Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಓದಿನ ಮೂಲಕ ಬೌದ್ಧಿಕ ಶಕ್ತಿ ಅನಾವರಣಗೊಂಡರೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ ಚಟುವಟಿಕೆ ಮೂಲಕ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಬೆಳಕಿಗೆ ತರಲು ಸಾಧ್ಯ ಕ್ರೀಡಾ ಚಟುವಟಿಕೆಯಲ್ಲಿ ಮಕ್ಕಳು ಹೆಚ್ಚು ತೊಡಗಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗದಿದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಕ್ರೀಡಾಕೂಟ ಸಂದರ್ಭದಲ್ಲಿ ಶಿಕ್ಷಕರು ನ್ಯಾಯೋಚಿತ ತೀರ್ಪು ಕೊಡಬೇಕು. ನಿಮ್ಮ ತೀರ್ಪು ನ್ಯಾಯದ ಪರವಾಗಿದ್ದರೆ ಮಕ್ಕಳು ಭವಿಷ್ಯದಲ್ಲಿ ಇನ್ನಷ್ಟು ಆಸಕ್ತಿಯಿಂದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುತ್ತಾರೆ. ಯಾವುದೇ ಕಾರಣಕ್ಕೂ ಕ್ರೀಡಾ ಫಲಿತಾಂಶದಲ್ಲಿ ಪೋಷಕರು ಹಸ್ತಕ್ಷೇಪ ಮಾಡಬಾರದು. ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಉಪವಿಭಾಗಾಧಿಕಾರಿಗಳೂ ಸೇರಿದಂತೆ ತಹಶೀಲ್ದಾರ್, ಕಾರ್ಯನಿರ್ವಾಹಣಾಧಿಕಾರಿಗಳು ಸೇರಿ ಎಲ್ಲ ಅಧಿಕಾರಿಗಳು ಮೈದಾನದಲ್ಲಿದ್ದು ಮಕ್ಕಳನ್ನು ಪ್ರೋತ್ಸಾಹಿಸಬೇಕು…
ಶಿವಮೊಗ್ಗ : ಅಧಿಕಾರಿಗಳು ಜಾತಿ ಗಣತಿಗೆ ಬಂದಾಗ ಜಿಲ್ಲೆಯ ಈಡಿಗ ಕುಲ ಬಾಂಧವರು ಜಾತಿ ಕಾಲಂನಲ್ಲಿ ಈಡಿಗ ಎಂದು ಉಪ ಜಾತಿ ಕಾಲಂನಲ್ಲಿ ದೀವರು ಎಂದು ನಮೂದಿಸುವಂತೆ ಸಾಗರದ ಈಡಿಗ ಸಮಾಜದ ಮುಖಂಡ ಆನಂದ ಜನ್ನೆಹಕ್ಲು ಮನವಿ ಮಾಡಿದ್ದಾರೆ. ನಮ್ಮ ಹಿರಿಯರು ಶೈಕ್ಷಣಿಕ ಸೇರಿದಂತೆ ಅಗತ್ಯ ಮಾಹಿತಿ ನೀಡುವ ಸಂದರ್ಭದಲ್ಲಿ ಈಡಿಗ ಜಾತಿ ಎಂದು ನಮೂದಿಸಿರುತ್ತಾರೆ. ಅದನ್ನು ನಮ್ಮ ಪೀಳಿಗೆಯವರು ಮುಂದುವರೆಸಿಕೊಂಡು ಹೋಗಬೇಕು. ಈಡಿಗ ಬದಲು ದೀವರು ಇನ್ನಿತ್ಯಾದಿ ಜಾತಿ ನಮೂದಿಸಿದರೆ ಮುಂದೆ ಮಕ್ಕಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗ ಪಡೆಯಲು ತೊಡಕುಂಟಾಗಬಹುದು. ಈ ಹಿನ್ನೆಲೆಯಲ್ಲಿ ಜಾತಿಗಣತಿಗೆ ಬಂದಾಗ ಕಡ್ಡಾಯವಾಗಿ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಈಡಿಗ ಎಂದೂ, ಉಪ ಜಾತಿ ಕಾಲಂನಲ್ಲಿ ದೀವರೆಂದು ನಮೂದಿಸಲು ತಮ್ಮಲ್ಲಿ ಸಮಾಜದ ಪ್ರಮುಖರ ಪರವಾಗಿ ವಿನಂತಿ ಮಾಡಿತ್ತಿದ್ದೇನೆ ಎಂದು ಆನಂದ್ ಜನ್ನೆಹಕ್ಲು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. https://kannadanewsnow.com/kannada/postpone-the-caste-census-or-expand-it-union-minister-h-d-kumaraswamy/ https://kannadanewsnow.com/kannada/case-filed-against-a-19-year-old-woman-who-married-a-19-year-old-man/
ಬೆಂಗಳೂರು: ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ. ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು…
ತುಮಕೂರು : ಮಾಹಿತಿ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಜಿಲ್ಲೆಯ 1,323 ಮೇಲ್ಮನವಿ ಅರ್ಜಿಗಳು ಆಯೋಗದಲ್ಲಿ ಬಾಕಿಯಿವೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬದ್ರುದ್ದೀನ್ ಕೆ. ಮಾಹಿತಿ ನೀಡಿದರು. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೂ ಒಟ್ಟು ಆಯೋಗದಲ್ಲಿ 41034 ಮೇಲ್ಮನವಿ ಅರ್ಜಿಗಳು ಬಾಕಿಯಿದ್ದು, ಜಿಲ್ಲೆಯಲ್ಲಿ 1323 ಮೇಲ್ಮನವಿ ಅರ್ಜಿಗಳು ಬಾಕಿಯಿವೆ. ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಅರಿವಿನ ಕೊರತೆಯಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮೇಲ್ಮನವಿ ಅರ್ಜಿಗಳು ಆಯೋಗಕ್ಕೆ ಸ್ವೀಕೃತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಆಯೋಗವು ರಾಜ್ಯದಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು. ಅಧಿಕಾರಿಗಳು ಮಾಹಿತಿ ಹಕ್ಕು ಕಾಯ್ದೆಯ ನಿಯಮಗಳನ್ನು ಅರಿತು ಸಕಾಲದಲ್ಲಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರಿಂದ ಸ್ವೀಕೃತ ಅರ್ಜಿಗಳನ್ನು 30 ದಿನದೊಳಗಾಗಿ ವಿಲೇವಾರಿ ಮಾಡಬೇಕು. ಸ್ವೀಕೃತ ಅರ್ಜಿಗಳ ವಿಲೇವಾರಿಯಲ್ಲಿ ತುಮಕೂರು ಜಿಲ್ಲೆಯು ರಾಜ್ಯದಲ್ಲಿ 9ನೇ ಸ್ಥಾನದಲ್ಲಿದ್ದು, ಬಾಕಿಯಿರುವ ಅರ್ಜಿಗಳನ್ನು ನಿಗದಿತ ದಿನಾಂಕದೊಳಗೆ ವಿಲೇವಾರಿ ಮಾಡಿದಲ್ಲಿ ಆಯೋಗಕ್ಕೆ…
ಬೆಂಗಳೂರು: ಕಲ್ಬುರ್ಗಿ ಜಿಲ್ಲೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದಮೆ ಸಂಖ್ಯೆ 26/2023 0 182, 419, 464, 465 ಐ.ಪಿ.ಸಿ. ರಂತೆ ದಾಖಲಾಗಿರುವ ಪ್ರಕರಣದ ಸಮಗ್ರ ತನಿಖೆಗಾಗಿ ಸಿಐಡಿಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:20/09/2025ರ ಪತ್ರದಲ್ಲಿ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರು, ಕರ್ನಾಟಕ ರಾಜ್ಯ, ಬೆಂಗಳೂರು ಇವರು ಕಲ್ಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿನ 256 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬರುವ 6670 ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿದೆ ಎಂಬುದಾಗಿ ಚುನಾವಣಾ ಆಯೋಗಕ್ಕೆ ಮಾಜಿ ಶಾಸಕರಾಗಿದ್ದ ಶ್ರೀ. ಬಿ. ಆರ್. ಪಾಟೀಲ್ ರವರು ದೂರು ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗವು ಈ ಕುರಿತಂತೆ ಪರಿಶೀಲಿಸಿದಾಗ ಒಟ್ಟು 6018 ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ವಿವಿಧ ಸರ್ಕಾರಿ ಆನ್‌ಲೈನ್ ಅಪ್ಲಿಕೇಷನ್‌ಗಳಿಗೆ ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 24 ಅರ್ಜಿಗಳನ್ನು…
ಶಿವಮೊಗ್ಗ: ಗೊಂದಲದ ನಡುವೆಯೂ ಸಾಗರದ ಶ್ರೀ ಮಾರಿಕಾಂಬಾ ದೇವಸ್ಥಾನ ನ್ಯಾಸ ಸಮಿತಿಯ ಸರ್ವಸದಸ್ಯರ ಸಭೆ ಯಶಸ್ವಿಯಾಗಿ ನಡೆಯಿತು. ಇಂದಿನ ಸಭೆಯಲ್ಲಿ ಶೀಘ್ರ ಚುನಾವಣೆಗೆ ನಡೆಸಲು ತೀರ್ಮಾನವನ್ನು ಸಭೆಯಲ್ಲಿ ಪಾಲ್ಗೊಂಡಿದ್ದಂತ ಸರ್ವ ಸದಸ್ಯರು ಕೈಗೊಂಡು, ಒಪ್ಪಿಗೆ ಸೂಚಿಸಿದರು. ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರಗೆ ದೇಶವಿದೇಶಗಳಿಂದಲೂ ಭಕ್ತರು ಬರುತ್ತಾರೆ. ಇಂತಹ ದೇವಸ್ಥಾನದಲ್ಲಿ ಪಾರದರ್ಶಕ ಆಡಳಿತ ತರುವ ಜೊತೆಗೆ ದೇವಸ್ಥಾನದ ಮೂಲಕ ಊರಿನ ಅಭಿವೃದ್ದಿಗೆ ಸಹಕಾರ ನೀಡಬೇಕು ಜನ ಮೆಚ್ಚುವಂತೆ ಕೆಲಸ ಮಾಡಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸಾಗರದ ಆರ್ಯ ಈಡಿಗರ ಸಭಾಭವನದಲ್ಲಿ ಶನಿವಾರ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಸರ್ವಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಸಮಿತಿ ಸಮಾಜಮುಖಿ ಚಿಂತನೆ ಹೊಂದಿರಲಿ ಎಂದು ಸಲಹೆ ನೀಡಿದರು. ಮಾರಿಕಾಂಬಾ ಸಮಿತಿ ಮೂಲಕ ಸುಸಜ್ಜಿತ ಕಲ್ಯಾಣ ಮಂಟಪ, ಶಾಲಾಕಾಲೇಜು ಇನ್ನಿತರೆ ನಿರ್ಮಿಸಿ, ಬಡವರಿಗೆ ಅನುಕೂಲ ಕಲ್ಪಿಸಿ. ಹಣಕೊಟ್ಟು ಉನ್ನತ ಶಿಕ್ಷಣ ಕೊಡಲು ಆಗದ ಬಡವರಿಗೆ…
ಬೆಂಗಳೂರು: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ‘ಸ್ವಸ್ಥ ನಾರಿ, ಸಶಕ್ತ ಪರಿವಾರ’ ಅಭಿಯಾನಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ನಿಖಿಲ್ ಗಜರಾಜ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನ ನಿರ್ದೇಶಕರಾದ ಡಾ. ಅವಿನಾಶ್ ಮೆನನ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ನಿಖಿಲ್ ಗಜರಾಜ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ (NHM) ನ ನಿರ್ದೇಶಕರಾದ ಡಾ. ಅವಿನಾಶ್ ಮೆನನ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ನಿಮ್ಹಾನ್ಸ್‌ನ ಪ್ರಭಾರ ನಿರ್ದೇಶಕರು ಮತ್ತು ಮನೋವೈದ್ಯಶಾಸ್ತ್ರದ ಹಿರಿಯ ಪ್ರಾಧ್ಯಾಪಕರಾದ ಡಾ. ಪ್ರಭಾ ಎಸ್ ಚಂದ್ರ ಅವರು ಅಧ್ಯಕ್ಷತೆ ವಹಿಸಿದ್ದರು. ಈ ಅಭಿಯಾನವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಮಹಿಳೆಯರ ಆರೋಗ್ಯ ಹಾಗೂ ಕುಟುಂಬಗಳನ್ನು ಬಲಪಡಿಸುವುದು ಮತ್ತು ರಾಷ್ಟ್ರೀಯ ಯೋಗಕ್ಷೇಮವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ. ಈ ಅಭಿಯಾನದ ಭಾಗವಾಗಿ,…
ನವದೆಹಲಿ: ಗ್ರಾಹಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಪ್ರಮುಖ ಕ್ರಮವಾಗಿ, ಐಕಾನಿಕ್ ಅಮುಲ್ ಬ್ರಾಂಡ್ ಅಡಿಯಲ್ಲಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ (GCMMF), ತನ್ನ 700 ಕ್ಕೂ ಹೆಚ್ಚು ಉತ್ಪನ್ನ ಪ್ಯಾಕ್‌ಗಳ ಬೆಲೆ ಕಡಿತವನ್ನು ಘೋಷಿಸಿದೆ. ಸರಕು ಮತ್ತು ಸೇವಾ ತೆರಿಗೆ (GST) ದರಗಳಲ್ಲಿನ ಇತ್ತೀಚಿನ ಕಡಿತಕ್ಕೆ ಪ್ರತಿಕ್ರಿಯೆಯಾಗಿ ಸೆಪ್ಟೆಂಬರ್ 22, 2025 ರಿಂದ ಜಾರಿಗೆ ಬರುವ ಈ ಬೆಲೆ ಕಡಿತ ಬಂದಿದೆ. ಬೆಣ್ಣೆ, ತುಪ್ಪ, UHT ಹಾಲು ಮತ್ತು ಐಸ್ ಕ್ರೀಮ್‌ನಂತಹ ಡೈರಿ ಅಗತ್ಯ ವಸ್ತುಗಳು, ಹಾಗೆಯೇ ಬೇಕರಿ ವಸ್ತುಗಳು ಮತ್ತು ಹೆಪ್ಪುಗಟ್ಟಿದ ತಿಂಡಿಗಳು ಸೇರಿದಂತೆ ಅಮುಲ್ ಉತ್ಪನ್ನಗಳ ವ್ಯಾಪಕ ಶ್ರೇಣಿಯಲ್ಲಿ ಬೆಲೆ ಕಡಿತವು ವ್ಯಾಪಿಸಿದೆ. ಚೀಸ್, ಪನೀರ್, ಚಾಕೊಲೇಟ್‌ಗಳು, ಮಾಲ್ಟ್ ಆಧಾರಿತ ಪಾನೀಯಗಳು ಮತ್ತು ಕಡಲೆಕಾಯಿ ಸ್ಪ್ರೆಡ್‌ನಂತಹ ಇತರ ಉತ್ಪನ್ನಗಳು ಸಹ ಬೆಲೆಗಳಲ್ಲಿ ಇಳಿಕೆಯನ್ನು ಕಾಣುತ್ತವೆ. ಈ ಬೆಲೆ ಪರಿಷ್ಕರಣೆಯು ಅಗತ್ಯ ಆಹಾರ ಪದಾರ್ಥಗಳ ಮೇಲಿನ GST ದರಗಳನ್ನು ಕಡಿಮೆ…
ಬೆಂಗಳೂರು: ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಕೃಷಿ ಆಯುಕ್ತಾಲಯದಲ್ಲಿರುವ ಸಂಗಮ ಸಂಭಾಗಣದಲ್ಲಿ, NABL ಮಾನ್ಯತೆ ಪಡೆದಿರುವ ಪ್ರಯೋಗಾಲಯಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮತನಾಡಿದ ಸಚಿವರು, ಕೃಷಿ ಇಲಾಖೆಯ ಯೋಜನೆಗಳು ರೈತರಿಗೆ ತಲುಪಬೇಕು, ಇದಕ್ಕಾಗಿ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಉತ್ತಮ ಫಲಿತಾಂಶ ಹೊರಬರಲಿದೆ ಎಂದು ಸಚಿವರು ತಿಳಿಸಿದರು.. ಕೃಷಿ ಇಲಾಖೆಯ 29, ತೋಟಗಾರಿಕೆ ಇಲಾಖೆಯ 6, ರೇಷ್ಮೆ ಇಲಾಖೆಯ 1, ಕೃಷಿ ವಿಶ್ವವಿದ್ಯಾಲಯಗಳ 3 ಮತ್ತು ಕೃಷಿ ವಿಜ್ಞಾನ ಕೇಂದ್ರಗಳ 5 ಮಣ್ಣು ಪರೀಕ್ಷಾ ಪ್ರಯೋಗಾಲಗಳು ಸೇರಿ ಒಟ್ಟು 44 ಮಣ್ಣು ಪರೀಕ್ಷಾ ಪ್ರಯೋಗಾಲಯಗಳು NABL Recognition ಪಡೆದಿರುವುದಕ್ಕೆ ಸಚಿವರು ಅಭಿನಂದನೆ ತಿಳಿಸಿದರು. ಅಲ್ಲದೆ, ಕೃಷಿ ಇಲಾಖೆಯ 6 ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯಗಳು, 2 ರಾಜ್ಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯಗಳು ಮತ್ತು ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆಯ 1 ಬೀಜ…
ಬೆಂಗಳೂರು: ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು. “ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ” ಎಂದು ತಿಳಿಸಿದರು. ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ? “ಬಿಜೆಪಿಯವರು ರಸ್ತೆ ತಡೆಯದರೂ ಮಾಡಲಿ, ಬೇರೆ ಏನಾದರೂ ಮಾಡಲಿ. ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ. ಅವರುಗಳು ಮೊದಲು ತಮ್ಮಪಾಲಿನ…







