Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು. ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಹಾಕುವುದು ಕಡ್ಡಾಯ. ಜೊತೆಗೆ ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಎಂಬುದಾಗಿ ಅದರಲ್ಲಿ ಬರೆಸಿ ಹಾಕುವಂತೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಅದರಲ್ಲಿ ಜಗಜ್ಯೋತಿ ಬಸವೇಶ್ವರ ಎಂದು ಪ್ರಖ್ಯಾತರಾಗಿರುವ ಬಸವಣ್ಣನವರು 12ನೇ ಶತಮಾನದ ವಚನ ಚಳುವಳಿಯ ಹಾಗೂ ಸಾಮಾಜಿಕ ನ್ಯಾಯದ ನಾಯಕತ್ವ ವಹಿಸಿದ್ದರು. ಮನುಧರ್ಮಶಾಸ್ತ್ರವು ಶ್ರೇಣೀಕೃತ ಸಮಾಜವನ್ನು ನಿರ್ಮಾಣ ಮಾಡಿ ಅಸಮಾನತೆಯನ್ನು ಸೃಷ್ಟಿ ಮಾಡಿತ್ತು. ಹುಟ್ಟಿನ ಆಧಾರದ ಮೇಲೆ ಮೇಲು-ಕೀಳು ಎಂದು ಸಮುದಾಯಗಳನ್ನು ಶಾಶ್ವತವಾಗಿ ವಿಭಜಿಸಿ ಕತ್ತಲ ಕೂಪಕ್ಕೆ ತಳ್ಳಲಾಗಿತ್ತು. ದುಡಿಯುವ ವರ್ಗಗಳು ಕ್ರಿಯಾಶೀಲ ಸಮಾಜಗಳ ಸೃಜನಶೀಲ ಶಕ್ತಿಗಳಾಗಿರುತ್ತವೆ. ಆದರೆ ಜಾತಿಯ ಹೆಸರಿನಲ್ಲಿ ಈ ಸಮುದಾಯಗಳ ಚೈತನ್ಯವನ್ನ ಕಿತ್ತುಕೊಳ್ಳಲಾಗಿತ್ತು ಎಂದಿದ್ದಾರೆ. ಇಂತಹ ಉಸಿರುಗಟ್ಟುವ ನಿಯಮಗಳ ವಿರುದ್ಧ ವಚನ ಚಳುವಳಿಯು ಅತ್ಯಂತ ಪ್ರಬುದ್ಧವಾದ ಹೋರಾಟವನ್ನು ರೂಪಿಸಿತ್ತು, 12ನೇ ಶತಮಾನದಲ್ಲಿ ದೇಶದ ಅನೇಕ ಭಾಗಗಳಿಂದ ಬಂದ ಚಿಂತಕರು, ಹೋರಾಟಗಾರರು ಒಟ್ಟುಗೂಡಿ ಸಮಾನತೆಯ ಚಳುವಳಿಯನ್ನು…
ಕೇರಳ: ರಾಜ್ಯಕ್ಕೆ ನ್ಯಾಯಯುತ ತೆರಿಗೆ ಪಾಲು ಕೊಡದೇ ಕೇಂದ್ರ ಬಿಜೆಪಿ ಸರ್ಕಾರ, ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನ ವಿಫಲಗೊಳಿಸುವ ಹುನ್ನಾರ ನಡೆಸಿದೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ವಯನಾಡು ಕ್ಷೇತ್ರದ ಕಲ್ಪೆಟ್ಟಾದಲ್ಲಿ ಕಾಂಗ್ರೆಸ್ ಪರ ದಿನೇಶ್ ಗುಂಡೂರಾವ್ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಗ್ಯಾರಂಟಿ ಯೋಜನೆಗಳು ಭ್ರಷ್ಟರಹಿತವಾಗಿ ನೇರವಾಗಿ ಜನರಿಗೆ ಆರ್ಥಿಕ ನೆರವು ನೀಡುತ್ತಿರುವುದನ್ನ ಬಿಜೆಪಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದರು. ಬಡಜನರಿಗೆ ಆರ್ಥಿಕವಾಗಿ ನೆರವು ಒದಗಿಸುತ್ತಿರುವ ಗ್ಯಾರಂಟಿ ಯೋಜನೆಗಳನ್ನ ವಿಫಲಗೊಳಿಸುವ ಉದ್ದೇಶದಿಂದ ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ತನ್ನ ತೆರಿಗೆ ಪಾಲನ್ನ ನೀಡದೆ ಹುನ್ನಾರ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಅವರು ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಪರ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ವಯನಾಡಿನ ಕಲ್ಪೆಟ್ಟಾದಲ್ಲಿ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಪರ ಮತಯಾಚಿಸಿದ ಸಚಿವ ದಿನೇಶ್ ಗುಂಡೂರಾವ್, ಕೇರಳ…
ಬೆಂಗಳೂರು: ರಾಜ್ಯದ ಮಲೆನಾಡಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಂಡಿದೆ. ಇಂದು ಒಂದೇ ದಿನ ಬರೋಬ್ಬರಿ 13 ಜನರಿಗೆ ಸೋಂಕು ದೃಢಪಟ್ಟಿದೆ. ಈ ಕುರಿತಂತ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 63 ಜನರನ್ನು ಮಂಗನ ಕಾಯಿಲೆ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 13 ಜನರಿಗೆ ಸೋಂಕು ದೃಢಪಟ್ಟಿರೋದಾಗಿ ತಿಳಿಸಿದೆ. ಶಿವಮೊಗ್ಗದಲ್ಲಿ 42 ಮಂದಿಯನ್ನು ಕಳೆದ 24 ಗಂಟೆಯಲ್ಲಿ ಮಂಗನ ಕಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 6 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಚಿಕ್ಕಮಗಳೂರಲ್ಲಿ 21 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು 7 ಮಂದಿಗೆ ದೃಢಪಟ್ಟಿದೆ ಎಂದು ತಿಳಿಸಿದೆ. ಇದುವರೆಗೆ 3220 ಮಂದಿಯನ್ನು ಮಂಗನ ಖಾಯಿಲೆ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, 89 ಜನರಿಗೆ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರಲ್ಲಿ 63 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ 24 ಸಕ್ರೀಯ ಪ್ರಕರಣಗಳು ಇದ್ದಾವೆ ಎಂದು ತಿಳಿಸಿದೆ. https://kannadanewsnow.com/kannada/class-10-student-commits-suicide-at-sdm-college-in-dharmasthala/ https://kannadanewsnow.com/kannada/this-is-a-guarantee-pro-people-government-dinesh-gooligowda/
ಮಂಗಳೂರು: ಜಿಲ್ಲೆಯ ಬೆಳ್ತಂಗಡಿಯಲ್ಲಿರುವಂತ ಧರ್ಮಸ್ಥಳದ ಎಸ್ ಡಿ ಎಂ ಕಾಲೇಜಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿರುವಂತ ಎಸ್ ಡಿ ಎಂ ಕಾಲೇಜಿನ 10ನೇ ತರಗತಿ ವಿದ್ಯಾರ್ಥಿನಿಯೊಬ್ಬರಿಗೆ, ಶಾಲೆಯ ಚಿತ್ರಕಲಾ ಶಿಕ್ಷ ರೂಪೇಶ್ ಪೂಜಾರಿ ಎಂಬುವರು ಮೆಸೇಜ್ ಮಾಡಿದ್ದರು. ಶಿಕ್ಷಕರು ಕಳುಹಿಸಿದ್ದಂತ ಮೆಸೇಜ್ ನಲ್ಲಿ ಮತ್ತೋರ್ವ ವಿದ್ಯಾರ್ಥಿ ಮೊಬೈಲ್ ಗೆ ಮಾನಹಾನಿ ಮಸೇಜ್ ರವಾನಿಸಿದ್ದರು. ವಿದ್ಯಾರ್ಥಿ ಬಗ್ಗೆ ಶಿಕ್ಷ ಮಾನಹಾನಿ ಮೆಸೇಜ್ ರವಾನೆ ಮಾಡಿದ್ದರಿಂದ, ಮನನೊಂದು 10ನೇ ತರಗತಿ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ. 10ನೇ ತರಗತಿ ವಿದ್ಯಾರ್ಥಿನಿ ಶಿಕ್ಷಕನ ಮಾನಹಾನಿ ಮೆಸೇಜ್ ನಿಂದ ಮನನೊಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/this-is-a-guarantee-pro-people-government-dinesh-gooligowda/ https://kannadanewsnow.com/kannada/ed-summons-farooq-abdullah-tomorrow-in-money-laundering-case/
ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಈ ಸಂಬಂಧ ಸಮನ್ಸ್ ಜಾರಿಗೊಳಿಸಿರುವಂತ ಜಾರಿ ನಿರ್ಧೇಶನಾಲಯವು ನಾಳೆ ವಿಚಾರಣೆ ಹಾಜರಾಗುವಂತೆ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಸೂಚಿಸಿದೆ. https://twitter.com/PTI_News/status/1757045841045672233
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಎಷ್ಟು ಸೀಟು ಹಂಚಿಕೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಇನ್ನು ಯಾವುದೇ ತೀರ್ಮಾನ ಆಗಿಲ್ಲ ಎಂಬುದಾಗಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದ ಪಾಂಡವಪುರದಲ್ಲಿ ಮಾತನಾಡಿದಂತ ಅವರು, ಕಳೆದ 1 ತಿಂಗಳಿಂದ ಯಾವ ರೀತಿ ಚುನಾವಣೆ ಎದುರಿಸಬೇಕು ಅನ್ನೋ ತಯಾರಿ ಆಗಿದೆ. ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಮಂಡ್ಯದಲ್ಲಿ ಪಕ್ಷ ಕಟ್ಟುವಲ್ಲಿ ಓಡಾಟ ಮಾಡಬೇಕು. ಹಿಂದೆ 2019ರಲ್ಲಿ ಮಂಡ್ಯದಿಂದ ನಾನು ಸ್ಪರ್ಧೆ ಮಾಡಿದ್ದೆ ಹೀಗಾಗಿ ಮಂಡ್ಯದಲ್ಲಿ ನಾನು ಸಕ್ರಿಯವಾಗಿ ಇರಬೇಕು ಎಂಬ ಸೂಚನೆ ಇದೆ. ಮುಂದೆ ಮಂಡ್ಯದ 8 ವಿಧಾನಸಭಾ ಕ್ಷೇತ್ರದಲ್ಲಿ ಸಂಚಾರ ಮಾಡ್ತಿನಿ ಎಂದರು. ಬಿಜೆಪಿ, ಜೆಡಿಎಸ್ ಸೀಟು ಹಂಚಿಕೆ ಗೊಂದಲದ ವಿಚಾರವಾಗಿ ಮಾತನಾಡಿದ ಅವರು, ಮೈಸೂರಿನಲ್ಲಿ ಸಭೆ ನಡೆಸಿ ಅಮಿತ್ ಶಾ ಬಿಜೆಪಿ ನಾಯಕರಿಗೆ ಸೂಚನೆ ಕೊಟ್ಟಿದ್ದಾರೆ. ನಮ್ಮ ಪಕ್ಷದವ್ರಲ್ಲಿ ಯಾವುದೇ ಗೊಂದಲ ಇಲ್ಲ. ನಾವು ಯಾರು ಯಾವುದಕ್ಕೂ ಪ್ರತಿಕ್ರಿಯೆ ನೀಡ್ತಿಲ್ಲ. ಇದು ಆರೋಗ್ಯಕರ ಚುನಾವಣೆ ಆಗಬೇಕು. ಮತ್ತೊಮ್ಮೆ ಮೋದಿ…
ಬೆಂಗಳೂರು : “ರಾಮನಗರವನ್ನು ಮಾದರಿ ಜಿಲ್ಲೆಯಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಮನಗರ ಜಿಲ್ಲೆಗೆ ನೂತನ ಅಶ್ವಮೇಧ ಬಸ್ ಗಳ ಸಂಚಾರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರಾಮನಗರ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ಮಾಡಲು ಡಿ.ಕೆ. ಸುರೇಶ್ ಅವರು ಸಂಕಲ್ಪ ಮಾಡಿದ್ದಾರೆ. ಅವರ ಯೋಜನೆಗಳನ್ನು ಜಾರಿಗೊಳಿಸಲು ನಾನು, ಇಕ್ಬಾಲ್ ಹುಸೇನ್, ಬಾಲಕೃಷ್ಣ, ರವಿ ಅವರು ಸಂಪೂರ್ಣ ಸಹಕಾರ ನೀಡುತ್ತೇವೆ. ಬಿಡದಿ ಪ್ರಾಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ಪರಿವರ್ತಿಸುತ್ತಿದ್ದೇವೆ. ಬಿಡದಿ ಹಾಗೂ ಆನೇಕಲ್ ವರೆಗೂ ಮೆಟ್ರೋ ವಿಸ್ತರಿಸಲು ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದೇನೆ. ರಾಮನಗರ ಜಿಲ್ಲೆಗೆ ಯಾವ ಯಾವ ಇಲಾಖೆಗಳಲ್ಲಿ ಏನೆಲ್ಲಾ ಯೋಜನೆಗಳನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ತಿಳಿಸುತ್ತೇನೆ ಎಂದರು. ರಾಮನಗರ ಜಿಲ್ಲೆಯವರು ಬೆಂಗಳೂರಿನವರೇ ಆಗಿದ್ದಾರೆ. ಕೆಂಗಲ್ ಹನುಮಂತಯ್ಯ, ಶ್ರೀ ಬಾಲಗಂಗಾಧರನಾಥ ಸ್ವಾಮಿಜಿಗಳು, ಶ್ರೀ ಶಿವಕುಮಾರ ಸ್ವಾಮೀಜಿಗಳು ಇದೇ ಜಿಲ್ಲೆಯವರು. ನಾವೆಲ್ಲರೂ ಬೆಂಗಳೂರಿನ ಭಾಗ. ಈ ವಿಚಾರವಾಗಿ ಚುನಾವಣೆ ನಂತರ ಚರ್ಚೆ ಮಾಡಿ ರೂಪುರೇಷೆ…
ಬೆಂಗಳೂರು: ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ಪ್ರಾರಂಭಿಸಲು ಕರ್ನಾಟಕ ಸರ್ಕಾರವು ಯುಎಸ್ ಸರ್ಕಾರಕ್ಕೆ ಎಲ್ಲಾ ಬೆಂಬಲವನ್ನು ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐಟಿಬಿಟಿಯ ಮಾನ್ಯ ಸಚಿವರಾದ ಶ್ರೀ ಪ್ರಿಯಾಂಕ್ ಎಂ ಖರ್ಗೆ ಇಂದು ಹೇಳಿದ್ದಾರೆ. ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಇತರೆ ಜನರು ಕಾರ್ಯನಿಮಿತ್ತ ಯುಎಸ್‌ಗೆ ತೆರಳುತ್ತಿದ್ದಾರೆ, ಅವರಿಗೆ ವೀಸಾ ಹಾಗೂ ಇತರೆ ಔಪಚಾರಿಕತೆಗಳಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿಯೇ ಯುಎಸ್ ರಾಯಭಾರಿ ಕಚೇರಿ ತೆರೆಯುವಂತೆ ಮನವಿ ಮಾಡಿದ್ದೇವೆ ಎಂದರು. “ಬೆಂಗಳೂರಿನಲ್ಲಿ ಕಾನ್ಸುಲೇಟ್ ಅನ್ನು ಪ್ರಾರಂಭಿಸಲು ನಾವು ಯುಎಸ್ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ. ತಮ್ಮ ವೀಸಾ ಅರ್ಜಿಗಳಿಗಾಗಿ ಚೆನ್ನೈ ಮತ್ತು ಹೈದರಾಬಾದ್‌ಗೆ ಪ್ರಯಾಣಿಸಬೇಕಾದ ಕರ್ನಾಟಕದ ಐಟಿ ಮತ್ತು ಐಟಿಇಎಸ್ ಉದ್ಯಮಗಳು, ಟೆಕ್ಕಿಗಳು ಮತ್ತು ವಿದ್ಯಾರ್ಥಿಗಳಿಗೆ ಇದು ಸಹಾಯ ಮಾಡುತ್ತದೆ ”ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ KEONICS ಅಧ್ಯಕ್ಷ ಶ್ರೀ ಶರತ್ ಬಚ್ಚೇಗೌಡ ಪುನರುಚ್ಚರಿಸಿದರು. 2024 ರ ಫೆಬ್ರವರಿ 12 ರಿಂದ 20 ರವರೆಗೆ ಪ್ರಮುಖ ಶ್ರೇಣಿ 1 ಮತ್ತು…
ಬೆಂಗಳೂರು: ಫೆಬ್ರವರಿ.16ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದಕ್ಕೂ ಮುನ್ನಾ ದಿನವಾದಂತ ಫೆಬ್ರವರಿ.15ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 15-02-2024ರಂದು ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 5ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ಬಜೆಟ್ ಅಧಿವೇಶನ ಹಿನ್ನಲೆ: ಫೆ.14ರಂದು ‘ಕಾಂಗ್ರೆಸ್ ಶಾಸಕಾಂಗ ಪಕ್ಷ’ದ ಸಭೆ ನಿಗದಿ ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಫೆಬ್ರವರಿ.16ರಂದು 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇದಕ್ಕೂ ಮುನ್ನವೇ ಫೆಬ್ರವರಿ.14ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಎಲ್ಲಾ ಶಾಸಕಾಂಗ ಪಕ್ಷದ ಸದಸ್ಯರು, ವಿಧಾನಸಭೆ, ಪರಿಷತ್, ಲೋಕಸಭೆ, ರಾಜ್ಯ ಸಭೆ ಹಾಗೂ ಬಾಹ್ಯ ಬೆಂಬಲಿತ ಸದಸ್ಯರಿಗೆ ಪತ್ರ ಬರೆದಿದ್ದಾರೆ. ಆ…