Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರಿಗೆ ಅನಂತ ಧನ್ಯವಾದಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದಿದ್ದಾರೆ. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಅಂತ ಹೇಳಿದ್ದಾರೆ. ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತ ತಿಳಿಸಿದ್ದಾರೆ. ಈ ಗೆಲುವು ನಮ್ಮ…
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್ ಹೊರಡಿಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಕೇರಳ ಮೂಲದ ವ್ಯಕ್ತಿಯ ಕೌಟುಂಬಿಕ ವ್ಯಾಜ್ಯದ ನಡುವೆ ಕೆಲವು ರೌಡಿಗಳು ಸಜಿ ಜೋಸೆಫ್ ಎಂಬವರ ಜಮೀನಿಗೆ ನುಗ್ಗಿ ದಾಂದಲೆ ನಡೆಸಿದ್ದ ಘಟನೆ ಭಾರೀ ಸುದ್ದಿಯಾಗಿತ್ತು. ತಾವು ಸಚಿವ ಭೈರತಿ ಸುರೇಶ್ ಸಹಚರರೆಂದು ಹೇಳಿ ಸ್ಥಳೀಯ ರೌಡಿಗಳು ಜಮೀನು ಬಿಟ್ಟುಕೊಡುವಂತೆ ಜೀವಬೆದರಿಕೆಯೊಡ್ಡಿದ್ದರು. ಅಷ್ಟೇ ಅಲ್ಲ, ಕೆಲವು ವ್ಯಕ್ತಿಗಳನ್ನು ಹಾಗೂ ನಿಷೇಧಿತ ನಾಯಿಯನ್ನೂ ಸ್ಥಳದಲ್ಲಿ ನಿಯೋಜಿಸಿದ್ದಾರೆ ಎಂದು ಕಿರುಕುಳಕ್ಕೆ ಒಳಗಾದ ಸಜಿ ಜೋಸೆಫ್ ಆರೋಪಿಸಿದ್ದರು. ರೌಡಿಗಳ ಜೊತೆ ಸ್ಥಳೀಯ ಪೊಲೀಸರೂ ಸ್ಥಳಕ್ಕೆ ಭೇಟಿ ನೀಡಿ ತಮಗೆ ಬೆದರಿಸಿದ್ದರು ಎಂದು ಜೋಸೆಫ್ ಆರೋಪಿಸಿದ್ದರು. ಈ ಸಂಬಂಧ ಗೃಹ ಸಚಿವರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಆದರೂ ಪೊಲೀಸರು…
ಬೆಂಗಳೂರು: ‘ಕತ್ತಲೆ ಜಗತ್ತು’ ಈ ಪುಸ್ತಕದಲ್ಲಿ ಪ್ರತಾಪ್ ಸಿಂಹ ಅವರ ನಡೆ-ನುಡಿ-ವಿವಾದಗಳ ಬಗ್ಗೆ ಹೆಚ್ಚಾಗಿ ಸಂಗತಿಗಳು ಇದೆ ಎಂಬ ಕಾರಣಕ್ಕಾಗಿ ಬಾರೀ ಸುದ್ದಿಗೆ ಗ್ರಾಸವಾಗಿದೆ. ಪ್ರತಾಪ್ ಸಿಂಹ ಅವರ ರಾಜಕೀಯ ಎದುರಾಳಿಗಳ ಕೈಯಲ್ಲೇ ಈ ಪುಸ್ತಕ ಹರಿದಾಡುತ್ತಿದ್ದು ಈ ಬೆಳವಣಿಗೆ ಬಗ್ಗೆ ಪ್ರತಾಪ್ ಸಿಂಹ ಅವರು ಗಲಿಬಿಲಿಗೊಂಡಿದ್ದಾರೆ. ಈ ಪುಸ್ತಕದಲ್ಲಿನ ಬರಹಗಳು ತಮ್ಮ ಬಗ್ಗೆ ಅಪರಾಚರ ಮಾಡುಂತಿದ್ದು ಇದರ ಬಿಡುಗಡೆಗೆ ನಿರ್ಬಂಧ ಕೋರಿ ಪ್ರತಾಪ್ ಸಿಂಹ ಅವರು ಕೋರ್ಟ್ ಮೊರೆಹೋಗಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಸಿವಿಲ್ ಕೋರ್ಟ್ ‘ಕತ್ತಲೆ ಜಗತ್ತು’ ಪುಸ್ತಕದ ಬಿಡುಗಡೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಆದರೆ ಅಷ್ಟರಲ್ಲೇ ಸಾವಿರಾರು ಪುಸ್ತಕಗಳು ಮಾರುಕಟ್ಟೆಯಲ್ಲಿ ಬಿಕಾರಿಯಾಗಿವೆ ಎನ್ನಲಾಗುತ್ತಿದೆ. ಪತ್ರಕರ್ತ ಹಾಗೂ ‘ಬೆತ್ತಲೆ ಜಗತ್ತು’ ಅಂಕಣ ಖ್ಯಾತಿಯ ಪ್ರತಾಪ್ ಸಿಂಹ ಎರಡು ಬಾರಿ ಮೈಸೂರು ಲೋಕಸಭಾ ಕ್ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಮೂಲಕ ಸಂಸತ್ತಿಗೆ ಆಯ್ಕೆಗೊಂಡಿದ್ದರಾದರೂ ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದರು. ಈ ಟಿಕೆಟ್ ವಂಚಿತರಾಗಲು ಕಾರಣ ಏನು ಎಂಬ ಕುತೂಹಲ ಎಲ್ಲರದ್ದಾಗಿದೆ.…
ಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಉಳಿದಂತೆ ಯಾರೊಬ್ಬರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದು, ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ. ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಉಲ್ಲೇಖ (1)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ. ಹಾಗೂ ಈ ಮರುಸ್ತಾಪನೆ ಕ್ರಮವು ಕೇವಲ ಉಲ್ಲೇಖ (2)ರ ಸಭಾ ನಡವಳಿಯಲ್ಲಿ ನೀಡಿರುವ ನಿರ್ದೇಶನದ ಕ್ರಮಕ್ಕೆ ಮಾತ್ರ ಅನ್ವಯವಾಗುವಂತೆ ಈ ಕೆಳಕಂಡಂತೆ ಕ್ರಮ ವಹಿಸಲು ಆದೇಶಿಸಿದೆ. 1. ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್ ನಲ್ಲಿ ಅವಕಾಶ ನೀಡಲಾಗಿರುತ್ತದೆ. 2.…
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸೀರ್ ಅಹ್ಮದ್ ಖಾನ್ ಅವರು ಗೆಲುವು ಸಾಧಿಸಿರುವುದಾಗಿ ಚುನಾವಣಾ ಆಯೋಗವು ಅಧಿಕೃತವಾಗಿ ಘೋಷಿಸಿದೆ. ಈ ಸಂಬಂಧ ಫಾರಂ ನಂ.21ಇ ನಲ್ಲಿ ಅಧಿಕೃತ ಘೋಷಣೆ ಮಾಡಿರುವಂತ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಇಂದಿನ ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ 87,308 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ಯಾಸಿರ್ ಅಹ್ಮದ್ ಖಾನ್ ಅವರು 1,00,756 ಮತಗಳನ್ನು ಪಡೆದಿರುವುದಾಗಿ ತಿಳಿಸಿದೆ. ಇನ್ನೂ ಸೋಷಿಯಲ್ ಪಾರ್ಟಿಯ ಕಜ್ಜದ್ ಮೊಹ್ಮದ್ದೀನ್ ಗುಂಡಗೇರಿ ಅವರು 664, ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿ ರವಿಕೃಷ್ಣಾ ರೆಡ್ಡಿ ಅವರು 1,876 ಮತಗಳನ್ನು, ಸ್ವಂತ್ರ ಅಭ್ಯರ್ಥಿ ಡಾ.ಜಿಹೆಚ್ ಇಮ್ರಾಪುರ್ 89, ಸಿದ್ದಪ್ಪ ಹೊಸಳ್ಳಿ 80, ಎಸ್ ಎಸ್ ಪಾಟೀಲ್ 184, ಶೆಟ್ಟಪ್ಪ ನೀಲಪ್ಪ ದೇಸಾಯಿ 463 ಮತಗಳನ್ನು ಪಡೆದಿದ್ದಾರೆ ಎಂದು ತಿಳಿಸಿದೆ. ಒಟ್ಟು ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಯಲ್ಲಿ 2,37,671 ಮತದಾನದಲ್ಲಿ 1,91,420 ಮತಗಳು…
ಬೆಂಗಳೂರು: ಕರ್ನಾಟಕ ಮಿನಿ ಸಮರದಲ್ಲಿ ಮತದಾನೋತ್ತರ ಸಮೀಕ್ಷೆಗಳು ಉಲ್ಟಾ ಆಗಿದ್ದಾವೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು, ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಮಾತ್ರ ಗೆಲ್ಲಲಿದೆ ಎನ್ನುವಂತ ಸಮೀಕ್ಷಾ ವರದಿಯೇ ಸುಳ್ಳಾಗಿದೆ. ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರಕ್ಕೆ ಮೂರು ಗೆದ್ದುಕೊಳ್ಳುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಕರ್ನಾಟಕದ ಮೂರು ಉಪ ಚುನಾವಣೆಯ ಮತದಾನದ ನಂತ್ರ ಮತದಾನೋತ್ತರ ಚುನಾವಣಾ ಸಮೀಕ್ಷೆಗಳು ಪ್ರಕಟವಾಗಿದ್ದವು. ಪಿ-ಮಾರ್ಕ್ಸ್ ಸಮೀಕ್ಷೆಯಂತೆ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್, ಇನ್ನೆರಡು ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವುದಾಗಿ ತಿಳಿಸಿತ್ತು. ಇನ್ನೂ ಹಿರಿಯ ವಾರ್ತಾ ವಾಚಕ ರಾಘವೇಂದ್ರ ಗಂಗಾವತಿ ಅವರ ಸಾರಥ್ಯದ ಚಾಣಕ್ಯ ಟೈಮ್ಸ್ 24X7 ಸಮೀಕ್ಷೆ ಕೂಡ ಪ್ರಕಟವಾಗಿದೆ. ಅದರಲ್ಲಿ ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವಂತ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಅಂತ ಹೇಳಿತ್ತು. ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಗೆಲ್ಲಲಿದ್ದಾರೆ. ಶಿಗ್ಗಾವಿ ಬಿಜೆಪಿ ಪಾಲಾಗುವುದಾಗಿ ಚಾಣಕ್ಯ ಟೈಮ್ಸ್…
ಬಿಡದಿ: ಚನ್ನಪಟ್ಟಣ ಕ್ಷೇತ್ರದ ಮತದಾರರ ತೀರ್ಪಿಗೆ ನಾನು ತಲೆಬಾಗಿದ್ದೇನೆ. ಅವರು ಕೊಟ್ಟ ತೀರ್ಪನ್ನು ನಾನು ಒಪ್ಪಿಕೊಳ್ಳುತ್ತಿದ್ದೇನೆ. ಚುನಾವಣೆಯ ಸಂದರ್ಭದಲ್ಲಿ ದುಡಿದಂತ ಎಲ್ಲರಿಗೂ ಧನ್ಯವಾದಗಳು ಅಂತ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಇಂದು ಬಿಡದಿಯ ತೋಟದ ಮನೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 87 ಸಾವಿರ ಮತ ನೀಡಿದ ಚನ್ನಪಟ್ಟಣ ಜನತೆಗೆ ಧನ್ಯವಾದಗಳು. ಜೆಡಿಎಸ್, ಬಿಜೆಪಿ ಕಾರ್ಯಕರ್ತರಿಗೂ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಹೆಚ್ ಡಿಡಿ, ಹೆಚ್ ಡಿಕೆ ಬೆಳೆಸಿದ್ದು ರಾಮನಗರ ಜಿಲ್ಲೆಯ ಜನರು ಎಂದರು. ನಾನು ರಾಮನಗರದಲ್ಲಿ ಜನಿಸಿಲ್ಲ. ಆದರೇ ಭಾವನಾತ್ಮಕ ಸಂಬಂಧವನ್ನು ಹೊಂದಿದ್ದೇನೆ. ನಾನು ಕುಮಾರಸ್ವಾಮಿ ಜೊತೆಗೆ ಸೇರಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಲಿದ್ದೇನೆ. ನಾನು ಚುನಾವಣೆಯ ಸಂದರ್ಭದಲ್ಲಿ ನೀಡಿದಂತ ಭರವಸೆ ಕೇವಲ ಚುನಾವಣೆಗೆ ಸಂಬಂಧಪಟ್ಟಿದ್ದು. ನಾನು ಕೊಟ್ಟ ಮಾತನ್ನು ಹಿಂಪಡೆಯಲು ಹೋಗಲ್ಲ ಎಂದರು.
ಬೆಂಗಳೂರು : “ಕರ್ನಾಟಕ ರಾಜ್ಯದ ಮಹಾಜನತೆ ಇಂದು 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಕೊಟ್ಟಿದ್ದಾರೆ. ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಈ ಉಪಚುನಾವಣೆಗಳ ಫಲಿತಾಂಶದ ಬಗ್ಗೆ ಮಾಧ್ಯಮಗಳು ನಡೆಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ನಿನ್ನೆಯೇ ಹೇಳಿದ್ದೆ. ಕೆಲವು ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದ್ದೆ. ಮೂರು ಉಪಚುನಾವಣೆಗಳ ಫಲಿತಾಂಶ ಬಂದಿದೆ. ವಿರೋಧ ಪಕ್ಷಗಳು ಟೀಕೆ, ಅಪಪ್ರಚಾರ ಮಾಡುವುದು ನಿಲ್ಲಿಸಬೇಕು. ಭಾವನೆ ಮೇಲೆ ರಾಜಕಾರಣ ನಡೆಯೋದಿಲ್ಲ, ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ನಮ್ಮ ಜನರೇ ಸಂದೇಶ ನೀಡಿದ್ದಾರೆ” ಎಂದು ತಿಳಿಸಿದರು. “ವಿರೋಧ ಪಕ್ಷಗಳ ನಾಯಕರು ರಾಜ್ಯದಲ್ಲಿ ಐದು…
ಬಸವಕಲ್ಯಾಣ : ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಈ ಮೂರೂ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವ್ಯಾಖ್ಯಾನಿಸಿದ್ದಾರೆ. ಬಸವಕಲ್ಯಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗ ಮಾತನಾಡಿದ ಅವರು, ಹಳೆ ಮೈಸೂರು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ನಡೆದ ಈ ಉಪ ಚುನಾವಣೆಯಲ್ಲಿ ಅಭಿವೃದ್ಧಿಗೆ ಒಲವು, ಗ್ಯಾರಂಟಿಗಳಿಗೆ ಗೆಲುವು ನೀಡಿರುವ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಶಿಗ್ಗಾವಿಯಲ್ಲಿ ವಚನಭ್ರಷ್ಟರಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಆ ಕ್ಷೇತ್ರದ ಉಸ್ತುವಾರಿಯಾಗಿದ್ದ ತಾವು ಮತದಾರರಿಗೆ ವಿಶೇಷವಾಗಿ ಧನ್ಯವಾದ ಅರ್ಪಿಸುವುದಾಗಿ ಈಶ್ವರ ಖಂಡ್ರೆ ಹೇಳಿದರು. ಕಾಂಗ್ರೆಸ್ ಪಕ್ಷದ ನಾಯಕರು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮೂರೂ ಉಪ ಚುನಾವಣೆಗಳ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ. ಎಲ್ಲರ ಸಂಘಟಿತ ಪ್ರಯತ್ನಕ್ಕೆ ಈ ಗೆಲುವಿನ ಹಾರ ಸಂದಿದೆ. ಉತ್ತಮ ನಾಯಕತ್ವ ನೀಡಿ ಮಾರ್ಗದರ್ಶನ ಮಾಡಿದ ಪಕ್ಷದ…
ಇಂದಿನ ದಿನಗಳಲ್ಲಿ ಎಲ್ಲರೂ ಹಣಕ್ಕೆ ಪ್ರಾಮುಖ್ಯತೆ ನೀಡುತ್ತಾರೆ. ಈ ಹಣವನ್ನು ಗಳಿಸಲು ಸಾಕಷ್ಟು ಜ್ಞಾನವನ್ನು ಹೊಂದಿರುವುದು ಮುಖ್ಯ ವಿಷಯ. ಅವರಿಗೆ ಜ್ಞಾನವಿದ್ದರೆ ಹೇಗಾದರೂ ಹಣ ಸಂಪಾದಿಸಬಹುದು. ಸರಸ್ವತಿ ದೇವಿಯು ಈ ಜ್ಞಾನದ ಅಧಿಪತಿ. ಸರಸ್ವತಿ ದೇವಿಯ ಪರಿಪೂರ್ಣ ಕೃಪೆ ಇರುವ ಯಾವುದೇ ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಕೊರತೆಯಾಗುವುದಿಲ್ಲ ಎಂದು ಹೇಳಬೇಕು. ಆದ್ದರಿಂದ ಸಂಪತ್ತು ಮತ್ತು ಸಮೃದ್ಧಿಯಿಂದ ಬದುಕಲು ಬಯಸುವವರು ಮೊದಲು ಸರಸ್ವತಿ ದೇವಿಯನ್ನು ಪೂಜಿಸಬೇಕು. ಅದರ ನಂತರವೇ ಮಹಾಲಕ್ಷ್ಮಿಯನ್ನು ಪೂಜಿಸಬೇಕು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ಸರಸ್ವತಿ ದೇವಿಯನ್ನು ಪೂಜಿಸುವ ಸರಳ ವಿಧಾನವನ್ನು ನಾವು ನೋಡಲಿದ್ದೇವೆ . ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ,…