Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೂ ಅನ್ವಯ ಆಗುವಂತೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಕಾರ್ಮಿಕ ಇಲಾಖೆಯ ಸರ್ಕಾರದ ಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ…
ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯದಲ್ಲಿ 6,000 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ 6 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯುವ ಚಿಂತನೆ ಇದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1988577234874208532 ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಮಾತನಾಡಿದ ಅವರು, “ನಾನು ಸಚಿವನಾದ ತಕ್ಷಣ ಪಠ್ಯಪುಸ್ತಕ ಪರಿಷ್ಕರಣೆಗೆ ಸಹಿ ಹಾಕಿದ್ದೇನೆ. ಮಕ್ಕಳಿಗೆ ಶಿಕ್ಷಣ ಇರಬೇಕೇ ಹೊರತು, ಪಠ್ಯಪುಸ್ತಕದಲ್ಲಿ ಯಾವುದೇ ಜಾತಿ-ಧರ್ಮಕ್ಕೆ ಸಂಬಂಧಿಸಿದ, ದಾರಿ ತಪ್ಪಿಸುವ ವಿಚಾರಗಳಿಗೆ ಅವಕಾಶ ನೀಡಬಾರದು ಎಂಬ ದೃಢ ನಿಲುವು ನಮ್ಮದಾಗಿದೆ. ಈ ಕೆಲಸ ಮಾಡುವಾಗ ಟೀಕೆ-ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ,” ಎಂದು ಸ್ಪಷ್ಟಪಡಿಸಿದರು. ಈ ಹಿಂದೆ ಕೇವಲ 308 ಇದ್ದ ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ಸಂಖ್ಯೆಯನ್ನು ತಮ್ಮ ಸರ್ಕಾರ ಒಂದೇ ಬಾರಿಗೆ 900ಕ್ಕೆ ಏರಿಸಿದೆ ಎಂದು ಸಚಿವರು ಹೇಳಿದರು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಗ್ರಾಮೀಣ ಭಾಗದಲ್ಲಿರುವ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಆನ್ ಲೈನ್ ಮೂಲಕ ಪಾಲ್ಗೊಳ್ಳಲು ನವೆಂಬರ್.30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವವರಿಗೆ ಆನ್‌ಲೈನ್ ಮೂಲಕ ಪಾಲ್ಗೊಳ್ಳುವ ಅವಧಿಯನ್ನು 2025ರ ನವೆಂಬರ್ 10ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ನವೆಂಬರ್ 30ರ ವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ https://kscbcselfdeclaration.karnataka.gov.in ಮೂಲಕ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ಅಂತಿಮವಾಗಿ ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಸಮೀಕ್ಷೆಯಲ್ಲಿ ಇದುವರೆಗೂ ಪಾಲ್ಗೊಳ್ಳದೇ ಇರುವವರು ಸದರಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದು. https://twitter.com/KarnatakaVarthe/status/1988544133926109639
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೂ ಅನ್ವಯ ಆಗುವಂತೆ ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇದೀಗ ರಾಜ್ಯದ ವಿವಿಧ ಕಾರ್ಮಿಕ ಕಾಯ್ದೆಗಳ ಅಡಿಯಲ್ಲಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವಂತ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ನೀಡಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಕಾರ್ಮಿಕ ಇಲಾಖೆಯ ಸರ್ಕಾರದ ಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಅದರಲ್ಲಿ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ…
ನವದೆಹಲಿ: ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ಅಲ್ಲದೇ ಇದೊಂದು ಉಗ್ರರ ಹೇಯ ಕೃತ್ಯವೆಂದು ಖಂಡಿಸಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮಹತ್ವದ ಕೇಂದ್ರ ಭದ್ರತಾ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿಯ ಕಾರು ಸ್ಪೋಟ ಭಯೋತ್ಪಾದಕರ ಕೃತ್ಯವೆಂದು ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು, ನವೆಂಬರ್.10ರಂದು ನಡೆದ ಸ್ಪೋಟ ಉಗ್ರರ ಹೇಯ ಕೃತ್ಯವಾಗಿದೆ. ಉಗ್ರರು ನಡೆಸಿದ ಹೇಯ ಕೃತ್ಯವೆಂಬುದಾಗಿ ಹೇಳಿದರು. ನವೆಂಬರ್ 10 ರಂದು ನಡೆದ ದೆಹಲಿ ಭಯೋತ್ಪಾದಕ ಘಟನೆಯನ್ನು ಖಂಡಿಸಿ ಕೇಂದ್ರ ಸಚಿವ ಸಂಪುಟ ಇಂದು ನಿರ್ಣಯವನ್ನು ಅಂಗೀಕರಿಸಿತು ಮತ್ತು ಬಲಿಪಶುಗಳಿಗೆ ಗೌರವ ಸಲ್ಲಿಸಿತು ನವೆಂಬರ್ 10 ರಂದು ಕೆಂಪು ಕೋಟೆ ಬಳಿ ಕಾರು ಸ್ಫೋಟದ ಮೂಲಕ ದೇಶ ವಿರೋಧಿ ಶಕ್ತಿಗಳು ನಡೆಸಿದ ಘೋರ ಭಯೋತ್ಪಾದಕ ಘಟನೆಯನ್ನು ದೇಶ ಕಂಡಿದೆ… ಘಟನೆಯ ತನಿಖೆಯನ್ನು ಅತ್ಯಂತ ತುರ್ತಾಗಿ ಮತ್ತು ವೃತ್ತಿಪರತೆಯಿಂದ ಮುಂದುವರಿಸಬೇಕೆಂದು ಸಚಿವ ಸಂಪುಟ…
ನವದೆಹಲಿ: ನವೆಂಬರ್ 10 ರಂದು ಕೆಂಪು ಕೋಟೆಯ ಬಳಿ ಸಂಭವಿಸಿದ ದೆಹಲಿ ಕಾರು ಸ್ಫೋಟದಲ್ಲಿ ಜೀವಹಾನಿ ಸಂಭವಿಸಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ತೀವ್ರ ದುಃಖ ವ್ಯಕ್ತಪಡಿಸಿದ್ದು, ಇದನ್ನು ರಾಷ್ಟ್ರವಿರೋಧಿ ಶಕ್ತಿಗಳು ನಡೆಸಿದ ‘ಘೋರ ಕೃತ್ಯ’ ಎಂದು ಬಣ್ಣಿಸಿದೆ. ಸಭೆಯ ಆರಂಭದಲ್ಲಿ, ಹಲವಾರು ಜನರು ಸಾವನ್ನಪ್ಪಿ, ಅನೇಕರು ಗಾಯಗೊಂಡ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡವರ ಸ್ಮರಣಾರ್ಥ ಸಂಪುಟ ಎರಡು ನಿಮಿಷಗಳ ಮೌನ ಆಚರಿಸಿತು. ಸಭೆಯ ಸಮಯದಲ್ಲಿ ಅಂಗೀಕರಿಸಲಾದ ಔಪಚಾರಿಕ ನಿರ್ಣಯದಲ್ಲಿ, ಸಚಿವ ಸಂಪುಟವು ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿತು, ಇದನ್ನು ಮುಗ್ಧ ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸಲಾದ ‘ಹೇಯ ಮತ್ತು ಹೇಡಿತನದ ಕೃತ್ಯ’ ಎಂದು ಕರೆದಿದೆ. ‘ದೇಶವು ಕೆಂಪು ಕೋಟೆಯ ಬಳಿ ದೇಶವಿರೋಧಿ ಶಕ್ತಿಗಳು ಕಾರು ಸ್ಫೋಟದ ಮೂಲಕ ನಡೆಸಿದ ಘೋರ ಭಯೋತ್ಪಾದಕ ಘಟನೆಗೆ ಸಾಕ್ಷಿಯಾಗಿದೆ’ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಬೆಂಗಳೂರು : ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಹುಲಿಗಳು ಪದೇ ಪದೇ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಡಿನಂಚಿನ ಪ್ರದೇಶದಲ್ಲಿ ಕ್ಯಾಮರಾ ಅಳವಡಿಸಿ, ಹುಲಿಗಳ ಸಂಚಾರದ ಮೇಲೆ 24×7 ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಅರಣ್ಯ ಭವನದಲ್ಲಿಂದು ಮಾನವ-ವನ್ಯಜೀವಿ ಸಂಘರ್ಷ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರೈತರು ತಮ್ಮ ಹೊಲ, ಗದ್ದೆ, ತೋಟದಲ್ಲಿ ಕೆಲಸಕ್ಕೆ ಬರುತ್ತಾರೆ ವನ್ಯಜೀವಿಗಳು ದಾಳಿ ಮಾಡುತ್ತಿವೆ. ಹೀಗಾಗಿ ಜನ ವಸತಿ, ರೈತರ ಜಮೀನಿನ ಬಳಿ ಕ್ಯಾಮರಾ ಅಳವಡಿಸಿ ನಿಗಾ ಇಟ್ಟು ಮುನ್ನೆಚ್ಚರಿಕೆ ನೀಡಿದರೆ ಜೀವಹಾನಿ, ಬೆಳೆ ಹಾನಿ ತಪ್ಪಿಸಿ ಎಂದರು. ಮಾನವ-ವನ್ಯಜೀವಿ ಸಮಸ್ಯೆಗೆ ಅಲ್ಪಾವಧಿ ಮತ್ತು ದೀರ್ಘಕಾಲೀನ ಪರಿಹಾರ ಕ್ರಮಗಳನ್ನು ರೂಪಿಸಿ. ಥರ್ಮಲ್ ಕ್ಯಾಮರಾಗಳ ನೆರವಿನಿಂದ ನಿಗಾ ಇಡುವುದರ ಜೊತೆಗೆ ಗಸ್ತು ಹೆಚ್ಚಳ ಮಾಡಿ ಎಂದೂ ಸ್ಪಷ್ಟ ಸೂಚನೆ ನೀಡಿದರು. ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಿ: ಬಂಡೀಪುರ ಮತ್ತು ನಾಗರಹೊಳೆಯ ಕಾಡಿನಂಚಿನಲ್ಲಿ…
ಬೆಂಗಳೂರು: ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ, ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ. ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದೂ ಸಚಿವ ಖಂಡ್ರೆ ತಿಳಿಸಿದರು. https://kannadanewsnow.com/kannada/sagar-mla-gopalakrishna-belurs-public-relations-meeting-at-kalmane-received-a-great-response/ https://kannadanewsnow.com/kannada/shock-for-teachers-awaiting-transfer-requests-in-the-state-government-gives-break-until-the-current-academic-year/
ಅಸ್ಸಾಂ: ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ಕಾರು ಸ್ಪೋಟ ಘಟನೆ ಸಂಬಂಧಿಸಿದಂತೆ ಎನ್ಐಎ ತನಿಖೆಯನ್ನು ತೀವ್ರಗೊಳಿಸಿದೆ. ಇದೇ ಹೊತ್ತಿನಲ್ಲಿ ಘಟನೆ ಕುರಿತಂತೆ ಆಕ್ಷೇಪಾರ್ಹ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದಂತ ಐವರನ್ನು ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಶಾಲಾ ಪ್ರಾಂಶುಪಾಲರ ನಂತರ, ದೆಹಲಿ ಸ್ಫೋಟದ ಕುರಿತು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಅಸ್ಸಾಂನಲ್ಲಿ ಇನ್ನೂ 5 ಜನರನ್ನು ಬಂಧಿಸಲಾಗಿದೆ. ಕೋಮು ದ್ವೇಷ ಮತ್ತು ಭಯೋತ್ಪಾದಕ ಕೃತ್ಯಗಳ ವೈಭವೀಕರಣವನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್ ಚಟುವಟಿಕೆಯ ತೀವ್ರ ಕಣ್ಗಾವಲು ನಂತರ ಬಂಧನಗಳನ್ನು ಮಾಡಲಾಗಿದೆ ಎಂದು ಅಸ್ಸಾಂ ಪೊಲೀಸ್ ಮೂಲಗಳು ತಿಳಿಸಿವೆ. https://twitter.com/ndtv/status/1988585330644009459 https://kannadanewsnow.com/kannada/sagar-mla-gopalakrishna-belurs-public-relations-meeting-at-kalmane-received-a-great-response/ https://kannadanewsnow.com/kannada/1-day-of-paid-menstrual-leave-per-month-for-female-employees-state-government-official-order/
ನವದೆಹಲಿ: ಹೈ ಅಲರ್ಟ್ ಹೊರಡಿಸಿದ ಕೆಲವೇ ಗಂಟೆಗಳ ನಂತರ, ದೆಹಲಿ ಪೊಲೀಸರು ಒಂಬತ್ತು ಜನರ ಸಾವಿಗೆ ಕಾರಣವಾದ ಕೆಂಪು ಕೋಟೆ ಮೆಟ್ರೋ ಸ್ಫೋಟಕ್ಕೆ ಸಂಬಂಧಿಸಿದ ಶಂಕಿತ ಕೆಂಪು ಫೋರ್ಡ್ ಇಕೋಸ್ಪೋರ್ಟ್ ಅನ್ನು ಪತ್ತೆಹಚ್ಚಿದ್ದಾರೆ. DL10CK0458 ನೋಂದಣಿ ಸಂಖ್ಯೆಯನ್ನು ಹೊಂದಿರುವ ವಾಹನವು ಹರಿಯಾಣದ ಖಂಡವಾಲಿ ಗ್ರಾಮದ ತೋಟದ ಮನೆಯ ಬಳಿ ಕೈಬಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ದೆಹಲಿ ಕೆಂಪು ಕೋಟೆ ಸ್ಫೋಟ ಸೋಮವಾರ ಸಂಜೆ ಲಾಲ್ ಕ್ವಿಲಾ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರ ಬಳಿ ಹುಂಡೈ i20 ಬೆಂಕಿ ಹೊತ್ತಿಕೊಂಡಾಗ ಮಾರಕ ಸ್ಫೋಟ ಸಂಭವಿಸಿದ್ದು, 12 ಜನರು ಸಾವನ್ನಪ್ಪಿದರು ಮತ್ತು ಹಲವಾರು ಜನರು ಗಾಯಗೊಂಡರು. ಪ್ರಬಲ ಸ್ಫೋಟವು ಹತ್ತಿರದ ಹಲವಾರು ವಾಹನಗಳಿಗೆ ಹಾನಿಯನ್ನುಂಟುಮಾಡಿತು. ಸಂಜೆ 6:55 ಕ್ಕೆ ದೆಹಲಿ ಅಗ್ನಿಶಾಮಕ ಇಲಾಖೆಗೆ ಕರೆ ಬಂದ ತಕ್ಷಣ ತುರ್ತು ತಂಡಗಳು ಪ್ರತಿಕ್ರಿಯಿಸಿದವು. ಬೆಂಕಿಯನ್ನು ನಿಯಂತ್ರಿಸಲು ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಏಳು ಅಗ್ನಿಶಾಮಕ ದಳಗಳನ್ನು ಕಳುಹಿಸಲಾಯಿತು. ಪ್ರಾಥಮಿಕ…














