Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ನಾಳೆ ನಾಲ್ಕು ರಾಜ್ಯಗಳಲ್ಲಿ ಭದ್ರತಾ ಕಸರತ್ತು ನಡೆಯಲಿದೆ. ಮೇ 29 ರಂದು ಮತ್ತೊಂದು ಸುತ್ತಿನ ಅಣಕು ಕವಾಯತು ನಡೆಯಲಿದೆ. ಇದು ಸಂಘಟಿತ ಸುರಕ್ಷತೆ ಮತ್ತು ತುರ್ತು ಪ್ರತಿಕ್ರಿಯೆ ಉಪಕ್ರಮವಾದ ಆಪರೇಷನ್ ಶೀಲ್ಡ್ನ ಭಾಗವಾಗಿದೆ. ಹೆಚ್ಚುತ್ತಿರುವ ಪ್ರಾದೇಶಿಕ ಕಳವಳಗಳ ನಡುವೆ ಸನ್ನದ್ಧತೆಗೆ ರಾಜ್ಯದ ಬದ್ಧತೆಯನ್ನು ಒತ್ತಿಹೇಳುವ ಈ ನಿರ್ದೇಶನವು ಮುಖ್ಯಮಂತ್ರಿಗಳ ಸಚಿವಾಲಯದಿಂದ ನೇರವಾಗಿ ಬಂದಿದೆ. ರಾಜಸ್ಥಾನ, ಗುಜರಾತ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಏಕಕಾಲದಲ್ಲಿ ಇದೇ ರೀತಿಯ ಕವಾಯತುಗಳನ್ನು ನಡೆಸಲಾಗುತ್ತಿದೆ. ಮೂಲಗಳ ಪ್ರಕಾರ, ಪಾಕಿಸ್ತಾನದೊಂದಿಗಿನ ಹೆಚ್ಚಿದ ಉದ್ವಿಗ್ನತೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಈ ಕವಾಯತು ನಡೆಸಲಾಗುತ್ತಿದೆ. ವಿಪತ್ತು ನಿರ್ವಹಣಾ ತಂಡಗಳು ಮತ್ತು ಕಾನೂನು ಜಾರಿ ಸಂಸ್ಥೆಗಳು ಸೇರಿದಂತೆ ಇಡೀ ಆಡಳಿತವು ಹೆಚ್ಚಿನ ಎಚ್ಚರಿಕೆಯಲ್ಲಿದೆ ಮತ್ತು ಭಾಗವಹಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ ಎಂದು ಸರ್ಕಾರಿ ಅಧಿಕಾರಿಗಳು ದೃಢಪಡಿಸಿದ್ದಾರೆ. ವಾಯುಪ್ರದೇಶದ ಬೆದರಿಕೆಗಳು, ಗಡಿಯಾಚೆಗಿನ ಒಳನುಗ್ಗುವಿಕೆಗಳು ಮತ್ತು ನಗರ ಸ್ಥಳಾಂತರಿಸುವ ಪ್ರೋಟೋಕಾಲ್ಗಳಂತಹ ತುರ್ತು ಪ್ರತಿಕ್ರಿಯೆ ಸನ್ನಿವೇಶಗಳನ್ನು ಈ ಕವಾಯತು ಅನುಕರಿಸುತ್ತದೆ. ಅಣಕು ಕಸರತ್ತಿನ ಸಮಯದಲ್ಲಿ ಭಯಭೀತರಾಗಬೇಡಿ ಮತ್ತು…
ನಮ್ಮಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯ ಅಗತ್ಯವಿರುತ್ತದೆ. ಆ ಅಗತ್ಯಗಳನ್ನು ಪೂರೈಸಲು ನಾವು ಪ್ರಯತ್ನಗಳನ್ನು ಮಾಡುತ್ತೇವೆ. ಆ ಪ್ರಯತ್ನಗಳ ಯಶಸ್ಸಿಗಾಗಿ ನಾವು ದೇವರಲ್ಲಿ ಪ್ರಾರ್ಥಿಸೋಣ. ಅಂತಹ ಅಗತ್ಯಗಳನ್ನು ಪೂರೈಸಲು, ಲಕ್ಷ್ಮಿ ದೇವಿಯನ್ನು ಮನೆಗೆ ಕರೆತರಲು ಮತ್ತು ಮನೆಯಿಂದ ಬಡತನ, ಕಷ್ಟ ಮತ್ತು ಚಿಂತೆಗಳನ್ನು ಓಡಿಸಲು ಪ್ರತಿದಿನ ಪಠಿಸಬೇಕಾದ ಮಂತ್ರಗಳಿವೆ. ಮಂತ್ರಗಳ ಕುರಿತಾದ ಈ ಪೋಸ್ಟ್ನಲ್ಲಿ, ಆ ಮಂತ್ರಗಳಲ್ಲಿ ಪ್ರಮುಖವಾದ ವಿಷ್ಣು ಸಹಸ್ರ ನಾಮದಿಂದ ತೆಗೆದುಕೊಳ್ಳಲಾದ ಮಂತ್ರವನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 310 ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆದು 265 ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. 540 ಅರಣ್ಯ ರಕ್ಷಕರ ಮತ್ತು ಇನ್ನಿತರ ಉದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು. ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. ಬೆಳಗಾವಿ ಜಿಲ್ಲೆಯ ಖಾನಾಪುರ…
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಇರುವಂತ ಖಾಲಿ ಇರುವಂತ ಶಿಕ್ಷಕರ ಹುದ್ದೆಗಳಿಗೆ ( Teacher Recruitment ) ತಾತ್ಕಾಲಿಕವಾಗಿ 9,499 ಅತಿಥಿ ಶಿಕ್ಷಕರ ನೇಮಕಾತಿಗೆ ( Guest Teacher Recruitment ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿರುತ್ತಾರೆ ಎಂದಿದೆ. ಅದರಂತೆ 2025-26ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026…
ರಾಮನಗರ : ಅಕ್ರಮ ಕೃಷಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನವೀಕೃತ ಶೀಘ್ರ ಸಂಪರ್ಕ ಯೋಜನೆ ಜಾರಿಗೆ ತಂದಿದ್ದು, ರೈತರು ಸ್ವಯಂ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎಸ್ಕಾಂ ವತಿಯಿಂದ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆಯಜಾರ್ಜ್ ಹೇಳಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಇಲಾಖೆಯ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “2023ರ ಸೆ. 22ರ ಬಳಿಕ ಸ್ಥಾಪಿಸಿರುವ ಅಕ್ರಮ ಕೃಷಿ ಪಂಪ್ ಸೆಟ್ ಗಳಿಗೆ ರೈತರು ಸ್ವಂತ ವೆಚ್ಚದಲ್ಲಿ ಲೈನ್ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಿಕೊಂಡರೆ ಎರಡು ಅಥವಾ ಅದಕ್ಕಿಂತ ಹೆಚ್ಚು ಪಂಪ್ ಸೆಟ್ ಗಳಿಗೆ ಎಸ್ಕಾಂಗಳ ವತಿಯಿಂದಲೇ ಟ್ರಾನ್ಸ್ ಫಾರ್ಮರ್ ಒದಗಿಸಿ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗುವುದು,” ಎಂದರು. “ರಾಜ್ಯದಲ್ಲಿ 2004ರಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ-ಸಕ್ರಮ ಯೋಜನೆ ಜಾರಿಗೆ ಬಂದಿತ್ತಾದರೂ 2023ರಲ್ಲಿ ನಮ್ಮ ಸರ್ಕಾರ…
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್ ಸಿಟಿ ವರದಿ…
ನವದೆಹಲಿ: ಮಂಗಳವಾರ ಕುವೈತ್ನಲ್ಲಿ ಸರ್ವಪಕ್ಷ ನಿಯೋಗದೊಂದಿಗೆ ಹೋಗುತ್ತಿದ್ದಾಗ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ (ಡಿಪಿಎಪಿ) ಅಧ್ಯಕ್ಷ ಗುಲಾಮ್ ನಬಿ ಆಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಬಿಜೆಪಿ ಸಂಸದ ಬೈಜಯಂತ್ ಪಾಂಡ ಅವರು ಎಕ್ಸ್ನಲ್ಲಿ ಸುದ್ದಿ ಹಂಚಿಕೊಂಡರು, ನಿಯೋಗದ ಭೇಟಿಯ ಮುಂಬರುವ ಹಂತದಲ್ಲಿ ಆಜಾದ್ ಅವರ ಅನುಪಸ್ಥಿತಿಯು ಅನುಭವಿಸಲಾಗುವುದು ಎಂದು ಹೇಳಿದರು. ನಿಯೋಗದ ನೇತೃತ್ವ ವಹಿಸಿದ್ದ ಬೈಜಯಂತ್ ಪಾಂಡ ಅವರು, “ನಮ್ಮ ನಿಯೋಗದ ಪ್ರವಾಸದ ಅರ್ಧದಾರಿಯಲ್ಲೇ, ಗುಲಾಮ್ ನಜಾದ್ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾಯಿತು. ಅವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಸ್ಥಿರವಾಗಿದ್ದಾರೆ ಮತ್ತು ಕೆಲವು ಪರೀಕ್ಷೆಗಳು ಮತ್ತು ಕಾರ್ಯವಿಧಾನಗಳಿಗೆ ಒಳಗಾಗಲಿದ್ದಾರೆ. ಬಹ್ರೇನ್ ಮತ್ತು ಕುವೈತ್ನಲ್ಲಿ ನಡೆದ ಸಭೆಗಳಿಗೆ ಅವರ ಕೊಡುಗೆಗಳು ಹೆಚ್ಚು ಪ್ರಭಾವಶಾಲಿಯಾಗಿದ್ದವು ಮತ್ತು ಅವರು ಹಾಸಿಗೆ ಹಿಡಿದಿರುವುದು ನಿರಾಶೆಯನ್ನುಂಟುಮಾಡಿದೆ. ಸೌದಿ ಅರೇಬಿಯಾ ಮತ್ತು ಅಲ್ಜೀರಿಯಾದಲ್ಲಿ ಅವರ ಉಪಸ್ಥಿತಿಯನ್ನು ನಾವು ತೀವ್ರವಾಗಿ ಮಿಸ್ ಮಾಡಿಕೊಳ್ಳುತ್ತೇವೆ. ಪಾಕಿಸ್ತಾನ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದೆ ಎಂದು ಆರೋಪಿಸಲಾದ ಪಾಕಿಸ್ತಾನವನ್ನು ಎತ್ತಿ ತೋರಿಸಲು…
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ 68 ಗಣ್ಯ ವ್ಯಕ್ತಿಗಳಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್, ನರ್ತಕಿ ಶೋಭನಾ ಚಂದ್ರಕುಮಾರ್, ನಟ ಅನಂತ್ ನಾಗ್ ಮತ್ತು ಪ್ರತಿಷ್ಠಿತ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಉಪಕುಲಪತಿ ಸೋನಿಯಾ ನಿತ್ಯಾನಂದ್ ಸೇರಿದ್ದಾರೆ. ಜನವರಿ 25 ರಂದು 76 ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ದೇಶದ ನಾಗರಿಕ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀಗಳಿಗೆ ಒಟ್ಟು 139 ಗಣ್ಯ ವ್ಯಕ್ತಿಗಳನ್ನು ಹೆಸರಿಸಲಾಯಿತು. ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರರ ಸಮ್ಮುಖದಲ್ಲಿ ನಡೆದ ಎರಡನೇ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳು ಆಯ್ಕೆಯಾದ 68 ಜನರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಏಪ್ರಿಲ್ 28 ರಂದು ನಡೆದ ಮೊದಲ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ರಾಷ್ಟ್ರಪತಿ ಮುರ್ಮು 71 ವ್ಯಕ್ತಿಗಳಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದರು.…
ಮಂಗಳೂರು: ಜಿಲ್ಲೆಯ ಕದ್ರಿ ಠಾಣೆಯ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನನ್ನು ಬಂಧಿಸಿದ್ದಾರೆ. ಮಂಗಳೂರಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಂದ್ ಗೆ ಕರೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕದ್ರಿ ಠಾಣೆಯ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನನ್ನು ಅರೆಸ್ಟ್ ಮಾಡಿದ್ದಾರೆ. ಅಂದಹಾಗೇ ಶರಣ್ ಪಂಪ್ ವೆಲ್ ವಿರುದ್ಧ ಕದ್ರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಶರಣ್ ಪಂಪ್ ವೆಲ್ ಬಂಧನದ ವಿಷಯ ತಿಳಿದಂತ ಹಿಂದೂ ಸಂಘಟನೆಯ ಕಾರ್ಯಕರ್ತರು, ಕದ್ರಿ ಠಾಣೆಯ ಮುಂದೆ ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣದಿಂದ ಕೂಡಿದೆ. https://kannadanewsnow.com/kannada/invitation-for-application-for-admission-to-the-military-girls-hostel/ https://kannadanewsnow.com/kannada/big-news-party-opposition-activities-have-been-expelled-by-vijayendras-first-reaction/
ಬಳ್ಳಾರಿ : ಧಾರವಾಡ ಶಹರದ ಸಪ್ತಾಪೂರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷಕ್ಕಾಗಿ ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಪ್ರದೇಶ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿರುವ ಯುದ್ದದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 5 ನೇ ತರಗತಿಯಿಂದ ಪಿಯುಸಿ – 2 ರ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ವಸತಿ ನಿಲಯದಲ್ಲಿ ವಾಸ್ತವ್ಯ ಮತ್ತು ಊಟೋಪಚಾರಗಳು ಉಚಿತವಾಗಿದ್ದು, ಮಾಜಿ ಸೈನಿಕರ ಹೆಣ್ಣು ಮಕ್ಕಳು ಈ ಸೌಲಭ್ಯದ ಉಪಯೋಗ ಪಡೆಯಬಹುದಾಗಿದೆ. ವಸತಿ ನಿಲಯದಲ್ಲಿ ಧಾರವಾಡ ನಗರದಲ್ಲಿರುವ ವಿದ್ಯಾ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಮಾತ್ರ ನಿಲಯದಲ್ಲಿ ಪ್ರವೇಶ ನೀಡಲಾಗುವುದು. ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೆಲ್ ಸರ್ಕಲ್ ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ ಇಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಮೇ 31 ರೊಳಗಾಗಿ ಮರಳಿ ಇದೇ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಥವಾ…