Author: kannadanewsnow09

ಶಿವಮೊಗ್ಗ : ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿ ಮಾತನಾಡಿ, ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ. ಮೊದಲ ಗ್ಯಾರಂಟಿ ಯೋಜನೆಯಿಂದಾಗಿ 130 ಕೋಟಿ 28 ಲಕ್ಷ ಮಹಿಳೆಯರು, ಯುವತಿಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. 1…

Read More

ದೊಡ್ಡಬಳ್ಳಾಪುರ: ರೈತರು ಬ್ಯಾಂಕ್ ನಲ್ಲಿ ಇರಿಸಲಾಗಿದ್ದಂತ ಹಣವನ್ನು ಏಕಾಏಕಿ ಕಡಿತಗೊಂಡಿದ್ದರಿಂದ ಅಚ್ಚರಿಯಿಂದ ಬ್ಯಾಂಕ್ ಮುಂದೆ ಜಮಾಯಿಸಿದಂತ ಘಟನೆ ದೊಡ್ಡಬಳ್ಳಾಪುರದ ತೂಬಗೆರೆಯ ಯೂನಿಯನ್ ಬ್ಯಾಂಕ್ ನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿರುವಂತ ಯೂನಿಯನ್ ಬ್ಯಾಂಕ್ ನಲ್ಲಿ ರೈತರು ಹಣವನ್ನು ಇರಿಸಿದ್ದರು. ಈ ಹಣವನ್ನು ಏಕಾಏಕಿ ಕಡಿತಗೊಳಿಸಿರೋ ಬಗ್ಗೆ ಸಂದೇಶ ಬಂದಿತ್ತು. ಸಂದೇಶ ನೋಡಿದಂತ ರೈತರು ಎದ್ದನೋ ಬಿದ್ದನೋ ಅಂತ ಯೂನಿಯನ್ ಬ್ಯಾಂಕ್ ಬಳಿಗೆ ಓಡೋಡಿ ಹೋಗಿ, ಹಣ ಕಡಿತವಾದಂತ ಬಗ್ಗೆ ಬ್ಯಾಂಕ್ ಸಿಬ್ಬಂದಿಯನ್ನು ವಿಚಾರಿಸಿದಾಗ ಸರಿಯಾದ ಉತ್ತರ ನೀಡಲಿಲ್ಲ. ಸಿಬ್ಬಂದಿ ಸರಿಯಾಗಿ ಉತ್ತರಿಸಿದ ಕಾರಣ ರೈತರು ಯೂನಿಯನ್ ಬ್ಯಾಂಕ್ ಮುಂದೆ ಜಮಾಯಿಸಿ ಸಾವಿರಾರೂ ರೂಪಾಯಿ ಹಣ ಕಡಿತ ಯಾಕೆ ಆಗಿದೆ ಅಂತ ಮಾಹಿತಿ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/debris-of-iafs-an-32-aircraft-that-mysteriously-went-missing-in-2016-found-after-8-years/ https://kannadanewsnow.com/kannada/pm-modi-inaugurate-mumbai-trans-harbour-link/

Read More

ಬೆಂಗಳೂರು: ನಿಯಮ ಮೀರಿ ತಡರಾತ್ರಿ ಪಬ್ ನಲ್ಲಿ ಪಾರ್ಟಿ ಮಾಡಿದಂತ ನಟ ದರ್ಶನ್ ( Actor Darshan ) ಸೇರಿದಂತೆ ಹಲವು ಸೆಲೆಬ್ರೆಟಿಗಳಿಗೆ ನೋಟಿಸ್ ನೀಡಿ, ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ನಟ ದರ್ಶನ್ ಅವರು ಬೆಂಗಳೂರಿನ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯ ವಿಚಾರಣಾಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗಿದ್ದಾರೆ. ಜೆಟ್ ಲ್ಯಾಬ್ ನಲ್ಲಿ ತಡರಾತ್ರಿ ಪಾರ್ತಿ ಮಾಡಿದಂತ ಪ್ರಕರಣ ಸಂಬಂಧ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರು ನಟ ದರ್ಶನ್, ನಿನಾನಸಂ ಸತೀಶ್ ಸೇರಿದಂತೆ ವಿವಿಧ ಸ್ಯಾಂಡಲ್ ವುಡ್ ನಟರಿಗೆ ನೋಟಿಸ್ ನೀಡಿದ್ದರು. ಈ ನೋಟಿಸ್ ಗೆ ಈಗಾಗಲೇ ಹಲವು ಸೆಲೆಬ್ರೆಟಿಗಳು ಪೊಲೀಸರ ಮುಂದೆ ವಿಚಾರಣೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದರು. ದುಬೈ ಪ್ರವಾಸದಲ್ಲಿದ್ದಂತ ನಟ ದರ್ಶನ್ ಮಾತ್ರ ಹಾಜರಾಗಿರಲಿಲ್ಲ. ಇದೀಗ ದುಬೈನಿಂದ ವಾಪಾಸ್ ಆಗಿರುವ ಹಿನ್ನಲೆಯಲ್ಲಿ ಅವರು ಕೂಡ ಸುಬ್ರಹ್ಮಣ್ಯ ನಗರ ಠಾಣೆಯ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಆರ್ ಆರ್ ನಗರದ ತಮ್ಮ ನಿವಾಸದಿಂದ ತೆರಳಿದಂತ…

Read More

ಬೆಂಗಳೂರು: ನಮ್ಮ ಮೆಟ್ರೋ ಎಂಡಿಯಾಗಿದ್ದಂತ ಅಂಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಎಂ.ಮಹೇಶ್ವರ ರಾವ್ ಅವರನ್ನು ನೇಮಿಸಿತ್ತು. ಇಂತಹ ಅವರು ಇಂದು ಬಿಎಂಆರ್ ಸಿಎಲ್ ನೂತನ ಎಂ.ಡಿಯಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಎಂ. ಮಹೇಶ್ವರ ರಾವ್, ಭಾ.ಆ.ಸೇ ಅವರು ಇಂದು ದಿನಾಂಕ 12.01.2024 ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮೊದಲು ಅವರು ಬೆಂಗಳೂರಿನ ಬಾಹ್ಯಾಕಾಶ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಹಣಕಾಸು ಸಲಹೆಗಾರ ಹುದ್ದೆಯನ್ನು ಹೊಂದಿದ್ದರು. ಎಂ. ಮಹೇಶ್ವರ ರಾವ್, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ನಿಜಾಮ್ ಕಾಲೇಜಿನಲ್ಲಿ ಗಣಿತ, ಅರ್ಥಶಾಸ್ತ್ರ ಮತ್ತು ಅಂಕಿಅಂಶಗಳಲ್ಲಿ ಬಿಎ, ಹೈದರಾಬಾದ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ NUS ಮತ್ತು ಹಾರ್ವಡ್ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕರ್ನಾಟಕ ಸರ್ಕಾರದಲ್ಲಿ ಹಲವಾರು ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಮಂಡ್ಯ, ಮಂಗಳೂರು, ಬೆಳಗಾವಿ ಮತ್ತು ಹಾಸನ ಜಿಲ್ಲಾಧಿಕಾರಿಯಾಗಿ ಸೇವೆ…

Read More

ಶಿವಮೊಗ್ಗ: ನಗರದಲ್ಲಿನ ಫ್ರೀಡಂ ಪಾರ್ಕ್ ಗೆ ಈವರೆಗೆ ಯಾವುದೇ ಹೆಸರಿಟ್ಟಿರಲಿಲ್ಲ. ಇಂತಹ ಪಾರ್ಕಿಗೆ ಅಲ್ಲಮ ಪ್ರಭು ಅವರ ಹೆಸರಿಡೋದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಯುವನಿಧಿ ಯೋಜನೆಗೆ ಚಾಲನೆ ನೀಡಿದ ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಅಲ್ಲಮಪ್ರಭು ಅವರಿಂದಲೇ ಇಲ್ಲಿ ಪ್ರಜಾಪ್ರಭುತ್ವ ಸ್ಥಾಪನೆ ಆಯಿತು: ಫ್ರೀಡಂಪಾರ್ಕಿಗೆ ಅಲ್ಲಮ ಪ್ರಭು ಹೆಸರು ಇಡೋದಾಗಿ ಸಿ.ಎಂ.ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ ಇಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಶಿವಮೊಗ್ಗ ಜಿಲ್ಲೆಯವರೇ ಆದ ಬಸವಾದಿ ಶರಣ ಅಲ್ಲಮ ಪ್ರಭುವಿಗೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಡುವ ಗೌರವ ಎಂದು ಬಣ್ಣಿಸಿದರು. ಮುಖ್ಯಮಂತ್ರಿಗಳು ಅಲ್ಲಮ ಪ್ರಭುವಿನ ಹೆಸರನ್ನು ಘೋಷಿಸುತ್ತಿದ್ದಂತೆ ನೆರೆದಿದ್ದ ಲಕ್ಷಾಂತರ ಮಂದಿ ಕುಳಿತಿದ್ದ ಕುರ್ಚಿಗಳಿಂದ ಮೇಲೆದ್ದು ಚಪ್ಪಾಳೆ ತಟ್ಟಿ ಕುಣಿದು, ಕೂಗಿ ಸಂಭ್ರಮದಿಂದ ಸ್ವಾಗತಿಸಿದರು. https://kannadanewsnow.com/kannada/ksrtc-bus-bike-collision-in-kalaburagi-two-riders-killed-on-the-spot/ https://kannadanewsnow.com/kannada/pm-modi-cleans-kalaram-temple-premises-in-nashik/

Read More

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಯುವನಿಧಿ ಯೋಜನೆಗೆ ನೋಂದಾಯಿಸಿಕೊಂಡಂತ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಚೆಕ್ ವಿತರಣೆ ಮಾಡುವ ಮೂಲಕ ಯುವನಿಧಿ ಯೋಜನೆಗೆ ಅಧಿಕೃತವಾಗಿ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಯನ್ನು ಉದ್ಘಾಟಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕ್ರೀಡಾ ಸಚಿವ ನಾಗೇಂದ್ರ, ಮೀನುಗಾರಿಕಾ ಸಚಿವ ಮಾಂಕಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಏನಿದು ಯುವನಿಧಿ ಯೋಜನೆ.? ಇಂದು ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಯನ್ನು ಜಾರಿಗೊಳಿಸಲಾಗುತ್ತಿದೆ. ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ…

Read More

ಶಿವಮೊಗ್ಗ : ಬಡವರು ಹಾಗೂ ಮಧ್ಯಮ ವರ್ಗದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬಿ ಮುಖ್ಯವಾಹಿನಿಗೆ ಬರುವಂತಾಗಬೇಕೆಂಬ ಉದ್ದೇಶದಿಂದ ಸಾರ್ವತ್ರಿಕ ಮೂಲ ಆದಾಯದ ತತ್ವದಂತೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 1.18 ಕೋಟಿ ಮಹಿಳಾ ಯಜಮಾನಿಗೆ ತಿಂಗಳಿಗೆ 2000 ನೀಡುತ್ತಿರುವುದು ಸತ್ಯವಲ್ಲವೇ ? ಇದುವರೆಗೆ ಯಾವುದೇ ಜಾತಿ ಧರ್ಮ ಭಾಷೆ ಬೇಧವಿಲ್ಲದೇ 130 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಮೂಲಕ ಉಚಿತವಾಗಿ ಪ್ರಯಾಣಿಸಿರುವುದು ಸುಳ್ಳಾಗುವುದು ಸಾಧ್ಯವೇ? 200 ಯೂನಿಟ್ ವರೆಗೆ ಉಚಿತ ವಿದ್ಯುತ್1.51 ಕೋಟಿ ಜನರಿಗೆ ನೀಡಲಾಗುತ್ತಿದೆ. ಅನ್ನಭಾಗ್ಯ ಯೋಜನೆಯಡಿ 170 ರೂ. ಫಲಾನುಭವಿಗಳಿಗೆ ತಲುಪುತ್ತಿದೆ. ಈ ಎಲ್ಲ ಸತ್ಯಗಳನ್ನು ಪರಿಶೀಲನೆ ನಡೆಸಿ ಮಾಧ್ಯಮದವರು ಸತ್ಯವಾದುದನ್ನು ಬರೆಯಬೇಕು ಎಂದರು. ಬಡವರಿಗೆ ಆರ್ಥಿಕ ಶಕ್ತಿ ತುಂಬಬೇಕು ಗ್ಯಾರಂಟಿ ಯೋಜನೆಗಳಿಂದ ಒಂದು ಕುಟುಂಬ ಕ್ಕೆ 4 ರಿಂದ 5 ಸಾವಿರ ರೂ.ಗಳು ಸೇರುತ್ತಿದ್ದು, ವರ್ಷಕ್ಕೆ 48 ರಿಂದ 50 ಸಾವಿದ…

Read More

ಶಿವಮೊಗ್ಗ : ಶ್ರೀರಾಮಚಂದ್ರನನ್ನು ಬಳಸಿಕೊಂಡು ಬಿಡೆಪಿ ಮಾಡುತ್ತಿರುವ ರಾಜಕೀಯವನ್ನು ವಿರೋಧಿಸುತ್ತೇನೆ. ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ರಾಜಕೀಯ ಮಾಡಲು ಹೊರಟಿದೆ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಿಸಿ ಬಿಜೆಪಿ ರಾಜಕೀಯ ಮಾಡಲು ಹೊರಟಿದ್ದಾರೆ. ದೇವರನ್ನು ರಾಜಕೀಯವಾಗಿ ಬಿಜೆಪಿ ಬಳಸಿಕೊಳ್ಳುವುದನ್ನು ನಾವು ವಿರೋಧಿಸುತ್ತೇವೆಯೇ ಹೊರತು ಶ್ರೀ ರಾಮಚಂದ್ರನನ್ನು ವಿರೋಧಿಸುವುದಿಲ್ಲ. 22 ನೇ ತಾರೀಖಿನ ನಂತರ ಅಯೋಧ್ಯೆಗೆ ಭೇಟಿ ನೀಡುವುದಾಗಿ ಹೇಳಿದರು. ಇಡೀ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರು ಕೂಡ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡುತ್ತಾರೆ. ದೇವರನ್ನು ಬಳಸಿ ಬಿಜೆಪಿ ಮಾಡುತ್ತಿರುವ ರಾಜಕೀಯವನ್ನು ನಾವು ವಿರೋಧಿಸುತ್ತೇವೆ ಎಂದರು. ಮೂವರು ಡಿಸಿಎಂ: ಚರ್ಚಿಸುವುದಿಲ್ಲ ಮೂರು ಡಿಸಿಎಂ ಸ್ಥಾನದ ಬಗ್ಗೆ ಪ್ರಶ್ನೆ ಕೇಳಿದ ಮಾಧ್ಯಮದವರಿಗೆ ಈ ಬಗ್ಗೆ ಚರ್ಚಿಸುವುದಿಲ್ಲ ಎಂದು ಉತ್ತರ ನೀಡಲು ಮುಖ್ಯಮಂತ್ರಿಗಳು ನಿರಾಕರಿಸಿದರು. ಕುಮಾರಸ್ವಾಮಿ ಅಂದರೆ ಸುಳ್ಳು, ಸುಳ್ಳು ಎಂದರೆ ಕುಮಾರಸ್ವಾಮಿ ಗ್ಯಾರಂಟಿ…

Read More

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿಯಾಗಿರುವಂತ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಈ ಬಳಿಕ ರಾಜ್ಯದ ಡಿಪ್ಲೋಮಾ, ಪದವೀಧರ ನಿರುದ್ಯೋಗಿ ಫಲಾನುಭವಿಗಳಿಗೆ ಇಂದೇ ಬ್ಯಾಂಕ್ ಖಾತೆಗೆ ಯೋಜನೆ ಹಣ ಜಮಾ ಆಗಲಿದೆ. ಯುವನಿಧಿಗೆ ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ ಇಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೊಂಬಾಳೆಯನ್ನು ಬಿಡಿಸುವ ಮೂಲಕ ಯುವನಿಧಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಅಲ್ಲದೇ ರಾಷ್ಟ್ರೀಯ ಯುವದಿನವಾದಂತ ಇಂದು ಸ್ವಾಮಿ ವಿವೇಕಾನಂದ ಅವರ ಪೋಟೋಗೆ ಪುಷ್ಪಾರ್ಚನೆ ಮಾಡುವ ಮೂಲಕ ಯುವನಿಧಿ ಯೋಜನೆಯ ಅಡಿಯಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡೋದಕ್ಕೆ ಚಾಲನೆಗೊಳಿಸಿದರು. ಏನಿದು ಯುವನಿಧಿ.? ಇಂದು ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿಯನ್ನು ಜಾರಿಗೊಳಿಸಲಾಗಿದೆ. ಇದು ಪದವಿ ಪಡೆದ ನಿರುದ್ಯೋಗಿಗಳಿಗೆ 3000 ರೂ. ಹಾಗೂ ಡಿಪ್ಲೋಮಾ ಮಾಡಿದ ನಿರುದ್ಯೋಗಿಗಳಿಗೆ 1,500 ರೂ. ಭತ್ಯೆಯನ್ನು 2 ವರ್ಷಗಳ ಕಾಲ ನೀಡುವ ಯೋಜನೆಯಾಗಿದೆ. ಈ ಅವಧಿಯಲ್ಲಿ ಭತ್ಯೆಯ ಜೊತೆಗೆ ಉದ್ಯೋಗ ಲಭಿಸಲು ಬೇಕಾದಂತಹ ಕೌಶಲ್ಯವನ್ನು…

Read More

ಕೊಲ್ಲಾಪುರ: ಶಿವಸೇನೆ ಪುಂಡರ ಪುಂಡಾಟ ಮತ್ತೆ ಕರ್ನಾಟಕದ ಗಡಿ ಭಾಗವಾದಂತ ಬೆಳಗಾವಿಯಲ್ಲಿ ಮುಂದುವರೆದಿದೆ. ಕನ್ನಡ ಬೋರ್ಡ್ ಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಶಿವಸೇನೆ ಪುಂಡರು ಪುಂಡಾಟ ಮೆರೆದಿದ್ದಾರೆ. ಇದೇ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಬೆಳಗಾವಿ ಮಹಾರಾಷ್ಟ್ರ ಸೇರಲಿದೆ. ಆಗ ಕನ್ನಡ ಬೋರ್ಡ್ ತೆಗೆದು ಹಾಕಿ ಮರಾಠಿ ಬೋರ್ಡ್ ಹಾಕೋದಾಗಿ ಶಿವಸೇನೆ ಮುಖಂಡ ಸಂಜಯ್ ಪರಾವ್ ಉದ್ಧಟತನದ ಹೇಳಿಕೆ ನೀಡಿದ್ದಾರೆ. ರಾಜ್ಯಾಧ್ಯಂತ ಕನ್ನಡ ನಾಮಫಲಕ ಕಡ್ಡಾಯಗೊಳಿಸಿದ ಕಾರಣ, ಬೆಳಗಾವಿಯಲ್ಲಿ ಮರಾಠಿ ಬೋರ್ಡ್ ತೆಗೆದು ಕನ್ನಡ ಬೋರ್ಡ್ ಗಳನ್ನು ಹಾಕುವಂತೆ ರಾಜ್ಯ ಸರ್ಕಾರ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಶೇ.60ರಷ್ಟು ಕನ್ನಡವಿರುವಂತ ಬೋರ್ಡ್ ಗಳನ್ನು ಬೆಳಗಾವಿಯಲ್ಲಿ ವಾಣಿಜ್ಯ ಮಳಿಗೆಗಳ ಮಾಲೀಕರು ಅಳವಡಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಇಂತಹ ಕ್ರಮದ ವಿರುದ್ಧ ಸಿಡಿದೆದ್ದಿರುವಂತ ಶಿವಸೇನೆಯ ಉದ್ಧವ್ ಠಾಕ್ರೆ ಬಣವು, ಬೆಳಗಾವಿ ಗಡಿಯಾದಂತ ಕೊಲ್ಲಾಪುರದಲ್ಲಿ ಕನ್ನಡ ಬೋರ್ಡ್, ನಾಮಫಲಕವನ್ನು ಕಿತ್ತು ಹಾಕಿ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿರೋದಾಗಿ ತಿಳಿದು ಬಂದಿದೆ. ಕನ್ನಡ ಬೋರ್ಡ್, ಫಲಕಗಳನ್ನು ಧ್ವಂಸಗೊಳಿಸಿರುವಂತ ಶಿವಸೇನೆಯ…

Read More