Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು. ನಾಳೆಯಿಂದ ಅಕ್ಟೋಬರ್ 8, 9, 10 ಮೂರು ದಿನ ವರ್ಕಿಂಗ್ ಡೇಸ್ ಇದೆ. 13, 14, 15, 16, 17, 18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ಸಮೀಕ್ಷೆ ಹಿನ್ನಲೆಯಲ್ಲಿ ದಸರಾ ರಜೆಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದರು. ನಿನ್ನೆ ಶಿಕ್ಷಣ ಇಲಾಖೆಯಿಂದ ಒಂದು ಆದೇಶ ಮಾಡಲಾಗಿದೆ. ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ಮಾಡಿರುವಂತ ಆದೇಶವಾಗಿದೆ. ಇಂದು ಈ…
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಿಗೆ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಯಿತು. ಅದರಂತೆ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ನಿರ್ಧರಿಸಲಾಗಿದೆ. ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ…
ರಾಮನಗರ: ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ರಿಯಾಲಿಟಿ ಶೋ ಸ್ಥಗಿತಗೊಳಿಸುವಂತೆ ಕನ್ನಡಪರ ಸಂಘಟನೆಯಿಂದ ಬಿಗ್ ಬಾಸ್ ಸೆಟ್ ಬಳಿಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ರಾಮನಗರದ ಜಾಲಿವುಡ್ ಸ್ಟುಡಿಯೋಸ್ ಮತ್ತು ಅಡ್ವೆಂಚರ್ಸ್ ಬಳಿಯಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರಿಂದ ಶೋ ಸ್ಥಗಿತಗೊಳಿಸುವಂತೆ ಪ್ರತಿಭಟನೆ ನಡೆಸಲಾಗುತ್ತಿದೆ. ಜಾಲಿವುಡ್ ಒಳಭಾಗದಲ್ಲಿ ನಡೆಯುತ್ತಿರುವಂತ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/7-daily-habits-that-damage-your-kidneys/
ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. SC/ST ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. SC/ST ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು. ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ST ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ…
ಚೆನ್ನೈ : 158 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ಕೊಲಂಬೊ-ಚೆನ್ನೈ ವಿಮಾನಕ್ಕೆ ಮಂಗಳವಾರ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ತನ್ನ ಹಿಂದಿರುಗುವ ಪ್ರಯಾಣವನ್ನು ರದ್ದುಗೊಳಿಸಬೇಕಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವು ಸುರಕ್ಷಿತವಾಗಿ ಇಳಿಯಿತು ಮತ್ತು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಇಳಿಸಲಾಯಿತು ಎಂದು ಅವರು ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಹಕ್ಕಿ ಡಿಕ್ಕಿ ಹೊಡೆದ ನಂತರ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದರು. ವಿಮಾನವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಏರ್ ಇಂಡಿಯಾ ಎಂಜಿನಿಯರ್‌ಗಳು ವ್ಯಾಪಕ ತಪಾಸಣೆ ನಡೆಸಿದರು ಮತ್ತು ಘಟನೆಯ ಕಾರಣ ವಿಮಾನಯಾನ ಅಧಿಕಾರಿಗಳು ಅದರ ಹಿಂದಿರುಗುವ ಪ್ರಯಾಣವನ್ನು ರದ್ದುಗೊಳಿಸಿದರು ಎಂದು ಅವರು ಹೇಳಿದರು. ನಂತರ ಕೊಲಂಬೊಗೆ ಹೊರಟ 137 ಪ್ರಯಾಣಿಕರಿಗೆ ವಿಮಾನವು ಮತ್ತೊಂದು ವಿಮಾನವನ್ನು ವ್ಯವಸ್ಥೆ ಮಾಡಿತು ಎಂದು ಅವರು ಹೇಳಿದರು.
ಬೆಂಗಳೂರು : ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಹರ್ಷಿ ವಾಲ್ಮೀಕಿ ತಪೋವನ ದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ ಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ನಾಡಿನ ಜನತೆಗೆ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು. ವಾಲ್ಮೀಕಿ ಜಯಂತೋತ್ಸವದ ಮೂಲಕ ಅವರನ್ನುಸ್ಮರಿಸಲಾಗಿದೆ. ದೇಶ ಕಂಡ ಅಪರೂಪದ ಸಾಹಿತಿ. ರಾಮಾಯಣ ದಂತಹ ಮಹಾನ್ ಗ್ರಂಥದ ಕತೃ. ವಾಲ್ಮೀಕಿಯವರು ಶೂದ್ರ ಜನಾಂಗದಲ್ಲಿ ಜನಿಸಿದ್ದರೂ, ರಾಮಾಯಣದಂತಹ ಶ್ರೇಷ್ಠ ಗ್ರಂಥವನ್ನು ವಿಶ್ವಕ್ಕೆ ಪರಿಚಯಿಸಿದರು. ವಾಲ್ಮೀಕಿಯವರ ಪ್ರತಿಮೆಯನ್ನು 2017 ರಲ್ಲಿ ಸ್ಥಾಪಿಸಲಾಯಿತು. ವಾಲ್ಮೀಕಿ ಹಾಗೂ ಕನಕದಾಸರಂತಹ ಮಹಾನ್ ಸಂತರು ಸಮಾಜಮುಖಿಯಾಗಿ ಬದುಕಿದವರು. ಅವರು ಬೋಧಿಸಿದಂತೆ ಮಾನವೀಯ ಮೌಲ್ಯಗಳನ್ನು ಅನುಸರಿದವರು ಎಂದರು. ಸಚಿವಸಂಪುಟ ಪುನರ್ ರಚನೆ ನಾಯಕ ಸಮುದಾಯದ ಶಾಸಕರಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮುಂದಿನ ದಿನಗಳಲ್ಲಿ ಸಚಿವಸಂಪುಟ…
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ ಮರು ನಿಗದಿ ಮಾಡಿ, ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದಂತ ಸುರಲ್ಕರ್ ವಿಕಾಸ ಕಿಶೋರ್ ಅವರು ಜ್ಞಾಪನಾದೇಶ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ:…
ಬೆಂಗಳೂರು: ನಗರದಲ್ಲಿ ಆನ್ ಲೈನ್ ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ 8 ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನರನ್ನು ಆನ್ ಲೈನ್ ನಲ್ಲಿ ಹೂಡಿಕೆ ಮಾಡುವಂತೆ ಆರೋಪಿಗಳು ಪ್ರಚಾರ ಮಾಡುತ್ತಿದ್ದರು. ಫೇಸ್ ಬುಕ್, ವಾಟ್ಸ್ ಆಪ್, ಇನ್ ಸ್ಟಾಗ್ರಾಂ ಮೂಲಕ ಹೂಡಿಕೆ ಮಾಡುವಂತೆ ಆಮಿಷವನ್ನು ಒಡ್ಡುತ್ತಿದ್ದರು. ಈ ಆಮಿಷಕ್ಕೆ ಒಳಗಾದಂತ ಜನರು ದೇಶ, ವಿದೇಶಗಳಿಂದಲೂ ಆನ್ ಲೈನ್ ಮೂಲಕ ಹೂಡಿಕೆ ಮಾಡಿದ್ದರು. ಹೆಚ್ಚು ಲಾಭಾಂಶ ನೀಡೋದಾಗಿ ಹೂಡಿಕೆ ಮಾಡಿಸಿಕೊಂಡಿದ್ದಂತ ಆರೋಪಿಗಳು, ಹಣವನ್ನು ಹಿಂದಿರುಗಿಸದೇ ವಂಚಿಸುತ್ತಿದ್ದರು. ಈ ಬಗ್ಗೆ ಸಾರ್ವಜನಿಕರು ದೂರು ನೀಡಿದ ಹಿನ್ನಲೆಯಲ್ಲಿ ಕೆಂಗೇರಿ ಠಾಣೆಯ ಪೊಲೀಸರು ಬೆಂಗಳೂರಿನ 7 ಕಡೆಗಳಲ್ಲಿ ದಾಳಿ ನಡೆಸಿದ್ದರು. ಈ ದಾಳಿಯ ವೇಳೆಯಲ್ಲಿ 8 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 19 ಲ್ಯಾಪ್ ಟಾಪ್, 40 ಮೊಬೈಲ್, 11 ಪೆನ್ ಡ್ರೈವ್, 42 ಸಿಮ್ ಕಾರ್ಡ್, 4 ಐಪ್ಯಾಡ್, 2…
ಶಿವಮೊಗ್ಗ: ಸಾಗರದ ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ಅಣಿಯಾಗಿದೆ. ಹೊಸ ಹೊಸ ವಿನೂತನ ಮಾದರಿಯ ರಾಯಲ್ ಎನ್‌ಫೀಲ್ಡ್ ಮೋಟಾರ್ ಬೈಕ್ ಗಳೊಂದಿಗೆ ಸಾಗರದಲ್ಲಿ ಹೊಸ ಶೋ ರೂಂ ಗ್ರಾಂಡ್ ಓಪನ್ ಆಗಲಿದೆ. ಈ ಕುರಿತಂತೆ ಮಾಹಿತಿಯನ್ನು ಹಂಚಿಕೊಂಡಿರುವಂತ ಆರ್ ಬಿ ಡಿ ಮೋಟಾರ್ಸ್ ನ RBD ಮಹೇಶ್ ಅವರು, ಸಾಗರದಲ್ಲಿ ರಾಯಲ್ ಎನ್‌ಫೀಲ್ಡ್ ಮೋಟಾರ್ ಶೋ ರೂಂ ತೆರೆಯಬೇಕು ಎಂಬುದು ಬಹು ದಿನದ ಕನಸಾಗಿತ್ತು. ಅದು ನನಸಾಗಿದೆ. ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ನಿಂದ ಅಕ್ಟೋಬರ್.10ರಂದು ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ ಎಂದರು. ಸಾಗರದ ಲೋಹಿಯಾ ನಗರ, ವಾರ್ಡ್ ನಂ.9, ಬಿಹೆಚ್ ರಸ್ತೆ, ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರಾಯಲ್ ಎನ್ ಫೀಲ್ಡ್ ಶೋ ರೂಂ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಸಾಗರದ ಸಾರ್ವಜನಿಕರು, ಬುಲೆಟ್ ಪ್ರಿಯರು ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ. ರಾಯಲ್ ಎನ್‌ಫೀಲ್ಡ್ ಎಲ್ಲಾ…
ಬೆಂಗಳೂರು ; ನಾಡಿನ ವಿಖ್ಯಾತ ಹಾಸನಾಂಭ ಉತ್ಸವದಲ್ಲಿ ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಸೋಮವಾರ ಹಾಸನ ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಾಸನಾಂಭ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೆ, ಜನಸ್ನೇಹಿ ಹಾಸನಾಂಭ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು. “ಕಳೆದ ವರ್ಷ ಹಾಸನದಲ್ಲಿ ವಿಐಪಿ ಗಳ ಎಸ್ಕಾರ್ಟ್ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದು” ಎಂದು ಮಾಹಿತಿ ನೀಡಿದರು. ಮುಂದುವರೆದು, “ ಶಾಸಕರು, ಸಚಿವರು ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ…