Subscribe to Updates
Get the latest creative news from FooBar about art, design and business.
Author: kannadanewsnow09
ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮರಿತಿಬ್ಬೇಗೌಡ ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಜೆಡಿಎಸ್ ಪಕ್ಷಕ್ಕೂ ಗುಡ್ ಬೈ ಹೇಳಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಆ ಬಳಿಕ ಅವರ ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಪರಿಷತ್ ಸದಸ್ಯರಾಗಿದ್ದಂತ ಅವರು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿದ್ದರು. ಈ ಕಾರಣದಿಂದಲೇ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವಂತ ಅವರು, ಜೆಡಿಎಸ್ ಪಕ್ಷಕ್ಕೂ ಗುಡ್ ಬೈ ಹೇಳಿದ್ದಾರೆ. ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮರಿತಿಬ್ಬೇಗೌಡ ಅವರು, ನಾನು ಸ್ವ ಇಚ್ಛೆಯಿಂದ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಅದನ್ನು ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ. ಇದಕ್ಕಾಗಿ ಸಭಾಪತಿಗೆ ಧನ್ಯವಾದಗಳು ಎಂದರು. https://kannadanewsnow.com/kannada/fir-registered-against-44-people-including-mp-tejasvi-surya-p-c-mohan-shobha-karandlaje/ https://kannadanewsnow.com/kannada/note-konkan-railway-issues-monsoon-train-schedule-here-are-the-details/
ಬೆಂಗಳೂರು: ನಾಗರತ್ ಪೇಟೆ ಘಟನೆಗೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ.ಮೋಹನ್ ಸೇರಿದಂತೆ 44 ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸರು ಸೆಕ್ಷನ್ 143, 149, 188, 283, 290 ಮತ್ತು 268 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಭಕ್ತಿಗೀತೆಗಳನ್ನು ನುಡಿಸಿದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಐದಕ್ಕೂ ಹೆಚ್ಚು ಜನರು ಥಳಿಸಿದ ನಂತರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಇತರ ಹಲವಾರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತಾಗಿ ಎಲ್ಲಿಯೂ ಪ್ರತಿಭಟನೆ ನಡೆಸೋದಕ್ಕೆ ಅವಕಾಶವಿಲ್ಲ. ಹೈಕೋರ್ಟ್ ಖಡಕ್ ಆದೇಶ ಮಾಡಿದೆ. ಹೀಗಿದ್ದೂ ಪ್ರತಿಭಟನೆ ನಡೆಸಿದ್ದಾರೆ ಎಂಬುದಾಗಿ ಹಲಸೂರು ಠಾಣೆಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ದೂರು ಆಧರಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಪಿಸಿ ಮೋಹನ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿ 44 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಮೊಬೈಲ್ ಅಂಗಡಿಯ ಮಾಲೀಕ…
ಬೆಂಗಳೂರು: ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಾನ್ಸೂನ್ ವೇಳಾಪಟ್ಟಿಯನ್ನು ಜೂನ್ 10 ರಿಂದ ಅಕ್ಟೋಬರ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ಕೊಂಕಣ ರೈಲ್ವೆ ಸೂಚಿಸಿದೆ. ಮಾನ್ಸೂನ್ ವೇಳಾಪಟ್ಟಿಗೆ ಅನುಗುಣವಾಗಿ ಈ ಕೆಳಗಿನ ರೈಲುಗಳು ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಕಾರ್ಯನಿರ್ವಹಿಸುತ್ತವೆ: ರೈಲು ಸಂಖ್ಯೆ 12741/12742 ವಾಸ್ಕೋ-ಡ-ಗಾಮಾ-ಪಾಟ್ನಾ-ವಾಸ್ಕೋ-ಡ-ಗಾಮಾ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16515/16516 ಯಶವಂತಪುರ-ಕಾರವಾರ-ಯಶವಂತಪುರ ಎಕ್ಸ್ ಪ್ರೆಸ್ ರೈಲು ಸಂಖ್ಯೆ 11097/11098 ಪುಣೆ-ಎರ್ನಾಕುಲಂ-ಪುಣೆ ಪೂರ್ಣ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16595/16596 ಕೆಎಸ್ಆರ್ ಬೆಂಗಳೂರು-ಕಾರವಾರ-ಕೆಎಸ್ಆರ್ ಬೆಂಗಳೂರು ಪಂಚಗಂಗಾ ಎಕ್ಸ್ ಪ್ರೆಸ್ ರೈಲು ಸಂಖ್ಯೆ 16586/16585 ಮುರುಡೇಶ್ವರ-ಎಸ್ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್ ಪ್ರೆಸ್ ಈ ಅವಧಿಯಲ್ಲಿ, ಈ ಐದು ಜೋಡಿ ರೈಲುಗಳು ಮಾನ್ಸೂನ್ ಸಮಯಕ್ಕೆ ಅನುಗುಣವಾಗಿ ಚಲಿಸುತ್ತವೆ. ಪ್ರಯಾಣಿಕರು ಕೆಳಗೆ ನೀಡಲಾದ ಪರಿಷ್ಕೃತ ಸಮಯವನ್ನು ಗಮನಿಸಲು ಸೂಚಿಸಲಾಗಿದೆ. ಪ್ರಯಾಣಿಕರು ಈ ಮೇಲಿನ ರೈಲುಗಳ ಮಾನ್ಸೂನ್ ವೇಳಾಪಟ್ಟಿ ತಿಳಿಯಲು https://swr.indianrailways.gov.in/view_detail.jsp?lang=0&dcd=7326&id=0,4,268 ಮೇಲೆ ಕ್ಲಿಕ್ ಮಾಡಿ. ಇಲ್ಲವೇ www.enquiry.indianrail.gov.in ಭೇಟಿ ನೀಡಿ. https://kannadanewsnow.com/kannada/lok-sabha-tickets-will-be-distributed-to-young-women-and-new-faces-dk-shivakumar/ https://kannadanewsnow.com/kannada/kpsc-recruitment-for-364-posts-of-land-surveyors/
ಬೆಂಗಳೂರು: “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ ಗೆದ್ದು ಭವಿಷ್ಯದಲ್ಲಿ ಪಕ್ಷದ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂದು ಕೇಳಿದಾಗ “ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು” ಎಂದರು. “ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದ್ದು ಇಂದು (ಗುರುವಾರ) ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ” ಎಂದರು. ನಾಲ್ಕು ಕ್ಷೇತ್ರಗಳಲ್ಲಿ ಗೊಂದಲ ಉಂಟಾಗಿದೆ ಎಂದಾಗ “ನಾಲ್ಕು ಕ್ಷೇತ್ರಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ.…
ಬೆಂಗಳೂರು: ಡಿಎಂಕೆ ತನ್ನ ಪ್ರನಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿದೆ ಎಂದು ಕೇಳಿದಾಗ “ಅವರ ರಾಜ್ಯದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ. ಅವರು ನಮಗೆ ನ್ಯಾಯ ಕೊಡಲೇ ಬೇಕು. ಕೋರ್ಟಿನಲ್ಲೂ ನಮಗೆ ನ್ಯಾಯ ಸಿಗುತ್ತದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. “ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಅವರಿಗೂ ಒಳ್ಳೆಯದು ಆಗಲಿ ಎಂದು ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ” ಎಂದರು. ಬಿಜೆಪಿ ಸ್ವಚ್ಚಗೊಳಿಸುತ್ತೇನೆ ಎನ್ನುವ ಸದಾನಂದಗೌಡರ ಹೇಳಿಕೆ ಬಗ್ಗೆ ಕೇಳಿದಾಗ “ಅವರು ಅನುಭವದಿಂದ ಈ ಮಾತನ್ನು ಹೇಳಿದ್ದಾರೆ. ಅನುಭವ ಮನುಷ್ಯನನ್ನು ಮಾಗಿಸುತ್ತದೆ”…
ಬೆಂಗಳೂರು: “ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದ್ದು ತಮಿಳುನಾಡು, ಉತ್ತರಪ್ರದೇಶದ ಪಟ್ಟಿ ಅಂತಿಮಗೊಳ್ಳುತ್ತಿದ್ದು ಇಂದು (ಗುರುವಾರ) ಸಂಜೆ ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಇಂದು ಸಂಜೆಯೇ ಎಲ್ಲಾ ಅಭ್ಯರ್ಥಿಗಳು ಮತ್ತು ಮಂತ್ರಿಗಳ ಜೊತೆ ಸಭೆ ಇಟ್ಟುಕೊಂಡಿದ್ದೇವೆ” ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾಲ್ಕು ಕ್ಷೇತ್ರಗಳಲ್ಲಿ ಗೊಂದಲ ಉಂಟಾಗಿದೆ ಎಂದಾಗ “ನಾಲ್ಕು ಕ್ಷೇತ್ರಗಳ ಬಗ್ಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ. ಜೂಮ್ ಮೂಲಕ ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು. ಕೇವಲ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ್ದು, ಕಾರ್ಯಕರ್ತರಿಗೆ ನೀಡಿಲ್ಲ ಎಂದು ಕೇಳಿದಾಗ “ಕಾರ್ಯಕರ್ತರಿಗೂ ಟಿಕೆಟ್ ನೀಡಿದ್ದೇವೆ. ಯಾರು ಟಿಕೆಟ್ ಕೇಳಿದ್ದಾರೋ ಅವರಿಗೆ ನೀಡಿದ್ದೇವೆ. ಯಾರು ಕೇಳುವುದಿಲ್ಲವೋ ಅವರಿಗೆ ನೀಡಲು ಆಗುವುದಿಲ್ಲ. ಮೊದಲು ಆಸಕ್ತಿ, ಛಲ ಇರಬೇಕು ಎಂದರು. https://kannadanewsnow.com/kannada/economic-situation-chaotic-during-congress-govt-basavaraj-bommai/ https://kannadanewsnow.com/kannada/kpsc-recruitment-for-364-posts-of-land-surveyors/
ಹಾವೇರಿ: ಬಿಜೆಪಿ ಅವಧಿಯಲ್ಲಿಯೇ ಕರ್ನಾಟಕ ಆರ್ಥಿಕವಾಗಿ ಸದೃಡ ಆಗಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕರ್ನಾಟಕದ ಆರ್ಥಿಕ ಸ್ಥಿತಿ ಅಯೋಮಯ ಆಗಿದೆ. ಖಜಾನೆಯೂ ಖಾಲಿಯಾಗಿದೆ. ಬರಗಾಲದಲ್ಲಿಯೂ ಸಹ ಇವರು ಹಣ ಬಿಡುಗಡೆ ಮಾಡುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಣೆಬೆನ್ನೂರು ತಾಲೂಕು ಮಾಕನೂರ್ ಬಳಿ ಚುನಾವಣಾ ಪ್ರಚಾರ ಸಭೆ ನಡೆಸಿದ ಅವರು, ಬಿಜೆಪಿ ಅಂದರೆ ಭಾವನೆ, ಕಾಂಗ್ರೆಸ್ ಅಂದರೆ ಬದುಕು ಎಂಬ ಸಚಿವ ಹೆಚ್ ಕೆ ಪಾಟೀಲ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಅವರ ಹೇಳಿದ್ದಕ್ಕೆಲ್ಲಾ ಉತ್ತರ ಕೊಡುವ ಅಗತ್ಯ ಇಲ್ಲ. ಜನರಿಗೆ ಗೊತ್ತಿದೆ ಯಾವುದು ಬದುಕು ಯಾವುದು ಭಾವನೆ ಅಂತ ಎಂದು ಹೇಳಿದರು. ಕರ್ನಾಟಕದಲ್ಲಿ ನೀರಾವರಿ ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಆಗಿರುವುದು ಬಿಜೆಪಿ ಕಾಲದಲ್ಲಿ ತುಳಿತಕ್ಕೆ ಒಳಗಾಗಿರುವವರಿಗಾಗಿ ವಿಶೇಷ ಕಾರ್ಯಕ್ರಮ ಮಾಡಿದ್ದು ಯಡಿಯೂರಪ್ಪನವರು. ಸಾಮಾಜಿಕ ನ್ಯಾಯ ಆರ್ಥಿಕ ಬೆಳವಣಿಗೆ ಇವೆರಡೂ ಬದುಕಿಗೆ ಸಂಬಂಧ ಪಟ್ಟವುಗಳು ಕುಡಿಯುವ ನೀರಿಗೆ ನಯಾ ಪೈಸೆ ಬಿಡುಗಡೆ ಮಾಡಿಲ್ಲ…
ಮಂಡ್ಯ : ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಪಾನಮತ್ತರಾಗಿ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ವರದಪುರ ಮೂಲದ ಧನಂಜಯ ಹಾಗೂ ಸಂಗಡಿಗರಿಗೆ ಮದ್ದೂರು ಪಟ್ಟಣದ ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಲಯ ಬರೋಬ್ಬರಿ 69 ಸಾವಿರ ರೂಪಾಯಿ ದಂಡ ವಿಧಿಸಿದೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಭಾನುವಾರ ಸಂಜೆ ಸಂಚಾರಿ ಪೊಲೀಸರು ಹೆದ್ದಾರಿಯಲ್ಲಿ ವಾಹನಗಳ ತಪಾಸಣೆ ಕಾರ್ಯ ನಡೆಸುತ್ತಿದ್ದ ವೇಳೆ ಮೈಸೂರಿನಿಂದ ಬೆಂಗಳೂರು ಕಡೆಗೆ KA-53-MH-2566 ವಾಹನ ಸಂಖ್ಯೆಯ ಎರ್ಟಿಗಾ ಕಾರು ಚಾಲಕ ಪಾನಮತ್ತನಾಗಿ ಅತೀ ವೇಗವಾಗಿ ಮತ್ತು ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತ ಇತರೆ ವಾಹನ ಚಾಲಕರಿಗೆ ಆತಂಕ ಸೃಷ್ಟಿಸುತ್ತಿರುವುದನ್ನು ಗಮನಿಸಿದ ಸಂಚಾರಿ ಪೊಲೀಸರು ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಚಾಲಕ ಧನಂಜಯ ಹಾಗೂ ಕಾರಿನಲ್ಲಿದ್ದ ಇತರೆ ಐದು ಮಂದಿಯೂ ಸಹ ಪಾನಮತ್ತರಾಗಿ ತಪಾಸಣೆಗೂ ಸಹಕರಿಸದೆ ಸಂಚಾರಿ ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ದೂರಿನ ಮೇರೆಗೆ ಮದ್ದೂರು…
ನವದೆಹಲಿ: ತಾಂತ್ರಿಕ ಸಮಸ್ಯೆಗಳಿಂದಾಗಿ ‘ಅಗ್ನಿಬಾನ್ ಎಸ್ಒಆರ್ಟಿಇಡಿ (ಸಬ್-ಒಬಿಟಲ್ ಟೆಕ್ನಾಲಜಿ ಡೆಮಾನಿಸ್ಟ್ರೇಟರ್)’ ಮಿಷನ್ ಉಡಾವಣೆಯನ್ನು ಮುಂದೂಡಲಾಗಿದೆ. ಉಡಾವಣೆಯ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಈ ಮೊದಲು ಮಾರ್ಚ್ 22 ರಂದು ಭಾರತೀಯ ಕಾಲಮಾನ 07:00 ಗಂಟೆಗೆ ಶ್ರೀಹರಿಕೋಟಾದ ಉಡಾವಣಾ ಪ್ಯಾಡ್ನಿಂದ ಉಡಾವಣೆಯಾಗಬೇಕಿತ್ತು. ಚೆನ್ನೈ ಮೂಲದ ಸ್ಪೇಸ್ ಟೆಕ್ ಸ್ಟಾರ್ಟ್ಅಪ್ ಅಗ್ನಿಕುಲ್ ಕಾಸ್ಮೋಸ್ನ ಎಸ್ಒಆರ್ಟಿಇಡಿ ಮಿಷನ್ ಏಕ ಹಂತದ ಉಡಾವಣಾ ವಾಹನವಾಗಿದೆ. ಕಂಪನಿಯು ಅಗ್ನಿಬಾನ್ ಎಸ್ಒಆರ್ಟಿಇಡಿಯನ್ನು ಇಸ್ರೋದ ಪ್ರಮುಖ ಪ್ಯಾಕೇಜ್ಗಳೊಂದಿಗೆ ಸಂಯೋಜಿಸಿದೆ. ಕಂಪನಿಯು ಎಕ್ಸ್ನಲ್ಲಿ ನೀಡಿದ ಹೇಳಿಕೆಯಲ್ಲಿ, “ಕಳೆದ ರಾತ್ರಿ ಪೂರ್ಣ ಕೌಂಟ್ಡೌನ್ ಪೂರ್ವಾಭ್ಯಾಸದಿಂದ ಕೆಲವು ಸಣ್ಣ ಅವಲೋಕನಗಳ ಆಧಾರದ ಮೇಲೆ ಸಾಕಷ್ಟು ಎಚ್ಚರಿಕೆಯಿಂದ ನಮ್ಮ ಉಡಾವಣೆಯನ್ನು ತಡೆಹಿಡಿಯಲಾಗಿದೆ. ಹೊಸ ದಿನಾಂಕ ಮತ್ತು ಸಮಯದ ಬಗ್ಗೆ ನಿಮ್ಮೆಲ್ಲರನ್ನೂ ಪೋಸ್ಟ್ ಮಾಡುತ್ತೇನೆ. ನಿಮ್ಮೆಲ್ಲರ ಬೆಂಬಲಕ್ಕೆ ಧನ್ಯವಾದಗಳು’ ಎಂದಿದ್ದಾರೆ. ಅಗ್ನಿಕುಲ್ ಕಾಸ್ಮೋಸ್ ತನ್ನ 3ಡಿ-ಮುದ್ರಿತ ರಾಕೆಟ್ ಅಗ್ನಿಬಾನ್ ಸಬ್ ಆರ್ಬಿಟಲ್ ಟೆಕ್ನಾಲಜಿಕಲ್ ಡೆಮಾನಿಸ್ಟ್ರೇಟರ್ (ಎಸ್ಒಆರ್ಟಿಇಡಿ) ನ ಉಪ-ಕಕ್ಷೆಯ ಪರೀಕ್ಷಾ ಹಾರಾಟವನ್ನು ಶ್ರೀಹರಿಕೋಟಾದ ಉಡಾವಣಾ ಪ್ಯಾಡ್ನಿಂದ ನಡೆಸಲು ಸಜ್ಜಾಗಿತ್ತು. ಅಗ್ನಿಲೆಟ್…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನೂತನ ನಾಯಕನಾಗಿ ಎಂಎಸ್ ಧೋನಿ ಬದಲಿಗೆ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಆಯ್ಕೆಯಾಗಿದ್ದಾರೆ. ಐಪಿಎಲ್ನ ಅಧಿಕೃತ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಇದನ್ನು ದೃಢಪಡಿಸಿದೆ. https://twitter.com/IPL/status/1770756521221083153 ಕಳೆದ ವರ್ಷ ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿದ ನಂತರ ಗೆಲುವು ಸೇರಿದಂತೆ ಸಿಎಸ್ಕೆ ನಾಯಕನಾಗಿ 42 ವರ್ಷದ ಧೋನಿ ಐದು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಟ್ರೋಫಿಯನ್ನು ಗೆದ್ದ ನಂತರ, ಧೋನಿ ಅವರು ಐಪಿಎಲ್ 2024 ಗೆ ಮರಳುವುದಾಗಿ ದೃಢಪಡಿಸಿದರು, ಇದು ಅವರ ನಿವೃತ್ತಿಯ ಬಗ್ಗೆ ಅನುಮಾನಗಳನ್ನು ಪರಿಣಾಮಕಾರಿಯಾಗಿ ಕೊನೆಗೊಳಿಸಿತು. ಧೋನಿ 250 ಐಪಿಎಲ್ ಪಂದ್ಯಗಳನ್ನು ಆಡಿದ್ದು, 38.79 ಸರಾಸರಿಯಲ್ಲಿ 5,082 ರನ್ ಗಳಿಸಿದ್ದಾರೆ ಮತ್ತು 24 ಅರ್ಧಶತಕಗಳನ್ನು ಗಳಿಸಿದ್ದಾರೆ. ಐಪಿಎಲ್ 2024 ರ ಮಿನಿ ಹರಾಜಿನಲ್ಲಿ ಸಿಎಸ್ಕೆ ಆರು ಆಟಗಾರರನ್ನು ಸಹಿ ಹಾಕಿದೆ, ಇದರಲ್ಲಿ ರಚಿನ್ ರವೀಂದ್ರ (1.8 ಕೋಟಿ ರೂ.), ಶಾರ್ದೂಲ್ ಠಾಕೂರ್ (4 ಕೋಟಿ ರೂ.),…