Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಇಂದು ಘೋರ ಘಟನೆಯೊಂದು ನಡೆದಿದೆ. ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ಮೇಲ್ಸೇತುವೆಯ ಮೇಲಿನಿಂದ ವ್ಯಕ್ತಿಯೊಬ್ಬ ಕಾರಿನ ಮೇಲೆ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರಿನ ಸಿಎಂ ಸಿದ್ಧರಾಮಯ್ಯ ಅವರ ಗೃಹ ಕಚೇರಿ ಕೃಷ್ಣಾದ ಕೂಗಳತೆಯ ದೂರದಲ್ಲಿರುವಂತ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬ ಕೆಳಗೆ ಸಂಚರಿಸುತ್ತಿದ್ದಂತ ಕಾರಿನ ಮೇಲೆ ಬಿದ್ದಿದ್ದಾನೆ. ಸೇತುವೆಯ ಮೇಲಿನಿಂದ ಕಾರಿನ ಮೇಲೆ ಬಿದ್ದಂತ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಮೇಲಿನಿಂದ ಕಾರಿನ ಮೇಲೆ ವ್ಯಕ್ತಿ ಬೀಳುತ್ತಿದ್ದಂತೇ ಕಾರಿನ ಗಾಜು ಪುಡಿಪುಡಿಯಾಗಿದೆ. ಸಂಚರಿಸುತ್ತಿದ್ದಂತ ರೈಲಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೇ ಅಥವಾ ಮೇಲ್ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಹೈಗ್ರೌಂಡ್ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/lok-sabha-elections-to-be-held-on-march-14-or-15-polling-to-be-held-in-7-phases-report/ https://kannadanewsnow.com/kannada/farmer-gets-45-feet-of-2-5-inches-of-water-in-borewells-even-in-summer/
ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳ ಪರ ಹಲವು ಸಚಿವರು ನಿಂತಿರುವುದು ದುರ್ದೈವ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಸ್ಪಷ್ಟವಾಗಿತ್ತು. ಆ ಸಂದರ್ಭದಲ್ಲಿ ಸಚಿವರು ದೇಶ ದ್ರೋಹಿಗಳ ರಕ್ಷಣೆಗೆ ನಿಂತಿದ್ದರು. ಜವಾಬ್ದಾರಿ ಮರೆತು ಕೆಲ ಸಚಿವರು ದೇಶದ್ರೋಹಿಗಳ ಪರ ನಿಂತಿದ್ದು ದುರ್ದೈವ. ಇವರ ನಡೆ ಆತಂತಕ್ಕೆ ಕಾರಣವಾಗಿದೆ ಎಂದು ಹೇಳಿದರು. ಎಫ್ ಎಸ್ ಎಲ್ ರಿಪೋರ್ಟ್ ಬಂದು ನಾಲ್ಕು ದಿನ ಕಳೆದಿದೆ ಎರಡು ದಿನಗಳ ಹಿಂದೆ ಎನ್ ಐಎ ಎಫ್ಐಆರ್ ಮಾಡಿಕೊಂಡಿದಕ್ಕೆ ಮೂವರ ಬಂಧನವಾಗಿದೆ. ಮಾಧ್ಯಮಗಳೇ ಇದನ್ನು ಪ್ರಚೋದಿಸುತ್ತಿವೆ ಎಂದು ಸರ್ಕಾರ ದೂರಿತು. ಪತ್ರಕರ್ತರನ್ನು ಗುರಿ ಮಾಡಿಕೊಂಡು ಮಾತನಾಡಿದರು. ಪಾಕ್ ಪರ ಘೋಷಣೆ ಕೂಗಿದವರ ಸಮರ್ಥನೆ ಮಾಡಿಕೊಂಡವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಅಥಣಿ ತಾಲೂಕಿನ ಅಮ್ಮಾಜೇಶ್ವರಿ ಏತನೀರಾವರಿ ಯೋಜನೆಗೆ ಎರಡನೇ ಬಾರಿಗೆ ಶಂಕುಸ್ಥಾಪನೆ ಮಾಡುತ್ತಿರುವ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ…
ಬೆಂಗಳೂರು: ರಾಜ್ಯದಲ್ಲಿ ಬರಗಾಲವಿದೆ. ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಒಂದು ವೇಳೆ ಕುಡಿಯುವ ನೀರಿನ ವಿಚಾರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ರೇ, ಅಂಥವರನ್ನು ಅಮಾನತುಗೊಳಿಸುವುದಾಗಿ ಸಚಿವ ಶಿವರಾಜ ತಂಡರಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಅಧಿಕಾರಿಗಳು ಹಳ್ಳಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು ಎಂದರು. ನೀರಿನ ಸಮಸ್ಯೆ ವಿಚಾರದಲ್ಲಿ ಯಾರೂ ನಿರ್ಲಕ್ಷ್ಯ ವಹಿಸಬಾರದು. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಒಂದು ವೇಳೆ ಕುಡಿಯುವ ನೀರಿ ವಿಚಾರದಲ್ಲಿ ನಿರ್ಲಕ್ಷ್ಯವನ್ನು ಅಧಿಕಾರಿಗಳು ವಹಿಸಿದರೇ ಅಂತಹ ಅಧಿಕಾರಿಯನ್ನು ಅಮಾನತುಗೊಳಿಸೋದಾಗಿ ಎಚ್ಚರಿಕೆ ನೀಡಿದರು. https://kannadanewsnow.com/kannada/farmer-gets-45-feet-of-2-5-inches-of-water-in-borewells-even-in-summer/ https://kannadanewsnow.com/kannada/lok-sabha-elections-to-be-held-on-march-14-or-15-polling-to-be-held-in-7-phases-report/
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಧಿಕಾರಿ ಹಾಗೂ ಸಿಇಓ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದು, ಹೆಚ್ಚುವರಿಯಾಗಿ 140 ಕೋಟಿ ರೂ.ಗಳ ಜೊತೆಗೆ 70 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು.ಇದು ಸರ್ಕಾರದಿಂದ ನೀಡುವ ಅನುದಾನವಾಗಿದೆ ಎಂದರು. ಕರ್ನಾಟಕದಲ್ಲಿ ಈ ವರ್ಷ ಬರಗಾಲವಿದ್ದು, 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದು, 194 ತೀವ್ರ ಬರಗಾಲ ಪೀಡಿತವಾಗಿವೆ. ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು. ಎಲ್ಲಾ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂ. ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದು ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಿದೆ. ಈವರೆಗೆ 646 ಸಭೆಗಳನ್ನು ಇಲ್ಲಿಯವರೆಗೆ…
ಬೆಂಗಳೂರು : ಹಿರಿಯ ವಕೀಲ ಹಾಗೂ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಕೀಲರ ಸಂಘದ ಉಪಾಧ್ಯಕ್ಷರಾದ ಡಿ.ಎಂ. ಲಿಂಗೇಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ಮೇಲೆ ಕೆಪಿಸಿಸಿಯ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಈ ನೇಮಕ ಮಾಡಿದ್ದಾರೆ. ಮೂಲತಃ ಕನಕಪುರದ ದೊಡ್ಡ ಕಬ್ಬಳ್ಳಿಯವರಾದ ಲಿಂಗೇಗೌಡ ಅವರು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕಳೆದ 28 ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಕೀಲರ ಸಂಘದ ಮ್ಯಾಜಿಸ್ಟ್ರೇಟ್ ಘಟಕದ ಜಂಟಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿರುವ ಲಿಂಗೇಗೌಡ ಪ್ರಸ್ತುತ ಉಪಾಧ್ಯಕ್ಷರಾಗಿದ್ದಾರೆ. https://kannadanewsnow.com/kannada/lok-sabha-elections-to-be-held-on-march-14-or-15-polling-to-be-held-in-7-phases-report/ https://kannadanewsnow.com/kannada/farmer-gets-45-feet-of-2-5-inches-of-water-in-borewells-even-in-summer/
ಚಿತ್ರದುರ್ಗ: ಬೇಸಿಗೆ ಬಂದ್ರೆ ಸಾಕು ಬೋರ್ ಗಳಲ್ಲಿ ಫೇಲ್ ಆಗೋದು ಕಾಮನ್. ಅಯ್ಯೋ ಬೋರಿನಲ್ಲಿ ನೀರು ಬರುತ್ತಿಲ್ಲ. ಮತ್ತೊಂದು ಸಾಲ ಸೂಲ ಮಾಡಿ ಹಾಕಿಸಬೇಕು ಅಂತ ಅದೆಷ್ಟೋ ರೈತರು ಬೆಳೆ ಉಳಿಸಿಕೊಳ್ಳೋದಕ್ಕೆ ಪರದಾಡುತ್ತಾರೆ. ಆದ್ರೇ ಇಲ್ಲೊಬ್ಬ ರೈತ ಹಾಕಿಸಿದಂತ ಬೋರ್ ವೆಲ್ ನಲ್ಲಿ ಕೇವಲ 45 ಅಡಿಗೆ ಬರೋಬ್ಬರಿ 2.5 ಇಂಚು ನೀರು ಬರುತ್ತಿದ್ದಾವೆ. ಅದೆಲ್ಲಿ ಅನ್ನೋ ಬಗ್ಗೆ ಮುಂದೆ ಸುದ್ದಿ ಓದಿ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಈಶ್ವರಗೆರೆ ಗ್ರಾಮದ ಮರಡಪ್ಪ ಎಂಬುವರು ತಮ್ಮ ಹೊಲದಲ್ಲಿ ಮೊದಲು 260 ಅಡಿ ಬೋರ್ ವೆಲ್ ಕೊರೆಸಿದ್ದರು. ಆದ್ರೇ ಅದರಲ್ಲಿ ನೀರು ಸಿಗದೇ ಫೇಲ್ ಆಗಿತ್ತು. ಬೆಳೆಯನ್ನು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಮತ್ತೊಂದು ಬೋರ್ ಅನ್ನು ಹಾಕಿಸಿದಂತ ಅವರಿಗೆ ಅದೃಷ್ಟವೇ ಖುಲಾಯಿಸಿತು ಅನ್ನೋ ಹಾಗೆ ನೀರು ಬರುತ್ತಿದ್ದಾವೆ. ಎರಡನೇ ಬೋರ್ ವೆಲ್ ಅನ್ನು ಮರಡಪ್ಪ ಎಂಬ ರೈತರು 240 ಅಡಿ ಕೊರೆಸಿದ್ದಾರೆ. 45 ಅಡಿಗಳವರೆಗೆ ಸರಿಯಾದ ದಿಂಡು ಸಿಗದ ಕಾರಣ ಕೇಸಿಂಗ್ ಹಾಕಲಾಗಿದೆ. ಆ…
ಬೆಂಗಳೂರು: ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು; ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ನಿಯೋಜಿತವಾಗಿರುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ರಾಜ್ಯ ಸರಕಾರ ಮಾಡಿಸುತ್ತಿರುವ ಗ್ಯಾರಂಟಿ ಸಮೀಕ್ಷೆ ಲಜ್ಜೆಗೇಡಿತನದ ಪರಮಾವಧಿ. ಈ ಮಹಿಳೆಯರಿಗೆ ‘ಗ್ಯಾರಂಟಿ ಸ್ವಯಂ ಸೇವಕರು’ ಅಂತ ಹೆಸರು. ಹಾಗಾದರೆ, ಗ್ಯಾರಂಟಿ ಸಮೀಕ್ಷೆ ಹೆಸರಿನಲ್ಲಿ ತಮಗೆ ಬೇಕುಬೇಕಾದ ಸಂಸ್ಥೆಗಳಿಗೆ ಕೋಟಿ ಕೋಟಿ ಲೆಕ್ಕದಲ್ಲಿ ಸುರಿದ ಜನರ ತೆರಿಗೆ ಹಣ ಎಲ್ಲಿಗೆ ಹೋಯಿತು? ಎಂದು ಪ್ರಶ್ನೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಏನು ಕಿಸಿಯುತ್ತಿದೆ? ಹೆಚ್.ಎಂ.ರೇವಣ್ಣ ಅವರಿಗೆ ಸಂಪುಟದರ್ಜೆ ಕೊಟ್ಟು ರಚಿಸಲಾಗಿರುವ ‘ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ ಏನು ಕಿಸಿಯುತ್ತಿದೆ? ಜಿಲ್ಲೆ, ತಾಲೂಕು, ವಿಧಾನಸಭೆ ಕ್ಷೇತ್ರಗಳ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು…
ನವದೆಹಲಿ: ಇಸ್ರೇಲ್-ಲೆಬನಾನ್ ಗಡಿಯ ಬಳಿ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಮತ್ತು ಇತರ ಇಬ್ಬರು ಗಾಯಗೊಂಡ ಒಂದು ದಿನದ ನಂತರ, ಕೇಂದ್ರವು ಭಾರತೀಯರಿಗೆ ಇಸ್ರೇಲ್ನ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸಲಹೆ ನೀಡಿದೆ. ಚಾಲ್ತಿಯಲ್ಲಿರುವ ಭದ್ರತಾ ಪರಿಸ್ಥಿತಿ ಮತ್ತು ಸ್ಥಳೀಯ ಸುರಕ್ಷತಾ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು, ವಿಶೇಷವಾಗಿ ಉತ್ತರ ಮತ್ತು ದಕ್ಷಿಣದ ಗಡಿ ಪ್ರದೇಶಗಳಲ್ಲಿ ಕೆಲಸ ಮಾಡುವವರು ಅಥವಾ ಭೇಟಿ ನೀಡುವವರಿಗೆ ಇಸ್ರೇಲ್ನೊಳಗಿನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. ನಮ್ಮ ಎಲ್ಲಾ ಪ್ರಜೆಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಯಭಾರ ಕಚೇರಿ ಇಸ್ರೇಲ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ” ಎಂದು ಇಸ್ರೇಲ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆಯಲ್ಲಿ ತಿಳಿಸಿದೆ. ಇಸ್ರೇಲ್-ಹಮಾಸ್ ಯುದ್ಧದಲ್ಲಿ ಮೊದಲ ಭಾರತೀಯ ಸಾವುನೋವು ಸಂಭವಿಸಿದ್ದು, ಉತ್ತರ ಇಸ್ರೇಲ್ನ ಮಾರ್ಗಲಿಯಟ್ನಲ್ಲಿ ನಿನ್ನೆ ನಡೆದ ಕ್ಷಿಪಣಿ ದಾಳಿಯಲ್ಲಿ ಕೇರಳದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹಿಜ್ಬುಲ್ಲಾ ನಡೆಸಿದ ಹೇಡಿತನದ ದಾಳಿಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿ ಇಂದು ಬೆಳಿಗ್ಗೆ ಹೇಳಿಕೆಯಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಲೋಕಸೇವಾ ಆಯೋಗದ ನೂತನ ಕಾರ್ಯದರ್ಶಿಯನ್ನಾಗಿ ಐಎಎಸ್ ಅಧಿಕಾರಿ ಡಾ.ರಾಕೇಶ್ ಕುಮಾರ್ ಕೆ ಅವರನ್ನು ನೇಮಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕೆಪಿಎಸ್ಸಿ ಕಾರ್ಯದರ್ಶಿಯಾಗಿದ್ದಂತ ಲತಾ ಕುಮಾರಿ.ಕೆಎಸ್ ಅವರನ್ನು ಕೂಡಲೇ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಯಾಗಿದ್ದಂತ 2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಡಾ.ರಾಕೇಶ್ ಕುಮಾರ್.ಕೆ ಅವರನ್ನು ನೇಮಿಸಿ ಆದೇಶಿಸಿದೆ. ಇನ್ನೂ 2012ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಲತಾ ಕುಮಾರಿ ಕೆಎಸ್ ಅವರನ್ನು ಕರ್ನಾಟಕ ವಸತಿ ಶಿಕ್ಷಣ ಶಾಲೆಗಳ ಸೊಸೈಟಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿ ನೇಮಿಸಿ ಆದೇಶಿಸಿದೆ. https://kannadanewsnow.com/kannada/for-me-country-comes-first-family-comes-first-pm-narendra-modi/ https://kannadanewsnow.com/kannada/lok-sabha-elections-to-be-held-on-march-14-or-15-polling-to-be-held-in-7-phases-report/
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಚಿಕ್ಕೋಡಿಯಲ್ಲಿ ಇಂದು ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ ಪರ ಇರುವವರನ್ನು ಭಾರತಮಾತೆ ಎಂದೂ ಕ್ಷಮಿಸುವುದಿಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಅವರು ಗಮನ ಸೆಳೆದರು. ಬಡವರು, ಮಹಿಳೆಯರು (ನಾರಿಶಕ್ತಿ), ರೈತರು, ಯುವಜನತೆಯ ಆಶಯಗಳನ್ನು ಈಡೇರಿಸಿದ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಬಿಜೆಪಿ ಸಿದ್ಧಾಂತ ಆಧರಿಸಿದ ಪಕ್ಷ. ಮುಸ್ಲಿಮ್ ಮಹಿಳೆಯರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ನಾವು ಹೇಳಿದ್ದೆವು. ತ್ರಿವಳಿ ತಲಾಖ್ ಪದ್ಧತಿಯನ್ನು ನಾವು ರದ್ದು ಮಾಡಿದ್ದೇವೆ. ಆದರೆ,…