Author: kannadanewsnow09

ಮಂಡ್ಯ: ಜಿಲ್ಲೆಯ ಕೆರಗೋಡಿನಲ್ಲಿನ ಹನುಮಧ್ವಜ ವಿವಾದದ ಬಳಿಕ, ಜಿಲ್ಲಾಡಳಿತದಿಂದ ಮತ್ತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗ ಎಚ್ಚರಿಕೆ ವಹಿಸಿದೆ. ಅದರ ಸಲುವಾಗಿ ಮಹತ್ವದ ಕ್ರಮವನ್ನು ಕೈಗೊಂಡಿದೆ. ಒಂದು ವೇಳೆ ನೀವು ಮಂಡ್ಯ ಹನುಮಧ್ವಜ ವಿವಾದದ ಸಂಬಂಧ ಏನಾದ್ರೂ ಹೀಗೆ ಮಾಡಿದ್ರೇ, ನಿಮ್ಮ ವಿರುದ್ಧ ಕೇಸ್ ಫಿಕ್ಸ್ ಆಗಲಿದೆ. ಈ ಕುರಿತಂತೆ ಮಂಡ್ಯ ಜಿಲ್ಲಾಡಳಿತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ಸೂಕ್ಷ್ಮ ವಿಚಾರವಾಗಿದೆ ಎಂದಿದೆ. ಈ ಸಂಬಂಧ ಯಾರಾ ಆಗಲಿ ಸಾಮಾಜಿಕ ಜಾಲತಾಣಗಳಾದ ಎಕ್ಸ್, ಫೇಸ್ ಬುಕ್, ವಾಟ್ಸ್ ಆಪ್, ಇನ್ ಸ್ಟಾಗ್ರಾಂ, ಯೂಟ್ಯೂಬ್  ಇತ್ಯಾದಿ ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಸ್ಥ್ಯಕ್ಕೆ ಭಂಗತರುವ ಚಿತ್ರಗಳು, ವೀಡಿಯೋಗಳು, ಪ್ರಚೋದನಕಾರಿ ಹೇಳಿಕೆಗಳು, ಪೋಸ್ಟರ್ ಗಳು ಹಾಗೂ ಉದ್ರೇಕಕಾರಿ ಭಾಷಣಗಳುವಂತಿಲ್ಲ. ಒಂದು ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಉದ್ರೇಕಕಾರಿ ಭಾಷಣ, ಪೋಸ್ಟರ್ ಕಳುಹಿಸಿದ್ರೇ, ಇದಕ್ಕೆ ಪ್ರಚೋದನೆ ನೀಡಿದ್ರೆ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಎಚ್ಚರಿಸಿದೆ.…

Read More

ನವದೆಹಲಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಡೆದಂತ ಹನುಮಧ್ವಜ ವಿವಾದದ ಸಂದರ್ಭದಲ್ಲಿನ ಪ್ರತಿಭಟನೆಯಲ್ಲಿ ಕೇಸರಿ ಶಾಲು ಹಾಕಬಾರದಿತ್ತು ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೆಚ್.ಡಿ ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು. ಅದರ ಬದಲಾಗಿ ನಮ್ಮ ಪಕ್ಷದ ಶಾಲು ಹಾಕಬಹುದಾಗಿತ್ತು ಎಂಬುದಾಗಿ ತಿಳಿಸಿದ್ದಾರೆ. ಮೈತ್ರಿ ಬಳಿಕ ಒಂದುಗೂಡಿ ಕೆಲಸ ಮಾಡ್ತಿದ್ದೇವೆ. ಇಬ್ಬರು ಸೇರಿ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು. ಮಂಡ್ಯದಲ್ಲಿನ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಂತ ಕುಮಾರಸ್ವಾಮಿಗೆ ಯಾರೋ ಬಂದು ಕೇಸರಿ ಶಾಲು ಹಾಕಿರ್ತಾರೆ. ಅವರೇ ಏನು ಹಾಕಿರೋದಿಲ್ಲ ಎಂದರು. ಕುಮಾರಸ್ವಾಮಿ ಕೇಸರಿ ಶಾಲು ಹಾಕಿದ್ದರ ಬಗ್ಗೆ ದೊಡ್ಡ ವ್ಯಾಖ್ಯಾನ ಮಾಡೋ ಅಗತ್ಯವಿಲ್ಲ. ಕೇಸರಿ ಶಾಲು ಬದಲು ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದರು. ನಾನು ಯಾವತ್ತೂ ಕೇಸರಿ ಶಾಲು ಹಾಕೋದಿಲ್ಲ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕಲ್ಲ ಎಂಬುದಾಗಿ ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ…

Read More

ಬೆಂಗಳೂರು: ಮಾಗಡಿಯ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ರೆ ಮಾತ್ರ ಗ್ಯಾರಂಟಿ ಯೋಜನೆ ಮುಂದುವರಿಕೆ. ಇಲ್ಲವಾದಲ್ಲಿ ರದ್ದು ಎಂಬುದಾಗಿ ಹೇಳಿದ್ದು ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರಾಜ್ಯ ಚುನಾವಣಾ ಆಯೋಗಕ್ಕೆ ಅವರ ವಿರುದ್ಧ ದೂರು ನೀಡಿದ್ದಾರೆ. ಇಂದು ಕೆಆರ್ ಸರ್ಕಲ್ ನಲ್ಲಿರುವಂತ ರಾಜ್ಯ ಚುನಾವಣಾ ಆಯೋಗದ ಕಚೇರಿಗೆ ತೆರಳಿದಂತ ಅವರು, ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ ಲೋಕಸಭಾ ಚುನಾವಣೆ ಘೋಷಣೆಗೆ ಮುನ್ನವೇ ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ಅವರು ಮತದಾರರನ್ನು ಸೆಳೆಯೋ ಪ್ರಯತ್ನಕ್ಕೆ ಇಳಿಸಿದ್ದಾರೆ. ಇದೇ ಕಾರಣದಿಂದಾಗಿ ಲೋಕಸಭೆಯಲ್ಲಿ ಕಾಂಗ್ರೆಸ್ ಗೆದ್ದರೇ ಮಾತ್ರವೇ ಗ್ಯಾರಂಟಿ ಯೋಜನೆ ಮುಂದುವರೆಯಲಿದ್ದಾವೆ. ಸೋತರೆ ರದ್ದು ಎಂಬುದಾಗಿ ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ. ಮಾಗಡಿಯ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಆಮಿಷಗಳನ್ನು ತಡೆಗಟ್ಟೋ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಚುನಾವಣಾ ಆಯೋಗಕ್ಕೆ…

Read More

ಮಂಡ್ಯ: ಜಿಲ್ಲೆಯ ಕೃಷ್ಣ ರಾಜ ಸಾಗರ ಅಂದರೆ ಕೆ ಆರ್ ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಕುರಿತಂತೆ ಮಂಡ್ಯ ಜಿಲ್ಲಾಡಳಿತದಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ. KRS ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆಯನ್ನು ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ನಿಷೇಧಿಸಿರೋದಾಗಿ ತಿಳಿಸಿದೆ. ಜನವರಿ 8ರಂದು ಆದೇಶ ಹೊರಡಿಸಿದ್ದ ಹೈಕೋರ್ಟ್ ಆದೇಶದಂತೆ ಸಾರ್ವಜನಿಕ ಪ್ರಕಟಣೆಯನ್ನು ಮಂಡ್ಯ ಜಿಲ್ಲಾಡಳಿತದಿಂದ ಇಂದು ಹೊರಡಿಸಲಾಗಿದೆ. ಕೆಆರ್ ಎಸ್ ಸುತ್ತಮುತ್ತ ಗಣಿಗಾರಿಕೆ, ಗಣಿಗಾರಿಕೆ ಸಂಬಂಧಿತ ಚಟುವಟಿಕೆ ನಿಷೇಧಿಸಿ ಕೋರ್ಟ್ ಆದೇಶ ಮಾಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ಪ್ರಕಟಣೆ ಹೊರಡಿಸಿ, ಕೋರ್ಟ್ ಆದೇಶ ಕಟ್ಟುನಿಟ್ಟಿನ ಪಾಲನೆಗೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲರೂ ಕೋರ್ಟ್ ಆದೇಶವನ್ನ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆಯನ್ನು ನೀಡಲಾಗಿದೆ. ಆದೇಶ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆಯನ್ನು ನೀಡಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ

Read More

ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ಹಾಗೂ ಅರ್ಚಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪಂಡಿತ್ ವಿದ್ಯಾಧರ್ ನಕ್ಷತ್ರಿ 9686268564 ಮೇಷ ರಾಶಿ ಇಂದಿನ ದಿನ ಇಂದು ನೀವು ಮಿಶ್ರ ಫಲವನ್ನು ಪಡೆಯುವ ದಿನ. ಅಂತಹ ಪರಿಸ್ಥಿತಿಯಲ್ಲಿ, ಉನ್ನತ ಅಧಿಕಾರಿಯೊಂದಿಗಿನ ಸಂಘರ್ಷವು ಹಾನಿಕಾರಕವಾಗಿರುತ್ತದೆ. ಇಂದು ನೀವು ನಿಮ್ಮ ಕೋಪವನ್ನು ನಿಯಂತ್ರಿಸುವುದು ಉತ್ತಮ. ವ್ಯವಹಾರದಲ್ಲಿ ಹೊಸ ಸಂಬಂಧಗಳು ಅದೃಷ್ಟವನ್ನು ತರುತ್ತವೆ. ಇಂದು ನಿಮಗೆ ಸಾಮಾಜಿಕ ಗೌರವ ಸಿಗುತ್ತದೆ. ಸ್ನೇಹಿತರೊಂದಿಗೆ ಸುದೀರ್ಘ ಪ್ರವಾಸಕ್ಕೆ ಹೋಗಬಹುದು. ದಂಪತಿಗಳು ಜೀವನದಲ್ಲಿ ಮಾಧುರ್ಯ…

Read More

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನನ್ನ ಜೊತೆಗೆ ಯಾರೆಲ್ಲ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ರೋ, ಅವರೆಲ್ಲ ಮತ್ತೆ ಬಿಜೆಪಿ ಸೇರಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಒಂದೆಡೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಂತ ಲಕ್ಷ್ಮಣ್ ಸವದಿ, ನಾನು ಕಾಂಗ್ರೆಸ್ ಬಿಟ್ಟು ಮತ್ತೆ ಬಿಜೆಪಿ ಸೇರಲ್ಲ ಎನ್ನುತ್ತಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರ ನನ್ನ ಜೊತೆ ಕಾಂಗ್ರೆಸ್ ಸೇರಿದವರು ಮತ್ತೆ ಬಿಜೆಪಿ ವಾಪಾಸ್ ಆಗ್ತಾರೆ ಎಂಬುದಾಗಿ ಹೇಳುತ್ತಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಜೊತೆಗೆ ಕಾಂಗ್ರೆಸ್ ಸೇರಿದಂತ ಹಲವರು ನನ್ನ ಸಂಪರ್ಕದಲ್ಲೇ ಇದ್ದಾರೆ. ಅವರೆಲ್ಲ ಕಾಂಗ್ರೆಸ್ ಪಕ್ಷವನ್ನು ತೊರೆದು, ಮರಳಿ ಬಿಜೆಪಿ ಸೇರಲಿದ್ದಾರೆ ಎಂದರು. ಆದಷ್ಟು ಶೀಘ್ರದಲ್ಲೇ ಕಾಂಗ್ರೆಸ್ ಸೇರಿದ್ದಂತ ಬಿಜೆಪಿಗರು ಮರಳಿ ಗೂಡಿಗೆ ಸೇರಲಿದ್ದಾರೆ. ಕಾಂಗ್ರೆಸ್ ನಲ್ಲಿ ಪಕ್ಷದ ವರ್ಚಸ್ಸು ಇಲ್ಲ. ಹೀಗಾಗಿ ಕೈ ತೊರೆದು ಹಲವರು ಬಿಜೆಪಿ ಸೇರುವಂತ ಮನಸ್ಸಿ ಮಾಡಿದ್ದಾರೆ ಎಂದು ತಿಳಿಸಿದರು. https://kannadanewsnow.com/kannada/sweet-spot-many-job-opportunities-pm-modis-full-marks-for-interim-budget/…

Read More

ಬೆಂಗಳೂರು : ದೇಶದ ಒಟ್ಟು ಸಾಲವನ್ನು 190 ಲಕ್ಷ ಕೋಟಿ ರೂ.ಗಳಿಗೆ ಏರಿಸಿದ ಬಜೆಟ್ ಇದಾಗಿದ್ದು, ನಿಜವಾದ ಅರ್ಥದಲ್ಲಿ ಇದು ವಿಕಸಿತ ಅಲ್ಲ. ಭಾರತದ ವಿನಾಶಕಾರಿ ಬಜೆಟ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ಲೇಷಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮದವರ ಜತೆ ಮಾತನಾಡಿ ಕೇಂದ್ರ ಬಜೆಟ್ ಅನ್ನು ವಿಶ್ಲೇಷಿಸಿದರು. ಕಳೆದ ವರ್ಷಕ್ಕಿಂತ 5.8% ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ನಿರಾಶಾದಾಯಕ ಬಜೆಟ್ ಆಗಿದೆ. ನಿರುದ್ಯೋಗ, ಬರಗಾಲ, ರೈತರ ಸಮಸ್ಯೆಗಳ ಬಗ್ಗೆ ಮಾತೇ ಆಡಿಲ್ಲ. ಸಾಲ ಹೆಚ್ಚಾಗಿರುವುದು, ಒಟ್ಟು ಸಾಲದ ಪ್ರಮಾಣ ವಿಪರೀತ ಏರಿಕೆ ಆಗಿರುವುದನ್ನು ಹೇಳಿಲ್ಲ. ನಿರ್ಮಲಾ ಸೀತಾರಾಮನ್ ಅವರು 2024- 25 ನೇ ವರ್ಷಕ್ಕೆ ಮಧ್ಯಂತರ ಆಯವ್ಯಯ ಮಂಡಿಸಿದ್ದಾರೆ. 47,65758 ಕೋಟಿ ರೂ.ಗಾತ್ರದ ಬಜೆಟ್. ಕಳೆದ ವರ್ಷದ ಬಜೆಟ್ ಗಾತ್ರ 45 3097 ಕೋಟಿ ಆಗಿತ್ತು. 2,62671 ಕೋಟಿ ಹೆಚ್ಚುವರಿ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರ ಈ ವರ್ಷ 5.8% ಹೆಚ್ಚಾಗಿದೆ. ಬಜೆಟ್ ನ 47 ಲಕ್ಷ ಕೋಟಿ ರೂ.ಗಳಲ್ಲಿ 16,85494 ಕೋಟಿ ರೂ ಸಾಲ ಮಾಡಿದ್ದಾರೆ…

Read More

ಬೆಂಗಳೂರು: ಕೇಂದ್ರ ಮಧ್ಯಂತ ಬಜೆಟ್ ಬಗ್ಗೆ ಮಾತಾಡೋದಂತದ್ದು ಏನೂ ಇಲ್ಲ. ಇದೊಂದು ನಿರಾಶಾದಾಯಕ, ಎಲೆಕ್ಷನ್ ಬಜೆಟ್ ಆಗಿದೆ. ಅದರ ಹೊರತಾಗಿ ಬೇರೇನೂ ಇಲ್ಲ ಅಂತ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಕೇಂದ್ರ ಬಜೆಟ್ ಕುರಿತಂತೆ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಇದೊಂದು ಬಹಳ ಚರ್ಚೆ ಮಾಡುವ ಬಜೆಟ್ ಅಲ್ಲ. ಒಟ್ಟಾರೆ ಕೇಂದ್ರ ಬಜೆಟ್ ನಿರಾಶಾದಾಯಕ ಬಜೆಟ್. ಎಲೆಕ್ಷನ್ ಬಜೆಟ್ ಎಂಬುದಾಗಿ ಹೇಳಿದರು. 2024-25ನೇ ವರ್ಷದ ಮಧ್ಯಂತರ ಬಜೆಟ್ ಮುಗಿಸಿದ್ದಾರೆ. ಚುನಾವಣೆ ಇರೋದರಿಂದ ಪೂರ್ಣ ಬಜೆಟ್ ಘೋಷಣೆ ಆಗದಿರಬಹುದು. ಇಂದು 4765768 ಕೋಟಿ ಗಾತ್ರದ ಬಜೆಟ್ ಮಂಡಿಸಲಾಗಿದೆ ಎಂದರು. https://kannadanewsnow.com/kannada/i-have-never-seen-such-a-poor-budget-dy-cm-dk-shivakumar-shivakumar/ https://kannadanewsnow.com/kannada/sweet-spot-many-job-opportunities-pm-modis-full-marks-for-interim-budget/

Read More

ಬೆಂಗಳೂರು : “ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೋಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದ ಅವರು, “ನಾನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದ ಯೋಜನೆಗಳಿಗೆ ಆದ್ಯತೆ ನೀಡಬೇಕು, ನೀರಾವರಿ ಯೋಜನೆಗಳಿಗೆ ಈಗಾಗಲೇ ಘೋಷಣೆ ಮಾಡಿರುವ ಹಣ ಇನ್ನು ಬಿಡುಗಡೆಯಾಗಿಲ್ಲ. ಕರ್ನಾಟಕ ರಾಜ್ಯದಿಂದ ನೀವು ಆಯ್ಕೆಯಾಗಿದ್ದು, ರಾಜ್ಯದ ಯೋಜನೆಗಳು ಹಾಗೂ ಬೆಂಗಳೂರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದ್ದೆ ಎಂದರು. ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಕಾಲಾವಕಾಶ ಕೋರಿದ್ದೆ. ಕಳೆದ ಬಜೆಟ್ ಗಳಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5 ಸಾವಿರ ಕೋಟಿಯನ್ನು ಇನ್ನು ನೀಡಿಲ್ಲ. ಈ ಬಾರಿಯ ಬಜೆಟ್ ನಲ್ಲೂ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ.…

Read More

ಬೆಂಗಳೂರು: ರಾಜ್ಯದಲ್ಲಿ ಮದುವೆಯಾದಂತ ನವ ದಂಪತಿಗಳು ವಿವಾಹ ನೋಂದಣಿಗಾಗಿ ಸಬ್ ರಿಜಿಸ್ಟಾರ್ ಕಚೇರಿಗೆ ತೆರಳಬೇಕಾಗಿತ್ತು. ಆದ್ರೇ ಈ ಪ್ರಕ್ರಿಯೆಗೆ ಇನ್ಮುಂದೆ ಬ್ರೇಕ್ ಹಾಕಲಾಗುತ್ತಿದೆ. ಇನ್ನೂ ಏನಿದ್ದರೂ ಆನ್ ಲೈನ್ ಮೂಲಕವೇ ವಿವಾಹ ನೋಂದಣಿ ಮಾಡಬಹುದಾಗಿದೆ. ಈ ಸಂಬಂಧದ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆಗೆ ತಿದ್ದುಪಡಿ ತರೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ವಿವಾಹ ಸರಳೀಕರಣಕ್ಕೆ ಸರ್ಕಾರದ ಸಮ್ಮತಿ ನೀಡಲಾಗಿದೆ. ಹಿಂದೂ ವಿವಾಹ ನೊಂದಣಿ ಕಾಯ್ದೆ 2024 ಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ನೋಂದಣಿ ಹೇಗೆ.? ಈವರೆಗೆ ವಿವಾಹ ನೋಂದಣಿಯನ್ನು ಸಬ್ ರಿಜಿಸ್ಟರ್ ಕಚೇರಿಗೆ ತೆರಳಿ ಮಾಡಬಹುದಾಗಿತ್ತು. ಅದಕ್ಕೆ ಪರ್ಯಾಯವಾಗಿ ಯಾವುದೇ ಬೇರೆ ವ್ಯವಸ್ಥೆ ಇರಲಿಲ್ಲ. ಈಗ ಇದನ್ನು ಬದಲಾವಣೆ ಮಾಡಲಾಗುತ್ತಿದೆ. ಸಬ್ ರಿಜಿಸ್ಟರ್ ಕಚೇರಿಗೆ ತೆರಳಿ ವಿವಾಹ ನೋಂದಣಿ ಪ್ರಕ್ರಿಯೆಗೆ ತಿಲಾಂಜಲಿ ನೀಡಲಾಗಿದೆ. ಇದರ ಬದಲಾಗಿ ಆನ್ಲೈನ್ ಮೂಲಕ ನೊಂದಣಿಗೆ ಅವಕಾಶ ನೀಡಲಾಗುತ್ತಿದೆ. ಗ್ರಾಮ ಒನ್, ಕಾವೇರಿ 2ನಲ್ಲಿ ನೊಂದಣಿ ಮಾಡಬಹುದು. ಈ ಮೂಲಕ ಸಬ್ ರಿಜಿಸ್ಟರ್ ಕಚೇರಿಗೆ…

Read More