Author: kannadanewsnow09

ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ಗುರುವಾರ ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿ (ಸೆಬಿ) ಅದಾನಿ ಗುಂಪಿಗೆ ಕ್ಲೀನ್ ಚಿಟ್ ನೀಡಿದ್ದು, ಅಮೆರಿಕದ ಶಾರ್ಟ್-ಸೆಲ್ಲರ್ ಹಿಂಡೆನ್‌ಬರ್ಗ್ ರಿಸರ್ಚ್, ಗೌತಮ್ ಅದಾನಿ ಮತ್ತು ಅದಾನಿ ಪೋರ್ಟ್ಸ್ ಮತ್ತು ಅದಾನಿ ಪವರ್ ಸೇರಿದಂತೆ ಅವರ ಗುಂಪು ಕಂಪನಿಗಳ ವಿರುದ್ಧ ಮಾಡಿದ್ದ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪಗಳನ್ನು ತಳ್ಳಿಹಾಕಿದೆ.

Read More

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಹಾ ಎಡವಟ್ಟು ಮಾಡಲಾಗಿದೆ. 2 ಲಕ್ಷ ಹೊಸ ಜಾತಿಗಣತಿ ಕೈಪಿಡಿಯನ್ನು ಆಯೋಗವು ತಿಪ್ಪೆಗೆಸೆದಿದೆ ಎಂದು ತಿಳಿದು ಬಂದಿದೆ. ಕೆಲ ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದುಳಿದ ಆಯೋಗದಿಂದ ಸಲ್ಲಿಸಲಾಗಿದ್ದಂತ ವರದಿಯನ್ನು ಬಿಡುಗಡೆ ಮಾಡಿದ್ದರು. ಮೊನ್ನೆ ಮೊನ್ನೆಯಷ್ಟೇ ಕೈಪಿಡಿಯನ್ನು ಸಿಎಂ ಸಿದ್ಧರಾಮಯ್ಯ ಬಿಡುಗಡೆ ಮಾಡಿದ್ದರು. ಸಿಎಂ ಸಿದ್ಧರಾಮಯ್ಯ ಅವರು ಜಾತಿಗಣತಿ ಕೈಪಿಡಿಯನ್ನು ಬಿಡುಗಡೆ ಮಾಡಿದ್ದರು. ಈ ಕೈಪಿಡಿಯು ಸಮೀಕ್ಷೆ ವೇಳೆ ಶಿಕ್ಷಕರಿಗೆ ನೀಡಬೇಕಾಗಿತ್ತು. ಆದರೇ ಸರ್ವೆ ವೇಳೆ ಶಿಕ್ಷಕರಿಗೆ ನೀಡಬೇಕಾಗಿದ್ದಂತ ಕೈಪಿಡಿಯನ್ನು ಮೂಲೆಗುಂಪು ಮಾಡಲಾಗಿದೆ. ಕೈಪಿಡಿಯಲ್ಲಿ ಸಾಕಷ್ಟು ದೋಷ ಹಿನ್ನಲೆಯಲ್ಲಿ 2 ಲಕ್ಷ ಕೈಪಿಡಿ ಮೂಲೆಗೆ ಎಸೆಯಲಾಗಿದೆ. ಸುಮಾರು 1 ಕೋಟಿ ಹಣ ವ್ಯಯ ಮಾಡಿ ಈ ಕೈಪಿಡಿಯನ್ನು ತಯಾರಿಸಲಾಗಿತ್ತು. ಈಗ ಮತ್ತೆ ಹೊಸ ಕೈಪಿಡಿ ತಯಾರಿಕೆಗೆ ಆಯೋಗ ಮುಂದಾಗಿದೆ. https://kannadanewsnow.com/kannada/women-should-be-the-beneficiaries-of-the-guarantee-scheme-provided-by-the-congress-government-mlc-dinesh-guligowda/ https://kannadanewsnow.com/kannada/here-light-the-lamp-of-salvation-with-the-new-moon-and-prosper-with-the-blessings-of-the-ancestors/

Read More

ಬೆಂಗಳೂರು ಗ್ರಾಮಾಂತರ: 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ವಾಗ್ದಾನದಂತೆ ಪಂಚಗ್ಯಾರಂಟಿ ಯೋಜನೆಗಳನ್ನು ನಮ್ಮ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದೆ. ಕಳೆದ 21 ತಿಂಗಳಲ್ಲಿ ಪಂಚಗ್ಯಾರಂಟಿ ಯೋಜನೆಗಳಿಗಾಗಿ 98 ಸಾವಿರ ಕೋಟಿ ರೂ. ಹಣವನ್ನು ವ್ಯಯ ಮಾಡಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ದೇವನಹಳ್ಳಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯಗಾರ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೋರೋನಾದಿಂದ ಸಂಕಷ್ಟಕ್ಕೆ ಒಳಗಾಗಿದ್ದ ಮಹಿಳೆಯರಿಗೆ ಪಂಚ ಗ್ಯಾರಂಟಿಗಳು ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದವು ಎಂದರು. ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುತ್ತಾ ಬಂದಿದ್ದು ಇದುವರೆಗೆ 52 ಸಾವಿರ ಕೋಟಿ ರೂ. ಹಣವನ್ನು ನೀಡಿದ್ದರೆ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಮೂಲಕ 18,139 ಕೋಟಿ ರೂ.…

Read More

ಶಿವಮೊಗ್ಗ: ನಮ್ಮ ಸರ್ಕಾರ ರೈತರ ಪರವಾಗಿದೆ. ರೈತರ ಪರ ಒಲವಿರುವಂತ ಸರ್ಕಾರ ನಮ್ಮದಾಗಿದೆ. ಈ ರೈತರಿಗೆ ಸಾಲ ಸೌಲಭ್ಯ ಒದಗಿಸಲು ನಬಾರ್ಡ್ ನಿಂದ ಹಣ ಬಿಡುಗಡೆ ಮಾಡಬೇಕು ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಒತ್ತಾಯಿಸಿದರು. ಇಂದು ತಾಳಗುಪ್ಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದಂತ ಅವರು, ಡಿಸಿಸಿ ಬ್ಯಾಂಕ್ ಗಳಲ್ಲಿ ರಾಜಕೀಯ ಹಸ್ತಕ್ಷೇಪವಿರಬಾರದು. ಅವುಗಳು ರಾಜಕೀಯ ಹೊರತಾಗಿ ಇರಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಗಳು ರೈತರ ಏಳಿಗೆಗಾಗಿ ಕಟ್ಟಿರೋವಂತದ್ದು ಎಂಬುದಾಗಿ ಅಭಿಪ್ರಾಯ ಪಟ್ಟರು. ರೈತರ ಮೇಲೆ ನಂಬಿಕೆಯಿಂದ ಡಿಸಿಸಿ ಬ್ಯಾಂಕ್ ನಿಂದ ಸಾಲಸೌಲಭ್ಯ ನೀಡಲಾಗುತ್ತಿದೆ. ಅಷ್ಟೇ ರೈತರು ನಂಬಿಕೆಯನ್ನು ಉಳಿಸಿಕೊಂಡು ಮರುಪಾವತಿ ಕೂಡ ಮಾಡುತ್ತಿದ್ದಾರೆ. ರೈತರು ಕಟ್ಟುವಂತ ಮರುಪಾವತಿ ಸಾಲಗಳಿಂದಲೇ ಡಿಸಿಸಿ ಬ್ಯಾಂಕ್ ಗಳು ಇಷ್ಟು ದೊಡ್ಡ ಮಟ್ಟಕ್ಕೆ ರಾಜ್ಯದಲ್ಲಿ ಬೆಳೆಯಲು ಸಾಧ್ಯವಾಗಿದೆ. ರೈತರು ಸಾಲ ಮರುಪಾವತಿಸಿ ಎಂದರು. ಕೇಂದ್ರ ಸರ್ಕಾರದಿಂದ 200 ಕೋಟಿ ನಬಾರ್ಡ್ ಹಣ ಬಿಡುಗಡೆ ಆಗಬೇಕಿತ್ತು. ಆದರೇ…

Read More

ಬೆಂಗಳೂರು: ಕರ್ನಾಟಕಕ್ಕೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ತ್ವರಿತವಾಗಿ ಪೂರೈಸುವಂತೆ ಸಂಸದರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ರೈತರು ದೇಶದ ಆರ್ಥಿಕತೆಯ ಬೆನ್ನೆಲುಬು. ಕರ್ನಾಟಕದಲ್ಲಿ ಮುಂಗಾರು ಬೇಗ ಪ್ರಾರಂಭವಾಗಿದ್ದು ಸರಾಸರಿಗಿಂತ ಶೇ.3ರಷ್ಟು ಹೆಚ್ಚು ಮಳೆಯಾಗಿದ್ದರಿಂದ ಬಿತ್ತನೆ ನಿರೀಕ್ಷೆಗೂ ಮುಂಚೆ ಚಾಲನೆಯಾಗಿದೆ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 114.40 ಲಕ್ಷ ಹೆಕ್ಟೇರ್ ನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. 160.68 ಲಕ್ಷ ಟನ್ ಆಹಾರಧಾನ್ಯಗಳು ಮತ್ತು ಎಣ್ಣೆಕಾಳುಗಳ ಉತ್ಪಾದನಾ ಗುರಿ ಹೊಂದಲಾಗಿದೆ. ಮುಂಗಾರು ಹಂಗಾಮಿಗೆ 82.50 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು 81.85 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲಿ 26.77 ಲಕ್ಷ ಮೆಟ್ರಿಕ್ ಟನ್ ವಿವಿಧ ರಸಾಯನಿಕ ರಸಗೊಬ್ಬರಗಳ ಬೇಡಿಕೆ ಅಂದಾಜಿಸಲಾಗಿದೆ. 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಕೊರತೆ ಉಂಟಾಗಿದೆ. ರಾಜ್ಯಗಳಿಗೆ ಅಗತ್ಯವಿರುವ…

Read More

ಬೆಂಗಳೂರು: ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕಾಮನ್‌ಸೆನ್ಸ್‌ ಇಲ್ಲ. ಅವರ ಮಾತಿನಿಂದಲೇ ಅವರು ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಅದು ಸುಳ್ಳು ಎಂದು ಸಾಬೀತಾಗಿದೆ. ಈಗ ಅಳಂದ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಮಾಲೂರು ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದೆ ಎಂದು ಸಾಬೀತಾಗಿದ್ದು, ಕಾಂಗ್ರೆಸ್‌ ಶಾಸಕರ ಸದಸ್ಯತ್ವವೇ ರದ್ದಾಗಿದೆ. ಇಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ಅಫಿಡವಿಟ್‌ ನೀಡಿದ್ದರು. ಜಿಲ್ಲಾಧಿಕಾರಿ ತಪ್ಪು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ಬಿಹಾರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಕಾಂಗ್ರೆಸ್‌ ನಾಯಕರಿಗೆ ಭ್ರಮನಿರಸನವಾಗಿದೆ. ಅದಕ್ಕಾಗಿ ಮೊದಲೇ ಆರೋಪ…

Read More

ಬೆಂಗಳೂರು: ತಮ್ಮ ಮತಗಳ್ಳತನ ಆರೋಪದ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರದ ಮೂಲಕ ದೂರು ಕೊಡುತ್ತಿಲ್ಲವೇಕೆ? ಹಿಟ್ ಆಂಡ್ ರನ್ ಮಾಡುವುದೇ ಇವರ ಉದ್ದೇಶವೇ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ ನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ಆಳಂದದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದರು. ಚುನಾವಣಾ ಆಯೋಗ ಒಂದು ಸಾಂವಿಧಾನಿಕ ಸಂಸ್ಥೆ. ಯಾವುದಾದರೂ ದೂರಿದ್ದರೆ ಅಫಿಡವಿಟ್ ಮೂಲಕ ಸಲ್ಲಿಸಲು ತಿಳಿಸಿದ್ದರು ಎಂದು ಗಮನ ಸೆಳೆದರು. ರಾಹುಲ್ ಗಾಂಧಿ ಅವರು 100ಕ್ಕೂ ಹೆಚ್ಚು ಚುನಾವಣೆಯ ನೇತೃತ್ವ ವಹಿಸಿ 8-9 ಕಡೆ ಯಶಸ್ಸು ಕಂಡಿದ್ದಾರೆ. ಸುಮಾರು ಶೇ 92ರಷ್ಟು ವೈಫಲ್ಯ ಅವರದು. ತಮ್ಮ ಚುನಾವಣಾ ವೈಫಲ್ಯವನ್ನು ಅವರು ಚುನಾವಣಾ ಆಯೋಗದ ಹೆಗಲಿಗೆ ಕಟ್ಟಲು ಹೊರಟಿದ್ದಾರಾ ಎಂದು ಪ್ರಶ್ನೆ ಹಾಕಿದರು. ಅವರದು ಆಧಾರಸಹಿತ…

Read More

ಬೆಂಗಳೂರು: ಹಿಂದೆ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರ ಮತಗಳ್ಳತನ ಸಂಬಂಧ ಅಲಹಾಬಾದ್ ಹೈಕೋರ್ಟ್ ತೀರ್ಪು ಕೊಟ್ಟ ಬಳಿಕವೇ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಲಾಗಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಗಮನ ಸೆಳೆದರು. ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್ ನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಳಂದದಲ್ಲಿ ಮತದಾರರ ಪಟ್ಟಿಯಿಂದ ಹೆಸರು ತೆಗೆದ ವಿಷಯದಲ್ಲಿ ರಾಹುಲ್ ಗಾಂಧಿ ಮತ್ತು ಬಿ.ಆರ್.ಪಾಟೀಲರ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದರು. 1975-76ರಲ್ಲಿ ಈ ದೇಶದಲ್ಲೇ ಒಂದು ದೊಡ್ಡ ಆಂದೋಲನ ಆಗಿತ್ತು. ಆಗಿನ ರಾಷ್ಟ್ರೀಯ ನಾಯಕ ಜಯಪ್ರಕಾಶ್ ನಾರಾಯಣ್ ಅವರು ಅದರ ನೇತೃತ್ವ ವಹಿಸಿದ್ದರು. ದೇಶದಲ್ಲಿ ಮತಚೋರಿ ವಿರುದ್ಧ ಅವರು ಆಕ್ಷೇಪಿಸಿ ಆಂದೋಲನ ಮಾಡಿದ್ದರು ಎಂದು ವಿವರಿಸಿದರು. ಆಗ ಇಂದಿರಾ ಗಾಂಧಿ ಹಠಾವೋ ಕಾರ್ಯಕ್ರಮ ನಡೆದಿತ್ತು ಎಂದರು. ಕಳ್ಳ ಮತ್ತೊಬ್ಬನನ್ನು ಕಳ್ಳ ಎನ್ನಲು ಶುರು ಮಾಡಿದ್ದಾನೆ. ಕಳ್ಳ ತಪ್ಪಿಸಿಕೊಳ್ಳಲು ಬೇರೆಯವರನ್ನು ಕಳ್ಳ ಮಾಡಲು ಹೊರಟಿದ್ದಾನೆ ಎಂದು ಟೀಕಿಸಿದರು. ಇದು ರಾಹುಲ್ ಗಾಂಧಿಯವರ ಕೆಲಸ…

Read More

ಬೆಂಗಳೂರು: ರಾಜ್ಯದಲ್ಲಿ ದೌರ್ಜನ್ಯಕ್ಕೆ ಒಳಗಾದಂತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ, ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡೋದಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಚಿವ ಸಂಪುಟ ಸಭೆಯಲ್ಲಿ ದೌರ್ಜನ್ಯಕ್ಕೊಳಗಾದಂತ ಎಸ್ಸಿ, ಎಸ್ಟಿ ಸಮುದಾಯದ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ನೌಕರಿ ನೀಡುವಂತ ನಿರ್ಧಾರಕ್ಕೆ ಸಮ್ಮತಿಸಿದೆ. ಗ್ರೂಪ್-ಸಿ, ಗ್ರೂಪ್-ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದಲ್ಲಿ ಎಸ್ಸಿ, ಎಸ್ಟಿ ವ್ಯಕ್ತಿಯ ದೌರ್ಜನ್ಯಕ್ಕೊಳಗಾದಂತ ಅವಲಂಬಿತರಿಗೆ ನೀಡಲು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. https://kannadanewsnow.com/kannada/digitalization-of-transport-corporation-assets-minister-ramalinga-reddys-significant-announcement/ https://kannadanewsnow.com/kannada/the-bjp-core-committee-meeting-scheduled-for-tonight-has-been-canceled/

Read More

ಬೆಂಗಳೂರು: ಸಾರಿಗೆ ಸಂಸ್ಥೆಯ ಆಸ್ತಿ ಡಿಜಟಲೀಕರಣ ಮಾಡಲಾಗುತ್ತದೆ. ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಮೇಲ್ಪಂಕ್ತಿ ಹಾಕಿದೆ. 255 ಆಸ್ತಿಗಳ 683.20 ಎಕರೆ ಭೂಮಿ ಸರ್ವೆ ಮಾಡಲಾಗಿದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಡಿಜಟಲೀಕರಣ ಮೂಲಕ ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿಗಳ ರಕ್ಷಣೆಗೆ ಮುಂದಾಗಿದೆ. ಸಾರಿಗೆ ಸಂಸ್ಥೆಯ ಆಸ್ತಿಗಳ ಒತ್ತುವರಿ ತಡೆಯುವುದು, ಒತ್ತುವರಿ ಆಗಿರುವುದನ್ನು ಗುರುತಿಸುವುದು, ಆಸ್ತಿಗಳ ವಾಸ್ತವತೆ ತಿಳಿದುಕೊಳ್ಳುವುದು, ಕೆಲವಡೆ ಸಮರ್ಪಕ ದಾಖಲೆ ನಿರ್ವಹಣೆ ಕೊರತೆ, ಅಧಿಕಾರಿಗಳ ವರ್ಗಾವಣೆಯಿಂದಾಗಿ ಆಸ್ತಿಗಳ ಮಾಹಿತಿ ಇಲ್ಲದಿರುವುದು. ಇತರೆ ಕಾರಣಗಳಿಂದಾಗಿ ಆಸ್ತಿಗಳು ಖಾಸಗಿಯವರ ಪಾಲಾಗುವ ಸಾಧ್ಯತೆಗಳೇ ಹೆಚ್ಚಾಗಿರುತ್ತದೆ ಎಂದಿದ್ದಾರೆ. ಕಂದಾಯ ಇಲಾಖೆಯ ಲ್ಯಾಂಡ್ ಬೀಟ್ ಆ್ಯಪ್ ಬಳಸಿ ಆಸ್ತಿಗಳ ನಕಾಶೆ, ದಾಖಲೆ ಜತೆ ಸರ್ವೆ ಮಾಡಲಾಗುತ್ತಿದೆ. ಸಂಸ್ಥೆಯ ಆರು ಜಿಲ್ಲೆಗಳಲ್ಲಿ 255 ಆಸ್ತಿಗಳ ಒಟ್ಟು 683.20 ಎಕರೆ ಭೂಮಿ ಹೊಂದಿದ್ದು ಮೌಲ್ಯ…

Read More