Author: kannadanewsnow09

ಬೆಂಗಳೂರು: ಚನ್ನಪಟ್ಟಣದಿಂದ ರೋಡ್ ಶೋ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ಮಾಡಲಿ ಬಿಡಿ. ಅವರು ಚನ್ನಪಟ್ಟಣವನ್ನೇ ಯಾಕೆ ಆಯ್ಕೆ ಮಾಡಿದ್ದಾರೆ ಎಂದರೆ. ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಂದಾಗಿದ್ದು, ಕಾರ್ಯಕರ್ತರು ಒಂದಾಗುತ್ತಿಲ್ಲ. ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ದಿನಬೆಳಗಾದರೆ ರಾಜಕೀಯ ಸಂಘರ್ಷ ಮಾಡುತ್ತಿದ್ದಾರೆ. ಈ ಮೈತ್ರಿಯಿಂದ ಏನಾಗಲಿದೆ ಎಂಬ ಅನುಭವ ಯೋಗೇಶ್ವರ್ ಗೆ ಇಲ್ಲ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ಕಾರ್ಯಕರ್ತರು ಅತಂತ್ರ ಸ್ಥಿತಿ ತಲುಪಿದ್ದಾರೆ. ಅಲ್ಲಿನ ಜನಕ್ಕೆ ಡಿ.ಕೆ ಸುರೇಶ್ ಏನು ಎಂಬುದು ಗೊತ್ತಿದೆ. ಅಮಿತ ಷಾ ಬಂದರೆ ಬಲ ಬರಬಹುದು ಎಂದು ಮಾಡುತ್ತಿದ್ದಾರೆ. ಇಬ್ಬರೂ ಸೇರಿ ಕಾರ್ಯಕರ್ತರ ಸಭೆ ಯಾಕೆ ಮಾಡಲಿಲ್ಲ? ಇವರಿಬ್ಬರೂ ಒಂದಾದ ತಕ್ಷಣ ಕಾರ್ಯಕರ್ತರು ಒಂದಾಗುತ್ತಾರಾ? ರಾಮನಗರ ಹಾಗೂ ಮಂಡ್ಯ ಜಿಲ್ಲೆ ರಾಜಕಾರಣ ನೋಡಲು ಆಗುತ್ತಿಲ್ಲ ಎಂದರು. ಕಳೆದ ಬಾರಿ ಕುಮಾರಸ್ವಾಮಿ ಅವರು ಆಡಿದ ಮಾತು, ಹೇಳಿದ ವಿಚಾರ, ನಡೆದುಕೊಂಡ ರೀತಿ ನೋಡಿದರೆ ಈಗ ಪರಿಸ್ಥಿತಿ ಬದಲಾಗಿದೆ. ಕಳೆದ…

Read More

ನವದೆಹಲಿ: ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿಯಲ್ಲಿ ಹಣವೇ ಇಲ್ಲ. ವಿಪಕ್ಷಗಳ ಎಲ್ಲಾ ಬ್ಯಾಂಕ್ ಖಾತೆಗಳನ್ನು ಕೇಂದ್ರ ಸರ್ಕಾರ ಫ್ರೀಜ್ ಮಾಡಿದ್ದಾರೆ. ಚುನಾವಣೆಗೆ ಮುನ್ನವೇ ಮ್ಯಾಚ್ ಫಿಕ್ಸಿಂಗ್ ಆಗಿದೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದಂತ ಇಂಡಿಯಾ ಮೈತ್ರಿಕೂಟದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು,  ಈ ಚುನಾವಣೆ ಸಾಮಾನ್ಯ ಚುನಾವಣೆಯಲ್ಲ. ದೇಶದ ಉಳಿವು, ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆಯಾಗಿದೆ ಎಂದರು. ಬಿಜೆಪಿಯೇತರ ರಾಜ್ಯಗಳ ಸಿಎಂಗಳನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ. ಹೇಮಂತ್ ಸೊರೇನ್, ಅರವಿಂದ್ ಕೇಜ್ರಿವಾಲ್ ಅವರನ್ನು ಬಿಜೆಪಿ ಜೈಲಿಗೆ ಹಾಕಿದ್ದಾರೆ. ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕೆಂದ್ರೆ ಬಿಜೆಪಿ ಸೋಲಿಸಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವಂತೆ ಕರೆ ನೀಡಿದರು. ಕಾಂದ್ರೆಸ್ ಸೇರಿ ಎಲ್ಲಾ ವಿಪಕ್ಷಗಳ ಬ್ಯಾಂಕ್ ಖಾತೆ ಪ್ರೀಜ್ ಮಾಡಿದ್ದಾರೆ. ಲೋಕಸಭಾ ಚುನಾವಣೆಗೆ ವೆಚ್ಚ ಮಾಡಲು ನಮ್ಮ ಬಳಿ ಹಣವೇ ಇಲ್ಲ. ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ…

Read More

ಬೆಂಗಳೂರು: ಮಾಜಿ ಸಚಿವ ಬೈರತಿ ಬಸವರಾಜ್ ಅವರ ಸಹಾಯಕನ ಅಳಿಯನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಬರೋಬ್ಬರಿ 1.20 ಕೋಟಿ ಹಣ ಸಿಕ್ಕಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಹೊಸೂರಿನಲ್ಲಿರುವಂತ ಬೈರತಿ ಬಸವರಾಜ್ ಅವರ ಸಹಾಯಕನ ಅಳಿಯನ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆಯಲ್ಲಿ ಐಟಿ ಅಧಿಕಾರಿಗಳು ಮನೆಯಲ್ಲಿ ಪರಿಶೀಲನೆ ಸಂದರ್ಭದಲ್ಲಿ 1.20 ಕೋಟಿ ನಗದು, 800 ಗ್ರಾಂ ಚಿನ್ನ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ಕಳೆದ ಮೂರು ದಿನಗಳ ಹಿಂದೆ 10 ಲಕ್ಷ ಹಣದೊಂದಿಗೆ ಬೈರತಿ ಬಸವರಾಜ್ ಅವರ ಸಹಾಯಕನ ಅಳಿಯ ಲೋಕೇಶ್ ಸಿಕ್ಕಿಬಿದ್ದಿದ್ದರು. ಈ ಹಿನ್ನಲೆಯಲ್ಲಿ ಅವರ ಮನೆಯ ಮೇಲೆ ಇಂದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. https://kannadanewsnow.com/kannada/congress-govt-has-earned-the-reputation-of-being-a-bad-government-in-just-9-months-by-vijayendra/ https://kannadanewsnow.com/kannada/congress-had-earlier-declared-tandas-as-revenue-villages-priyank-kharge/

Read More

ಬೆಂಗಳೂರು: ಆದರಣೀಯ ಪ್ರಧಾನಿ ನರೇಂದ್ರ ಮೋದಿಜೀ ಅವರ ಜನಪ್ರಿಯತೆ ಉತ್ತುಂಗದಲ್ಲಿದೆ. ಮೋದಿಜೀ ಅವರ ಜನಪ್ರಿಯತೆಯನ್ನು ಮತವಾಗಿ ಪರಿವರ್ತಿಸುವ ಸವಾಲನ್ನು ನಮ್ಮ ಕಾರ್ಯಕರ್ತರು ಸ್ವೀಕರಿಸಿ ಅದರಲ್ಲಿ ಯಶ ಕಾಣಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಚುನಾವಣಾ ವಿಭಾಗ ಮತ್ತು ಕಾನೂನು ವಿಭಾಗದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನು ಘಟಕವು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ಕೇಸು ದಾಖಲಿಸುವುದು ಒಂದು ಸಹಜ ಪ್ರಕ್ರಿಯೆ. ನಮ್ಮ ಎದುರಾಳಿಗಳನ್ನು ಹದ್ದುಬಸ್ತಿನಲ್ಲಿ ಇಡುವ ಕೆಲಸ ಆಗಲೇಬೇಕು. ಇಲ್ಲವಾದರೆ, ಎಲುಬಿಲ್ಲದ ನಾಲಿಗೆ ಏನು ಬೇಕಾದರೂ ಮಾತನಾಡುತ್ತದೆ ಎಂದರು. ರಾಜ್ಯದ ಕಾಂಗ್ರೆಸ್ ಸರಕಾರ ಹತಾಶ ಸ್ಥಿತಿಯಲ್ಲಿದೆ. ಕೇವಲ 9 ತಿಂಗಳ ಹಿಂದೆ ಅಧಿಕಾರ ಪಡೆದ ಈ ಕಾಂಗ್ರೆಸ್ ಸರಕಾರವು ಯಾವುದೋ ಒಂದು ಭ್ರಮೆಯಲ್ಲಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಕ್ಕಿದ ಅಭೂತಪೂರ್ವ ಬೆಂಬಲದಿಂದ ಅಧಿಕಾರದ ಅಮಲಿನಲ್ಲಿ ಅದು ತೇಲುತ್ತಿತ್ತು.…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿದೆದ್ದು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಘೋಷಣೆ ಮಾಡಿದ್ದರು. ಚುನಾವಣಾ ಪ್ರಚಾರಕ್ಕೂ ಇಳಿದಿದ್ದಾರೆ. ಹೀಗೆ ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದಂತ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಗೋಪಾಳದ ರಂಗನಾಥ ಸ್ವಾಮಿ ದೇವಾಲಯಕ್ಕೆ ತೆರಳಿದ್ದಂತ ಬಿಜೆಪಿ ಬಂಡಾಯ ನಾಯಕ ಕೆ.ಎಸ್ ಈಶ್ವಪರ್ಪ ಅವರು, ಅಲ್ಲಿಯೇ ಲೋಕಸಭಾ ಚುನಾವಣೆ ಸಂಬಂಧ ಪ್ರಚಾರ ನಡೆಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಹೀಗಾಗಿ ಅವರ ವಿರುದ್ಧ ಚುನಾವಣಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು. ತುಂಗಾನಗರ ಪೊಲೀಸ್ ಠಾಣೆಗೆ ಈಶ್ವರಪ್ಪ ವಿರುದ್ಧ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ. ಈ ಮೂಲಕ ಬಿಜೆಪಿ ಬಂಡಾಯ ಅಭ್ಯರ್ಥಿಗೆ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣದ ಬಿಸಿ ಮುಟ್ಟಿದಂತೆ ಆಗಿದೆ. https://kannadanewsnow.com/kannada/congress-had-earlier-declared-tandas-as-revenue-villages-priyank-kharge/ https://kannadanewsnow.com/kannada/not-asking-for-votes-sunita-kejriwal-reads-out-husbands-message-from-lock-up-at-opposition-rally/

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಮಹಿಳೊಯಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವಂತ ಘಟನೆ ನಡೆದಿದೆ. ಈ ಘಟನೆಯನ್ನು ಕಂಡ ಬೆಂಗಳೂರು ಜನತೆ ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ ಜಯನಗರ 11ನೇ ಮುಖ್ಯ ರಸ್ತೆಯಲ್ಲಿ ಶಾಲಿನಿ ಗ್ರೌಂಡ್ ನಲ್ಲಿ ಫರೀದಾ ಖಾನ್ (42) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರೋ ಘಟನೆ ನಡೆದಿದೆ. ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/state-government-transfers-information-commissioner-hemant-nimbalkar/ https://kannadanewsnow.com/kannada/sslc-exam-8-41-lakh-students-appear-today-one-debar/

Read More

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಕಣಕ್ಕೆ ಇಳಿದಿದ್ದರು. ಅವರ ಪತಿ ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆಯ ಆಯುಕ್ತರಾಗಿದ್ದರು. ಇಂತಹ ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ವಾರ್ತಾ ಇಲಾಖೆಯ ಆಯುಕ್ತರಾಗಿದ್ದಂತ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. ಅಂಜಲಿ ನಿಂಬಾಳ್ಕರ್ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಕಾರಣ, ಅವರ ಪತಿ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳಲಿದ್ದಾರೆ. ಅವರನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಬಿಜೆಪಿ ದೂರಿನ ಹಿನ್ನಲೆಯಲ್ಲಿ ವಾರ್ತಾ ಇಲಾಖೆಯ ಆಯುಕ್ತಾಗಿದ್ದಂತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಇಂದು ಚುನಾವಣಾ ಆಯೋಗದ ಸೂಚನೆಯ ಮೇರೆಗೆ ರಾಜ್ಯ ಸರ್ಕಾರವು ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್…

Read More

ಬೆಂಗಳೂರು: ಕನ್ನಡದ ಹಲವು ಸಿನಿಮಾಗಳಲ್ಲಿ ತನ್ನ ವಿಶಿಷ್ಟ ನಟನೆಯ ಮೂಲಕ ಗುರ್ತಿಸಿಕೊಂಡಿದ್ದಂತ ಸ್ಯಾಂಡಲ್ ವುಡ್ ನಟ ಪ್ರಕಾಶ್ ಹೆಗ್ಗೋಡು ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ. ರಂಗಭೂಮಿ ಕಲಾವಿದ, ಚಿತ್ರ ನಟ , ಸಂಘಟಕ, ಸಾಮಾಜಿಕ ಹೋರಾಟಗಾರ ಏಸು ಪ್ರಕಾಶ್ ಕಲ್ಲುಕೊಪ್ಪ ( ಪ್ರಕಾಶ್ ಹೆಗ್ಗೋಡು) ಇನ್ನಿಲ್ಲ. 58 ವರ್ಷ ವಯಸ್ಸಿನ ಪ್ರಕಾಶ್ ಅಲ್ಪಕಾಲದ ಅನಾರೋಗ್ಯದಿಂದ ಇಂದು ಸಂಜೆ ನಿಧನರಾಗಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದಂತ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಚಿಕಿತ್ಸೆ ಫಲಿಸದೇ ಅವರ ಇಂದು ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು, ಹಾಗೂ ಓರ್ವ ಪುತ್ರ, ಪತ್ನಿಯನ್ನು ನಟ ಪ್ರಕಾಶ್ ಹೆಗ್ಗೋಡು ಅಗಲಿದ್ದಾರೆ. ಇಂದು ನಿಧನರಾದಂತ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಭಾನುವಾರದ ನಾಳೆ ಬೆಳಗ್ಗೆ 9 ಗಂಟೆಯಿಂದ ಕಲ್ಲುಕೊಪ್ಪದ (ಪುರಪ್ಪೇಮನೆ) ಅವರ ಸ್ವಗೃಹದಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆ ಬಳಿಕ ನಾಳೆ ಕುಟುಂಬಸ್ಥರಿಂದ ಸ್ವಗ್ರಾಹಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅಂದಹಾಗೆ ಕನ್ನಡದ ಯಶ್ ನಟನೆಯ ಕಿರಾತಕ ಸೇರಿದಂತೆ…

Read More

ಬೆಂಗಳೂರು: ಮೊದಲ ಹಂತದ ಲೋಕಸಭಾ ಚುನಾವಣೆಗೆ ಇದೇ 26-04-2024ರಂದು ಮತದಾನ ನಡೆಯಲಿದೆ. ಈ ಚುನಾವಣೆಗೆ ಮಾ.28ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಇಂದಿನವರೆಗೆ ಎಷ್ಟು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಅಂತ ಮುಂದೆ ಓದಿ. ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ದಿನಾಂಕ 26-04-2024ರಂದು ಮತದಾನ ನಡೆಯಲಿದೆ. ಉಡುಪಿ ಚಿಕ್ಕಮಗಳೂರು ಸೇರಿದಂತೆ 14 ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಲೋಕಸಭಾ ಕ್ಷೇತ್ರಗಳಿಗೆ ಮಾರ್ಚ್.28ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಂಡಿತ್ತು. ಅಂದಿನಿಂದ ಇಂದಿನವರೆಗೆ 50 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪುರುಷ ಅಭ್ಯರ್ಥಿಗಳು 44 ಆಗಿದ್ದರೇ, ಮಹಿಳಾ ಅಭ್ಯರ್ಥಿಗಳು 6 ಮಂದಿಯಾಗಿದ್ದಾರೆ. ಒಟ್ಟು 50 ಮಂದಿ ಅಭ್ಯರ್ಥಿಗಳು ಮೊದಲ ಹಂತದ ಲೋಕಸಭಾ ಚುನಾವಣೆಗೆ ನಾಮಪತ್ರವನ್ನು ಈವರೆಗೆ ಸಲ್ಲಿಸಿದ್ದಾರೆ. https://twitter.com/ceo_karnataka/status/1774080974755946571 https://kannadanewsnow.com/kannada/basavaraj-bommai-urges-people-to-vote-for-modi-to-become-pm-again/ https://kannadanewsnow.com/kannada/sslc-exam-8-41-lakh-students-appear-today-one-debar/

Read More

ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಇಂದು ಹಾವೇರಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಇದರ ಮಧ್ಯೆಯೇ ಮಠಗಳು ಹಾಗೂ ದೇವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಶನಿವಾರ ಬೆಳಿಗ್ಗೆಯಿಂದಲೇ ಪ್ರಚಾರ ಆರಂಭಿಸಿದ ಬಸವರಾಜ ಬೊಮ್ಮಾಯಿಯವರು, ಭಾರತೀಯ ಜನತಾ ಪಕ್ಷದ ಹಾವೇರಿ ಜಿಲ್ಲೆಯ ವತಿಯಿಂದ ಏರ್ಪಡಿಸಲಾದ ಹಾವೇರಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ನಂತರ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿರುವ ಪಾರ್ವತಿ ಪರಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆ ಮಾಡಿದರು. ಗುತ್ತಲ ಪಟ್ಟಣದ ಕಲ್ಮಠಕ್ಕೆ ಭೇಟಿ ನೀಡಿ ಶ್ರೀ ಗುರುಸಿದ್ದ ಮಹಾಸ್ವಾಮಿಗಳ ದರ್ಶನ ಪಡೆದು ಪ್ರಮುಖ ಬೀದಿಗಳಲ್ಲಿ ರೋಡ್ ಷೋ ಮಾಡುವ ಮೂಲಕ ಮತಯಾಚನೆಯನ್ನು ಮಾಡಿದರು. ತದನಂತರ ಹೇಮಗಿರಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಹಾವನೂರು…

Read More