Author: kannadanewsnow09

ವಾರಾಹಿ ಅಮ್ಮನವರು ಇಂದು ಅನೇಕ ಜನರು ವ್ಯಾಪಕವಾಗಿ ಪೂಜಿಸುತ್ತಾರೆ. ವರಗಿ ದೇವಿಯನ್ನು ಪಂಚಮುಖಿ ಎಂದೂ ಕರೆಯುತ್ತಾರೆ ಏಕೆಂದರೆ ವರಗಿ ಅಮ್ಮನ್ ಸಪ್ತ ಕನ್ಯೆಯರಲ್ಲಿ ಐದನೆಯವಳು, ರಾಜರಾಜೇಶ್ವರಿಯ ರಕ್ಷಕ ದೇವತೆ ಎಂದು ಅರ್ಥೈಸಬಹುದು. ಅಂತಹ ಪಂಚಮುಖಿ ದೇವಿಯನ್ನು ನಾವು ಯಾವುದೇ ರೀತಿಯಲ್ಲಿ ಪೂಜಿಸಿದರೆ ನಾವು ಅಂದುಕೊಂಡಂತೆ ಆಗುತ್ತದೆ ಎಂಬುದನ್ನು ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನಾವು ನೋಡಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…

Read More

ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಸಿಸಿಬಿಯಿಂದ ಇಂದು ಸ್ಥಳ ಮಹಜರು ನಡೆಸಲಾಯಿತು. ಈ ಮೂಲಕ ಸ್ಪೋಟಕ ಪ್ರಕರಣ ಸಂಬಂಧ ಮಹತ್ವದ ತನಿಖೆಯನ್ನು ಕೈಗೊಂಡಿದ್ದಾರೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಕ ಪ್ರಕರಣ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ವಿವಿಧ ರಾಜಕೀಯ ನಾಯಕರು ಗಾಯಾಳುಗಳನ್ನು ಭೇಟಿಯಾಗಿ ಸಂತೈಸಿದ್ದರು. ರಾಜ್ಯ ಸರ್ಕಾರದಿಂದ ಗಾಯಾಳುಗಳ ಚಿಕಿತ್ಸೆ ಭರಿಸುವುದಾಗಿ ಘೋಷಣೆ ಕೂಡ ಮಾಡಲಾಗಿತ್ತು. ಇಂದು ಸಿಸಿಬಿಯ ತನಿಖಾಧಿಕಾರಿ ನವೀನ್ ಕುಲಕರ್ಣಿಯವರ ನೇತೃತ್ವದ ತಂಡವು ರಾಮೇಶ್ವರಂ ಕೆಫೆಯ ಮ್ಯಾನೇಜರ್, ಸಿಬ್ಬಂದಿಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದೆ. ಈ ಮೂಲಕ ಸಿಸಿಬಿ ಟೀಂ ನಿಂದ ಸ್ಥಳ ಮಹಜರು ನಡೆಸಲಾಗಿದೆ. https://kannadanewsnow.com/kannada/wtc-india-jump-back-to-no-1-spot-hitman-rohits-captaincy-is-praised/ https://kannadanewsnow.com/kannada/rameswaram-cafe-blast-case-fsl-probe-reveals-2-chemical-blasts/

Read More

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣದಲ್ಲಿ ಎರಡು ಕೆಮಿಕಲ್ಸ್ ಬಳಸಿರೋದು FSL ತನಿಖೆಯಲ್ಲಿ ಪತ್ತೆಯಾಗಿದೆ. ಸ್ಥಳೀಯವಾಗಿ ಸಿಗುವಂತ ಈ ಎರಡು ಕೆಮಿಕಲ್ಸ್ ಬಳಸಿಯೇ ಸ್ಪೋಟವನ್ನು ಮಾಡಿರೋದಾಗಿ ಈಗ ಬಹಿರಂಗವಾಗಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಸ್ಪೋಟ ಪ್ರಕರಣ ಸಂಬಂಧ ವಿವಿಧ ಆಯಾಮಗಳಿಂದ ಸಿಸಿಬಿ ತನಿಖೆ ನಡೆಸುತ್ತಿದೆ. ಇದರ ನಡುವೆ ಎಫ್ಎಸ್ಎಲ್ ತಜ್ಞರು ಕೂಡ ಸ್ಥಳದಲ್ಲಿ ಸಿಕ್ಕಿರುವಂತ ಸ್ಪೋಟಕ ಸಾಮಾಗ್ರಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ತನಿಖೆ ನಡೆಸುತ್ತಿದೆ. ಇದೀಗ ರಾಮೇಶ್ವರಂ ಕೆಫೆಯಲ್ಲಿನ ಬ್ಲಾಸ್ಟ್ ನಡೆದಂತ ಸ್ಥಳದಲ್ಲಿ ಪತ್ತೆಯಾದಂತ ವಸ್ತುಗಳಲ್ಲಿ ಎರಡು ರಾಸಾಯನಿಕ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಪೊಟ್ಯಾಷಿಯಂ ನೈಟ್ರೇಟ್ ಹಾಗೂ ಹೈಡ್ರೋಜನ್ ಪಾರಾಕ್ಸೈಡ್ ಬಳಸಿ ಈ ಸ್ಪೋಟಕವನ್ನು ದುಷ್ಕರ್ಮಿಗಳು ನಡೆಸಿರೋದಾಗಿ ತಿಳಿದು ಬಂದಿದೆ. ಈಗಾಗಲೇ ಸುಧಾರಿತ ಐಇಡಿ ಬಳಸಿ ಬಾಂಬ್ ಸ್ಪೋಟಿಸಿರೋದಾಗಿ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿತ್ತು. ಸ್ಥಳದಲ್ಲಿ ಬ್ಯಾಟರಿ, ಟೈಮರ್ ಕೂಡ ದೊರೆತಿತ್ತು. ಈಗ ಸ್ಪೋಟಕದಲ್ಲಿ ಯಾವೆಲ್ಲ ರಾಸಾಯನಿಕ ಬಳಸಲಾಗಿದೆ ಎಂಬುದಾಗಿ ಎಫ್ಎಸ್ಎಲ್ ತಂಡದ ತನಿಖೆಯಲ್ಲಿ ಪತ್ತೆಯಾಗಿದೆ. https://kannadanewsnow.com/kannada/rameswaram-cafe-blast-case-exclusive-evidence-has-been-found-against-the-accused-says-home-minister/…

Read More

ಬೆಂಗಳೂರು: ನಗರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಆರೋಪಿಗಳ ಬ್ಗಗೆ ಕೆಲವು ಎಕ್ಸ್ ಕ್ಲೂಸಿವ್ ಕುರುಹುಗಳು ಸಿಕ್ಕಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತಂತೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ತನಿಖೆ ಹಾಗೂ ಮುಂದೆ ಕೈಗೊಳ್ಳಬೇಕಾಗಿರುವಂತ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿರುವಂತ ಆರೋಪಿಯ ಚಹರೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಶೀಲಿಸಿ, ಆತನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ರಾಮೇಶ್ವಂರ ಕೆಫೆಯಲ್ಲಿ ಸಂಭವಿಸಿದಂತ ಬಾಂಬ್ ಸ್ಪೋಟ ಪ್ರಕರಮದ ಆರೋಪಿಯ ಬಗ್ಗೆ ಕೆಲವು ಪ್ರಮುಖವಾದಂತ ಕುರುಹುಗಳು ಸಿಕ್ಕಿದ್ದಾವೆ. ಹೀಗಾಗಿ ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂಬುದಾಗಿ ಹೇಳಿದರು. https://kannadanewsnow.com/kannada/wtc-india-jump-back-to-no-1-spot-hitman-rohits-captaincy-is-praised/ https://kannadanewsnow.com/kannada/sumalatha-ambareesh-i-will-get-100-bjp-jds-alliance-ticket-in-mandya/

Read More

ಮಂಗಳೂರು: ಜಿಲ್ಲೆಯ ತುಳುನಾಡಿನ ಪುರಾಣ ಪ್ರಸಿದ್ಧ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಕಟ್ಟಡವನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಈ ಘಟನೆ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತುಳುನಾಡಿನ ಪುರಾಣ ಪ್ರಸಿದ್ಧ ಕ್ಷೇತ್ರಗಳಲ್ಲಿ ಒಂದು ಕೊಂಡಾಣ ಪಿಲಿಚಾಮುಂಡಿ ದೇವಸ್ಥಾನ. ಈ ದೇವಸ್ಥಾನವನ್ನು ಬಣ ಸಂಘರ್ಷದ ಕಾರಣದಿಂದಾಗಿ ರಾತ್ರೋ ರಾತ್ರಿ ಜೆಸಿಬಿ ಬಳಸಿ ಕೆಡವಲಾಗಿತ್ತು. ಈ ನಿರ್ಮಾಣ ಹಂತದ ದೇವಸ್ಥಾನವನ್ನು ಕೆಡವಿದ ಸಂಬಂಧ ಕೋಟೆಕಾರು ಪಟ್ಟಣ ಪಂಚಾಯ್ತಿಯ ಮುಖ್ಯಾಧಿಕಾರಿ ಆನಂದ್ ಎಂಬುವರು ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಂದು ಉಳ್ಳಾಳ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುತ್ತಣ್ಣ ಶೆಟ್ಟಿ, ಧೀರಜ್ ಹಾಗೂ ಶಿವರಾಜ್ ಎಂಬುದಾಗಿ ಗುರುತಿಸಲಾಗಿದೆ. ಇದೀಗ ಅವರನ್ನು ಬಂಧಿಸಿ, ಘಟನೆ ಸಂಬಂಧ ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/harsh-vardhan/ https://kannadanewsnow.com/kannada/wtc-india-jump-back-to-no-1-spot-hitman-rohits-captaincy-is-praised/

Read More

ಬೆಂಗಳೂರು: ಹೊಸಕೋಟೆ ಬಳಿಯ ಕರಿಬೀರನಹೊಸಹಳ್ಳಿ ಬಳಿಯಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರೋ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿಯಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರೋದಾಗಿ ತಿಳಿದು ಬಂದಿದೆ. ಮೃತರನ್ನು ಮುನಿಯಪ್ಪ(70), ಮುನಿಯಮ್ಮ (60) ಹಾಗೂ ಭಾರತಿ (40) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿಗಳು ಮೃತ ದೇಹಗಳನ್ನು ಹೊರತೆಗೆದಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಹೊಸಕೋಟೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/bjp-is-tarnishing-the-image-of-the-state-for-political-gains-dk-shivakumar-shivakumars-speech/ https://kannadanewsnow.com/kannada/harsh-vardhan/

Read More

ಬೆಂಗಳೂರು : “ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ಕಾರಿದರು. ಇಂದು ಬಾಂಬ್ ಸ್ಫೋಟ ವಿಚಾರವಾಗಿ ಬಿಜೆಪಿ ನಾಯಕರ ರಾಜಕೀಯ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, “ಬಾಂಬ್ ಸ್ಫೋಟ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅವರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ತನಿಖೆ. ವಿಚಾರವಾಗಿ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲಾಗುತ್ತಿದೆ. ಬೆಂಗಳೂರಿನ ಗೌರವ ರಕ್ಷಣೆಗೆ ಏನು ಮಾಡಬೇಕೋ ಅದನ್ನು ಮಾಡುತ್ತೇವೆ ಎಂದರು. ಈ ಮಧ್ಯೆ ಬಿಜೆಪಿ ನಾಯಕರು ಈ ವಿಚಾರವಾಗಿ ರಾಜಕೀಯ ಮಾಡಲು ಮುಂದಾಗಿದ್ದಾರೆ. ಅದಕ್ಕಾಗಿ ಕರ್ನಾಟಕ ರಾಜ್ಯ ಹಾಗೂ ಬೆಂಗಳೂರಿನ ಘನತೆಗೆ ಧಕ್ಕೆ ತರುತ್ತಿದ್ದಾರೆ. ಆಮೂಲಕ ತಮ್ಮ ಗೌರವವನ್ನೂ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದರು. ಅವರ ಕಾಲದಲ್ಲಿ ಏನೆಲ್ಲಾ ಆಗಿದೆ ಎಂದು ಮರೆತಿದ್ದಾರೆ. ಅವರು ತಮ್ಮ ಮುಖವನ್ನೊಮ್ಮೆ ಕನ್ನಡಿಯಲ್ಲಿ ನೋಡಿಕೊಳ್ಳಲಿ. ಈ ವಿಚಾರವಾಗಿ…

Read More

ಚಿಕ್ಕಮಗಳೂರು: ಮಲೆನಾಡ ಭಾಗದಲ್ಲಿ ಕಾಫಿ ಪ್ಲಾಂಟರ್ಸ್ ಗಳ ಬಹುದಿನಗಳ ಬೇಡಿಕೆಯಾಗಿದ್ದ ಕಾಫಿ ಪ್ಲಾಂಟೇಷನ್ ಲೀಸ್ ಮೇಲೆ ನೀಡುವ ಕುರಿತು ನಮ್ಮ ಸರ್ಕಾರ ತೀರ್ಮಾನ ಕೈಗೊಂಡಿದೆ. ಶೀರ್ಘದಲ್ಲಿ ಈ ಕುರಿತು ಅರ್ಜಿಗಳನ್ನು ಆಹ್ವಾನಿಸಲು ಕ್ರಮ ಕೈಗೊಳ್ಳಲಿದೆ. ಇದರಿಂದ ಕಾಫಿ ಬೆಳೆಗಾರ ಸಮುದಾಯಕ್ಕೆ ಮತ್ತು ಬಹಳಷ್ಟು ಜನರಿಗೆ ಅನುಕೂಲ‌ ಆಗಲಿದೆ ಎಂದು, ತಜ್ಷಣ ನಿಯಮಗಳನ್ನು ರೂಪಿಸುವಂತೆ DC, CEO ಗಳಿಗೆ ಸೂಚಿಸಿದರು. ಗ್ಯಾರಂಟಿ ಯೋಜನೆಗಳಿಂದ ಚಿಕ್ಕಮಗಳೂರು ಜಿಲ್ಲೆಯ ಜನರ ಖಾತೆಗೆ ಜಮೆ ಆದ ಹಣ ಎಷ್ಟು ಗೊತ್ತಾ? ಶಕ್ತಿ ಯೋಜನೆಯಲ್ಲಿ ಇದುವರೆಗೂ ಒಟ್ಟು 1 ಕೋಟಿ 52 ಲಕ್ಷ ಹೆಣ್ಣು ಮಕ್ಕಳು ವಿಶೇಷ ಪ್ರಯೋಜನ ಪಡೆದಿದ್ದಾರೆ. ಈ ಬಾಬ್ತು ರೂ.55 ಕೋಟಿ 71 ಲಕ್ಷ ವೆಚ್ಚವಾಗಿರುತ್ತದೆ. ಅಲ್ಲದೇ ಚಿಕ್ಕಮಗಳೂರು ಜಿಲ್ಲೆಯ ಧಾರ್ಮಿಕ ಸ್ಥಳಗಳಿಗೆ ಮತ್ತು ಪ್ರವಾಸಿ ತಾಣಗಳಿಗೆ ಬರುವ ಹೆಣ್ಣುಮಕ್ಕಳ ಸಂಖ್ಯೆಯಲ್ಲಿಯೂ ಗಣನೀಯವಾಗಿ ಹೆಚ್ಚಳವಾಗಿದೆ. ಈ ಮೂಲಕ ರಾಜ್ಯದ ಆರ್ಥಿಕ ಚಟುವಟಿಕೆಯೂ ಸಹ ಹೆಚ್ಚಾಗಿರುವುದನ್ನು ಗಮನಿಸಬಹುದಾಗಿದೆ ಎಂದರು. 200 ಯೂನಿಟ್‍ ಗಿಂತ ಕಡಿಮೆ ಗೃಹ ವಿದ್ಯುತ್…

Read More

ಚಿಕ್ಕಮಗಳೂರು: ಜೆಡಿಎಸ್, ಬಿಜೆಪಿ ನಾಯಕರಿಗೆ ತಾಕತ್ತು, ಧಮ್ ಇದ್ದರೇ ಒಂದೇ ವೇದಿಕೆಗೆ ಬರಲಿ. ಗ್ಯಾರಂಟಿ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ಪಿಎಂ ಮೋದಿ ಹೇಳಿದ್ದರು. ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದಿದ್ದರು. ಆದರೇ ಆಯ್ತಾ.? ಈ ಬಗ್ಗೆ ಚರ್ಚಿಸಲು ಬಹಿರಂಗವಾಗಿ ವೇದಿಕೆಗೆ ಬರಲಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಸವಾಲ್ ಹಾಕಿದ್ದಾರೆ. ನಗರದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮೌಲ್ಯವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಸರ್ವರ ಉದಯಕ್ಕಾಗಿನೇ ಕಾಂಗ್ರೆಸ್ ಶ್ರಮಿಸುತ್ತಿದೆ. ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ನಾಲ್ಕೂವರೆ ಕೋಟಿ ಜನರ ಮನೆ ಬಾಗಿಲು ಬಡಿದಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು. ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಭಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ…

Read More

ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಹತ್ಯೆಗಳಗಾದ ಪಕ್ಷದ ಇಬ್ಬರು ಕಾರ್ಯಕರ್ತರ ಕುಟುಂಬಗಳ ಸದಸ್ಯರನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಸೋಮವಾರ ಮಧ್ಯಾಹ್ನ ಕಲಬುರಗಿ ರೈಲು ನಿಲ್ದಾಣದಲ್ಲಿ ಅಯೋಧ್ಯೆಗೆ ತೆರಳಲಿರುವ ಭಕ್ತರ ಪ್ರಯಾಣಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಅವರು ಆಳಂದ ಮತ್ತು ಅಫಜಲಪುರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದಾರೆ. ಆಳಂದ ತಾಲ್ಲೂಕಿನ ಸರಸಂಬ ಗ್ರಾಮಕ್ಕೆ ತೆರಳಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಹನುಮಂತಪ್ಪ ಆಲೂರೆ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಆಲೂರೆ ಅವರ ಕುಟುಂಬ ಸದಸ್ಯರ ಜತೆ ಸಮಾಲೋಚನೆ ನಡೆಸಿ ಅವರಿಗೆ ಸಾಂತ್ವನ ಹೇಳಲಿದ್ದಾರೆ. ಬಳಿಕ ಅಫಜಲಪುರ ತಾಲ್ಲೂಕಿನ ಸಾಗನೂರ ಗ್ರಾಮಕ್ಕೆ ತೆರಳಿ ಹತ್ಯೆಗೊಳಗಾಗಿರುವ ಬುಜೆಪಿ ಯುವ ಮೋರ್ಚಾ ಕಾರ್ಯಕರ್ತ ಗಿರೀಶ್ ಚಕ್ರ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ. ಬಳಿಕ ಬಾಗಲಕೋಟಗೆ ತೆರಳಿ ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ. ಮಂಗಳವಾರ ಬೆಳಗಾವಿಗೆ ಪ್ರಯಾಣ ಬೆಳೆಸುವ ಅಶೋಕ್ ಅವರು ಸಂಜೆ ಕೆಎಲ್…

Read More