Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಬಿಜೆಪಿ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲಿ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಅಂತ ಅನೇಕರು ಆಶಿಸಿದ್ದರು. ಕೆಲವರು ಇದಕ್ಕಾಗಿ ಹರಕೆ ಮಾಡಿಕೊಂಡಿದ್ದಾರೆ. ಹೀಗೆ ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಗೆದ್ದರೇ ಬೆರಳು ಕರ್ತರಿಸಿ ಅರ್ಪಿಸೋದಾಗಿ ದೇವರಿಗೆ ಹರಕೆಯನ್ನು ವ್ಯಕ್ತಿಯೊಬ್ಬ ಕಟ್ಟಿಕೊಂಡಿದ್ದನು. ಅದರಂತೆ ತನ್ನ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. ಹೌದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದ ನಂತರ ಛತ್ತೀಸ್ಗಢದ ಬಲರಾಂಪುರದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬೆರಳನ್ನು ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿದ್ದಾರೆ. ಜೂನ್ 4 ರಂದು, ಬಿಜೆಪಿ ಬೆಂಬಲಿಗ ದುರ್ಗೇಶ್ ಪಾಂಡೆ ಅವರು ಲೋಕಸಭಾ ಚುನಾವಣೆಯ ಆರಂಭಿಕ ಪ್ರವೃತ್ತಿಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ ಎಂದು ತಿಳಿದಾಗ ಖಿನ್ನತೆಗೆ ಒಳಗಾದರು. ನಂತರ ಕಾಳಿ ದೇವಸ್ಥಾನಕ್ಕೆ ತೆರಳಿ ಬಿಜೆಪಿ ಗೆಲುವಿಗಾಗಿ ಪ್ರಾರ್ಥಿಸಿದರು. ನಂತರ, ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿರುವುದನ್ನು ಮತ್ತು ಎನ್ಡಿಎ ಬಹುಮತದ 272 ಅನ್ನು ದಾಟುತ್ತಿರುವುದನ್ನು ನೋಡಿದ ಪಾಂಡೆ ತುಂಬಾ…
ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಐಬಿಪಿಎಸ್ ಆರ್ ಆರ್ ಬಿ 2024ರ ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಬರೋಬ್ಬರಿ 9000 ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ (ಆರ್ಆರ್ಬಿ) 13 ನೇ ಹಂತದ ಸಾಮಾನ್ಯ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಇದು ಗ್ರೂಪ್ ‘ಎ’ ನೇಮಕಾತಿಯ ಗುರಿಯನ್ನು ಹೊಂದಿದೆ. ಅಧಿಕಾರಿಗಳು (ಸ್ಕೇಲ್-1, 2 ಮತ್ತು 3) ಮತ್ತು ಗ್ರೂಪ್ ‘ಬಿ’ ಕಚೇರಿ ಸಹಾಯಕರು (ವಿವಿಧೋದ್ದೇಶ) ಸೇರಿದ್ದಾವೆ. ಪ್ರೊಬೇಷನರಿ ಅಧಿಕಾರಿಗಳು (ಪಿಒ) ಮತ್ತು ಬ್ಯಾಂಕ್ ಗುಮಾಸ್ತರಂತಹ ಹುದ್ದೆಗಳನ್ನು ಎದುರು ನೋಡುತ್ತಿರುವ ಆಕಾಂಕ್ಷಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ibps.in ಐಬಿಪಿಎಸ್ನ ಅಧಿಕೃತ ವೆಬ್ಸೈಟ್ನಲ್ಲಿ ನೇರ ಲಿಂಕ್ ಅನ್ನು ಹುಡುಕುವ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಕೃತ ವೇಳಾಪಟ್ಟಿಯ ಪ್ರಕಾರ, ಐಬಿಪಿಎಸ್ ಆರ್ಆರ್ಬಿ ಸಿಆರ್ಪಿ 13 ಗೆ ಸಂಬಂಧಿಸಿದ ಅಧಿಸೂಚನೆಯನ್ನು ಐಬಿಪಿಎಸ್ ಜೂನ್ 7 ರಂದು…
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ. ಅದರ ವಿರುದ್ಧ ಮಾತನಾಡುತ್ತಿರೋ ಬಿಜೆಪಿಗರಿಗೆ ಜನರು ಮತ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ನಿಲ್ಲಿಸೋದು ಒಳ್ಳೇದು. ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ಮರು ಪರಿಶೀಲನೆ ಮಾಡಬೇಕು ಅಂತ ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ನಿಲ್ಲಿಸುವುದು ಒಳ್ಳೇದು, ಜನರಿಗೆ ಕಾಂಗ್ರೆಸ್ ಗ್ಯಾರಂಟಿಗಳು ಇಷ್ಟ ಅಗಲ್ಲ. ಇಷ್ಟವಿಲ್ಲವೆಂದು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದರು. ಗ್ಯಾರಂಟಿ ವಿರುದ್ಧ ಮಾತನಾಡಿರೋ ಬಿಜೆಬಿಗೆ ಲೋಕಸಭಾ ಚುನಾವಣೆಯಲ್ಲಿ ಜನರು ಬೆಂಬಲ ನೀಡಿದ್ದಾರೆ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಬಗ್ಗೆ ಮರು ಪರಿಶೀಲನೆ ಅತ್ಯಗತ್ಯವಿದೆ. ನಾನು ಸಿಎಂ ಸಿದ್ಧರಾಮಯ್ಯ ಅವರಲ್ಲಿ ಕೋರುತ್ತೇನೆ ದಯವಿಟ್ಟು ಗ್ಯಾರಂಟಿ ಯೋಜನೆಗಳ ಬಗ್ಗೆ ಮರು ಪರಿಶೀಲಿಸಿ ಎಂದು ಹೇಳಿದರು. ನಾನು ಗ್ಯಾರಂಟಿ ಯೋಜನೆ ನಿಲ್ಲಿಸಿಯೇ ಬಿಡಿ ಅಂತ ಹೇಳುತ್ತಿಲ್ಲ. ಯಾರಿಗೆ ತಲುಪಬೇಕೋ ಅವರಿಗೆ ತಲುಪಲಿ. ಬಡವರು, ಮಧ್ಯಮ…
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ಅನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅಧಿಸೂಚನೆ ಹೊರಡಿಸಿದ್ದಾರೆ. ಡಾ.ಕವಿತಾ ಯೋಗಪ್ಪನವರ್, ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ, ಡಾ.ಶಿವರಾಮಕಾರಂತ ಬಡವಾಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಆಯುಕ್ತರು, ಶಿವಮೊಗ್ಗ ಮಹಾನಗರ ವಾಲಿಕೆ ಈ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ. ಇನ್ನೂ ಈ ಆದೇಶದಿಂದ ಸ್ಥಳ ನಿರೀಕ್ಷೆಗೆ ಬರುವ ಅಧಿಕಾರಿಯು ಮುಂದಿನ ಸ್ಥಳ ನಿಯುಕ್ತಿಗಾಗಿ ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. https://kannadanewsnow.com/kannada/in-yet-another-private-video-case-four-members-of-a-family-attempt-suicide/ https://kannadanewsnow.com/kannada/after-ndas-victory-bhupa-cut-off-his-finger-and-offered-it-to-god/
ಚಾಮರಾಜನಗರ: ಹಾಸನ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಖಾಸಗೀ ವೀಡಿಯೋ ಪ್ರಕರಣ ವರದಿಯಾಗಿದೆ. ಈ ಕಾರಣಕ್ಕಾಗಿಯೇ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಚಾಮರಾಜನಗರದಲ್ಲಿ ಮೊಮ್ಮಗಳೊಬ್ಬಳನ್ನು ಯುವನೋರ್ವ ಪ್ರೀತಿಸುತ್ತಿದ್ದನು. ಪ್ರೀತಿಯ ಜೊತೆಗೆ ಆಕೆಯ ಖಾಸಗಿ ವೀಡಿಯೋಗಳನ್ನು ತೆಗೆದಿಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ್ದಾನೆ. ಆದರೇ ಆ ಕುಟುಂಬದವರು ಯುವಕನಿಗೆ ಎಚ್ಚರಿಕೆ ನೀಡಿದರೂ, ಬುದ್ಧಿ ಹೇಳಿದರು ತನ್ನ ಸುಮ್ಮನಾಗಿಲ್ಲ. ಇದೇ ಕಾರಣಕ್ಕಾಗಿ ಯುವಕನ ವಿರುದ್ಧ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಿದ್ದಂತ ಪೊಲೀಸರು ಮಾತ್ರ, ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಿದ್ದಾರೆ. ಈ ಹಿನ್ನಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದಂತ ಕುಟುಂಬಸ್ಥರು, ಮಲೆ ಮಹದೇಶ್ವರನ ದರ್ಶನ ಪಡೆದು, ಆ ಬಳಿಕ ಒಂದೇ ಕುಟುಂಬದ ನಾಲ್ವರು ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದಂತ ವಿಷಯ ತಿಳಿದಂತ ಸ್ಛಳೀಯರು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗ ಚಿಕಿತ್ಸೆಯ ನಂತ್ರ ಆರೋಗ್ಯ ಸ್ಥಿರವಾಗಿದೆ ಅಂತ…
ಕೇರಳ: ಅಯ್ಯೋ ನನ್ನ ಸಾವು ಕಣ್ಣೆದುರೇ ಪಾಸ್ ಆದಂತೆ ಆಯ್ತು. ಆ ಘಟನೆಯಿಂದ ನಾನು ಬದುಕಿ ಬಂದಿದ್ದೇ ಪವಾಡ ಹಾಗೆ ಹೀಗೆ ಅಂತ ಹೇಳೋದನ್ನು ಕೇಳಿದ್ದೀರಿ. ಆದ್ರೇ ಇಲ್ಲೊಬ್ಬ ಸಾವಿನಿಂದ ಜಸ್ಟ್ ಮಿಸ್ ಆಗಿದ್ದಾರೆ. ಕಂಡೆಕ್ಟರ್ ಸಹಾಯದಿಂದ ಬದುಕಿ ಬಂದ ಬಡಜೀವದ ಬಗ್ಗೆ ಮುಂದೆ ಓದಿ. ಕೇರಳದ ಮಲಬಾರ್ ಬಸ್ ನಲ್ಲಿ ವ್ಯಕ್ತಿಯೊಬ್ಬ ಪ್ರಯಾಣಿಸುತ್ತಿದ್ದನು. ಬಸ್ಸಿನ ಡೋರ್ ಬಳಿಯಲ್ಲೇ ನಿಂತು, ಟಿಕೆಟ್ ಖರೀದಿಸಲು ಮುಂದಾಗಿದ್ದಾನೆ. ಬಸ್ ಕಂಡಕ್ಟರ್ ತನ್ನ ಪಾಡಿಗೆ ತಾನು ಡೋರ್ ಸಮೀಪವೇ ನಿಂತಿದ್ದಂತ ವ್ಯಕ್ತಿಗೆ ಟಿಕೆಟ್ ಕೊಡೋದಕ್ಕೆ ಮುಂದಾಗಿದ್ದಾನೆ. ತಲೆ ತಗ್ಗಿಸಿ ಟಿಕೆಟ್ ಮಿಷನ್ ನಿಂದ ಟಿಕೆಟ್ ಹರಿಯುತ್ತಿದ್ದಂತ ಆತ ಬಸ್ ಡೋರ್ ಬಳಿಯ ವ್ಯಕ್ತಿ ಕೆಳಗೆ ಆಯತಪ್ಪಿ ಬೀಳೋದನ್ನು ಗಮನಿಸಿದ್ದೇ ಅಲರ್ಟ್ ಆಗಿದ್ದಾರೆ. ಇನ್ನೇನು ಬಸ್ ಡೋರಿನಿಂದ ಕೆಳಗೆ ಬಿದ್ದೇ ಬಿಟ್ಟ ಎನ್ನುವಂತ ಪ್ರಯಾಣಿಕನ ಕೈಯನ್ನು ಹಿಡಿದು ಒಳಗೆ ಎಳೆದುಕೊಂಡಿದ್ದಾರೆ. ಈ ಎಲ್ಲಾ ದೃಶ್ಯಾವಳಿ ಬಸ್ಸಿನಲ್ಲಿದ್ದಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ. https://twitter.com/gharkekalesh/status/1798924792801943619 ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ವೀಡಿಯೋವನ್ನು…
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ 2024-24ನೇ ಸಾಲಿನ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಇಂದಿನಿಂದ ಮಕ್ಕಳದ ದಾಖಲಾತಿ ಪ್ರಕ್ರಿಯೆ ಆರಂಭಿಸುವುದಾಗಿ ತಿಳಿಸಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಲಾಗಿದ್ದು, ಜೂನ್.19 ದಾಖಲಾತಿಗೆ ಕೊನೆಯ ದಿನವಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಆರ್.ಟಿಇ ಅಡಿಯಡಿ ಮಕ್ಕಳನ್ನು ಶಾಲೆಗಳಲ್ಲಿ ದಾಖಲಿಸಿಕೊಳ್ಳೋದಕ್ಕೆ ಜೂನ್.8ರ ಇಂದಿನಿಂದ ಆರಂಭಗೊಳ್ಳಲಿದೆ. ಜೂನ್.19 ಶಾಲಾ ದಾಖಲಾತಿಗೆ ಕೊನೆಯ ದಿನವಾಗಿದೆ ಅಂತ ತಿಳಿಸಿದೆ. ಶನಿವಾರದ ನಿನ್ನೆ ಮೊದಲ ಸುತ್ತಿನ ಸೀಟು ಹಂಚಿಕೆ ಪಟ್ಟಿ ಪ್ರಕಟಿಸಲಾಗಿದೆ. ಇಂದಿನಿಂದ ಶಾಲೆಗಳಲ್ಲಿ ದಾಖಲಾಗೋದಕ್ಕೆ ಮಕ್ಕಳ ವಿವರವನ್ನು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ www.schooleducation.karnataka.gov.in ನಲ್ಲಿ ಬಿಡುಗಡೆ ಮಾಡಲಾಗಿದೆ. ಜೂನ್.25ರಂದು RTE ಅಡಿಯಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ಲಾಟರಿ ಮೂಲಕ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ. ಇನ್ನೂ ಜೂನ್.26ರಿಂದ ಜುಲೈ.2ರವರೆಗೆ 2ನೇ ಸುತ್ತಿನಲ್ಲಿ ಆರ್ ಟಿಇ ಅಡಿಯಲ್ಲಿ…
ಬೆಂಗಳೂರು : ನೀರಾವರಿಗೆ ಸಾಂಪ್ರದಾಯಿಕ ಇಂಧನದ ಬದಲಿಗೆ ಸೌರಶಕ್ತಿ ಬಳಸುವ ಮೂಲಕ ಇಂಧನ ಸ್ವಾವಲಂಬನೆ ಸಾಧಿಸುವ ಕುಸುಮ್ ಯೋಜನೆಯಡಿ ಸೌರ ಪಂಪ್‌ಸೆಟ್ ಪಡೆಯಲು ರಾಜ್ಯದ 18 ಸಾವಿರ ಲಕ್ಷ ರೈತರು ನೋಂದಣಿ ಮಾಡಿದ್ದಾರೆ ಎಂದು ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ. ಪಿಎಂ ಕುಸುಮ್ ಯೋಜನೆಯ ಸಮಪರ್ಕ ಅನುಷ್ಠಾನ ಕುರಿತು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಆಯೋಜಿಸಿದ್ದ ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ್ (ಕುಸುಮ್) ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ, ಅವರು ಮಾತನಾಡಿದರು. “ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್‌ಸೆಟ್ ಅಳವಡಿಸಲು ಒತ್ತು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರದ ಸಬ್ಸಿಡಿ ಪಾಲನ್ನು ಶೇ.30ರಿಂದ 50ಕ್ಕೆ ಏರಿಸಿದೆ. ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಮಾರ್ಗದರ್ಶನದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಈವರೆಗೆ ರಾಜ್ಯದ 18 ಲಕ್ಷ ರೈತರು ಸೌರಪಂಪ್ ಸೆಟ್ ಪಡೆಯಲು ‘ಸೌರಮಿತ್ರ’ ವೆಬ್‌ಸೈಟ್/…
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ಮೊದಲ ಸುತ್ತಿನ ಆರ್ ಟಿ ಇ ಸೀಟುಗಳನ್ನು ಹಂಚಿಕೆ ಮಾಡಿ, ಪಟ್ಟಿ ಪ್ರಕಟಿಸಲಾಗಿದೆ. ಇಂದಿನಿಂದ ಮಕ್ಕಳನ್ನು ಶಾಲೆಗೆ ದಾಖಲಿಸುವಂತ ಪ್ರಕ್ರಿಯೆ ಆರಂಭಗೊಳ್ಳಲಿದೆ. ಜೂನ್.19ರ ಒಳಗಾಗಿ ಪೋಷಕರು ಶಾಲೆಗೆ ಮಕ್ಕಳನ್ನು ಸೇರಿಸುವಂತೆ ಸೂಚಿಸಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪವೇಶಕ್ಕಾಗಿ ಅರ್ಹ 15895 ಅರ್ಜಿಗಳನ್ನು ಮೊದಲ ಸುತ್ತಿನ ಲಾಟರಿಗೆ ಪರಿಗಣಿಸಿದ್ದು ದಿನಾಂಕ:07.06.2024ರಂದು ಮೊದಲನೇ ಸುತ್ತಿನ ಲಾಟರಿಯನ್ನು ಆನ್‌ಲೈನ್ ಮೂಲಕ ನಡೆಸಲಾಗಿದೆ ಎಂದಿದ್ದಾರೆ. ಈ ಮೊದಲನೇ ಸುತ್ತಿನ ಲಾಟರಿ ಪ್ರಕ್ರಿಯೆಯಲ್ಲಿ 6090 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮೂಲಕ ಸೀಟು ಹಂಚಿಕೆ ಮಾಹಿತಿಯನ್ನು…
ಬೆಂಗಳೂರು: ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜುಲೈ, 13 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್…













