Author: kannadanewsnow09

ಬೆಂಗಳೂರು: ರಾಜ್ಯದ 10 ಮಹಾನಗರ ಪಾಲಿಕೆಗಳ ಖಾಯಂ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಪರಿಷ್ಕೃತ ವೇತನ ಶ್ರೇಣಿಯ ಸೌಲಭ್ಯವನ್ನು ಜಾರಿಗೊಳಿಸಿ, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಮಹಾನಗರ ಪಾಲಿಕೆಯ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 01.03.2018 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ / ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ: 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ: 01.04.2018 ರಿಂದ ಜಾರಿಗೆ…

Read More

ಬೆಂಗಳೂರು : ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು. ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಉನ್ನತಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಅದರ ಮುಂದಿನ ಭಾಗ ಇದಾಗಿದೆ. ಮಹಿಳಾ ಆರೋಗ್ಯ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ಡಾ.ಪಾಟೀಲ್ ಸೂಚನೆ ನೀಡಿದರು. “ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಬರವಣಿಗೆಯಲ್ಲಿ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ಜಾರಿಗೆ ತರಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುರಕ್ಷತಾ ಶಿಷ್ಟಾಚಾರ ಕ್ರಮಗಳನ್ನು ಪರಿಶೀಲಿಸಲು ಮಾಸಿಕ ಸಭೆ ನಡೆಸಬೇಕು. ಭದ್ರತಾ ಲೆಕ್ಕಪರಿಶೋಧನಾ ಸಮಿತಿಯನ್ನು ರಚಿಸಬೇಕು.…

Read More

ಬೆಂಗಳೂರು: ಕೊನೇಯ ಕ್ಷಣದಲ್ಲಿ ಬದಲಾವಣೆ ಎನ್ನುವಂತೆ ಕೆಪಿಎಸ್ಸಿಯಿಂದ ನಾಳೆ, ನಾಡಿದ್ದು ಗ್ರೂಪ್-ಬಿ ಹುದ್ದೆಗಳಿಗೆ ಸಂಬಂಧಿಸಿದಂತ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಕೆಪಿಎಸ್ಸಿಯ ಕಾರ್ಯದರ್ಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ – ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು ಎಂದು ಹೇಳಿದ್ದಾರೆ. ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ಈ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ…

Read More

ನವದೆಹಲಿ: ರೂಸ್ ಅವೆನ್ಯೂ ನ್ಯಾಯಾಲಯವು ಜಾಮೀನು ಬಾಂಡ್ಗಳನ್ನು ಸ್ವೀಕರಿಸಿ ಬಿಡುಗಡೆ ವಾರಂಟ್ ಹೊರಡಿಸಿದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದರು. ಅವರನ್ನು ಎಎಪಿ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಅವರ ಶೀಘ್ರ ಬಿಡುಗಡೆಗಾಗಿ, ವಿಶೇಷ ದೂತನ ಮೂಲಕ ಬಿಡುಗಡೆ ವಾರಂಟ್ ಕಳುಹಿಸುವ ಮನವಿಯನ್ನು ನ್ಯಾಯಾಲಯ ಸ್ವೀಕರಿಸಿತ್ತು. ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿದ ನಂತರ ಈ ಬೆಳವಣಿಗೆ ಸಂಭವಿಸಿದೆ. ಸಿಬಿಐ ದಾಖಲಿಸಿದ್ದ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಲಾಗಿದೆ. ಇಡಿ ಸಲ್ಲಿಸಿದ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರು ಈಗಾಗಲೇ ಮಧ್ಯಂತರ ಜಾಮೀನು ಪಡೆದಿದ್ದರು. ಆದಾಗ್ಯೂ, ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವಾಗ, ಪ್ರಕರಣದ ಅರ್ಹತೆಯ ಬಗ್ಗೆ ಯಾವುದೇ ಸಾರ್ವಜನಿಕ ಹೇಳಿಕೆ ನೀಡದಂತೆ ನಿರ್ದೇಶನ ನೀಡಿತು. ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್, “ತನಿಖೆಯ ಉದ್ದೇಶಗಳಿಗಾಗಿ ಈಗಾಗಲೇ ಮತ್ತೊಂದು ಪ್ರಕರಣದಲ್ಲಿ…

Read More

ಬೆಂಗಳೂರು: ಪರಸ್ಪರ ಮುಟ್ಟಿಕೊಳ್ಳುವುದೆ ಸಮಸ್ಯೆಯಾಗಿರುವ ಇಂದಿನ ನಾಗರಿಕ ಸಮಾಜದಲ್ಲಿ ಕೈಗೆ ಕೈಕೊಟ್ಟು ನಿಲ್ಲುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಕರ್ನಾಟಕವು ಆಚರಿಸುತ್ತಿರುವುದು ರಾಜ್ಯದ ಇತಿಹಾಸದಲ್ಲಿ ಬಹುದೊಡ್ಡ ಘಟನೆಯಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ದಿನಾಂಕ: 15-09-2024ರ ಭಾನುವಾರ ರಾಜ್ಯಾದ್ಯಂತ ನಡೆಯಲಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಿರುವ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕ ಮತ್ತು ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳನ್ನು ಉದ್ದೇಶಿಸಿ ವಿಧಾನಸೌಧದಲ್ಲಿ ಮಾತನಾಡಿದ ಡಾ.ಬಿಳಿಮಲೆ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಸ್ಪೃಶ್ಯತೆಯನ್ನು ಮಹಾಶಾಪವೆಂದು ಬಣ್ಣಿಸಿದ್ದನ್ನು ನೆನಪಿಸಿಕೊಂಡರೆ ಇಂದು ರಾಜ್ಯಾದ್ಯಂತ ಸುಮಾರು ಎರಡೂವರೆ ಸಾವಿರ ಕಿ.ಮೀ. ಉದ್ದ ಮಾನವ ಸರಪಳಿಯ ನಿರ್ಮಾಣದ ಮೂಲಕ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲು ಸರ್ಕಾರವು ನಿರ್ಧರಿಸಿರುವುದು ಅತ್ಯಂತ ಗಮನಾರ್ಹವಾದ ಸಂಗತಿ. ಇದು ಯಶಸ್ವಿಯಾಗುವುದು ಪ್ರಜಾಪ್ರಭುತ್ವದ ಹಿತದೃಷ್ಠಿಯಿಂದ ನಿರ್ಣಾಯಕವೆಂದರು. ಸರ್ಕಾರವು ಇಂತಹ ಮಹತ್ವದ ಯೋಜನೆಯೊಂದನ್ನು ರೂಪಿಸಿದೆ. ಇದು ಜನಪರವಾದ ಆಂದೋಲನವಾಗಿ ರೂಪುಗೊಳ್ಳಬೇಕಾದಲ್ಲಿ ಆಡಳಿತ ಯಂತ್ರದ ಜವಾಬ್ದಾರಿ ಬಹಳ ದೊಡ್ಡದಾಗಿರುತ್ತದೆ. ಆಡಳಿತ ಯಂತ್ರವು ಸರ್ಕಾರದ ಆಶಯವನ್ನು…

Read More

ಬೆಂಗಳೂರು: ಕೆಪಿಎಸ್ಸಿಯಿಂದ ನಾಳೆ, ನಾಡಿದ್ದು ಗ್ರೂಪ್-ಬಿ ಹುದ್ದೆಗಳಿಗೆ ಸಂಬಂಧಿಸಿದಂತ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ನಿಗದಿ ಪಡಿಸಲಾಗಿತ್ತು. ಇಂತಹ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ – ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು ಎಂದಿದೆ. ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ಈ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ…

Read More

ಅಮರಾವತಿ: ಆಂಧ್ರಪ್ರದೇಶದಲ್ಲಿ ಶುಕ್ರವಾರ ಆರ್ಟಿಸಿ ಬಸ್ ಮತ್ತು ಎರಡು ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. 33 ಜನರು ಗಾಯಗೊಂಡಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ತನಿಖೆ ಆರಂಭಿಸಲು ಪ್ರಕರಣ ದಾಖಲಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಏತನ್ಮಧ್ಯೆ, ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದರು ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. https://kannadanewsnow.com/kannada/ex-gram-panchayat-member-shot-dead-in-broad-daylight-in-kalaburagi/ https://kannadanewsnow.com/kannada/thalapathy-vijays-69th-film-revealed-producers-share-this-video-for-fans/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/

Read More

ಕೆಎನ್ಎನ್ ಸಿನಿಮಾ ಡೆಸ್ಕ್: ಸೆಪ್ಟೆಂಬರ್ 13 ರ ಶುಕ್ರವಾರ ತಲಪತಿ 69ರ ತಯಾರಕರು ವಿಜಯ್ ಮತ್ತು ಅವರ ಅಭಿಮಾನಿಗಳಿಗೆ ಅರ್ಪಿಸಿದ ಹೃದಯಸ್ಪರ್ಶಿ ವೀಡಿಯೊವನ್ನು ಬಿಡುಗಡೆ ಮಾಡಿದರು. ಈ ಮೂಲತ ಕಮ್ಮ 69ನೇ ಚಿತ್ರದ ಬಗ್ಗೆ ವಿಷಯವನ್ನು ರಿವೀಲ್ ಮಾಡಿದರು. ತಮಿಳು ಸೂಪರ್ಸ್ಟಾರ್ ತಮ್ಮ ಜೀವನವನ್ನು ಸಂಪೂರ್ಣವಾಗಿ ರಾಜಕೀಯಕ್ಕೆ ಅರ್ಪಿಸುವ ಮೊದಲು ಕೆವಿಎನ್ ಪ್ರೊಡಕ್ಷನ್ಸ್ನೊಂದಿಗೆ ತಮ್ಮ ಕೊನೆಯ ಚಿತ್ರವನ್ನು ಪ್ರಾರಂಭಿಸಲಿದ್ದಾರೆ ಮತ್ತು ವೀಡಿಯೊ ಅವರ ನಿರ್ಧಾರಕ್ಕೆ ಭಾವನಾತ್ಮಕ ಗೌರವದಂತೆ ತೋರುತ್ತದೆ. ಅವರ ಪೋಸ್ಟ್ನ ಶೀರ್ಷಿಕೆಯಲ್ಲಿ ಉಲ್ಲೇಖಿಸಿದಂತೆ, ಚಿತ್ರದ ಬಗ್ಗೆ ಹೆಚ್ಚಿನದನ್ನು ಶನಿವಾರ ಸಂಜೆ 5 ಗಂಟೆಗೆ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಲಾಗುವುದು. ತಲಪತಿ 69 ಅನ್ನು ತೆರೆಯ ಮೇಲೆ ವಿಜಯ್ ಅವರ ‘ಕೊನೆಯ ನೃತ್ಯ’ ಎಂದು ಪರಿಗಣಿಸಲಾಗಿದೆ ಮತ್ತು ಚಿತ್ರದ ಸುತ್ತಲಿನ ಅಭಿಮಾನಿಗಳ ಉತ್ಸಾಹಕ್ಕೆ ಮಿತಿಯಿಲ್ಲ. ಎಕ್ಸ್ ನಲ್ಲಿ ಹಂಚಿಕೊಳ್ಳಲಾದ ಹೊಸ ವೀಡಿಯೊ ನಟನ ಮೇಲಿನ ಪ್ರೀತಿ ಮತ್ತು ಅವರ ಉಪಸ್ಥಿತಿಯು ದೊಡ್ಡ ಪರದೆಯ ಮೇಲೆ ಸೃಷ್ಟಿಸುವ ಭಾರಿ ಕ್ರೇಜ್ ಅನ್ನು ಸಂಪೂರ್ಣವಾಗಿ ಸೆರೆಹಿಡಿಯುತ್ತದೆ.…

Read More

ಕಲಬುರ್ಗಿ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷನನ್ನು ಹಾಡಹಗಲೇ ಗುಂಡಿಕ್ಕಿ ಹತ್ಯೆಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಳಂದ ತಾಲ್ಲೂಕಿನ ಖಾನಾಪುರದ ಬಳಿಯಲ್ಲಿ ಇಂದು ಗ್ರಾಮ ಪಂಚಾಯ್ತಿ ಮಾಜಿ ಸದಸ್ಯರಾಗಿದ್ದಂತ ವಿಶ್ವನಾಥ ಜಮಾದಾರ್ (50) ಎಂಬುವರನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಮೂರು ಬಾರಿ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಮೂರು ಬಾರಿ ಗುಂಡಿನ ದಾಳಿಯಿಂದಾಗಿ ವಿಶ್ವನಾಥ ಅವರು ಸ್ಥಳದಲ್ಲೇ ತೀವ್ರ ರಕ್ತಸ್ತ್ರಾವದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪಡಸಾವಳಿಯಿಂದ ಅಳಂದ ಪಟ್ಟಣಕ್ಕೆ ವಿಶ್ವನಾಥ ತೆರಳುತ್ತಿದ್ದಾಗ ಈ ಹತ್ಯೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಕಲಬುರ್ಗಿ ಎಸ್ಪಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/state-govt-to-take-major-steps-to-reduce-gram-panchayat-power-burden-installation-of-solar-street-lights/ https://kannadanewsnow.com/kannada/big-news-sc-granted-bail-to-kejriwal-a-travesty-to-centre-siddaramaiah/ https://kannadanewsnow.com/kannada/cm-siddaramaiah-announces-hike-in-nandini-milk-prices-soon/

Read More

ದಿನವೂ ಈ ಸಮಯದಲ್ಲಿ ಕಸಗುಡಿಸುವುದರಿಂದ ಎಲ್ಲಕ್ಕಿಂತ ಅಧಿಕ ಲಾಭ ಸಿಗುತ್ತದೆ ಲಕ್ಷ್ಮೀದೇವಿ ಆಶೀರ್ವಾದ ನಿಮಗೆ ಸಿಗುತ್ತದೆ ನಮ್ಮ ಜೀವನದಲ್ಲಿ ತಿಳಿಯದೇಯೊ ತಿಳಿದೊ ಕೆಲವೊಂದು ತಪ್ಪುಗಳು ಆಗಿ ಹೋಗುತ್ತದೆ. ಅವುಗಳ ಪ್ರಭಾವ ನಮ್ಮ ಮನೆಯವರ ಮೇಲೆ ಕುಟುಂಬದ ಮೇಲೆ ಬೀಳುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ…

Read More