Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಹುದ್ದೆಗಳ ಭರ್ತಿಗೆ ಸರ್ಕಾರ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, ಅರಣ್ಯಇಲಾಖೆಯಲ್ಲಿ ಸುಮಾರು 6 ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಅರಣ್ಯ ವೀಕ್ಷಕರ 310 ಹುದ್ದೆಗಳ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣವಾಗಿದ್ದು, ನೀತಿ ಸಂಹಿತೆ ತೆರವಾದ ಬಳಿಕ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು. ಇದರ ಜೊತೆಗೆ 540 ಅರಣ್ಯ ರಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯ ಪೂರ್ವಾನುಮತಿಯ ಅವಶ್ಯಕತೆ ಇಲ. ಹೀಗಾಗಿ…
ಬೆಂಗಳೂರು : ಕರ್ನಾಟಕ ಅರಣ್ಯ ಇಲಾಖೆ ತನಗೆ ನೀಡಲಾದ ವಾರ್ಷಿಕ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡಿರುವುದೇ ಅಲ್ಲದೆ, ರಾಜ್ಯದ ಅರಣ್ಯ ವಲಯ ವ್ಯಾಪ್ತಿಯ ಜೊತೆಗೆ ತನ್ನ ಆದಾಯವನ್ನೂ ಹೆಚ್ಚಿಸಿಕೊಂಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, 2019-20ರ ಸಾಲಿನಲ್ಲಿದ್ದ ಅರಣ್ಯ ಇಲಾಖೆಯ ರಾಜಸ್ವ ಸಂಗ್ರಹಣೆ 263.41 ಕೋಟಿಯಿಂದ 2023-24ರ ಸಾಲಿನಲ್ಲಿ 417.84 ಕೋಟಿ ರೂ.ಗೆ ಹೆಚ್ಚಳವಾಗಿದೆ. 2023-24ನೇ ಸಾಲಿನಲ್ಲಿ ಅಧಿಸೂಚಿತ ಕಾಯ್ದಿಟ್ಟ ಅರಣ್ಯ (ಸೆಕ್ಷನ್ 17) ವ್ಯಾಪ್ತಿ 3395.73 ಹೆಕ್ಟೇರ್ ಅಂದರೆ ಸುಮಾರು 8300 ಎಕರೆಯಷ್ಟು ಹೆಚ್ಚಳವಾಗಿದ್ದರೆ, ರಕ್ಷಿತ ಅರಣ್ಯ ಪ್ರದೇಶ (ಸೆಕ್ಷನ್ 33) 184.52 ಹೆಕ್ಟೇರ್ ಅಂದರೆ 456 ಎಕರೆ ಹೆಚ್ಚಳವಾಗಿದೆ ಎಂದರು. 2600 ಎಕರೆ ಅರಣ್ಯ ಒತ್ತುವರಿ ತೆರವು ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, 3 ಎಕರೆಗಿಂತಲೂ…
ಶಿವಮೊಗ್ಗ : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯು ದೇಶದ ಪಾಲಿಮರ್/ಪೆಟ್ರೋಕೆಮಿಕಲ್ಸ್/ ಪ್ಲಾಸ್ಟಿಕ್ಸ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದ್ದು, 2024-25ನೇ ಸಾಲಿನ ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಿಜಿ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಿಜಿ 3 ವರ್ಷ ಕೋರ್ಸ್‍ಗಳ ಪ್ರವೇಶಕ್ಕೆ ಆನ್ ಲೈನ್ /ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ತೇರ್ಗಡಿಯಾದವರು ವೆಬ್‍ಸೈಟ್ www.cipet.gov.in ರಲ್ಲಿ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಿಪೆಟ್ ಸಂಸ್ಥೆಯ ನಿರ್ದೇಶಕ ಆರ್.ಟಿ. ನಾಗರಳ್ಳಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0821-2510618/9480253024/9791431827/ 9466585669 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/ https://kannadanewsnow.com/kannada/breaking-three-arrested-for-smearing-ink-on-veer-savarkar-flyover-signboard/
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಕನ್ಯಾಕುಮಾರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಮೇ 31 ರಂದು ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಒಂದು ದಿನ ಧ್ಯಾನ ಮಾಡಬಹುದು. ಜೂನ್ 1 ರಂದು ಪ್ರಧಾನಿ ಧ್ಯಾನ ಮಾಡಲು ನಿರ್ಧರಿಸಿದರೆ, ಅವರು ಕನ್ಯಾಕುಮಾರಿಯಿಂದ ಹೊರಡುವ ಮೊದಲು ಎರಡನೇ ದಿನ ವಿವೇಕಾನಂದ ರಾಕ್ ಮೆಮೋರಿಯಲ್ನಲ್ಲಿ ಉಳಿಯುತ್ತಾರೆ ಎಂದು ತಿಳಿದು ಬಂದಿದೆ. ಅವರ ಭೇಟಿಗೂ ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. 2019 ರ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಗೆ ಮುಂಚಿತವಾಗಿಯೇ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಕೇದಾರನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ನಂತರ ಪ್ರಧಾನಿ ಮೋದಿ ಹಿಮಾಲಯದ 11,700 ಅಡಿ ಎತ್ತರದ ಗುಹೆಯಲ್ಲಿ ಧ್ಯಾನ ಮಾಡಿದರು. ಕೇದಾರನಾಥದಿಂದ ಒಂದು ಕಿಲೋಮೀಟರ್ ದೂರದಲ್ಲಿರುವ ಇಂದಿನ ಪ್ರಸಿದ್ಧ ರುದ್ರ ಧ್ಯಾನ ಗುಹೆಯಲ್ಲಿ ಅವರು ರಾತ್ರಿ ಕಳೆದರು. ಈ ಲೋಕಸಭಾ ಚುನಾವಣೆಯಲ್ಲಿ…
ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಒಳಗೊಂಡ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್ಎಸ್ ನಾಯಕಿ ಕೆ ಕವಿತಾ ಸಲ್ಲಿಸಿದ್ದ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ. ವಿಚಾರಣೆಯ ಸಮಯದಲ್ಲಿ, ಕೆ ಕವಿತಾ ಅವರ ವಕೀಲರು ಎರಡೂ ಪ್ರಕರಣಗಳಲ್ಲಿ ಜಾಮೀನಿಗಾಗಿ ವಾದಿಸಿದರು. ತನಿಖಾ ಸಂಸ್ಥೆಗಳೊಂದಿಗೆ ಅವರ ಸಹಕಾರ ಮತ್ತು ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ಒತ್ತಿ ಹೇಳಿದರು. ಕಾನೂನು ತಂಡವು ಅವರ ರಾಜಕೀಯ ನಿಲುವು ಮತ್ತು ಕಾನೂನು ಕಾರ್ಯವಿಧಾನಗಳನ್ನು ಅನುಸರಿಸುವ ಬದ್ಧತೆಯನ್ನು ಎತ್ತಿ ತೋರಿಸಿತು. ಅಂತಿಮವಾಗಿ ದೆಹಲಿ ಅಬಕಾರಿ ನೀತಿ ಪ್ರಕರಣದ ಸಂಬಂಧ ಸಿಬಿಐ ಮತ್ತು ಇಡಿ ಎರಡೂ ಪ್ರಕರಣಗಳಲ್ಲಿ ಬಿಆರ್ಎಸ್ ನಾಯಕಿ ಕೆ.ಕವಿತಾ ಸಲ್ಲಿಸಿದ್ದ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದೆ. https://twitter.com/ANI/status/1795399227553849748 https://kannadanewsnow.com/kannada/sandalwoods-producers-goa-tree-dishyum-dishoom-between-three/ https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಗೋಪಾ ಪ್ರವಾಸದಲ್ಲಿ ವೇಳೆಯಲ್ಲಿ ಭಾರೀ ಗಲಾಟೆಯೇ ನಡೆದಿದೆ. ನಿರ್ಮಾಪಕ ಎ ಗಣೇಶ್ ಹಾಗೂ ಸತೀಶ್ ನಡುವೆ ಗಲಾಟೆ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ರೆಸಾರ್ಟ್ ನಲ್ಲೇ ಇಬ್ಬರು ನಿರ್ಮಾಪಕ ನಡುವೆ ನಡೆದಂತ ಡಿಶ್ಯುಂ ಡಿಶ್ಯುಂನಲ್ಲಿ, ಎ ಗಣೇಶ್ ತಲೆಗೆ ಪೆಟ್ಟು ಬಿದ್ದಿರೋದಾಗಿ ಹೇಳಲಾಗುತ್ತಿದೆ. ಮೇ.27ರಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ನಿರ್ಮಾಪಕರು ಗೋಪಾ ಪ್ರವಾಸಕ್ಕೆ ತೆರಳಿದ್ದರು. ಬಸ್ ನಲ್ಲಿಯೇ ಗಣೇಶ್ ಹಾಗೂ ಮಂಜುನಾಥ್ ನಡುವೆ ಗಲಾಟೆ ನಡೆದಿದೆ. ಈ ಗಲಾಟೆ ತಾರಕ್ಕೇರಿ ಎ.ಗಣೇಶ್, ಮಂಜುನಾಥ್ ಹಾಗೂ ಸತೀಶ್ ಪರಸ್ಪರ ಡಿಶ್ಯುಂ ಡಿಶ್ಯುಂ ಹಲ್ಲೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಗೋವಾದ ಹಿಬೀಸ್ ರೆಸಾರ್ಟ್ ನಲ್ಲೇ ಮೂವರು ನಿರ್ಮಾಪಕ ನಡುವೆ ಗಲಾಟೆ ನಡೆದಿದ್ದರಿಂದ, ನಿರ್ಮಾಪಕ ಎ ಗಣೇಶ್ ಅವರು ಈ ಹಲ್ಲೆಯಲ್ಲಿ ತಲೆಗೆ ಪೆಟ್ಟಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಸ್ಯಾಂಡಲ್ ವುಡ್ ಮೂವರು ನಿರ್ಮಾಪಕರ ನಡುವೆ ನಡೆದಂತ ಗಲಾಟೆಯ ಬಳಿಕ, ಗೋವಾ ಟ್ರಿಪ್ ಕ್ಯಾನ್ಸಲ್ ಮಾಡಿಕೊಂಡು ಅಂದೇ…
ಹಾಸನ: ಕಾಡಾನೆಯನ್ನು ಸೆರೆ ಹಿಡಿಯೋ ಕಾರ್ಯಾಚರಣೆಯ ವೇಳೆ ಕಾದಾಟದಲ್ಲಿ ದಸಹಾ ಆನೆ ಅರ್ಜುನ ಸಾವನ್ನಪ್ಪಿತ್ತು. ಈ ಆನೆಯ ಸಮಾಧಿಯನ್ನು ಅದೇ ಸ್ಥಳದಲ್ಲಿ ಮಾಡಲಾಗಿತ್ತು. ಇಂತಹ ಸಮಾಧಿಯನ್ನು ಕೆಲ ಕಿಡಿಗೇಡಿಗಳು ವಿರೋಪಗೊಳಿಸಿದ್ದರು. ಅಂತವರ ವಿರುದ್ಧ ಈಗ ಎಫ್ಐಆರ್ ದಾಖಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ವಲಯ ಅರಣ್ಯದಲ್ಲಿ ದಸರಾ ಆನೆ ಅರ್ಜುನನ್ನು ಸಮಾಧಿ ಮಾಡಲಾಗಿತ್ತು. ಈ ಸಮಾಧಿಯನ್ನು ತಾವು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡು ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದರು. ಇದಕ್ಕಾಗಿ ಮೀಸಲು ಅರಣ್ಯದೊಳಗೆ ಪ್ರವೇಶಿಸಿ, ಅರ್ಜುನನ ಸಮಾಧಿಯನ್ನು ವಿರೂಪಗೊಳಿಸಿದ್ದರು. ಈ ಹಿನ್ನಲೆಯಲ್ಲಿ ಮೀಸಲು ಅರಣ್ಯವಾಗಿದ್ದರೂ ಅತಿಕ್ರಮವಾಗಿ ಪ್ರವೇಶ ಮಾಡಿ ದಸರಾ ಆನೆ ಅರ್ಜುನನ ಸಮಾಧಿ ವಿರೂಪಗೊಳಿಸಿದ್ದರಿಂದ ಯಸಳೂರು ವಲಯ ಅರಣ್ಯಾಧಿಕಾರಿ ಹೆಚ್.ಡಿ ಕೋಟೆ ನವೀನ್ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ, ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/schools-across-the-state-to-reopen-from-tomorrow-sweets-to-be-served-to-students-on-may-31/ https://kannadanewsnow.com/kannada/delhi-court-denies-bail-to-umar-khalid-in-delhi-riots-conspiracy-case/
ಬೆಂಗಳೂರು: ಬೇಸಿಗೆ ರಜೆಯ ಬಳಿಕ, ನಾಳೆಯಿಂದ ರಾಜ್ಯಾಧ್ಯಂತ ಶಾಲೆಗಳು ಪುನರಾರಂಭವಾಗುತ್ತಿವೆ. ನಾಳೆಯಿಂದ ಆರಂಭಗೊಳ್ಳುವಂತ ಶಾಲೆಗಳಿಗೆ ವಿದ್ಯಾರ್ಥಿಗಳು ಆಗಮಿಸೋದನ್ನು ಸ್ವಾಗತ ಮಾಡೋದಕ್ಕೆ ಶಾಲೆಗಳಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಮೇ.31ರಂದು ಮಕ್ಕಳಿಗೆ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಸಿಹಿಯೂಟದ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮೇ 29ರಿಂದ ಪುನರಾರಂಭವಾಗುತ್ತಿದ್ದು, 31 ರಂದು ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲಕ್ಕೆ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ ಅಂತ ತಿಳಿಸಿದೆ. 2024-25ನೇ ಸಾಲಿನ ಶಿಕ್ಷಣವನ್ನು ʼಶೈಕ್ಷಣಿಕ ಬಲವರ್ಧನೆʼ ಪರಿಕಲ್ಪನೆಯ ಆಧಾರದಲ್ಲಿ ನಿರ್ವಹಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷವಾಕ್ಯ ಸಿದ್ಧಪಡಿಸಿದ್ದು, ಕಲಿಕಾ ಗುಣಮಟ್ಟ ಹಾಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಹೆಚ್ಚಿನ ಒತ್ತು ನೀಡಲು ಸೂಚಿಸಿದೆ ಎಂದು ಹೇಳಿದೆ. ಸೋ ಮೇ.29ರಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನರಾರಂಭಗೊಳ್ಳಲಿದ್ದಾವೆ. ಮೇ.31ರಂದು ಮಕ್ಕಳಿಗೆ ಪ್ರಾರಂಭೋತ್ಸವದ ಸಿಹಿಯೂಟ ಕೂಡ ಸಿಗಲಿದೆ. ಹೀಗಾಗಿ ವಿದ್ಯಾರ್ಥಿಗಳೇ ಶಾಲೆ ತೆರಳಿ, ಪಾಠ, ಆಟದೊಂದಿಗೆ ನಲಿಯುತ್ತಾ, ಸಂತಸದ ಕಲಿಕೆ ಮುಂದುವರೆಸೋದು…
ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣರಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ವಜಾ ಮಾಡಿ, ಬಂಧಿಸಿ ತನಿಖೆ ನಡೆಸುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆಗ್ರಹಿಸಿದರು. ಮಸ್ಕಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರ್ ಬರೆದಿಟ್ಟ ಡೆತ್ ನೋಟ್‍ನಲ್ಲಿ, ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಾದ 187 ಕೋಟಿ ರೂ.ಗಳನ್ನು ಸಚಿವರ ಸೂಚನೆ ಮೇರೆಗೆ ನಕಲಿ ಖಾತೆಗಳಿಗೆ ವರ್ಗಾಯಿಸಿ ಅವ್ಯವಹಾರ ನಡೆಸಲಾಗಿದೆ ಎಂದು ನೇರ ಆರೋಪ ಮಾಡಿದ್ದಾರೆ. ನಿಗಮದ ಆಡಳಿತ ನಿರ್ದೇಶಕ ಹಾಗೂ ಅಧಿಕಾರಿಗಳು ನಕಲಿ ಖಾತೆಗಳನ್ನು ತೆರೆದು ಈ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಎಲ್ಲರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಸಾಕ್ಷ್ಯ ಬೇರೆ ಅಗತ್ಯವಿಲ್ಲ. ಅಂದು ಬಿಜೆಪಿ ಸರಕಾರವಿದ್ದಾಗ ಸಂತೋಷ್…
ಬೆಂಗಳೂರು: ಫೇಕ್ ಖಾತೆಗಳ ಮೂಲಕ ಹೆಣ್ಣುಮಕ್ಕಳ ಬಗ್ಗೆ, ಸೆಲೆಬ್ರೆಟಿಗಳ ಬಗ್ಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿ, ಟ್ರೋಲ್ ಮಾಡುತ್ತಿದ್ದಂತ ಟ್ರೋಲಿಗರ ವಿರುದ್ಧ ಬಿಗ್ ಬಾಸ್ ಮಾಜಿ ಸ್ಪರ್ಧಿ ಸುಷ್ಮಾ ವೀರ್ ಸಿಡಿದೆದ್ದಿದ್ದಾರೆ. ತಾನು ಮಾಡದ ಪೋಸ್ಟ್ ಟ್ರೋಲ್ ಮಾಡಿದಂತ ಕಿಡಿಗೇಡಿಗಳ ವಿರುದ್ಧ ಸೈಬರ್ ಠಾಣೆಗೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಸುಷ್ಮಾ ವೀರ್ ದೂರು ನೀಡಿದ್ದಾರೆ. ಹೌದು ಬಿಗ್ ಬಾಸ್ ಮಾಜಿ ಸ್ಪರ್ಧಿ ಸುಷ್ಮಾ ವೀರ್ ಟ್ರೋಲಿಗರ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ತಾವು ಆಡದ ಮಾತನ್ನು ತಿರುಚಿ ಟ್ರೋಲ್ ಮಾಡಿದ್ದಕ್ಕಾಗಿ ಸೈಬರ್ ಪೊಲೀಸರಿಗೆ, ರಾಜ್ಯ ಮಹಿಳಾ ಆಯೋಗಕ್ಕೆ ಬಿ ಜಯಶ್ರಿ ಪುತ್ರಿ ಸುಷ್ಮಾ ವೀರ್ ದೂರು ನೀಡಿದ್ದಾರೆ. ಅಂದಹಾಗೇ ಕೆಲ ದಿನಗಳ ಹಿಂದೆ ಯೂಟ್ಯೂಬರ್ ಸಂದರ್ಶನ ಒಂದಕ್ಕೆ ನೀಡಿದ್ದಂತ ಸಂದರ್ಶನದಲ್ಲಿ ಸುಷ್ಮಾ ವೀರ್ ಮಾತನಾಡದ ಮಾತನ್ನು ತಿರುಚಿ ಟ್ರೋಲ್ ಮಾಡಲಾಗಿತ್ತು. ಅವರ ಪೇಜ್ ಗಳ ಲೈಕ್ ಲಾಭಕ್ಕಾಗಿ ಮಾನಹಾನಿ ರೀತಿಯಲ್ಲಿ ತಿರುಚಿ ಟ್ರೋಲ್ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಸೈಬರ್ ಠಾಣೆ, ಮಹಿಳಾ ಆಯೋಗಕ್ಕೆ ಮಾಜಿ…














