Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : “ನಮ್ಮ ಮೆಟ್ರೋ ದೇಶದ ಇತರೇ ಭಾಗಗಳ ಮೆಟ್ರೋಗಳಿಗಿಂತ ಗುಣಮಟ್ಟದಲ್ಲಿ ಅತ್ಯುತ್ತಮವಾಗಿದ್ದು, 2ನೇ ಹಂತದ ರೀಚ್- 6 ಮೆಟ್ರೋ ಮಾರ್ಗ 2025 ರ ವೇಳೆಗೆ ಲೋಕಾರ್ಪಣೆಯಾಗಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಾಗವಾರ ಮುಖ್ಯರಸ್ತೆಯ ಕೆ. ಜಿ. ಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಸುರಂಗ ಕೊರೆದು ಯಂತ್ರ ಹೊರಬರುವ ಪ್ರಕ್ರಿಯೆಯನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಈ ಮಾರ್ಗದಲ್ಲಿ ಒಟ್ಟು 13.76 ಕಿ.ಮೀ ಉದ್ದ ಸುರಂಗ ಇರಲಿದ್ದು. ಡೈರಿ ವೃತ್ತದಿಂದ ನಾಗಾವರದ ತನಕ 12 ನಿಲ್ದಾಣಗಳು ಬರಲಿವೆ. ಕಾಳೇನ ಅಗ್ರಹಾರದಿಂದ ನಾಗಾವರದ ತನಕ ಈ ಮಾರ್ಗವು ಒಟ್ಟು 21.26 ಕಿಮೀ ಉದ್ದವಿದೆ. 9 ಸುರಂಗ ಕೊರೆಯುವ ಯಂತ್ರಗಳು ಈಗ ಕಾರ್ಯನಿರ್ವಹಿಸುತ್ತಿದ್ದು, 7 ಕಡೆಗಳಲ್ಲಿ ಕೆಲಸ ಮುಗಿಯುವ ಹಂತಕ್ಕೆ ಬಂದಿದೆ. ಒಟ್ಟು 12 ನಿಲ್ದಾಣಗಳಿದ್ದು, ಶೇ 75 ರಷ್ಟು ಕಾಮಗಾರಿ ಮುಗಿದಿದೆ ಎಂದರು. ಈ ಹಂತದ ಮೆಟ್ರೋ ಕಾಮಗಾರಿ ಜವಾಬ್ದಾರಿಯನ್ನು ಅಬ್‌ಕಾಮ್, ಎಲ್ ಅಂಡ್ ಟಿ ಮತ್ತು ಐಟಿಡಿ ಸಂಸ್ಥೆಗಳು ಗುತ್ತಿಗೆ…
ಚಿಕ್ಕಮಗಳೂರು: ನಗರದಲ್ಲಿ ನಮೋ ಭಾರತ್ ಕಾರ್ಯಕ್ರಮದ ವೇಳೆಯಲ್ಲಿ ಕಟ್ಟಡ ಮೇಲಿನಿಂದ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮ ವಿರೋಧಿಸಿ ಪೋಸ್ಟರ್ ಪ್ರದರ್ಶನ ಮಾಡಿದ್ದರು. ಈ ಕಾರಣದಿಂದ ಉದ್ರಿಕ್ತಗೊಂಡಂತ ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆಸಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು ನಗರದ ವಿಜಯಪುರದಲ್ಲಿ ನಮೋ ಭಾರತ್ ಕಾರ್ಯಕ್ರಮವನ್ನು ಇಂದು ಬಿಜೆಪಿಯಿಂದ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದವು ನಡೆದಿದೆ. ಕಟ್ಟಡವೊಂದರಿಂದ ನಮೋ ಭಾರತ್ ಕಾರ್ಯಕ್ರಮ ವಿರೋಧಿಸಿ ಪೋಸ್ಟರ್ ಅನ್ನು ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರದರ್ಶಿಸಲಾಗಿದೆ ಎನ್ನಲಾಗಿದೆ. ಇದು ಮತ್ತಷ್ಟು ಪರಿಸ್ಥಿತಿ ಉದ್ವಿಗ್ನಗೊಳ್ಳೋದಕ್ಕೆ ಕಾರಣವಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರಿದ್ದಂತ ಕಟ್ಟಡದ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆಸಲಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದನ್ನು ಗಮನಿಸಿದಂತ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/women-are-getting-pregnant-while-in-custody-in-this-state/ https://kannadanewsnow.com/kannada/breaking-five-indian-origin-youths-die-in-us-in-last-2-weeks-govt/
ಬೆಂಗಳೂರು: ಇಂದು ಬೆಂಗಳೂರಿನ ವಿಧಾನಸೌಧಕ್ಕೆ ಹಿಂದೆ ಎಂದಿಗೂ ಇಲ್ಲದಂತ ಜನಸಾಗರವೇ ಹರಿದು ಬಂದಿದೆ. ಇದಕ್ಕೆ ಕಾರಣ ಸಿಎಂ ಜನಸ್ಪಂದನ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ 12,372 ಅರ್ಜಿಗಳು ಸ್ವೀಕೃತಗೊಂಡಿದ್ದರೇ, 246 ಅರ್ಜಿಗಳನ್ನು ಸ್ಥಳದಲ್ಲೇ ಸಿಎಂ ಸಿದ್ಧರಾಮಯ್ಯ ವಿಲೇವಾರಿ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದ ಮುಂದೆ ನಡೆದಂತ ಜನಸ್ಪಂದನ ಕಾರ್ಯಕ್ರಮದಲ್ಲಿ 12,372 ಅರ್ಜಿಗಳು ಸ್ವೀಕೃತಗೊಂಡಿದ್ದಾವೆ. 20,000 ಮಂದಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದೆ. ಜನಸ್ಪಂದನ ಕಾರ್ಯಕ್ರಮಕ್ಕೆ ಭಾಗಿಯಾಗಿ ಅಹವಾಲು ಸಲ್ಲಿಸಿದ ಎಲ್ಲರಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಆತ್ಮೀಯ ಸ್ಪಂದನೆ ದೊರೆತಿದೆ. ಮೊದಲ ಜನಸ್ಪಂದನ ಕಾರ್ಯಕ್ರಮದ ಫಲಶೃತಿ ಸ್ವೀಕೃತ 5 ಸಾವಿರ ಅರ್ಜಿಗಳ ಪೈಕೆ ಶೇ.98ರಷ್ಟು ಅಹವಾಲುಗಳ ವಿಲೇವಾರಿಯಾಗಿದೆ ಎಂದು ತಿಳಿಸಿದೆ. ಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ…
ಬೆಂಗಳೂರು : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ. ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ,ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ( ಇ- ಆಡಳಿತ) ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆ – ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ. ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು…
ಬೆಂಗಳೂರು: ಯುಪಿಎಸ್ಸಿ, ಕೆಎಎಸ್, ಎಸ್ಎಸ್ ಸಿ, ಆರ್ ಆರ್ ಬಿ, ಬ್ಯಾಂಕಿಂಗ್, ಗ್ರೂಪ್-ಸಿ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ತರಬೇತಿಗಾಗಿ ಫೆಬ್ರವರಿ.18ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ದಿನಾಂಕ 18-02-2024ರಂದು ಯುಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಅದಕ್ಕಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾವಿಸುತಂವೆ ತಿಳಿಸಲಾಗಿದೆ. ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಸಾದ್ಯವಾದಷ್ಟು ಕಾಲರ್‌ರಹಿತ ಶರ್ಟ್ ಧರಿಸಲು ಆದ್ಯತೆ ನೀಡುವುದು. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ | ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು…
ನಾಳೆ ಥಾಯ್ ಅಮಾವಾಸ್ಯೆ. ಇತರ ಅಮಾವಾಸ್ಯೆ ದಿನಗಳಲ್ಲಿ ಪೂರ್ವಜರ ಪೂಜೆಯನ್ನು ತಪ್ಪಿಸಿಕೊಂಡವರು ಈ ತೈ ಅಮಾವಾಸಿಯಂದು ತಮ್ಮ ಪೂರ್ವಜರ ಪೂಜೆಯನ್ನು ಮಾಡಿದಾಗ ತಿಥಿ ತರ್ಪಣವನ್ನು ನೀಡಿದಾಗ ಅವರು ತಮ್ಮ ಪೂರ್ವಜರ ಪೂಜೆಯ ಲಾಭವನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ. ಅಮಾವಾಸ್ಯೆ ತಿಥಿ ತಪ್ಪಿತು. ತೈ ಅಮಾವಾಸೈ, ಪುರತಾಸಿ ಅಮಾವಾಸೈ, ಆದಿ ಅಮಾವಾಸೈ ಇವೆಲ್ಲ ವಿಶೇಷ ಅಮಾವಾಸ್ಯೆಯ ತಿಥಿಗಳು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು…
ಬೆಂಗಳೂರು: ರಾಜ್ಯದ ವಿವಿಧೆಡೆ ಪೊಲೀಸರು ಕಾರ್ಯಾಚರಣೆ ನಡೆಸಿ, ವಶಪಡಿಸಿಕೊಳ್ಳಲಾಗಿರುವಂತ ಕೋಟ್ಯಂತರ ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು, ಇಂದು ಮತ್ತು ನಾಳೆ ನಾಶಪಡಿಸಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆಯನ್ನು ತಡೆಗಟ್ಟಲು ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಅವಿರತ ಪ್ರಯತ್ನವನ್ನು ಮಾಡಲಾಗುತ್ತಿದೆ. ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದಲ್ಲದೆ ಸಾಮಾಜಿಕ ಜಾಲತಾಣದ ಮೂಲಕ ಪ್ರಕಟಿಸಿ ಮಾದಕ ದ್ರವ್ಯಗಳ ಕಳ್ಳ ಸಾಗಾಣೆ ಮಾಡುವವರ ವಿರುದ್ಧ ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡು ರಾಜ್ಯದ ವಿವಿಧ ಜಿಲ್ಲಾ ಪೊಲೀಸ್/ ಪೊಲೀಸ್ ಕಮಿಷನರೇಟ್‌ಗಳಲ್ಲಿ ವಿವಿಧ ಬಗೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ನಿಯಮಗಳನ್ನು ಅನುಸರಿಸಿ ನಾಶ ಪಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದೆ. ವಶಪಡಿಸಿಕೊಂಡ ಅಂದಾಜು ಮೊತ್ತ ರೂ.42.16 ಕೋಟಿಗಳ ವಿವಿಧ ಬಗೆಯ ಮಾದಕ ವಸ್ತುಗಳನ್ನು ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್…
ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಿರುವ ಶೇ 40 ಕಮಿಷನ್ ಆರೋಪದ ಕುರಿತಂತೆ ಜಸ್ಟಿಸ್ ನಾಗಮೋಹನದಾಸ್ ಸಮಿತಿಯು ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಅವರು ಮನವಿ ಮಾಡಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಸರಕಾರದ ಅವ್ಯವಹಾರ ಕುರಿತು ನ್ಯಾಯಮೂರ್ತಿ ನಾಗಮೋಹನ್‍ದಾಸ್ ಸಮಿತಿ ಮೂಲಕ ತನಿಖೆ ಮಾಡಿಸುವುದಾಗಿ ಕಾಂಗ್ರೆಸ್ ಸರಕಾರ ಹೇಳಿದೆ. ನ್ಯಾಯಮೂರ್ತಿ ನಾಗಮೋಹನ್‍ದಾಸ್ ಅವರು ಕೆಂಪಣ್ಣ ಮಾಡಿದ ಆರೋಪಗಳ ಬಗ್ಗೆ ಸ್ವಯಂಪ್ರೇರಿತ ತನಿಖೆ ಮಾಡಲಿ ಎಂದು ಆಗ್ರಹಿಸಿದರು. ಕಾಂಗ್ರೆಸ್ ಸರಕಾರದ ಬಗ್ಗೆ ಕೇವಲ 3 ತಿಂಗಳಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಮತ್ತು ಸರಕಾರದ ವಿರುದ್ಧ ಹೈಕಮಾಂಡಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಈ ಮೂಲಕ ಸರಕಾರದಲ್ಲಿ ಭಿನ್ನಮತ ಕಂಡುಬಂದಿದೆ ಎಂದು ವಿವರಿಸಿದರು.…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಇಂತಹ ಸಿಎಂ ಜನಸ್ಪಂದನ ಕಾರ್ಯಕ್ರಮ ಕೇವಲ ಚುನಾವಣಾ ಸಮಯದ ನಗೆನಾಟಕ ಎಂಬುದಾಗಿ ಕರ್ನಾಟಕ ರಾಷ್ಟ್ರಸಮಿತಿಯ ಅಧ್ಯಕ್ಷ ರವಿಕೃಷ್ಠಾರೆಡ್ಡಿ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಅದಕ್ಷತೆಯಿಂದ ಕೆಲಸ ಮಾಡುವಾಗ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳನ್ನು ಮೊದಲು ಸರಿಮಾಡಿ ಅಥವಾ ಶಿಕ್ಷೆಗೆ ಒಳಪಡಿಸಬೇಕು ಎಂದಿದ್ದಾರೆ. ಆಡಳಿತದಲ್ಲಿ ಪಾರದರ್ಶಕತೆ ತರಲು ಪ್ರಯತ್ನಿಸದೇ, ಜನರ ಕೋಟ್ಯಂತರ ರೂಪಾಯಿ ತೆರಿಗೆ ಹಣ ಖರ್ಚು ಮಾಡಿ, ಜನಸ್ಪಂದನ ಕಾರ್ಯಕ್ರಮ ಮಾಡುವುದು ಕೇವಲ ಚುನಾವಣಾ ಸಮಯದ ನಗೆನಾಟಕವಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. https://twitter.com/ravikrishna_r/status/1755573138681639142 https://kannadanewsnow.com/kannada/cm-janaspandana-siddaramaiah-extends-humanitarian-assistance-to-specially-abled-person/ https://kannadanewsnow.com/kannada/11601-applications-received-so-far/
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಲೋಕಸಭೆಯಲ್ಲಿ ಭಾರತದ ಆರ್ಥಿಕತೆಯ ಬಗ್ಗೆ ಶ್ವೇತಪತ್ರವನ್ನು ಮಂಡಿಸಿದರು. 2014 ರವರೆಗೆ ಯುಪಿಎ ಆಡಳಿತದ ಹತ್ತು ವರ್ಷಗಳಲ್ಲಿನ ಆರ್ಥಿಕ ದುರಾಡಳಿತವನ್ನು ವಿವರಿಸುವ ಆರ್ಥಿಕತೆಯ ಬಗ್ಗೆ ಸರ್ಕಾರ ಶ್ವೇತಪತ್ರವನ್ನು ಹೊರತರಲಿದೆ ಎಂದು ಸೀತಾರಾಮನ್ ತಮ್ಮ ಮಧ್ಯಂತರ ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಎನ್ಡಿಎ ಸರ್ಕಾರವು ಆ ವರ್ಷಗಳ ಬಿಕ್ಕಟ್ಟನ್ನು ನಿವಾರಿಸಿದೆ ಮತ್ತು ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಆರ್ಥಿಕತೆಯನ್ನು ಉನ್ನತ ಸುಸ್ಥಿರ ಬೆಳವಣಿಗೆಯ ಹಾದಿಯಲ್ಲಿ ದೃಢವಾಗಿ ಇರಿಸಲಾಗಿದೆ ಎಂದು ಸೀತಾರಾಮನ್ ಹೇಳಿದ್ದಾರೆ. “ನಾವು ಆಗ (2014 ರವರೆಗೆ) ಎಲ್ಲಿದ್ದೆವು ಮತ್ತು ಈಗ ಎಲ್ಲಿದ್ದೇವೆ ಎಂಬುದನ್ನು ನೋಡುವುದು ಈಗ ಸೂಕ್ತವಾಗಿದೆ. ಆ ವರ್ಷಗಳಲ್ಲಿ ನಡೆದ ದುರಾಡಳಿತದಿಂದ ಪಾಠಗಳನ್ನು ಕಲಿಯುವ ಉದ್ದೇಶಕ್ಕಾಗಿ ಮಾತ್ರ ಸರ್ಕಾರವು ಸದನದ ಮೇಜಿನ ಮೇಲೆ ಶ್ವೇತಪತ್ರವನ್ನು ಇಡುತ್ತದೆ ಎಂದು ಸಚಿವರು ಹೇಳಿದರು. ಕೇಂದ್ರ ಸರ್ಕಾರ ‘ಲೋಕಸಭೆ’ಯಲ್ಲಿ ಮಂಡಿಸಲಾದ ‘ಶ್ವೇತಪತ್ರ’ದಲ್ಲಿ ಏನಿದೆ? ಕಳೆದ ಹತ್ತು ವರ್ಷಗಳಲ್ಲಿ, ಹಿಂದಿನ ಯುಪಿಎ ಸರ್ಕಾರ ಬಿಟ್ಟುಹೋದ ಸವಾಲುಗಳನ್ನು ಎನ್ಡಿಎ ಸರ್ಕಾರ ಯಶಸ್ವಿಯಾಗಿ…