Subscribe to Updates
Get the latest creative news from FooBar about art, design and business.
Author: kannadanewsnow09
ದಕ್ಷಿಣ ಕನ್ನಡ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಆಗಮಿಸಿದ ಅವರನ್ನು ದೇವಳದ ಆನೆ ಯಶಸ್ವಿ ತನ್ನ ಸೊಂಡಿಲಿನಿಂದ ಆಶೀರ್ವದಿಸಿತು. ಬಳಿಕ ಸಚಿವರನ್ನು ಮಂಗಳವಾದಯ ಮತ್ತು ಪೂರ್ಣಕುಂಭದೊಂದಿಗೆ ಶ್ರೀ ದೇವಳಕ್ಕೆ ಕರೆದೊಯ್ಯಲಾಯಿತು. ನಂತರ ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ತದನಂತರ ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು. ಆಶ್ಲೆಷ ಬಲಿ ಪೂಜಾ ಮಂದಿರ ನಿರ್ಮಾಣದ ಆದೇಶ ಪತ್ರ ಹಸ್ತಾಂತರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಳಿಯ ಆದಿ ಸುಬ್ರಹ್ಮಣ್ಯ ರಸ್ತೆಯ ತುಳಸಿತೋಟ ಎಂಬಲ್ಲಿ ದಾನಿಗಳಾದ ಮಾಜಿ ಸಚಿವ ಮಾಲೂರು ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಅವರ ವತಿಯಿಂದ ನಿರ್ಮಾಣವಾಗಲಿರುವ ಆಶ್ಲೇಷ ಬಲಿ ಪೂಜಾ ಮಂದಿರದ ನಿರ್ಮಾಣ ಕಾಮಗಾರಿಗೆ ದಾನಿಗಳಿಗೆ ಸಚಿವ ರಾಮಲಿಂಗ ರೆಡ್ಡಿ ಆದೇಶ ಪತ್ರ ಹಸ್ತಾಂತರಿಸಿದರು ಹಾಗೂ ದಾನಿಗಳನ್ನು ಗೌರವಿಸಿದರು. ಆಶ್ಲೇಷ ಮಂದಿರಕ್ಕೆ ಶಂಕುಸ್ಥಾಪನೆ ಸಮಾರಂಭ…
ಬೆಂಗಳೂರು: ಶಾಸಕ ಇಕ್ಬಾಲ್ ಹುಸೇನ್ ಗೆ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮೂರು ತಿಂಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆಂಬ ಹೇಳಿಕೆಯ ಹಿನ್ನಲೆಯಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಅವರು ಡಿಕೆ ಶಿವಕುಮಾರ್ ಅವರು ಮೂರು ತಿಂಗಳಲ್ಲಿ ಮುಖ್ಯಮಂತ್ರಿಯಾಗುತ್ತಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಏಳಿಸಿತ್ತು. ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಶೋಕಾಸ್ ನೋಟಿಸ್ ಅನ್ನು ಶಾಸಕ ಇಕ್ಬಾಲ್ ಗೆ ನೀಡಿದ್ದಾರೆ. ನೋಟಿಸ್ ನಲ್ಲಿ ಇಕ್ಬಾಲ್ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರವಾಗಿದೆ. ಅಶಿಸ್ತಿನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಒಂದು ವಾರದಲ್ಲಿ ಸಮಜಾಯಿಸಿ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. https://kannadanewsnow.com/kannada/valmiki-development-corporation-scam-high-court-orders-to-cancel-sit-and-hand-over-to-cbi/ https://kannadanewsnow.com/kannada/breaking-karnataka-second-puc-exam-3-result-declared-20-22-students-pass-ii-puc-exam-result-2025/
ಬೆಂಗಳೂರು: ಕರ್ನಾಟಕ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತ 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ಮಹತ್ವದ ಆದೇಶ ಹೊರಡಿಸಿದೆ. ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಕೋರಿದ್ದಂತ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಎಸ್ಐಟಿ ತನಿಖೆ ರದ್ದುಗೊಳಿಸಿ, ಸಿಬಿಐ ತನಿಖೆಗೆ ವಹಿಸಬೇಕೆಂದು ರಾಜ್ಯ ಬಿಜೆಪಿ ನಾಯಕರು ಸಲ್ಲಿಸಿದ್ದಂತ ಅರ್ಜಿಯನ್ನು ಮಾನ್ಯ ಮಾಡಿತು. ಅಂತಿಮವಾಗಿ ವಾಲ್ಮೀಕಿ ನಿಗಮದ ಹಗರಣ ಸಂಬಂಧ 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಕೋರಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶಿತು. ಹೀಗಾಗಿ ವಾಲ್ಮೀಕಿ ನಿಗಮದ ಹಗರಣವನ್ನು ಇನ್ಮುಂದೆ ಸಿಬಿಐ ತನಿಖೆ ನಡೆಸಲಿದೆ. ಅಂದಹಾಗೇ ಸಿಬಿಐ ತನಿಖೆಗೆ ಕೋರಿ ರಾಜ್ಯ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿ ಸೇರಿದಂತೆ ಇತರೆ ನಾಯಕರು ಹೈಕೋರ್ಟ್ ಗೆ…
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ಅಕ್ರಮ ಹಣ ವ್ಯವಹಾರ ವರ್ಗಾವಣೆ ಸಂಬಂಧದ ಹಗರಣವನ್ನು ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ವಹಿಸಿತ್ತು. ಇಂತಹ ಹಗರಣವನ್ನು ಸಿಬಿಐನಿಂದ ಸಮಗ್ರ ತನಿಖೆಗೆ ಹೈಕೋರ್ಟ್ ಆದೇಶಿಸಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಸಿಬಿಐನಿಂದ ಸಮಗ್ರ ತನಿಖೆಗೆ ಕೋರಿ ಅರವಿಂದ ಲಿಂಬಾವಳಿ, ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವಂತ ಹೈಕೋರ್ಟ್ ಈಗ ಸಿಬಿಐ ತನಿಖೆಗೆ ಆದೇಶಿಸಿದೆ. ಅಂದಹಾಗೇ ವಾಲ್ಮೀಕಿ ನಿಗಮದ ಹಗರಣದ ತನಿಖೆಯನ್ನು ಈವರೆಗೆ ಸಿಬಿಐ ಬ್ಯಾಂಕ್ ವ್ಯವಹಾರದ ಬಗ್ಗೆ ಮಾತ್ರವೇ ತನಿಖೆ ನಡೆಸುತ್ತಿತ್ತು. ಈಗ ಹೈಕೋರ್ಟ್ ಆದೇಶದ ಹಿನ್ನಲೆಯಲ್ಲಿ ಇನ್ಮುಂದೆ ಇಡೀ ಹಗರಣದ ಸಂಪೂರ್ಣ ತನಿಖೆಯನ್ನು ನಡೆಸಲಿದೆ. https://kannadanewsnow.com/kannada/the-conversation-with-the-legislators-is-limited-to-party-organization-not-for-a-change-in-leadership-dks-clarification/ https://kannadanewsnow.com/kannada/in-karnataka-82-tigers-have-died-in-five-and-a-half-years/
ಬೆಂಗಳೂರು: “ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, “ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು…
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ,ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ-ಸಿಎಂ ಶಾಸಕ ಬಿ.ಆರ್.ಪಾಟೀಲ್ ರವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ರವರು ಈ ರೀತಿ ಹೇಳಿಕೆ ನೀಡಿರಬಹುದು. ಎಂದರು. ಜಾತಿಗಣತಿ ವಿವರವನ್ನು ಆನ್ ಲೈನ್ ನಲ್ಲಿಯೂ ಸಲ್ಲಿಸುವ ವ್ಯವಸ್ಥೆಯಿದೆ ಜಾತಿಗಣತಿ ನಡೆಸಲಾಗಿದೆ ಎಂಬ ಪೋಸ್ಟರ್ ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಜಾತಿಗಣತಿಯನ್ನು ನಡೆಸಲು ಹಲವು…
ಬೆಂಗಳೂರು: ನಗರದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿವಾಸದ ಬಳಿಯಲ್ಲಿಯೇ ಗನ್ ಹಿಡಿದುಕೊಂಡು ರಸ್ತೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ರಂಪಾಟ ನಡೆಸಿದಂತ ವೀಡಿಯೋ ವೈರಲ್ ಆಗಿದೆ. ಹೌದು ಬೆಂಗಳೂರಲ್ಲಿ ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ ನಡೆಸಿದ್ದಾರೆ. ಗೃಹ ಸಚಿವರ ಪರಮೇಶ್ವರ್ ನಿವಾಸದ ಬಳಿ ಅಪಾರ್ಟ್ ಮೆಂಟ್ ನಿರ್ಮಾಣದ ಬಳಿಯಲ್ಲಿ ಈ ಘಟನೆ ನಡೆದಿದೆ. ಗ್ರಾನೈಟ್ಗಳನ್ನ ಕಂಟೈನರ್ ಲಾರಿಯೊಂದು ತಂದಿತ್ತು. ಮನೆಗಳ ಮುಂದೆ ಕಾರುಗಳು ನಿಂತಿದ್ದ ಹಿನ್ನೆಲೆಯಲ್ಲಿ ನಿಧಾನವಾಗಿ ಸಾಗುತ್ತಿತ್ತು. ಈ ವೇಳೆ ಏಕಾಏಕಿ ಮನೆಯಿಂದ ಹೊರಗೆ ಬಂದಂತ ನಿವೃತ್ತ ಪೊಲೀಸ್ ಅಧಿಕಾರಿ ಈ ರೀತಿ ರಂಪಾಟ ಮಾಡಿದ್ದಾರೆ. ಬಂದೂಕು ಹಿಡಿದು ಬಂದ ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಅವರು ಚಾಲಕನಿಗೆ ಗನ್ ತೋರಿಸಿ ಫುಲ್ ಅವಾಜ್ ಹಾಕಿದ್ದಾರೆ. ವೈರಲ್ ಆಗಿರುವಂತ ವೀಡಿಯೋದಲ್ಲಿ ಇಲ್ಲಿ ಏಕೆ ಬಂದೆ ಮಗನೇ…? ಇಪ್ಪತ್ತು ವರ್ಷದಿಂದ ಕಟ್ಟುತ್ತಲೇ ಇದ್ದಾರೆ. ನಡಿಯೋ ಇಲ್ಲಿಂದ ಎಂದು ಲಾರಿಯನ್ನು ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿ ಜಯಪ್ರಕಾಶ್ ಮುಂದೆ ಕಳುಹಿಸಿದ್ದಾರೆ. ಈ ಸಂದರ್ಭದಲ್ಲಿ ಸರ್ ವರ್ಕ್ ನಡೆಯುತ್ತಿದೆ. ಗ್ರಾನೈಟ್…
ಬೆಂಗಳೂರು: ಹಾಸನ ಜಿಲ್ಲೆಯು ಸೇರಿದಂತೆ ರಾಜ್ಯದಲ್ಲಿ ಸಂಭವಿಸುತ್ತಿರುವ ಹಠಾತ್ ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆಮಾಡಿ, ತಡೆಯುವ ನಿಟ್ಟಿನಲ್ಲಿ ನಾವು ಸಂಪೂರ್ಣ ಬದ್ಧರಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆಕೊಟ್ಟು, ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಡಾ. ರವೀಂದ್ರನಾಥ್ ಅವರ ನೇತೃತ್ವದ ತಜ್ಞರ ಸಮಿತಿ ವರದಿ ಆಧರಿಸಿ ಅಗತ್ಯ ಕ್ರಮಗಳನ್ನು ಕೂಡ ಕೈಗೊಳ್ಳಲಾಗುವುದು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ…
ಬೆಂಗಳೂರು: ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡುತ್ತೇನೆ. ಬಿಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗಬಾರದು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕೈ ಬಲಪಡಿಸ್ತೀವಿ. ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡುತ್ತೇನೆ. ಬಿಆರ್ ಪಾಟೀಲ್, ಬಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಪಕ್ಷದ ಯಾರೊಬ್ಬರು ಮಾಧ್ಯಮಗಳ ಮುಂದೆ ಹೋಗಬಾರದು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಮತ್ತೊಂದೆಡೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಾತನಾಡಿ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಅಭಿಪ್ರಾಯ ಸಂಗ್ರಹ ಮಾಡಿಲ್ಲ. ಪಕ್ಷದ ಶಾಸಕರ ರಿಪೋರ್ಟ್ ಕಾರ್ಡ್ ಪಡೆಯುತ್ತಿದ್ದೇನೆ. 2 ವರ್ಷದಿಂದ ಕ್ಷೇತ್ರದಲ್ಲಿ ಏನು ಕೆಲಸ ಮಾಡಿದ್ದಾರೆಂಬ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಕಮಿಟಿ, ಅಸೆಂಬ್ಲಿ ಕಮಿಟಿಯ ಸಂಘಟನೆ ಹೇಗಿದೆ ಎಂಬುದಾಗಿಯೂ ವಿವರ ಪಡೆಯುತ್ತಿದ್ದೇನೆ. ಕ್ಷೇತ್ರಕ್ಕೆ ಸಂಬಂಧಿಸಿದ ಸಮಸ್ಯೆ, ಬೇಡಿಕೆಗಳ…
ಶಿವಮೊಗ್ಗ: ಭಾರತೀಯ ಆಯುರ್ವೇದ ಪರಂಪರೆಯಲ್ಲಿ ರುದ್ರಾಕ್ಷಿ ಗೆ ಅತ್ಯಂತ ಮಹತ್ವವಿದೆ ಎಂದು ಸಾರಲಾಗಿದೆ ಎಂದು ಜಡೆ ಸಂಸ್ಥಾನ ಮಠ ಮತ್ತು ಸೊರಬ ಮುರುಘಾ ಮಠದ ಪೂಜ್ಯರಾದ ಡಾ.ಮಹಾಂತ ಮಹಾ ಸ್ವಾಮೀಜಿ ನುಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ನಗರದ ಸಾರ್ವಜನಿಕ ಆಸ್ಪತ್ರೆಯ ಉದ್ಯಾನವನದಲ್ಲಿ ವೈದ್ಯ ದಿನಾಚರಣೆ ಅಂಗವಾಗಿ ರುದ್ರಾಕ್ಷಿ ಗಿಡ ನೆಟ್ಟು ಅವರು ಮಾತನಾಡಿದರು. ಭಾರತೀಯ ಆಯುರ್ವೇದ ಔಷಧ ಪರಂಪರೆಯ ಇತಿಹಾಸದಲ್ಲಿ ರುದ್ರಾಕ್ಷಿ ಗಿಡಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಲೋಕದ ಕಲ್ಯಾಣಕ್ಕಾಗಿ ಭಗವಂತನ ಕಣ್ಣೀರಿನ ಹನಿಯಿಂದ ರುದ್ರಾಕ್ಷಿ ಗಿಡ ಉದ್ಭವವಾಗಿದೆ ಎಂಬ ಪ್ರತೀತಿ ಇದೆ ಎಂದರು. ಜಗತ್ತಿನಲ್ಲಿ ಸ್ವಾರ್ಥ ಗುಣಗಳನ್ನು ಹೊಂದಿದವರನ್ನು ಕಾಣುತ್ತೇವೆ. ಅದರೆ ಮರ, ಗಿಡ, ಬಳ್ಳಿ ,ತರು ಲತೆಗಳಿಗೆ ಸ್ವಾರ್ಥ ಗುಣಗಳಿಲ್ಲ. ಜೊತೆಗೆ ಅವು ಪರೋಪಕಾರ ಗುಣಗಳನ್ನು ಹೊಂದಿರುತ್ತವೆ. ದೇಹದ ವಿವಿಧ ಕಾಯಿಲೆಗಳಿಗೆ, ಚರ್ಮ ರೋಗ ಪೀಡಿದರು ರುದ್ರಾಕ್ಷಿ ಧರಿಸುವುದರಿಂದ ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಮಕ್ಕಳಲ್ಲಿ ಅಧ್ಯಯನದ ಆಸಕ್ತಿಯನ್ನು ಹೆಚ್ಚಿಸುವ ಗುಣವನ್ನು ಹೊಂದಿದೆ ಎಂದರು. ಸೊರಬ ತಾಲೂಕು ಸಾರ್ವಜನಿಕ…