Author: kannadanewsnow09

ಬೆಂಗಳೂರು: ಇಂದು ಬೆಂಗಳೂರಿನ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಅರ್ಥಾತ್ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ನೀವು ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಇದ್ದರೇ, ತಪ್ಪದೇ ಈ ದಾಖಲೆಗಳನ್ನು ಕೊಂಡೊಯ್ಯೋದು ಮರೆಯಬೇಡಿ. ಅವು ಏನು ಅಂತ ಮುಂದೆ ಓದಿ. ಫೆಬ್ರವರಿ 8ರ ಇಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು…

Read More

ಬೆಂಗಳೂರು: ನಗರದ ಕುಂಬಾರಪೇಟೆ ಹರಿ ಮಾರ್ಕೆಟಿಂಗ್ ಒಳಗೆ ಡಬ್ಬಲ್ ಮರ್ಡರ್ ಮಾಡಿರೋ ಘಟನೆ ನಡೆದಿದೆ. ಬೆಂಗಳೂರಿನ ಹಲಸೂರುಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಹರಿ ಮಾರ್ಕೆಟಿಂಗ್ ಒಳಗಡೆ ಸುರೇಶ್ (55) ಹಾಗೂ ಮಹೇಂದ್ರ (68) ಎಂಬ ಇಬ್ಬರನ್ನು ಹತ್ಯೆಗೈಯ್ಯಲಾಗಿದೆ. ಆಸ್ತಿಯ ವಿಚಾರಕ್ಕಾಗಿ ಈ ಮರ್ಡರ್ ನಡೆಸಿದೆ ಎನ್ನಲಾಗುತ್ತಿದೆ. ಸುರೇಶ್, ಮಹೇಂದ್ರ ಅವರ ಸಂಬಂಧಿ ಭದ್ರ ಎಂಬಾತನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೇ ಹತ್ಯೆಯ ಬಳಿಕ ಪೊಲೀಸರಿಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿರೋ ಹಲಸೂರು ಗೇಟ್ ಠಾಣೆಯ ಪೊಲೀಸರು, ಡಿಸಿಪಿ ಶೇಖರ್, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ಬಂಧಿತ ಆರೋಪಿ ಭದ್ರ ಎಂಬಾತನನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಡಿಸಿಪಿ ಶೇಖರ್ ಅವರು, ಡಬ್ಬಲ್ ಮರ್ಡರ್ ಮಾಡಿರೋ ಬಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಲಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.…

Read More

ಬೆಂಗಳೂರು: ನಗರದ ಕುಂಬಾರಪೇಟೆಯಲ್ಲಿ ಇಂದು ಬೆಂಗಳೂರಿಗರು ಬೆಚ್ಚಿ ಬೀಳಿಸುವಂತೆ ಡಬ್ಬಲ್ ಮರ್ಡರ್ ಒಂದು ನಡೆದಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬೆಂಗಳೂರಿನ ಹಲಸೂರು ಬಳಿಯ ಕುಂಬಾರಪೇಟೆಯಲ್ಲಿನ ಹರಿ ಮಾರ್ಕೆಟಿಂಗ್ ನಲ್ಲಿನ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಇಬ್ಬರ ಡಬ್ಬಲ್ ಮರ್ಡರ್ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಬೆಂಗಳೂರಿನ ಡಬ್ಬಲ್ ಮರ್ಡರ್ ಸ್ಥಳಕ್ಕೆ ಡಿಸಿಪಿ ಶೇಖರ್, ಹಲಸೂರು ಗೇಟ್ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಬೆಂಗಳೂರಿನ ಕುಂಬಾರಪೇಟೆಯಲ್ಲಿನ ಡಬ್ಬಲ್ ಮರ್ಡರ್ ಗೆ ಕಾರಣ ಏನು ಎಂಬುದು ಇನ್ನೂ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. https://kannadanewsnow.com/kannada/former-minister-mp-renukacharya-openly-challenged-congress-leaders/ https://kannadanewsnow.com/kannada/breaking-election-commission-announces-new-name-for-sharad-pawars-party/

Read More

ಬೆಂಗಳೂರು: ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ.ಎ‌ ಸರ್ಕಾರ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬುದರ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಸವಾಲು ಹಾಕಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ಚನ್ನಗಿರಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರ ಪಕ್ಷ ಸೇರ್ಪಡೆಯಾದ ನಂತರ ಅವರು ಮಾಧ್ಹಮದವರ ಜೊತೆ ಮಾತನಾಡಿದರು. ಯುಪಿಎ ಅವಧಿಯಲ್ಲಿ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹಾಗೂ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರ ಎನ್ ಡಿಎ ಸಮಯದಲ್ಲಿ ಕರ್ನಾಟಕಕ್ಕೆ ಎಷ್ಟೆಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂಬುದರ ಕುರಿತು ಸಾರ್ವಜನಿಕ ಚರ್ಚೆಗೆ ಸಿದ್ದ ಎಂದು ಹೇಳಿದರು. ದೆಹಲಿಯಲ್ಲಿ ನಡೆದಿರುವುದು ಪ್ರತಿಭಟನೆಯಲ್ಲ. ಅದು ಕಾಂಗ್ರೆಸ್ ಕೃಪಾ ಪೋಷಕ ಪ್ರತಿಭಟನೆ.ದೆಹಲಿಯಲ್ಲಿ ಕರ್ನಾಟಕದ ಮಾನ ಮಾರ್ಯಾದೆ ಕಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರುಗಳು ರಾಜ್ಯದ ಜನತೆಯ ಕ್ಷೆಮೆ…

Read More

ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್ ರಹಿತ ತಂಬಾಕು ರಹಿತ, ಸ್ವಾಧಭರಿತ, ಸ್ವಾಧರಹಿತ ಹುಕ್ಕ ಮೊಲಾಸಸ್, ಶಿಶಾ ಹಾಗೂ ಇದೇ ಮಾದರಿಯ ಇನ್ನಿತರೆ ಹೆಸರುಗಳಿಂದ ಕರೆಯಲ್ಪಡುವ ಹುಕ್ಕಾ ಉತ್ಪನ್ನಗಳ ಮಾರಾಟ, ಸೇವನೆ, ಜಾಹೀರಾತು, ಪ್ರಚೋನೆ, ಸಂಗ್ರಹಣೆ, ವ್ಯಾಪಾರವನ್ನು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವಿಶ್ವ ಆರೋಗ್ಯ ಸಂಸ್ಥೆ (WHO) ನಡೆಸಿರುವ ಗ್ಲೋಬಲ್ ಅಡಲ್ ಟೊಬ್ಯಾಕೊ ಸರ್ವೇ 2016-17 ಅಧ್ಯಯನ ಪ್ರಕಾರ, ಕರ್ನಾಟಕದಲ್ಲಿ 22.8% ವಯಸ್ಕರು (15 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು) ಒಂದಲ್ಲ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಾರೆ. ಈ ಪೈಕಿ ಶೇ.8.8 ರಷ್ಟು ಮಂದಿ ಧೂಮಪಾನಿಗಳಾಗಿದ್ದಾರೆ. ಕರ್ನಾಟಕದಲ್ಲಿ 23.9% ವಯಸ್ಕರು ಸಾರ್ವಜನಿಕ ಸ್ಥಳಗಳಲ್ಲಿ ವರೋಕ್ತ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ ಎಂದಿದ್ದಾರೆ. ಭಾರತದಲ್ಲಿ ತಂಬಾಕು ಉತ್ಪನ್ನಗಳ ಸೇವನೆ, ಮಾರಾಟ, ಜಾಹೀರಾತು, ಸಂಗ್ರಹಣೆ, ವಾಣಿಜ್ಯ ಮಹಾರ, ಉತ್ಪಾದನೆ, ಹಂಚಿಕೆ…

Read More

ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಸಾಲಿನ ಪಿಹೆಚ್‍ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಮಾರ್ಚ್ 10 ರೊಳಗಾಗಿ ವಿಭಾಗವಾರು ಖಾಲಿ ಸ್ಥಾನಗಳ ವಿವರಗಳಿಗಾಗಿ ಹಾಗೂ ಸಂಶೋಧನಾ ಸ್ಥಾನಗಳ ವಿವರಗಳಿಗಾಗಿ ವೆಬ್ ಸೈಟ್ www.davangereuniversity.ac.in ಮೂಲಕ ಅರ್ಜಿ ಸಲ್ಲಿಸಬಹುದು ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ತಿಳಿಸಿದ್ದಾರೆ. ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೇಂದ್ರ ಪುರಸ್ಕøತ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಿಷನ್ ಸಂಯೋಜಕರ ಒಂದು ಹುದ್ದೆಗೆ ಸಮಾಜ ವಿಜ್ಞಾನ, ಜೀವ ವಿಜ್ಞಾನ, ಪೌಷ್ಠಿಕತೆ, ಔಷಧ, ಆರೋಗ್ಯ ನಿರ್ವಹಣೆ, ಸಮಾಜ ಕಾರ್ಯ, ಗ್ರಾಮೀಣ ನಿರ್ವಹಣೆಯಲ್ಲಿ ಪದವಿ ಪಡೆದಿದ್ದು. ಸಂಬಂಧಿತ ಕ್ಷೇತ್ರದಲ್ಲಿ ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷ ಅನುಭವ ಹೊಂದಿರಬೇಕು. ಹಣಕಾಸು ಸಾಕ್ಷರತೆ ಮತ್ತು ಅಕೌಂಟೆಂಟ್ ತಜ್ಞರ ಒಂದು ಹುದ್ದೆಗೆ ಅರ್ಥಶಾಸ್ತ್ರ, ಬ್ಯಾಂಕಿಂಗ್, ಇತರೆ ವಿಭಾಗದಲ್ಲಿ ಪದವಿ ಪಡೆದಿದ್ದು. ಸರ್ಕಾರೇತರ ಸಂಸ್ಥೆಗಳೊಂದಿಗೆ 3…

Read More

ದಾವಣಗೆರೆ : ಸಾರ್ವಜನಿಕರು ತಮ್ಮಲ್ಲಿರುವ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಪಿಗಳು ಮತ್ತು ಸಂಸ್ಕರಿಸಿದ ಟ್ರೋಪಿಗಳನ್ನು ಅಧ್ಯರ್ಪಿಸಲು ಸಂಬಂಧಪಟ್ಟ ಅರಣ್ಯ ಇಲಾಖೆ, ಎಸಿಎಫ್, ಡಿಸಿಎಫ್ ಕಚೇರಿಗೆ ನೀಡಲು 90 ದಿನಗಳ ಕಾಲಾವಕಾಶ ನೀಡಲಾಗಿದೆ. ಅಧ್ಯರ್ಪಿಸಲು ಏ.11 ರಂದು ಕೊನೆಯ ದಿನವಾಗಿದ್ದು, ದಾವಣಗೆರೆ ಜಿಲ್ಲೆಯ ಸಾರ್ವಜನಿಕರು ತಮ್ಮಲ್ಲಿರುವ ವನ್ಯಜೀವಿ ಅಂಗಾಗಳಾದ ಹುಲಿ ಉಗುರು, ಚಿರತೆ ಉಗುರು, ಆನೆದಂತ, ಜಿಂಕೆ ಕೊಂಬು, ವನ್ಯಪ್ರಾಣಿಗಳ ಚರ್ಮ, ವನ್ಯಜೀವಿ ವಸ್ತುಗಳು ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹೊಂದಿದ್ದರೆ. ಅಧ್ಯರ್ಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಪ್ರಾದೇಶಿಕ ವಲಯ ಕಚೇರಿ, ಮೊ. ನಂ:9481991703, ಜಗಳೂರು ಪ್ರಾದೇಶಿಕ ವಲಯ ಕಚೇರಿ, ಮೊ.9481991705, ಹೊನ್ನಾಳಿ ಪ್ರಾದೇಶಿಕ ವಲಯ ಕಚೇರಿ, ಮೊ.9481991704, ಹೊಸಕೆರೆ ರಂಗಯ್ಯನದುರ್ಗ ವನ್ಯಜೀವಿ ವಲಯ, ಮೊ. 9481991706, ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ, ದಾವಣಗೆರೆ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ತಿಳಿಸಲಾಗಿದೆ. https://kannadanewsnow.com/kannada/uniform-civil-code-bill-passed-by-voice-vote-in-uttarakhand-assembly/ https://kannadanewsnow.com/kannada/breaking-election-commission-announces-new-name-for-sharad-pawars-party/

Read More

ನವದೆಹಲಿ : ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ 2017-18 ರಿಂದ ಕರ್ನಾಟಕಕ್ಕೆ 1,87,867 ಕೋಟಿ ರೂ.ಗಳ ನಷ್ಟವಾಗಿದ್ದು ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಅವಕಾಶವನ್ನು ತಪ್ಪಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ಎಸಗಿರುವ ಆರ್ಥಿಕ ದೌರ್ಜನ್ಯದ ಕೇಂದ್ರ ದ ವಿರುದ್ಧ ಜಂತರ್ ಮಂತರ್ ನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನ ಹಂಚಿಕೆಯಲ್ಲಿ ಇಳಿಕೆ, ಮೂಲಸೌಕರ್ಯ ಬದ್ಧತೆಗಳ ಈಡೇರಿಕೆಯಲ್ಲಿ ಮತ್ತು ಕೇಂದ್ರ ಸರ್ಕಾರದಿಂದ ವಿಪತ್ತು ನಿರ್ವಹಣೆಗೆ ಅನುದಾನ ಬಿಡುಗಡೆಯಲ್ಲಿನ ವಿಳಂಬದ ಕುರಿತು ಸವಿಸ್ತಾರವಾಗಿ ಮಾತನಾಡಿದ ಅವರು, ಇದು ಕನ್ನಡಿಗರ ಅಸ್ಮಿತೆಯ ಮೇಲಾಗುತ್ತಿರುವ ವ್ಯವಸ್ಥಿತ ದಾಳಿ ಎಂದು ವ್ಯಾಖ್ಯಾನಿಸಿದರು. ಕೇಂದ್ರದ ನಿರ್ಲಕ್ಷ್ಯದಿಂದ ಕನ್ನಡಿಗರಿಗೆ ತೊಂದರೆಯುಂಟಾಗುತ್ತಿರುವುದು ಗಾಬರಿ ಹುಟ್ಟಿಸುವಂತಿದೆ. ಕನ್ನಡಿಗರ ಹಿತಾಸಕ್ತಿಯನ್ನು ಕೇಂದ್ರ ಬಿಜೆಪಿ ನಾಯಕರು ದುರ್ಬಲಗೊಳಿಸುತ್ತಿದ್ದಾರೆ. ಸಂವಿಧಾನದೆಡೆಗೆ ಹಾಗೂ ಮತ್ತು ಸಹಕಾರಿ ಒಕ್ಕೂಟದೆಡೆಗೆ ಅವರ ಬದ್ಧತೆ ಇಲ್ಲವಾಗಿದೆ ಎಂದರು. ಕೇಂದ್ರ ತೆರಿಗೆಯಲ್ಲಿ ರಾಜ್ಯದ ಪಾಲು ಶೇ 4.71…

Read More

ನವದೆಹಲಿ: ಕರ್ನಾಟಕದ ಜಿಎಸ್ಟಿಯ ಒಂದೇ ಒಂದು ಪೈಸೆಯನ್ನು ಕೇಂದ್ರ ಸರ್ಕಾರ ಬಾಕಿ ಉಳಿಸಿಕೊಂಡಿಲ್ಲ ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಕರ್ನಾಟಕಕ್ಕೆ ಕಡಿಮೆ ತೆರಿಗೆ ಹಂಚಿಕೆ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪ ಕುರಿತಂತೆ ಮಾತನಾಡಿದ ಅವರು, ಕರ್ನಾಟಕದಿಂದ ಪಾವತಿಸಲಾಗಿರೋ ಜಿಎಸ್ಟಿ ಹಣದಲ್ಲಿ ಒಂದೇ ಒಂದು ಪೈಸೆಯೂ ಬಾಕಿ ಉಳಿಸಿಕೊಂಡಿಲ್ಲ. ಈ ಬಗ್ಗೆ ಜನರು ಪ್ರಶ್ನೆ ಮಾಡುತ್ತಿಲ್ಲ. ತೆರಿಗೆ ಕಟ್ಟುತ್ತಿರೋದಕ್ಕೆ ಕನ್ನಡಿಗರು ಹೆಮ್ಮೆ ಪಡುತ್ತಿದ್ದಾರೆ ಎಂದರು. ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತನಾಡುತ್ತಿರೋ ಭಾಷೆ ಎಲ್ಲ ಜನವಿರೋಧಿಯಾಗಿದೆ. ಕುಟುಂಬವಾದದಲ್ಲೇ ಮುಳಿಗಿರೋ ಕಾಂಗ್ರೆಸ್, ದಾರಿ ತಪ್ಪಿಸೋ ಕೆಲಸ ಮಾಡುತ್ತಿದೆ. ನಾವು ತಾರತಮ್ಯ ಮಾಡಿದ್ದೇವೆ ಎಂಬುದು ಸುಳ್ಳು. ಕಾಂಗ್ರೆಸ್ ನಾಯಕರ ಹೇಳಿಕೆಯು ಕುಚೇಷ್ಟೆಯಿಂದ ಕೂಡಿದೆ ಎಂಬುದಾಗಿ ವಾಗ್ಧಾಳಿ ನಡೆಸಿದರು. ಕೇಂದ್ರ ಹಂಚುವ ಪ್ರತಿ ರಾಜ್ಯದ ಪಾಲು ಆಯೋಗದಿಂದ ಆಯೋಗಕ್ಕೆ ವ್ಯತ್ಯಾಸವಾಗುತ್ತದೆ. ರಾಜ್ಯಗಳ ಮೇಲೆ ಬೀರುವ ಎಲ್ಲಾ ಅಂಶಗಳನ್ನು ಪರಿಗಣಿಸಿ ಆಯೋಗ ಶಿಫಾರಸ್ಸುಗಳನ್ನು ಮಾಡುತ್ತದೆ. 14ನೇ ಆಯೋಗದ 5 ವರ್ಷಗಳ…

Read More

ಬೆಂಗಳೂರು: ಈ ವರ್ಷದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಮೂರು ಬಾರಿ ನಡೆಯಲಿದೆ. ಇದಕ್ಕೂ ಮುಂಚಿತವಾಗಿ ಫೆಬ್ರವರಿ.26ರಿಂದ ಪೂರ್ವಭಾವಿ ಪರೀಕ್ಷೆ ಆರಂಭಗೊಳ್ಳಲಿದೆ. ವಿದ್ಯಾರ್ಥಿಗಳು ವೇಳಾಪಟ್ಟಿ ಸೇರಿದಂತೆ ಇತರೆ ಮಾಹಿತಿಗಾಗಿ ಕ್ಯೂ ಆರ್ ಡೋ ಸ್ಕ್ಯಾನ್ ಮಾಡಿ ನೋಡುವಂತೆ ಶಿಕ್ಷಣ ಇಲಾಖೆ ತಿಳಿಸಿದೆ. ಈ ಸಂಬಂಧ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಇಲಾಖೆಯು, ಎಸ್ ಎಸ್ ಎಲ್ ಸಿ ಪೂರ್ವಭಾವಿ ಪರೀಕ್ಷೆಯು ಫೆಬ್ರವರಿ 26ರಿಂದ ಮಾರ್ಚ್ 2ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ಬೆಳಗಿನ ಅವಧಿಯಲ್ಲಿ ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಸಮಾಜ ವಿಜ್ಞಾನ ಹಾಗೂ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಹೇಳಿದೆ. ಇನ್ನೂ ಮಧ್ಯಾಹ್ನದ ಅವಧಿಯಲ್ಲಿ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ. ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿ ಸೇರಿದಂತೆ ಮತ್ತಿತರ ವಿವರಗಳಿಗಾಗಿ ಈ ಕೆಳಕಂಡ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪಡೆಯುವಂತೆ ಸೂಚಿಸಿದೆ. https://twitter.com/KarnatakaVarthe/status/1755216596388475178 https://kannadanewsnow.com/kannada/breaking-election-commission-announces-new-name-for-sharad-pawars-party/ https://kannadanewsnow.com/kannada/uniform-civil-code-bill-passed-by-voice-vote-in-uttarakhand-assembly/

Read More