Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಆಸ್ಪತ್ರೆಗಳಲ್ಲಿ ಸೇವಾ ಶುಲ್ಕ ಪರಿಷ್ಕರಣೆ ಒಂದು ಪ್ರಕ್ರಿಯೆಯಾಗಿದ್ದು, ಗ್ಯಾರಂಟಿಗಳಿಗೆ ತಳುಕು ಹಾಕುವುದರಲ್ಲಿ ಅರ್ಥವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕ ಸರ್ಕಾರಕ್ಕೆ ಸಂದಾಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಶುಲ್ಕ ಹೆಚ್ಚಳ ಮಾಡುವ ಮೂಲಕ ಗ್ಯಾರಂಟಿಗಳಿಗೆ ಹಣ ಹೊಂದಿಸಬೇಕಾದ ಪರಿಸ್ಥಿತಿ ಸರ್ಕಾರಕ್ಕೆ ಎದುರಾಗಿಲ್ಲ. ಅಷ್ಟಕ್ಕೂ ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕವನ್ನ ಸರ್ಕಾರ ತೆಗೆದುಕೊಳ್ಳುವುದಿಲ್ಲ. ಆಯಾ ಆಸ್ಪತ್ರೆಗಳ ಅಭಿವೃದ್ಧಿಗೆ ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮೂರು, ನಾಲ್ಕು ವರ್ಷಗಳಿಗೊಮ್ಮೆ ಶುಲ್ಕ ಪರಿಷ್ಕರಣೆಯಾಗುವುದು ಸಹಜ ಪ್ರಕ್ರಿಯೆಯಾಗಿದೆ. ಇದನ್ನೇ ಮುಂದಿಟ್ಟುಕೊಂಡು ಗ್ಯಾರಂಟಿಗಳಿಗೆ ತಳುಕು ಹಾಕಿ ನೋಡುವುದು ಸರಿಯಲ್ಲ.. ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದ ಹಣವನ್ನು ಆಯಾ ಆಸ್ಪತ್ರೆಗಳ ARS ಸಮಿತಿಗಳು ಚರ್ಚೆ ನಡೆಸಿ ಆಸ್ಪತ್ರೆಯ ಅಭಿವೃದ್ಧಿಗೆ ಬಳಕೆ ಮಾಡುತ್ತವೆ. ಆಸ್ಪತ್ರೆಯ ARS fund ಹೆಸರಲ್ಲಿ ಅನುದಾನ ಲಭ್ಯವಿರುತ್ತದೆ. ಆಸ್ಪತ್ರೆಯ ಸ್ವಚ್ಛತೆ, ದುರಸ್ಥಿ ಕಾರ್ಯಗಳು ಸೇರಿದಂತೆ…
ಉಡುಪಿ : “ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದ ಉಪಚುನಾವಣೆ ಫಲಿತಾಂಶ ಏನಾಗಲಿದೆ ಎಂದು ಕೇಳಿದಾಗ, “ಎಲ್ಲಾ ಕಡೆಯೂ ದೇವರು ನಮಗೆ ಒಳ್ಳೆಯದು ಮಾಡುತ್ತಾನೆ ಎನ್ನುವ ಭರವಸೆಯನ್ನು ಇಟ್ಟಿದ್ದೇವೆ” ಎಂದು ಹೇಳಿದರು. ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೇ ಎನ್ನುವ ಸಮೀಕ್ಷೆಗಳ ಬಗ್ಗೆ ಕೇಳಿದಾಗ, “ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು? ನನಗೆ ಯಾವುದೇ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ. ಸಮೀಕ್ಷೆಗಳನ್ನು ಕಟ್ಟಿಕೊಂಡು ರಾಜಕೀಯ ಮಾಡಲು ಆಗುವುದಿಲ್ಲ. ಯಾರು ಜನರ ಹೃದಯ ಹಾಗೂ ವಿಶ್ವಾಸ ಪಡೆದಿರುತ್ತಾರೋ ಅವರಿಗೆ ಜನ ಗೌಪ್ಯ ಮತದಾನದ ಮೂಲಕ ಬೆಂಬಲ ನೀಡುತ್ತಾರೆ” ಎಂದರು. ಕೊಲ್ಲೂರು ದೇವಸ್ಥಾನ ಆಡಳಿತ ಮಂಡಳಿಯಲ್ಲಿ ಮೂಲ…
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್, ಸಿಬಿಎಸ್ಇ 10 ಮತ್ತು 12 ನೇ ತರಗತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಗಳ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿ ಈಗ cbse.gov.in ರಂದು ಲಭ್ಯವಿದೆ. ಸಿಬಿಎಸ್ಇ ದಿನಾಂಕ ಶೀಟ್ 2025 ಅನ್ನು ಕೆಳಗಿನ ನೇರ ಲಿಂಕ್ನಿಂದ ಪರಿಶೀಲಿಸಿ ಮತ್ತು ಡೌನ್ಲೋಡ್ ಮಾಡಿ. ಬಿಡುಗಡೆಯಾದ ವೇಳಾಪಟ್ಟಿಯ ಪ್ರಕಾರ, ಸಿಬಿಎಸ್ಇ 10 ನೇ ತರಗತಿ ಬೋರ್ಡ್ ಪರೀಕ್ಷೆಗಳು 2025 ಫೆಬ್ರವರಿ 15 ರಿಂದ ಪ್ರಾರಂಭವಾಗಲಿದ್ದು, ಇಂಗ್ಲಿಷ್ ಮೊದಲ ಪರೀಕ್ಷೆಯಾಗಲಿದೆ. 12ನೇ ತರಗತಿಗೆ ಸಂಬಂಧಿಸಿದಂತೆ, ದೈಹಿಕ ಶಿಕ್ಷಣದ ಮೊದಲ ಪರೀಕ್ಷೆ ಫೆಬ್ರವರಿ 17 ರಂದು ನಡೆಯಲಿದೆ. ಕಳೆದ ಕೆಲವು ವರ್ಷಗಳಿಂದ ಸಿಬಿಎಸ್ಇ ಅನುಸರಿಸುತ್ತಿರುವ ಅಭ್ಯಾಸದಿಂದ ವಿಮುಖವಾಗಿರುವ ಮಂಡಳಿಯು ಆರಂಭದಲ್ಲಿ ದೊಡ್ಡ ಪರೀಕ್ಷೆಗಳನ್ನು ಒಟ್ಟುಗೂಡಿಸಿದೆ ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯವನ್ನು ನೀಡಲು ಸಣ್ಣ ಪತ್ರಿಕೆಗಳನ್ನು ಮಧ್ಯದಲ್ಲಿ ಹರಡಿದೆ. ಆದಾಗ್ಯೂ, 10 ಮತ್ತು 12 ನೇ ತರಗತಿಗಳಿಗೆ ಪ್ರಮುಖ ಪರೀಕ್ಷೆಗಳಿಗೆ ಗಮನಾರ್ಹ ದಿನಗಳ ಕೊರತೆಯಿದೆ. ಪ್ರಮುಖ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ. https://kannadanewsnow.com/kannada/shivamogga-dr-d-m-sagars-bizarre-water-web-book-to-be-released-at-sagar-tomorrow/ https://kannadanewsnow.com/kannada/breaking-belagavi-three-persons-including-wife-arrested-for-gi/
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಡುನಿಟ್ಡಿನ ಸೂಚನೆ ನೀಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡುವಂತೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಬಡ ಕುಟುಂಗಳವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿಗಳು ಎಚ್ವರಿಕೆ ನೀಡಿದ್ದಾರೆ. https://kannadanewsnow.com/kannada/shivamogga-dr-d-m-sagars-bizarre-water-web-book-to-be-released-at-sagar-tomorrow/ https://kannadanewsnow.com/kannada/karnataka-bjp-loyalists-protest-against-dissidents-demand-action/
ಬೆಂಗಳೂರು: ಕರ್ನಾಟಕ ವಿಧಾನಸಭಾ ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲಿ ಎರಡರಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದಾಗಿ ಚುನಾವಣೋತ್ತರ ಸಮೀಕ್ಷೆಗಳಿಂದ ಬಹಿರಂಗಗೊಂಡಿದೆ. ಇಂದು ಕರ್ನಾಟಕದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿಗೆ ನಡೆದಂತ ವಿಧಾನಸಭಾ ಉಪ ಚುನಾವಣೆಯ ಮತದಾನೋತ್ತರ ಸಮೀಕ್ಷೆಯ ವರದಿಯನ್ನು ಪ್ರಕಟಿಸಲಾಗಿದೆ. ಪಿ-ಮಾರ್ಕ್ಸ್ ಸಮೀಕ್ಷೆಯಂತೆ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್, ಇನ್ನೆರಡು ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸುವುದಾಗಿ ತಿಳಿಸಿದೆ. ಇನ್ನೂ ಹಿರಿಯ ವಾರ್ತಾ ವಾಚಕ ರಾಘವೇಂದ್ರ ಗಂಗಾವತಿ ಅವರ ಸಾರಥ್ಯದ ಚಾಣಕ್ಯ ಟೈಮ್ಸ್ 24X7 ಸಮೀಕ್ಷೆ ಕೂಡ ಪ್ರಕಟವಾಗಿದೆ. ಅದರಲ್ಲಿ ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವಂತ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಅಂತ ತಿಳಿಸಿದೆ. ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಗೆಲ್ಲಲಿದ್ದಾರೆ. ಶಿಗ್ಗಾವಿ ಬಿಜೆಪಿ ಪಾಲಾಗುವುದಾಗಿ ಚಾಣಕ್ಯ ಟೈಮ್ಸ್ ಸಮೀಕ್ಷಾ ವರದಿ ತಿಳಿಸಿದೆ. ಬಳ್ಳಾರಿಯ ಸಂಡೂರು ವಿಧಾನಸಭಾ…
ಶಿವಮೊಗ್ಗ: ಸಾಗರದಲ್ಲಿ ಹುಟ್ಟಿ ಬೆಳೆದು ಅಮೇರಿಕಾದಲ್ಲಿ ವಾಸಿಯಾಗಿರುವಂತ ಅಪ್ಪಟ ಕನ್ನಡಿಗ ಡಾ.ಡಿಎಂ ಸಾಗರ್ ಅವರು ಕನ್ನಡದಲ್ಲಿ ಬರೆದಿರುವಂತ ವಿಲಕ್ಷಣ ಜಲಜಾಲ ಎನ್ನುವ ಪುಸ್ತಕವನ್ನು ನಾಳೆ ಬಿಡುಗಡೆಗೊಳಿಸಲಾಗುತ್ತಿದೆ. ಇಂದು ಸಾಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಅಶ್ವಿನಿ ಕುಮಾರ್ ಅವರು, ದೊಡ್ಡೇರಿ ಮಹಾಬಲಗಿರಿರಾವ್, ಡಾ.ಡಿಎಂ ಸಾಗರ್ ಮತ್ತು ರಜನಿ ದೊಡ್ಡೇರಿ ಕುಟುಂಬ, ಅಭಿನಯ ಸಾಗರ(ರಿ) ಹಾಗೂ ಜೋಷಿ ಫೌಂಡೇಷನ್ ಸಾಗರ ಇವರ ಸಂಯುಕ್ತ ಆಶ್ರಯದಲ್ಲಿ ನಾಳೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ ಎಂದರು. ದಿನಾಂಕ 21-11-2024ರ ನಾಳೆ ಸಂಜೆ 4 ಗಂಟೆಗೆ ಸಾಗರ ನಗರದ ಅಗ್ರಹಾರ ಬಳಿಯಲ್ಲಿ ಇರುವಂತ ಶೃಂಗೇರಿ ಶಂಕರಮಠದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಪುಸ್ತಕ ಬಿಡುಗಡೆಗೂ ಮುನ್ನ ಸುಭದ್ರಾ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಆ ಬಳಿಕ ಸಂಜೆ 7 ಗಂಟೆಗೆ ಡಾ.ಡಿಎಂ ಸಾಗರ್ ಅವರು ಬರೆದಿರುವಂತ ವಿಲಕ್ಷಣ ಜಲಜಾಲ ಎನ್ನುವಂತ ನೀರಿನ ಕುರಿತು ವೈಜ್ಞಾನಿಕ ಕೌತುಕಗಳು ಇರುವಂತ ಪುಸ್ತಕ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.…
ಬೆಳಗಾವಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಗೃಹಲಕ್ಷ್ಮೀ ಯೋಜನೆ ವಿಚಾರವಾಗಿ ನಾನು ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ್ದೇನೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿದವರಿಗೆ, ಯಾರು ತೆರಿಗೆ ಕಟ್ಟುವುದಿಲ್ಲ ಅಂತಹವರಿಗೆ ಗೃಹಲಕ್ಷ್ಮೀ ಹಣ ಸಂದಾಯ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದರು. 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನ ರದ್ದತಿ ಮಾಡುವ ಬದಲಿಗೆ ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿರುವುದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್, ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬಂದೇ ಬರುತ್ತೆ ಎಂದು ಸಚಿವರು ಹೇಳಿದರು. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿರುವ (ಬೀಮ್ಸ್) ಅವ್ಯವಸ್ಥೆಗಳಿಗೆ ಸರ್ಜರಿ ಆಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ವೈದ್ಯರ ನಿರ್ಲಕ್ಷ್ಯ ದಿಂದ ಬಾಣಂತಿ ಸಾವನ್ನಪ್ಪಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಾಗಬೇಕು. ಶಿಸ್ತು, ಆರೋಗ್ಯದ ದೃಷ್ಟಿಯಿಂದ ಆಸ್ಪತ್ರೆಯಲ್ಲಿ ಕೆಲವೊಂದು…
ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯಲು ಸರ್ಕಾರದಿಂದ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ. ರೋಗಿಗಳು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಉಚಿತವಾಗಿ ಎರಡನೇ ಅಭಿಪ್ರಾಯ ಪಡೆಯಲು ಅನುಕೂಲವಾಗುವಂತೆ ದೇಶದಲ್ಲಿಯೇ ಮೊದಲ ಬಾರಿಗೆ ಸಹಾಯವಾಣಿ ಪ್ರಾರಂಭಿಸಲಾಗಿದೆ. 1800 4258 330 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1859212172100006334 ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವತ್ತ ನೂತನ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ ಎರಡನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ವೇದಿಕೆಯನ್ನು ಆರೋಗ್ಯ ಇಲಾಖೆ ಕಲ್ಪಿಸಿದೆ. ಸರ್ಜರಿ ಅವಶ್ಯಕತೆ ಇದೆಯೋ, ಇಲ್ಲವೋ ಹಾಗೂ ಪರ್ಯಾಯ ಚಿಕಿತ್ಸಾ ವಿಧಾನಗಳು ಏನು? ಎಂಬುದರ ಬಗ್ಗೆ ತಜ್ಞ ವೈದ್ಯರಿಂದ ಸಲಹೆ ಸಿಗಲಿದೆ. ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಅನಾರೋಗ್ಯ ಪೀಡಿತರಾಗಿ ಶಸ್ತ್ರ ಚಿಕಿತ್ಸೆ ಬಗ್ಗೆ ಸೂಚಿಸಿದಾಗ, ಮತ್ತಷ್ಟು ಉಚಿತ ಸಲಹೆಗಾಗಿ 1800 4258 330…
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ಚುರುಕುಗೊಂಡಿವೆ. ಪಕ್ಷದ ನಾಯಕತ್ವದ ವಿರುದ್ಧ ಸಮರ ಸಾರಿರುವ ಭಿನ್ನಮತಿಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷದ ನಿಷ್ಠಾವಂತ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ಸೇರಿದ 20ಕ್ಕೂ ಹೆಚ್ಚು ಹಿರಿಯ ಮುಖಂಡರು ರಾಜ್ಯ ಸರ್ಕಾರದ ಅಕ್ರಮಗಳ ವಿರುದ್ಧ ಪಕ್ಷದ ಅಧ್ಯಕ್ಷ ವಿಜಯೇಂದ್ರ ಮತ್ತು ಪ್ರತಿ ಪಕ್ಷ ನಾಯಕರ ನೇತೃತ್ವದಲ್ಲಿ ಹೋರಾಟ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ವಕ್ಫ್ ಒತ್ತುವರಿ ತೆರವು ವಿರೋಧಿ ಹೋರಾಟದ ಹೆಸರಿನಲ್ಲಿ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಇದು ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಈ ಹಿನ್ನೆಲೆಯಲ್ಲಿ ಹೈಕಮಾಂಡ್ ತಕ್ಷಣವೇ ಮಧ್ಯ ಪ್ರವೇಶಿಸಿ ಎಲ್ಲ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಪ್ರತಿ ಪಕ್ಷ ನಾಯಕರನ್ನು ಹೈಕಮಾಂಡ್ ನೇಮಕ ಮಾಡಿದೆ ಈ ವಿಷಯವಾಗಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ತಲೆಬಾಗಬೇಕು. ಆದರೆ ಕೆಲವರು ಈ…