Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆಇಎಯಿಂದ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ ಒಇ 22 ಪಿಇಐ 2024 ದಿನಾಂಕ 22-02-2024 ರನ್ವಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿರುತ್ತದೆ. ಅದರಂತ ದಿನಾಂಕ 08.05.2024 ರಂದು ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು ಎಂದಿದ್ದಾರೆ. ಆದರೆ ದೇಶಾದ್ಯಂತ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ದಿನಾಂಕ 08.05.2024 ರಂದು ನಡೆಸಲು ತೀರ್ಮಾನಿಸಲಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಾಧಿಕಾರದ…
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ದಳಪತಿಗಳಿಗೆ ಬಿಗ್ ಶಾಕ್ ಎದುರಾಗಿದೆ. ಜೆಡಿಎಸ್ ಪಕ್ಷಕ್ಕೆ ಮಾಜಿ ಎಂಎಲ್ಸಿ ಮರಿತಿಬ್ಬೇಗೌಡ, ಎಂ.ಶ್ರೀನಿವಾಸ್ ಗುಡ್ ಬೈ ಹೇಳಿದ್ದಾರೆ. ಇಂದು ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ. ಈ ಕುರಿತಂತೆ ಕಾಂಗ್ರೆಸ್ ಪಕ್ಷದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಜೆಡಿಎಸ್ ಮುಖಂಡರಾದಂತ ಮರಿತಿಬ್ಬೇಗೌಡ, ಎಂ.ಶ್ರೀನಿವಾಸ್ ಅವರು ಇಂದು ಬೆಳಿಗ್ಗೆ 12 ಗಂಟೆಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ ಎಂಬುದಾಗಿ ತಿಳಿಸಿದೆ. ಅಂದಹಾಗೇ ಇಂದು ಜೆಡಿಎಸ್ ಪಕ್ಷಕ್ಕೆ ಹಾಗೂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕಾರ ಕೂಡ ಮಾಡಿದ್ದರು. ಇನ್ನೂ ಇಂದು ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷ ಸೇರ್ಪಡೆಯ ನಂತ್ರ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಲಿದ್ದಾರೆ. ಇಂದು ಮಧ್ಯಾಹ್ನ 1 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯ ನಂತ್ರ ನೀತಿ ಸಂಹಿತೆ ರಾಜ್ಯಾಧ್ಯಂತ ಜಾರಿಗೊಂಡಿದೆ. ಈ ಸಂದರ್ಭದಲ್ಲಿ ಮದುವೆ ಸಮಾರಂಭ, ಧಾರ್ಮಿಕ ಕಾರ್ಯಕ್ರಮಗಳಿಗೆ ಚುನಾವಣಾಧಿಕಾರಿ ಅನುಮತಿ ಕಡ್ಡಾಯ ಎನ್ನಲಾಗುತ್ತಿತ್ತು. ಆದ್ರೇ ಚುನಾವಣಾ ಆಯೋಗವು ಮಧುವೆ ಸಮಾರಂಭ, ಧಾರ್ಮಿಕ ಕಾರ್ಯಗಳಿಗೆ ಚುನಾವಣಾಧಿಕಾರಿ ಅನುಮತಿ ಕಡ್ಡಾಯವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಚುನಾವಣಾ ಆಯೋಗವು ಮಾದರಿ ಚುನಾವಣೆ ನೀತಿ ಸಂಹಿತೆ ಎನ್ನುವುದು ರಾಜಯಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಸಾರ್ವಜನಿಕರರಿಗೆ ಯಾವುದೇ ನಿರ್ಬಂಧವಿಲ್ಲ. ಮದುವೆ ಸೇರಿದಂತೆ ಯಾವುದೇ ಕೌಟುಂಬಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲು ಚುನಾವಣಾಧಿಕಾರಿಗಳ ಅನುಮತಿ ಬೇಕಿಲ್ಲ ಎಂದು ತಿಳಿಸಿದೆ. ಯಾವುದೇ ಧಾರ್ಮಿಕ ಆಚಾರ-ವಿಚಾರ, ಸಂಪ್ರದಾಯಗಳಿಗೆ ಮಾದರಿ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಇದಕ್ಕೆ ಅನುಮತಿ ಪಡೆಯುವ ಅಗತ್ಯವೂ ಇಲ್ಲ. ಆದರೆ ಧಾರ್ಮಿಕ ಆಚರಣೆಗಳು ರಾಜಕೀಯ ಕಾರ್ಯಕ್ರಮಗಳಾಗಿ ಪರಿವರ್ತನೆಯಾಗಬಾರದು. ರಾಜಕೀಯ ಕಾರ್ಯಕ್ರಮವಾಗಿ ಪರಿವರ್ತನೆಯಾದರೆ ಅದು ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ ಎಂದು ಹೇಳಿದೆ.
ಚಿತ್ರದುರ್ಗ: ಶುಭಸಮಾರಂಭ, ಧಾರ್ಮಿಕ ಕಾರ್ಯಗಳಿಗೆ ನೀತಿಸಂಹಿತೆ ಅಡ್ಡಿಯಾಗಲ್ಲ ಎಂಬುದಾಗಿ ಚುನಾವಣಾ ಆಯೋಗವು ಸ್ಪಷ್ಟ ಪಡಿಸಿದೆ. ಈ ಮೂಲಕ ಲೋಕಸಭಾ ಚುನಾವಣೆ ನೀತಿ ಸಂಹಿತೆ ಎಫೆಕ್ಟ್ ಆತಂಕದಲ್ಲಿದ್ದಂತ ಶುಭ ಸಮಾರಂಭ ನಡೆಸೋರಿಗೆ, ಧಾರ್ಮಿಕ ಕಾರ್ಯದಲ್ಲಿ ನಿರತರಾದವರಿಗೆ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಕುರಿತು ಮಾತನಾಡಿದಂತ ಚಿತ್ರದುರ್ಗ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರು, ಮಾದರಿ ಚುನಾವಣೆ ನೀತಿ ಸಂಹಿತೆ ಎನ್ನುವುದು ರಾಜಯಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಸಾರ್ವಜನಿಕರರಿಗೆ ಯಾವುದೇ ನಿರ್ಬಂಧವಿಲ್ಲ. ಮದುವೆ ಸೇರಿದಂತೆ ಯಾವುದೇ ಕೌಟುಂಬಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲು ಚುನಾವಣಾಧಿಕಾರಿಗಳ ಅನುಮತಿ ಬೇಕಿಲ್ಲ ಎಂದು ಸ್ಪಷ್ಟಪಡಿಸಿದರು. ಯಾವುದೇ ಧಾರ್ಮಿಕ ಆಚಾರ-ವಿಚಾರ, ಸಂಪ್ರದಾಯಗಳಿಗೆ ಮಾದರಿ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಇದಕ್ಕೆ ಅನುಮತಿ ಪಡೆಯುವ ಅಗತ್ಯವೂ ಇಲ್ಲ. ಆದರೆ ಧಾರ್ಮಿಕ ಆಚರಣೆಗಳು ರಾಜಕೀಯ ಕಾರ್ಯಕ್ರಮಗಳಾಗಿ ಪರಿವರ್ತನೆಯಾಗಬಾರದು. ರಾಜಕೀಯ ಕಾರ್ಯಕ್ರಮವಾಗಿ ಪರಿವರ್ತನೆಯಾದರೆ ಅದು ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ ಎಂದು ಹೇಳಿದರು. ಚುನಾವಣಾ ಕಾರ್ಯ…
ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ರದ್ದುಪಡಿಸಿತ್ತು. ಆದ್ರೇ ಹೈಕೋರ್ಟ್ ಗೆ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದಂತ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಬಳಿಕ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಇಂತಹ ತೀರ್ಪನ್ನು ಇಂದು ಬೆಳಿಗ್ಗೆ 10.30ಕ್ಕೆ ಹೈಕೋರ್ಟ್ ವಿಭಾಗಿಯ ನ್ಯಾಯಪೀಠವು ಪ್ರಕಟಿಸಲಿದೆ. ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದಂತ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದಂತ ಏಕ ಸದಸ್ಯ ನ್ಯಾಯಪೀಠವು ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.…
ಮಂಡ್ಯ : ವಿಶ್ವವಿಖ್ಯಾತ, ಐತಿಹಾಸಿಕ ಮೇಲುಕೋಟೆ ಕ್ಷೇತ್ರದ ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ವಜ್ರಖಚಿತ ವೈರಮುಡಿ ಧರಿಸಿದ್ದ ಚೆಲುವನಾರಾಯಣಸ್ವಾಮಿಯನ್ನು ಕಣ್ತುಂಬಿಕೊಂಡ ಭಕ್ತರು ಗೋವಿಂದ, ಗೋವಿಂದ ಎಂಬ ಜಯಘೋಷಗಳನ್ನು ಮೊಳಗಿಸಿದರು. ಗಂಡ-ಭೇರುಂಡ ಸ್ವರೂಪಿ ಚಂದ್ರಪ್ರಭೆ ಪ್ರಭಾವಳಿಯ ಮಧ್ಯದಲ್ಲಿ ಅಲಂಕಾರ ಸ್ವರೂಪಿಯಾಗಿದ್ದ ಸ್ವಾಮಿಯ ಉತ್ಸವ ದೇವಾಲಯದಿಂದ ಹೊರ ಬರುತ್ತಿದ್ದಂತೆ ಭಕ್ತರು ದರ್ಶನ ಪಡೆದು ಸಂಭ್ರಮಿಸಿದರು. ರಾಮಾನುಜಾಚಾರ್ಯರ ಸನ್ನಿಧಿಯಲ್ಲಿ ಪ್ರಥಮ ಪೂಜೆ ಸಲ್ಲಿಸಿದ ನಂತರ ರಾತ್ರಿ 8 ಗಂಟೆಗೆ ವೈರಮುಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಉತ್ಸವ ಸಾಗುವ ರಾಜಬೀದಿಯನ್ನು ತಳಿರು-ತೋರಣ, ವಿಶೇಷ ವಿದ್ಯುತ್ ದೀಪಾಲಂಕಾರದಿಂದ ಶೃಂಗರಿಸಲಾಗಿತ್ತು. ಬೀದಿಯ ಎರಡೂ ಬದಿಯಲ್ಲಿ ಭಕ್ತರು ಸಾಲುಗಟ್ಟಿ ನಿಂತಿದ್ದರು. ರಾಜ್ಯ ಮಾತ್ರವಲ್ಲದೇ ಪಕ್ಕದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳದಿಂದಲೂ ಸಹಸ್ರಾರು ಭಕ್ತಾದಿಗಳು ಆಗಮಿಸಿದ್ದರು. ಮೇಲುಕೋಟೆಯ ವಸತಿ ಗೃಹಗಳು, ಛತ್ರಗಳು ಭಕ್ತರಿಂದ ಕಿಕ್ಕಿರಿದು ತುಂಬಿದ್ದವು. ಇದಕ್ಕೂ ಮುನ್ನ, ಜಿಲ್ಲಾ ಖಜಾನೆ ಕಚೇರಿಯಲ್ಲಿದ್ದ ವೈರಮುಡಿ ಹಾಗೂ ರಾಜಮುಡಿ ತಿರುವಾಭರಣ ಪೆಟ್ಟಿಗೆಗೆ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ.…
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಸುರಪುರ ವಿಧಾನಸಭಾ ಉಪ ಚುನಾವಣೆಗೆ ಇಂದು ಟಿಕೆಟ್ ಘೋಷಣೆ ಮಾಡಲಾಗಿದೆ. ದಿವಂಗತ ರಾಜಾ ವೆಂಕಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ಯಾದಗಿರಿ ಜಿಲ್ಲಿಯೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯಲ್ಲಿ ಮೇ.7ರಂದು ನಡೆಸಲಾಗುತ್ತದೆ. ಮೇ.7ರಂದು ನಡೆದಂತ ಮತದಾನದ ಮತಏಣಿಕೆ ಕಾರ್ಯವು ಜೂನ್.4ರಂದು ನಡೆಯಲಿದೆ. ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಎಐಸಿಸಿಯಿಂದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜಾ ವೇಣುಗೋಪಾಲ ನಾಯಕ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಅಂದಹಾಗೇ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು ಅದೇ ದಿನ ಸುರಪುರದಲ್ಲೂ ಉಪಚುನಾವಣೆ ನಡೆಯಲಿದೆ. ಹೀಗಾಗಿ ಸುರಪುರ ವಿಧಾನಸಭಾ ಕ್ಷೇತ್ರದ ಜನರು ಲೋಕಸಭೆ ಮತ್ತು ವಿಧಾನಸಭೆಗೆ ಎರಡಕ್ಕೂ ಮತವನ್ನು ಚಲಾಯಿಸಲಿದ್ದಾರೆ. ಅಂದಹಾಗೇ ಇಂದು ಕಾಂಗ್ರೆಸ್ ಪಕ್ಷದಿಂದ 2ನೇ ಪಟ್ಟಿಯನ್ನು…
ನವದಹೆಲಿ: ಇಂದು ಕಾಂಗ್ರೆಸ್ ಪಕ್ಷದಿಂದ 2ನೇ ಪಟ್ಟಿಯನ್ನು ಲೋಕಸಭಾ ಚುನಾವಣೆಗೆ ಪ್ರಕಟಿಸಲಾಗಿದೆ. 57 ಲೋಕಸಭಾ ಕ್ಷೇತ್ರಗಳಿಗೆ ಇಂದು ಕಾಂಗ್ರೆಸ್ ಪಕ್ಷದಿಂದ ಹುರಿಯಾಳುಗಳನ್ನು ಘೋಷಣೆ ಮಾಡಲಾಗಿದೆ. ಆಂಧ್ರಪ್ರದೇಶದ, ಗುಜರಾತ್, ಕರ್ನಾಟಕದ 17 ಲೋಕಸಭಾ ಕ್ಷೇತ್ರ ಸೇರಿದಂತೆ 57 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ 2ನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಇದಷ್ಟೇ ಅಲ್ಲದೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ರಾಜಾ ವೇಣುಗೋಪಾಲ ನಾಯಕ್ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗೆದೆ ಕರ್ನಾಟಕ 17 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬೆಳಗಾವಿ- ಮೃಣಾಳ್ ರವೀಂದ್ರ ಹೆಬ್ಬಾಳ್ಕರ್ ಚಿಕ್ಕೋಡಿ-ಪ್ರಿಯಾಂಕಾ ಜಾರಕಿಹೊಳಿ ಬಾಗಲಕೋಟೆ – ಸಂಯುಕ್ತಾ ಎಸ್ ಪಾಟೀಲ್ ಗುಲಬರ್ಗಾ-ರಾಧಾಕೃಷ್ಣ ರಾಯಚೂರು- ಜಿ ಕುಮಾರ್ ನಾಯಕ್ ಬೀದರ್-ಸಾಗರ್ ಖಂಡ್ರೆ ಕೊಪ್ಪಳ ಕೆ ರಾಜಶೇಖರ್ ಬಸವರಾಜ ಹಿತ್ನಾಳ್ ಧಾರವಾಡ- ವಿನೋದ್ ಆಸೂಟಿ ಉತ್ತರ ಕನ್ನಡ – ಡಾ ಅಂಜಲಿ ನಿಂಬಾಳ್ಕರ್ ದಾವಣಗೆರೆ- ಪ್ರಭಾ ಮಲ್ಲಿಕಾರ್ಜುನ್ ಉಡುಪಿ ಚಿಕ್ಕಮಗಳೂರು – ಡಾ. ಜಯಪ್ರಕಾಶ್ ಹೆಗ್ಡೆ ದಕ್ಷಿಣ ಕನ್ನಡ – ಬದ್ಮರಾಜ್ ಚಿತ್ರದುರ್ಗ…
ಶಿವಮೊಗ್ಗ: ಅರ್ಜಿದಾರರಾದ ವಿಜಯಕುಮಾರಿ ಇವರು ಬಾಲಾಜಿ ಬಿಲ್ಡಿಂಗ್ ಕಂಟ್ರಾಕ್ಟರ್ ವಿರುದ್ದ ಸೇವಾನ್ಯೂನ್ಯತೆ ಕುರಿತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮುಂದೆ ದಾಖಲಿಸಿದ್ದ ಪ್ರಕರಣದಲ್ಲಿ ಆಯೋಗವು ಎದುರುದಾರರ ಸೇವಾನ್ಯೂನ್ಯತೆಯನ್ನು ಪರಿಗಣಿಸಿ ಅರ್ಜಿದಾರರಿಗೆ ಪರಿಹಾರ ನಿಡುವಂತೆ ಆದೇಶಿಸಿದೆ. ಅರ್ಜಿದಾರರಾದ ವಿಜಯಕುಮಾರಿ ಶಿವಮೊಗ್ಗದ ಪಂಚವಟಿ ಕಾಲೋನಿಯ ವಾಸಿಯಾಗಿದ್ದು ತ್ಯಾವರೆಚಟ್ನಹಳ್ಳಿಯಲ್ಲಿರುವ ತಮ್ಮ 30*40 ಅಡಿ ಖಾಲಿ ನಿವೇಶನದಲ್ಲಿ ಮನೆ ನಿರ್ಮಿಸುವ ಉದ್ದೇಶದಿಂದ ಎದುರುದಾರರೊಂದಿಗೆ ಒಪ್ಪಂದ ಮಾಡಿಕೊಂಡು ರೂ.5,70,000/- ಗಳನ್ನು ಮುಂಗಡವಾಗಿ ಸಂದಾಯ ಮಾಡಿರುತ್ತಾರೆ. ಆದರೆ ಎದುರುದಾರರು ಸೂಕ್ತ ಕಾರಣಗಳನ್ನು ನೀಡದೇ ಮನೆ ನಿರ್ಮಾಣ ಕಾರ್ಯವನ್ನು ಒಪ್ಪಂದದ ಪ್ರಕಾರ ಪೂರ್ತಿಗೊಳಿಸಲು ಸಾಧ್ಯವಿಲ್ಲ, ಬೇರೆ ವ್ಯಕ್ತಿಗಳ ಸಹಾಯದಿಂದ ತಾವು ಬಾಕಿ ಉಳಿದ ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ತಿಗೊಳಿಸಿಕೊಳ್ಳಬಹುದು ಮತ್ತು ಹೆಚ್ಚುವರಿಯಾಗಿ ಪಡೆದ ಹಣವನ್ನು ಮರುಪಾವತಿಸುವುದಾಗಿ ತಿಳಿಸಿರುತ್ತಾರೆ. ಅರ್ಜಿದಾರರು ಬೇರೆ ಇಂಜಿನಿಯರ್ ಸಹಾಯದಿಂದ ಖರ್ಚಿನ ಅಂದಾಜು ಪಟ್ಟಿ ತಯಾರಿಸಿ ನೋಡಲಾಗಿ ಎದುರುದಾರರು ರೂ.1,58,550 ಹೆಚ್ಚುವರಿಯಾಗಿ ಪಡೆದಿರುವುದು ಕಂಡು ಬಂದಿದ್ದು ಈ ಹಣವನ್ನು ಮರುಪಾವತಿಸುವಂತೆ ಸಾಕಷ್ಟು ಬಾರಿ ವಿನಂತಿಸಿದಾಗ್ಯೂ ಹಣ ಮರುಪಾವತಿಸುವಲ್ಲಿ…
ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಕರ್ನಾಟಕ ಬಾಕಿ ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಇಂದು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ಪಟ್ಟಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಸೌಮ್ಯಾರೆಡ್ಡಿಗೆ ಟಿಕೆಟ್ ನೀಡಲಾಗಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರ ಸಂಯುಕ್ತಾ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ. ಹೀಗಿದೆ ಕರ್ನಾಟಕ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬೆಳಗಾವಿ- ಮೃಣಾಳ್ ರವೀಂದ್ರ ಹೆಬ್ಬಾಳ್ಕರ್ ಚಿಕ್ಕೋಡಿ-ಪ್ರಿಯಾಂಕಾ ಜಾರಕಿಹೊಳಿ ಬಾಗಲಕೋಟೆ – ಸಂಯುಕ್ತಾ ಎಸ್ ಪಾಟೀಲ್ ಗುಲಬರ್ಗಾ-ರಾಧಾಕೃಷ್ಣ ರಾಯಚೂರು- ಜಿ ಕುಮಾರ್ ನಾಯಕ್ ಬೀದರ್-ಸಾಗರ್ ಖಂಡ್ರೆ ಕೊಪ್ಪಳ ಕೆ ರಾಜಶೇಖರ್ ಬಸವರಾಜ ಹಿತ್ನಾಳ್ ಧಾರವಾಡ- ವಿನೋದ್ ಆಸೂಟಿ ಉತ್ತರ ಕನ್ನಡ – ಡಾ ಅಂಜಲಿ ನಿಂಬಾಳ್ಕರ್ ದಾವಣಗೆರೆ- ಪ್ರಭಾ ಮಲ್ಲಿಕಾರ್ಜುನ್ ಉಡುಪಿ ಚಿಕ್ಕಮಗಳೂರು – ಡಾ. ಜಯಪ್ರಕಾಶ್ ಹೆಗ್ಡೆ ದಕ್ಷಿಣ ಕನ್ನಡ – ಬದ್ಮರಾಜ್ ಚಿತ್ರದುರ್ಗ – ಬಿಎನ್ ಚಂದ್ರಪ್ಪ ಮೈಸೂರು – ಎಂ ಲಕ್ಷ್ಮಣ್…