Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ಬರೋಬ್ಬರಿ 131 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರ್ ಆಫ್ ಪೊಲೀಸ್ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಎಸ್ ಎಲ್ ಸಾಗರ್ ಅವರನ್ನು ಚಾಮರಾಜನಗರದ ಸಂತೇಮಾರನಹಳ್ಳಿ ವೃತ್ತಕ್ಕೆ ವರ್ಗಾವಣೆ ಮಾಡಿದ್ದರೇ, ಬಸವರಾಜು ಅವರನ್ನು ಡಿಸಿಆರ್ ಇಗೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗದ ಸೊರಬ ವೃತ್ತದ ಪೊಲೀಸ್ ಇನ್ಸ್ ಪೆಕ್ಟರ್ ರಾಜಶೇಖರಯ್ಯ ಎಲ್ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಮುದ್ದುರಾಜ ವೈ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ, ಬೆಂಗಳೂರು ನಗರ ಸಂಚಾರ ಮತ್ತು ಯೋಜನೆಯ ಪೊಲೀಸ್ ಇನ್ಸ್ ಪೆಕ್ಟರ್ ಅಶ್ವಥನಾರಾಯಣ ಸ್ವಾಮಿ ಬಿಎನ್ ಅವರನ್ನು ಹಲಸೂರು ಗೇಟ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಸವದತ್ತಿ ಪೊಲೀಸ್ ಠಾಣೆಯ ಧರ್ಮಾಕರ್ ಎಸ್ ಧರ್ಮಟ್ಟಿ ಅವರನ್ನು ಬೆಳಗಾವಿಯ ಕಂಗ್ರಾಳಿ ಕೆ ಎಸ್ ಆರ್ ಪಿ ಪೊಲೀಸ್ ತರಬೇತಿ…
ಬೆಂಗಳೂರು: ರಾಜ್ಯದ ಶಿಕ್ಷಕರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಜೊತೆಗೆ ಶಾಲಾ ತರಗತಿಯನ್ನು ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಿಸಿದೆ. ಈ ಮೂಲಕ ರಾಜ್ಯದ ಜಾತಿಗಣತಿ ಸಮೀಕ್ಷೆಯಲ್ಲಿ ತೊಡಗಿದ್ದಂತ ಶಿಕ್ಷಕರಿಗೆ ಸರ್ಕಾರ ಶಾಕ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದೆ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರೆ ಭಾಗಗಳಲ್ಲಿ ದಿನಾಂಕ:…
ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜರಲ್ ಆಫ್ ಪೊಲೀಸ್ ಅವರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗೆ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ವೈದ್ಯಕೀಯ ವೆಚ್ಚ ರೂ. 1000/- ಗಳಿಂದ ರೂ. 1500/- (ಒಂದು ಸಾವಿರದ ಐದು ನೂರು ರೂಪಾಯಿಗಳು ಮಾತ್ರ) ಗಳಿಗೆ ಹೆಚ್ಚಿಸಿ ಆದೇಶಿಸಲಾಗಿದ್ದು, ಸದರಿ ಸರ್ಕಾರದ ಆದೇಶವನ್ನು ಸೂಕ್ತ ಕ್ರಮಕ್ಕಾಗಿ ಈಗಾಗಲೇ ಉಲ್ಲೇಖಿತ (4)ರ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ. ಆದರೆ ಇದಕ್ಕೆ ತಗಲುವ ವೆಚ್ಚವನ್ನು ಲೆಕ್ಕ ಶೀರ್ಷಿಕೆ 2055-00-001-0-01-021 (ವೈದ್ಯಕೀಯ ವೆಚ್ಚ ಮರುಪಾವತಿ)ಗಳ ಅಡಿಯಲ್ಲಿ ಭರಿಸತಕ್ಕದ್ದು ಎಂದು ನಮೂದಿಸಲಾಗಿರುತ್ತದೆ. ಆದರೆ ಸದರಿ ಲೆಕ್ಕ ಶೀರ್ಷಿಕೆ Direction & Administration ರಡಿಯಲ್ಲಿರುವ ಘಟಕಗಳಿಗೆ ಮಾತ್ರ ಸಂಬಂಧಿಸಿದ್ದು, ಇತರ ಘಟಕಗಳು ಒಳಗೊಂಡಿರುವುದಿಲ್ಲ. ಆದ್ದರಿಂದ ಸರ್ಕಾರವು ಉಲ್ಲೇಖಿತ (5)ರ ನಡವಳಿ ಆದೇಶದಲ್ಲಿ ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ…
ಮೈಸೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ಗಳನ್ನು ಪೂರ್ಣಗೊಳಿಸಲಿದೆ. ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ಎಕ್ಸ್ಪ್ರೆಸ್ ವಿಶೇಷ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೊಂದೆಡೆ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು ಅಕ್ಟೋಬರ್ 18 ಮತ್ತು 25 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ. ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್,…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಂಗಳೂರು: ಇಂದಿನ ಡಿಜಿಟಲ್ ಯುಗದಿಂದಾಗಿ ಪುಸ್ತಕ ಓದುವ ಹವ್ಯಾಸವು ದೂರವಾಗಿರುವುದು ವಿಷಾದಕರ. ಪತ್ರಕರ್ತರು ನಿರಂತರವಾಗಿ ಓದುವ ಹವ್ಯಾಸದಲ್ಲಿ ತೊಡಗಿಕೊಂಡರೆ ಮಾತ್ರ ಜ್ಞಾನ ಸಂಪಾದಿಸಿಕೊಂಡು, ವೃತ್ತಿ ಬದ್ಧತೆ ತೋರಿಸಲು ಸಾಧ್ಯ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅಭಿಪ್ರಾಯಪಟ್ಟರು. ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ಕಚೇರಿಯಲ್ಲಿ ಸಂಘದ ಸದಸ್ಯರಿಗಾಗಿ ಸ್ಥಾಪಿಸಿರುವ ಗ್ರಂಥಾಲಯ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಬಹುತೇಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳೇ ರಾರಾಜಿಸುತ್ತವೆ. ಪತ್ರಕರ್ತರು ಸದಾ ವಸ್ತುನಿಷ್ಠ ವರದಿಗಳಿಗೆ ಗಮನ ನೀಡಿದರಷ್ಟೇ ಪತ್ರಿಕೋದ್ಯಮ ಮೌಲ್ಯ ಉನ್ನತಿಗೇರಲು ಸಾಧ್ಯ ಎಂದೂ ಅವರು ಹೇಳಿದರು. ಜಿಲ್ಲಾಧಿಕಾರಿಯಾಗಿ ನಾನು ಬಂದ ಮೇಲೆ ಬೆಂಗಳೂರಿನಲ್ಲಿ ಸುಮಾರು 300 ಎಕರೆ ಅಕ್ರಮ ಒತ್ತುವರಿ ತೆರವು ಮಾಡಲಾಗಿದೆ. ಯಾವುದೇ ಸಂದರ್ಭಗಳಲ್ಲಿ ಯಾವುದೇ ಒತ್ತಡಕ್ಕೂ ಮಣಿಯದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಲು ತನ್ನಿಂದ ಸಾಧ್ಯವಾಗಿದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಹಿರಿಯ ಪತ್ರಕರ್ತರಾದ ಕಂ.ಕ.ಮೂರ್ತಿ, ಪುಸ್ತಕಗಳು ಜ್ಞಾನದ ಭಂಡಾರವಾಗಿದ್ದು, ಪತ್ರಕರ್ತರು ಪುಸ್ತಕಗಳ ಓದಿನತ್ತ ಹೆಚ್ಚಿನ…
ಶಿವಮೊಗ್ಗ: ಸಹಕಾರಿ ಕ್ಷೇತ್ರದಲ್ಲಿ ಇರುವವರು ರೈತರ ಧ್ವನಿಯಾಗಿ ಕೆಲಸ ಮಾಡಬೇಕು. ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಬೇಡಿ ಎಂಬುದಾಗಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಪಟ್ಟಣದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನೂತನ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೋಡಿಕೆ ಮಾಡುತ್ತಾರೆ ಇದಕ್ಕೆ ಯಾವುದೇ ಭದ್ರತೆ ಇರುವುದಿಲ್ಲ ಇದರಿಂದ ನಷ್ಟ ಸಂಭವಿಸಿದರೆ ಜನರೇ ಹೊಣೆ ಹೊರಬೇಕು. ಸಹಕಾರಿ ಬ್ಯಾಂಕ್ ಗಳಲ್ಲಿ ನಾವು ರಾಜಕೀಯ ಮಾಡಬಾರದು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಸಾಗರ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಬಿ ಆರ್ ಜಯಂತ್ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಪ್ರಾಮಾಣಿಕವಾಗಿ ಇರಬೇಕು ಮತ್ತು ರೈತರ ಬಗ್ಗೆ ಕಾಳಜಿ…
ಬೆಂಗಳೂರು: ರಾಜ್ಯದ ಶಿಕ್ಷಕರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಜೊತೆಗೆ ಶಾಲಾ ತರಗತಿಯನ್ನು ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದೆ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರೆ ಭಾಗಗಳಲ್ಲಿ ದಿನಾಂಕ: 22-09-2025 ರಿಂದ ಪ್ರಾರಂಭಿಸಲಾಗಿದೆ. ಸಮೀಕ್ಷೆಯು ಪೂರ್ಣಗೊಳ್ಳಲು ಹಚ್ಚಿನ ಕಾಲಾವಕಾಶದ ಅಗತ್ಯವಿರುವುದನ್ನು ಮನಗೊಂಡು, ದಿನಾಂಕ:…
ಬೆಂಗಳೂರು: ರಾಜ್ಯದ ಕೆಲವು ಅರಣ್ಯದೊಳಗೆ ಹಾಡಿಗಳಿದ್ದು, ಇಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳು ಸಾಕಿರುವ ಜಾನುವಾರುಗಳು ವನ್ಯಜೀವಿಗಳಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಕಳೆದ ಜೂನ್ ನಲ್ಲಿ ಪ್ರತಿಕಾರಕ್ಕಾಗಿ ದನಕ್ಕೆ ಹಾಕಿದ್ದ ವಿಷದಿಂದ 5 ಹುಲಿಗಳು ಮೃತಪಟ್ಟಿದ್ದವು, ಈ ತಿಂಗಳ ಆದಿಯಲ್ಲೇ ಮತ್ತೊಂದು ಹುಲಿ ವಿಷಪ್ರಾಶನದಿಂದ ಮೃತಪಟ್ಟಿದೆ. ಹಾಡಿಯ ಜನರು ಹತಾಶರಾಗಿ, ಪ್ರತಿಕಾರಕ್ಕಾಗಿ ವಿಷ ಹಾಕುವುದನ್ನು ತಡೆಯಲು ಈ ಸೂಚನೆ ನೀಡಲಾಗಿದೆ ಎಂದರು. ಮುಖ್ಯಮಂತ್ರಿಗಳಿಗೆ ಹುಲಿ ಸಾವಿನ ಬಗ್ಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಅರಣ್ಯದೊಳಗಿನ ಹಾಡಿಯಲ್ಲಿರುವ ಜಾನುವಾರುಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪ್ರವಾಹದಲ್ಲಿ ಸಾವಿಗೀಡಾಗುವ ಜಾನುವಾರುಗಳಿಗೆ ನೀಡುವ ಪರಿಹಾರದ ಮೊತ್ತವನ್ನೇ ಈ ಜಾನುವಾರುಗಳಿಗೂ ನೀಡಲು ನಿರ್ಧರಿಸಲಾಗಿದ್ದು, ವನ್ಯಜೀವಿ ಸಪ್ತಾಹದ ಸಮಾರೋಪದಲ್ಲಿ ಮುಖ್ಯಮಂತ್ರಿಗಳೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದರು. ತಾವು ಸಾಕಿದ ಜಾನುವಾರುಗಳು ಮೃತಪಟ್ಟಾಗ ಸಹಜವಾಗಿಯೇ ಆಕ್ರೋಶಕ್ಕೆ ಒಳಗಾಗುತ್ತಾರೆ. ಆದರೆ ವನ್ಯಜೀವಿ…
ಬೆಂಗಳೂರು: ವಿವಿಧ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ್ದಾರೆ. ಹೀಗಾಗಿ ಕೆಲ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ನಿಷೇಧಿಸಲಾಗಿದೆ. ಇತ್ತ ಕರ್ನಾಟಕದಲ್ಲಿ ಕೆಮ್ಮಿನ ಸಿರಪ್ ಬಳಕೆ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಇಂದು ರಾಜ್ಯ ಆರೋಗ್ಯ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಕೆಮ್ಮಿನ ಸಿರಪ್ ಗಳ ದುರುಪಯೋಗದಿಂದಾಗಿ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾವುಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಎಲ್ಲಾ ಮಕ್ಕಳ ಸುರಕ್ಷತೆಯನ್ನು ಸಾರ್ವಜನಿಕರು ಈ ಕೆಳಗಿನ ಕಾಪಾಡಲು, ಪೋಷಕರು, ಆರೈಕೆದಾರರು ಮತ್ತು ಮಾರ್ಗದರ್ಶನಗಳನ್ನು ಅನುಸರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. 1. ಚಿಕ್ಕ ಮಕ್ಕಳಿಗೆ ಕೆಮ್ಮಿನ ಸಿರಪ್ ಗಳನ್ನು ನೀಡಬೇಡಿ. 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್ ಗಳನ್ನು ನೀಡಬಾರದು. 2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ…