Author: kannadanewsnow09

ಗದಗ: ನಟ ಯಶ್ ಅವರ ಹುಟ್ಟು ಹಬ್ಬದ ಕಾರಣ, ಕಟೌಟ್ ಕಟ್ಟೋ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೂವರು ಸಾವನ್ನಪ್ಪಿದ್ದರು. ಈಗಾಗಲೇ ಅವರಿಗೆ ರಾಜ್ಯ ಸರ್ಕಾರ, ಯಶ್ ಅಭಿಮಾನಿಗಳಿಂದ ಕುಟುಂಬಸ್ಥರಿಗೆ ಪರಿಹಾರ ನೀಡಲಾಗಿದೆ. ಈ ಬೆನ್ನಲ್ಲೇ ಗಾಯಾಳುಗಳಾಗಿದ್ದಂತ ಮೂವರಿಗೆ ನಟ ಯಶ್ 1 ಲಕ್ಷ ಪರಿಹಾರವನ್ನು ನೀಡಿದ್ದಾರೆ. ಗದಗದಲ್ಲಿ ನಟ ಯಶ್ ಬರ್ತ್ ಡೇ ಹಿಂದಿನ ದಿನ ಕಟೌಟ್ ಕಟ್ಟೋ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದರು. ಅಲ್ಲದೇ ಇದೇ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಅವರ ನೆರವಿಗೆ ಧಾವಿಸಿರೋ ನಟ ಯಶ್, ಅವರ ಕುಟುಂಬಸ್ಥರಿಗೆ 1 ಲಕ್ಷ ನೆರವನ್ನು ನೀಡಿದ್ದಾರೆ. ಈ ಮೂಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಗಾಯಾಳುವಿಗೆ ನೆರವಾಗಿದ್ದಾರೆ. https://kannadanewsnow.com/kannada/good-news-for-the-people-of-the-state-teleicu-system-to-be-set-up-in-all-taluk-hospitals/ https://kannadanewsnow.com/kannada/breaking-sensex-nifty-hit-record-highs-investors-gain-rs-3-32-lakh-crore/

Read More

ಬೆಂಗಳೂರು: ಮಂಡ್ಯದ ಹನುಮಧ್ವಜ ವಿವಾದ ನಂತ್ರ ಸೋಷಿಯಲ್ ಮೀಡಿಯಾದಲ್ಲಿ ಆ ಕುರಿತಂತ ಪೋಸ್ಟ್, ವೀಡಿಯೋಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಅಲ್ಲದೇ ಹಾಗೆ ಮಾಡಿದ್ರೇ ಕಾನೂನು ಕ್ರಮ ಕೈಗೊಳ್ಳೋದಾಗಿ ಎಚ್ಚರಿಕೆ ನೀಡಿದೆ. ಇಂತಹ ಮಂಡ್ಯ ಜಿಲ್ಲಾಡಳಿತದ ಕ್ರಮವನ್ನು ಖಡಿಸಿರೋ ವಿಪಕ್ಷ ನಾಯಕ ಆರ್.ಅಶೋಕ್, ಇದು ಪೊಲೀಸರ ಮೂಲಕ ಬಾಯಿ ಮುಚ್ಚಿಸೋ ದುಸ್ಸಾಹಸ ಎಂಬುದಾಗಿ ಕಿಡಿಕಾರಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ಮಂಡ್ಯದ ಕೆರೆಗೋಡಿನಲ್ಲಿ ಹನುಮ ಧ್ವಜ ಇಳಿಸಿದ ನಂತರ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿರುವ ಜನರಿಗೆ ಕಾನೂನಿನ ಭಯ ತೋರಿಸಿ, ಪೊಲೀಸರ ಮೂಲಕ ಬಾಯಿ ಮುಚ್ಚಿಸುವ ದುಸ್ಸಾಹಸಕ್ಕೆ ಕೈಹಾಕಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ದಿನ ಬೆಳಗಾದರೆ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ, ವಾಕ್ ಸ್ವಾತಂತ್ರ್ಯ ಹತ್ತಿಕ್ಕಲಾಗಿದೆ, ಪ್ರಜಾತಂತ್ರ ಅಪಾಯದಲ್ಲಿದೆ ಎಂದು ಬಾಯಿ ಬಡಿದುಕೊಳ್ಳುವ ಕಾಂಗ್ರೆಸ್ ನಾಯಕರು, ಈಗ ಕರ್ನಾಟಕದಲ್ಲಿ ಮಾಡುತ್ತಿರುವುದೇನು? ಎಂದು ಪ್ರಶ್ನಿಸಿದ್ದಾರೆ. ಸಿಎಂ ಸಿದ್ಧರಾಮಯ್ಯನವರೇ, ತಮ್ಮ ಸರ್ಕಾರಕ್ಕೆ ಕೊಂಚವಾದರೂ ಮಾನ…

Read More

ಬೆಂಗಳೂರು: ಹಂತ ಹಂತವಾಗಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ವ್ಯವಸ್ಥೆ ಕಲ್ಪಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಟೆಲಿಐಸಿಯು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ನೂರಿತ ತಜ್ಞ ವೈದ್ಯರಿಂದ ನಮ್ಮ ಗ್ರಾಮೀಣ ಪ್ರದೇಶದ ಜನರಿಗೆ ಚಿಕಿತ್ಸೆ ದೊರೆಯುವಂತಾಗಬೇಕು. ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಗಾಗಿ ಹಳ್ಳಿಗಾಡಿನ ಜನರಿಗೆ ದೂರದ ಜಿಲ್ಲೆಗಳಿಗೆ ಬರುವುದು ಕಷ್ಟವಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿಯೇ ಸೂಪರ್ ಸ್ಪಾಷಾಲಿಟಿ ಕೇರ್ ಅನ್ನ ಒದಗಿಸುವ ನಿಟ್ಟಿನಲ್ಲಿ ಟೆಲಿಐಸಿಯೂ ವ್ಯವಸ್ಥೆ ಸಹಕಾರಿ. ತಾಲೂಕು ಮಟ್ಟದಲ್ಲಿ ಐಸಿಯು ಕೇಂದ್ರಗಳನ್ನು ಸ್ಥಾಪಿಸಿ, ಇಲ್ಲಿಂದಲೇ ಅವುಗಳನ್ನು ಪರಿಶೀಲಿಸುವಂತಹ ತಂತ್ರಜ್ಞಾನಗಳ ಬಳಕೆ ಕಾರ್ಯಕ್ಕೆ ನಾವು ಒತ್ತು ನೀಡಿದ್ದೇವೆ. ತುರ್ತು ಪರಿಸ್ಥಿತಿಯಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ದಾಖಲಾಗುವ ರೋಗಿಗಳ ಆರೋಗ್ಯ ಪರಿಶೀಲನೆ ಹಾಗೂ ಚಿಕಿತ್ಸಾ ಸಲಹೆಗಳನ್ನ ಟೆಲಿಐಸಿಯು ಮೂಲಕ ತಜ್ಞ ವೈದ್ಯರಿಂದ ಪಡೆಯಬಹುದಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈಗಾಗಲೇ ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಈ ವ್ಯವಸ್ಥೆಯನ್ನ ಜಾರಿಗೆ ತರಲಾಗಿದ್ದು, ಇದೀಗ ಬೆಂಗಳೂರಿನ ವಿಕ್ಟೋರಿಯಾ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ತೆರವಿನ ಮಾಹಿತಿಯನ್ನು ಅಧಿಕಾರಿಗಳಿಗೆ ನೀಡುವಂತೆ ಮನವಿ ಮಾಡಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರೋ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ತನ್ನ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ ಎಂದಿದೆ. ಮುಂದುವರಿದು, ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಮುಖಾಂತರ ಜಿ.ಪಿ.ಎಸ್ ಸಹಿತ ಫೋಟೋ ಲಗತ್ತಿಸಿ) ವಿಳಾಸದೊಂದಿಗೆ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಶ್ರೀ ಬಿ.ಜಿ.ಎಲ್ ಸ್ವಾಮಿ ರವರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿದೆ. ಉಪ ವಿಭಾಗ ಹಾಗೂ ವಲಯವಾರು ಅಧಿಕಾರಿಗಳ ವಿವರ: 1. ಉಪ ವಿಭಾಗ-1: (ಅ) ಎ.ಡಿ.ಪ್ರಕಾಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ. ಮೊ.ಸಂ: 9663035011/9480683886 (ಪೂರ್ವ, ಯಲಹಂಕ, ಮಹದೇವಪುರ ಮತ್ತು ದಾಸರಹಳ್ಳಿ ವಲಯ)…

Read More

ಮಂಗಳೂರು: ಪ್ರತೇಕ ರಾಷ್ಟ್ರ ಹೇಳಿಕೆ ನೀಡಿದಂತ ಸಂಸದ ಡಿ.ಕೆ ಸುರೇಶ್ ಗೆ ಈಗ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ವಕೀಲರೊಬ್ಬರು ಕೋರ್ಟ್ ಮೊರೆ ಹೋಗಿದ್ದಾರೆ. ಈ ಸಂಬಂಧ ಮಂಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಬಿಜೆಪಿ ಮುಖಂಡ ಹಾಗೂ ವಕೀಲ ಪಿ.ವಿಕಾಸ್ ಎಂಬುವರು ಅರ್ಜಿ ಸಲ್ಲಿಸಿದ್ದಾರೆ. ಪ್ರತ್ಯೇಕ ರಾಷ್ಟ್ರದ ಹೇಳಿಕೆಯನ್ನು ನೀಡಿದಂತ ಸಂಸದ ಡಿ.ಕೆ ಸುರೇಶ್ ವಿರುದ್ಧ ದೂರು ದಾಖಲಿಸೋದಕ್ಕೆ ಪೊಲೀಸರಿಗೆ ಸೂಚಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಡಿಕೆ ಸುರೇಶ್ ಅವರ ಹೇಳಿಕೆ ದೇಶದ್ರೋಹದ, ಕುಮ್ಮಕ್ಕಿಗೆ ಕಾರಣವಾಗುವಂತ ಹೇಳಿಕೆಯಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋ ನಿಟ್ಟಿನಲ್ಲಿ ಕ್ರಮವಾಗಬೇಕಿದೆ. ಆ ನಿಟ್ಟಿನಲ್ಲಿ ಘನ ನ್ಯಾಯಾಲಯವು ಸೂಚಿಸಬೇಕು ಎಂಬುದಾಗಿ ಅರ್ಜಿಯಲ್ಲಿ ಕೋರಿದ್ದಾರೆ. ಇದಷ್ಟೇ ಅಲ್ಲದೇ ಐಪಿಸಿ ಸೆಕ್ಷನ್ 124ಎ ಅಡಿಯಲ್ಲಿ ಸಂಸದ ಡಿ.ಕೆ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳೋದಕ್ಕೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಅಲ್ಲದೇ ಪೊಲೀಸ್ ಆಯುಕ್ತ, ಮಂಗಳೂರು ಉತ್ತರ ಪೊಲೀಸ್ ಠಾಣೆಗೂ ದೂರು ದಾಖಲಿಸಿಕೊಳ್ಳೋದಕ್ಕೆ ಸೂಚಿಸುವಂತೆ ಮನವಿ ಮಾಡಲಾಗಿದೆ. ಈ…

Read More

ಬೆಂಗಳೂರು: ಬೇಸಿಗೆ ಅವಧಿ ಆರಂಭವಾಗುತ್ತಿದ್ದು, ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿಗೆ ಅಭಾವವಾಗುವ ಪರಿಸ್ಥಿತಿ ಎದುರಾಗುವ ಸಂಭವವಿರುವುದರಿಂದ ಜಿಲ್ಲಾ ಪಂಚಾಯತಿಗಳು ಅತಿ ಎಚ್ಚರಿಕೆಯಿಂದ ಮುಂಜಾರೂಕತ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿ ತಿಂಗಳು 2ನೆ ತಾರೀಕಿನಂದು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫೆರೆನ್ಸ್‌ ನಡೆಸುವ ಪರಿಪಾಠದಂತೆ ಸಚಿವರು ಇಂದು ಸಭೆ ನಡೆಸಿ, ನೀರಿಗೆ ಅಭಾವವಾಗದಂತೆ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗುವಂತೆ ನಿರ್ದೇಶಿಸಿದರು. ಮಲೆನಾಡು ಪ್ರದೇಶದಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚಾಗಿ ನೈಸರ್ಗಿಕವಾಗಿ ಲಭ್ಯವಾಗುವ ನೀರಿನ ತೊರೆಗಳ ಮೇಲೆ ಅವಲಂಬಿತರಾಗಿರುತ್ತಾರೆ, ಹಾಗೆಯೇ ರಾಜ್ಯದ ಬಹಳಷ್ಟು ಹಳ್ಳಿಗಳಲ್ಲಿ ಕೊಳವೆ ಬಾವಿ ನೀರಿನ ಮೂಲವಾಗಿರುತ್ತದೆ, ಮಳೆ ಬೀಳದೆ ಬರ ಪರಿಸ್ಥಿತಿ ಉದ್ಭವವಾಗಿರುವ ಹಿನ್ನೆಲೆಯಲ್ಲಿ ಜಲಮೂಲಗಳು ಬತ್ತಿ ನೀರಿಗೆ ಅಭಾವ ಉಂಟಾಗುವ ಸಾಧ್ಯತೆಗಳಿರುತ್ತವೆ, ಹೀಗೆ ತೊಂದರೆಗೀಡಾಗುವ ಸ್ಥಳಗಳನ್ನು ಮುಂಚಿತವಾಗಿ ಗುರುತಿಸಿಕೊಂಡು, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಆಡಳಿತವನ್ನು…

Read More

ಬೆಂಗಳೂರು: ವಕೀಲ ವೃತ್ತಿಯ ಹೆಸರಿನಲ್ಲಿ ಮನ್ನಣೆಗಾಗಿ ಹವಳಿಸುವ ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್ ರವರು ಬೆಂಗಳೂರು ವಕೀಲರ ಸಂಘದ ಹೆಸರಿನಲ್ಲಿ ನಕಲಿ ಆಹ್ವಾನ ಪತ್ರಿಕೆಯನ್ನು ಸೃಷ್ಟಿ ಮಾಡಿ ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ್ ರವರ ಹೆಸರಿಗೆ ಮಸಿ ಬಳಿಯಲು ಹೊರಟಿರಿವುದು ಅವರ ಹಿಟ್ ಅಂಡ್ ರನ್ ಮನಸ್ಥಿತಿಯ ಇನ್ನೊಂದು ಮುಖವಾಗಿರುತ್ತದೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಕಿಡಿಕಾರಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಇಂದು ಬಿಡುಗಡೆ ಮಾಡಿದ್ದು, ಮಾಜಿ ಸಚಿವ ರಾಜಾಜಿನಗರದ ಶಾಸಕ ಬಿಜೆಪಿ ಮುಖಂಡ ಕರ್ನಾಟಕ ಲೋಕಸೇವಾ ಆಯೋಗದ ತಾತ್ಕಾಲಿಕ ಗೇಟ್ ಕೀಪರ್ ಸುರೇಶ್ ಕುಮಾರ್ ರವರು ಸುಳ್ಳು ವದಂತಿ ಹಬ್ಬಿಸುವ ನಾಯಕರಾಗಿ ಹೊರಹೊಮ್ಮಿರುವುದು ಅವರ ವ್ಯಕ್ತಿತ್ವದ ಇನ್ನೊಂದು ಮುಖವಾಗಿರುತ್ತದೆ. ತಮಗೆ ಬೇಕಾದಾಗ ತಾವು ವಕೀಲರೆಂದು ಹೇಳಿಕೊಳ್ಳುವ ಮತ್ತು ವಕೀಲ ವೃತ್ತಿಯ ಹೆಸರಿನಲ್ಲಿ ಮನ್ನಣೆಗಾಗಿ ಹವಳಿಸುವ ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್ ರವರು ಬೆಂಗಳೂರು ವಕೀಲರ ಸಂಘದ ಹೆಸರಿನಲ್ಲಿ ನಕಲಿ…

Read More

ಬೆಂಗಳೂರು : “ಕೇಂದ್ರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ 62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಫೆ. 7 ರಂದು ಕರ್ನಾಟಕ ಸರಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ  ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇವೆ. ಪ್ರತಿಭಟನೆ ಸ್ಥಳವಕಾಶದ ಬಗ್ಗೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದರು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದರು. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯು ಪ್ರಯಾಣಿಕರ ಸುರಕ್ಷತೆಯಿಂದ, ಅವರ ಆರಾಮದಾಯಕ ಪ್ರಯಾಣಕ್ಕೆ ಸದಾ ಕ್ರಮವಹಿಸಿದೆ. ಇಂತಹ ಕೆಎಸ್ಆರ್ ಟಿಸಿಯು, ಈಗ ಪ್ರಯಾಣಿಕರಿಗೆ 100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳನ್ನು ಫೆಬ್ರವರಿ.5ರಂದು ರಸ್ತೆಗೆ ಇಳಿಸುತ್ತಿದೆ. ಈ ಕುರಿತಂತೆ ನಿಗಮದಿಂದ ಪತ್ರಿಕಾ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 05-02-2024ರಂದು ವಿಧಾನಸೌಧದ ಮುಂಭಾಗದಲ್ಲಿ 100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸುಗಳ ಲೋಕಾರ್ಪಣೆ ಕಾರ್ಯ ನಡೆಯಲಿದೆ ಎಂದಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನವರಿ.5ರಂದು ಬೆಳಿಗ್ಗೆ 10.30ಕ್ಕೆ ಅಶ್ವಮೇಧ ಕ್ಲಾಸಿಕ್ ಬಸ್ ಲೋಕಾರ್ಪಣೆಗೊಳಿಸಲಿದ್ದಾರೆ. ಪ್ರಯಾಣದ ಮರುಕಲ್ಪನೆ, ಪಾಯಿಂಟ್ ಟು ಪಾಯಿಂಟ್ ಎಕ್ಸ್ ಪ್ರೆಸ್ ಟ್ಯಾಗ್ ಲೈನ್ ಹೊಂದಿರುವಂತ ಬಸ್ಸುಗಳು ಅಂದಿನಿಂದ ರಸ್ತೆಗೆ ಇಳಿಯಲಿದೆ ಎಂದು ತಿಳಿಸಿದೆ. ಈ ಅಶ್ವಮೇಧ ಕ್ಲಾಸಿಕಲ್ 100 ಹೊಸ ವಿನ್ಯಾಸದ ಸಾರಿಗೆ ಬಸ್ಸುಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಡಿಸಿಎಂ ಡಿಕೆ ಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ವಿವಿಧ ಗಣ್ಯರು…

Read More

ರಾಮನಗರ: ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಚುನಾವಣಾ ಶಾಖಾಧಿಕಾರಿಯೊಬ್ಬರು ಶವವಾಗಿ ಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕು ಕಚೇರಿಯಲ್ಲಿ ಚುನಾವಣಾ ಶಾಖಾಧಿಕಾರಿಯಾಗಿ ಸುರೇಶ್ ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಇಂದು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಕಚೇರಿಯಲ್ಲೇ ಶವವಾಗಿ ಪತ್ತೆಯಾಗಿದ್ದಾರೆ. ಚುನಾವಣಾ ಶಾಖಾಧಿಕಾರಿ ಸುರೇಶ್ ಅವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರೋದು ಹಲವು ಅನುಮಾನಗಳಿಗೂ ಕಾರಣವಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಕನಕಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/breaking-sensex-nifty-hit-record-highs-investors-gain-rs-3-32-lakh-crore/ https://kannadanewsnow.com/kannada/fir-against-ed-officials-hc-stays-police-probe/

Read More