Subscribe to Updates
Get the latest creative news from FooBar about art, design and business.
Author: kannadanewsnow09
ದಾವಣಗೆರೆ: ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ಕೋರ್ಟ್ ಆವರಣದಲ್ಲೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವಂತ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ನಗರದ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಇಂತಹ ಘಟನೆ ನಡೆದಿದೆ. ಪತ್ನಿಗೆ ಚಾಕುವಿನಿಂದ ಇರಿದ ಬಳಿಕ ತಾನೂ ಕೈಗೆ ಇರಿದುಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತ್ನಿ ಪವಿತ್ರಾ ಮೇಲೆ ಪತಿ ಪ್ರವೀಣ್ ಚಾಕುವಿನಿಂದ ಇರಿದು ಹಲ್ಲೆಗೈದಿದ್ದಾನೆ. ಈ ಘಟನೆಯಲ್ಲಿ ಗಾಯಗೊಂಡ ಪತಿ ಪ್ರವೀಣ್, ಪತ್ನಿ ಪವಿತ್ರಾರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದಾವಣಗೆರೆಯ ಜಾಲಿನಗರದ ನಿವಾಸಿ ಪ್ರವೀಣ್ ಆಗಿದ್ದಾರೆ. ಬೆಂಗಳೂರು ಮೂಲದ ಪವಿತ್ರಾ ಜೊತೆ ಮದುವೆಯಾಗಿದ್ದರು. ಪರಸ್ಪರ ಪ್ರೀತಿಸಿ ಅಂತರ್ಜಾತಿ ವಿವಾಹವನ್ನು ಪ್ರವೀಣ್ ಹಾಗೂ ಪವಿತ್ರಾ ಆಗಿದ್ದರು. ಆದರೇ ಪತ್ನಿಯ ಶೀಲ ಶಂಕಿಸಿದ್ದ ಕಾರಣ ಕೆಲ ದಿನಗಳ ಹಿಂದೆ ಪತಿ ಪ್ರವೀಣ್ ತೊರೆದು ಪತ್ನಿ ಪವಿತ್ರಾ ಹೋಗಿದ್ದರು. ಇಂದು ನ್ಯಾಯಾಲಯದಲ್ಲಿ ವಿಚಾರಣೆ ಇರುವ ಕಾರಣ ಕೋರ್ಟ್ ಗೆ ಆಗಮಿಸಿದ್ದರು. https://kannadanewsnow.com/kannada/social-educational-survey-within-a-specified-time-limit-minister-shivraj-tangadagi/
ಬೆಂಗಳೂರು: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ನಮ್ಮಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಒಂದು ತಿಂಗಳ ಮುಂಚಿತವಾಗಿಯೇ ಸಮೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದ್ದೇವೆ. ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ ನಲ್ಲಿ ಸಮೀಕ್ಷೆ ಪೂರ್ಣಗೊಂಡು ಡಿಸೆಂಬರ್ ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವರದಿಯನ್ನ ಸರ್ಕಾರ ಜಾರಿ ಮಾಡುವ ಕೆಲಸವನ್ನು ಮಾಡಿಯೇ ಮಾಡುತ್ತದೆ ಎಂದು ಹೇಳಿದರು. ದೊಡ್ಡ ಕಾರ್ಯಕ್ಕೆ ಸರ್ಕಾರ ಕೈ ಹಾಕಿದ್ದು, ಇದು ನಮಗೆ ಸವಾಲಿನ ಕೆಲಸ ಕೂಡ. ಇದರಲ್ಲಿ ಯಶಸ್ವಿಯೂ ಕೂಡ ಆಗುತ್ತೇವೆ. ಯಾವುದೇ ಸವಾಲಿನ ಕೆಲಸಕ್ಕೆ ಕೈ ಹಾಕಿದರೆ ಸಣ್ಣ- ಪುಟ್ಟ ಲೋಪಗಳು ಸಹಜ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಆಯೋಗಕ್ಕೆ…
ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ಅತಿಥಿ ಶಿಕ್ಷಕರ ವೇತನವನ್ನು ಹೆಚ್ಚಿಸುವಂತೆ ಶಾಸಕ ಕೆ.ಗೋಪಾಲಯ್ಯ ಆಗ್ರಹಸಿದ್ದಾರೆ. ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ವತಿಯಿಂದ 12 ವರ್ಷಗಳಿಂದಲು ಬೆಂಗಳೂರು ಉತ್ತರ ವಲಯದ ಶಿಕ್ಷಕರ ಜೊತೆ ಶಿಕ್ಷಕರ ದಿನಾಚರಣೆ ಆಚರಿಸುತ್ತಾ ಬಂದಿದ್ದೇವೆ. ಸಮಾಜದಲ್ಲಿ ಏನಾದರೂ ಬದಲಾವಣೆ ತರುವ ಶಕ್ತಿಯಿದ್ದರೆ, ಅದು ಶಿಕ್ಷಕ ವರ್ಗಕ್ಕೆ ಇದೆ ಎಂದು ಶಾಸಕ ಕೆ.ಗೋಪಾಲಯ್ಯರವರು ನಾಗಪುರ ವಾರ್ಡ್ ನಲ್ಲಿರುವ ಬಿ.ಜಿ.ಎಸ್ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಬೆಂಗಳೂರು ಉತ್ತರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಕೇಂದ್ರ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಶಿಕ್ಷಣ ತಜ್ಞ ಹಾಗೂ ಭಾರತದ ಮಾಜಿ ರಾಷ್ಟ್ರಪತಿ ಡಾ||ಎಸ್.ರಾಧಾಕೃಷ್ಣನ್ ಹಾಗೂ ಪರಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಶಿಕ್ಷಕ…
ಯುರೋಪಿನ ಹಲವಾರು ಪ್ರಮುಖ ವಿಮಾನ ನಿಲ್ದಾಣಗಳು ಸೈಬರ್ ದಾಳಿಗೆ ತುತ್ತಾಗಿವೆ, ಇದು ವಿಮಾನ ಸಂಚಾರವನ್ನು ಅಸ್ತವ್ಯಸ್ತಗೊಳಿಸಿದೆ ಮತ್ತು ವಿಮಾನ ಕಾರ್ಯಾಚರಣೆಗಳಲ್ಲಿ ವಿಳಂಬಕ್ಕೆ ಕಾರಣವಾಗಿದೆ. ಅಧಿಕಾರಿಗಳ ಪ್ರಕಾರ, ಸೈಬರ್ ದಾಳಿಯು ಚೆಕ್-ಇನ್ ಮತ್ತು ಬೋರ್ಡಿಂಗ್ ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡಿದೆ. ಬ್ರಸೆಲ್ಸ್ ವಿಮಾನ ನಿಲ್ದಾಣವು ಹೇಳಿಕೆಯಲ್ಲಿ, ದಾಳಿಯ ಅರ್ಥ ಹಸ್ತಚಾಲಿತ ಚೆಕ್-ಇನ್ ಮತ್ತು ಬೋರ್ಡಿಂಗ್ ಮಾತ್ರ ಸಾಧ್ಯ, ಮತ್ತು ಈ ಘಟನೆಯು ವಿಮಾನ ವೇಳಾಪಟ್ಟಿಯ ಮೇಲೆ “ದೊಡ್ಡ ಪರಿಣಾಮ” ಬೀರುತ್ತಿದೆ ಎಂದು ತಿಳಿಸಿದೆ. “ಬ್ರಸೆಲ್ಸ್ ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಯುರೋಪಿಯನ್ ವಿಮಾನ ನಿಲ್ದಾಣಗಳ ಮೇಲೆ ಪರಿಣಾಮ ಬೀರುವ ಚೆಕ್-ಇನ್ ಮತ್ತು ಬೋರ್ಡಿಂಗ್ ವ್ಯವಸ್ಥೆಗಳಿಗಾಗಿ ಸೇವಾ ಪೂರೈಕೆದಾರರ ಮೇಲೆ ಸೆಪ್ಟೆಂಬರ್ 19, ಶುಕ್ರವಾರ ರಾತ್ರಿ ಸೈಬರ್ ದಾಳಿ ನಡೆಸಲಾಗಿದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. ಪ್ರಯಾಣಿಕರ ನಿರ್ವಹಣಾ ವ್ಯವಸ್ಥೆಗಳ ಸೇವಾ ಪೂರೈಕೆದಾರರ ಮೇಲೆ ಶುಕ್ರವಾರ ಸಂಜೆ ದಾಳಿ ನಡೆಸಲಾಗಿದೆ ಎಂದು ಬರ್ಲಿನ್ನ ಬ್ರಾಂಡೆನ್ಬರ್ಗ್ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ, ಇದರಿಂದಾಗಿ ವಿಮಾನ ನಿಲ್ದಾಣದ ನಿರ್ವಾಹಕರು ವ್ಯವಸ್ಥೆಗಳಿಗೆ…
ಬೆಂಗಳೂರು : ಸರ್ಕಾರಿ ಶಾಲಾಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ವಾರ್ಷಿಕ 30,000 ರೂ.ಗಳಂತೆ ಒಟ್ಟು 37,000 ವಿದ್ಯಾರ್ಥಿನಿಯರಿಗೆ ’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮದಿಂದ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಉನ್ನತ ಶಿಕ್ಷಣ ಇಲಾಖೆ ಮತ್ತು ಅಜಿಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರಿಗಾಗಿ (ದೀಪಿಕಾ) ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿದ ನಂತರ ಮಾತನಾಡಿದರು. ನಮ್ಮ ರಾಜ್ಯದ ಪ್ರತಿಷ್ಠಿತ ಐಟಿ ದಿಗ್ಗಜರಾದ ಶ್ರೀ ಅಜೀಂ ಪ್ರೇಂಜಿ ಅವರು ಅಜೀಂ ಪ್ರೇಂಜಿ ಫೌಂಡೇಶನ್ ನ ಮೂಲಕ ಅನೇಕ ಜನಪರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಉನ್ನತಶಿಕ್ಷಣದಲ್ಲಿ ತೊಡಗುವಂತಾಗುವ ದೃಷ್ಠಿಯಿಂದ ‘’ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದರು. 10 ಮತ್ತು 12 ನೇ ತರಗತಿಯನ್ನು ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರು ಅರ್ಹರು ಈ ಯೋಜನೆಯಡಿ ಪದವಿ ಕೋರ್ಸ್…
ಬೆಂಗಳೂರು: ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ‘ದಾರಿ’ ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ‘ದಾರಿ’ ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದೆ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ ಹಾಗೂ ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ. ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ದಾಗೂ ಕೆಲವು ಭೂಮಾಲೀಕರು ಬಳಕೆದಾರ…
ಬೆಂಗಳೂರು: ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸೋ ಸಂಬಂಧ ನಿಗದಿ ಪಡಿಸಲಾಗಿದ್ದಂತ ಸಭೆಯ ಬಗ್ಗೆ, ಕುರುಬರನ್ನು ಎಸ್ ಟಿ ಮೀಸಲಾತಿಯ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿದ್ದರು. ಈ ಹೇಳಿಕೆಯ ವಿಚಾರವಾಗಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕುರುಬರ ಎಸ್ ಟಿ ಮೀಸಲಾತಿ ಬಗ್ಗೆ ಮಾತನಾಡಿದ್ದಕ್ಕಾಗಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಛಲವಾದಿ ನಾರಾಯಣಸ್ವಾಮಿ, ಮೈಸೂರಿನ ಕೆ ಆರ್ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀವತ್ಸ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 353(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಕುರುಬ ಸಮುದಾಯದ ಮುಖಂಡ ಸಿದ್ದಣ್ಣ ತೇಜಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಈ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಕಾರ್ಯಕ್ಕೆ ಅಧಿಕೃತ ಮುದ್ರೆಯನ್ನು ಸರ್ಕಾರ ಹೊತ್ತಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳುವಂತೆ ಅಧಿಕೃತ ಆದೇಶ ಮಾಡಲಾಗಿದೆ. ಇಂದು ಹಿಂದುಳಿತ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನ ನೀಡಿ ಆದೇಶಿಸಿದೆ ಎಂದಿದ್ದಾರೆ. ಅಧ್ಯಕ್ಷರು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಇವರು ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ದಿನಾಂಕ:22-09-2025 ರಿಂದ 07-10-2025ರವರೆಗೆ ಕೈಗೊಳ್ಳಲು ಉದ್ದೇಶಿಸಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಹಾಗೂ ಸಮೀಕ್ಷಾದಾರರಿಗೆ ಅಗತ್ಯ ತರಬೇತಿ…
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯ ಅಡಿಯಲ್ಲಿ ಸಾವಿರಾರು ನೌಕರರು ಗುತ್ತಿಗೆ ಆಧಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಸರ್ಕಾರಿ ನೌಕರರಿಗೆ ನೀಡುವಷ್ಟು ವೇತನ ನೀಡದೇ ತಾರತಮ್ಯ ಧೋರಣೆ ತಾಳಲಾಗಿದೆ. ಇದೀಗ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಕರ್ನಾಟಕದ ಆರೋಗ್ಯ ಇಲಾಖೆಯಲ್ಲಿ NHM ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವಂತ ನೌಕರರಿಗೆ ವೇತನ ತಾರತಮ್ಯ ಮಾಡಲಾಗುತ್ತಿದೆ. ಸರ್ಕಾರಿ ನೌಕರರಿಗೆ ಒಂದು ರೀತಿಯ ವೇತನ ನೀಡುತ್ತಿದ್ದರೇ, NHM ಗುತ್ತಿಗೆ ನೌಕರರಿಗೆ ಮತ್ತೊಂದು ರೀತಿಯಾಗಿ ಕಡಿಮೆ ವೇತನ ನೀಡಲಾಗುತ್ತಿದೆ. ಒಂದೇ ಕೆಲಸಕ್ಕೆ ಸರ್ಕಾರಿ ಮತ್ತು ಗುತ್ತಿಗೆ ನೌಕರರಿಗೆ ವೇತನದಲ್ಲಿ ತಾರತಮ್ಯವಿದೆ. ಇದನ್ನು ನಿವಾರಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘವು ( KSHCOE ) ಕೇಂದ್ರ ಆರೋಗ್ಯ ಸಚಿವಾಲಯದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಿಗೆ ಪತ್ರವನ್ನು ಬರೆಯಲಾಗಿತ್ತು. ಕೇಂದ್ರ ಆರೋಗ್ಯ ಸಚಿವಾಲಯದ ರಾಷ್ಟ್ರೀಯ…
ಶಿವಮೊಗ್ಗ: ಸಾಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಬೇಕಿರುವಂತ ಎಲ್ಲಾ ಮೂಲಭೂತ ಸೌಕರ್ಯವನ್ನು ಕಲ್ಪಿಸುವಲ್ಲಿ ಬದ್ಧನಾಗಿದ್ದೇನೆ. ಕಾಲೇಜಿಗೆ ಯಾವುದೇ ಮೂಲಸೌಕರ್ಯದ ಕೊರತೆಯಾಗದಂತೆ ಕ್ರಮವಹಿಸುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸಿಡಿಸಿ ಸಭೆ ನಡೆಸಿ ಮಾತನಾಡಿದಂತ ಅವರು, ಕಾಲೇಜಿನಲ್ಲಿ ಮೂಲ ಸೌಕರ್ಯ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ. ಎರಡು ಕಟ್ಟಡ, ಹಿಂಭಾಗದಲ್ಲಿ ಕಟ್ಟಡವೊಂದನ್ನು ನಿರ್ಮಾಣ ಮಾಡಲಾಗುತ್ತಿದೆ. ಮೂರನೇ ಮಹಡಿಯಲ್ಲಿ ರಂಗಮಂದಿರ ನಿರ್ಮಿಸಲಾಗುತ್ತಿದೆ. ಅದಕ್ಕೆ ಟೈಲ್ಸ್ ಬಾಕಿ ಇದ್ದು, ಅದನ್ನು ಹಾಕಿಸಿಕೊಡುವುದಾಗಿ ಹೇಳಿದರು. ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆ ಕಾಲೇಜಿಗೆ ಬಣ್ಣ ಹೊಡೆಸಿಕೊಡುವಂತೆ ಮನವಿ ಮಾಡಲಾಗಿದೆ. ಅದರಂತೆ ಬಣ್ಣವನ್ನು ಹೊಡೆಸಿಕೊಡಲಾಗುತ್ತದೆ. ಇಂಟರ್ ಲಾಕ್ ಕೂಡ ಮಾಡಿಸಿಕೊಡಲಾಗುತ್ತದೆ. ಕಾಲೇಜಿನಲ್ಲಿ 613 ವಿದ್ಯಾರ್ಥಿಗಳಿದ್ದು ಉತ್ತಮ ಪಾಠ ಪ್ರವಚನ ನಡೆಯುತ್ತಿದೆ. ಶಿಕ್ಷಣಕ್ಕೆ ನನ್ನ ಮೊದಲ ಆದ್ಯತೆಯಾಗಿದೆ. ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂಬುದಾಗಿಯೂ ತಿಳಿಸಿದರು. ಶಾಲೆ ಒಂದು ದೇವಾಲಯವಿದ್ದಂತೆ. ಇಲ್ಲಿ ಬರುವಂತ ವಿದ್ಯಾರ್ಥಿಗಳಿಗೆ ಯಾವುದೇ ಕೊರತೆಯಾಗಬಾರದು.…






