Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅಕಾಲಿಕ ನಿಧನಹೊಂದಿದ್ದರು. ಅವರ ನಿಧನದ ಬಳಿಕ, ಈಗ ನಟ ವಿಜಯ್ ರಾಘವೇಂದ್ರ ಪತ್ನಿಯ ಮಾವ ಅಪಘಾತದಲ್ಲಿ ನಿಧನರಾಗಿ, ಮತ್ತೊಂದು ಆಘಾತ ಎದುರಾಗಿದೆ. ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಮಾವ ಹೇರಾಜೆ ಶೇಖರ ಬಂಗೇರ ಅವರು ಅಪಘಾತದಲ್ಲಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರ ತಾಯಿಯ ಅಣ್ಣ ಶೇಖರ ಬಂಗೇರ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ರಾತ್ರಿ ನಡೆದಂತ ಅಪಘಾತದಲ್ಲಿ ನಿಧನರಾಗಿರೋದಾಗಿ ತಿಳಿದು ಬಂದಿದೆ. ಅಂದಹಾಗೆ ಶೇಖರ್ ಅವರ ಬೈಕ್ ಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸೋ ವೇಳೆಯಲ್ಲಿ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಇನ್ನೂ ಬೈಕ್ ಅಪಘಾತದಲ್ಲಿ ಗಾಯಗೊಂಡಿರುವಂತ ಯುವತಿ ಸ್ಥಿತಿ ಕೂಡ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/modi-will-become-pm-again-sl-bhyrappa/ https://kannadanewsnow.com/kannada/big-news-complaint-filed-against-ct-ravi-for-allegedly-abusing-minister-shivaraj-thangadagi-with-obscene-words/
ಮೈಸೂರು: ಕರ್ನಾಟಕದಲ್ಲಿ ಈ ಭಾರಿ ಬಿಜೆಪಿ ಗೆಲ್ಲೋದು ಕಷ್ಟವಿದೆ. ಗೆದ್ರೂ ಅರ್ಧ ಮಾತ್ರವೇ ಆಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇದೆ. ಅದೇನೇ ಆದ್ರೂ ಕೇಂದ್ರದಲ್ಲಿ ಈ ಬಾರಿಯೂ ಮೋದಿ ಪ್ರಧಾನಿ ಆಗ್ತಾರೆ ಅಂತ ಸಾಹಿತಿ ಎಸ್.ಎಲ್ ಭೈರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಬಿಜೆಪಿ ವೀಕ್ ಇದೆ. ಈ ಹಿಂದೆ ಆಡಳಿತ ನಡೆಸಿದಂತ ಬಿಜೆಪಿಯವರು ಸರಿಯಾಗಿ ಸರ್ಕಾರ ನಡೆಸಲಿಲ್ಲ. ಈ ಅಂಶಗಳನ್ನು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಚೆನ್ನಾಗಿ ಬಳಸಿಕೊಂಡಿತು ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಆರ್ಥಿಕ ಸ್ಥಿತಿ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ. ಇದನ್ನು ಮರೆ ಮಾಚೋದಕ್ಕಾಗಿ ಕಾಂಗ್ರೆಸ್ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಿದೆ. ಕೇಂದ್ರ ಸರ್ಕಾರದಿಂದ ಬಂದ ಅನುದಾನವನ್ನು ಉಚಿತ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ತಿದೆ ಎಂದರು. https://kannadanewsnow.com/kannada/court-orders-judicial-probe-into-mukhtar-ansaris-death-seeks-report-in-a-month/ https://kannadanewsnow.com/kannada/big-news-complaint-filed-against-ct-ravi-for-allegedly-abusing-minister-shivaraj-thangadagi-with-obscene-words/
ಲಕ್ನೋ: ಜೈಲಿನಲ್ಲಿರುವ ದರೋಡೆಕೋರ ಮುಖ್ತಾರ್ ಅನ್ಸಾರಿ ಉತ್ತರ ಪ್ರದೇಶದ ಜೈಲಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಕೆಲವೇ ಗಂಟೆಗಳ ನಂತರ, ಬಾಂಡಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಅನ್ಸಾರಿ ಸಾವಿನ ಬಗ್ಗೆ ತನಿಖೆ ನಡೆಸಿ ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಲಯವು ಹೆಚ್ಚುವರಿ ಸಿಜೆಎಂಗೆ ಸೂಚಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇದಕ್ಕೂ ಮುನ್ನ ಅನ್ಸಾರಿ ಅವರ ಪುತ್ರ ಉಮರ್ ಅನ್ಸಾರಿ ಅವರು ಜೈಲಿನಲ್ಲಿ ತಮ್ಮ ತಂದೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರೋದಾಗಿ ಆರೋಪಿಸಿದ್ದರು. ಅವರು ನಿಧಾನಗತಿಯ ವಿಷಕ್ಕೆ ಒಳಗಾಗುತ್ತಿದ್ದಾರೆ ಎಂದು ನನ್ನ ತಂದೆ ನಮಗೆ ಹೇಳಿದ್ದರು” ಎಂದು ಉಮರ್ ಅನ್ಸಾರಿ ಸುದ್ದಿಗಾರರಿಗೆ ತಿಳಿಸಿದರು. ಆಸ್ಪತ್ರೆಯಲ್ಲಿ ಅವರನ್ನು ಭೇಟಿಯಾದ ಅವರ ಸಹೋದರ ಅಫ್ಜಲ್ ಅನ್ಸಾರಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ವೈದ್ಯಕೀಯ ಕಾಲೇಜು ತಂಡವನ್ನು ರಚಿಸಿದೆ ಮತ್ತು ಚಿಕಿತ್ಸೆ ಮುಂದುವರೆದಿದೆ. ಅವರು ಐಸಿಯುನಲ್ಲಿದ್ದಾರೆ ಮತ್ತು ನಾನು ಅವರನ್ನು ಐದು ನಿಮಿಷಗಳ ಕಾಲ ಭೇಟಿಯಾದೆ. ಅವನಿಗೆ ಪ್ರಜ್ಞೆ ಇದೆ.…
ಬೆಳಗಾವಿ: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ನಂತ್ರ ಭೀಕರ ಬರಗಾಲ ಉಂಟಾಗಿದೆ. ಜನರು ಬಿಸಿಲ ಧಗೆಗೆ ತತ್ತರಿಸಿ ಹೋಗಿದ್ದಾರೆ. ಈ ಬರಗಾಲದ ನಡುವೆಯೂ ಸವದತ್ತಿ ಯಲ್ಲಮ್ಮನ ದೇಗುಲದಲ್ಲಿ ಕಾಣಿಕೆ ಸಂಗ್ರಹಕ್ಕೇನು ಕಡಿಮೆಯಾಗಿಲ್ಲ. ಬರೋಬ್ಬರಿ 11 ಕೋಟಿ ಕಾಣಿಗೆ ಹುಂಡಿಯಲ್ಲಿ ಸಂಗ್ರಹವಾಗಿದೆ. ಉತ್ತರ ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳದಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮದೇವಿ ದೇವಾಲಯವೂ ಒಂದಾಗಿದೆ. ರಾಜ್ಯ ಸೇರಿದಂತೆ, ಹೊರ ರಾಜ್ಯಗಳಿಂದಲೂ ಸಾವಿರಾರೂ ಭಕ್ತರು ಸವದತ್ತಿ ಯಲ್ಲಮ್ಮ ದೇವಿ ದೇವಾಲಯಕ್ಕೆ ಆಗಮಿಸಿ, ದರ್ಶನ ಪಡೆಯುತ್ತಾರೆ. ಈ ಹಿನ್ನಲೆಯಲ್ಲಿ ಬರಗಾಲದ ಮಧ್ಯೆಯೂ ಸವದತ್ತಿ ಯಲ್ಲಮ್ಮ ದೇವಿ ದೇವಾಲಯದ ಹುಂಡಿಯಲ್ಲಿ 2023-24ನೇ ಸಾಲಿನಲ್ಲಿ ಬರೋಬ್ಬರಿ 11.23 ಕೋಟಿ ಕಾಣಿಕೆ ಸಂಗ್ರಹವಾಗಿದೆ. ಈ ಮೂಲಕ ಭಕ್ತರು ನಗದು, ಚಿನ್ನ, ಬೆಳ್ಳಿಯ ಆಭರಣಗಳನ್ನು ಹಾಕಿ ಭಕ್ತಿಯನ್ನು ಮೆರೆದಿದ್ದಾರೆ. ಅಂದಹಾಗೇ 2022-23ನೇ ಸಾಲಿನಲ್ಲಿ 8.01 ಕೋಟಿ ರೂ ನಗದು, 66.28 ಲಕ್ಷ ಮೌಲ್ಯದ ಚಿನ್ನ, 15.43 ಲಕ್ಷ ರೂ ಮೌಲ್ಯದ ಬೆಳ್ಳಿಯ ಆಭರಣ ಸೇರಿದಂತೆ 8.83 ಕೋಟಿ ಹುಂಡಿಯಲ್ಲಿ…
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡತಕ್ಕ ಫಲಿತಾಂಶವನ್ನು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ಇಂದು ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, 2006ರಲ್ಲಿ ಸಹ ಬಿಜೆಪಿ ಮತ್ತು ಜೆಡಿಎಸ್ ನಡುವೆ ಹೊಂದಾಣಿಕೆ ಆಗಿತ್ತು. ಆದರೆ, ಸೈದ್ಧಾಂತಿಕ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಜೀ ಅವರ ಸಮ್ಮತಿ ಇರಲಿಲ್ಲ ಎಂದು ನೆನಪಿಸಿದರು. ಪ್ರಧಾನಿ ನರೇಂದ್ರ ಮೋದಿ ಜೀ ಅವರ ಜೊತೆಜೊತೆಗೇ ಮಾನ್ಯ ದೇವೇಗೌಡ ಜೀ ಅವರೂ ಈ ಬಾರಿ ಸಮ್ಮಿಲನಕ್ಕೆ ಆಶೀರ್ವಾದ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೀ ಅವರು ಈ ದೇಶದ ಅಭಿವೃದ್ಧಿ, ಭದ್ರತೆ ದೃಷ್ಟಿಯಿಂದ ನಮಗೆ ಆಶೀರ್ವಾದ ಮಾಡಿದ್ದು, ಇದರಿಂದ ಆನೆ ಬಲ ಬಂದಂತಾಗಿದೆ. ರಾಜ್ಯಕ್ಕೂ ಮುಂದಿನ ದಿನಗಳಲ್ಲಿ ಒಳಿತಾಗಲಿದೆ ಎಂದು ವಿಶ್ವಾಸದಿಂದ ನುಡಿದರು. ಬಿಜೆಪಿ ಮತ್ತು ಜೆಡಿಎಸ್ ಜೊತೆಗೂಡಿ ಕೆಲಸ ಮಾಡಲು…
ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಅವರು ಮಾತನಾಡಿದ್ದಾರೆ. ಅವರ ಪ್ರಜ್ಞೆಯ ಮಟ್ಟ ಬಹಳ ಕಡಿಮೆ ಇದೆ ಎಂದರು. ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ. ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಅವರು ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ…
ಶಿವಮೊಗ್ಗ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ದಿನಾಂಕ 28.03.2024 ರಂದು ರಾತ್ರಿ 09.45 ಕ್ಕೆ ಸಾಗರ ತಾಲ್ಲೂಕು ಕಾನಲೆ ಕ್ರಾಸ್ ಬಳಿ ರಸ್ತೆಗಾವಲು ನಡೆಸುತ್ತಿದ್ದಾಗ ಟಾಟಾ ಏಸ್ ಗೂಡ್ಸ್ ನಾಲ್ಕು ಚಕ್ರದ ವಾಹನವು ತಾಳಗುಪ್ಪ ಕಡೆಯಿಂದ ಸಾಗರ ಮಾರ್ಗವಾಗಿ ಬರುತ್ತಿದ್ದು ತಪಾಸಣೆ ನಡೆಸುವ ಸಲುವಾಗಿ ನಿಲ್ಲಿಸಲು ಸೂಚಿಸಿದಾಗ ವಾಹನವನ್ನು ನಿಲ್ಲಿಸದೇ ತಿರುಗಿಸುವ ಬರದಲ್ಲಿ ವಾಹನವು ಬಂದ್ ಆಗಿದ್ದು, ತಕ್ಷಣ ಚಾಲನೆ ಮಾಡುತ್ತಿದ್ದ ಓರ್ವ ವ್ಯಕ್ತಿಯು ವಾಹನದಿಂದ ಇಳಿದು ಓಡಲಾರಂಭಿಸಿದನು. ಆತನ್ನನ್ನು ಹಿಡಿಯಲು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪ್ರಯತ್ನಿಸಲಾಗಿ ಸಿಗದೇ ಕತ್ತಲೆಯಲ್ಲಿ ಓಡಿ…
ನವದೆಹಲಿ: ಜೈಲಿನಲ್ಲಿದ್ದ ಭೂಗತ ಪಾತಕಿ ಮುಕ್ತಾರ್ ಅನ್ಸಾರಿ ನಿಧನರಾಗಿರೋದಾಗಿ ತಿಳಿದು ಬಂದಿದೆ. ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮುಖ್ತಾರ್ ಅನ್ಸಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ದರೋಡೆಕೋರ- ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ರಾತ್ರಿ ಹೃದಯಾಘಾತದಿಂದ ಬಂದಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆದರೆ ಆತನಿಗೆ ಚಿಕಿತ್ಸೆ ಸ್ಪಂದಿಸಿಲ್ಲ ಎನ್ನಲಾಗಿದೆ. ಇತ್ತೀಚೆಗೆ ಜೈಲಿನಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೈಲಿನಲ್ಲಿ ಆಹಾರದಲ್ಲಿ ಬೆರೆಸಿದ ವಸ್ತುವಿನಿಂದ ಮುಕ್ತಾರ್ ಅನ್ಸಾರಿ ವಿಷ ಸೇವಿಸಿದ್ದಾರೆ ಎಂದು ಅವರ ಸಹೋದರ ಅಫ್ಜಲ್ ಅನ್ಸಾರಿ ಹೇಳಿದ್ದಾರೆ. ವರದಿಗಳ ಪ್ರಕಾರ, ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಅಧಿಕಾರಿಗಳು 144 ವಿಧಿಸಿದ್ದಾರೆ.
ಮಂಡ್ಯ: ಕರ್ತವ್ಯದ ವೇಳೆ ಮೃತಪಟ್ಟಿದ್ದ ಗ್ರಾಮ ಪಂಚಾಯಿತಿ ನೌಕರನ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ, ನ್ಯಾಯಾಲಯದ ಆದೇಶದಂತೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಪಂ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ಗುರುವಾರ ಜಪ್ತಿ ಮಾಡಲಾಯಿತು. ಜ. 20 2024 ರಂದು ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯವು ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯ ಚರಾಸ್ತಿಗಳನ್ನು ಜಪ್ತಿ ಮಾಡಲು ಆದೇಶ ನೀಡಿದ ಮೇರೆಗೆ ನ್ಯಾಯಾಂಗ ಇಲಾಖೆಯ ಸಿಬ್ಬಂದಿ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ವಶಕ್ಕೆ ಪಡೆದರು. ಕಚೇರಿಗೆ ಎಂದಿನಂತೆ ಬಂದಿದ್ದ ಸಿಬ್ಬಂದಿ ಹಾಗೂ ಸಾರ್ವಜನಿಕರು ಜಪ್ತಿ ವಿಷಯ ಕೇಳಿದ ತಕ್ಷಣ ಕಂಗಾಲಾಗಿ, ಕಚೇರಿಯ ಹೊರ ನಡೆದರು. *ಏನಿದು ಪ್ರಕರಣ:* 2009 ರಲ್ಲಿ ಮರಳಿಗ ಗ್ರಾಮ ಪಂಚಾಯಿತಿ ಕಛೇರಿಯಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಎಂಬುವವರು ಬೀದಿ ದೀಪಗಳ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದರು. ಈ ವಿಚಾರವಾಗಿ ಗ್ರಾಮ ಪಂಚಾಯಿತಿಯವರು ಪರಿಹಾರ ನೀಡುವಂತೆ ಆತನ ಪತ್ನಿ…
ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್…