Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಲೋಕಸಭೆಯಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2024-25 ಅನ್ನು ಮಂಡಿಸುತ್ತಿದ್ದಾರೆ. ಈ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಅದೇ ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ. ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡುತ್ತಿರುವಂತ ಅವರು, ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ ಎಂಬುದಾಗಿ ಹೇಳಿದರು. ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂಬುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದರು
ನವದೆಹಲಿ: ಲೋಕಸಭೆಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ 2024-25 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸೋದಕ್ಕೆ ಆರಂಭಿಸಿದ್ದಾರೆ. ಈ ವೇಳೆ ಮಾತನಾಡಿದಂತ ಅವರು 2047ರ ವೇಳೆಗೆ ಭಾರತವನ್ನು ವಿಕ್ಷಿತ್ ಭಾರತವನ್ನಾಗಿ ಮಾಡಲು ಶ್ರಮಿಸೋದಾಗಿ ತಿಳಿಸಿದರು. ಇಂದು ಲೋಕಸಭೆಯಲ್ಲಿ ಕೇಂದ್ರ ಮಧ್ಯಂತರ ಬಜೆಟ್ ಭಾಷಣ ಆರಂಭಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜನರು ದೊಡ್ಡ ಜನಾದೇಶದೊಂದಿಗೆ ಸರ್ಕಾರವನ್ನು ಆಶೀರ್ವದಿಸಿದ್ದಾರೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮಂತ್ರವನ್ನು ಸರ್ಕಾರ ಬಲಪಡಿಸಿದೆ ಎಂದರು. ಕನಿಷ್ಠ ಬೆಂಬಲ ಬೆಲೆಗಳನ್ನು ನಿಯತಕಾಲಿಕವಾಗಿ ಹೆಚ್ಚಿಸಲಾಗಿದೆ. 2047ರ ವೇಳೆಗೆ ಭಾರತವನ್ನು ‘ವಿಕ್ಷಿತ್ ಭಾರತ’ವನ್ನಾಗಿ ಮಾಡಲು ಶ್ರಮಿಸುತ್ತಿದ್ದೇನೆ ಎಂದು ತಿಳಿಸಿದರು. ಈ ಬಾರಿಯ ಬಜೆಟ್ 4 ಕೇಂದ್ರೀಕೃತ ವಿಭಾಗಗಳನ್ನು ಒಳಗೊಂಡಿದೆ. ಅವುಗಳೆಂದರೇ ಗರೀಬ್, ಮಹಿಳಾ, ಯುವಕರು ಮತ್ತು ರೈತರು ಎಂದರು. ನಮ್ಮ ಯುವ ದೇಶವು ಉನ್ನತ ಆಕಾಂಕ್ಷೆಗಳು, ಅದರ ವರ್ತಮಾನದ ಬಗ್ಗೆ ಹೆಮ್ಮೆ ಮತ್ತು ಉಜ್ವಲ ಭವಿಷ್ಯದ ಭರವಸೆ ಮತ್ತು ವಿಶ್ವಾಸವನ್ನು ಹೊಂದಿದೆ. ನಮ್ಮ ಸರ್ಕಾರವು ತನ್ನ ಅದ್ಭುತ ಕೆಲಸದ ಆಧಾರದ…
ನವದೆಹಲಿ: ಲೋಕಸಭೆಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ 2024-25 ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸೋದಕ್ಕೆ ಆರಂಭಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಭೌಗೋಳಿಕ ರಾಜಕೀಯ ಉದ್ವಿಗ್ನತೆ, ಹೆಚ್ಚಿನ ಹಣದುಬ್ಬರ ಮತ್ತು ಮೃದು ಜಾಗತಿಕ ಮಂದಗತಿಯ ನಡುವೆ ಬಜೆಟ್ ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಮಾರ್ಗದರ್ಶನವನ್ನು ನೀಡುತ್ತದೆ. ಮೋದಿಯವರ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಹಿನ್ನಲೆಯಲ್ಲಿ ನಾನು ಕೇಂದ್ರ ಬಜೆಟ್ 2024-25 ಮಂಡಿಸುತ್ತಿರೋದಾಗಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದ ಆರಂಭದಲ್ಲೇ ಹೇಳಿದರು. ಇದಕ್ಕೂ ಮುನ್ನಾ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸುವ ಮೊದಲು ಕೇಂದ್ರ ಸಚಿವ ಸಂಪುಟವು ಮಧ್ಯಂತರ ಬಜೆಟ್ ಗೆ ಅನುಮೋದನೆಯನ್ನು ಪಡೆದರು.
ಬೆಳಗಾವಿ: ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ಬಗರ್ ಹುಕುಂ ರೈತರಿಗೆ ರಾಜ್ಯ ಸರ್ಕಾರದಿಂದ ಶೀಘ್ರವೇ ಅರ್ಹರಿಗೆ ಜಮೀನು ಮಂಜೂರು ಮಾಡುವುದಾಗಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಲಕ್ಷಾಂತರ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಅರ್ಹರಿಗೆ ಮಾತ್ರ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, “ಈ ಹಿಂದೆ ಬಗರ್ ಹುಕುಂ ಸಾಗುವಳಿ ಚೀಟಿ ನೀಡುವ ವೇಳೆ ಅನರ್ಹರಿಗೂ ಜಮೀನು ಮಂಜೂರು ಮಾಡಲಾಗಿದೆ. ನಿಯಮ ಮೀರಿ ಸಾಕಷ್ಟು ಅಕ್ರಮ ನಡೆಸಲಾಗಿದೆ. ಆದರೆ ಈ ಬಾರಿ ಅಂತಹ ಯಾವುದೇ ಪ್ರಹಸನಗಳಿಗೆ ಆಸ್ಪದ ಇಲ್ಲ. ಬಗರ್ ಹುಕುಂ ಸಭೆಯ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿ ಪಡೆಯಬೇಕು” ಎಂದು ತಾಕೀತು ಮಾಡಿದರು. ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ…
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಭೂಮಿ ಒತ್ತುವರಿ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ. ಒಂದು ಇಂಚು ಸರ್ಕಾರಿ ಭೂಮಿಯನ್ನು ಒತ್ತುವರಿಯಾಗದಂತೆ ತಡೆಯೋದಕ್ಕೆ ಬೀಟ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಕುರಿತಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ಹಂಚಿಕೊಂಡಿದ್ದು ರಾಜ್ಯಾಧ್ಯಂತ ಸರ್ಕಾರಿ ಜಮೀನುಗಳ ಸ್ಥಳ, ವಿಸ್ತೀರ್ಣ ಮತ್ತು ನಕ್ಷೆಯನ್ನು ಮೊಬೈಲ್ ಆಪ್ ನಲ್ಲಿ ದಾಖಲಿಸುವ ಕಾರ್ಯ ಮಾರ್ಚ್ ತಿಂಗಳ ಅಂತ್ಯಕ್ಕೆ ಪೂರ್ಣವಾಗಲಿದೆ ಎಂದಿದ್ದಾರೆ. ಈ ಪ್ರಕ್ರಿಯೆ ಪೂರ್ಣವಾದರೇ ಪ್ರತಿ ಮೂರು ತಿಂಗಳಿಗೊಮ್ಮ ವಾಸ್ತವ ಸ್ಥಿತಿಗತಿ ಅರಿಯಲು ನಿರಂತರ ಬೀಟ್ ವ್ಯವಸ್ಥೆ ಇರಲಿದ್ದು, ಒಂದಿಂಚೂ ಸರ್ಕಾರಿ ಭೂಮಿ ಕಬಳಿಕೆಯಾಗದಂತೆ ತಡೆಯುವ ಪರಿಣಾಮಕಾರಿ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುತ್ತಿದೆ ಎಂಬುದಾಗಿ ತಿಳಿಸಿದ್ದಾರೆ. ಒಟ್ಟಾರೆಯಾಗಿ ರಾಜ್ಯಾದ್ಯಂತ ಸರ್ಕಾರಿ ಜಮೀನುಗಳ ಒತ್ತುವರಿ, ಕಬಳಿಕೆ ತಡೆಗೆ ‘ಬೀಟ್’ ವ್ಯವಸ್ಥೆ ಜಾರಿ ಮಾಡುತ್ತಿರುವ ಸರ್ಕಾರ, ಎಲ್ಲ ಸರ್ಕಾರಿ ಭೂಮಿಯ ಮಾಹಿತಿ (ಡೇಟಾ ಬೇಸ್) ಸಿದ್ಧಪಡಿಸಿದೆ. ಈ ಜಮೀನುಗಳ ಸ್ಥಳ, ವಿಸ್ತೀರ್ಣ, ಆಕಾರ್ ಬಂದ್ ಸಿದ್ಧಪಡಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗಿದೆ. ಈ ಆ್ಯಪ್ ಬಳಸಿ…
ಕಲಬುರ್ಗಿ: ಜಿಲ್ಲೆಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಶಾಲಾ ವಾಹನವೊಂದು ಹರಿದ ಪರಿಣಾಮ, ಸ್ಥಳದಲ್ಲೇ ಮಗು ದುರ್ಮಣರ ಹೊಂದಿರುವಂತ ಘಟನೆ ಇಂದು ನಡೆದಿದೆ. ಈ ಹಿನ್ನಲೆಯಲ್ಲಿ ಶಾಲಾ ವಾಹನವನ್ನು ಜಖಂ ಗೊಳಿಸಲಾಗಿದೆ. ಕಲಬುರ್ಗಿ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ ಹರಿದು ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವೊಂದು ಧಾರುಣವಾಗಿ ಸಾವನ್ನಪ್ಪಿದೆ. ಮೃತ ಮಗುವನ್ನು ಮನೋಜ್(2) ಎಂಬುದಾಗಿ ಗುರುತಿಸಲಾಗಿದೆ. ಶಾಲಾ ವಾಹನ ಚಾಲಕನ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬುದಾಗಿ ಆರೋಪಿಸಿ, ಪೋಷಕರು, ಸಂಬಂಧಿಕರು ಶಾಲಾ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟ ನಡೆಸಿದ ಕಾರಣ, ನ್ಯಾಷನಲ್ ಪಬ್ಲಿಕ್ ಶಾಲೆಯ ಬಸ್ಸಿನ ಗ್ಲಾಸ್ ಪುಡಿ ಪುಡಿಯಾಗಿದೆ. ಘಟನೆಯ ಬಳಿಕ ಶಾಲಾ ವಾಹನದ ಚಾಲಕ ಬಸ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದಂತ ಕಲಬುರ್ಗಿ ಸಂಚಾರ-2 ಠಾಣೆಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/state-level-mega-job-fair-to-be-organised-on-feb-19-20/ https://kannadanewsnow.com/kannada/breaking-rbi-bans-new-customer-addition-to-paytm-bank/
ಬೆಂಗಳೂರು: ಗುತ್ತಿಗೆದಾರರೊಬ್ಬರಿಂದ ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡೋ ಸಲುವಾಗಿ 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಬೆಸ್ಕಾಂ ಜೆಇ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರೋ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರದ ಬೆಸ್ಕಾಂ ಕಚೇರಿಯ ಜೆಇ ಪ್ರಕಾಶ್ ಎಂಬುವರು ಗುತ್ತಿಗೆದಾರ ಮಂಜೇಶ್ ಎಂಬುವರಿಗೆ ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡೋದಕ್ಕೆ 2.5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಎಲೆಕ್ಟ್ರಿಕ್ ಗುತ್ತಿಗೆದಾರ ಮಂಜೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮುಂಗಡವಾಗಿ 1.5 ಲಕ್ಷ ಲಂಚದ ಹಣವನ್ನು ಬೆಸ್ಕಾಂ ಜೆಇ ಪ್ರಕಾಶ್ ಅವರಿಗೆ ನೀಡೋದಕ್ಕೆ ನಿಗದಿ ಪಡಿಸಲಾಗಿತ್ತು. ಅದರಂತೆ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಬೆಸ್ಕಾಂ ಜೆಇ ಪ್ರಕಾಶ್ ಅವರನ್ನು ಹಿಡಿದಿದ್ದಾರೆ. ಇದೀಗ ಬೆಸ್ಕಾಂ ಜೆಇ ಪ್ರಕಾಶ್ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ದೂರು ದಾಖಲಿಸಿಕೊಂಡು, ಅವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/
ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಪ್ಲೋಮಾ, ಪದವೀಧರರಿಗೆ ಯುವನಿಧಿ ಜಾರಿಗೊಳಿಸಿದ ಬೆನ್ನಲ್ಲೇ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಅದೇ ರಾಜ್ಯ ಮಟ್ಟದ ಬೃಹತ್ ಉದ್ಯೋ ಮೇಳವನ್ನು ಫೆಬ್ರವರಿ.19, 20ರಂದು ಆಯೋಜಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು, ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ-2024ಅನ್ನು ದಿನಾಂಕ 19-02-2024 ಮತ್ತು 20-02-2024ರಂದು ಆಯೋಜಿಸಲಾಗುತ್ತಿದೆ ಎಂದಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಸಮೃದ್ಧಿ ಸಮ್ಮೇಳನವನ್ನು ಫೆ.19, 20 ರಂದು ಆಯೋಜಿಸಲಾಗುತ್ತಿದ್ದು, ಅಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳೆವನ್ನು ಆಯೋಜಿಸಲಾಗುತ್ತಿದೆ. ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಈ https://udyogamela.skillconnect.kaushalkar.com/candidateRegistration ಲಿಂಕ್ ಮೂಲಕ ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳಬಹುದು. ಫೆ.19, 20 ರಂದು ನಡೆಯುವಂತ ಬೃಹತ್ ಉದ್ಯೋಗ ಮೇಳದಲ್ಲಿ ಭಾಗಿಯಾಗಿ, ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 18005999918 ಗೆ ಕರೆ ಮಾಡಿ ಪಡೆಯಬಹುದಾಗಿದೆ ಎಂದಿದೆ. https://kannadanewsnow.com/kannada/bengaluru-three-injured-as-lord-rams-cutout-breaks-down/ https://kannadanewsnow.com/kannada/breaking-metro-commuters-beware-penalty-for-indecent-behaviour/
ಬೆಂಗಳೂರು: ನಗರದಲ್ಲಿ ಅಗ್ನಿ ಅವಘಡದ ಬೆನ್ನಲ್ಲೇ, ಮತ್ತೊಂದು ಭೀಕರ ಅವಘಡ ನಡೆದಿದೆ. ಅದೇ ಶ್ರೀರಾಮನ ಕಟೌಟ್ ಕಟ್ಟೋ ಸಂದರ್ಭದಲ್ಲಿ, ಅದು ಮುರಿದು ಬಿದ್ದು ಮೂವರು ಗಾಯಗೊಂಡಿರೋ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಎಎಲ್ ಏರ್ಪೋರ್ಟ್ ಪಕ್ಕದಲ್ಲಿ ಶ್ರೀರಾಮನ ಕಟೌಟ್ ನಿರ್ಮಿಸೋ ಕಾರ್ಯ ನಡೆಸಲಾಗುತ್ತಿತ್ತು. ಈ ವೇಳೆಯಲ್ಲಿ ದಿಢೀರ್ ಮುರಿದು ಬಿದ್ದ ಕಾರಣ ಮೂವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಶ್ರೀರಾಮನ ಕಟೌಟ್ ದಿಢೀರ್ ಮುರಿದು ಬಿದ್ದ ಹಿನ್ನಲೆಯಲ್ಲಿ ಅದನ್ನು ಕಟ್ಟುತ್ತಿದ್ದಂತ ಮೂವರು ಅದರಡಿ ಸಿಲುಕಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಅಂದಹಾಗೇ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ, ರಾಮನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆಯ ಬಳಿಕ, ಶ್ರೀರಾಮನ ಕಟೌಟ್ ಕಟ್ಟೋ ಪ್ರಕ್ರಿಯೆ ಹಲವೆಡೆ ನಡೆಯುತ್ತಿದೆ. ಇದೇ ಮಾದರಿಯಲ್ಲಿ ಇಂದು ಹೆಚ್ ಎಎಲ್ ಏರ್ಪೋರ್ಟ್ ಬಳಿಯಲ್ಲಿ ನಿರ್ಮಾಣ ಮಾಡುತ್ತಿದ್ದಂತ ವೇಳೆಯಲ್ಲಿ ಇಂತಹ ಅವಘಡ ನಡೆದಿದೆ. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/
ರಾಯಚೂರು: ಜಿಲ್ಲೆಯಲ್ಲಿ ಅಪರಿಚಿತರಿಂದ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರವನ್ನು ಹಾಕಲಾಗಿದೆ. ಇದರಿಂದ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದಂತ ಘಟನೆ ನಡೆದಿದೆ. ಅಲ್ಲದೇ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರೋದಾಗಿ ತಿಳಿದು ಬಂದಿದೆ. ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪರಿಚಿತ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿದ್ದರು. ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಈ ಘಟನೆ ವರದಿಯಾಗಿದ್ದು, ಉದ್ವಿಗ್ನ ಪರಿಸ್ಥಿತಿ ಮತ್ತು ಮುಸ್ಲಿಂ ಸಮುದಾಯದಿಂದ ಭಾರಿ ಪ್ರತಿಭಟನೆಗೆ ಕಾರಣವಾಯಿತು. ಮಟನ್ ಮಾರ್ಕೆಟ್ ಬಳಿಯ ಟಿಪ್ಪು ವೃತ್ತದ ಬಳಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ರಸ್ತೆ ಸಂಚಾರ ತಡೆದರು. ಮುಸ್ಲಿಂ ಸಮುದಾಯವು ರಸ್ತೆಯ ಮಧ್ಯದಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿತು. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/