Author: kannadanewsnow09

ಶಿವಮೊಗ್ಗ : ಸೆಪ್ಟೆಂಬರ್ 1ರಿಂದ ಶಾಮಿಯಾನ ಮತ್ತು ಧ್ವನಿಬೆಳಕು ಅಳವಡಿಕೆ ದರವನ್ನು ಹೆಚ್ಚಿಸಲಾಗಿದೆ. ಅತ್ಯಂತ ದುಬಾರಿ ಬೆಲೆಯಲ್ಲಿ ವಸ್ತುಗಳನ್ನು ಖರೀದಿಸಿ ನಾವು ಕಡಿಮೆ ದರಕ್ಕೆ ಈತನಕ ಶಾಮಿಯಾನ, ಧ್ವನಿ ಬೆಳಕು ಅಳವಡಿಸಿಕೊಂಡು ಬರಲಾಗಿತ್ತು. ಇದೀಗ ದರ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಧ್ವನಿ ಬೆಳಕು ಶಾಮೀಯಾನ ಮಾಲೀಕರ ಸಂಘದ ಗೌರವಾಧ್ಯಕ್ಷ ಮಹಾಬಲೇಶ್ವರ ವೈ.ಪಿ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕರ‍್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೋನಾಗಿಂತ ಮೊದಲು ನಾವು ದರ ಪರಿಷ್ಕರಣೆ ನಡೆದಿತ್ತು. ನಂತರದ ದಿನಗಳಲ್ಲಿ ರಾಜ್ಯದ ಇತರೆ ಜಿಲ್ಲಾ, ತಾಲ್ಲೂಕುಗಳಲ್ಲಿ ದರ ಹೆಚ್ಚು ಮಾಡಿದ್ದರೂ ನಮ್ಮ ತಾಲ್ಲೂಕಿನಲ್ಲಿ ಮಾತ್ರ ಕಡಿಮೆ ದರದಲ್ಲಿ ಧ್ವನಿಬೆಳಕು ಶಾಮಿಯಾನ ಹಾಕುತ್ತಿದ್ದೇವು ಎಂದರು. ಸೆ. 16ರಂದು ನಡೆದ ಸಂಘದ ಸರ್ವಸದಸ್ಯರ ಸಭೆಯಲ್ಲಿ ದರ ಏರಿಕೆ ಅನಿವಾರ್ಯತೆಯನ್ನು ಸಂಘದ ಎಲ್ಲಾ ಸದಸ್ಯರು ವ್ಯಕ್ತಪಡಿಸಿದ್ದು, ಉದ್ಯಮ ಉಳಿಯಬೇಕಾದರೆ ಸಣ್ಣ ಪ್ರಮಾಣದಲ್ಲಿ ಶಾಮಿಯಾನ ದರ ಏರಿಸುವ ಅನಿವಾರ್ಯತೆ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಾರ್ವಜನಿಕರು ನೂತನ ದರಕ್ಕೆ…

Read More

ಬೆಂಗಳೂರು: ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಮುಖ್ಯಾಂಶಗಳು ಮುಂದಿವೆ ಓದಿ. * ಹಾಳಾಗಿರುವ ನಗರದ ರಸ್ತೆ ಗುಂಡಿಗಳಿಂದ ಜನ ಹೈರಾಣಾಗಿದ್ದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು . ಜನರ ಪ್ರತಿನಿತ್ಯದ ಸಂಕಷ್ಟ ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವಾ?  ತುರ್ತು ಕ್ರಮ ಏಕೆ ತೆಗೆದುಕೊಳ್ಳುತ್ತಿಲ್ಲ * ಪ್ರತಿ ವಾರ್ಡ್ ನ ಎಂಜಿನಿಯರ್ ಗಳು ,  ಮುಖ್ಯ ಎಂಜಿನಿಯರ್ ಗಳು  ಏನು ಮಾಡುತ್ತಿದ್ದಾರೆ? ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆ ಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು. * ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. * ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು, ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಿ. * ಮಳೆಗಾಲಕ್ಕೆ ಮುನ್ನವೇ…

Read More

ಮಂಡ್ಯ : ಮದ್ದೂರು ನಗರ ಸಭೆಯ ನೂತನ ಪ್ರಭಾರ ಪೌರಾಯುಕ್ತರಾಗಿ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ಮದ್ದೂರು ಪುರಸಭೆಯ ಮುಖ್ಯಾಧಿಕಾರಿಯವರು ವರ್ಗಾವಣೆಗೊಂಡಿದ್ದ ಹಿನ್ನೆಲೆಯಲ್ಲಿ ಕಛೇರಿ ವ್ಯವಸ್ಥಾಪಕ ಶ್ರೀಧರ್ ಪ್ರಭಾರ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ರಾಜ್ಯ ಸರ್ಕಾರ ಮೇಲ್ದರ್ಜೆಗೆರಿಸಿದ್ದು, ಸರ್ಕಾರದ ಅಧಿಸೂಚನೆಯಂತೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಮುಂದಿನ ಆದೇಶದವರೆಗೆ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರನ್ನು ಪ್ರಭಾರ ಪೌರಾಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ನೂತನ ಪ್ರಭಾರ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಪರಶುರಾಮ್ ಸತ್ತಿಗೇರಿ ಅವರು ಜನಪ್ರತಿನಿಧಿಗಳು ಹಾಗೂ ಕಚೇರಿ ಸಿಬ್ಬಂದಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಚುನಾಯಿತ ಜನಪ್ರತಿನಿಧಿಗಳು, ಕಚೇರಿ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ನಗರದಲ್ಲಿ ಕುಡಿಯುವ ನೀರು, ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಿ ಹಂತ ಹಂತವಾಗಿ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು. ಮದ್ದೂರು ಪುರಸಭೆ ನಗರಸಭೆಯಾಗಿ ಮೆಲ್ದರ್ಜೆಗೆರಿದ್ದು, ನಗರದಲ್ಲಿ ತುಂಬಾ ಕೆಲಸಗಳು ಆಗಬೇಕಾಗಿದೆ. ಕೆಲ ದಿನಗಳಲ್ಲೆ ಸ್ಥಳೀಯ ಸಂಸ್ಥೆ ಚುನಾವಣೆ…

Read More

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳು ಹೆಚ್ಚಾಗಿರುವ ಕಾರಣ, ಒಂದು ತಿಂಗಳಲ್ಲಿ ಮುಚ್ಚಬೇಕು. ಒಂದು ವೇಳೆ ಮುಚ್ಚದೇ ಇದ್ದರೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಚೀಫ್ ಇಂಜಿನಿಯರ್ ಗಳನ್ನು ಸಸ್ಪೆಂಡ್ ಮಾಡುವುದಾಗಿ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚೋ ಸಂಬಂಧ ಗೃಹ ಕಚೇರಿ ಕೃಷ್ಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಜಿಬಿಎ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಗರಂ ಆದ ಘಟನೆಯೂ ನಡೆಯಿತು. ಇಂಜಿನಿಯರ್ ಗಳ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ ಎಂಬುದಾಗಿ ಗರಂ ಆದರು. ನಿಮಗೆ ನಾಚಿಕೆ ಆಗಲ್ವ? ಎಂಬುದಾಗಿ ಕ್ಲಾಸ್ ತೆಗೆದುಕೊಂಡ ಸಿಎಂ ಸಿದ್ಧರಾಮಯ್ಯ, ನಿಮ್ಮಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರ್ತಾ ಇದೆ. ಮುಚ್ಚಿರುವ ಗುಂಡಿಗಳೂ ನೆಟ್ಟಗಿಲ್ಲ. ಜನರ ಕಷ್ಟ ಗೊತ್ತಾಗಲ್ವ? ನಿಮ್ಮನ್ನು ಸಸ್ಪೆಂಡ್ ಮಾಡಿ, ಮನೆಗೆ ಕಳುಹಿಸಬೇಕಾಗುತ್ತದೆ ಎಂಬುದಾಗಿ ವಾರ್ನಿಂಗ್ ಮಾಡಿದರು. ಗುಂಡಿ ಮುಚ್ಚದಿದ್ರೆ ಎಲ್ಲಾ ಚೀಫ್ ಇಂಜಿನಿಯರ್ ಗಳನ್ನು ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ…

Read More

ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳ ಕಾರಣದಿಂದಾಗಿ ಕೆಲ ಕಂಪನಿಗಳು ಬೆಂಗಳೂರು ತೊರೆಯುತ್ತಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ 7,000 ರಸ್ತೆ ಗುಂಡಿ ಮುಚ್ಚಲಾಗಿದ್ದು, 5,000 ಬಾಕಿ ಇವೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದರು. ಈ ಬೆನ್ನಲ್ಲೇ ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ಒಂದು ತಿಂಗಳು ಸಿಎಂ ಸಿದ್ಧರಾಮಯ್ಯ ಡೆಡ್ ಲೈನ್ ನೀಡಿದ್ದಾರೆ. ಇಂದು ಈ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರು ಜಿಬಿಎ, ನಮ್ಮ ಮೆಟ್ರೋ, ಜಲಮಂಡಳಿ, ಬೆಸ್ಕಾಂ ಹಾಗೂ ವಿವಿಧ ಇಲಾಖೆಯ ಜೊತೆಗೆ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಬೆಂಗಳೂರಲ್ಲಿನ ರಸ್ತೆ ಗುಂಡಿಗಳನ್ನು ಒಂದು ತಿಂಗಳ ಒಳಗಾಗಿ ಮುಚ್ಚುವಂತೆ ಖಡಕ್ ಸೂಚನೆ ನೀಡಿದ್ದಾರೆ. ಇಂದಿನ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ್ದಾರೆ. ಜಿಬಿಎ ಅಧಿಕಾರಿಗಳ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಗರಂ ಆದ ಘಟನೆಯೂ ನಡೆಯಿತು. ಇಂಜಿನಿಯರ್ ಗಳ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ರಸ್ತೆ ಗುಂಡಿಗಳನ್ನು ಮುಚ್ಚಲು ನಿಮಗೇನು ಕಷ್ಟ ಎಂಬುದಾಗಿ ಗರಂ ಆದರು. ನಿಮಗೆ…

Read More

ಶಿವಮೊಗ್ಗ : ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ತರಲು ಸಾಧ್ಯ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚು ತೊಡಗಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗದಿದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಕ್ರೀಡಾಕೂಟ ಸಂದರ್ಭದಲ್ಲಿ ಶಿಕ್ಷಕರು ನ್ಯಾಯೋಚಿತ ತೀರ್ಪು ಕೊಡಬೇಕು. ನಿಮ್ಮ ತೀರ್ಪು ನ್ಯಾಯದ ಪರವಾಗಿದ್ದರೆ ಮಕ್ಕಳು ಭವಿಷ್ಯದಲ್ಲಿ ಇನ್ನಷ್ಟು ಆಸಕ್ತಿಯಿಂದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಯಾವುದೇ ಕಾರಣಕ್ಕೂ ಕ್ರೀಡಾ ಫಲಿತಾಂಶದಲ್ಲಿ ಪೋಷಕರು ಹಸ್ತಕ್ಷೇಪ ಮಾಡಬಾರದು. ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಉಪವಿಭಾಗಾಧಿಕಾರಿಗಳೂ ಸೇರಿದಂತೆ ತಹಶೀಲ್ದಾರ್, ಕಾರ್ಯನಿರ್ವಾಹಣಾಧಿಕಾರಿಗಳು ಸೇರಿ ಎಲ್ಲ ಅಧಿಕಾರಿಗಳು ಮೈದಾನದಲ್ಲಿದ್ದು ಮಕ್ಕಳನ್ನು ಪ್ರೋತ್ಸಾಹಿಸಬೇಕು…

Read More

ಶಿವಮೊಗ್ಗ : ಅಧಿಕಾರಿಗಳು ಜಾತಿ ಗಣತಿಗೆ ಬಂದಾಗ ಜಿಲ್ಲೆಯ ಈಡಿಗ ಕುಲ ಬಾಂಧವರು ಜಾತಿ ಕಾಲಂನಲ್ಲಿ ಈಡಿಗ ಎಂದು ಉಪ ಜಾತಿ ಕಾಲಂನಲ್ಲಿ ದೀವರು ಎಂದು ನಮೂದಿಸುವಂತೆ ಸಾಗರದ ಈಡಿಗ ಸಮಾಜದ ಮುಖಂಡ ಆನಂದ ಜನ್ನೆಹಕ್ಲು ಮನವಿ ಮಾಡಿದ್ದಾರೆ. ನಮ್ಮ ಹಿರಿಯರು ಶೈಕ್ಷಣಿಕ ಸೇರಿದಂತೆ ಅಗತ್ಯ ಮಾಹಿತಿ ನೀಡುವ ಸಂದರ್ಭದಲ್ಲಿ ಈಡಿಗ ಜಾತಿ ಎಂದು ನಮೂದಿಸಿರುತ್ತಾರೆ. ಅದನ್ನು ನಮ್ಮ ಪೀಳಿಗೆಯವರು ಮುಂದುವರೆಸಿಕೊಂಡು ಹೋಗಬೇಕು. ಈಡಿಗ ಬದಲು ದೀವರು ಇನ್ನಿತ್ಯಾದಿ ಜಾತಿ ನಮೂದಿಸಿದರೆ ಮುಂದೆ ಮಕ್ಕಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗ ಪಡೆಯಲು ತೊಡಕುಂಟಾಗಬಹುದು. ಈ ಹಿನ್ನೆಲೆಯಲ್ಲಿ ಜಾತಿಗಣತಿಗೆ ಬಂದಾಗ ಕಡ್ಡಾಯವಾಗಿ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಈಡಿಗ ಎಂದೂ, ಉಪ ಜಾತಿ ಕಾಲಂನಲ್ಲಿ ದೀವರೆಂದು ನಮೂದಿಸಲು ತಮ್ಮಲ್ಲಿ ಸಮಾಜದ ಪ್ರಮುಖರ ಪರವಾಗಿ ವಿನಂತಿ ಮಾಡಿತ್ತಿದ್ದೇನೆ ಎಂದು ಆನಂದ್ ಜನ್ನೆಹಕ್ಲು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. https://kannadanewsnow.com/kannada/postpone-the-caste-census-or-expand-it-union-minister-h-d-kumaraswamy/ https://kannadanewsnow.com/kannada/case-filed-against-a-19-year-old-woman-who-married-a-19-year-old-man/

Read More

ಬೆಂಗಳೂರು: ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ. ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು…

Read More

ತುಮಕೂರು : ಮಾಹಿತಿ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯ 1,323 ಮೇಲ್ಮನವಿ ಅರ್ಜಿಗಳು ಆಯೋಗದಲ್ಲಿ ಬಾಕಿಯಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಹಿತಿ ನೀಡಿದರು. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೂ ಒಟ್ಟು ಆಯೋಗದಲ್ಲಿ 41034 ಮೇಲ್ಮನವಿ ಅರ್ಜಿಗಳು ಬಾಕಿಯಿದ್ದು, ಜಿಲ್ಲೆಯಲ್ಲಿ 1323 ಮೇಲ್ಮನವಿ ಅರ್ಜಿಗಳು ಬಾಕಿಯಿವೆ. ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಅರಿವಿನ ಕೊರತೆಯಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೇಲ್ಮನವಿ ಅರ್ಜಿಗಳು ಆಯೋಗಕ್ಕೆ ಸ್ವೀಕೃತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಆಯೋಗವು ರಾಜ್ಯದಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು. ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆಯ ನಿಯಮಗಳನ್ನು ಅರಿತು ಸಕಾಲದಲ್ಲಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರಿಂದ ಸ್ವೀಕೃತ ಅರ್ಜಿಗಳನ್ನು 30 ದಿನದೊಳಗಾಗಿ ವಿಲೇವಾರಿ ಮಾಡಬೇಕು. ಸ್ವೀಕೃತ ಅರ್ಜಿಗಳ ವಿಲೇವಾರಿಯಲ್ಲಿ ತುಮಕೂರು ಜಿಲ್ಲೆಯು ರಾಜ್ಯದಲ್ಲಿ 9ನೇ ಸ್ಥಾನದಲ್ಲಿದ್ದು, ಬಾಕಿಯಿರುವ ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ವಿಲೇವಾರಿ ಮಾಡಿದಲ್ಲಿ ಆಯೋಗಕ್ಕೆ…

Read More

ಬೆಂಗಳೂರು: ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದಮೆ ಸಂಖ್ಯೆ 26/2023 0 182, 419, 464, 465 ಐ.ಪಿ.ಸಿ. ರಂತೆ ದಾಖಲಾಗಿರುವ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:20/09/2025ರ ಪತ್ರದಲ್ಲಿ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು, ಕರ್ನಾಟಕ ರಾಜ್ಯ, ಬೆಂಗಳೂರು ಇವರು ಕಲ್ಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿನ 256 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬರುವ 6670 ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿದೆ ಎಂಬುದಾಗಿ ಚುನಾವಣಾ ಆಯೋಗಕ್ಕೆ ಮಾಜಿ ಶಾಸಕರಾಗಿದ್ದ ಶ್ರೀ. ಬಿ. ಆರ್. ಪಾಟೀಲ್ ರವರು ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಈ ಕುರಿತಂತೆ ಪರಿಶೀಲಿಸಿದಾಗ ಒಟ್ಟು 6018 ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ವಿವಿಧ ಸರ್ಕಾರಿ ಆನ್‌ಲೈನ್ ಅಪ್ಲಿಕೇಷನ್‌ಗಳಿಗೆ ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 24 ಅರ್ಜಿಗಳನ್ನು…

Read More