Subscribe to Updates
Get the latest creative news from FooBar about art, design and business.
Author: kannadanewsnow09
ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲ್ಲ, ಗ್ಯಾರಂಟಿ ನಿಲ್ಲಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿಗಳಿಂದ ಸರ್ಕಾರ ಪಾಪರ್ ಆಗಲಿದೆ ಎಂದು ಸರ್ಕಾರದ ಆರ್ಥಿಕ ಸಲಹೆಗಾರಾದ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಅದೇ ರೀತಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಅವರೆಲ್ಲರೂ ಸರಿಯಾಗಿಯೇ ಹೇಳಿದ್ದಾರೆ. ಏಕೆಂದರೆ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಕಳೆದ ಬಾರಿ ದೃಷ್ಟಿ ಬೊಟ್ಟಿನಂತೆ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಗೆದ್ದಿತ್ತು. ಈಗ ಅದನ್ನು ಕೂಡ ಕಳೆದುಕೊಳ್ಳಲಿದೆ ಎಂದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋದ ಕಡೆಯಲ್ಲೆಲ್ಲ ಅಧಿಕಾರ ಕಳೆದುಕೊಳ್ಳುತ್ತಿದ್ದಾರೆ. ಬಿಹಾರದಲ್ಲಿ ಈಗಾಗಲೇ ಅಧಿಕಾರ ಕಳೆದುಕೊಂಡಿದ್ದಾರೆ. ಮಮತಾ ಬ್ಯಾನರ್ಜಿ, ಅರವಿಂದ ಕೇಜ್ರಿವಾಲ್ ದೂರವಾಗಿದ್ದಾರೆ. ಎಲ್ಲ ಕಡೆ ಇಲ್ಲ ಎಂಬ ಪ್ರತಿಕ್ರಿಯೆ ಬಂದಿದ್ದು, ಕರ್ನಾಟಕದಲ್ಲೂ ಇಲ್ಲ ಎಂಬುದೇ ಗ್ಯಾರಂಟಿಯಾಗಲಿದೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಲ್ಲ, ಗ್ಯಾರಂಟಿ ನಿಲ್ಲಲ್ಲ ಎಂದರು. ಅನೇಕರು ಬಿಜೆಪಿಗೆ ಬರಲು ಆಸಕ್ತಿ ತೋರಿಸುತ್ತಿದ್ದಾರೆ. ನರೇಂದ್ರ ಮೋದಿಯವರನ್ನು ಮರಳಿ ಪ್ರಧಾನಿಯಾಗಿಸುವುದು ನಮ್ಮ ಗುರಿ ಎಂದರು. https://kannadanewsnow.com/kannada/there-should-be-no-manual-scavengers-in-the-state-cm-siddaramaiah/ https://kannadanewsnow.com/kannada/breaking-metro-commuters-beware-penalty-for-indecent-behaviour/
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಗುರುತಿಸಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶವನ್ನು ಉದ್ಘಾಟಿಸಿ, ತಲಾ 40 ಸಾವಿರ ರೂ ಸಹಾಯಧನ ವಿತರಿಸಿ ಮಾತನಾಡಿದರು. ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17 ಕ್ಕೆ ಏರಿಸಿದ್ದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಅವಕಾಶವೇ ಇಲ್ಲ. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ವರಿಸಿದರು. ಸಫಾಯಿ ಕರ್ಮಚಾರಿಗಳು ಮನೆ ಕಟ್ಟಿಕೊಳ್ಳಲು 7.5 ಲಕ್ಷ ನೆರವು ನೀಡುವ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು ನಮ್ಮ ಸರ್ಕಾರವೇ. ನಾನು ಮುಖ್ಯಮಂತ್ರಿಯಾಗಿ ಈ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ…
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 144 ಪಿಎಸ್ಐ ಸಿವಿಲ್ ಹುದ್ದೆಗಳಲ್ಲಿದ್ದಂತ ಅಧಿಕಾರಿಗಳನ್ನು ವರ್ಗಾವಣೆ ( Civil PSI Transfer ) ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಾರ್ವತ್ರಿಕ ಲೋಕಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ಹೊರಡಿಸಿರುವಂತ ಮಾರ್ಗಸೂಚಿಯ ಅನ್ವಯ 144 ಸಿವಿಲ್ ಪಿಎಸ್ಐಗಳನ್ನು ವರ್ಗಾವಣೆ ಮಾಡಿ ಮಾಡುತ್ತಿರೋದಾಗಿ ತಿಳಿಸಿದೆ. ನರೋನ ಪೊಲೀಸ್ ಠಾಣೆಯ ಸಿವಿಲ್ ಪಿಎಸ್ಐ ಆಗಿದ್ದಂತ ಗಂಗಮ್ಮ ಅವರನ್ನು ಬೀದರ್ ಜಿಲ್ಲೆಯ ಮೆಹಕರ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಚಿದಾನಂದ ಕಾಸಪ್ಪ ಗೋಳ್ ಅವರನ್ನು ಬೀದರ್ ಜಿಲ್ಲೆಯ ಬಿಮಲ್ ಖಡ ಪೊಲೀಸ್ ಠಾಣೆಗೆ, ಚೇತನ್ ಅವರನ್ನು ಬೀದರ್ ಹೊಸ ನಗರ ಪೊಲೀಸ್ ಠಾಣೆ, ಸುಖಾನಂದ್ ಅವರನ್ನು ಬೀದರ್ ನ ಮನ್ನಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 144 ಸಿವಿಲ್ ಪಿಎಸ್ಐಗಳ ವರ್ಗಾವಣೆ ಪಟ್ಟಿ https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/
ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಅಂಕಿತ ಹಾಕದೇ, ವಿಧಾನಮಂಡಲದ ಅಧಿವೇಶನ ಘೋಷಣೆಯಾದ ಕಾರಣ, ವಾಪಾಸ್ ಕಳುಹಿಸಿದ್ದಾರೆ. ಇಂತಹ ಮಸೂದೆಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲಾಗುತ್ತದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ಬಳಕೆ ಕಡ್ಡಾಯ ಸುಗ್ರೀವಾಜ್ಞೆ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲು ವಾವಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ಮಾನ್ಯ ರಾಜ್ಯಪಾಲರಿಗೆ ಕಳಿಸಲಾಗಿತ್ತು. ಆದರೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮುಂಚೆಯೇ ಅಧಿವೇಶನ ಪ್ರಾರಂಭವಾದ ಕಾರಣ ವಾಪಸ್ಸು ಕಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದರು. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/guarantee-schemes-will-not-be-stopped-at-any-cost-cm-siddaramaiah/
ಬೆಂಗಳೂರು : ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು. ಅವರು ಇಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರೆಸಲಾಗುವುದು ಎಂದರು. ಕೇಂದ್ರ ಬಜೆಟ್ ಮಂಡನೆ ನಂತರ ಪ್ರತಿಕ್ರಿಯೆ ಕೇಂದ್ರ ಸರ್ಕಾರ ಫೆಬ್ರವರಿ 1 ರಂದು 2024–25 ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಿದ್ದು, ಈ ಬಗ್ಗೆ ಪ್ರತಿಕ್ರಿಯೆ ನಾಳೆ ನೀಡುತ್ತೇನೆ. ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಅವರ ಕಾರ್ಯಚಟುವಟಿಕೆಗಳನ್ನು ಪರಿಶೀಲನೆಯನ್ನು ನಡೆಸಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಈ ಅಧಿಕಾರಗಳ ಸಲಹೆ ಸೂಚನೆ, ಕಾರ್ಯವೈಖರಿಗಳ ಬಗ್ಗೆ ವಿವರ ಪಡೆಯಲಾಗಿದೆ ಎಂದರು. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/ https://kannadanewsnow.com/kannada/breaking-metro-commuters-beware-penalty-for-indecent-behaviour/
ಉತ್ತರ ಕನ್ನಡ: ಜಿಲ್ಲೆಯಲ್ಲಿ ಒಂದೇ ದಿನ 8 ಜನರಿಗೆ ಮಂಗನ ಕಾಯಿಲೆ ದೃಢಪಟ್ಟಿದೆ. ಇವರಲ್ಲಿ ಓರ್ವ ಬಾಲಕನ ಸ್ಥಿತಿ ಗಂಭೀರಗೊಂಡಿದ್ದು, ಮಂಗಳೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಒಂದೇ ದಿನ 8 ಜನರಿಗೆ ಮಂಗನ ಕಾಯಿಲೆ ತಗುಲಿರೋದು ಪರೀಕ್ಷೆಯಿಂದ ದೃಢಪಟ್ಟಿದೆ. ಈ ಮೂಲಕ 10 ದಿನಗಳಲ್ಲಿ ಮಂಗನ ಕಾಯಿಲೆಗೆ ಒಳಗಾದವರ ಸಂಖ್ಯೆ 16ಕ್ಕೆ ಏರಿಕೆಯಾದಂತೆ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ 10 ವರ್ಷದ ಮಗು ಸೇರಿದಂತೆ 8 ಮಂದಿಗೆ ಒಂದೇ ದಿನದಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ. ಮಂಗನ ಕಾಯಿಲೆಗೆ ಒಳಗಾಗಿರುವಂತ 10 ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ. ಹೀಗಾಗಿ ಮಗುವನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/gyanvapi-mosque-dispute-court-allows-hindus-to-offer-prayers/ https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/
ಉತ್ತರ ಪ್ರದೇಶ: ಜ್ಞಾನವಾಪಿ ಮಸೀದಿ ವಿವಾದದ ಪ್ರಕರಣದಲ್ಲಿ ಈಗ ಹಿಂದೂಗಳಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಅದೇ ಜ್ಞಾನವಾಪಿ ಮಸೀದಿಯಲ್ಲಿ ಇರುವಂತ ಶಿವಲಿಂಗಕ್ಕೆ ಪೂಜೆ ಸಲ್ಲಿಸುವಂತೆ ಕೋರ್ಟ್ ಅನುಮತಿ ನೀಡಿದೆ. ಉತ್ತರ ಪ್ರದೇಶದ ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಈ ಸಂಬಂಧ ತೀರ್ಪು ನೀಡಿದ್ದು, ಮಸೀದಿಯಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿದೆ. ಈ ಹಿಂದೆ ಜ್ಞಾನವಾಪಿ ಮಸೀದಿಯಲ್ಲಿನ ಎಎಸ್ಐ ವರದಿಯನ್ನು ಹಿಂದೂ-ಮುಸ್ಲೀಂ ಮುಖಂಡರಿಗೆ ನೀಡುವಂತೆ ಸೂಚನೆ ನೀಡಿತ್ತು. ಅಲ್ಲದೇ ಅವರು ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಪಡೆದಿದ್ದರು. ಈ ಬೆನ್ನಲ್ಲಿ ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳು ಅಲ್ಲಿರುವಂತ ಶಿವಲಿಂಗಕ್ಕೆ ಪೂಜೆ ಮಾಡೋದಕ್ಕೆ ಅವಕಾಶ ನೀಡಿದೆ. ಈ ಮೂಲಕ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ದೊಡ್ಡ ಗೆಲುವು ಸಿಕ್ಕಂತೆ ಆಗಿದೆ. ಅಂದಾಹಗೇ ಜ್ಞಾನವಾಪಿಯ ಮುಚ್ಚಿದ 10 ಸೆಲಾರ್ ಗಳ್ಲಲಿ ಪೂಜೆ ಸಲ್ಲಿಸೋದಕ್ಕೆ ಜಿಲ್ಲಾ ನ್ಯಾಯಾಲಯ ಸೂಚಿಸಿದೆ. ಇದಕ್ಕಾಗಿ 7 ದಿನಗಳಲ್ಲಿ ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ. ಬೇಸ್ಮೆಟ್ ನಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಕೋರ್ಟ್…
ಬೆಂಗಳೂರು: ಪದೇ ಪದೇ ಸಂಸದ ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡುತ್ತಲೇ, ವಾಗ್ಧಾಳಿ ನಡೆಸುತ್ತಿದ್ದಂತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಕೋರ್ಟ್ ಚಾಟಿ ಬೀಸಿದೆ. ಪ್ರತಾಪ್ ಸಿಂಹ ವಿರುದ್ಧ ಹೇಳಿಕೆ ನೀಡದಂತೆ ಕೋರ್ಟ್ ನೋಟಿಸ್ ನೀಡಿ ಸೂಚಿಸಿದೆ. ಪ್ರತಾಪ್ ಸಿಂಹ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಂತ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ನ್ಯಾಯಾಲಯಕ್ಕೆ ದೂರು ನೀಡಲಾಗಿತ್ತು. ಈ ದೂರನ್ನು ಪರಿಶೀಲಿಸಿದಂತ ಬೆಂಗಳೂರಿನ ಸಿಟಿ ಸಿವಿಲ್, ಸೆಷನ್ಸ್ ಕೋರ್ಟ್ ಈಗ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗೆ ಸೂಚಿಸಿದೆ. ಅಲ್ಲದೇ ಫೆಬ್ರವರಿ.13ರಂದು ನ್ಯಾಯಾಲಯಲ್ಕೆ ಹಾಜರಾಗುವಂತೆ ನೋಟೀಸ್ ನಲ್ಲಿ ತಿಳಿಸಿದೆ. ಇನ್ನೂ ಪ್ರತಾಪ್ ಸಿಂಹ ವಿರುದ್ಧ ಯಾವುದೇ ಹೇಳಿಕೆ ನೀಡದಂತೆಯೂ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಗೆ ತಿಳಿಸಲಾಗಿದೆ. ಈ ಮೂಲಕ ಸಂಸದ ಪ್ರತಾಪ್ ಸಿಂಹ ವಿರುದ್ಧ ಹರಿಹಾಯುತ್ತಿದ್ದಂತ ಎಂ.ಲಕ್ಷ್ಮಣ್ ಗೆ ಕೋರ್ಟ್ ಬಿಸಿ ಮುಟ್ಟಿಸಿದೆ. https://kannadanewsnow.com/kannada/jay-shah-bcci-secretary-reappointed-as-chairman-of-asian-cricket-council-for-3rd-consecutive-term/
ಹುಬ್ಬಳ್ಳಿ: ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 357 ಸರ್ವೇಯರ್ ಸೇರಿದಂತೆ 596 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಎಲ್ಲೆಲ್ಲಿ ಎಜೇಂಟ್ ಹಾವಳಿ ಇದೆ ಅಂತಾ ನಾವು ಪರಿಶೀಲನೆ ಮಾಡ್ತಾ ಇದ್ದೀವಿ. ಯಾವ ಯಾವ ಅಧಿಕಾರಿಗಳ ಹತ್ರ ಖಡತಾ ಎಷ್ಟು ದಿನಗಳು ಇವೆ ಅನ್ನೋದನ್ನ ತಹಶೀಲ್ದಾರ್ ಗೆ ತಿಳಿಯುವಂತೆ ಮಾಡಿದ್ದೇವೆ. ನಾನು ಇಲ್ಲಿ ಬಂದು ನಿಂತು ಎಜೇಂಟ್ ಹಾವಳಿ ತಪ್ಪಿಸಲು ಆಗಲ್ಲ. ಆದ್ರೆ ಆದಾಗದಂತೆ ಡಿಜಿಟಲೀಕರಣ ಮಾಡ್ತಾ ಇದ್ದಿವಿ ಎಂದರು. ಸರ್ವೇ ಕೆಲಸ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಕಿ ಇವೆ. ಈಗಿನ ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಕಾರ್ಯ ವೇಗ ಹೆಚ್ಚಿಸಲಿದ್ದೇವೆ. 20 ಕೋಟಿ ವೆಚ್ಚ ಮಾಡಿ ಆಧುನಿಕ ಉಪಕರಣ ಕೊಡ್ತಾ ಇದ್ದೀವೆ. 750 ಪರವಾನಿಗಿ ಸರ್ವೇ ಮಾಡುವವರಿಗೆ ಹಂಚಿಕೆ ಮಾಡ್ತಾ ಇದ್ದೀವಿ. 357 ಸರ್ವೇಸ್ ಎಡಿಎಲ್ಆರ್ ರನ್ನು ಪೋಸ್ಟ್ ಭರ್ತಿ ಮಾಡಲು ಅರ್ಜಿ ಕರೀತಾ ಇದ್ದೇವೆ. 596 ಖಾಲಿ ಹುದ್ದೆಗಳಿವೆ, ಸಿಎಂ ಅದನ್ನ ಭರ್ತಿ…
ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ಹಾಗೂ ಅರ್ಚಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪಂಡಿತ್ ವಿದ್ಯಾಧರ್ ನಕ್ಷತ್ರಿ 9686268564 ನಾಳೇಯ ದಿನ ಆಂಜನೇಯ ಸ್ವಾಮಿಯ ಹನುಮಾನ್ ಚಾಲೀಸ ಪಾರಾಯಣ ಮಾಡಿರಿ ಇದರಿಂದ ನಿಮಗೆ ಸಾಕಷ್ಟು ಒಳಿತು ಆಗುತ್ತದೆ ಕುಟುಂಬ ಜನಕ್ಕೂಸಹ ಸಾಕಷ್ಟು ಒಳ್ಳೆಯದು ಆಗಲಿದೆ. ಓಂ ಶ್ರೀ ಆಂಜನೇಯಾಯ ನಮಃ ಓಂ ಮಹಾವೀರಾಯ ನಮಃ ಓಂ ಹನುಮತೇ ನಮಃ ಓಂ ಸೀತಾದೇವಿ ಮುದ್ರಾಪ್ರದಾಯಕಾಯ ನಮಃ ಓಂ ಮಾರುತಾತ್ಮಜಾಯ ನಮಃ ಓಂ ತತ್ತ್ವ ಜ್ಞಾನ ಪ್ರದಾನ…