಿ ನಿರ್ಮಾಣ, ಈ ಹಿಂದಿನ ವಸತಿ ಗೃಹಗಳಿಗೆ ಕಾಯಕಲ್ಪ, ನೌಕರರಿಗೆ ನೂತನ ವಸತಿ ಗೃಹ ನಿರ್ಮಾಣ, ಕಸ ವಿಲೇವಾರಿ ಘಟಕ, ವ್ಯಾಪಾರ ಮಳಿಗೆ ನಿರ್ಮಾಣ, ಅರಂಪಾಡಿ-ಎಡೋಳಿ ಮೂಲಕ ಸುಬ್ರಹ್ಮಣ್ಯಕ್ಕೆ ಬೈಪಾಸ್ ರಸ್ತೆ ನಿರ್ಮಾಣ ಮೊದಲಾದ ವಿಷಯಗಳ ಕುರಿತು ಚರ್ಚೆ ನಡೆಯಿತು. ಲೋಕೋಪಯೋಗಿ ಅಭಿಯಂತರ ಪ್ರಮೋದ್…

Read More