Author: kannadanewsnow09

ಬಿಡದಿ/ರಾಮನಗರ: ಚನ್ನಪಟ್ಟಣದ ಜನತೆ ನೀಡಿದ ತೀರ್ಪಿಗೆ ನಾನು ತಲೆಬಾಗಿದ್ದೇನೆ. ಅವರ ಅದೇಶವನ್ನು ಒಪ್ಪಿಕೊಳ್ಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಕಾರ್ಯಕರ್ತರನ್ನು ಬಿಟ್ಟು ಪಲಾಯನ ಮಾಡುವ ವ್ಯಕ್ತಿ ನಾನಲ್ಲ, ಎದೆಗುಂದುವ ಪ್ರಶೆಯೂ ಇಲ್ಲ. ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಚನ್ನಪಟ್ಟಣ ಚುನಾವಣೆ ಫಲಿತಾಂಶದ ಬಳಿಕ ಬಿಡದಿ ತೋಟದ ಮನೆಯಲ್ಲಿ ಮಾಧ್ಯಮಗಳ ಜತೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಜನರ ಆದೇಶವೇ ಅಂತಿಮ. ಅವರ ತೀರ್ಪಿಗೆ ತಲೆಬಾಗುತ್ತೇನೆ. ಇದು ನನಗೆ ಮೂರನೇ ಸೋಲು. ಈ ಸೋಲನ್ನು ವಿನಮ್ರವಾಗಿ ಸ್ವೀಕಾರ ಮಾಡುತ್ತೇನೆ. ಕ್ಷೇತ್ರದ ಜನತೆಯ ನಿರಂತರವಾಗಿ ಇರುತ್ತೇನೆ, ಅವರ ಸೇವೆ ಮಾಡುತ್ತೇನೆ. ನನ್ನ ಪರವಾಗಿ ಚುನಾವಣೆಯಲ್ಲಿ ಹಗಲು ರಾತ್ರಿ ಅವಿರತವಾಗಿ ಕೆಲಸ ಮಾಡಿದ ಜೆಡಿಎಸ್ ಬಿಜೆಪಿ ಪಕ್ಷಗಳ ಎಲ್ಲಾ ಕಾರ್ಯಕರ್ತರು, ಮುಖಂಡರು ಸೇರಿ ಎಲ್ಲರಿಗೂ ಶಿರಬಾಗಿ ನಮಿಸುತ್ತೇನೆ ಎಂದು ಅವರು ಹೇಳಿದರು. ಇದು ನಾನು ಬಯಸದೇ ಬಂದ ಉಪ ಚುನಾವಣೆ. ಕಡೆ ಗಳಿಗೆಯಲ್ಲಿ ತೆಗೆದುಕೊಂಡ…

Read More

ಬೆಂಗಳೂರು : “ಇಂದು ರಾಜ್ಯದ ಮೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ದೊರೆತಿದೆ. ಗ್ಯಾರಂಟಿಗಳ ವಿರುದ್ಧ, ಮುಖ್ಯಮಂತ್ರಿಗಳ ವಿರುದ್ಧದ ವಿರೋಧ ಪಕ್ಷಗಳ ಸುಳ್ಳು ಆರೋಪಕ್ಕೆ ರಾಜ್ಯದ ಮೂರು ಭಾಗಗಳಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಬಗ್ಗೆ ಸುರೇಶ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬೊಮ್ಮಾಯಿ ಅವರ ಪುತ್ರರನ್ನು ಜನ ಸೋಲಿಸಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ, ವಿರೋಧ ಪಕ್ಷಗಳು ಸರ್ಕಾರಕ್ಕೆ ಅನಗತ್ಯವಾಗಿ ಅಡ್ಡಿಮಾಡಿ ಅಭಿವೃದ್ಧಿಗೆ ತೊಂದರೆ ನೀಡದಂತೆ ಸಂದೇಶ ರವಾನಿಸಿದ್ದಾರೆ” ಎಂದು ತಿಳಿಸಿದ್ದಾರೆ. ಸರ್ಕಾರದ ವಿರುದ್ಧದ ಇದು ಆರೋಪಗಳಿಗೆ ಉತ್ತರವೇ ಎಂದು ಕೇಳಿದಾಗ, “ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು, ವಿರೋಧ ಪಕ್ಷಗಳ ನಾಯಕರ ಆರೋಪಗಳಿಗೆ ಜನ ಸ್ಪಷ್ಟ ತೀರ್ಪು ನೀಡಿದ್ದಾರೆ. ಉತ್ತರ ಕರ್ನಾಟಕ, ಕಲ್ಯಾಣ…

Read More

ಬಳ್ಳಾರಿ : 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆಯ ಫಲಿತಾಂಶವು ಶನಿವಾರ ಹೊರಬಿದ್ದಿದ್ದು, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ ಅವರು 93,616 ಮತಗಳನ್ನು ಪಡೆದು, 9,649 ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ ಅವರ ಪ್ರತಿಸ್ಪರ್ಧಿಯಾದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾದ ಬಂಗಾರ ಹನುಮಂತ ಅವರು 83,967 ಮತಗಳನ್ನು ಪಡೆದಿದ್ದಾರೆ. ಉಳಿದಂತೆ, ಕರ್ನಾಟಕ ಜನತಾ ಪಕ್ಷದ ಅಂಜಿನಪ್ಪ.ಎನ್ ಅವರು 632 ಮತ ಗಳಿಸಿದರೆ, ಪಕ್ಷೇತರ ಅಭ್ಯರ್ಥಿಗಳಾದ ಟಿ.ಎಂ.ಮಾರುತಿ ಅವರು 211, ಟಿ.ರ‍್ರಿಸ್ವಾಮಿ ಅವರು ಅವರು 271 ಮತ್ತು ಎನ್.ವೆಂಕಣ್ಣ ಅವರು 461 ಮತ ಗಳಿಸಿದ್ದಾರೆ. ನೋಟಾಗೆ ಒಟ್ಟು 1,040 ಮತಗಳು ದಾಖಲಾಗಿವೆ. ಅಂಚೆ ಮತದಾನಕ್ಕೆ ಸಂಬAಧಿಸಿದAತೆ ಒಟ್ಟು 20 ಮತಗಳು ಚಲಾಯಿಸಲಾಗಿದ್ದು, ಈ ಪೈಕಿ ಕಾಂಗ್ರೆಸ್‌ನ ಈ.ಅನ್ನಪೂರ್ಣ ಅವರಿಗೆ 10 ಅಂಚೆ ಮತಗಳು ಬಂದಿವೆ. ಬಿಜೆಪಿ ಅಭ್ಯರ್ಥಿ ಬಂಗಾರ ಹನುಮಂತ ಅವರಿಗೆ 06 ಮತಗಳು ಬಂದಿದ್ದು, 04 ಅಂಚೆ ಮತಗಳು ವಿವಿಧ ಕಾರಣಗಳಿಗಾಗಿ ತಿರಸ್ಕೃತಗೊಂಡವು.…

Read More

ಬೆಂಗಳೂರು: ಕರ್ನಾಟಕದ ಪ್ರಗತಿಪಥದ ಮುಂಚೂಣಿಯನ್ನು ವಹಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಇವರ ವಿರುದ್ಧ ವೈಯಕ್ತಿಕ ತೇಜೋವದೆಗಳನ್ನು ಮಾಡಿಕೊಂಡು, ನಿಂದನೆ ಮತ್ತು ಆರೋಪಗಳನ್ನೇ ತಮ್ಮ ಸಾಧನೆ ಎಂದು ಬಿಂಬಿಸಿಕೊಂಡ ವಿಪಕ್ಷ ನಾಯಕರುಗಳಿಗೆ ಉಪಚುನಾವಣೆಯ ಫಲಿತಾಂಶ ಒಂದು ಪಾಠವಾಗಲಿ. ವಿಪಕ್ಷಗಳ ನಾಯಕರು ಈ ಚುನಾವಣಾ ಸೋಲಿನ ನೈತಿಕತೆಯನ್ನು ಒಪ್ಪಿಕೊಂಡು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವುದರ ಮೂಲಕ ಉಪಚುನಾವಣೆಯ ಮತದಾರರ ಆದೇಶಕ್ಕೆ ಗೌರವ ಸಲ್ಲಿಸುವಂತೆ ಮಾಜಿ ಪರಿಷತ್ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ರಾಜ್ಯದ 3 ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ನೀಡುವ ಮೂಲಕ ಮತದಾರರು ನಮ್ಮ ಪಕ್ಷದ ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುತ್ತಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ದ್ವೇಷಪೂರಿತ ಭಾಷಣಗಳನ್ನು ತಿರಸ್ಕರಿಸಿ, ಸುಳ್ಳು ಪ್ರಚಾರಗಳಿಗೆ ಒಳಗಾಗದೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ನಾಯಕತ್ವಕ್ಕೆ ಮನ್ನಣೆ ನೀಡಿರುತ್ತಾರೆ. ಕರ್ನಾಟಕದ ಬಿಜೆಪಿ ಬಾಲಭವನದ ನಾಯಕರಾದ…

Read More

ಬೆಂಗಳೂರು: ನಾನು ಮಂತ್ರಿ ಆಗಿ 40 ವರ್ಷ ಆಯ್ತು. ಎರಡು ಬಾರಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಗಿದ್ದೇನೆ. ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ.  ಜನ‌ ಅವಕಾಶ  ಕೊಟ್ಟಾಗ ಅಧಿಕಾರ ನಡೆಸಿದ್ದೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ನಾವು ಸೋತಾಗ ಹೋರಾಟ ಮಾಡಿದ್ದೇವೆ. ಸಾಲದ್ದಕ್ಕೆ ದೇವೇಗೌಡರು, ಕುಮಾರಸ್ವಾಮಿ ಅವ್ರು, ನಿಖಿಲ್ ಎಲ್ರೂ ಅಳೋದು. ಅಳೋದನ್ನು ರೂಢಿ ಮಾಡಿಕೊಂಡಿದ್ದಾರೆ. ಆದ್ರೂ ಜನ ನಮಗೆ ಮತ ಹಾಕಿದ್ದಾರೆ. ಬಿಜೆಪಿಯವರು ಮತದಾರರನ್ನು ಪೆದ್ದರು ಎಂದು ಭಾವಿಸುವುದನ್ನು ನಿಲ್ಲಿಸಬೇಕು. ಪ್ರತೀ ಬಾರಿ ಮತದಾರರನ್ನು ಬಕ್ರಾ ಮಾಡಿ ಗೆಲ್ತೀವಿ ಎನ್ನುವ ಬುದ್ದಿಯನ್ನು  ಬಿಜೆಪಿಯವರು ಬಿಡಬೇಕು ಎಂದರು. ಈ ಬಾರಿ ಬಿಜೆಪಿ, ಜೆಡಿಎಸ್ ಇಬ್ಬರೂ ಸೇರಿ ಅಪಪ್ರಚಾರ ಮಾಡಿದ್ರು. ಇಬ್ಬರೂ ಒಟ್ಟಾಗಿ ಚುನಾವಣೆ ಮಾಡಿದ್ರು. ಪಾದಯಾತ್ರೆ ಮಾಡಿದ್ದೇನು ? ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿ ನಿರಂತರವಾಗಿ ಫಲಾನುಭವಿಗಳನ್ನು ಅವಮಾನಿಸಿದರು. ಪ್ರಧಾನಿ ನರೇಂದ್ರ ಮೋದಿಯವರೂ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿದ್ದರು ಎಂದು ಕಿಡಿಕಾರಿದರು. ಮಹಾರಾಷ್ಟ್ರ ಸರ್ಕಾರ…

Read More

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಂತ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏನು ಹೇಳಿದ್ರು ಅಂತ ಅವರ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು.         ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ,  ಕಾಂಗ್ರೆಸ್ ಪಕ್ಷಷದ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು         ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಅನಂತ ಧನ್ಯವಾದಗಳು. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸೀರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.        …

Read More

ಬೆಂಗಳೂರು: 1876 ಜನ ಮಾತ್ರ ನನಗೆ ಓಟು ಹಾಕಿದ್ದು, ಶೇ. 99 ಮತದಾರರು ನಮ್ಮನ್ನು ಬೆಂಬಲಿಸಿಲ್ಲ. ಮತ ಹಾಕಿದ ಎಲ್ಲರಿಗೂ ನನ್ನ ನಮನಗಳು, ಧನ್ಯವಾದಗಳು. ನೀವು ಇಷ್ಟು ಜನರಾದರೂ ನಮ್ಮನ್ನು ಬೆಂಬಲಿಸಿದಿರಲ್ಲ ಎನ್ನುವುದೇ ಸದ್ಯದ ತೃಪ್ತಿ ಎಂಬುದಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ, ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಂತ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ. ಇಂದು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವಂತ ಅವರು, ಶಿಗ್ಗಾವಿ-ಸವಣೂರಿನ ನಾಗರಿಕರು ಎಂದಿನಂತೆ ಶಿಗ್ಗಾವಿಯಲ್ಲಿರುವ KRS ಪಕ್ಷದ ಕಚೇರಿಗೆ ಬಂದು ತಮ್ಮ ನ್ಯಾಯಬದ್ಧ ಕೆಲಸಗಳನ್ನು ಮಾಡಿಸಿಕೊಳ್ಳಬಹುದು. ಆದರೆ… ಶಿಗ್ಗಾವಿ ಸವಣೂರು ವಿಧಾನಸಭಾ ಕ್ಷೇತ್ರದ ಜನತೆ ಈ ಉಪಚುನಾವಣೆಯಲ್ಲಿ ನನ್ನನ್ನು ಮತ್ತು ನಮ್ಮ ಪಕ್ಷವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಒಟ್ಟು #1876 ಜನ ಮಾತ್ರ ನನಗೆ ಓಟು ಹಾಕಿದ್ದು, ಶೇ. 99 ಮತದಾರರು ನಮ್ಮನ್ನು ಬೆಂಬಲಿಸಿಲ್ಲ. ಮತ ಹಾಕಿದ ಎಲ್ಲರಿಗೂ ನನ್ನ ನಮನಗಳು, ಧನ್ಯವಾದಗಳು. ನೀವು ಇಷ್ಟು ಜನರಾದರೂ ನಮ್ಮನ್ನು ಬೆಂಬಲಿಸಿದಿರಲ್ಲ ಎನ್ನುವುದೇ ಸದ್ಯದ ತೃಪ್ತಿ ಎಂದಿದ್ದಾರೆ. ಈ…

Read More

ಪೇಶಾವರ: ವಾಯುವ್ಯ ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಕುರ್ರಾಮ್ ಜಿಲ್ಲೆಯ ಅಲಿಜೈ ಮತ್ತು ಬಗಾನ್ ಬುಡಕಟ್ಟು ಜನಾಂಗದವರ ನಡುವೆ ಗುರುವಾರ ಪ್ರಯಾಣಿಕರ ವ್ಯಾನ್ಗಳ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ನಂತರ ಘರ್ಷಣೆಗಳು ನಡೆದಿದ್ದು, ಇದರಲ್ಲಿ 47 ಜನರು ಸಾವನ್ನಪ್ಪಿದ್ದಾರೆ. ಬಲಿಷ್ಖೇಲ್, ಖಾರ್ ಕಾಳಿ, ಕುಂಜ್ ಅಲಿಜೈ ಮತ್ತು ಮಕ್ಬಾಲ್ನಲ್ಲಿಯೂ ಗುಂಡಿನ ದಾಳಿ ಮುಂದುವರೆದಿದೆ. ಬುಡಕಟ್ಟು ಜನಾಂಗದವರು ಭಾರಿ ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಪರಸ್ಪರ ಗುರಿಯಾಗಿಸುತ್ತಿದ್ದಾರೆ. ಘರ್ಷಣೆಯಲ್ಲಿ ಈವರೆಗೆ 18 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ೩೦ ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ಸ್ವತಂತ್ರ ಮತ್ತು ಮಾಧ್ಯಮ ಮೂಲಗಳು ವರದಿ ಮಾಡಿವೆ. ಘರ್ಷಣೆಯಲ್ಲಿ ಮನೆಗಳು ಮತ್ತು ಅಂಗಡಿಗಳು ಸಹ ಹಾನಿಗೊಳಗಾಗಿವೆ. ವಿವಿಧ ಗ್ರಾಮಗಳ ಜನರು ಸುರಕ್ಷಿತ ಸ್ಥಳಗಳಿಗೆ…

Read More

ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್, ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಪಠಾಣ್ ಹಾಗೂ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಭೂತಪೂರ್ವಕವಾಗಿ ಬೆಂಬಲಿಸಿದ ಕರ್ನಾಟಕ ಜನತೆಗೆ ಸಚಿವ ಪ್ರಿಯಾಂಕ್ ಖರ್ಗೆ ಧನ್ಯವಾದಗಳನ್ನು ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು. ಈ ಉಪ ಚುನಾವಣೆಯ ಅಭೂತಪೂರ್ವ ಫಲಿತಾಂಶವು ನಮ್ಮ ಸರ್ಕಾರದ ಜನಪರ ಆಡಳಿತಕ್ಕೆ, ಅಭಿವೃದ್ಧಿಪರ ನೀತಿಗೆ ಹಾಗೂ ಜನರ ಬದುಕನ್ನು ಬದಲಿಸಿದ ಗ್ಯಾರಂಟಿ ಯೋಜನೆಗಳ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ. ಈ ಉಪ ಚುನಾವಣೆಯ ಗೆಲುವು ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ನೀಡಿದೆ, ಇನ್ನಷ್ಟು ಜನಹಿತದ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರೇರಣೆ ಮತ್ತು ಚೈತನ್ಯವನ್ನು ನೀಡಿದೆ ಎಂದಿದ್ದಾರೆ. ಕರ್ನಾಟಕದ ಪ್ರಬುದ್ಧ ಹಾಗೂ ಪ್ರಜ್ಞಾವಂತ ಮತದಾರರು ಪ್ರಗತಿ, ಶಾಂತಿ, ಸೌಹಾರ್ದತೆಯನ್ನು ಬಯಸುತ್ತಾರೆ, ಭವಿಷ್ಯ ರೂಪಿಸುವ ಉದ್ಯೋಗ…

Read More

ಬೆಂಗಳೂರು: ಬಿಜೆಪಿಯ ಕೋಮು ಆಧಾರಿತ ಕ್ಷುಲ್ಲಕ ರಾಜಕಾರಣ ನಡೆಯಲ್ಲ ಎಂಬ ಸಂದೇಶವನ್ನ ಮೂರು ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಮೂಲಕ ತೋರ್ಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಯಲ್ಲಿ ಬಿಜೆಪಿ ಸುಳ್ಳಿನ ಪ್ರಚಾರ ನಡೆಸಿತ್ತು ಎಂದರು. ಒಂದು ಸಮುದಾಯವನ್ನ ಟಾರ್ಗೆಟ್ ಮಾಡುವ ಬಿಜೆಪಿಯ ಕ್ಷುಲ್ಲಕ ರಾಜಕಾರಣವನ್ನ ನಾವು ಒಪ್ಪುವುದಿಲ್ಲ ಎಂಬ ಸಂದೇಶವನ್ನ ಜನರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನರು ಸ್ಪಂದಿಸಿದ್ದಾರೆ. ಈ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಒಳ್ಳೆಯ ಕೆಲಸಗಳನ್ನ ಮಾಡಲು ಪ್ರೇರಣೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸಂಡೂರ ಕಾಂಗ್ರೆಸ್ ಗೆದ್ದ ಕ್ಷೇತ್ರವಾಗಿತ್ತು. ಅಲ್ಲಿ ಗೆಲ್ಲುವ ವಿಶ್ವಾಸವಿತ್ತು. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲುವು ಪಕ್ಷಕ್ಕೆ ಹೆಚ್ಚಿನ ಬಲ ತುಂಬಲಿದೆ. ಅಲ್ಪಸಂಖ್ಯಾತ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ಬಿಜೆಪಿಯ ಕೋಮು ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿದಂತಾಗಿದೆ. ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಮೊದಲಿನಿಂದಲು ಬೆಂಬಲವಿತ್ತು. ಕುಮಾರಸ್ವಾಮಿ…

Read More