Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ಭಾರತೀಯ ರೈಲ್ವೆ ಲೆಕ್ಕ ಸೇವೆಯ ಹಿರಿಯ ಅಧಿಕಾರಿಯಾದ ಮುದಿತ್ ಮಿತ್ತಲ್ ಅವರು ಇಂದು, ಸೋಮವಾರ, ಏಪ್ರಿಲ್ 07, 2025 ರಂದು ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಶಿಲ್ಪಿ ಅಗರ್ವಾಲ್ ಅವರಿಂದ ಅಧಿಕಾರವನ್ನು ಸ್ವೀಕರಿಸಿದ್ದಾರೆ. ಮಿತ್ತಲ್ ಅವರು 1996 ರ ಪರೀಕ್ಷಾ ತಂಡದ ಐ.ಆರ್.ಎ.ಎಸ್ ಸದಸ್ಯರಾಗಿದ್ದಾರೆ. ಅವರು ಪ್ರತಿಷ್ಠಿತ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐ.ಐ.ಟಿ), ರೂರ್ಕಿಯಿಂದ ಎಲೆಕ್ಟ್ರಾನಿಕ್ಸ್ ಮತ್ತು ಸಂನಿವೇಶ ಇಂಜಿನಿಯರಿಂಗ್ ಪದವೀಧರರಾಗಿದ್ದು, ಸಿಂಗಪುರದ ರಾಷ್ಟ್ರೀಯ ವಿಶ್ವವಿದ್ಯಾಲಯದ ಲೀ ಕ್ವಾನ್ ಯೂ ಸಾರ್ವಜನಿಕ ನೀತಿ ಶಾಲೆಯಿಂದ ಸಾರ್ವಜನಿಕ ಆಡಳಿತದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ವೈವಿಧ್ಯಮಯ ಮತ್ತು ಸಮೃದ್ಧ ವೃತ್ತಿಜೀವನದಲ್ಲಿ ಮಿತ್ತಲ್ ಅವರು ಭಾರತೀಯ ರೈಲ್ವೆ ದೇಶಾದ್ಯಂತ ಹಲವಾರು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ; ಇವರಲ್ಲಿ ಹುಬ್ಬಳ್ಳಿ, ಮುಂಬೈ, ಭೋಪಾಲ್, ಜಬಲ್ಪುರ್, ಕೋಲ್ಕತ್ತಾ, ಗೋರಖ್ಪುರ್ ಮತ್ತು ನವದೆಹಲಿ ಸೇರಿವೆ. ಮೈಸೂರು ವಿಭಾಗದ ಡಿ ಆರ್ ಎಂ ಆಗಿ ಅಧಿಕಾರ ವಹಿಸುವ ಮೊದಲು, ಅವರು ರೈಲ್ವೆ…
ಬೆಂಗಳೂರು : ಮೆಟ್ರೋ ಪಿಲ್ಲರ್ ಹಾಗೂ ಐತಿಹಾಸಿಕ ಪಾರಂಪರಿಕ ಕಟ್ಟಡಗಳ ದೀಪಾಲಂಕಾರಕ್ಕೆ ಬ್ರಾಂಡ್ ಬೆಂಗಳೂರು ಅಡಿ ಟೆಂಡರ್ ಕರೆಯಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ನೂತನ ವಿದ್ಯುತ್ ದೀಪ ಅಲಂಕಾರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹಾಗೂ ನಂತರ ಮಾಧ್ಯಮಗಳೊಂದಿಗೆ ಭಾನುವಾರ ಮಾತನಾಡಿದರು. “ಸರ್ಕಾರದ ಆಸ್ತಿಗಳಲ್ಲಿ ದೀಪಾಲಂಕಾರ ಮಾಡುತ್ತೇವೆ, ಖಾಸಗಿ ಸ್ಥಳ, ಕಟ್ಟಡಗಳಲ್ಲಿ ದೀಪಾಲಂಕಾರ ಮಾಡಲು ಸಾಧ್ಯವಿಲ್ಲ. ಬೆಂಗಳೂರಿನ ಸುಮಾರು 40 ಕಡೆ ದೀಪಾಲಂಕಾರಕ್ಕೆ ಸ್ಥಳಗಳನ್ನು ಗುರುತಿಸಲಾಗಿದೆ. ಯಾವ, ಯಾವ ಸ್ಥಳಗಳು ಎಂದು ಅಧಿಕಾರಿಗಳು ತಿಳಿಸಲಿದ್ದಾರೆ. ಇನ್ನು ಬೆಂಗಳೂರು ನಗರದಲ್ಲಿ ಎಲ್ ಇಡಿ ದೀಪ ಬಳಸಲಾಗುವುದು. ಈ ಹಿಂದೆ ಕರೆಯಲಾಗಿದ್ದ ಟೆಂಡರ್ ವಿಫಲವಾಗಿದ್ದು, ಮರು ಟೆಂಡರ್ ಕರೆಯಲಾಗುವುದು. ಡಿಪಿಆರ್ ಕೂಡ ಸಿದ್ದಪಡಿಸಲಾಗಿದೆ” ಎಂದು ಹೇಳಿದರು. “ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಮ್ಮ ಕಾಲದಲ್ಲಿ ಸಾಕ್ಷಿಗುಡ್ಡೆಗಳನ್ನು ಸೃಷ್ಟಿ ಮಾಡಬೇಕು ಎಂದು ಸುವರ್ಣ ಸೌಧ ಹಾಗೂ ವಿಧಾನಸೌಧ, ವಿಕಾಸಸೌಧಕ್ಕೆ ದೀಪಾಲಂಕಾರ ಮಾಡಿಸಿದ್ದಾರೆ. ಬೆಳಗಾವಿಯಲ್ಲಿ ಗಾಂಧಿ ಪ್ರತಿಮೆ ಸ್ಥಾಪನೆ ವೇಳೆ ನಾನು ಹಾಗೂ ಯು.ಟಿ.ಖಾದರ್ ಅವರು ಹಾಗೂ…
ಬೆಂಗಳೂರು: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಿಧಾನಸೌಧದ ನೂತನ ನಿತ್ಯ ದೀಪಾಲಂಕಾರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪಾರ್ಲಿಮೆಂಟ್ ಮತ್ತು ವಿಧಾನಸೌಧ ಜನರ ಮತ್ತು ರಾಜ್ಯದ ಹಾಗೂ ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು ಪ್ರತಿಯೊಬ್ಬರೂ ಸಾರ್ಥಕಗೊಳಿಸುವ ರೀತಿಯಲ್ಲಿ ಪ್ರತಿಯೊಬ್ಬರೂ ಕೆಲಸ ಮಾಡಿ ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು ಎಂದರು. ಸ್ವಾತಂತ್ರ್ಯ ಬಂದು, ಸಂವಿಧಾನ ರಚನೆಯಾಗಿ 75 ವರ್ಷಗಳಾದರೂ ಅಸಮಾನತೆಯನ್ನು ಇನ್ನೂ ತೆಗೆದುಹಾಕಲು ಸಾಧ್ಯವಾಗಿಲ್ಲ. ವಿಧಾನಸೌಧ, ಸುವರ್ಣಸೌಧ, ವಿಕಾಸಸೌಧದಲ್ಲಿ ಕುಳಿತು ಸಮ ಸಮಾಜ ತರುವ ದಿಕ್ಕಿನಲ್ಲಿ ಶ್ರಮಿಸಬೇಕು. ಕಾನೂನು ಸುವ್ಯವಸ್ಥೆ ಸುಗಮ ಆಗಿರಬೇಕಾದರೆ ಅಸಮಾನತೆ ಅಳಿಯಬೇಕು ಎಂದರು. ಜನರ ಕೆಲಸ ಸರಿಯಾಗಿ ಮಾಡಲು ನಮ್ಮನ್ನು ವಿಧಾನಸೌಧಕ್ಕೆ ಕಳುಹಿಸಿದ್ದಾರೆ.…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರವಾಸ ಮಾಡಲಾಗುತ್ತಿದೆ. ಕರ್ನಾಟಕದ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಈ ಮಟ್ಟಕ್ಕೆ ಬೆಲೆ ಏರಿಕೆ ಮಾಡಿದ್ದಾರೆ. ಮದ್ಯದ ದರ, ಮೆಟ್ರೋ ದರ, ಕಾಲೇಜು ಪ್ರವೇಶ ಶುಲ್ಕ, ಬಿತ್ತನೆ ಬೀಜ ದರ, ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗಿದೆ. ಈಗ ಕಸದಿಂದಲೂ ದುಡ್ಡು ಹೊಡೆಯಲಾಗುತ್ತಿದೆ. ಬೆಂಗಳೂರಿನ ಜನರು ಕಸಕ್ಕೂ ಶುಲ್ಕ ನೀಡಬೇಕಾಗಿದೆ. ಇದರಿಂದಲೇ ಒಂದೂವರೆ ಕೋಟಿ ರೂ. ಲೂಟಿ ಮಾಡಲಾಗುತ್ತಿದೆ ಎಂದು ದೂರಿದರು. ಕಾಂಗ್ರೆಸ್ ಜಾತ್ಯತೀತವಾದಿ ಎಂದು ಹೇಳಿಕೊಂಡು ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ. ಸರ್ಕಾರಿ ಗುತ್ತಿಗೆಯಲ್ಲಿ ಧರ್ಮಾಧಾರಿತವಾದ ಮೀಸಲು ಕೊಡುವ ಅಗತ್ಯವಿರಲಿಲ್ಲ. ಈಗಾಗಲೇ ಮಂಗಳೂರಿನಲ್ಲಿ ಹೆಚ್ಚಿನ ಗುತ್ತಿಗೆಯನ್ನು ಮುಸ್ಲಿಮರೇ ಮಾಡುತ್ತಿದ್ದಾರೆ. ಈಗ ಮೀಸಲಾತಿಯೂ ಸೇರಿಕೊಂಡು ಹೆಚ್ಚಾಗಿದೆ. ಇದರ ವಿರುದ್ಧ ಹೋರಾಟ ಮಾಡಲಾಗುತ್ತದೆ ಎಂದರು. ಬಿಜೆಪಿ…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಆಡಳಿತದಲ್ಲಿ ಮೌನ ಕ್ರಾಂತಿಯನ್ನು ನಡೆಸುತ್ತಿದ್ದು ವರ್ಷದಿಂದ ವರ್ಷಕ್ಕೆ ದಾಖಲೆಯ ಆದಾಯ ಸಂಗ್ರಹಣೆಯ ಮೂಲಕ ಪಂಚಾಯತ್ ಆರ್ಥಿಕತೆಯನ್ನು ಬಲಪಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 2022–23ನೆ ಸಾಲಿನಲ್ಲಿ ಇಲಾಖೆಯು 571.94 ಕೋಟಿ ರೂ. ಆದಾಯ ಗಳಿಸಿದ್ದರೆ, 2023–24ನೆ ಸಾಲಿನಲ್ಲಿ ಅದು 767.87 ಕೋಟಿ ರೂ.ಗಳಿಗೆ ಏರಿತು. 2024–25 ಸಾಲಿನಲ್ಲಿ ಆದಾಯ ಗರಿಷ್ಠ ಮಟ್ಟ ತಲುಪಿ 1272.43 ಕೋಟಿ ರೂ. ತಲುಪಿದ್ದು ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆದಾಯ ಸಂಗ್ರಹಣೆಯಲ್ಲಿ ಸಾರ್ವಕಾಲಿಕ ದಾಖಲೆ ಆಗಿದೆ ಎಂದು ಸಚಿವರು ಹೇಳಿದ್ದಾರೆ. ಕಳೆದ 18 ತಿಂಗಳುಗಳಲ್ಲಿ, ನಾವು 13,91,678 ಹೊಸ ಆಸ್ತಿಗಳನ್ನು ತೆರಿಗೆ ನೋಂದಣಿ ವ್ಯಾಪ್ತಿಗೆ ತರುವ ಮೂಲಕ ಪಂಚಾಯತ್ ಆಸ್ತಿಗಳನ್ನು 1,43,91,438ಕ್ಕೆ ಹೆಚ್ಚಿಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿರುವ ಸಚಿವರು ಗ್ರಾಮೀಣ ಆಸ್ತಿ ನಿರ್ವಹಣಾ ವೇದಿಕೆಯಾದ ಇ-ಸ್ವತ್ತು ಹಾದಿಯಲ್ಲಿ ನಡೆಯುತ್ತಿರುವ ದಿಟ್ಟ ಸುಧಾರಣೆಗಳೊಂದಿಗೆ,…
ಕನಕಪುರ: ಈಗಿನ ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಪಡೆಯುವುದಕ್ಕಿಂತ ಚೆನ್ನಾಗಿ ಓದಿ ನೀವೇ ನೂರಾರು ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಇಟ್ಟುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಕ್ಕಳಿಗೆ ಕಿವಿಮಾತು ಹೇಳಿದರು. ಕನಕಪುರದಲ್ಲಿ ಭಾನುವಾರ ದ ರೂರಲ್ ಎಜುಕೇಷನ್ ಸೊಸೈಟಿ ಸ್ಥಾಪಕ ಅಧ್ಯಕ್ಷ, ಮಾಜಿ ಶಾಸಕ ಎಸ್ ಕರಿಯಪ್ಪ ಅವರ 125 ನೇ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಪೂಜ್ಯ ಕರಿಯಪ್ಪನವರ 125ನೇ ಜಯಂತಿ ಕಾರ್ಯಕ್ರಮ ಆಚರಿಸುತ್ತುದ್ದೇವೆ. ಇಂದು ಶ್ರೀರಾಮನವಮಿ. ಸಮಾಜ ಸೇವೆ ಮಾಡುವವರನ್ನು ಗುರುತಿಸುತ್ತದೆ. ಹೀಗಾಗಿ ನಮ್ಮಲ್ಲಿ ರಾಮನ ತಂದೆ ದಶರಥನಿಗಿಂತ ರಾಮನ ಭಂಟ ಹನುಮನಿಗೆ ಹೆಚ್ಚು ದೇವಾಲಯಗಳಿವೆ. ಕರಿಯಪ್ಪನವರು ಸಮಾಜದಲ್ಲಿ ಮಾಡಿರುವ ಸೇವೆ, ಕನಕಪುರಕ್ಕೆ ಅವರು ಕೊಟ್ಟಿರುವ ಶಕ್ತಿ ಅಪಾರ” ಎಂದು ತಿಳಿಸಿದರು. “ಕರಿಯಪ್ಪನವರು ನಮ್ಮ ತಾಲೂಕಿನಲ್ಲಿ ಜ್ಞಾನದ ಸುಗಂಧವನ್ನು ಹರಡಿದ್ದಾರೆ. ಹೀಗಾಗಿ ನಾವು ಅವರನ್ನು ಸ್ಮರಿಸುತ್ತಿದ್ದೇವೆ. ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ದೇವರ ನೆನಪು ಭಕ್ತಿಯ ಮೂಲ, ಈ ಮೂರರ…
ದಾವಣಗೆರೆ: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಅಪ್ರಾಪ್ತ ಬಾಲಕನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರ ಹಿಂಸೆ ನೀಡಿದಂತ ಘಟನೆ ಚನ್ನಗಿರಿಯ ಅಸ್ಯಾಪನಹಳ್ಳಿಯಲ್ಲಿ ನಡೆದಿತ್ತು. ಈ ಘಟನೆ ಸಂಬಂಧ ಹತ್ತು ಆರೋಪಿಗಳಲ್ಲಿ ಮೂವರನ್ನು ಬಂದಿಸಿದ್ದಾರೆ. ಏಪ್ರಿಲ್.4ರಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯ ಅಸ್ತಾಪನಹಳ್ಳಿಯಲ್ಲಿ ಬಾಲಕನನ್ನು ಕಳ್ಳತನ ಮತ್ತು ಮಹಿಳೆಯರ ಜೊತೆಗೆ ಅಸಭ್ಯ ವರ್ತನೆ ಸಂಬಂಧಿಸಿದಂತೆ ಹಿಡಿದು ಅಡಿಕೆ ಗಿಡಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಲಾಗಿತ್ತು. ಅಲ್ಲದೇ ಬಾಲಕನ ಗುಪ್ತಾಂಗಕ್ಕೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ಮಾಡಲಾಗಿತ್ತು. ಈ ಘಟನೆ ತಡವಾಗಿ ಬೆಳಕಿಗೆ ಬಂದಿತ್ತು. ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಬಗ್ಗೆ ಚನ್ನಗಿರಿ ಪೊಲೀಸರಿಗೆ ಬಾಲಕನ ತಾತ ದೂರು ನೀಡಿದ್ದರು. ಈ ದೂರು ಆಧರಿಸಿ ಸುಭಾಷ್ (23), ಲಕ್ಕಿ(21) ದರ್ಶನ್ (22), ಪರಶು (25) ಶಿವದರ್ಶನ್ (23) ಹರೀಶ್ (25), ಪಟ್ಟಿ ರಾಜು(20), ಭೂಣಿ (18) ಸುಧನ್ ಅಲಿಯಾಸ್ ಮಧುಸೂಧನ್ (30) ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇವರಲ್ಲಿ ಮೂವರನ್ನು ಬಂದಿಸಿದ್ದಾರೆ.…
ಹುಬ್ಬಳ್ಳಿ: ಶಾಸಕ ಬಸನಗೌಡ ಪಾಲೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೊಸ ಪಕ್ಷ ಕಟ್ಟುವುದು ಅಷ್ಟು ಸುಲಭವಲ್ಲ. ಅದಕ್ಕಿಂತ ಹಿಂದೂಗಳ ಮತ ವಿಭಜನೆ ಆಗಬಾರದು ಎಂಬುದು ನನ್ನ ಉದ್ದೇಶವಾಗಿದೆ ಎಂದರು. ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು. ನಾನು ಅಲ್ಲ ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗೋದಿಲ್ಲ ಎಂಬುದಾಗಿ ತಿಳಿಸಿದರು.
ಹಾವೇರಿ: ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದರೆ ಬಿಜೆಪಿ ಕಾರ್ಯಕರ್ತರ ಮೇಲೆ ಒತ್ತಡ ಹಾಕಿ. ಕೇಸ್ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪಭುತ್ವ ಇಲ್ಲ. ಅಘೋಷಿತ ತುರ್ತುಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಹಾವೇರಿಯಲ್ಲಿ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 1975 ರಲ್ಲಿ ರಾಷ್ಟ್ರದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದರಿಂದ ಯಾರಿಗೂ ಸ್ವಾತಂತ್ರ್ಯ ಇರಲಿಲ್ಲ. ಹೀಗಾಗಿ ವಿದ್ಯಾರ್ಥಿಗಳಿಂದ ಶುರುವಾದ ಹೋರಾಟ ಸಂಪೂರ್ಣ ಕ್ರಾಂತಿಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಅಡ್ವಾಣಿಯವರು ಎಲ್ಲರೂ ನುಗ್ಗಿದರು. 1947 ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದಾಗ 1952ರ ವರೆಗೂ ರಾಷ್ಟ್ರೀಯ ಸರ್ಕಾರ ಇತ್ತು. ಯಾವುದೇ ಪಕ್ಷದ ಸರ್ಕಾರ ಇರಲಿಲ್ಲ. ಆ ಸರ್ಕಾರದಲ್ಲಿ ಶಾಮ ಪ್ರಸಾದ್ ಮುಖರ್ಜಿ ಅವರೂ ಇದ್ದರೂ, ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಶ್ಮೀರ…
ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು ಎಂದು ಮಾಜಿ ಮುಖ್ಯಮಂತಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಈಗಾಗಲೇ ಡಿಪಿಆರ್ಗೆ ಒಪ್ಪಿಗೆ ಕೊಟ್ಟಿದೆ. ಪರಿಸರ ಇಲಾಖೆಯ ಅನುಮತಿ ಅತಿ ಶೀಘ್ರವೇ ಸಿಗಲಿದೆ. ಎತ್ತಿನ ಹೊಳೆ ಯೋಜನೆಗೆ ಕೇಂದ್ರದ ಯಾವುದೇ ಅನುಮತಿ ಅಗತ್ಯವಿಲ್ಲ. ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಆಗ ನಾವು ಈ ಪ್ರಕರಣ ಅಂತಾರಾಜ್ಯ ವಿವಾದದಲ್ಲಿ ಕೋರ್ಟ್ನಲ್ಲಿದೆ ಅಂತ ಹೇಳಿದಾಗ ಕಾಂಗ್ರೆಸ್ ನಾಯಕರು ತಾವು ಅನುಮತಿ ತರುತ್ತೇವೆ ಎಂದಿದ್ದರು. ಈಗ ಅವರ ಮಿತ್ರ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ…