Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸದ್ಯ ರಾಜ್ಯದ ಹಲವೆಡೆ ಮಳೆ ಕೊಂಚ ಬಿಡುವು ನೀಡಿದೆ. ಇದರ ನಡುವೆ 7 ಜಿಲ್ಲೆಗಳಲ್ಲಿ ಮತ್ತೆ ಮಳೆ ಮುಂದುವರೆಯಲಿದೆ. ಭಾರೀ ಮಳೆಯಾಗುವ ಕಾರಣ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಜುಲೈ.3ರಿಂದ ಮತ್ತೆ ಮಳೆ ಚುರುಕು ಪಡೆಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇನ್ನೂ ವಿಜಯಪುರ, ಹಾವೇರಿ, ಗದಗ, ಬೀದರ್, ಧಾರವಾಡ, ರಾಯಚೂರು, ಕಲಬುರ್ಗಿ, ಕೊಪ್ಪಳ, ರಾಮನಗರ, ವಿಜಯನಗರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಚಿತ್ರದುರ್ಗ, ದಾವಣೆಗೆರೆ, ಬೆಂಗಳೂರು ಗ್ರಾಮಾಂತರ, ನಗರ, ಚಾಮರಾಜನಗರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ. https://kannadanewsnow.com/kannada/state-wide-expansion-of-stemi-scheme-heart-attack-treatment-will-now-be-provided-at-taluk-centers/ https://kannadanewsnow.com/kannada/telangana-factory-blast/
ಬೆಂಗಳೂರು: ದಿನೇ ದಿನೇ ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅದೇ ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಿಗೂ ಸ್ಟೆಮಿ ಯೋಜನೆ ವಿಸ್ತರಣೆಗೆ ನಿರ್ಧರಿಸಿರುವುದಾಗಿ ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಮಾಹಿತಿ ನೀಡಿದ್ದಾರೆ. ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು 86 ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರವೇ ಸ್ಟೆಮಿ ಯೋಜನೆ ಇತ್ತು. ಮುಂದಿನ ವರ್ಷದೊಳಗೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಯೋಜನೆ ಆರಂಭಗೊಳ್ಳಲಿದೆ ಎಂದರು. ಅಂದಹಾಗೇ ರಾಜ್ಯ ಸರ್ಕಾರ ರಾಜ್ಯಾಧ್ಯಂತ ವಿಸ್ತರಿಸುತ್ತಿರುವಂತ ಸ್ಟೆಮಿ ಯೋಜನೆ ಅಂದರೆ ಹಬ್ ಆಂಡ್ ಸ್ಟೋಕ್ ಮಾಡೆಲ್ ಎಂಬುದಾಗಿದೆ. ಈ ಯೋಜನೆಯ ಅಡಿಯಲ್ಲಿ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ವೈದ್ಯಕೀಯ ನೆರವು ಸಿಗಲಿದೆ. ಆ ಮೂಲಕ ಪ್ರಾಣಾಪಾಯದಿಂದ ಹೃದಯಾಘಾತಕ್ಕೆ ಒಳಗಾದವರನ್ನು ಪಾರು ಮಾಡುವಂತ ಚಿಕಿತ್ಸಾ ವಿಧಾನ ಇದಾಗಿದೆ. ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ :…
ಬೆಂಗಳೂರು : ಉದ್ಯಾನನಗರಿ, ನಿವೃತ್ತರ ಸ್ವರ್ಗ ಬೆಂಗಳೂರು ನಗರ ಕಾಂಕ್ರೀಟ್ ಕಾಡಾಗುತ್ತಿದ್ದು, ಹಸಿರು ಹೊದಿಕೆ ಸಂವರ್ಧನೆಗಾಗಿ ಕಾಡುಗೋಡಿ ಅರಣ್ಯ ಭೂಮಿ ಸಂರಕ್ಷಿಸಲು ಕ್ರಮ ವಹಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕಾಡುಗೋಡಿ ಪ್ಲಾಂಟೇಷನ್ ನ 120 ಎಕರೆ ಅರಣ್ಯ ಭೂಮಿ ಮರುವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಇಂದು ಗಾಂಧೀ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರಣ್ಯಭೂಮಿಯನ್ನು ಹಂಚಿಕೆ, ಮಂಜೂರು ಮಾಡಲು ಬರುವುದಿಲ್ಲ. ಅರಣ್ಯೇತರ ಉದ್ದೇಶಕ್ಕೆ ಅರಣ್ಯಭೂಮಿ ಬಳಸಲು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ಅನುಮತಿ ಕಡ್ಡಾಯ ಎಂದರು. ಬೆಂಗಳೂರು ಪೂರ್ವ ತಾಲೂಕು, ಬಿದರಹಳ್ಳಿ ಹೋಬಳಿಯ ಕಾಡುಗೋಡಿ ಪ್ಲಾಂಟೇಷನ್ ಸರ್ವೆ ನಂ. 1ರಲ್ಲಿ 711 ಎಕರೆಯನ್ನು ನೆಡುತೋಪಿಗಾಗಿ 1896 ರಲ್ಲಿ ನೀಡಲಾಗಿರುತ್ತದೆ. ಬಳಿಕ 1901ರಲ್ಲಿ ಅರಣ್ಯ ನಿಯಮಗಳು 1900ರ ರೀತ್ಯ ರಾಜ್ಯ ಅರಣ್ಯ ಎಂದು ಅಧಿಸೂಚನೆ ಮಾಡಲಾಗಿರುತ್ತದೆ. ಅಧಿಸೂಚಿತ ಅರಣ್ಯ ಮೀಸಲು ಅರಣ್ಯವಾಗಿರುತ್ತದೆ ಎಂದರು.…
GOOD NEWS: ರಾಜ್ಯಾಧ್ಯಂತ ‘ಸ್ಟೆಮಿ ಯೋಜನೆ’ ವಿಸ್ತರಣೆ: ಇನ್ಮುಂದೆ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಚಿಕಿತ್ಸೆ
ಬೆಂಗಳೂರು: ಹಾಸನದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚು ಹೆಚ್ಚು ಘಟಿಸುತ್ತಿವೆ. ಈ ಹಿನ್ನಲೆಯಲ್ಲಿ ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆಯನ್ನು ವಿಸ್ತರಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಇನ್ಮುಂದೆ ತಾಲ್ಲೂಕು ಕೇಂದ್ರಗಳಲ್ಲೂ ಹೃದಯಾಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ದೊರಕಿಸಿಕೊಡುವಂತ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು 86 ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರವೇ ಸ್ಟೆಮಿ ಯೋಜನೆ ಇತ್ತು. ಮುಂದಿನ ವರ್ಷದೊಳಗೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಯೋಜನೆ ಆರಂಭಗೊಳ್ಳಲಿದೆ ಎಂದರು. ಅಂದಹಾಗೇ ರಾಜ್ಯ ಸರ್ಕಾರ ರಾಜ್ಯಾಧ್ಯಂತ ವಿಸ್ತರಿಸುತ್ತಿರುವಂತ ಸ್ಟೆಮಿ ಯೋಜನೆ ಅಂದರೆ ಹಬ್ ಆಂಡ್ ಸ್ಟೋಕ್ ಮಾಡೆಲ್ ಎಂಬುದಾಗಿದೆ. ಈ ಯೋಜನೆಯ ಅಡಿಯಲ್ಲಿ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ವೈದ್ಯಕೀಯ ನೆರವು ಸಿಗಲಿದೆ. ಆ ಮೂಲಕ ಪ್ರಾಣಾಪಾಯದಿಂದ ಹೃದಯಾಘಾತಕ್ಕೆ ಒಳಗಾದವರನ್ನು ಪಾರು ಮಾಡುವಂತ ಚಿಕಿತ್ಸಾ ವಿಧಾನ ಇದಾಗಿದೆ. https://kannadanewsnow.com/kannada/attention-sslc-students-you-are-allowed-to-travel-free-of-charge-on-the-bmtc-bus-for-exam-3/…
ಮಂಡ್ಯ : “ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ ಅನುಮೋದನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. 92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ ಅರ್ಪಿಸಿ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. “ನಮ್ಮ ಸರ್ಕಾರ ಎರಡು ವರ್ಷಗಳ ಅಧಿಕಾರವಧಿಯಲ್ಲಿ ಕಾವೇರಿ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚು ಮಾಡಿದೆ. 80 ವರ್ಷಗಳ ಹಳೆಯ ಕಾಲುವೆಗಳನ್ನು ದುರಸ್ತಿಗೊಳಿಸಲಾಗಿದೆ. ತಮಿಳುನಾಡಿಗೆ 9 ಟಿಎಂಸಿ ನೀರು ಹೋಗಬೇಕಿತ್ತು ಹೆಚ್ಚು ಮಳೆ ಬಂದ ಕಾರಣಕ್ಕೆ 30 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗಿದೆ. ಕಳೆದ ವರ್ಷವೂ 177 ಟಿಎಂಸಿಗಿಂತ ಹೆಚ್ಚುವರಿಯಾಗಿ 305 ಟಿಎಂಸಿ ನೀರು ಹರಿಸಲಾಗಿತ್ತು. 2022- 23 ರಲ್ಲಿ 400 ಟಿಎಂಸಿ ಹೆಚ್ಚುವರಿ ನೀರು ಹರಿಸಲಾಗಿದೆ. ಮೂರು ವರ್ಷಗಳಿಗೊಮ್ಮೆ ನೀರು…
ಮಂಡ್ಯ: ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ , DCM ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು. ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ…
ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ಶೋಕ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದ ಶ್ರೀ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸುವರ್ಣ ಶಿಲ್ಪಿಗಳ ಮನೆತನದಲ್ಲಿ ಜನಿಸಿ ಚಿಕ್ಕಂದಿನಿಂದಲೇ ವಿವಿಧ ಪ್ರಕಾರಗಳ ಶಿಲ್ಪಕಲಾ ಕೃತಿ ರಚನೆಯಲ್ಲಿ ನೈಪುಣ್ಯತೆ ಸಾಧಿಸಿದ್ದ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ. ಕಲ್ಲು, ಲೋಹ, ಸಿಮೆಂಟ್, ಕಟ್ಟಿಗೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಮಾಧ್ಯಮಗಳಲ್ಲಿ ಕಲಾಕೃತಿಗಳ ರಚನೆಯಲ್ಲಿ ಖ್ಯಾತಿ ಪಡೆದಿದ್ದರು, ದೇವಾನುದೇವತೆಗಳ ತಯಾರಿಕೆಯಲ್ಲಿ ವಿಶೇಷ ಪರಿಣಿತಿ ಪಡೆದಿದ್ದ ಇವರಿಗೆ 2007ನೇ ಸಾಲಿನ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಗೌರವ ಪ್ರಶಸ್ತಿ ಸಂದಿದೆ. ಅದಲ್ಲದೇ ಕರ್ನಾಟಕ ಸರ್ಕಾರದ 2022ನೇ ಸಾಲಿನ ಜಕಣಾಚಾರಿ ಪ್ರಶಸ್ತಿಗೆ ಶ್ರೀಯುತರು ಭಾಜನರಾಗಿರುತ್ತಾರೆ. ಇವರ ನಿಧನದಿಂದ…
ಮೈಸೂರು: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು. ಬಿಜೆಪಿ ಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು. https://kannadanewsnow.com/kannada/on-this-date-the-mysore-shivamogga-town-express-train-is-delayed-by-30-minutes/ https://kannadanewsnow.com/kannada/big-news-another-victim-of-micro-finance-harassment-in-the-state-a-person-commits-suicide-after-making-a-selfie-video/
ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ರೈಲ್ವೆ ಕಾಮಗಾರಿಯ ಹಿನ್ನಲೆಯಲ್ಲಿ ಮೈಸೂರು ಟು ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಗಾಡಿಯ ಸಂಚಾರವನ್ನು ಮರುನಿಗದಿ / ನಿಯಂತ್ರಣ ಮಾಡಲಾಗಿದೆ. ಈ ಕುರಿತಂತೆ ಮೈಸೂರಿನ ನೈರುತ್ಯ ರೈಲ್ವೆಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ವಿಭಾಗದ ಹೊಸ ಅಗ್ರಹಾರ ಮತ್ತು ಅಕ್ಕಿಹೆಬ್ಬಾಳು ಯಾರ್ಡುಗಳಲ್ಲಿ ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾರ್ಯಗಳ ಹಿನ್ನೆಲೆ, ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ಅನ್ನು ಜುಲೈ 1, 3 ಮತ್ತು 4, 2025 ರಂದು ಮೈಸೂರು ನಿಲ್ದಾಣದಿಂದ 30 ನಿಮಿಷ ವಿಳಂಬವಾಗಿ ಹೊರಡಲಿದ್ದು ಮತ್ತು ಮಾರ್ಗಮಧ್ಯೆ 70 ನಿಮಿಷಗಳವರೆಗೆ ನಿಯಂತ್ರಿಸಲಾಗುವುದು ಎಂದಿದ್ದಾರೆ. https://kannadanewsnow.com/kannada/good-news-for-nursing-students-of-the-state-invitation-to-apply-for-incentive-funds/ https://kannadanewsnow.com/kannada/big-news-another-victim-of-micro-finance-harassment-in-the-state-a-person-commits-suicide-after-making-a-selfie-video/
ಬೆಂಗಳೂರು: 2025-26 ನೇ ಸಾಲಿಗೆ ಬಿಎಸ್.ಸಿ ನರ್ಸಿಂಗ್ ಅಂಡ್ ಜಿಎನ್ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು https://sevasindhuservices.karnataka.gov.in ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಆಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕೋರ್ಸ್ ಅವಧಿ ಪೂರ್ಣಾವಧಿಯದ್ದಾಗಿರುತ್ತದೆ, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ಹೆಚ್ಚಿನ ವಿವರಗಳಿಗೆ ವೆಬ್ಸೈಟ್ https://dom.karnataka.gov.in ನ್ನು ವೀಕ್ಷಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/attention-sslc-students-you-are-allowed-to-travel-free-of-charge-on-the-bmtc-bus-for-exam-3/ https://kannadanewsnow.com/kannada/big-news-another-victim-of-micro-finance-harassment-in-the-state-a-person-commits-suicide-after-making-a-selfie-video/