Author: kannadanewsnow09

ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ ಖಂಡಿಸಿ, ಈಗಾಗಲೇ ಕಾಂಗ್ರೆಸ್ ಸರ್ಕಾರದಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈಗ ಎಕ್ಸ್ ಮೂಲಕ ಹೌದು Mr.ಮೋದಿ ಇದು ನಿಮ್ದೆ ಓದಿ ಎಂಬುದಾಗಿ ಸರಣಿ ಪೋಸ್ಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯಕ್ಕೆ ಕೇಂದ್ರದ ತೆರಿಗೆ ಹಂಚಿಕೆಯಲ್ಲಿ‌ ಅನ್ಯಾಯವಾಗುತ್ತಿದೆ ಎಂದು ಧ್ವನಿ ಎತ್ತಿದ್ದಾಗ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ನಾವು ಕನ್ನಡಿಗರಿಗೆ ನ್ಯಾಯಯುತ ಪಾಲು ಕೊಡಿ ಎಂದು ಕೇಳುವಾಗ ಯಾಕೆ ಎದುರಾಗುತ್ತದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಯವರ ವಿರುದ್ಧ ಪ್ರಶ್ನೆಯೆತ್ತಿದ್ದಾರೆ. ಜೊತೆಗೆ ಈಗ ನಾಡಿಗೆ ಅನ್ಯಾಯ ಆಗುತ್ತಿಲ್ಲ ಎಂದು ಮಾತನಾಡುತ್ತಿರುವ ಬೊಮ್ಮಾಯಿ ಅವರು ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರು ಹಿಂದೆ ಆಡಿದ ಮಾತುಗಳ ಪುರಾವೆ ನೀಡಿ ಅವುಗಳನ್ನು ಒಮ್ಮೆ ನೋಡಿ ಎಂದು ಕುಟುಕಿದ್ದಾರೆ. ಈ ಸಂಬಂಧ ತಮ್ಮ ಫೇಸ್ ಬುಕ್ ಹಾಗು…

Read More

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation -ISRO) ಫೆಬ್ರವರಿ 17 ರಂದು ಜಿಎಸ್ಎಲ್ವಿ-ಎಫ್ 14 ( GSLV-F14 mission ) ಮಿಷನ್ನ ಭಾಗವಾಗಿ ಇನ್ಸಾಟ್ -3 ಡಿಎಸ್ ಬಾಹ್ಯಾಕಾಶ ನೌಕೆಯನ್ನು ( INSAT-3DS spacecraft ) ಉಡಾವಣೆ ಮಾಡಲು ಸಜ್ಜಾಗಿದೆ. ಫೆಬ್ರವರಿ 17 ರಂದು ಸಂಜೆ 5:30 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಪಗ್ರಹವನ್ನು ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಫೆಬ್ರವರಿ 8 ರಂದು ಮಿಷನ್ ನವೀಕರಣದಲ್ಲಿ ತಿಳಿಸಿದೆ. https://twitter.com/isro/status/1755565356276756895 ಇದು ಇಸ್ರೋದ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಜಿಎಸ್ಎಲ್ವಿ) ನ 16 ನೇ ಹಾರಾಟವಾಗಿದೆ. ಜನವರಿ 25, 2024 ರಂದು ಉಪಗ್ರಹವನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರಕ್ಕೆ ತರಲಾಯಿತು. ಇನ್ಸಾಟ್-3ಡಿಎಸ್ ಹವಾಮಾನ ಮತ್ತು ವಿಪತ್ತು ಎಚ್ಚರಿಕೆ ಉಪಗ್ರಹವಾಗಿದೆ. ಇದು ಇತ್ತೀಚಿನ ಇನ್ಸಾಟ್ (ಭಾರತೀಯ ರಾಷ್ಟ್ರೀಯ ಉಪಗ್ರಹ) ಆಗಿದ್ದು, ಅಸ್ತಿತ್ವದಲ್ಲಿರುವ ಕಕ್ಷೆಯಲ್ಲಿರುವ ಇನ್ಸಾಟ್ -3 ಡಿ ಮತ್ತು ಇನ್ಸಾಟ್ -3 ಡಿಆರ್ ಉಪಗ್ರಹಗಳು ಒದಗಿಸುವ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ವಿಧಾನಸೌಧದ ಮುಂದೆ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಈ ಕಾರ್ಯಮಕ್ರಮದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದಂತ ಜನರು 11,601 ಅರ್ಜಿಯನ್ನು 4 ಗಂಟೆಯವರೆಗೆ ಸಲ್ಲಿಸಿದ್ದಾರೆ. ಇಂದಿನ ಎರಡನೇ ಬಾರಿಯ ಸಿಎಂ ಸಿದ್ಧರಾಮಯ್ಯ ಅವರ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಅಲ್ಲದೇ ಅಪಘಾತಕ್ಕೆ ಒಳಗಾದ ಲೋಕೇಶ್ ಪುಟ್ಟನಾಯಕ ಅವರಿಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ 50 ಸಾವಿರ ರೂ.ಗಳ ಪರಿಹಾರವನ್ನು ಜನಸ್ಪಂದನದ ಸ್ಥಳದಲ್ಲಿಯೇ ಘೋಷಿಸಿ ಪರಿಹಾರ ಬಿಡುಗಡೆ ಪತ್ರ ನೀಡಿದ್ದಾರೆ. ಇದಷ್ಟೇ ಅಲ್ಲದೇಕೋಲಾರ ಜಿಲ್ಲೆಯ ಕೆ.ಜಿ.ಎಫ್ ನ ಎಂಟು ವರ್ಷದ ಎನ್.ಕೃಷ್ಣ ಅವರಿಗೆ 1 ಲಕ್ಷ ರೂ. ಗಳ ಪರಿಹಾರ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನದ ಸ್ಥಳದಲ್ಲಿಯೇ ಘೋಷಿದರು. ಬೆಂಗಳೂರಿನ ನೂರ್ ಫಾತಿಮಾ ಬಿನ್ ಇಬ್ರಾಹಿಂ ಇವರಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ವಿದ್ಯಾಭ್ಯಾಸ ಸಾಲ ಯೋಜನೆಯಡಿ ಕಝಾಕಿಸ್ಥಾನದಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸಕ್ಕಾಗಿ 10 ಲಕ್ಷ ರೂ.ಗಳ ಮಂಜೂರಾತಿ ಪತ್ರವನ್ನು ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯ…

Read More

ಬೆಂಗಳೂರು : ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಆಧುನಿಕ ಅನುಭವ ಮಂಟಪ ಕಾಮಗಾರಿಯ ಮಾರ್ಚ್ ವರೆಗಿನ ಬಿಲ್ ಗಳನ್ನು ಪಾವತಿ ಮಾಡಲು, ಕಾಮಗಾರಿಗೆ ತ್ವರಿತ ಚಾಲನೆ ನೀಡಲು 50 ಕೋಟಿ ರೂ. ಬಿಡುಗಡೆ ಮಾಡುವಂತೆ ತಾವು ಮಾಡಿದ್ದ ಮನವಿಗೆ ಸ್ಪಂದಿಸಿ ತತ್ ಕ್ಷಣವೇ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಶ್ವರ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ. ಆಧುನಿಕ ಅನುಭವ ಮಂಟಪ ನಿರ್ಮಾಣ ಮಾಡಬೇಕು ಎಂದು 2017ರಲ್ಲಿ ಪೌರಾಡಳಿತ ಸಚಿವರಾಗಿದ್ದಾಗ ತಾವು ಮಾಡಿದ್ದ ಮನವಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಅನುಮೋದನೆ ನೀಡಿ ಬಜೆಟ್ ನಲ್ಲಿ ಪ್ರಕಟಿಸಿದ್ದರು ಎಂದು ಅವರು ಸ್ಮರಿಸಿದ್ದಾರೆ. ಆಧುನಿಕ ಅನುಭವ ಮಂಟಪ ನಿರ್ಮಾಣ ಬೀದರ್ ಉಸ್ತುವಾರಿ ಸಚಿವರಾಗಿ ತಮ್ಮ ಕನಸಾಗಿದ್ದು, ಮುಂದಿನ…

Read More

ಬೆಂಗಳೂರು: ನಗರದ ಸಮೀಪ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಕೆಎಚ್ಐಆರ್ (KHIR – Knowledge, Health, Innovation and Research) ಸಿಟಿಯ ವಿನ್ಯಾಸ ಮತ್ತು ರೂಪುರೇಷೆ ಕುರಿತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಬೋಸ್ಟನ್‌ ಕನ್ಸಲ್ಟೆನ್ಸಿ ಗ್ರೂಪ್ (ಬಿಸಿಜಿ) ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ಗುರುವಾರ ವೀಕ್ಷಿಸಿದರು. ಜೊತೆಗೆ, ಅಧಿಕಾರಿಗಳು ಮತ್ತು ಪರಿಣತರೊಂದಿಗೆ ಯೋಜನೆಯ ಸಂಬಂಧ ಮೊದಲ ಹಂತದ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಉದ್ದೇಶಿತ ಕೆಎಚ್ಐಆರ್ ಸಿಟಿಯಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಮೂಲ ಮಾದರಿಗಳ ಅಭಿವೃದ್ಧಿಗೆ (ಪ್ರೋಟೋಟೈಪ್ಸ್) ಒತ್ತು ಕೊಡಲಾಗುವುದು. ಇಲ್ಲಿ ತಯಾರಿಕಾ ಚಟುವಟಿಕೆಗಳು ನಡೆಯುವುದಿಲ್ಲ. ಮೊದಲ ಹಂತದಲ್ಲಿ ಒಟ್ಟು 1,000 ಎಕರೆಯಲ್ಲಿ ಈ ಸಿಟಿ ಬರಲಿದ್ದು, ತಲಾ 200-300 ಎಕರೆಗಳಂತೆ ಹಂತಹಂತವಾಗಿ ಅಭಿವೃದ್ಧಿಪಡಿಸಬೇಕು ಎಂಬ ಸಲಹೆಯನ್ನು ತಜ್ಞರು ನೀಡಿದ್ದಾರೆ’ ಎಂದರು. ಕೆಎಚ್ಐಆರ್ ಸಿಟಿ ಸಂಪೂರ್ಣವಾಗಿ ಖಾಸಗಿ ಉದ್ದಿಮೆಗಳ ಹೂಡಿಕೆಯಿಂದ ಆಗಲಿದೆ. ಸರಕಾರವು ಇದಕ್ಕೆ ಭೂಮಿಯನ್ನು ಒದಗಿಸಲಿದೆ. ಈ ಸಂಬಂಧ ಜಗತ್ತಿನ ಬೇರೆಬೇರೆ ದೇಶಗಳಲ್ಲಿ ಇರುವ ಇಂತಹ ಸಿಟಿಗಳ…

Read More

ನವದೆಹಲಿ: ದೇಶದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಸಂಸತ್ತಿನ ಕಲಾಪದಲ್ಲಿಯೇ ಶ್ವೇತಪತ್ರ ಮಂಡಿಸೋದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಅದಕ್ಕಾಗಿ ಒಂದು ದಿನ ಸಂಸತ್ ಕಲಾಪವನ್ನು ಮುಂದೂಡಿಕೆ ಮಾಡಲಾಗಿತ್ತು. ಅದರಂತೆ ಇದೀಗ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶ್ವೇತಪತ್ರವನ್ನು ಮಂಡಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ‘ಭಾರತೀಯ ಆರ್ಥಿಕತೆ ಕುರಿತ ಶ್ವೇತಪತ್ರ’ವನ್ನು ಮಂಡಿಸಿದರು. ಈ ಮೂಲಕ ದೇಶದ ಆರ್ಥಿಕ ಸ್ಥಿತಿಯ ಬಗ್ಗೆ ಜನತೆಗೆ ಮನವರಿಕೆ ಮಾಡೋ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಇಳಿಸಿದೆ. ಶ್ವೇತಪತ್ರದ ಉದ್ದೇಶಗಳು ಮೊದಲನೆಯದಾಗಿ, 2014 ರಲ್ಲಿ ಅಧಿಕಾರ ವಹಿಸಿಕೊಂಡಾಗ ಈ ಸರ್ಕಾರಕ್ಕೆ ನೀಡಲಾದ ಆಡಳಿತದ ಸ್ವರೂಪ ಮತ್ತು ವ್ಯಾಪ್ತಿ, ಆರ್ಥಿಕ ಮತ್ತು ಹಣಕಾಸಿನ ಬಿಕ್ಕಟ್ಟುಗಳ ಬಗ್ಗೆ ಸಂಸತ್ತಿನ ಗೌರವಾನ್ವಿತ ಸದಸ್ಯರಿಗೆ ಮತ್ತು ಭಾರತದ ಜನರಿಗೆ ತಿಳಿಸಲು ಇದು ಪ್ರಯತ್ನಿಸುತ್ತದೆ. ಎರಡನೆಯದಾಗಿ, ಆರ್ಥಿಕತೆಯ ಆರೋಗ್ಯವನ್ನು ಪುನಃಸ್ಥಾಪಿಸಲು ಮತ್ತು ವರ್ತಮಾನದಲ್ಲಿ ಮತ್ತು ಅಮೃತಕಾಲದಲ್ಲಿ ಜನರ ಬೆಳವಣಿಗೆಯ ಆಕಾಂಕ್ಷೆಗಳನ್ನು ಪೂರೈಸಲು ನಮ್ಮ ಸರ್ಕಾರ ಕೈಗೊಂಡ ನೀತಿಗಳು ಮತ್ತು…

Read More

ಬೆಂಗಳೂರು: ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಇಂದು ಜನಸ್ಪಂದನ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ ಎಂದರು. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. DC, CEO ಗಳ ಮೇಲೆ ಈ ಜವಾಬ್ದಾರಿ ಹೆಚ್ಚು ಎಂದು ಸೂಚಿಸಿದ್ದಾರೆ. ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ…

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದಂತ ಜನಸ್ಪಂದನ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಇಂದು 10 ಸಾವಿರ್ಕಕೂ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಿದ್ದಾರೆ. 20 ಸಾವಿರಕ್ಕೂ ಹೆಚ್ಚು ಮಂದಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಲಾಗಿದೆ ಎಂದಿದೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿಲಾಗಿದೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. DC, CEO ಗಳ ಮೇಲೆ ಈ ಜವಾಬ್ದಾರಿ ಹೆಚ್ಚು ಎಂದು ಮುಖ್ಯಮಂತ್ರಿ…

Read More

ಮಂಡ್ಯ: ಜಿಲ್ಲೆಯಲ್ಲಿ ಹೊರಗಿನವರು ಬಂದು ಯಾಕೆ ಚುನಾವಣೆಗೆ ಸ್ಪರ್ಧಿಸಬೇಕು.? ಮಂಡ್ಯದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವ ಗಂಡಸರು ಇಲ್ವ ಅಂತ ಶಾಸಕ ಕದಲೂರು ಉದಯ್ ವಾಗ್ಧಾಳಿ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮಂಡ್ಯದಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸುವ ಗಂಡಸರು ಇಲ್ವ? ಯಾಕೆ ಬೇರೆ ಯಾವುದೋ ಜಿಲ್ಲೆಯವರು ಬರಬೇಕು.? ಎಂದು ಪ್ರಶ್ನಿಸಿದರು. ನಮ್ಮದೇ ಜಿಲ್ಲೆಯವರು ನಿಲ್ಲಬೇಕು. ಜೆಡಿಎಸ್ ಪಕ್ಷದಲ್ಲಿ ಸಮರ್ಥ ಕಾರ್ಯಕರ್ತರಿಲ್ವ? ನಾಯಕರ ಮಕ್ಕಳು, ಕುಟುಂಬಸ್ಥರೇ ಸ್ಪರ್ಧಿಸಬೇಕಾ? ಐದು ವರ್ಷದಿಂದ ನಿಖಿಲ್ ಎಲ್ಲಿ ಹೋಗಿದ್ದರು.? ಜನ ಸೇವೆ ಮಾಡೋರು ನಿರಂತವಾಗಿ ಇರಬೇಕು. ಚುನಾವಣೆ ಬಂದಾಗ ಬರೋಕೆ ಜನ ದಡ್ಡರು ಅಲ್ಲ ಎಂಬುದಾಗಿ ವಾಗ್ಧಾಳಿ ನಡೆಸಿದರು. https://kannadanewsnow.com/kannada/cm-janaspandana-rs-10-lakh-announced-from-cms-relief-fund-for-treatment-of-three-on-the-spot/ https://kannadanewsnow.com/kannada/disabled-woman-seeks-mercy-killing-for-cm-janaspandana/

Read More

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವಂತ ಜನಸ್ಪಂದನ ಕಾರ್ಯಕ್ರಮದಲ್ಲಿ, ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರವನ್ನು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದರು. ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಈ ಕೆಳಕಂಡ ಮೂವರಿಗೆ ಸಮಸ್ಯೆ ಹೇಳಿಕೊಂಡು ಬಂದ ಕಾರಣ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡಿರೋದಾಗಿ ತಿಳಿಸಿದೆ. 1. ರಾಮನಗರ ಜಿಲ್ಲೆಯ ವಿಜಯಕುಮಾರ್‌ ಬಿನ್‌ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. 2. ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್‌ ಬೋನ್‌ ಮ್ಯಾರೋ ಕಸಿಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು. 3. ತುಮಕೂರು ಜಿಲ್ಲೆಯ ೮ ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ ೫೦ ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. https://kannadanewsnow.com/kannada/disabled-woman-seeks-mercy-killing-for-cm-janaspandana/…

Read More