Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಗದಿತ ಕಾಲಮಿತಿಯೊಳಗೆ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಸಿದ್ರೆ ಶೇ.5ರಷ್ಟು ರಿಯಾಯಿತಿ ನೀಡಿವುದಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಜನತೆಗೆ ಗುಡ್ ನ್ಯೂಸ್ ನೀಡಲಾಗಿದೆ. ಹೌದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಈ ರಿಯಾಯಿತಿ ಘೋಷಣೆ ಮಾಡಲಾಗಿದೆ. ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಏಕ ಕಾಲಕ್ಕೆ ಪಾವತಿಸಿ ಶೇ.5ರಷ್ಟು ರಿಯಾಯಿತಿಯನ್ನು ಪಡೆಯಿರಿ ಅಂತ ತಿಳಿಸಿದೆ. ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳು ಅಂದ್ರೆ ಏಪ್ರಿಲ್ ನಿಂದ ಜೂನ್ ಅಂತ್ಯ ಅಂದರೇ ದಿನಾಂಕ 0-06-2024ರ ಒಳಗಾಗಿ ತೆರಿಗೆ ಪಾವತಿಸಿ, ಶೇ.5ರಷ್ಟು ರಿಯಾಯಿತಿ ಪಡೆಯಿರಿ ಅಂತ ಹೇಳಿದೆ. https://twitter.com/CommrPR/status/1789989231286206747 https://kannadanewsnow.com/kannada/farmers-in-shivamogga-district-note-if-there-is-no-drought-relief-call-this-number/ https://kannadanewsnow.com/kannada/k-r-nagar-victim-abduction-case-three-accused-sent-to-judicial-custody/
ಶಿವಮೊಗ್ಗ: ರಾಜ್ಯ ಸರ್ಕಾರದಿಂದ ರೈತರಿಗೆ ಬರ ಪರಿಹಾರವನ್ನು 2ನೇ ಹಂತದಲ್ಲಿ ಸಂದಾಯ ಮಾಡೋದಕ್ಕೆ ಬಿಡುಗಡೆ ಮಾಡಲಾಗಿತ್ತು. ಶಿವಮೊಗ್ಗ ಜಿಲ್ಲೆ. ಕೆಲ ರೈತರಿಗೆ ಬಂದಿರದೇ ಇದ್ರೆ, ಪರಿಹಾರಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ಜಿಲ್ಲಾಡಳಿತ ಬಿಡುಗಡೆ ಮಾಡಿದೆ. ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದಾರೆ. 2023-24ನೇ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂಬುದಾಗಿ ಸರ್ಕಾರದಿಂದ ಘೋಷಣೆ ಮಾಡಲಾಗಿರುತ್ತದೆ ಎಂದಿದ್ದಾರೆ. ರಾಜ್ಯ ಸರ್ಕಾರವು 2ನೇ ಹಂತದ ಬರ ಪರಿಹಾರವನ್ನು ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು 59605 ಫಲಾನುಭವಿಗಳಿಗೆ ಒಟ್ಟು ರೂ.38,74,31.015 ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಿರುತ್ತದೆ ಎಂದು ಹೇಳಿದ್ದಾರೆ. ಪರಿಹಾರ ವಿತರಣೆ ಕುರಿತು ಕುಂದು ಕೊರತೆ ಹಾಗೂ ವಿಚಾರಣೆಗೆ ಜಿಲ್ಲೆಯ ತಾಲ್ಲೂಕುಗಳಲ್ಲಿ ಸಹಾಯವಾಣಿಯನ್ನು ಸ್ಥಾಪನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಲು ತಿಳಿಸಿದ್ದಾರೆ. ಹೀಗಿದೆ ಶಿವಮೊಗ್ಗ ತಾಲೂಕು ವಾರು ಸಹಾಯವಾಣಿ ಸಂಖ್ಯೆಗಳು ಶಿವಮೊಗ್ಗ ತಹಶೀಲ್ದಾರ್ 08128-279311 ಭದ್ರಾವತಿ…
ನಮ್ಮ ಸುತ್ತಮುತ್ತ ಇರುವಂತಹ ಪ್ರತಿಯೊಂದು ದೇವಸ್ಥಾನವು ಕೂಡ ಒಂದೊಂದು ವಿಶೇಷವಾದ ಚಮತ್ಕಾರವನ್ನು ಹೊಂದಿದ್ದು. ಈ ದಿನ ನಾವು ಹೇಳುತ್ತಿರುವಂತಹ ಈ ದೇವಸ್ಥಾನವು ಕೂಡ ಬಹಳ ವಿಶೇಷ ವಾಗಿದ್ದು ಈ ದೇವಸ್ಥಾನಕ್ಕೆ ಬಂದರೆ ನಿಮ್ಮ ಎಲ್ಲಾ ಕಷ್ಟಗಳು ಕೂಡ ದೂರವಾಗುತ್ತದೆ ಎಂದು ಇಲ್ಲಿಯ ಭಕ್ತರು ಹೇಳುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ…
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದಂತ ಶಾಸಕ ಹೆಚ್.ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇಂದು ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಈ ಕುರಿತಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರ ಮುಂದೆ, ರೇವಣ್ಣ ಪರ ಹಾಗೂ ಸರ್ಕಾರಿ ವಕೀಲರ ನಡುವೆ ವಾದ – ಪ್ರತಿವಾದಗಳು ನಡೆಯಿತು. ಇಂತಹ ಕಾರಣಗಳಿಗೆ ಜಾಮೀನು ಕೊಡಲೇ ಬೇಕು ಎಂದು ರೇವಣ್ಣ ಪರ ವಕೀಲರಾದ ನಾಗೇಶ್ ವಾದ ಮಂಡಿಸಿದರು. ಜಾಮೀನನ್ನು ಏಕೆ ಕೊಡಬಾರದು? ಕೊಟ್ಟರೆ ಮುಂದೇನಾಗುತ್ತದೆ ಎಂದು ಎಸ್‌ಐಟಿ ಪರ ವಕೀಲರಾದ (ಎಸ್‌ಪಿಪಿ) ಜಯ್ನಾ ಕೊಠಾರಿ ಹಾಗೂ ಅಶೋಕ್ ನಾಯ್ಕ್ ವಾದಿಸಿದ್ದರು. ಅಂತಿಮವಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಾದ – ಪ್ರತಿವಾದ ಆಲಿಸಿ ಹೆಚ್.ಡಿ ರೇವಣ್ಣ ಅವರಿಗೆ ಜಾಮೀನು ನೀಡಿ ಆದೇಶಿಸಿದೆ. ಈ ಮೂಲಕ ಅವರ ಆರು ದಿನಗಳ ಜೈಲುವಾಸ ಅಂತ್ಯವಾದಂತೆ ಆಗಿದೆ. ಹೆಚ್.ಡಿ ರೇವಣ್ಣಗೆ ಷರತ್ತು…
ಬೆಂಗಳೂರು : ಇಂದು ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನಡೆಸಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಪೀಠವು, ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳಲಾಗಿದೆ. ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್‌ಐಟಿ ಪರ ಎಸ್ ಪಿಪಿ ಜಾಯ್ನಾ ಕೊಥಾರಿ ಅವರು ಆಕ್ಷೇಪಣೆ ಸಲ್ಲಿಸಿದರು. ರೇವಣ್ಣ ಪುತ್ರ ಪ್ರಜ್ವಲ್ ತಲೆಮರೆಸಿಕೊಂಡಿದ್ದಾರೆ. ರೇಣ್ಣಗೆ ಜಾಮೀನು ನೀಡಿದ್ರೆ ಸಾಕ್ಷ್ಯಾಧಾರ ನಾಶಪಡಿಸಬಹುದು. ಆರೋಪಿ ಪ್ರಭಾವಿ ಎಂಬ ಅಂಶವನ್ನು ಪರಿಗಣಿಸಬೇಕು. ಇದು ಕೆವಲ ಬೆದರಿಕೆ ಹಾಕಿರುವ ಪ್ರಕರಣವಲ್ಲ. ಅಪಹರಣವಾದ ಮಹಿಳೆ ಅತ್ಯಾಚಾರದ ಸಂತ್ರಸ್ತೆ, ಮಹಿಳೆಯ ದೂರು ದಾಖಲಾಗಬಾರದೆಂದು ಅಪಹರಿಸಲಾಗಿತ್ತು. ಇತರೆ ಮಹಿಳೆಯರು ದೂರು ನೀಡದೆ ತಡೆಯುವ ಯತ್ನವಿದೆ. ಜಾಮೀನು ನೀಡಿದ್ರೆ ನ್ಯಾಯಾದಾನ ಹಾದಿಗೆ ತೊಡಕಾಗಬಹುದು ಎಂದು…
ಬೆಂಗಳೂರು: ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಗಾಳಿಯೊಟ್ಟಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಕುರಿತಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಿನ್ನೆ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಅತಿ ಹೆಚ್ಚು ಮಳೆ ಪುತ್ತೂರು ಹಾಗೂ ರಾಯಚೂರಲ್ಲಿ ತಲಾ 10 ಸೆಂ.ಮೀ ಆಗಿದೆ ಎಂಬುದಾಗಿ ತಿಳಿಸಿದೆ. ನಾಳೆ ಭಾರಿ ಮಳೆಯೊಂದಿಗೆ ಗಾಳಿ ಬೀಸಲಿದೆ. ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ವಿವಿಧೆಡೆ ಭಾರಿ ಮಳೆಯಾಗಲಿದೆ. ಮಂಡ್ಯ, ಮೈಸೂರು, ಚಿಕ್ಕಮಗಳೂರು, ಹಾಸನ ಸೇರಿದಂತೆ ಯಾದಗಿರಿ, ಬೆಳಗಾವಿ, ಕಲಬುರ್ಗಿ ಜಿಲ್ಲೆಯಲ್ಲಿ ಗಾಳಿ ಸಹಿಯ ಮಳೆಯಾಗುವ ಮುನ್ಸೂಚನೆ ನೀಡಿದೆ. ಕೋಲಾರ, ವಿಜಯಪುರ, ಬೆಂಗಳೂರು ನಗರ, ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಗದಗ, ಧಾರವಾಡ, ತುಮಕೂರು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಇಂದು ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/k-r-nagar-victim-abduction-case-three-accused-sent-to-judicial-custody/ https://kannadanewsnow.com/kannada/disaster-management-teams-to-be-deployed-in-bengaluru-at-sub-divisional-level-of-respective-zones-tushar-giri-nath/
ಮುಂಬೈ: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30 ನಿಮಿಷಗಳ ಕಾಲ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. “ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಕಾರ್ಯಾಚರಣೆಯನ್ನು 30 ನಿಮಿಷಗಳ ಕಾಲ ಸ್ಥಗಿತಗೊಳಿಸಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಎನ್ಡಿಟಿವಿ ಸೋಮವಾರ ತಿಳಿಸಿದೆ. ಆರ್ಥಿಕ ರಾಜಧಾನಿಯಲ್ಲಿ ಭಾರಿ ಮಳೆ ಮತ್ತು ಧೂಳಿನ ಬಿರುಗಾಳಿಯ ಹಿನ್ನೆಲೆಯಲ್ಲಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಮುಂಬೈನಲ್ಲಿ ಧೂಳಿನ ಬಿರುಗಾಳಿಯ ಮಧ್ಯೆ “ಸಂಭಾವ್ಯ ವಾಯು ಸಂಚಾರ ದಟ್ಟಣೆಯನ್ನು ನಿರೀಕ್ಷಿಸಲಾಗಿದೆ” ಎಂದು ಕಡಿಮೆ ವೆಚ್ಚದ ವಿಮಾನಯಾನ ಸಂಸ್ಥೆ ಇಂಡಿಗೊ ಎಕ್ಸ್ ನಲ್ಲಿ ಎಚ್ಚರಿಸಿದೆ. ವಿಮಾನಯಾನವು ಫ್ಲೈಯರ್ ಗಳನ್ನು “ಅವರ ವಿಮಾನದ ಸ್ಥಿತಿಯ ಮೇಲೆ ನಿಗಾ ಇಡುವಂತೆ” ಕೇಳಿದೆ. ಈ ಬಾರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರತಿಕೂಲ ಹವಾಮಾನ ಉಂಟಾಗಿದೆ. ಸಂಭಾವ್ಯ ವಾಯು ಸಂಚಾರ ದಟ್ಟಣೆಯನ್ನು ನಿರೀಕ್ಷಿಸಲಾಗಿದೆ, ಆದ್ದರಿಂದ ನಿಮ್ಮ ವಿಮಾನದ ಸ್ಥಿತಿಯ ಮೇಲೆ ನಿಗಾ ಇರಿಸಿ https://bit.ly/3DNYJqj ಅದಕ್ಕೆ ಅನುಗುಣವಾಗಿ ವಿಮಾನ ನಿಲ್ದಾಣಕ್ಕೆ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಗಾಗಿ ಆಯಾ ವಲಯಗಳ ಉಪ ವಿಭಾಗಗಳ ಹಂತದಲ್ಲಿ “ವಿಪತ್ತು ನಿರ್ವಹಣಾ ತಂಡ”ಗಳುನ್ನು ನಿಯೋಜನೆ ಮಾಡಿಕೊಂಡು ಮಳೆಗಾಲದಲ್ಲಿ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು. ನಗರದಲ್ಲಿ ವಿಪತ್ತು ನಿರ್ವಹಣೆಗಾಗಿ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗುವುದು, ಮ್ಯಾನ್ ಹೋಲ್‌ಗಳು ತೆರೆದುಕೊಳ್ಳುವುದು, ಮರ/ವಿದ್ಯುತ್ ಕಂಬಗಳು ಬೀಳುವುದನ್ನು ಹಾಗೂ ಮಳೆಯಿಂದಾಗುವ ಅನಾಹುತಗಳನ್ನು ತಡೆಗಟ್ಟುವ ಸಲುವಾಗಿ ಆಯಾ ವಲಯಗಳ ಉಪ ವಿಭಾಗಗಳಲ್ಲಿ ಪಾಲಿಕೆ, ಜಲಮಂಡಳಿ, ಬೆಸ್ಕಾಂ, ಮೆಟ್ರೋ, ಅಗ್ನಿ ಶಾಮಕ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲು ಸೂಚಿಸಿದರು. ನಗರದಲ್ಲಿ ಕಳೆದ ಒಂದು ವಾರದಿಂದ ಬೇರೆ ಬೇರೆ ಸ್ಥಳಗಳಲ್ಲಿ ಮಳೆಯಾಗುತ್ತಿದ್ದು, ಒಂದು ಕಡೆ ಒಂದೊಂದು ರೀತಿಯಲ್ಲಿ ಮಳೆಯಾಗುತ್ತಿದೆ. ಕೆಲವಡೆ ಸಾಮಾನ್ಯ, ಇನ್ನು ಕೆಲವೆಡೆ ಮಧ್ಯಮ ಹಾಗೂ…
ಶಿವಮೊಗ್ಗ: ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ಪರಿಹರಿಸಲು ಹಾಗೂ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಮೇ-16 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರ ಕಚೇರಿ, ನಉವಿ-3, ಗುಡ್‍ಲಕ್ ಸರ್ಕಲ್, ಎಸ್.ವಿ.ಬಡಾವಣೆ, ಶಿವಮೊಗ್ಗ ಇಲ್ಲಿ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮೇ- 20 ರಂದು ಡಾಕ್ ಅದಾಲತ್ ಶಿವಮೊಗ್ಗ ಅಂಚೆ ವಿಭಾಗವು ಮೇ- 20 ರಂದು ಮಧ್ಯಾಹ್ನ 3.00ಕ್ಕೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ಅಂಚೆ ವಿಭಾಗದಲ್ಲಿ ಡಾಕ್ ಅದಾಲತ್ ಹಮ್ಮಿಕೊಂಡಿದೆ. ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆ-ಸೂಚನೆಗಳನ್ನು ಮೇ-17 ರೊಳಗಾಗಿ ಸಲ್ಲಿಸಿ, ಡಾಕ್ ಅದಾಲತ್‍ನಲ್ಲಿ ಭಾಗವಹಿಸುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/fir-registered-against-sandalwood-actor-chetan-chandra-and-two-others/ https://kannadanewsnow.com/kannada/woman-abduction-case-court-reserves-verdict-on-hd-revannas-bail-plea/
ಬೆಂಗಳೂರು: ಕೆ ಆರ್ ನಗರದಲ್ಲಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿದ್ದಂತ ಮೂವರು ಆರೋಪಿಗಳಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಕೆ ಆರ್ ನಗರದಲ್ಲಿ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ಸಂಬಂಧ ಮಧು, ಮನು ಹಾಗೂ ಸುಜಯ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇಂದು ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರು, ಮಧು, ಮನು ಹಾಗೂ ಸುಜಯ್ ಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಇನ್ನೂ ಇದೇ ಪ್ರಕರಣದಲ್ಲಿ ಆರೋಪಿಯಾಗಿ ಬಂಧನಕ್ಕೆ ಒಳಗಾಗಿರುವಂತ ಸತೀಶ್ ಬಾಬುಗೆ ಎಸ್ಐಟಿ ಕಸ್ಟಡಿ ಅವಧಿ ಮುಗಿದ ಕಾರಣ, 4 ದಿನ ಎಸ್ಐಟಿ ಕಸ್ಟಡಿಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಸತೀಶ್ ಬಾಬು ಬಿಟ್ಟು ಮೂವರಿಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. https://kannadanewsnow.com/kannada/congress-will-form-coalition-government-in-maharashtra-after-lok-sabha-elections-dk-shivakumar/ https://kannadanewsnow.com/kannada/fir-registered-against-sandalwood-actor-chetan-chandra-and-two-others/














