Subscribe to Updates
Get the latest creative news from FooBar about art, design and business.
Author: kannadanewsnow09
ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ.. ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಮತ್ತೆ ಒಂದು ಮಾತು ರ್ಸಪಗಳನ್ನು ಒಂದೇ ಸಾರಿ ಮನೆಗೆ ತಂದು ಇಡಬಾರದು ಆ ದಿನವೇ ತರಬೇಕು ಇದು ತುಂಬಾ ಮುಖ್ಯ ನೆನಪಿರಲಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್…
ನವದೆಹಲಿ: 2024 ರ ಲೋಕಸಭಾ ಚುನಾವಣೆಯ ( Lok Sabha election 2024 ) ಏಳನೇ ಮತ್ತು ಕೊನೆಯ ಹಂತವು ಜೂನ್ 1 ರಂದು ನಡೆಯಲಿದೆ. ಚುನಾವಣೆ ಮುಗಿಯುತ್ತಿದ್ದಂತೆ, ಜೂನ್.4 ರಂದು ಫಲಿತಾಂಶವನ್ನು ನಿರ್ಣಯಿಸಲು ಎಲ್ಲರ ಕಣ್ಣುಗಳು ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನೆಟ್ಟಿವೆ. ಇದರ ನಡುವೆ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳ ವರದಿಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಹಾಗಾದ್ರೇ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆ ಅಂದ್ರೆ ಏನು ಅಂತ ಮುಂದೆ ಓದಿ. ಏಳು ಹಂತಗಳ ಚುನಾವಣೆಗಳು ಮುಗಿಯುವ ಮೊದಲೇ, ಅಭಿಪ್ರಾಯ ಸಮೀಕ್ಷೆಗಳನ್ನು ನಡೆಸಲಾಗುವುದು. ಅಲ್ಲಿ ಮತದಾರರನ್ನು ಅವರು ಯಾರಿಗೆ ಮತ ಚಲಾಯಿಸಲಿದ್ದಾರೆ ಎಂದು ಕೇಳಲಾಗುತ್ತದೆ. ಫಲಿತಾಂಶಗಳಿಗೆ ಮೊದಲು ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲು ಡೇಟಾವನ್ನು ವಿಶ್ಲೇಷಿಸಲಾಗುತ್ತದೆ. ಏತನ್ಮಧ್ಯೆ, ಮತದಾರರು ಮತದಾನ ಕೇಂದ್ರಗಳನ್ನು ತೊರೆದ ತಕ್ಷಣ ನಿರ್ಗಮನ ಸಮೀಕ್ಷೆಗಳನ್ನು ನಡೆಸಲಾಗುತ್ತದೆ. ಮತದಾರರು ಯಾವ ಅಭ್ಯರ್ಥಿ ಅಥವಾ ಪಕ್ಷವನ್ನು ಬೆಂಬಲಿಸುತ್ತಾರೆ ಎಂದು ಕೇಳಲಾಗುತ್ತದೆ. ಚುನಾವಣೋತ್ತರ ಮತ್ತು ಚುನಾವಣಾ ಪೂರ್ವ ಸಮೀಕ್ಷೆಗಳ ನಡುವಿನ ವ್ಯತ್ಯಾಸಗಳು…
ಬೆಂಗಳೂರು: ಯುವಕರಿಗೆ ನಿರುದ್ಯೋಗ ಭಾಗ್ಯ ಕರುಣಿಸಿ, ಸಾರಿಗೆ ಸಂಸ್ಥೆಗಳನ್ನು ಅವನತಿಯತ್ತ ಕೊಂಡ್ಯೊಯ್ದ ಹೆಗ್ಗಳಿಕೆ ತಮ್ಮದೇ ಅಲ್ಲವೇ? ಎಂಬುದಾಗಿ ಬಿಜೆಪಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದೀರ್ಘ ಎಕ್ಸ್ ಪೋಸ್ಟ್ ಮಾಡಿರುವಂತ ಅವರು, ಸ್ವಾಮಿ ವಿರೋಧ ಪಕ್ಷದ ನಾಯಕರೇ, ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ವಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಟ್ವೀಟ್ ಮಾಡುತ್ತಿರೋ?? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ ಜನಸಾಮಾನ್ಯರಿಗೂ ಅರ್ಥವಾಗದೆ ಇರುವ ಯಕ್ಷ ಪ್ರಶ್ನೆ ಎಂದಿದ್ದಾರೆ. ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ. ನಮ್ಮ ಸತ್ಯದ ಒಂದು ಏಟಿಗೆ ಅದು ಕುಸಿದುಬೀಳುತ್ತಲೇ ಇದೆ. ನೀವು ಮತ್ತೆ ಮತ್ತೆ ಸುಳ್ಳುಗಳನ್ನು ಹೇಳಿ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುತ್ತಲೇ ಇದ್ದೀರಿ. ಇದು ಮುಂದುವರಿಯಲಿ ಆಲ್ ದಿ ಬೆಸ್ಟ್ ಎಂದು ಗುಡುಗಿದ್ದಾರೆ. https://twitter.com/siddaramaiah/status/1796194659217072193 ಈಗ ಸತ್ಯದ ಮಾತುಗಳನ್ನು ಕೇಳುವಂತವರಾಗಿ. ಪ್ರಪ್ರಥಮವಾಗಿ ಸಾರಿಗೆ ಸಂಸ್ಥೆಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಯು…
ಬಾಗಲಕೋಟೆ: ಆಕೆಗೆ ನಾನು ಸ್ವಚ್ಚ ವಾಹಿನಿಯ ಸಾರಥಿಯಾಗಲೇ ಬೇಕು ಅನ್ನೋ ಛಲವಿತ್ತು. ಈ ಛಲವನ್ನು ಬಿಡದೇ ವಾಹನ ಚಾಲನೆ ಕಲಿತಂತ ಆಕೆ, ಕೊನೆಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಚ ವಾಹನದ ಸಾರಥಿಯಾಗಿದ್ದಾರೆ. ಯಾರು ಆಕೆ.? ಎಲ್ಲಿ ಅನ್ನೋ ಆಕೆಯ ಯಶೋಗಾಥೆಯನ್ನು ಮುಂದೆ ಓದಿ. ಸ್ವಚ್ಛ ಭಾರತ ಮಿಷನ್ (ಗ್ರಾ)ಯೋಜನೆ ಕರ್ನಾಟಕದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಈ ಮೂಲಕ ಗ್ರಾಮದಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಸ್ವಚ್ಛ ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಪ್ರೇರಣೆಯಿಂದ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ಸ್ವಚ್ಛ ಭಾರತ ಕನಸನ್ನು ಯಶಸ್ವಿಗೊಳಿಸುತ್ತಿದ್ದಾರೆ. ಸ್ವ- ಸಹಾಯ ಸಂಘದ ಮಹಿಳೆಯರು ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿದ್ದಾರೆ. ಈ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮ ಪಂಚಾಯಿತಿಯ ಸ್ವಚ್ಛ ವಾಹಿನಿ ಚಾಲಕಿ ಸರೋಜಾ ಕೂಡ ಪ್ರಮುಖರಾಗಿದ್ದಾರೆ. ಇವರು ಪ್ರತಿದಿನ ಬೆಳಿಗ್ಗೆ ಪ್ರತಿ ವಾರ್ಡ್ ಹಾಗೂ ಗ್ರಾಮದ ಪ್ರಮುಖ ರಸ್ತೆಯ ಮೂಲಕ ಸಂಚರಿಸಿ ಕಸ ಸಂಗ್ರಹಿಸಿ ವಿಲೇವಾರಿ…
ಬೆಂಗಳೂರು: “ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಿಂದ ಮರಳಿದ ನಂತರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದರು. ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ವಿರೋಧ ಪಕ್ಷಗಳು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುತ್ತಿವೆ ಎಂದು ಕೇಳಿದಾಗ ಅವರು, “ರಾಜೀನಾಮೆ ಕೇಳುವುದು ವಿರೋಧ ಪಕ್ಷಗಳ ಧರ್ಮ, ಕೇಳುತ್ತಾರೆ. ನಾವು ಈ ಪ್ರಕರಣದ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸತ್ಯಾಸತ್ಯತೆ ಪರಿಶೀಲಿಸುತ್ತೇವೆ. ಆಧಾರವಿಲ್ಲದೇ ಆರೋಪ ಮಾಡಿದ ಮಾತ್ರಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ತಪ್ಪು ಯಾರೇ ಮಾಡಿದರೂ ತಪ್ಪೇ. ತಕ್ಷಣವೇ ಎಫ್ಐಆರ್ ದಾಖಲಿಸಿ, ವ್ಯವಸ್ಥಾಪಕ ನಿರ್ದೇಶಕರ ಅಮಾನತು ಮಾಡಲಾಗಿದೆ. ತಪ್ಪು ಮಾಡಿರುವುದು ಸಾಬೀತಾದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು” ಎಂದರು. ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆ ಕೇಳಿದ್ದೀರಿ,…
ವಿಜಯನಗರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹೊಸಪೇಟೆಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಾವಿನ ವಿಚಾರದಲ್ಲಿ ಈಶ್ವರಪ್ಪನವರದ್ದೇನು ಕೂಡ ತಪ್ಪಿರಲಿಲ್ಲ ಆದರೂ, ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಶ್ವರಪ್ಪ ಅವರ ವಿಚಾರದಲ್ಲಿ ವಿಪಕ್ಷನಾಯಕರಿದ್ದ ಸಿದ್ದರಾಮಯ್ಯನವರು ಮಾಡಿದ ರೋಷಾವೇಶ ಈಗ ಯಾಕೆ ಇಲ್ಲಾ. ಈಗ ಅವರೇ ಸಿಎಂ, ಅವರ ಸಚಿವ ಸಂಪುಟದ ಸಚಿವರ ವ್ಯಾಪ್ತಿಯ ವಾಲ್ಮೀಕಿ ನಿಗಮ್ ಹಣ ಲೂಟಿ ಆಗಿದೆ. 14 ಅಕೌಂಟ್ ಗಳ ಮೂಲಕ ಹಗಲು ದರೊಡೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಡೆತ್ ನೋಟ್ ನಲ್ಲಿ…
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಅದೇ ಹಾಡ ಹಗಲೇ ಮೆಡಿಕಲ್ ಶಾಪ್ ಮಾಲೀಕರೊಬ್ಬರ ಮೇಲೆ ಮಚ್ಚು ಬೀಸಿರುವಂತ ಪುಂಡನೊಬ್ಬ ಹಪ್ತಾ ವಸೂಲಿ ಮಾಡಿರೋ ಘಟನೆ ನಡೆದಿದೆ. ಬೆಂಗಳೂರಿನ ಲಿಂಗರಾಜಪುರ ಬಳಿಯಲ್ಲಿ ಮೆಡಿಕಲ್ ಶಾಪ್ ಗೆ ಮಚ್ಚು ಹಿಡಿದು ತೆರಳಿರುವಂತ ಪುಂಡನೊಬ್ಬ, ಹಣ ಕೊಡು, ಇಲ್ಲ ಅಂದ್ರೆ ಮಚ್ಚಿನಿಂದ ಹಲ್ಲೆ ಮಾಡೋದಾಗಿ ಹೆದರಿಸಿದ್ದಾನೆ. ಮಚ್ಚು ಬೀಸಿ ಹಲ್ಲೆ ಮಾಡೋದಾಗಿ ಹೆದರಿಸಿದ್ದರಿಂದ ಹೆದರಿದಂತ ಮೆಡಿಕಲ್ ಶಾಪ್ ಮಾಲೀಕ, ಆತನಿಗೆ ಹಣ ನೀಡಿದ್ದಾನೆ ಎನ್ನಲಾಗಿದೆ. ಇನ್ನೂ ಮಚ್ಚು ಬೀಸಿ ಮೆಡಿಕಲ್ ಶಾಪ್ ಶೋ ಕೇಸ್ ಗ್ಲಾಸ್ ಕೂಡ ಒಡೆದಿರುವಂತ ಪುಂಡ, ಕೆಲ ಕಾಲ ಆತಂಕ ಸೃಷ್ಠಿಸುವಂತೆ ಮಾಡಿದ್ದಾನೆ. ಆತನ ವರ್ತನೆಯಿಂದ ಬೆಚ್ಚಿ ಬಿದ್ದಂತ ಮೆಡಿಕಲ್ ಶಾಪ್ ಮಾಲೀಕ ಹಣ ನೀಡಿದ್ದಾರೆ. ಹಣ ಪಡೆಯುತ್ತಿದ್ದಂತೆ ಅಲ್ಲಿಂದ ಕಾಲ್ ಕಿತ್ತಿರೋದಾಗಿ ಹೇಳಲಾಗುತ್ತಿದೆ. ಮಚ್ಚು ಬೀಸಿ ಪುಂಡಾಟ ಮೆರೆದಂತ ಪುಂಡನ ಕೃತ್ಯ ಮೆಡಿಕಲ್ ಶಾಪ್ ನಲ್ಲಿದ್ದಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಗ ಸೋಷಿಯಲ್ ಮೀಡಿಯಾದಲ್ಲೂ ವೈರಲ್…
ಶಿವಮೊಗ್ಗ : ಇಂದು ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ, ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಬಿನ್ ನಾಗಪ್ಪಜಿ ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ನಗರದ ಕೃಷಿನಗರ ವಾಸಿ ಸಂಕೇತ್ ಎಂಬುವವರು ಖರೀದಿಸಿದ ಜಮೀನನ್ನು ತನ್ನ ತಾಯಿ ವೀಣಾ ಬಿ.ಎಂ. ಎಂಬುವವರ ಹೆಸರಿಗೆ ನೋಂದಣಿ ಮಾಡಿಸಿಕೊಂಡಿರುತ್ತಾರೆ. ಶಿವಮೊಗ್ಗ ವಿನೋಬನಗರ ಪ್ರೀಡಂ ಪಾರ್ಕ್‍ನಲ್ಲಿರುವ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ ಹೋಗಿ ವಿ ಎ ಆಗಿರುವ ಸುರೇಶ್ ಜಿ. ಬಳಿ ತಾವು ಖರೀದಿಸಿದ ಜಮೀನನ್ನು ಖಾತೆ ಮಾಡಿಕೊಡುವಂತೆ ಕೇಳಿಕೊಂಡಾಗ ಕೆಲಸ ಮಾಡಿಕೊಡಲು ರೂ. 6000/-ಗಳ ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಚಾರವಾಗಿ ಇವರ ವಿರುದ್ಧ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಅಪಾದಿತರನ್ನು ಬಂಧಿಸಿ ಮುಂದಿನ ತನಿಖೆಯನ್ನು ಪೊಲೀಸ್ ನಿರೀಕ್ಷಕರು ವೀರಬಸಪ್ಪ ಎಲ್ ಕುಸಲಾಪುರರವರು ಕೈಗೊಂಡಿರುತ್ತಾರೆ. ಕಾರ್ಯಾಚರಣೆಯಲ್ಲಿ ಕ.ಲೋ.ಪೋ. ಅಧೀಕ್ಷಕ ಮಂಜುನಾಥ್ ಚೌಧರಿ ಎಂ.ಹೆಚ್. ಮತ್ತು ಪೊಲೀಸ್ ಉಪಾಧೀಕ್ಷಕ…
ಬೆಂಗಳೂರು: “ನನ್ನ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕೇರಳದಲ್ಲಿ ತಂತ್ರಿಗಳನ್ನು ಬಳಸಿಕೊಂಡು “ಶತ್ರು ಭೈರವಿ ಯಾಗ” ಪ್ರಯೋಗ ನಡೆಸ ಲಾಗುತ್ತಿದೆ. ಈ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ನಂಬಿರುವ ಶಕ್ತಿ, ದೇವರು ಹಾಗೂ ಜನರ ಆಶೀರ್ವಾದ ನಮ್ಮನ್ನು ಕಾಪಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಈ ವಿಷಯ ತಿಳಿಸಿದರು. “ಕೇರಳದಲ್ಲಿ ನನ್ನ, ಮುಖ್ಯಮಂತ್ರಿಗಳ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾಗ ಮಾಡಲಾಗುತ್ತಿದೆ. ಕೇರಳದ ರಾಜರಾಜೇಶ್ವರಿ ದೇವಾಲಯದ ಆಸುಪಾಸಿನ ನಿರ್ಜನ ಪ್ರದೇಶದಲ್ಲಿ ಶತ್ರು ಸಂಹಾರ ಉದ್ದೇಶದ “ರಾಜಕಂಟಕ”, “ಮಾರಣ ಮೋಹನ ಸ್ತಂಭನ” ಯಾಗ ಪ್ರಯೋಗ ನಡೆಸಲಾಗುತ್ತಿದೆ. ಯಾರು ಈ ಯಾಗ ಮಾಡಿಸುತ್ತಿದ್ದಾರೆ ಎಂಬ ವಿವರವನ್ನು ಈ ಯಾಗದಲ್ಲಿ ಪಾಲ್ಗೊಂಡವರೇ ನಮಗೆ ತಿಳಿಸಿದ್ದಾರೆ ಎಂದರು. ಅಘೋರಿಗಳ ಮೂಲಕ ಈ ಯಾಗ ನಡೆಯುತ್ತಿದೆ. ಇದಕ್ಕಾಗಿ ಪಂಚ ಬಲಿ ನೀಡಲಾಗುತ್ತಿದ್ದು, ಕೆಂಪು ಬಣ್ಣದ 21 ಮೇಕೆ, 3 ಎಮ್ಮೆ, ಕಪ್ಪು ಬಣ್ಣದ 21 ಕುರಿ…
ಉತ್ತರಾಖಂಡ್: ಅಮರನಾಥ ದೇವಾಲಯ ಮಂಡಳಿ ಮತ್ತು ಜಮ್ಮು ಮತ್ತು ಕಾಶ್ಮೀರ ಆಡಳಿತವು ವಾರ್ಷಿಕ ಪವಿತ್ರ ಯಾತ್ರೆಗೆ ಸಜ್ಜಾಗಿದೆ. ಈ ವರ್ಷ, ಪ್ರಯಾಣವು ಜೂನ್ 29 ರಿಂದ ಪ್ರಾರಂಭವಾಗಿ ಆಗಸ್ಟ್ 19 ರಂದು ಕೊನೆಗೊಳ್ಳುತ್ತದೆ. ಅಮರನಾಥ ಯಾತ್ರೆಗೆ ಆನ್ಲೈನ್ ಹೆಲಿಕಾಪ್ಟರ್ ಬುಕಿಂಗ್ನಂತಹ ಸೇವೆಗಳು ಜೂನ್ 1 ರಿಂದ ಪ್ರಾರಂಭವಾಗಲಿವೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ನೇತೃತ್ವದ ಅಮರನಾಥ ದೇವಾಲಯ ಮಂಡಳಿ ಶೀಘ್ರದಲ್ಲೇ ಗುಹೆಗೆ ಹೆಲಿಕಾಪ್ಟರ್ ಸೇವೆಯ ದರಗಳನ್ನು ಪ್ರಕಟಿಸಲಿದೆ. ಯಾತ್ರೆಯನ್ನು ಸುಗಮವಾಗಿ ನಡೆಸಲು ಜಮ್ಮು ಮತ್ತು ಕಾಶ್ಮೀರ ಆಡಳಿತವು ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ. ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (ಬಿಆರ್ಒ) ಬಾಲ್ಟಾಲ್-ಡೊಮೆಲ್ ಟ್ರ್ಯಾಕ್ನಲ್ಲಿ ಹಿಮ ತೆರವುಗೊಳಿಸುವ ಕಾರ್ಯವನ್ನು ಬಹುತೇಕ ಪೂರ್ಣಗೊಳಿಸಿದೆ ಮತ್ತು ಟ್ರ್ಯಾಕ್ನ ಮತ್ತಷ್ಟು ಅಭಿವೃದ್ಧಿ ನಡೆಯುತ್ತಿದೆ. ಡಜನ್ಗಟ್ಟಲೆ ಕಾರ್ಮಿಕರು ಮತ್ತು ದೊಡ್ಡ ಯಂತ್ರಗಳು ಈ ಮಾರ್ಗದಲ್ಲಿ ಹಿಮ ತೆಗೆಯುವ ಕೆಲಸದಲ್ಲಿ ತೊಡಗಿವೆ. ಎಲ್ಲಿ ಹಿಮ ಬೀಳುತ್ತದೆಯೋ ಅಲ್ಲಿ ಅದನ್ನು ತೆಗೆದುಹಾಕಲಾಗುತ್ತಿದೆ ಮತ್ತು ಎಲೆಗಳಿಂದ ನಿರ್ಬಂಧಿಸಲ್ಪಟ್ಟಿರುವಲ್ಲಿ, ಅದನ್ನು ತೆರವುಗೊಳಿಸಲಾಗುತ್ತಿದೆ. ಗುಹೆಯ…












